Homeಫ್ಯಾಕ್ಟ್‌ಚೆಕ್FACT CHECK : ಪೆಟ್ರೋಲ್, ಡೀಸೆಲ್ ಮೇಲೆ ಕೇಂದ್ರ ಸರ್ಕಾರಕ್ಕಿಂತ ರಾಜ್ಯ ಸರ್ಕಾರ ಹೆಚ್ಚಿನ ತೆರಿಗೆ...

FACT CHECK : ಪೆಟ್ರೋಲ್, ಡೀಸೆಲ್ ಮೇಲೆ ಕೇಂದ್ರ ಸರ್ಕಾರಕ್ಕಿಂತ ರಾಜ್ಯ ಸರ್ಕಾರ ಹೆಚ್ಚಿನ ತೆರಿಗೆ ವಿಧಿಸುತ್ತಿದೆ ಎಂಬುವುದು ಸುಳ್ಳು

- Advertisement -
- Advertisement -

ಪೆಟ್ರೋಲ್ ಹಾಗೂ ಡೀಸೆಲ್ ಮೇಲಿನ ರಾಜ್ಯ ತೆರಿಗೆ ಮತ್ತು ಸುಂಕಗಳು ಕೇಂದ್ರ ತೆರಿಗೆಗಳಿಗಿಂತ ಹೆಚ್ಚಿದೆ ಎಂದು ಪ್ರತಿಪಾದಿಸಿ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್‌ ಹಂಚಿಕೊಳ್ಳಲಾಗಿದೆ.

“ಎಲ್ಲಾ ಪೆಟ್ರೋಲ್ ಬಂಕ್‌ಗಳಲ್ಲಿ ಈ ರೀತಿಯ ಬೋರ್ಡ್‌ಗಳನ್ನು ಹೊಂದಿರಬೇಕು. ಮೂಲ ದರ: 35.50, ಕೇಂದ್ರ ಸರ್ಕಾರದ ತೆರಿಗೆ: 19.50, ರಾಜ್ಯ ಸರ್ಕಾರದ ತೆರಿಗೆ: 41.55 ವಿತರಕ: 6.50, ಒಟ್ಟು: 103.05 ಆಗ ಬೆಲೆ ಏರಿಕೆಗೆ ಯಾರು ಹೊಣೆ ಎಂದು ಸಾರ್ವಜನಿಕರಿಗೆ ಅರ್ಥವಾಗುತ್ತದೆ. ದಯವಿಟ್ಟು ಇದನ್ನು ನಿಮ್ಮ ಗುಂಪುಗಳು ಮತ್ತು ಸ್ನೇಹಿತರೊಂದಿಗೆ ಹಂಚಿಕೊಳ್ಳಿ” ಎಂದು ವೈರಲ್‌ ಪೋಸ್ಟ್‌ಗಳಲ್ಲಿ ಬರೆದುಕೊಳ್ಳಲಾಗಿದೆ.

ಕಳೆದ ಅನೇಕ ವರ್ಷಗಳಿಂದ ಇದೇ ಪೋಸ್ಟ್‌ ಅನ್ನು ಹಂಚಿಕೊಳ್ಳಲಾಗುತ್ತಿದ್ದು, ದೆಹಲಿ ಮತ್ತು ಪಶ್ಚಿಮ ಬಂಗಾಳದ ಸರ್ಕಾರಗಳನ್ನು ಟೀಕಿಸಲು ಈ ಪೋಸ್ಟ್‌ ಅನ್ನು ಬಳಸಿಕೊಳ್ಳಲಾಗುತ್ತಿದೆ. ಮಮತಾ ಬ್ಯಾನರ್ಜಿಯವರು ಪೆಟ್ರೋಲ್ ಮೇಲೆ ರಾಜ್ಯ ತೆರಿಗೆಯನ್ನು ಹೆಚ್ಚಿಸಿದ್ದಾರೆ ಎಂದು ಪೋಸ್ಟರ್ ಮಾಡಿ ಹಂಚಿಕೊಳ್ಳಲಾಗಿದೆ.

ಫ್ಯಾಕ್ಟ್‌ಚೆಕ್ : ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾದ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆಯನ್ನು ಪರಿಶೀಲಿಸಲು ಗೂಗಲ್ ಸರ್ಚ್ ನಡೆಸಿದಾಗ, ಪೋಸ್ಟರ್‌ನಲ್ಲಿರುವ ಮಾಹಿತಿ ಸುಳ್ಳು ಎಂದು ತಿಳಿದು ಬಂದಿದೆ.
ClearTax ನ ಮಾಹಿತಿ ಪ್ರಕಾರ “ಭಾರತದಲ್ಲಿ ಪೆಟ್ರೋಲ್ ಮೇಲಿನ ತೆರಿಗೆಯು ಪೆಟ್ರೋಲ್‌ನ ಚಿಲ್ಲರೆ ಮಾರಾಟ ಬೆಲೆಯ ಶೇ. 55 ಅನ್ನು ಒಳಗೊಂಡಿರುತ್ತದೆ. ಡೀಸೆಲ್ ಮೇಲಿನ ತೆರಿಗೆಯು ಅದರ ಚಿಲ್ಲರೆ ಮಾರಾಟ ಮೌಲ್ಯದ ಶೇ. 50 ಆಗಿದೆ. ಇದರ ಹೊರತಾಗಿ, ಮಾರಾಟ ತೆರಿಗೆ ಮತ್ತು ಮೌಲ್ಯವರ್ಧಿತ ತೆರಿಗೆ (ವ್ಯಾಟ್) ಅನ್ನು ರಾಜ್ಯ ಸರ್ಕಾರಗಳು ವಿವಿಧ ದರಗಳಲ್ಲಿ ವಿಧಿಸುತ್ತವೆ.

ಭಾರತದ ಇಂಧನ ಬೆಲೆ ನಿಗದಿಯಲ್ಲಿರುವ ಪ್ರಮುಖ ಶುಲ್ಕಗಳು ಇಲ್ಲಿವೆ : ಕಚ್ಚಾ ತೈಲದ ಮೂಲ ಬೆಲೆ, ಅಬಕಾರಿ ತೆರಿಗೆ, ವಿತರಕರ ಕಮಿಷನ್ ಮತ್ತು ಶುಲ್ಕಗಳು ಮೌಲ್ಯವರ್ಧಿತ ತೆರಿಗೆ (ವ್ಯಾಟ್). ಈಗ, ಕಚ್ಚಾ ತೈಲ ಬೆಲೆಗಳು, ಡೀಲರ್ ಶುಲ್ಕಗಳು ಮತ್ತು ಅಬಕಾರಿ ಸುಂಕವು ಭಾರತದಾದ್ಯಂತ ಒಂದೇ ಆಗಿರುತ್ತದೆ. ಆದಾಗ್ಯೂ, ವ್ಯಾಟ್ ಮತ್ತು ಮಾರಾಟ ತೆರಿಗೆಯು ರಾಜ್ಯಗಳಾದ್ಯಂತ ಭಿನ್ನವಾಗಿರುತ್ತದೆ. ಇದು ಇಂಧನ ಬೆಲೆಗಳಲ್ಲಿ ವ್ಯತ್ಯಾಸಕ್ಕೆ ಕಾರಣವಾಗುತ್ತದೆ.

ಭಾರತದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ರಾಜ್ಯವಾರು ತೆರಿಗೆ ಪಟ್ಟಿ

ಇತ್ತೀಚೆಗೆ ಕರ್ನಾಟಕ ಸರ್ಕಾರ ಪೆಟ್ರೋಲ್ ಹಾಗೂ ಡೀಸೆಲ್ ಮೇಲಿನ ತೆರಿಗೆಯನ್ನು ಹೆಚ್ಚಿಸಿದೆ. ಪೆಟ್ರೋಲ್ ಮೇಲಿನ ಮಾರಾಟ ತೆರಿಗೆಯನ್ನು ಶೇಕಡಾ 25.92 ರಿಂದ ಶೇಕಡಾ 29.84 ಕ್ಕೆ ಮತ್ತು ಡೀಸೆಲ್ ಮೇಲೆ ಶೇಕಡಾ 14.3 ರಿಂದ 18.4 ಕ್ಕೆ ಹೆಚ್ಚಿಸಲಾಗಿದೆ. ಇದರಿಂದ ರಾಜ್ಯದಲ್ಲಿ ಪ್ರತಿ ಲೀಟರ್‌ ಪೆಟ್ರೋಲ್ ಬೆಲೆ 3.02 ರೂಪಾಯಿ ಹಾಗೂ ಪ್ರತಿ ಲೀಟರ್‌ ಡೀಸೆಲ್ ಬೆಲೆ 3 ರೂ. ಏರಿಕೆಯಾಗಿದೆ. ಪೆಟ್ರೋಲ್ ಚಿಲ್ಲರೆ ಮಾರಾಟ ದರ ಪ್ರತಿ ಲೀಟರ್‌ಗೆ 102.85 ರೂ. ಹಾಗೂ ಡೀಸೆಲ್ ದರ ಪ್ರತಿ ಲೀಟರ್‌ಗೆ 88.93 ರೂ. ಆಗಿದೆ.

ಒಟ್ಟಿನಲ್ಲಿ, ಪೆಟ್ರೋಲ್‌ ದರದ ಮೇಲೆ ಕೇಂದ್ರ ಸರ್ಕಾರದ 19.50 ತೆರಿಗೆ ವಿಧಿಸಿದರೆ ರಾಜ್ಯ ಸರ್ಕಾರದ 41.55 ತೆರಿಗೆ ವಿಧಿಸಿಸುತ್ತಿದೆ ಎಂಬುದು ಸುಳ್ಳು. ವಾಸ್ತವವಾಗಿ ಪೆಟ್ರೋಲ್ ಮೇಲಿನ ಮಾರಾಟ ತೆರಿಗೆಯನ್ನು ಶೇಕಡಾ 25.92 ರಿಂದ ಶೇಕಡಾ 29.84 ಕ್ಕೆ ಮತ್ತು ಡೀಸೆಲ್ ಮೇಲೆ ಶೇಕಡಾ 14.3 ರಿಂದ 18.4 ಕ್ಕೆ ಹೆಚ್ಚಿಸಲಾಗಿದೆ ಎಂದು ರಾಜ್ಯ ಸರ್ಕಾರ ಅಧಿಸೂಚನೆಯಲ್ಲಿ ಪ್ರಕಟಿಸಿದೆ. ಹಾಗಾಗಿ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆ ತಪ್ಪಾಗಿದೆ.

ಇದನ್ನೂ ಓದಿ : FACT CHECK : ರೈಲಿನ ಹಾರ್ನ್‌ನಿಂದ ನಮಾಝ್‌ಗೆ ಅಡ್ಡಿಯಾಗುತ್ತಿದೆ ಎಂದು ರೈಲು ನಿಲ್ದಾಣದ ಮೇಲೆ ದಾಳಿ ನಡೆಸಲಾಗಿದೆ ಎಂಬುವುದು ಸುಳ್ಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನರಿಗೆ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿ

ಹಿರಿಯ ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನ ಹಿರಿಯ ಸಾಧಕರು 2026ನೇ ಸಾಲಿನ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿಗೆ ಭಾಜನರಾಗಿದ್ದಾರೆ. ರಾಯಚೂರು ಜಿಲ್ಲೆಯ ಹಿರಿಯ ದಲಿತ ಹೋರಾಟಗಾರ...

ಗಾಜಾ; ಗೊಂಬೆಯೊಂದಿಗೆ ‘ಅಂತ್ಯಕ್ರಿಯೆ’ ಆಟ ಆಡುವ ಎಳೆಯ ಮಕ್ಕಳ ವಿಡಿಯೋ ವೈರಲ್; ಸುತ್ತಲಿನ ಘಟನೆಯನ್ನು ಪುನರಾವರ್ತಿಸುವ ಮಕ್ಕಳು

ಅಕ್ಟೋಬರ್ 2023 ರಲ್ಲಿ ಇಸ್ರೇಲಿ ಮಿಲಿಟರಿ ದಾಳಿಯನ್ನು ಪ್ರಾರಂಭಿಸಿದ ನಂತರ ಗಾಜಾದಿಂದ ದುಃಖಕರ ದೃಶ್ಯಗಳು ಹೊರಹೊಮ್ಮುತ್ತಿವೆ. ಇತ್ತೀಚಿನ ಒಂದು ಘಟನೆಯಲ್ಲಿ, ಚಿಕ್ಕ ಮಕ್ಕಳು ಅಂತ್ಯಕ್ರಿಯೆಗಾಗಿ ಗೊಂಬೆಯನ್ನು ಹೊತ್ತುಕೊಂಡು ಹೋಗುವುದನ್ನು ಕಾಣಬಹುದು - ಇದು ಅವರು...

ದೆಹಲಿ| ಆಳವಾದ ಚರಂಡಿಗೆ ಬಿದ್ದು ನೈರ್ಮಲ್ಯ ಕಾರ್ಮಿಕ ಸಾವು; ನ್ಯಾಯಕ್ಕೆ ಆಗ್ರಹಿಸಿದ ಮೃತನ ಕುಟುಂಬ

ಮಾರ್ಚ್ 30 ರಂದು ಪೂರ್ವ ದೆಹಲಿಯ ದಿಲ್ಶಾದ್ ಗಾರ್ಡನ್ ಪ್ರದೇಶದಲ್ಲಿ ಸುರಕ್ಷತಾ ಸಾಧನಗಳಿಲ್ಲದೆ ಆಳವಾದ ಚರಂಡಿ ಸ್ವಚ್ಛಗೊಳಿಸುವ ಸಮಯದಲ್ಲಿ ಯುವ ನೈರ್ಮಲ್ಯ ಕಾರ್ಮಿಕ ರಾಹುಲ್ ಎಂಬುವವರು ಸಾವನ್ನಪ್ಪಿದ್ದಾರೆ. ಮಧ್ಯಾಹ್ನ 2:00 ರ ಸುಮಾರಿಗೆ...

ನಿವೃತ್ತ ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ ಆಸ್ಪತ್ರೆಗೆ ದಾಖಲು; ಕಾರ್ಯಕ್ರಮದಲ್ಲಿ ಏಕಾಏಕಿ ಕುಸಿದು ಬಿದ್ದು ಅಸ್ವಸ್ಥ

ಬೆಂಗಳೂರು: ಕರ್ನಾಟಕದ ನಿವೃತ್ತ ಲೋಕಾಯುಕ್ತ ಎನ್‌.ಸಂತೋಷ್‌ ಹೆಗ್ಡೆ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಭಾಷಣದ ವೇಳೆ ಕುಸಿದು ಬಿದ್ದು ಅಸ್ವಸ್ಥರಾಗಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಏಪ್ರಿಲ್ 4ರ, ಶುಕ್ರವಾರ ಬೆಂಗಳೂರಿನ ಕೊಂಡಜಿ ಬಸಪ್ಪ ಸಭಾಂಗಣದಲ್ಲಿ...

ಎಸ್‌ಎಸ್‌ಎಲ್‌ಸಿಯಲ್ಲಿ ತೃತೀಯ ಭಾಷೆಗೆ ಗ್ರೇಡ್: ನಿರ್ಧಾರ ಪರಿಶೀಲಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದ ರಾಜ್ಯಪಾಲ ಗೆಹ್ಲೋಟ್ 

ಬೆಂಗಳೂರು: 10ನೇ ತರಗತಿ ಪರೀಕ್ಷೆಯಲ್ಲಿ ತೃತೀಯ ಭಾಷೆಯ ವಿಷಯಕ್ಕೆ ಅಂಕಗಳನ್ನು ಬದಲಿಸುವ ನಿರ್ಧಾರವನ್ನು ಮರುಪರಿಶೀಲಿಸುವಂತೆ ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ರಾಜ್ಯ ಸರ್ಕಾರವನ್ನು ಕೇಳಿದ್ದಾರೆ. ಸರ್ಕಾರವು ಈ ನಿರ್ಧಾರವನ್ನು "ಸಮಗ್ರವಾಗಿ ಪರಿಶೀಲಿಸಬೇಕು" ಎಂದು ಲೋಕಭವನವು...

ತಿರುಚ್ಚಿ ಪೂರ್ವದ ಪೆರಂಬೂರಿನಲ್ಲಿ ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಅಫಿಡವಿಟ್‌ಗಳಲ್ಲಿ ಹಲವು ವ್ಯತ್ಯಾಸಗಳಿರುವುದಾಗಿ ವರದಿ  

ಚೆನ್ನೈ: ನಟ ಮತ್ತು ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಎರಡು ಪ್ರತ್ಯೇಕ ಚುನಾವಣಾ ಅಫಿಡವಿಟ್‌ಗಳಲ್ಲಿ ವ್ಯತ್ಯಾಸಗಳು ಕಾಣಿಸಿಕೊಂಡಿದ್ದು, ವಿಧಾನಸಭಾ ಚುನಾವಣೆಗೆ ಮುನ್ನ ಕಾನೂನು ಮತ್ತು ರಾಜಕೀಯ ಪರಿಶೀಲನೆಗೆ ಅವಕಾಶ ನೀಡುವ ಸಾಧ್ಯತೆಯಿದೆ. ಪೆರಂಬೂರು ಮತ್ತು...

ಉತ್ತಮ್ ನಗರದಲ್ಲಿ ಶಾಂತಿ ಕಾಪಾಡುವಲ್ಲಿ ದೆಹಲಿ ಪೊಲೀಸರ ಪ್ರಯತ್ನಗಳನ್ನು ಶ್ಲಾಘಿಸಿದ ಎಪಿಸಿಆರ್

ಈದ್ ಅಲ್-ಫಿತರ್, ರಾಮ ನವಮಿ ಮತ್ತು ಹನುಮಾನ್ ಜಯಂತಿ ಸೇರಿದಂತೆ ಧಾರ್ಮಿಕ ಹಬ್ಬಗಳ ಆಚರಣೆಯ ಸಂದರ್ಭದಲ್ಲಿ ರಾಷ್ಟ್ರ ರಾಜಧಾನಿಯ ಉತ್ತಮ್ ನಗರ ಪ್ರದೇಶದಲ್ಲಿ ಶಾಂತಿ ಮತ್ತು ಭದ್ರತೆಯನ್ನು ಕಾಪಾಡಿದ್ದಕ್ಕಾಗಿ ನಾಗರಿಕ ಹಕ್ಕುಗಳ ರಕ್ಷಣಾ...

ದಲಿತ ಸಮುದಾಯಕ್ಕೆ ಕ್ಷಮೆಯಾಚಿಸಿದ ನೇಪಾಳದ ಹೊಸ ಸರ್ಕಾರ

ಪ್ರಧಾನಿ ಬಾಲೇಂದ್ರ ಶಾ ಅವರ ನೇಪಾಳದ ಹೊಸ ಸರ್ಕಾರದ 100 ಅಂಶಗಳ ಸುಧಾರಣಾ ಕಾರ್ಯಸೂಚಿಯಡಿಯಲ್ಲಿ, ಮುಂದಿನ 15 ದಿನಗಳ ಒಳಗೆ ದಲಿತರು ಮತ್ತು ಐತಿಹಾಸಿಕವಾಗಿ ಹೊರಗಿಡಲ್ಪಟ್ಟ ಇತರೆ ಸಮುದಾಯಗಳಿಗೆ 'ಔಪಚಾರಿಕ ಕ್ಷಮೆಯಾಚನೆ' ಕೇಳುವುದಾಗಿ...

‘ಯಾರು ಹೆದರುತ್ತಾನೋ ಅವನು ಸತ್ತಂತೆ’: ರಾಘವ್ ಛಡ್ಡಾಗೆ ತೀವ್ರವಾಗಿ ಪ್ರತಿಕ್ರಿಯೆ ನೀಡಿದ ಎಎಪಿ ನಾಯಕ ಸೌರಭ್ ಭಾರದ್ವಾಜ್ 

ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ದೆಹಲಿ ಘಟಕದ ಮುಖ್ಯಸ್ಥ ಸೌರಭ್ ಭಾರದ್ವಾಜ್ ಅವರು ವೀಡಿಯೊ ಸಂದೇಶದಲ್ಲಿ ಆಪ್ ಸಂಸದ ರಾಘವ್ ಛಡ್ಡಾ ಅವರು ಸಂಸತ್ತಿನಲ್ಲಿ "ಸಾಫ್ಟ್ ಪಿಆರ್" ನಲ್ಲಿ ತೊಡಗಿದ್ದಾರೆ...

ಚಂಡೀಗಢ ಬಿಜೆಪಿ ಕಚೇರಿ ಸ್ಫೋಟ: ಪಂಜಾಬ್ ಕೌಂಟರ್ ಇಂಟೆಲಿಜೆನ್ಸ್ ಪಡೆಯಿಂದ ಇಬ್ಬರು ಶಂಕಿತರ ಮನೆಗಳ ಮೇಲೆ ದಾಳಿ

ಚಂಡೀಗಢದಲ್ಲಿರುವ ಪಂಜಾಬ್ ಬಿಜೆಪಿ ಕಚೇರಿಯ ಹೊರಗೆ ಸ್ಫೋಟ ನಡೆಸಿದ ಆರೋಪದ ಮೇಲೆ ಇಬ್ಬರು ಶಂಕಿತರ ಮನೆಗಳ ಮೇಲೆ  ಪಂಜಾಬ್ ಪೊಲೀಸರ ಗುಪ್ತಚರ ನಿಗ್ರಹ ದಳವು ಇಂದು ಮುಂಜಾನೆ ದಾಳಿ ನಡೆಸಿದೆ.  ರೋಪರ್ ಜಿಲ್ಲೆಯ ಮೊರಿಂಡಾ ಪ್ರದೇಶದ...