Homeಫ್ಯಾಕ್ಟ್‌ಚೆಕ್FACT CHECK : ರೈಲಿನ ಹಾರ್ನ್‌ನಿಂದ ನಮಾಝ್‌ಗೆ ಅಡ್ಡಿಯಾಗುತ್ತಿದೆ ಎಂದು ರೈಲು ನಿಲ್ದಾಣದ ಮೇಲೆ ದಾಳಿ...

FACT CHECK : ರೈಲಿನ ಹಾರ್ನ್‌ನಿಂದ ನಮಾಝ್‌ಗೆ ಅಡ್ಡಿಯಾಗುತ್ತಿದೆ ಎಂದು ರೈಲು ನಿಲ್ದಾಣದ ಮೇಲೆ ದಾಳಿ ನಡೆಸಲಾಗಿದೆ ಎಂಬುವುದು ಸುಳ್ಳು

- Advertisement -
- Advertisement -

ರೈಲಿನ ಹಾರ್ನ್‌ನಿಂದ ನಮಾಝ್‌ಗೆ ಅಡ್ಡಿಯಾಗುತ್ತಿದೆ ಎಂದು ಪಶ್ಚಿಮ ಬಂಗಾಳದ ಮುರ್ಶಿದಾಬಾದ್‌ನ ಮಹಿಶಾಸುರ ರೈಲು ನಿಲ್ದಾಣವನ್ನು ಜನರು ಧ್ವಂಸಗೊಳಿಸಿದ್ದಾರೆ ಎಂದು ಆರೋಪಿಸಿ ವಿಡಿಯೋವೊಂದನ್ನು ಹಂಚಿಕೊಳ್ಳಲಾಗಿದೆ.

Mini Razdan (@mini_razdan10) ಎಂಬ ಎಕ್ಸ್‌ ಬಳಕೆದಾರ ಜುಲೈ 6ರಂದು ಮೊದಲು ಈ ವಿಡಿಯೋ ಪೋಸ್ಟ್‌ ಮಾಡಿದ್ದು, ಬಳಿಕ ಅನೇಕರು ವಿಡಿಯೋ ಹಂಚಿಕೊಂಡಿದ್ದಾರೆ.

ಫ್ಯಾಕ್ಟ್‌ಚೆಕ್ : ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿರುವ ವಿಡಿಯೋ ಪಶ್ಚಿಮ ಬಂಗಾಳದ ಮುರ್ಶಿದಾಬಾದ್‌ನದ್ದು ಎಂಬುವುದು ನಿಜ. ಆದರೆ, ಅದು 2019ರಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರುದ್ದ ಪ್ರತಿಭಟಿಸುತ್ತಿದ್ದ ಜನರು ರೈಲ್ವೆ ನಿಲ್ದಾಣದ ಮೇಲೆ ದಾಳಿ ನಡೆಸಿ ಆಕ್ರೋಶ ವ್ಯಕ್ತಪಡಿಸಿರುವ ದೃಶ್ಯ ಎಂದು ತಿಳಿದು ಬಂದಿದೆ.

ಇದೇ ವಿಡಿಯೋ ಈ ಹಿಂದೆ ಬೇರೆ ಬೇರೆ ಬರಹಗಳೊಂದಿಗೆ ವೈರಲ್ ಆಗಿತ್ತು. ಆಗ ಕೆಲ ಮಾಧ್ಯಮಗಳು ಫ್ಯಾಕ್ಟ್‌ಚೆಕ್ ಮಾಡಿ ಸತ್ಯಾಸತ್ಯೆ ತಿಳಿಸಿತ್ತು.

ದಿ ಕ್ವಿಂಟ್ 29 ಏಪ್ರಿಲ್ 2022ರಂದು ನಡೆಸಿದ ಫ್ಯಾಕ್ಟ್‌ಚೆಕ್ ಸುದ್ದಿಯ ಲಿಂಕ್ ಇಲ್ಲಿದೆ

ವಿಡಿಯೋದ ಕುರಿತು ಇನ್ನಷ್ಟು ಖಚಿತಪಡಿಸಿಕೊಳ್ಳಲು ನಾವು ಫೋಟೋ ಮತ್ತು ಕೀ ವರ್ಡ್‌ ಬಳಸಿ ಗೂಗಲ್‌ನಲ್ಲಿ ಮಾಹಿತಿ ಹುಡುಕಿದ್ದೇವೆ. ಈ ವೇಳೆ 16 ಡಿಸೆಂಬರ್ 2019ರಲ್ಲಿ ಹಾಕಲಾದ ಫೇಸ್‌ಬುಕ್‌ ಪೋಸ್ಟ್‌ ಒಂದು ಲಭ್ಯವಾಗಿದೆ. ಆ ಪೋಸ್ಟ್‌ನಲ್ಲಿರುವ ವಿಡಿಯೋ ಮತ್ತು ವೈರಲ್ ವಿಡಿಯೋ ಒಂದೇ ಎಂಬುವುದನ್ನು ಗಮನಿಸಬಹುದು. ಪೋಸ್ಟ್‌ನಲ್ಲಿ ನವೋಪಾರ ರೈಲು ನಿಲ್ದಾಣದ ದೃಶ್ಯ ಎಂದು ಬರೆಯಲಾಗಿದೆ. ನವೋಪಾರದ ರೈಲು ನಿಲ್ದಾಣದ ಹೆಸರು ಮಹಿಶಾಸುರ ಎಂದಾಗಿದೆ.

ಡಿಸೆಂಬರ್ 14, 2019ರಂದು ಮತ್ತೊಬ್ಬರು ಫೇಸ್‌ಬುಕ್ ಬಳಕೆದಾರರು ಕೂಡ ವೈರಲ್ ವಿಡಿಯೋವನ್ನು ಹಂಚಿಕೊಂಡಿದ್ದರು. ಈ ಪೋಸ್ಟ್‌ನಲ್ಲಿಯೂ ನವೋಪಾರ ರೈಲ್ವೆ ನಿಲ್ದಾಣದ ದೃಶ್ಯ ಎಂದು ಉಲ್ಲೇಖಿಸಲಾಗಿದೆ. ಪೋಸ್ಟ್‌ನ ಕೊನೆಯಲ್ಲಿ CAB (Citizenship Amendment Bill) ಎಂದು ಹ್ಯಾಷ್‌ಟ್ಯಾಗ್ ಕೊಟ್ಟಿರುವುದು ಅದು ಸಿಎಎ ಪ್ರತಿಭಟನೆಯ ಸಂದರ್ಭದ ವಿಡಿಯೋವೊ ಎಂಬುವುದನ್ನು ಹೇಳುತ್ತದೆ.

ವೈರಲ್ ಆಗಿರುವ ವಿಡಿಯೋ ಮತ್ತು ಮುರ್ಶಿದಾಬಾದ್‌ನ ನವೋಪಾರ ಮಹಿಶಾಸುರ ರೈಲ್ವೆ ನಿಲ್ದಾಣವನ್ನು ಸಿಎಎ ಪ್ರತಿಭಟನಾಕಾರರು ಧ್ವಂಸಗೊಳಿಸಿದ ಹಳೆಯ ವಿಡಿಯೊದಲ್ಲಿನ ಕೆಲವು ಸಾಮ್ಯತೆಗಳನ್ನು ನೋಡಬಹುದು.

People vandalised the Naopara Mahishasura railway station during anti-CAA protests in 2019.

15 ಡಿಸೆಂಬರ್ 2019 ರಂದು ಬೆಂಗಾಲಿ ನ್ಯೂಸ್ ಪೋರ್ಟಲ್ ‘ಬರ್ತಮನ್ ಪತ್ರಿಕಾ‘ದಲ್ಲಿ ಸಿಎಎ ಪ್ರತಿಭಟನಾಕಾರರು ರೈಲು ನಿಲ್ದಾಣಗಳ ಮೇಲೆ ದಾಳಿ ನಡೆಸಿರುವ ಕುರಿತು ವರದಿ ಪ್ರಕಟಿಸಿತ್ತು. ಆ ವರದಿಯಲ್ಲೂ ನವೋಪಾರಾ ಮಹಿಷಾಸುರ ನಿಲ್ದಾಣದ ಮೇಲಿನ ದಾಳಿಯ ಕುರಿತು ಉಲ್ಲೇಖಿಸಲಾಗಿದೆ.

ಲಭ್ಯ ಮೂಲಗಳನ್ನು ಬಳಸಿ ನಾವು ನಡೆಸಿದ ಪರಿಶೀಲನೆಯಲ್ಲಿ ವೈರಲ್ ವಿಡಿಯೋ ಪಶ್ಚಿಮ ಬಂಗಾಳದ ನವೋಪಾರ ಮಹಿಶಾಸುರ ರೈಲ್ವೆ ನಿಲ್ದಾಣದ ಮೇಲೆ 2019ರ ಸಿಎಎ ವಿರೋಧಿ ಪ್ರತಿಭಟನೆ ನಡೆದ ದಾಳಿಯದ್ದು, ಅಲ್ಲದೆ ಅಝಾನ್‌ಗೆ ಅಡ್ಡಿಯಾಗುತ್ತದೆ ಎಂದು ರೈಲು ನಿಲ್ದಾಣ ಧ್ವಂಸಗೊಳಿಸಿದ್ದು ಅಲ್ಲ ಎಂದು ತಿಳಿದು ಬಂದಿದೆ.

ಇದನ್ನೂ ಓದಿ : FACT CHECK : ನೀಟ್ ಟಾಪರ್‌ಗಳ ಜಾಹೀರಾತಿಗೆ ಕೋಮು ಬಣ್ಣ ಬಳಿದು ಪೇಪರ್ ಲೀಕ್ ಫಲಾನುಭವಿಗಳು ಎಂದ ಬಲಪಂಥೀಯರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...