Homeಫ್ಯಾಕ್ಟ್‌ಚೆಕ್FACT CHECK : ಕುರಾನ್ ಬೋಧಿಸುವ ಭಾರತದ ವಿವಿಗಳಲ್ಲಿ ಭಗವದ್ಗೀತೆ, ರಾಮಾಯಣ ಅಧ್ಯಯನಕ್ಕೆ ಕೋರ್ಸ್‌ಗಳಿಲ್ಲ ಎನ್ನುವುದು...

FACT CHECK : ಕುರಾನ್ ಬೋಧಿಸುವ ಭಾರತದ ವಿವಿಗಳಲ್ಲಿ ಭಗವದ್ಗೀತೆ, ರಾಮಾಯಣ ಅಧ್ಯಯನಕ್ಕೆ ಕೋರ್ಸ್‌ಗಳಿಲ್ಲ ಎನ್ನುವುದು ಸುಳ್ಳು

- Advertisement -
- Advertisement -

“ಭಾರತದಲ್ಲಿ 20 ಸರ್ಕಾರಿ ಅನುದಾನಿತ ವಿಶ್ವ ವಿದ್ಯಾನಿಲಯಗಳು ಕುರಾನ್ ಅಧ್ಯಯನ ಮಾಡಲು ಕೋರ್ಸ್‌ಗಳನ್ನು ನೀಡುತ್ತಿವೆ. ಆದರೆ, ಭಗವದ್ಗೀತೆ ಅಥವಾ ರಾಮಾಯಣವನ್ನು ಅಧ್ಯಯನ ಮಾಡಲು ಯಾವುದೇ ಕೋರ್ಸ್‌ಗಳಿಲ್ಲ” ಎಂಬ ಪೋಸ್ಟ್‌ ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಳ್ಳಲಾಗಿದೆ.

ಅನೇಕ ಬಳಕೆದಾರರು ಈ ರೀತಿಯ ಪೋಸ್ಟ್‌ಗಳನ್ನು ತಮ್ಮ ಫೇಸ್‌ಬುಕ್‌ ಖಾತೆಗಳಲ್ಲಿ ಹಾಕಿದ್ದಾರೆ.

ಫ್ಯಾಕ್ಟ್‌ಚೆಕ್ : ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ ಹೇಳಿರುವಂತೆ ಭಾರತದ ವಿವಿಧ ವಿಶ್ವ ವಿದ್ಯಾನಿಲಯಗಳು ಇಸ್ಲಾಮಿಕ್ ಅಧ್ಯಯನದ ಭಾಗವಾಗಿ ಕುರಾನ್ ಬೋಧಿಸುತ್ತಿರುವುದು ನಿಜ. ಆದರೆ, ಯಾವುದೇ ವಿವಿಗಳು ಭಗವದ್ಗೀತೆ ಅಥವಾ ರಾಮಾಯಣ ಬೋಧಿಸುತ್ತಿಲ್ಲ ಎನ್ನುವುದು ಸುಳ್ಳು.

ಜಾಮಿಯಾ ಮಿಲ್ಲಿಯಾ ಇಸ್ಲಾಮಿಯಾ, ಮೊಹಮ್ಮದ್ ಅಲಿ ಜೌಹರ್ ಮತ್ತು ಮೌಲಾನಾ ಆಜಾದ್ ರಾಷ್ಟ್ರೀಯ ಉರ್ದು ವಿಶ್ವವಿದ್ಯಾಲಯದಂತಹ ಭಾರತದ ಅನೇಕ ವಿಶ್ವವಿದ್ಯಾನಿಲಯಗಳು ತಮ್ಮ ಇಸ್ಲಾಮಿಕ್ ಅಧ್ಯಯನ ಪಠ್ಯಕ್ರಮದ ಭಾಗವಾಗಿ ಕುರಾನ್ ಕಲಿಸುತ್ತಿವೆ.

ಅದೇ ರೀತಿ, ದೇಶದ ಅನೇಕ ವಿಶ್ವ ವಿದ್ಯಾಲಯಗಳು ಭಗವದ್ಗೀತೆಯ ಕೋರ್ಸ್‌ಗಳನ್ನೂ ನೀಡುತ್ತಿವೆ. ಉದಾಹರಣೆಗೆ : ಕುರುಕ್ಷೇತ್ರ ವಿಶ್ವವಿದ್ಯಾನಿಲಯವು 2012ರಲ್ಲಿ ಭಗವದ್ಗೀತೆಯ ಕುರಿತು ಕೋರ್ಸ್ ಪರಿಚಯಿಸಿದೆ. ಇಂದಿರಾಗಾಂಧಿ ರಾಷ್ಟ್ರೀಯ ಮುಕ್ತ ವಿಶ್ವವಿದ್ಯಾನಿಲಯವು (IGNOU)ಭಗವದ್ಗೀತೆ ಕುರಿತು ಸ್ನಾತಕೋತ್ತರ ಪ್ರಮಾಣಪತ್ರ ಕೋರ್ಸ್‌ ನೀಡುತ್ತಿದೆ. ಇಂದಿರಾ ಗಾಂಧಿ ನ್ಯಾಷನಲ್ ಸೆಂಟರ್ ಫಾರ್ ದಿ ಆರ್ಟ್ಸ್ ಕೂಡ ಹಲವು ವರ್ಷಗಳಿಂದ ರಾಮಾಯಣ ಮತ್ತು ಮಹಾಭಾರತ ಕೋರ್ಸ್ ಅನ್ನು ನೀಡುತ್ತಿದೆ.

ಲಕ್ನೋ ವಿಶ್ವವಿದ್ಯಾಲಯವು 2020 ರಲ್ಲಿ ಭಗವದ್ಗೀತೆಯ ಆನ್‌ಲೈನ್ ಕೋರ್ಸ್ ಪರಿಚಯಿಸಿದೆ. ಗುಜರಾತ್, ಕರ್ನಾಟಕದಂತಹ ರಾಜ್ಯಗಳು ತಮ್ಮ ಶಾಲಾ ಪಠ್ಯಕ್ರಮದಲ್ಲಿ ಭಗವದ್ಗೀತೆಯನ್ನು ಸೇರಿಸಿವೆ ಎಂದು ವರದಿಗಳಿವೆ.

ಡಿಸೆಂಬರ್ 2021 ರಲ್ಲಿ, ಲೋಕಸಭೆಯಲ್ಲಿ ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದ ಕೇಂದ್ರ ಶಿಕ್ಷಣ ಸಚಿವರು ಭಗವದ್ಗೀತೆಗೆ ಸಂಬಂಧಿಸಿದ ವಿಷಯವು ಈಗಾಗಲೇ ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (CBSE)ನಲ್ಲಿ ವಿವಿಧ ತರಗತಿಗಳ ಭಾಗವಾಗಿದೆ ಎಂದು ತಿಳಿಸಿದ್ದರು.

ಇದಲ್ಲದೆ, ಯೋಗ ವಿಷಯಕ್ಕಾಗಿ ಯುಜಿಸಿ-ನೆಟ್ ಪರೀಕ್ಷೆಯ ಪಠ್ಯಕ್ರಮದಲ್ಲಿ ಭಗವದ್ಗೀತೆಯನ್ನು ಅಳವಡಿಸಲಾಗಿದೆ. ರಾಜ್ಯಗಳು ತಮ್ಮ ಪಠ್ಯಕ್ರಮದಲ್ಲಿ ಭಗವದ್ಗೀತೆ, ರಾಮಾಯಣ ಕುರಿತ ವಿಷಯಗಳನ್ನು ಸೇರಿಸಲು ಅಧಿಕಾರ ಹೊಂದಿವೆ.

ನಾವು ಮೇಲೆ ಉಲ್ಲೇಖಿಸಿದ ಮಾಹಿತಿಯ ಪ್ರಕಾರ, ಭಾರತದ ವಿವಿದ ವಿಶ್ವವಿದ್ಯಾಲಯಗಳು ಸೇರಿದಂತೆ ಅನೇಕ ಶಿಕ್ಷಣ ಸಂಸ್ಥೆಗಳು ಭಗವದ್ಗೀತೆ, ರಾಮಾಯಣ ಬೋಧಿಸುತ್ತಿರುವುದು ಸ್ಪಷ್ಟವಾಗಿದೆ. ಹಾಗಾಗಿ, ಸಾಮಾಜಿಕ ಜಾಲತಾಣದ ಪೋಸ್ಟ್ ಸುಳ್ಳು.

ಇದನ್ನೂ ಓದಿ : FACT CHECK : ರಾಹುಲ್ ಗಾಂಧಿಯನ್ನು ಟೀಕಿಸಿರುವ ಉದ್ಧವ್ ಠಾಕ್ರೆಯ ವೈರಲ್ ಭಾಷಣ 2019ರದ್ದು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...