Homeಫ್ಯಾಕ್ಟ್‌ಚೆಕ್FACT CHECK : ನ್ಯೂಯಾರ್ಕ್‌ನ ಟೈಮ್ಸ್‌ ಸ್ಕ್ವೇರ್‌ನಲ್ಲಿ ವಿರಾಟ್ ಕೊಹ್ಲಿಯ ಪ್ರತಿಮೆ ಸ್ಥಾಪಿಸಲಾಗಿದೆ ಎಂಬುವುದು...

FACT CHECK : ನ್ಯೂಯಾರ್ಕ್‌ನ ಟೈಮ್ಸ್‌ ಸ್ಕ್ವೇರ್‌ನಲ್ಲಿ ವಿರಾಟ್ ಕೊಹ್ಲಿಯ ಪ್ರತಿಮೆ ಸ್ಥಾಪಿಸಲಾಗಿದೆ ಎಂಬುವುದು ಸುಳ್ಳು

- Advertisement -
- Advertisement -

ಅಮೆರಿಕದ ಪ್ರಸಿದ್ಧ ‘ಟೈಮ್ಸ್‌ ಸ್ಕ್ವೇರ್‌’ನಲ್ಲಿ ಭಾರತದ ಕ್ರಿಕೆಟ್‌ ಆಟಗಾರ ವಿರಾಟ್ ಕೊಹ್ಲಿಯ ಪ್ರತಿಮೆ ಅನಾವರಣ ಮಾಡಲಾಗಿದೆ ಎಂಬ ಪೋಸ್ಟ್‌ವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದೆ.

“ಅಮೆರಿಕದ ನ್ಯೂಯಾರ್ಕ್‌ನಲ್ಲಿ ವಿರಾಟ್ ಕೊಹ್ಲಿ ಅವರ ಪ್ರತಿಮೆ ಅನಾವರಣ ಮಾಡಿದ್ದಾರೆ. ಅಲ್ಲಿನ ಜನರಿಗೆ ವಿರಾಟ್ ಕೊಹ್ಲಿ ಕ್ರಿಕೆಟ್‌ಗಿಂತಲೂ ದೊಡ್ಡವರು” ಎಂಬ ಪೋಸ್ಟರ್‌ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳಲಾಗಿದೆ.

ಫ್ಯಾಕ್ಟ್‌ಚೆಕ್‌ : ಸಾಮಾಜಿಕ ಜಾಲತಾಣದ ಪೋಸ್ಟ್‌ಗಳ ಸತ್ಯಾಸತ್ಯತೆಯನ್ನು ನಾವು ಪರಿಶೀಲಿಸಿದ್ದೇವೆ. ಗೂಗಲ್‌ನಲ್ಲಿ ಈ ಕುರಿತು ಮಾಹಿತಿ ಹುಡುಕಿದಾಗ, ಅಂತಹ ಯಾವುದೇ ಪ್ರತಿಮೆ ಅನಾವರಣ ಮಾಡಿದ ಬಗ್ಗೆ ವರದಿಗಳು ನಮಗೆ ಲಭ್ಯವಾಗಿಲ್ಲ.

ನ್ಯೂಯಾರ್ಕ್ ಸಿಟಿಯ ಟೈಮ್ ಸ್ಕ್ವೇರ್‌ನ ಸಾಮಾಜಿಕ ಮಾಧ್ಯಮದ ಹ್ಯಾಂಡಲ್‌ಗಳನ್ನು ನಾವು ಪರಿಶೀಲಿಸಿದ್ದೇವೆ. ಅಲ್ಲಿ ವಿರಾಟ್ ಕೊಹ್ಲಿ ಅವರ ಪ್ರತಿಮೆ ಅನಾವರಣದ ಬಗ್ಗೆ ಯಾವುದೇ ಮಾಹಿತಿ ಕಂಡುಬಂದಿಲ್ಲ. ಹೆಚ್ಚುವರಿಯಾಗಿ, ಜೂನ್ 28, 2024 ರಂದು @timessquarenyc ನ Instagram ಖಾತೆಯಲ್ಲಿ ಹಂಚಿಕೊಂಡ ವಿಡಿಯೋದಲ್ಲಿ ಅಂತಹ ಯಾವುದೇ ಪ್ರತಿಮೆ ಸ್ಥಾಪಿಸಿರುವುದನ್ನು ತೋರಿಸಿಲ್ಲ.

ಹಾಗೆಯೇ ಟೈಮ್ ಸ್ಕ್ವೇರ್‌ನ ವೆಬ್‌ಸೈಟ್‌ನಲ್ಲೂ ವಿರಾಟ್‌ ಕೊಹ್ಲಿಯ ಪ್ರತಿಮೆ ಅನಾವರಣಗೊಳಿಸಿದ ಬಗ್ಗೆ ಯಾವುದೇ ಮಾಹಿತಿ ಕಂಡು ಬಂದಿಲ್ಲ.

ಅರ್ಥ್‌ಕ್ಯಾಮ್ ಮೂಲಕ ಪ್ರಸಾರ ಮಾಡಲಾದ ಟೈಮ್ಸ್ ಸ್ಕ್ವೇರ್‌ನ ನೇರ ದೃಶ್ಯಾವಳಿಗಳಲ್ಲೂ ಅಂತಹ ಯಾವುದೇ ಪ್ರತಿಮೆಯನ್ನು ತೋರಿಸಲಿಲ್ಲ.

ಗೂಗಲ್‌ನಲ್ಲಿ “Virat Kohli” “statue” ಮತ್ತು “Duroflex”ಎಂದು ಕೀವರ್ಡ್ ಹುಡುಕಿದಾಗ ಜೂನ್ 23,2024 ರಂದು ಮ್ಯಾಟ್ರೆಸ್ ಸಂಸ್ಥೆಯ ಇನ್‌ಸ್ಟಾಗ್ರಾಂ ಪೋಸ್ಟ್‌ ಲಭ್ಯವಾಗಿದೆ. ಅದರಲ್ಲಿ, ವೈರಲ್ ಆದ ವಿಡಿಯೋ ಇದ್ದು, ಆ ವಿಡಿಯೋದಲ್ಲಿ “ಈಗಷ್ಟೇ ಅನಾವರಣಗೊಂಡಿದೆ: ಐಕಾನಿಕ್ ಟೈಮ್ಸ್ ಸ್ಕ್ವೇರ್‌ನಲ್ಲಿ ವಿರಾಟ್ ಕೊಹ್ಲಿಯ ದೊಡ್ಡ ಪ್ರತಿಮೆ. ಈ ರಾಜನ ಕರ್ತವ್ಯ, ನಾವು ಜಾಗತಿಕವಾಗಿ ವಿಸ್ತರಣೆ ಹೊಂದುತ್ತಿದ್ದು ಇತಿಹಾಸವನ್ನು ನಿರ್ಮಿಸುತ್ತಿದ್ದೇವೆ! ನ್ಯೂಯಾರ್ಕ್, ವೆಸ್ಟ್ ಇಂಡೀಸ್ ಮತ್ತು ವಿಶ್ವಕಪ್ 2024 ರ ಉದ್ದಕ್ಕೂ ವಿರಾಟ್ ಅವರ ನೆಚ್ಚಿನ ಡ್ಯುರೊಫ್ಲೆಕ್ಸ್ ಹಾಸಿಗೆಯನ್ನು ಅವರಿಗೆ ತಲುಪಿಸಲಾಗುತ್ತಿದೆ! #ViratSleepsOnDuroflex *CGIವಿಡಿಯೋ” ಎಂದಿದೆ.

ಪೋಸ್ಟ್‌ನಲ್ಲಿ ಬಳಸಲಾದ ಹ್ಯಾಶ್‌ಟ್ಯಾಗ್‌ಗಳು –“#GreatSleepGreatHealth #ViratKohli #worldcup #cricket #CGI #cgianimation– ದೃಶ್ಯವು ಕಂಪ್ಯೂಟರ್‌ನಿಂದ ರಚಿಸಲ್ಪಟ್ಟ ವಿಡಿಯೋ ಚಿತ್ರಣವಾಗಿದೆ ಎಂದು ಮತ್ತಷ್ಟು ಒತ್ತಿಹೇಳುತ್ತದೆ.

ಡ್ಯುರೊಫ್ಲೆಕ್ಸ್‌ನ ಪ್ರೊಫೈಲ್ ಅನ್ನು ನೋಡಿದ್ದು ಅಂತಹ ಅನೇಕ CGI ಮೂಲಕ ರಚಿತವಾದ ವಿವರಗಳು ಲಭ್ಯವಾಗಿವೆ.

ಟೈಮ್ಸ್ ಸ್ಕ್ವೇರ್‌ನಲ್ಲಿರುವ ಕೊಹ್ಲಿಯ ಪ್ರತಿಮೆಯನ್ನು ತೋರಿಸುವ ಅದೇ ತುಣುಕನ್ನು ಅವರ X ಖಾತೆಯಲ್ಲಿ “#CGI” ಎಂಬ ಹ್ಯಾಶ್‌ಟ್ಯಾಗ್‌ನೊಂದಿಗೆ ಹಂಚಿಕೊಳ್ಳಲಾಗಿದೆ.

ಇದನ್ನು ಡ್ಯುರೊಫ್ಲೆಕ್ಸ್‌ನ ಯೂಟ್ಯೂಬ್ ಚಾನೆಲ್ ಮತ್ತು ಫೇಸ್‌ಬುಕ್ ಪುಟದಲ್ಲಿ “#CGI #cgi ಅನಿಮೇಷನ್” ಎಂಬ ಹ್ಯಾಶ್‌ಟ್ಯಾಗ್‌ಗಳೊಂದಿಗೆ ಹಂಚಿಕೊಳ್ಳಲಾಗಿದೆ.

ನಾವು ನಡೆಸಿದ ಪರಿಶೀಲನೆಯಲ್ಲಿ ನ್ಯೂಯಾರ್ಕ್‌ನ ಟೈಮ್ಸ್ ಸ್ಕ್ವೇರ್‌ನಲ್ಲಿ ವಿರಾಟ್ ಕೊಹ್ಲಿಯ ಬೃಹತ್ ಪ್ರತಿಮೆಯನ್ನು ತೋರಿಸುವ ವೈರಲ್ ದೃಶ್ಯಗಳು CGI ನಿಂದ ರಚಿಸಲಾಗಿದೆ ಎಂದು ತಿಳಿದು ಬಂದಿದೆ.

ಇದನ್ನೂ ಓದಿ : FACT CHECK : ಸಂಬಂಧಿಕರಲ್ಲದ ಹೊರಗಿನವರಿಗೆ ರೈಲು ಟಿಕೆಟ್ ಬುಕ್ ಮಾಡಿದ್ರೆ ಜೈಲು ಸೇರಬೇಕಾಗುತ್ತದೆ ಎನ್ನುವುದು ಸುಳ್ಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಸ್‌ಐಆರ್‌ಗೂ ಸರ್ಕಾರಿ ಸೌಲಭ್ಯಕ್ಕೂ ಲಿಂಕ್; ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ : ನಿಜವಾದ ಆತಂಕ

ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳದ ಹೊಸ ಸರ್ಕಾರ ನೀಡಿರುವ ಆದೇಶಗಳ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿಯೊಂದರ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ 23 ಜೂನ್ 2026ರಂದು ನಿರಾಕರಿಸಿದೆ. ವಿಧಾನಸಭೆ ಚುನಾವಣೆಗೆ ಮುನ್ನ ನಡೆದ ವಿಶೇಷ...

ಒಂಬತ್ತನೇ ತರಗತಿ ಪಠ್ಯಪುಸ್ತಕದಲ್ಲಿ ತುರ್ತು ಪರಿಸ್ಥಿತಿ ಅಧ್ಯಾಯ ಸೇರಿಸಿದ ಎನ್‌ಸಿಇಆರ್‌ಟಿ

ಭಾರತದಲ್ಲಿ ತುರ್ತು ಪರಿಸ್ಥಿತಿ ಘೋಷಿಸಲ್ಪಟ್ಟ ಸುಮಾರು ಐದು ದಶಕಗಳ ನಂತರ, ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಈ ವಿಷಯವನ್ನು 9 ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಮೊದಲ...

‘ಆರ್‌ಎಸ್‌ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದೆ’: ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಹಾಗೂ ಆಡಳಿತಾರೂಢ ಬಿಜೆಪಿ ವಿರುದ್ಧ ಕರ್ನಾಟಕದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮತ್ತೊಮ್ಮೆ ತೀವ್ರ ಸ್ವರೂಪದ ಸೈದ್ಧಾಂತಿಕ ದಾಳಿ ನಡೆಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಸರಣಿ ಪ್ರಶ್ನೆಗಳನ್ನು...

ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಜಾರಿಯ ಜೊತೆಯಲ್ಲೆ ಸುಪ್ರೀಂ ಕೋರ್ಟ್‌ಗೆ ಹೋಗಲು ಕರ್ನಾಟಕ ಸಜ್ಜು

ಕೇಂದ್ರ ಸರ್ಕಾರದ ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ‘ವಿಕಸಿತ ಭಾರತ-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ)’ (VB-G RAM G) ಕಾಯ್ದೆಯ ಹಲವು ನಿಯಮಗಳಿಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದರೂ...

ಉತ್ತರ ಪ್ರದೇಶ: ಮದುವೆ ರಿಸೆಪ್ಷನ್‌ನಲ್ಲಿ ಗೋಮಾಂಸ ಬಡಿಸಿದ ಆರೋಪ; ವರನ ತಂದೆ ಸೇರಿ ಏಳು ಮಂದಿ ಬಂಧನ, ಮಂಟಪ ಸೀಲ್

ಶಾಮ್ಲಿ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಶಾಮ್ಲಿ ಜಿಲ್ಲೆಯ ಕೈರಾನಾ ಪಟ್ಟಣದಲ್ಲಿ ನಡೆದ ಮದುವೆ ಆರತಕ್ಷತೆ (ವಲೀಮಾ) ಸಮಾರಂಭವೊಂದು ಈಗ ಭಾರೀ ವಿವಾದಕ್ಕೆ ಕಾರಣವಾಗಿದೆ. ಸಮಾರಂಭದಲ್ಲಿ ಅತಿಥಿಗಳಿಗೆ ಗೋಮಾಂಸವನ್ನು ಬೇಯಿಸಿ ಬಡಿಸಲಾಗಿದೆ ಎಂಬ...

ರಾಮ ಮಂದಿರ ದೇಣಿಗೆ ವಿವಾದ: ಎಫ್‌ಐಆರ್ ದಾಖಲಿಸಿ ತ್ವರಿತ ನ್ಯಾಯಾಲಯದ ವಿಚಾರಣೆಗೆ ವಿಶ್ವ ಹಿಂದೂ ಪರಿಷತ್ ಆಗ್ರಹ

ರಾಮ ದೇಣಿಗೆ ವಿವಾದ ದುರುಪಯೋಗ ಕುರಿತು ಎಸ್‌ಐಟಿ ತನ್ನ ಪ್ರಾಥಮಿಕ ವರದಿಯನ್ನು ಸಲ್ಲಿಸಿದ ಕೂಡಲೇ, ಬಲಪಂಥೀಯ ಹಿಂದುತ್ವ ಸಂಘಟನೆ ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಪ್ರಕರಣದಲ್ಲಿ ಎಫ್‌ಐಆರ್ ದಾಖಲಿಸಬೇಕೆಂದು ಒತ್ತಾಯಿಸಿದೆ. ವಿಎಚ್‌ಪಿ ಅಂತರರಾಷ್ಟ್ರೀಯ...

ಪಾಸ್‌ಪೋರ್ಟ್ ಪೌರತ್ವದ ದಾಖಲೆಯಲ್ಲ: ವಿದೇಶಾಂಗ ಸಚಿವಾಲಯ

ಪಾಸ್‌ಪೋರ್ಟ್ ಒಂದು ಪ್ರಯಾಣದ ದಾಖಲೆಯಾಗಿದೆಯೇ ಹೊರತು, ಪೌರತ್ವದ ದಾಖಲೆಯಲ್ಲ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ (ಎಂಇಎ) ಅಧಿಕಾರಿಗಳು ಬುಧವಾರ (ಜೂನ್ 24) ತಿಳಿಸಿದ್ದಾರೆ. ಈ ಮೂಲಕ ಅವರು ಭಾರತೀಯ ಪೌರತ್ವವನ್ನು ಖಚಿತವಾಗಿ ಸಾಬೀತುಪಡಿಸುವ...

90 ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ, ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಹಾಳಾಗಿದೆ ಆದರೆ ಪ್ರಧಾನ್ ತಮ್ಮ ಕುರ್ಚಿಗೆ ಅಂಟಿಕೊಂಡಿದ್ದಾರೆ: ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ದೇಶಾದ್ಯಂತ ಭಾರಿ ಸಂಚಲನ ಮೂಡಿಸಿರುವ 'ನೀಟ್' (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳು ತಮ್ಮ ಆಕ್ರೋಶವನ್ನು ಮತ್ತಷ್ಟು ತೀವ್ರಗೊಳಿಸಿವೆ. ಪರೀಕ್ಷಾ ಅಕ್ರಮಗಳನ್ನು ವಿರೋಧಿಸಿ...

2023ರಿಂದ 20 ಸಾವಿರಕ್ಕೂ ಹೆಚ್ಚು ಪ್ಯಾಲೆಸ್ತೀನ್ ಮಕ್ಕಳನ್ನು ಹತ್ಯೆಗೈದ ಇಸ್ರೇಲ್; ಉದ್ದೇಶಪೂರ್ವಕ ‘ನರಮೇಧ’ ಎಂದ ವರದಿ

ಪ್ಯಾಲೆಸ್ತೀನ್ ಮಕ್ಕಳನ್ನು ಉದ್ದೇಶಪೂರ್ವಕವಾಗಿ ಗುರಿಯಾಗಿಸಿಕೊಂಡು ಹತ್ಯೆ ಮಾಡುವ ಮೂಲಕ ಇಸ್ರೇಲ್‌ ಸೇನೆ ನರಮೇಧ ನಡೆಸಿದೆ ಎಂದು ವಿಶ್ವಸಂಸ್ಥೆಯ ಸ್ವತಂತ್ರ ಅಂತಾರಾಷ್ಟ್ರೀಯ ವಿಚಾರಣಾ ಆಯೋಗ ಮಂಗಳವಾರ (ಜೂ.23) ತಿಳಿಸಿದೆ. ಇಸ್ರೇಲ್ ಪಡೆಗಳು ಅಕ್ಟೋಬರ್ 2023ರಿಂದ ಈವರೆಗೆ...

ಮೀಸಲಾತಿ ರದ್ದುಗೊಳಿಸಲು ಬಿಜೆಪಿ ಮೂರನೇ ಎರಡರಷ್ಟು ಬಹುಮತ ಬಯಸುತ್ತಿದೆ: ಜೈರಾಮ್‌ ರಮೇಶ್‌

ಲೋಕಸಭೆಯಲ್ಲಿ ಬಿಜೆಪಿ ಮೂರನೇ ಎರಡರಷ್ಟು ಬಹುಮತಕ್ಕಾಗಿ ಶ್ರಮಿಸುತ್ತಿದೆ. ಏಕೆಂದರೆ, ಮೀಸಲಾತಿಯನ್ನು ಕೊನೆಗೊಳಿಸಲು ಸಂವಿಧಾನವನ್ನು ತಿದ್ದುಪಡಿ ಮಾಡುವುದು ಅದರ ನಿಜವಾದ ಮತ್ತು ಅಂತಿಮ ಗುರಿಯಾಗಿದೆ ಎಂದು ಕಾಂಗ್ರೆಸ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್...