Homeಫ್ಯಾಕ್ಟ್‌ಚೆಕ್FACT CHECK : ವ್ಯಕ್ತಿಯೊಬ್ಬರು ಕೇಸರಿ ಬಟ್ಟೆ ಹೊದ್ದು ಮಲಗಿದ್ದಕ್ಕೆ ಮುಸ್ಲಿಮರು ಥಳಿಸಿದ್ದಾರೆ ಎಂಬುವುದು ಸುಳ್ಳು

FACT CHECK : ವ್ಯಕ್ತಿಯೊಬ್ಬರು ಕೇಸರಿ ಬಟ್ಟೆ ಹೊದ್ದು ಮಲಗಿದ್ದಕ್ಕೆ ಮುಸ್ಲಿಮರು ಥಳಿಸಿದ್ದಾರೆ ಎಂಬುವುದು ಸುಳ್ಳು

- Advertisement -
- Advertisement -

“ಕೇಸರಿ ಬಟ್ಟೆ ಹೊದ್ದು ಮಲಗಿದ್ದ ವ್ಯಕ್ತಿಗೆ ಮುಸ್ಲಿಮರು ಹಲ್ಲೆ ನಡೆಸಿದ್ದಾರೆ” ಎಂದು ಪ್ರತಿಪಾದಿಸಿ ವಿಡಿಯೋವೊಂದನ್ನು ಹಂಚಿಕೊಳ್ಳಲಾಗುತ್ತಿದೆ.

ತ್ರೀನೇತ್ರ ಸೂತ್ರಧಾರ‘ ಎಂಬ ಫೇಸ್‌ಬುಕ್ ಬಳಕೆದಾರರೊಬ್ಬರು ಅಕ್ಟೋಬರ್ 7,2024 ರಂದು ಈ ವಿಡಿಯೋ ಹಂಚಿಕೊಂಡು, “ದೆಹಲಿಯ ಮಾಡೆಲ್ ಟೌನ್‌ನ ಕಾನೂನು ಮತ್ತು ಸುವ್ಯವಸ್ಥೆ ಇದು. ವ್ಯಕ್ತಿಯೊಬ್ಬ ಕೇಸರಿ ಬಟ್ಟೆಯನ್ನು ಹೊದ್ದುಕೊಂಡು ಆರಾಮವಾಗಿ ಮಲಗಿದ್ದಾನೆ… ಶಾಂತಿದೂತರು ಬೈಕ್‌ನಲ್ಲಿ ಬಂದು ವಿನಾಕಾರಣ ದೊಣ್ಣೆಯಿಂದ ಹೊಡೆಯಲಾರಂಭಿಸಿದ್ದಾರೆ” ಎಂದು ಬರೆದುಕೊಂಡಿದ್ದರು.

ಇದೇ ಬರಹದೊಂದಿಗೆ, ಸದಾ ಕೋಮು ದ್ವೇಷದ ಸುದ್ದಿಗಳನ್ನು ಹಬ್ಬುವ ಬಲಪಂಥೀಯ ಎಕ್ಸ್ ಖಾತೆ ಶ್ರೇಯಾ (@Shreya_Sanatani)ದಲ್ಲೂ ಅಕ್ಟೋಬರ್ 7, 2024ರಂದು ವಿಡಿಯೋ ಹಂಚಿಕೊಳ್ಳಲಾಗಿತ್ತು.

ಫ್ಯಾಕ್ಟ್‌ಚೆಕ್ : ಕೇಸರಿ ಬಟ್ಟೆ ಹೊದ್ದು ಮಲಗಿದ್ದ ವ್ಯಕ್ತಿಗೆ ಮುಸ್ಲಿಮರು ಹಲ್ಲೆ ನಡೆಸಿದ್ದಾರೆ ಎಂಬುವುದು ಶುದ್ದ ಸುಳ್ಳು.

ವಿಡಿಯೋ ಕುರಿತು ನಾವು ಮಾಹಿತಿ ಹುಡುಕಿದಾಗ ನಮಗೆ ಅನೇಕ ವರದಿಗಳು ಲಭ್ಯವಾಗಿದೆ. ವರದಿಗಳ ಪ್ರಕಾರ, “ಸಾರ್ವಜನಿಕ ಪಾರ್ಕ್ ಒಂದರಲ್ಲಿ ಮೂತ್ರ ಮಾಡದಂತೆ ವ್ಯಕ್ತಿಯೊಬ್ಬ ಹೇಳಿದ್ದು, ಈ ಕಾರಣಕ್ಕೆ ಮರುದಿನ ಆತನನ್ನು ಅಮಾನುಷವಾಗಿ ಥಳಿಸಲಾಗಿದೆ. ಈ ಪ್ರರಕಣದಲ್ಲಿ ಭಾಗಿಯಾದವರೆಲ್ಲರೂ ಹಿಂದೂಗಳಾಗಿದ್ದಾರೆ.

ಈ ಘಟನೆಯ ಕುರಿತು ಅಕ್ಟೋಬರ್ 6, 2024 ರಂದು ರಿಪಬ್ಲಿಕ್ ವರ್ಲ್ಡ್ ಪ್ರಕಟಿಸಿದ ವರದಿ ನಮಗೆ ಲಭ್ಯವಾಗಿದೆ. ಅದರ ಪ್ರಕಾರ, ದೆಹಲಿಯ ಮಾಡೆಲ್ ಟೌನ್ ಪ್ರದೇಶದಲ್ಲಿ ಸಾರ್ವಜನಿಕವಾಗಿ ಮೂತ್ರ ವಿಸರ್ಜನೆ ಮಾಡಬೇಡಿ ಎಂದು ಹೇಳಿದ್ದಕ್ಕೆ ವ್ಯಕ್ತಿಯ ಮೇಲೆ ಹಲ್ಲೆ ನಡೆಸಿದವರನ್ನು ಬಂಧಿಸಲಾಗಿದೆ. ಉತ್ತರ ದೆಹಲಿಯ ಮಾಡೆಲ್ ಟೌನ್ ಪ್ರದೇಶದಲ್ಲಿ ಶುಕ್ರವಾರ ನಡೆದ ಈ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಅಕ್ಟೋಬರ್ 6, 2024 ರಂದು ಇಂಡಿಯಾ ಟಿವಿ ಪ್ರಕಟಿಸಿದ್ದ ವರದಿಯಲ್ಲೂ, “ಪಾರ್ಕ್‌ನಲ್ಲಿ ಮೂತ್ರ ವಿಸರ್ಜನೆ ಮಾಡಿದ ಆರೋಪಿಯನ್ನು ತಡೆದ ವ್ಯಕ್ತಿಯೊಬ್ಬನಿಗೆ ಮಾರನೇ ದಿನ ದೊಣ್ಣೆಯಿಂದ ಥಳಿಸಲಾಗಿದೆ. ಆರ್ಯನ್ ಎಂದು ಗುರುತಿಸಲಾದ ಆರೋಪಿ ಮರುದಿನ ತನ್ನ ಸ್ನೇಹಿತರೊಂದಿಗೆ ಸೇರಿಕೊಂಡು ತನ್ನನ್ನು ಮೂತ್ರ ಮಾಡದಂತೆ ತಡೆದ ವ್ಯಕ್ತಿಯನ್ನು ಥಳಿಸಿದ್ದಾನೆ. ಇದಾದ ಬಳಿಕ ಅವರು ಬೈಕ್ ನಲ್ಲಿ ತೆರಳಿದ್ದಾರೆ ಎಂದಿದೆ.

ಮುಂದುವರಿದು, “ಈ ಘಟನೆ ಸಮೀಪದ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಪೊಲೀಸರು ಆರೋಪಿಯನ್ನು ಬಂಧಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ನಂತರ ಆರೋಪಿಗಳಿಗೆ ಜಾಮೀನು ಮಂಜೂರಾಗಿದೆ. ವಾಯುವ್ಯ ದೆಹಲಿಯ ಮಾಡೆಲ್ ಟೌನ್ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ಶುಕ್ರವಾರ ಮಧ್ಯಾಹ್ನ ಫುಟ್‌ಪಾತ್‌ನಲ್ಲಿ ಕೇಸರಿ ಬಣ್ಣದ ಬೆಡ್ ಶೀಟ್ ಹಾಕಿ ಮಲಗಿದ್ದ ರಾಮ್‌ಪಾಲ್‌ಗೆ ಆರ್ಯನ್ ಥಳಿಸಲು ಆರಂಭಿಸಿದ್ದ. ಸಂತ್ರಸ್ತ ಎದ್ದು ಕುಳಿತ ನಂತರವೂ ಆರೋಪಿ ದೊಣ್ಣೆಯಿಂದ ಹಲ್ಲೆ ಮುಂದುವರಿಸಿದ್ದಾನೆ, ನಂತರ ಸ್ಥಳದಿಂದ ಪರಾರಿಯಾಗಿದ್ದಾನೆ” ಎಂದು ಹೇಳಲಾಗಿದೆ.

ಅಕ್ಟೋಬರ್ 7, 2024 ಟೈಮ್ಸ್ ಆಫ್ ಇಂಡಿಯಾ ಪ್ರಕಟಿಸಿದ ವರದಿಯಲ್ಲೂ “ವಾಯವ್ಯ ದೆಹಲಿಯ ಮಾಡೆಲ್ ಟೌನ್​ನಲ್ಲಿ ಇಬ್ಬರು ಪುರುಷರು ಸಾರ್ವಜನಿಕ ಸ್ಥಳದಲ್ಲಿ ಮೂತ್ರ ವಿಸರ್ಜನೆ ಮಾಡುವುದನ್ನು ಆಕ್ಷೇಪಿಸಿದ್ದಕ್ಕಾಗಿ 28 ವರ್ಷದ ವ್ಯಕ್ತಿಯನ್ನು ದೊಣ್ಣೆಯಿಂದ ಥಳಿಸಿದ್ದಾರೆ. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಸಂತ್ರಸ್ತನನ್ನು ಮಾಡೆಲ್ ಟೌನ್ ನಿವಾಸಿ ರಾಮ್ ಪಾಲ್ ಎಂದು ಗುರುತಿಸಲಾಗಿದ್ದು, ಟೆಂಟ್ ಹೌಸ್ ನಲ್ಲಿ ಕೆಲಸ ಮಾಡುತ್ತಿದ್ದಾನೆ. ಬೆಳಿಗ್ಗೆ 7 ಗಂಟೆ ಸುಮಾರಿಗೆ ಆತನ ಅಂಗಡಿಯ ಮುಂದೆ ಮಲಗಿದ್ದಾಗ ಈ ಘಟನೆ ನಡೆದಿದೆ” ಎಂದಿದೆ.

ಒಟ್ಟಿನಲ್ಲಿ, ಸಾರ್ವಜನಿಕ ಸ್ಥಳದಲ್ಲಿ ಮೂತ್ರ ವಿಸರ್ಜನೆ ಮಾಡುದನ್ನು ಆಕ್ಷೇಪಿಸಿದ ರಾಮ್‌ಪಾಲ್ ಎಂಬ ವ್ಯಕ್ತಿಗೆ ಆರ್ಯನ್ ಎಂಬಾತ ಹಲ್ಲೆ ನಡೆಸಿರುವ ವಿಡಿಯೋ ಆಗಿದೆ ವೈರಲ್ ಆಗಿರುವುದು. ಅಲ್ಲದೆ, ಅದರಲ್ಲಿ ಯಾವುದೇ ಕೋಮು ಆಯಾಮ ಇಲ್ಲ. ಕೇಸರಿ ಬಟ್ಟೆ ಹೊದ್ದು ಮಲಗಿದ್ದ ವ್ಯಕ್ತಿಗೆ ಶಾಂತಿದೂತರು (ಮುಸ್ಲಿಮರು) ಥಳಿಸಿದ್ದಾರೆ ಎಂಬುವುದು ಶುದ್ದ ಸುಳ್ಳು ಮತ್ತು ಕೋಮು ದ್ವೇಷದ ಪ್ರತಿಪಾದನೆಯಾಗಿದೆ.

ಇದನ್ನೂ ಓದಿ : FACT CHECK : ಹಿಂದೂ ಮಹಿಳೆ ಮುಂದೆ ಶರ್ಟ್ ಬಿಚ್ಚಿದ ಮುಸ್ಲಿಂ ಯುವಕನಿಗೆ ಥಳಿತ..ವೈರಲ್ ವಿಡಿಯೋದ ಅಸಲಿಯತ್ತೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: 2ಲಕ್ಷ ಮತದಾರರಲ್ಲಿ ಬಸವನಗುಡಿಯಲ್ಲಿ ಉಳಿಯುವುದು 88 ಸಾವಿರ ಮಾತ್ರಾ?: SIR ಪರಿಷ್ಕರಣೆಯ ಆಘಾತಕಾರಿ ಲೆಕ್ಕಾಚಾರ

2023ರ ಚುನಾವಣೆಯಲ್ಲಿ ಬಸವನಗುಡಿಯಲ್ಲಿ 1.28 ಲಕ್ಷ ಮತಗಳು ಚಲಾಯಿಸಲ್ಪಟ್ಟಿದ್ದವು. ಆದರೆ ಪ್ರಸ್ತುತ SIR ಪ್ರಕ್ರಿಯೆಯಲ್ಲಿ 1.13 ಲಕ್ಷ ಜನರನ್ನು ಹೊರಗಿಟ್ಟು, ಕರಡು ಪಟ್ಟಿಯಲ್ಲಿ ಕೇವಲ 1.35 ಲಕ್ಷ ಮತದಾರರನ್ನು ಮಾತ್ರ ಉಳಿಸಿಕೊಳ್ಳಲಾಗಿದೆ. ಇದರ...

ಕರ್ನಾಟಕ ಎಸ್ಐಆರ್: 43.81 ಲಕ್ಷ ಜನರಿಗೆ SIR ನೋಟಿಸ್: ಗಣ್ಯರ ಹೆಸರು ಸರಿಪಡಿಸುವ ಚುನಾವಣಾ ಆಯೋಗಕ್ಕೆ ಜನ-ಸಾಮಾನ್ಯರ ನೋವು ಕಾಣುತ್ತಿಲ್ಲವೇ?

ಕರ್ನಾಟಕದಲ್ಲಿ SIR ವೇಳೆ 43.81 ಲಕ್ಷ ಮತದಾರರ ಪ್ರಕರಣಗಳಿಗೆ ನೋಟಿಸ್‌ಗಳನ್ನು ಸೃಷ್ಟಿಸಲಾಗಿದ್ದು, ಅವರ ದಾಖಲೆಗಳ ಪರಿಶೀಲನೆಗೆ ಕ್ರಮ ಕೈಗೊಳ್ಳಲಾಗಿದೆ. ಈ ಪೈಕಿ 23.45 ಲಕ್ಷ ಪ್ರಕರಣಗಳಲ್ಲಿ 2002ರ ಮತದಾರರ ಪಟ್ಟಿಯೊಂದಿಗೆ ಮ್ಯಾಪಿಂಗ್ ಆಗದಿರುವುದು...

ಪಿಣರಾಯಿ ವಿಜಯನ್ ವಿರುದ್ಧ ಎಫ್‌ಐಆರ್‌ಗೆ ಇಡಿ ಪತ್ರ: ಕಾನೂನು ಪರಿಶೀಲನೆ ನಡೆಸಲಾಗುವುದು ಎಂದ ಸಿಎಂ ವಿ.ಡಿ. ಸತೀಶನ್

ಆರೋಪಿತ ಸಿಎಂಆರ್‌ಎಲ್ ಲಂಚ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಪಿಐ(ಎಂ) ಹಿರಿಯ ನಾಯಕ ಪಿಣರಾಯಿ ವಿಜಯನ್ ಮತ್ತು ಇತರರ ವಿರುದ್ಧ ಎಫ್‌ಐಆರ್ ದಾಖಲಿಸಲು ಜಾರಿ ನಿರ್ದೇಶನಾಲಯ (ಇಡಿ) ನೀಡಿರುವ ಪತ್ರವನ್ನು ಕಾನೂನುಬದ್ಧವಾಗಿ ಪರಿಶೀಲಿಸಲಾಗುವುದು, ಅದರ ನಂತರ...

‘ಸಿಇಸಿ ಜ್ಞಾನೇಶ್ ಕುಮಾರ್ ಮಗಳು’ : ನೋಯ್ಡಾ ಜಿಲ್ಲಾಧಿಕಾರಿಗೆ ಅಲಹಾಬಾದ್ ಹೈಕೋರ್ಟ್ ತಪರಾಕಿ ಬೆನ್ನಲ್ಲೇ ವಿಪಕ್ಷ ನಾಯಕರ ವಾಗ್ದಾಳಿ

ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ (NSA) ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿನಿಯೊಬ್ಬರನ್ನು ಮುನ್ನೆಚ್ಚರಿಕೆ ಕ್ರಮವಾಗಿ ವಶಕ್ಕೆ ಪಡೆದಿದ್ದಕ್ಕಾಗಿ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ಮಗಳು ಹಾಗೂ ನೋಯ್ಡಾ ಜಿಲ್ಲಾಧಿಕಾರಿ ಮೇಧಾ ರೂಪಮ್ ಅವರನ್ನು...

ಮಲ್ಲಿಕಾರ್ಜುನ ಖರ್ಗೆ ಸಭೆಯ ನಂತರ ‘ಶುದ್ಧೀಕರಣ’ ವಿವಾದ: ಅಪರಿಚಿತರ ವಿರುದ್ಧ ಎಫ್‌ಐಆರ್, ತೀವ್ರ ಆಕ್ರೋಶ ವ್ಯಕ್ತಪಡಿಸಿದ ಕಾಂಗ್ರೆಸ್!

ಉತ್ತರಾಖಂಡದ ಹಲ್ದ್ವಾನಿಯ ರಾಮಲೀಲಾ ಮೈದಾನದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಸಾರ್ವಜನಿಕ ಸಭೆ ನಡೆದ ನಂತರ, ಆ ಮೈದಾನವನ್ನು 'ಶುದ್ಧೀಕರಣ' (ಶುದ್ಧೀಕರಣ ಯಜ್ಞ) ಗೊಳಿಸಿದ ವಿವಾದಾತ್ಮಕ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲ್ದ್ವಾನಿಯ ಕೊತ್ವಾಲಿ...

ದೆಹಲಿ ಮತದಾರರ ಪಟ್ಟಿಗೆ ರಾಘವ್ ಚಡ್ಡಾ ಹೆಸರು ಸೇರ್ಪಡೆ; ಸೂಕ್ತ ಪ್ರಕ್ರಿಯೆ ಅನುಸರಿಸಿಲ್ಲ ಎಂದು ಎಎಪಿ ಆರೋಪ

ರಾಷ್ಟ್ರ ರಾಜಧಾನಿಯ ಮತದಾರರ ಪಟ್ಟಿಯ ಪ್ರಸ್ತುತ ನಡೆಯುತ್ತಿರುವ ವಿಶೇಷ ಪರಿಷ್ಕರಣೆ (ಎಸ್‌ಐಆರ್) ಅಡಿಯಲ್ಲಿ, ಪಂಜಾಬ್‌ನ ಬಿಜೆಪಿ ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರನ್ನು ದೆಹಲಿಯ ಮತದಾರರ ಪಟ್ಟಿಗೆ ಸೇರಿಸಲಾಗಿದೆ ಎಂದು ಚುನಾವಣಾ...

ಮಲ್ಲಿಕಾರ್ಜುನ ಖರ್ಗೆ ಭಾಷಣ ಮಾಡಿದ ವೇದಿಕೆ ‘ಶುದ್ಧೀಕರಣ’ : 29 ದಿನಗಳ ನಂತರ ಎಫ್‌ಐಆರ್ ದಾಖಲು

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ್ದ ಉತ್ತರಾಖಂಡದ ಹಲ್ದ್ವಾನಿಯ ವೇದಿಕೆಯೊಂದರಲ್ಲಿ 'ಶುದ್ಧೀಕರಣ' ನಡೆದ ಇಪ್ಪತ್ತೊಂಬತ್ತು ದಿನಗಳ ನಂತರ, ಪೊಲೀಸರು ಮಂಗಳವಾರ (ಸೆಪ್ಟೆಂಬರ್ 8) ಎಸ್‌ಸಿ/ಎಸ್‌ಟಿ ಕಾಯ್ದೆಯ ನಿಬಂಧನೆಗಳ ಅಡಿಯಲ್ಲಿ...

‘ಪ್ರೊ. ಸಿಎನ್ಆರ್ ರಾವ್‌ ಅವರಿಗೆ ನೋಟಿಸ್ ಕೊಟ್ಟಿಲ್ಲ..’; ಚುನಾವಣಾ ಆಯೋಗದ ಸ್ಪಷ್ಟನೆ

ಕರ್ನಾಟಕದ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ (ಎಸ್‌ಐಆರ್) ವೇಳೆ ಹೆಸರಿನ ಕಾಗುಣಿತದಲ್ಲಿನ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ, ದೇಶದ ಪ್ರಸಿದ್ಧ ವಿಜ್ಞಾನಿಗಳಲ್ಲಿ ಒಬ್ಬರಾದ ಭಾರತರತ್ನ ಪ್ರೊ. ಸಿ.ಎನ್.ಆರ್. ರಾವ್ ಅವರಿಗೆ ತಮ್ಮ ಗುರುತನ್ನು ಸಾಬೀತುಪಡಿಸಲು...

‘ಬಂಗಾಳಿಗಳು ಮೀನು ಇಲ್ಲದೆ ಬದುಕಲು ಸಾಧ್ಯವಿಲ್ಲ’; ಆಹಾರ ಪದ್ಧತಿ ನಿರ್ಧಾರ ಬಿಜೆಪಿ ಕೆಲಸವಲ್ಲ: ಬಿಜೆಪಿ ಮುಖ್ಯಸ್ಥ ಸಮಿಕ್ ಭಟ್ಟಾಚಾರ್ಯ 

ಕೊಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಕೆಲವೇ ತಿಂಗಳುಗಳಲ್ಲಿ ದುರ್ಗಾ ಪೂಜೆ ಮತ್ತು ನವರಾತ್ರಿ ಆಚರಣೆಗಳ ಸಂದರ್ಭದಲ್ಲಿ ಆಹಾರ ಪದ್ಧತಿಯ ಕುರಿತು ಕೆಲವು ಧಾರ್ಮಿಕ ನಾಯಕರು ಹಾಗೂ ವಿಶ್ವ ಹಿಂದೂ...

ಮತದಾರ ಇರುವುದು ವಿದೇಶದಲ್ಲಿ, ಆದರೆ ವಿಚಾರಣೆ ನಡೆಯುತ್ತಿರುವುದು ಇಲ್ಲಿ: ಕರ್ನಾಟಕ SIR ತಂದಿಟ್ಟ ಧರ್ಮಸಂಕಟ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ, ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿದ್ದ ಅನೇಕ ಅನಿವಾಸಿ ಕನ್ನಡಿಗರಿಗೆ ಬಿಸಿ ತುಪ್ಪವಾಗಿ ಪರಿಣಮಿಸಿದೆ. ಹೆಸರಿನಲ್ಲಿನ ವ್ಯತ್ಯಾಸ, ವಯಸ್ಸಿನ ವ್ಯತ್ಯಾಸ...