Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್ | ತಿರುಪತಿ ಲಡ್ಡು ವಿಚಾರಕ್ಕೆ ಹಿಂದೂಗಳನ್ನು ಅಪಹಾಸ್ಯ ಮಾಡಿದವನಿಗೆ ಥಳಿಸಲಾಗಿದೆ ಎಂಬುವುದು ಸುಳ್ಳು

ಫ್ಯಾಕ್ಟ್‌ಚೆಕ್ | ತಿರುಪತಿ ಲಡ್ಡು ವಿಚಾರಕ್ಕೆ ಹಿಂದೂಗಳನ್ನು ಅಪಹಾಸ್ಯ ಮಾಡಿದವನಿಗೆ ಥಳಿಸಲಾಗಿದೆ ಎಂಬುವುದು ಸುಳ್ಳು

- Advertisement -
- Advertisement -

ತಿರುಪತಿ ದೇವಸ್ಥಾನದಲ್ಲಿ ಪ್ರಸಾದವಾಗಿ ನೀಡುವ ಲಡ್ಡುಗಳಲ್ಲಿ ಪ್ರಾಣಿಗಳ ಕೊಬ್ಬಿನಾಂಶ ಪತ್ತೆಯಾಗಿದೆ ಎಂಬ ವಿಚಾರ ಭಾರೀ ಸಂಚಲನಕ್ಕೆ ಕಾರಣವಾಗಿದೆ. ಆಂಧ್ರ ಪ್ರದೇಶದಲ್ಲಿ ರಾಜಕೀಯ ಕೆಸರೆರಚಾಟಕ್ಕೂ ಕಾರಣವಾಗಿದೆ.

ಈ ನಡುವೆ, ಲಡ್ಡು ವಿಚಾರಕ್ಕೆ ಹಿಂದೂಗಳ ಅಪಹಾಸ್ಯ ಮಾಡಿ ಯುವಕನೋರ್ವನಿಗೆ ತಮಿಳುನಾಡಿನಲ್ಲಿ ಥಳಿಸಲಾಗಿದೆ ಎಂದು ವಿಡಿಯೋವೊಂದನ್ನು ಹಂಚಿಕೊಳ್ಳಲಾಗುತ್ತಿದೆ.

ಅನೇಕ ಸಾಮಾಜಿಕ ಜಾಲತಾಣ ಬಳಕೆದಾರರು ವಿಡಿಯೋ ಹಂಚಿಕೊಂಡು, ಪಿಯೂಷ್ ಮಾನುಷ್ ಎಂಬಾತ “ಎಲ್ಲಾ ಹಿಂದೂಗಳಿಗೆ ಪೆರುಮಾಳ್ (ದೇವರು) ನೇರವಾಗಿಯೇ ಬೀಫ್ ಲಡ್ಡು ವಿತರಿಸಿದ್ದಾರೆ” ಎಂದು ಬರೆದುಕೊಂಡು ಹಿಂದೂಗಳನ್ನು ಅಪಹಾಸ್ಯ ಮಾಡಿದ್ದ. ಆತನಿಗೆ ತಮಿಳುನಾಡಿನ ಸೇಲಂನಲ್ಲಿ ಸರಿಯಾದ ಉತ್ತರವನ್ನೇ ಕೊಡಲಾಗಿದೆ ಎಂದು ಬರೆದುಕೊಂಡಿದ್ದಾರೆ.

ಫ್ಯಾಕ್ಟ್‌ಚೆಕ್ : ಹಲವರು ಹಂಚಿಕೊಂಡಿರುವ ವಿಡಿಯೋದಲ್ಲಿ ನ್ಯೂಸ್‌ ಗ್ಲಿಟ್ಸ್‌ (NewsGlitz) ಸುದ್ದಿ ಸಂಸ್ಥೆಯ ಲೋಗೋ ಕಂಡು ಬಂದಿದ್ದರಿಂದ. ನ್ಯೂಸ್‌ ಗ್ಲಿಟ್ಸ್‌ನ ಯೂಟ್ಯೂಬ್‌ ಚಾನೆಲ್‌ನಲ್ಲಿ ನಾವು ವಿಡಿಯೋ ಹುಡುಕಿದ್ದೇವೆ. ಈ ವೇಳೆ ಆಗಸ್ಟ್ 28,2019ರಂದು ವೈರಲ್ ವಿಡಿಯೋ ಅಪ್ಲೋಡ್ ಆಗಿರುವುದು ಕಂಡು ಬಂದಿದೆ.

ವಿಡಿಯೋ ಕುರಿತು ಮಾಹಿತಿ ನೀಡಿರುವ ನ್ಯೂಸ್‌ ಗ್ಲಿಟ್ಸ್ ” ಸೇಲಂನ ಬಿಜೆಪಿ ಕಚೇರಿಯಲ್ಲಿ ಪಿಯೂಷ್ ಮಾನುಷ್ ಎಂಬಾತನಿಗೆ ಥಳಿಸಲಾಗಿದೆ. ಫೇಸ್‌ಬುಕ್‌ ಲೈವ್ ಮಾಡುತ್ತಾ ಉದ್ದೇಶಪೂರ್ವಕವಾಗಿ ಬಿಜೆಪಿ ಕಚೇರಿಗೆ ನುಗ್ಗಿದ ಆತ, ಅಲ್ಲಿ ಪ್ರಶ್ನೆಯೆತ್ತಲು ಪ್ರಾರಂಭಿಸಿದ್ದಾನೆ. ಈ ವೇಳೆ ಬಿಜೆಪಿ ಕಾರ್ಯಕರ್ತರು ಥಳಿಸಿದ್ದಾರೆ” ಎಂದು ವಿವರಿಸಿದೆ. ಈ ಮೂಲಕ ಯುವಕನಿಗೆ ಥಳಿಸಿರುವ ವಿಡಿಯೋ ತಿರುಪತಿ ಲಡ್ಡುಗೆ ಸಂಬಂಧಿಸಿದ್ದಲ್ಲ ಎಂದು ಸ್ಪಷ್ಟವಾಗಿದೆ.

ಇನ್ನು ತಿರುಪತಿ ಲಡ್ಡು ವಿವಾದಕ್ಕೆ ಸಂಬಂಧಿಸಿದಂತೆ ಪಿಯೂಷ್ ಮಾನುಷ್ ಅವರೇ ಎಕ್ಸ್‌ನಲ್ಲಿ ಪ್ರತಿಕ್ರಿಯೆ ನೀಡಿದ್ದು, “ದನದ ಮಾಂಸ ಅತ್ಯಂತ ಪ್ರಸಿದ್ಧ, ಶ್ರೀಮಂತ ಮತ್ತು ಅತ್ಯುನ್ನತ ಪೂಜ್ಯ ತಿರುಪತಿ ಬಾಲಾಜಿ ದೇವಸ್ಥಾನವನ್ನು ಪ್ರವೇಶಿಸಿದೆ. ಭಕ್ತರು, ಅರ್ಚಕರು ಮತ್ತು ಆಡಳಿತ ಮಂಡಳಿ ಎಲ್ಲವೂ ವಿಫಲವಾಗಿದೆ. ಯಾರೂ ಜವಾಬ್ದಾರಿ ತೆಗೆದುಕೊಂಡಿಲ್ಲ, ಕ್ಷಮೆಯನ್ನೂ ಕೇಳಿಲ್ಲ” ಎಂದು ಬರೆದುಕೊಂಡಿದ್ದರು.

ಒಟ್ಟಿನಲ್ಲಿ, ತಿರುಪತಿ ಲಡ್ಡು ವಿವಾದದ ನಂತರ ಹಿಂದೂಗಳ ಬಗ್ಗೆ ಅವಹೇಳನಾಕಾರಿ ಹೇಳಿಕೆ ನೀಡಿದಕ್ಕಾಗಿ ಸಾಮಾಜಿಕ ಕಾರ್ಯಕರ್ತ ಪಿಯೂಷ್ ಮಾನುಷ್ ಅವರನ್ನು ಗುಂಪೊಂದು ಹಲ್ಲೆ ಮಾಡಿದೆ ಎಂದು ತೋರಿಸಲು 2019ರ ವಿಡಿಯೋವನ್ನು ತಪ್ಪಾಗಿ ಹಂಚಿಕೊಳ್ಳಲಾಗುತ್ತಿದೆ.

ಇದನ್ನೂ ಓದಿ : ಫ್ಯಾಕ್ಟ್‌ಚೆಕ್ | ತಿರುಪತಿ ದೇವಸ್ಥಾನಕ್ಕೆ ತುಪ್ಪ ಪೂರೈಸಿದ್ದು ಪಾಕಿಸ್ತಾನಿ ಮುಸ್ಲಿಮರೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಾಂತಿಯುತ ಪ್ರತಿಭಟನೆಗಳನ್ನು ಮೋದಿ ಸರ್ಕಾರ ಹತ್ತಿಕ್ಕುತ್ತಿದೆ: ರಾಹುಲ್ ಗಾಂಧಿ

ದೆಹಲಿಯ ಜಂತರ್ ಮಂತರ್‌ನಲ್ಲಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಪರಿಸರ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ಅವರನ್ನು ಬಲವಂತವಾಗಿ ಆಸ್ಪತ್ರೆಗೆ ಸಾಗಿಸಿದ ಬಗ್ಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶನಿವಾರ ಮೌನ ಮುರಿದಿದ್ದಾರೆ. "ಶಾಂತಿಯುತ ಪ್ರತಿಭಟನೆಗಳನ್ನು...

ಸೋನಮ್ ವಾಂಗ್‌ಚುಕ್ ಬಲವಂತದ ಬಂಧನ; ಕಣ್ಣೀರಿಟ್ಟು ಉಪವಾಸ ಸತ್ಯಾಗ್ರಹ ಆರಂಭಿಸಿದ ಅಭಿಜೀತ್ ದಿಪ್ಕೆ

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ಉಪವಾಸ ಸತ್ಯಾಗ್ರಹ ಕೈಗೊಂಡಿರುವ ಸೋನಮ್ ವಾಂಗ್‌ಚುಕ್ ಅವರನ್ನು ದೆಹಲಿ ಪೊಲೀಸ್ ಸಿಬ್ಬಂದಿ ಬಲವಂತವಾಗಿ, ಬಲಪ್ರಯೋಗದ ಮೂಲಕ ಆಸ್ಪತ್ರೆಗೆ ಕರೆದೊಯ್ಯುವಾಗ ಜಂತರ್ ಮಂತರ್‌ನ ಪ್ರತಿಭಟನಾ ಸ್ಥಳದಲ್ಲಿ ಗದ್ದಲ ಉಂಟಾಯಿತು....

ಜಮ್ಮು-ಕಾಶ್ಮೀರ| ಭದ್ರತಾ ಸಿಬ್ಬಂದಿ ಗುಂಡಿಗೆ ವ್ಯಕ್ತಿ ಸಾವು; ಭುಗಿಲೆದ್ದ ಪ್ರತಿಭಟನೆ

ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯ ಭದೇರ್ವಾದ ಜೈ ಕಣಿವೆ ಪ್ರದೇಶದಲ್ಲಿ ಗುರುವಾರ ತಡರಾತ್ರಿ ನಡೆದ ಗುಂಡಿನ ದಾಳಿಯಲ್ಲಿ 30 ವರ್ಷದ ನಾಗರಿಕನೊಬ್ಬ ಸಾವನ್ನಪ್ಪಿ ಇಬ್ಬರು ಗಾಯಗೊಂಡಿದ್ದು ವ್ಯಾಪಕ ಪ್ರತಿಭಟನೆಗಳಿಗೆ ಕಾರಣವಾಗಿದೆ. ಮೃತರನ್ನು...

ಸಿಜೆಪಿ ಪ್ರತಿಭಟನೆ ಮೇಲೆ ಕೇಂದ್ರದ ಬಲಪ್ರಯೋಗ: ಸೋನಮ್ ವಾಂಗ್‌ಚುಕ್ ಅವರನ್ನು ಬಂಧಿಸಿ ಆಸ್ಪತ್ರೆಗೆ ಕರೆದೊಯ್ದ ಪೊಲೀಸರು

ದೆಹಲಿಯ ಜಂತರ್ ಮಂತರ್‌ನಲ್ಲಿ 21 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪರಿಸರ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ಅವರನ್ನು ಪ್ರತಿಭಟನಾ ಸ್ಥಳದಿಂದ ಪೊಲೀಸರು ಬಲವಂತವಾಗಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಶನಿವಾರ ಬೆಳಿಗ್ಗೆ ಪೊಲೀಸರು ಪ್ರತಿಭಟನಾ ಸ್ಥಳಕ್ಕೆ ಆಗಮಿಸಿ...

ಪ್ರಶ್ನೆಪತ್ರಿಕೆ ಸೋರಿಕೆಗೆ ಇಡೀ ವ್ಯವಸ್ಥೆಯನ್ನೇ ದೂಷಿಸಿದ ವಿಪಕ್ಷ ನಾಯಕ ರಾಹುಲ್ ಗಾಂಧಿ

ರಾಜಕೀಯ ಪಕ್ಷ ಅಥವಾ ಸಂಘಟನೆಯು ಯಾವುದೇ ಶಿಕ್ಷಣ ಸಂಸ್ಥೆಗಳ ಮೇಲೆ ಹಿಡಿತ ಸಾಧಿಸಬಾರದು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (ಜು.17) ರಂದು ಹೇಳಿದ್ದಾರೆ. ಪ್ರಶ್ನೆಪತ್ರಿಕೆ ಸೋರಿಕೆಯ ವಿಷಯದ ಬಗ್ಗೆ ರಾಜಕೀಯ ಒಮ್ಮತಕ್ಕೆ ಕರೆ...

ಧರ್ಮದ ಕಾರಣಕ್ಕೆ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಗೆ ಹಲವು ಬಾರಿ ಇರಿತ: ಅಮೆರಿಕದ ಮಾಲ್‌ನಲ್ಲಿ ಕೃತ್ಯ

ಅಮೆರಿಕದ ಉತಾಹ್‌ನಲ್ಲಿರುವ ಶಾಪಿಂಗ್ ಮಾಲ್‌ನಲ್ಲಿ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಯೊಬ್ಬನಿಗೆ ಹಲವು ಬಾರಿ ಇರಿತದ ಆರೋಪ ಹೊರಿಸಲಾಗಿದೆ. ಹೈದರಾಬಾದ್‌ ನಗರದ ಟೋಲಿಚೌಕಿಯ ನಿವಾಸಿ ಸೈಯದ್ ಸೊಹೈಲ್ ಉದ್ದೀನ್, ಉತಾಹ್‌ನ ಸಾಲ್ಟ್ ಲೇಕ್ ಕೌಂಟಿಯ...

47 ವರ್ಷಗಳ ನಂತರ ಸಾಮೂಹಿಕ ಅತ್ಯಾಚಾರ ಪ್ರಕರಣದ ಶಿಕ್ಷೆ ಎತ್ತಿಹಿಡಿದ ಅಲಹಾಬಾದ್ ಹೈಕೋರ್ಟ್

1979 ರಲ್ಲಿ ನಡೆದಿದ್ದ ಅಪ್ರಾಪ್ತೆ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ 71 ವರ್ಷದ ವ್ಯಕ್ತಿಯ ಶಿಕ್ಷೆಯನ್ನು ಅಲಹಾಬಾದ್ ಹೈಕೋರ್ಟ್ ಎತ್ತಿಹಿಡಿದಿದೆ. ಆದರೆ, ಕ್ರಿಮಿನಲ್ ಮೇಲ್ಮನವಿಯ 43 ವರ್ಷಗಳ ಸುದೀರ್ಘ ವಿಚಾರಣೆ ಮತ್ತು ಆತನ...

ಪಶ್ಚಿಮ ಬಂಗಾಳ: ಮುರ್ಷಿದಾಬಾದ್‌ನಲ್ಲಿ ಶಾಲಾ ವ್ಯಾನ್‌ಗೆ ರೈಲು ಡಿಕ್ಕಿ: ಇಬ್ಬರು ವಿದ್ಯಾರ್ಥಿಗಳು ಸೇರಿ 3 ಮಂದಿ ಸಾವು

ಮುರ್ಷಿದಾಬಾದ್: ದೇಶದಲ್ಲಿ ರೈಲ್ವೆ ಸುರಕ್ಷತೆಯ ಕುರಿತು ಸರ್ಕಾರಗಳು ದೊಡ್ಡ ದೊಡ್ಡ ಭರವಸೆ ಹಾಗೂ ಯೋಜನೆಗಳನ್ನು ಮಂಡಿಸುತ್ತಿದ್ದರೂ, ತಳಮಟ್ಟದ ವಾಸ್ತವ ಮಾತ್ರ ಇಂದಿಗೂ ಅತ್ಯಂತ ಭೀಕರವಾಗಿದೆ ಎಂಬುದಕ್ಕೆ ಪಶ್ಚಿಮ ಬಂಗಾಳದಲ್ಲಿ ನಡೆದ ಈ ಘೋರ...

ವಿಜಯ್ ನೇತೃತ್ವದ ಟಿವಿಕೆ ಸರ್ಕಾರವನ್ನು ಅಸ್ಥಿರಗೊಳಿಸಲು ‘ಪ್ರಾಜೆಕ್ಟ್ ಮೇಘಾಲಯ’ ಸಂಚು ಆರೋಪ : ಪತ್ರಕರ್ತನ ವಿಚಾರಣೆ

ತಮಿಳುನಾಡಿನ ಆಡಳಿತಾರೂಢ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಶಾಸಕ ಎನ್. ಇಲೈಯರಾಜ ಅವರಿಗೆ ಹಣದ ಆಮಿಷವೊಡ್ಡಲು ಯತ್ನಿಸಿದ ಆರೋಪ ಪ್ರಕರಣ ಸಂಬಂಧ ಚೆನ್ನೈ ಪೊಲೀಸರು 'ಪುದಿಯಾ ತಲೈಮುರೈ' ವಾಹಿನಿಯ ಪತ್ರಕರ್ತ ವಿಜಯನ್...

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...