Homeಫ್ಯಾಕ್ಟ್‌ಚೆಕ್FACT CHECK : ರಾಹುಲ್ ಗಾಂಧಿ 'ಹಿಂದೂ ವಿರೋಧಿ' ಹೇಳಿಕೆ ನೀಡಿದ್ದಾರೆ ಎಂಬುವುದು ಸುಳ್ಳು

FACT CHECK : ರಾಹುಲ್ ಗಾಂಧಿ ‘ಹಿಂದೂ ವಿರೋಧಿ’ ಹೇಳಿಕೆ ನೀಡಿದ್ದಾರೆ ಎಂಬುವುದು ಸುಳ್ಳು

- Advertisement -
- Advertisement -

ಜುಲೈ 1ರಂದು ಲೋಕಸಭೆಯಲ್ಲಿ ಮಾತನಾಡಿದ ವಿಪಕ್ಷ ನಾಯಕ ರಾಹುಲ್ ಗಾಂಧಿ ಹಿಂದೂಗಳನ್ನು ‘ಹಿಂಸಾತ್ಮಕ’ ಎಂದಿದ್ದಾರೆ ಎಂದು ಆರೋಪಿಸಲಾಗಿದೆ.

ರಾಹುಲ್ ಗಾಂಧಿಯ ಭಾಷಣದ ತುಣುಕೊಂದನ್ನು ಎಕ್ಸ್‌ನಲ್ಲಿ ಹಂಚಿಕೊಂಡಿರುವ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ” ತನ್ನನ್ನು ತಾನು ಹಿಂದೂ ಎಂದು ಕರೆದುಕೊಳ್ಳುವ ಪ್ರತಿಯೊಬ್ಬರನ್ನು ‘ಹಿಂಸಾತ್ಮಕ’ ಎಂದು ಕರೆಯುವ ಮೂಲಕ ರಾಹುಲ್ ಗಾಂಧಿ ಕಾಂಗ್ರೆಸ್‌ಗೆ ಹಿಂದೂಗಳ ಮೇಲಿರುವ ದ್ವೇಷ ಮತ್ತು ತಿರಸ್ಕಾರ ಭಾವನೆಯನ್ನು ತೋರಿಸಿದ್ದಾರೆ. ಇದು ಅವರ ಇಂಡಿಯಾ ಒಕ್ಕೂಟದ ಪಾಲುದಾರರ ಹಿಂದೂ ದ್ವೇಷವನ್ನೂ ತೋರಿಸಿದೆ. “ಮೊಹಬ್ಬತ್ ಕಿ ದುಕಾನ್” ಎಂದು ಹೇಳಿಕೊಳ್ಳುವವರ ಬೂಟಾಟಿಕೆ ಬಹಿರಂಗವಾಗಿದೆ” ಎಂದು ಬರೆದುಕೊಂಡಿದ್ದಾರೆ.

ಬಿಜೆಪಿಯ ಮಾಜಿ ರಾಷ್ಟ್ರೀಯ ಅಧ್ಯಕ್ಷ ಹಾಗೂ ಹಾಲಿ ಆರೋಗ್ಯ ಸಚಿವರ ಜೆಪಿ ನಡ್ಡಾ “ರಾಹುಲ್ ಗಾಂಧಿ ಅವರು ಹಿಂದೂಗಳನ್ನು ಹಿಂಸಾತ್ಮಕ ಎಂದಿದ್ದಕ್ಕಾಗಿ ತಕ್ಷಣವೇ ಎಲ್ಲಾ ಹಿಂದೂಗಳ ಕ್ಷಮೆಯಾಚಿಸಬೇಕು. ಹಿಂದೂಗಳು ಭಯೋತ್ಪಾದಕರು ಎಂದು ವಿದೇಶಿ ರಾಜತಾಂತ್ರಿಕರಿಗೆ ಹೇಳುತ್ತಿದ್ದವರು ಇವರೇ. ಹಿಂದೂಗಳ ಮೇಲಿನ ಈ ಆಂತರಿಕ ದ್ವೇಷ ನಿಲ್ಲಬೇಕು” ಎಂದು ಎಕ್ಸ್‌ನಲ್ಲಿ ಬರೆದುಕೊಂಡಿದ್ದಾರೆ.

ಬಿಜೆಪಿ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವೀಯ ಕೂಡ ರಾಹುಲ್ ಗಾಂಧಿ ಹೇಳಿಕೆಯ ಅರ್ಧ ವಿಡಿಯೋವನ್ನು ಹಂಚಿಕೊಂಡು ‘ರಾಹುಲ್ ಗಾಂಧಿ ಎಲ್ಲಾ ಹಿಂದೂಗಳನ್ನು ಹಿಂಸಾತ್ಮಕ ಎಂದಿದ್ದಾರೆ ಎಂಬಂತೆ’ ಬಿಂಬಿಸಿದ್ದಾರೆ.

ಫ್ಯಾಕ್ಟ್‌ಚೆಕ್ : ಸಚಿವರಾದ ನಿರ್ಮಲಾ ಸೀತಾರಾಮನ್, ಜೆ.ಪಿ ನಡ್ಡಾ ಮತ್ತು ಬಿಜೆಪಿ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವೀಯ ಮಾಡಿರುವ ಆರೋಪಗಳ ಕುರಿತು ನಾವು ಪರಿಶೀಲನೆ ನಡೆಸಿದ್ದೇವೆ. ಈ ವೇಳೆ ಮೂವರೂ ಕೂಡ ರಾಹುಲ್ ಗಾಂಧಿಯ ಭಾಷಣದ ಅಪೂರ್ಣ, ಎಡಿಟೆಡ್ ವಿಡಿಯೋಗಳನ್ನು ಹಂಚಿಕೊಂಡು ಸುಳ್ಳು ಆರೋಪ ಮಾಡಿರುವುದು ಗೊತ್ತಾಗಿದೆ.

ರಾಹುಲ್ ಗಾಂಧಿಯ ಭಾಷಣದ ಸಂಪೂರ್ಣ ವಿಡಿಯೋ ಗಮನಿಸಿದರೆ ಅದರಲ್ಲಿ ಅವರು “ಈ ದೇಶ ಅಹಿಂಸೆಯ ದೇಶ, ಈ ದೇಶ ಹೆದರಿಸುವ ದೇಶ ಅಲ್ಲ. ನಮ್ಮ ಎಲ್ಲಾ ಮಹಾಪುರುಷರು ಅಹಿಂಸೆಯ ಕುರಿತು ಮಾತನಾಡಿದ್ದಾರೆ. ಭಯ ದೂರವಾಗಿಸುವ ಬಗ್ಗೆ ಮಾತನಾಡಿದ್ದಾರೆ. ಹೆದರಬೇಡಿ, ಹೆದರಿಸಬೇಡಿ, ಭಗವಾನ್ ಶಿವ ಹೇಳುವುದೇನೆಂದರೆ ಹೆದರಬೇಡಿ, ಹೆದರಿಸಬೇಡಿ. ಅದಕ್ಕಾಗಿಯೇ ನಾವು ಅಭಯ ಮುದ್ರೆಯನ್ನು ತೋರಿಸುತ್ತೇವೆ. ಅಹಿಂಸೆಯ ಮಾತನಾಡುತ್ತಾರೆ, ತ್ರಿಶೂಲವನ್ನು ಭೂಮಿಯಲ್ಲಿ ಚುಚ್ಚಿ ಹೇಳುತ್ತಾರೆ. ಆದರೆ ಯಾವ ಜನರು ತಮ್ಮನ್ನು ತಾವು ಹಿಂದುಗಳು ಎಂದು ಕರೆದುಕೊಳ್ಳುತ್ತಿದ್ದಾರೆ ಅವರು 24 ಗಂಟೆ ಹಿಂಸೆ, ಹಿಂಸೆ, ಹಿಂಸೆ.. ದ್ವೇಷ, ದ್ವೇಷ, ದ್ವೇಷ, ಸುಳ್ಳು, ಸುಳ್ಳು.. ಸುಳ್ಳು . ಅಸಲಿಗೆ ನೀವು ಹಿಂದುಗಳೇ ಅಲ್ಲ” ಎಂದು ಹೇಳಿರುವುದು ಇದೆ.

ಮುಂದುವರೆದು “ಹಿಂದು ಧರ್ಮದಲ್ಲಿ ಸರಳವಾಗಿ ಬರೆದಿದ್ದಾರೆ. ಸತ್ಯದ ಪರವಾಗಿ ನಿಲ್ಲಬೇಕು, ಸತ್ಯಕ್ಕೆ ವಿಮುಖವಾಗಿರಬಾರದು, ಸತ್ಯಕ್ಕೆ ಹೆದರಿಕೊಳ್ಳಬಾರದು. ಅಹಿಂಸೆ ನಮ್ಮ ಪ್ರತೀಕವಾಗಿದೆ” ಎಂದು ಅಭಯ ಮುದ್ರೆಯನ್ನು ಬಿಜೆಪಿ ನಾಯಕರಿಗೆ ತೋರಿಸಿದ್ದಾರೆ.

ವಿಡಿಯೋ ಲಿಂಕ್ ಇಲ್ಲಿದೆ

ಈ ವೇಳೆ ಎದ್ದು ನಿಂತ ಪ್ರಧಾನಿ ನರೇಂದ್ರ ಮೋದಿಯವರು “ಇಡೀ ಹಿಂದೂ ಸಮಾಜವನ್ನು ಹಿಂಸಾತ್ಮಕ ಎಂದು ಕರೆಯುವುದು ಗಂಭೀರ ವಿಚಾರವಾಗಿದೆ” ಎಂದು ರಾಹುಲ್ ಗಾಂಧಿಯವರ ಮಾತುಗಳಿಗೆ ಆಕ್ಷೇಪ ವ್ಯಕ್ತಪಡಿಸಿದರು.

ವಿಡಿಯೋ ಲಿಂಕ್ ಇಲ್ಲಿದೆ

ಅದಕ್ಕೆ ಪ್ರತಿಕ್ರಿಯಿಸಿದ ರಾಹುಲ್ ಗಾಂಧಿಯವರು “ಇಲ್ಲ, ಇಲ್ಲ..ನಾವು ಬಿಜೆಪಿ, ಆರ್‌ಆರ್‌ಎಸ್‌ ಬಗ್ಗೆ ಹೇಳಿದ್ದು. ನರೇಂದ್ರ ಮೋದಿ ಅಂದ್ರೆ ಇಡೀ ಹಿಂದೂ ಸಮುದಾಯವಲ್ಲ, ಕೇವಲ ಬಿಜೆಪಿ ಅಂದ್ರೆ ಇಡೀ ಹಿಂದೂ ಸಮುದಾಯವಲ್ಲ ಮತ್ತು ಆರ್‌ಎಸ್‌ಎಸ್‌ ಅಂದ್ರೆ ಇಡೀ ಹಿಂದೂ ಸಮುದಾಯವಲ್ಲ” ಎಂದಿದ್ದಾರೆ.

ನಾವು ನಡೆಸಿದ ಸತ್ಯಾಸತ್ಯತೆ ಪರಿಶೀಲನೆಯಲ್ಲಿ ರಾಹುಲ್ ಗಾಂಧಿ ಬಿಜೆಪಿ, ಆರ್‌ಎಸ್‌ಎಸ್‌ ಅನ್ನು ಗುರಿಯಾಗಿಸಿ ಮಾತನಾಡಿದ್ದಾರೆಯೇ ಹೊರತು, ಹಿಂದೂ ಸಮಾಜವನ್ನಲ್ಲ ಎಂದು ಗೊತ್ತಾಗಿದೆ.

ಇದನ್ನೂ ಓದಿ : FACT CHECK : ಹಿಂದೂ ಮಹಿಳೆಯೊಬ್ಬರು ತನ್ನ ಮಗನನ್ನೇ ಮದುವೆಯಾಗಿದ್ದಾರೆ ಎಂಬುವುದು ಸುಳ್ಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಿಬಿಎಸ್‌ಇ ಹಿಂದಿ ಹೇರಿಕೆಯು ತ್ರಿಭಾಷಾ ಸೂತ್ರ ಜಾರಿಯ ‘ರಹಸ್ಯ ಕಾರ್ಯವಿಧಾನ’: ಸ್ಟಾಲಿನ್ ಆರೋಪ

ಸಿಬಿಎಸ್‌ಇ ಇತ್ತೀಚೆಗೆ ಅನಾವರಣಗೊಳಿಸಿದ ಪಠ್ಯಕ್ರಮ ಚೌಕಟ್ಟಿನ ಕುರಿತು ಮಾತನಾಡಿದ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್, "ಮೂರು ಭಾಷಾ ಸೂತ್ರ ಎಂದು ಕರೆಯಲ್ಪಡುವುದು ವಾಸ್ತವದಲ್ಲಿ ಹಿಂದಿ ಮಾತನಾಡದ ಪ್ರದೇಶಗಳಿಗೆ ಹಿಂದಿ ವಿಸ್ತರಿಸುವ ರಹಸ್ಯ ಕಾರ್ಯವಿಧಾನವಾಗಿದೆ"...

‘ತಿಂದ ಮನೆಗೆ ಕನ್ನ ಹಾಕುವುದು ತರವಲ್ಲ, ನಿಮ್ಮ ಅಧಿಕ ಪ್ರಸಂಗ ಕರ್ನಾಟಕದ ಜನತೆ ಒಪ್ಪುವುದಿಲ್ಲ’ : ರಾಜ್ಯಪಾಲರ ವಿರುದ್ಧ ಕರವೇ ಕಿಡಿ

ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ತೃತೀಯ ಭಾಷೆಗೆ ಗ್ರೇಡಿಂಗ್ ನೀಡುವ ಸರ್ಕಾರದ ನಿರ್ಧಾರವನ್ನು ಮರುಪರಿಶೀಲಿಸುವಂತೆ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ರಾಜ್ಯಾಧ್ಯಕ್ಷ...

‘ತಪ್ಪಾಗಿದೆ’ : ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್‌ ವಿಧೇಯಕದ ಕುರಿತ ಟೀಕೆಗಳನ್ನು ಕೈಬಿಟ್ಟ ರಾಜಸ್ಥಾನ ಹೈಕೋರ್ಟ್

ಟ್ರಾನ್ಸ್‌ಜೆಂಡರ್ ಕಾಯ್ದೆ, 2019ರಲ್ಲಿ ಬದಲಾವಣೆಗಳನ್ನು ತರಲಿರುವ ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ವಿಧೇಯ, 2026ರ ಕುರಿತು ಈ ಹಿಂದೆ ಮಾಡಿದ್ದ ವಿಮರ್ಶಾತ್ಮಕ ಟಿಪ್ಪಣಿಗಳನ್ನು ರಾಜಸ್ಥಾನ ಹೈಕೋರ್ಟ್ ತೆಗೆದುಹಾಕಿದೆ ಎಂದು...

ಯುಸಿಸಿ ಜಾರಿ ನಂತರ ‘ಜನಸಂಖ್ಯಾ ನಿಯಂತ್ರಣ’ ಕಾನೂನಿಗೆ ಮುಂದಾದ ಉತ್ತರಾಖಂಡ ಬಿಜೆಪಿ ಸರ್ಕಾರ

ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತಂದ ನಂತರ, ಉತ್ತರಾಖಂಡ ಸರ್ಕಾರ ಈಗ ಜನಸಂಖ್ಯಾ ನಿಯಂತ್ರಣ ಕಾನೂನನ್ನು ತರುವ ಬಗ್ಗೆ ಯೋಚಿಸುತ್ತಿದೆ ಎಂದು ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಶುಕ್ರವಾರ ಸೂಚಿಸಿದ್ದಾರೆ. ಪ್ರಸ್ತಾವಿತ ಕ್ರಮದ...

ಪಶ್ಚಿಮ ಬಂಗಾಳ| ಟಿಎಂಸಿ ನಾಯಕರ ಭದ್ರತೆಗೆ ಭಾರೀ ಪೊಲೀಸ್ ನಿಯೋಜನೆ; ಇಸಿಐ ಆಕ್ಷೇಪ

ರಾಜ್ಯದ ವಿವಿಧ ಹಂತಗಳಲ್ಲಿ ತೃಣಮೂಲ ಕಾಂಗ್ರೆಸ್ ನಾಯಕರಿಗೆ ವೈಯಕ್ತಿಕ ಭದ್ರತೆ ಒದಗಿಸಲು ಪಶ್ಚಿಮ ಬಂಗಾಳ ಪೊಲೀಸರು ಮತ್ತು ಕೋಲ್ಕತ್ತಾ ಪೊಲೀಸರು ನಿಯೋಜಿಸಿರುವ ಹೆಚ್ಚಿನ ಸಂಖ್ಯೆಯ ಸಿಬ್ಬಂದಿಯನ್ನು ಭಾರತೀಯ ಚುನಾವಣಾ ಆಯೋಗ (ಇಸಿಐ) ಗಂಭೀರವಾಗಿ...

ಅಮೆರಿಕದ ಕದನ ವಿರಾಮ ಪ್ರಸ್ತಾವನೆ ತಿರಸ್ಕರಿಸಿದ ಇರಾನ್ : ಪಶ್ಚಿಮ ಏಷ್ಯಾ ಸಂಘರ್ಷ ಉಲ್ಬಣ

ಅಲ್ಪಾವಧಿಯ ಕದನ ವಿರಾಮಕ್ಕಾಗಿ ಅಮೆರಿಕ ಮುಂದಿಟ್ಟಿದ್ದ ಪ್ರಸ್ತಾವನೆಯನ್ನು ಇರಾನ್ ತಿರಸ್ಕರಿಸಿದೆ ಎಂದು ವರದಿಯಾಗಿದೆ. ಏಪ್ರಿಲ್ 1, 2026ರ ಬುಧವಾರದಂದು ಅಮೆರಿಕವು ಅನಾಮಧೇಯ ಮಧ್ಯಸ್ಥಿಕೆ ರಾಷ್ಟ್ರದ ಮೂಲಕ ಇರಾನ್‌ಗೆ 48 ಗಂಟೆಗಳ ತಾತ್ಕಾಲಿಕ ಕದನ ವಿರಾಮದ ಆಫರ್...

ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನರಿಗೆ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿ

ಹಿರಿಯ ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನ ಹಿರಿಯ ಸಾಧಕರು 2026ನೇ ಸಾಲಿನ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿಗೆ ಭಾಜನರಾಗಿದ್ದಾರೆ. ರಾಯಚೂರು ಜಿಲ್ಲೆಯ ಹಿರಿಯ ದಲಿತ ಹೋರಾಟಗಾರ...

ಗಾಜಾ; ಗೊಂಬೆಯೊಂದಿಗೆ ‘ಅಂತ್ಯಕ್ರಿಯೆ’ ಆಟ ಆಡುವ ಎಳೆಯ ಮಕ್ಕಳ ವಿಡಿಯೋ ವೈರಲ್; ಸುತ್ತಲಿನ ಘಟನೆಯನ್ನು ಪುನರಾವರ್ತಿಸುವ ಮಕ್ಕಳು

ಅಕ್ಟೋಬರ್ 2023 ರಲ್ಲಿ ಇಸ್ರೇಲಿ ಮಿಲಿಟರಿ ದಾಳಿಯನ್ನು ಪ್ರಾರಂಭಿಸಿದ ನಂತರ ಗಾಜಾದಿಂದ ದುಃಖಕರ ದೃಶ್ಯಗಳು ಹೊರಹೊಮ್ಮುತ್ತಿವೆ. ಇತ್ತೀಚಿನ ಒಂದು ಘಟನೆಯಲ್ಲಿ, ಚಿಕ್ಕ ಮಕ್ಕಳು ಅಂತ್ಯಕ್ರಿಯೆಗಾಗಿ ಗೊಂಬೆಯನ್ನು ಹೊತ್ತುಕೊಂಡು ಹೋಗುವುದನ್ನು ಕಾಣಬಹುದು - ಇದು ಅವರು...

ದೆಹಲಿ| ಆಳವಾದ ಚರಂಡಿಗೆ ಬಿದ್ದು ನೈರ್ಮಲ್ಯ ಕಾರ್ಮಿಕ ಸಾವು; ನ್ಯಾಯಕ್ಕೆ ಆಗ್ರಹಿಸಿದ ಮೃತನ ಕುಟುಂಬ

ಮಾರ್ಚ್ 30 ರಂದು ಪೂರ್ವ ದೆಹಲಿಯ ದಿಲ್ಶಾದ್ ಗಾರ್ಡನ್ ಪ್ರದೇಶದಲ್ಲಿ ಸುರಕ್ಷತಾ ಸಾಧನಗಳಿಲ್ಲದೆ ಆಳವಾದ ಚರಂಡಿ ಸ್ವಚ್ಛಗೊಳಿಸುವ ಸಮಯದಲ್ಲಿ ಯುವ ನೈರ್ಮಲ್ಯ ಕಾರ್ಮಿಕ ರಾಹುಲ್ ಎಂಬುವವರು ಸಾವನ್ನಪ್ಪಿದ್ದಾರೆ. ಮಧ್ಯಾಹ್ನ 2:00 ರ ಸುಮಾರಿಗೆ...

ನಿವೃತ್ತ ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ ಆಸ್ಪತ್ರೆಗೆ ದಾಖಲು; ಕಾರ್ಯಕ್ರಮದಲ್ಲಿ ಏಕಾಏಕಿ ಕುಸಿದು ಬಿದ್ದು ಅಸ್ವಸ್ಥ

ಬೆಂಗಳೂರು: ಕರ್ನಾಟಕದ ನಿವೃತ್ತ ಲೋಕಾಯುಕ್ತ ಎನ್‌.ಸಂತೋಷ್‌ ಹೆಗ್ಡೆ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಭಾಷಣದ ವೇಳೆ ಕುಸಿದು ಬಿದ್ದು ಅಸ್ವಸ್ಥರಾಗಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಏಪ್ರಿಲ್ 4ರ, ಶುಕ್ರವಾರ ಬೆಂಗಳೂರಿನ ಕೊಂಡಜಿ ಬಸಪ್ಪ ಸಭಾಂಗಣದಲ್ಲಿ...