HomeದಿಟನಾಗರFact Check: ಪ್ರಧಾನಿಯಾಗಿದ್ದ ಮನಮೋಹನ್ ಸಿಂಗ್‌ರನ್ನು ಸೋನಿಯಾ ಗಾಂಧಿ ಅವಮಾನಿಸಿದ್ದರು ಎಂಬುವುದು ಸುಳ್ಳು

Fact Check: ಪ್ರಧಾನಿಯಾಗಿದ್ದ ಮನಮೋಹನ್ ಸಿಂಗ್‌ರನ್ನು ಸೋನಿಯಾ ಗಾಂಧಿ ಅವಮಾನಿಸಿದ್ದರು ಎಂಬುವುದು ಸುಳ್ಳು

- Advertisement -
- Advertisement -

ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಮತ್ತು ಕಾಂಗ್ರೆಸ್ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ ಅವರನ್ನು ಭೇಟಿಯಾದ ಹಳೆಯ ಫೋಟೋವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದ್ದು, “ಮನಮೋಹನ್ ಸಿಂಗ್ ಅವರು ಭಾರತದ ಪ್ರಧಾನಿಯಾಗಿದ್ದರೂ ಕೂಡ, ಅವರಿಗೆ ಗೌರವ ಕೊಡದೆ ಸೋನಿಯಾ ಗಾಂಧಿಯವರು ಹಸೀನಾ ಜೊತೆ ಮಾತುಕತೆ ನಡೆಸಿದ್ದಾರೆ” ಎಂದು ಹೇಳಲಾಗಿದೆ.

ಜಿತೇಂದ್ರ ಪ್ರತಾಪ್ ಸಿಂಗ್‘ ಎಂಬ ಎಕ್ಸ್ ಬಳಕೆದಾರ ವೈರಲ್ ಪೋಟೋ ಹಂಚಿಕೊಂಡಿದ್ದು, “ಒಮ್ಮೆ ನಮ್ಮ ದೇಶದ ಕಾಂಗ್ರೆಸ್ ಪ್ರಧಾನಿ ಬಾಂಗ್ಲಾದೇಶಕ್ಕೆ ಭೇಟಿ ನೀಡಿದ್ದರು. ಈ ವೇಳೆ ಒಬ್ಬ ಮಾಮೂಲಿ ಮಂತ್ರಿಯಂತೆ ಪಕ್ಕದಲ್ಲಿ ಕೂತಿರುವ ರೀತಿ ನೋಡಿ” ಎಂದು ಬರೆದುಕೊಂಡಿದ್ದಾರೆ.

‘ಲಲಿತ್ ಕಿಶೋರ್ ಭಾರದ್ವಾಜ್’ ಫೇಸ್‌ಬುಕ್ ಬಳಕೆದಾರ ವೈರಲ್ ಫೋಟೋವನ್ನು ಹಂಚಿಕೊಂಡಿದ್ದು, ಇದೇ ರೀತಿಯ ಪ್ರತಿಪಾದನೆ ಮಾಡಿದ್ದಾರೆ.

ಫ್ಯಾಕ್ಟ್‌ಚೆಕ್: ವೈರಲ್ ಫೋಟೋದ ಸತ್ಯಾಸತ್ಯತೆ ತಿಳಿಯಲು ನಾವು ಅದನ್ನು ಗೂಗಲ್ ರಿವರ್ಸ್ ಇಮೇಜ್‌ನಲ್ಲಿ ಹುಡುಕಾಡಿದ್ದೇವೆ. ಈ ವೇಳೆ ಅಕ್ಟೋಬರ್ 6, 2019ರಂದು ಟೈಮ್ಸ್ ಆಫ್‌ ಇಂಡಿಯಾದಲ್ಲಿ ಪ್ರಕಟಗೊಂಡ ಸುದ್ದಿಯೊಂದು ಲಭ್ಯವಾಗಿದೆ. ಆ ಸುದ್ದಿಯಲ್ಲಿ “ಬಾಂಗ್ಲಾದೇಶದ ಸ್ವಾತಂತ್ರ್ಯತೋತ್ಸವದ 50ನೇ ವರ್ಷಾಚರಣೆಗೆ ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ ನೀಡಿರುವ ಆಹ್ವಾನವನ್ನು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಸ್ವೀಕರಿಸಿದ್ದಾರೆ. ಶೇಖ್ ಹಸೀನಾ ಅವರು ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ವಾದ್ರಾ ಅವರಿಗೂ ಆಹ್ವಾನ ನೀಡಿದ್ದಾರೆ” ಎಂದು ಹೇಳಲಾಗಿದೆ.

ಅಕ್ಟೋಬರ್ 6, 2019ರಂದು ಕಾಂಗ್ರೆಸ್‌ ತನ್ನ ಅಧಿಕೃತ ಎಕ್ಸ್ ಖಾತೆಯಲ್ಲೂ ವೈರಲ್ ಫೋಟೋ ಪೋಸ್ಟ್ ಮಾಡಿತ್ತು. ಅದರಲ್ಲಿ, “ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ, ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಮತ್ತು ಕಾಂಗ್ರೆಸ್ ರಾಜ್ಯಸಭಾ ಸಂಸದ ಆನಂದ್ ಶರ್ಮಾ ಸೇರಿದಂತೆ ಕಾಂಗ್ರೆಸ್ ನಿಯೋಗ ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ ಅವರನ್ನು ಭೇಟಿ ಮಾಡಿತು” ಎಂದು ತಿಳಿಸಿಲಾಗಿದೆ.

ಮಾರ್ಚ್ 2023ರಲ್ಲಿ ಇದೇ ಫೋಟೋ ವೈರಲ್ ಆಗಿತ್ತು. ಆ ಸಂದರ್ಭದಲ್ಲಿ ಬೂಮ್ ಹಿಂದಿ ವೆಬ್‌ಸೈಟ್‌ ಈ ಕುರಿತು ಫ್ಯಾಕ್ಟ್‌ಚೆಕ್ ಮಾಡಿತ್ತು. ಅದರಲ್ಲಿ” ಭಾರತಕ್ಕೆ ಆಗಮಿಸಿದ್ದ ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ ಅವರನ್ನು ಕಾಂಗ್ರೆಸ್ ನಿಯೋಗ ಭೇಟಿ ಮಾಡಿರುವ ಫೋಟೋ ವೈರಲ್ ಆಗಿದೆ. ಅದು 2019ರ ಫೋಟೋ. ಫೋಟೋದಲ್ಲಿರುವಂತೆ ಶೇಖ್ ಹಸೀನಾ ಬಳಿ ಪ್ರಧಾನಿ ಮನಮೋಹನ್ ಸಿಂಗ್ ಬದಲು ಸೋನಿಯಾ ಗಾಂಧಿ ಕುಳಿತಿದ್ದಾರೆ. ಈ ಮೂಲಕ ಪ್ರಧಾನಿಗೆ ಅವಮಾನ ಮಾಡಿದ್ದಾರೆ ಎನ್ನಲಾಗಿದೆ. ಆದರೆ, 2019ರಲ್ಲಿ ಮನಮೋಹನ್ ಸಿಂಗ್ ಪ್ರಧಾನಿ ಹುದ್ದೆಯಲ್ಲಿ ಇರಲಿಲ್ಲ” ಎಂದು ಹೇಳಿತ್ತು.

ನಾವು ನಡೆಸಿದ ಪರಿಶೀಲನೆಯಲ್ಲಿ , ವೈರಲ್ ಫೋಟೋ 2019ರದ್ದು. ಭಾರತಕ್ಕೆ ಆಗಮಿಸಿದ್ದ ಶೇಖ್ ಹಸೀನಾ ಅವರನ್ನು ಕಾಂಗ್ರೆಸ್‌ ನಿಯೋಗ ಭೇಟಿ ಮಾಡಿತ್ತು. ಆ ಸಂದರ್ಭದಲ್ಲಿ ಮನಮೋಹನ್ ಸಿಂಗ್ ಅವರು ಪ್ರಧಾನಿ ಹುದ್ದೆಯಲ್ಲಿ ಇರಲಿಲ್ಲ. ಹಾಗಾಗಿ, ಸೋನಿಯಾ ಗಾಂಧಿ ಪ್ರಧಾನಿಯನ್ನು ಮೂಲೆಗುಂಪು ಮಾಡಿ ಮುಂಬದಿ ಕುರ್ಚಿಯಲ್ಲಿ ಕುಳಿತಿದ್ದರು ಎನ್ನುವ ವಾದ ಸುಳ್ಳು ಎಂದು ತಿಳಿದು ಬಂದಿದೆ.

ಇದನ್ನೂ ಓದಿ : Fact Check: 2014ರ ಬಳಿಕ ಯಾವುದೇ ರಾಜ್ಯದಲ್ಲೂ ರಾಷ್ಟ್ರಪತಿ ಆಳ್ವಿಕೆ ಹೇರಿಲ್ಲ ಎಂಬುವುದು ಸುಳ್ಳು

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

FACT CHECK: ಜಾತಿ ಗಣತಿ ಕುರಿತ ರಾಹುಲ್ ಗಾಂಧಿಯ ವೈರಲ್ ಕ್ಲಿಪ್ ಎಡಿಟೆಡ್

0
ಸಾಮಾಜಿಕ-ಆರ್ಥಿಕ ಮತ್ತು ಜಾತಿ ಗಣತಿಗೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮಾಡಿರುವ ಭಾಷಣದ ಕ್ಲಿಪ್‌ ಒಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಅನೇಕ ಬಾರಿ ಸುಳ್ಳು ಸುದ್ದಿಗಳನ್ನು ಹಂಚಿಕೊಂಡಿರುವ ಬಲ ಪಂಥೀಯ ಎಕ್ಸ್...