HomeದಿಟನಾಗರFact Check : 'ಮಹಿಳಾ ಮೀಸಲಾತಿ ಮಸೂದೆ'ಯಿಂದ ಟಿಕೆಟ್ ಸಿಕ್ಕಿದೆ ಎಂಬ ಕಂಗನಾ ರಣಾವತ್ ಹೇಳಿಕೆ...

Fact Check : ‘ಮಹಿಳಾ ಮೀಸಲಾತಿ ಮಸೂದೆ’ಯಿಂದ ಟಿಕೆಟ್ ಸಿಕ್ಕಿದೆ ಎಂಬ ಕಂಗನಾ ರಣಾವತ್ ಹೇಳಿಕೆ ಸುಳ್ಳು

- Advertisement -
- Advertisement -

ಲೋಕಸಭೆ ಚುನಾವಣೆಗೆ ಹಿಮಾಚಲ ಪ್ರದೇಶದ ಮಂಡಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಬಾಲಿವುಡ್ ನಟಿ ಕಂಗನಾ ರಣಾವತ್ ಕಣಕ್ಕಿಳಿದಿದ್ದಾರೆ. ಈ ಹಿನ್ನೆಲೆ ಬಿರುಸಿನ ಪ್ರಚಾರದಲ್ಲಿ ತೊಡಗಿದ್ದಾರೆ. ಏಪ್ರಿಲ್ 2ರಂದು ಮಂಡಿಯ ಬಾಲ್ಹ್ ಕಣಿವೆಯಲ್ಲಿ ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಿದ್ದ ಕಂಗನಾ, “ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಶೇಕಡಾ 30ರಷ್ಟು ಮೀಸಲಾತಿ ನೀಡುವ ‘ಮಹಿಳಾ ಮೀಸಲಾತಿ ಮಸೂದೆ’ಯಿಂದಾಗಿ ನನಗೆ ಬಿಜೆಪಿ ಟಿಕೆಟ್ ದೊರೆತಿದೆ” ಎಂದಿದ್ದರು.

 

View this post on Instagram

 

A post shared by Kangana Ranaut (@kanganaranaut)

ಫ್ಯಾಕ್ಟ್‌ಚೆಕ್ : ನಾನುಗೌರಿ.ಕಾಂ ಕಂಗನಾ ರಣಾವತ್ ಅವರ ಈ ಹೇಳಿಕೆಯ ಸತ್ಯಾಸತ್ಯತೆಯನ್ನು ಪರಿಶಿಲನೆ ನಡೆಸಿದಾಗ, ಕಂಗನಾ ಹೇಳಿರುವುದು ಒಂದು ಹಸಿ ಸುಳ್ಳು ಎಂಬುವುದು ಗೊತ್ತಾಗಿದೆ.

ಬಿಜೆಪಿ ಸರ್ಕಾರ ಕಳೆದ ವರ್ಷ ಸಂಸತ್‌ನಲ್ಲಿ ಅನುಮೋದನೆ ಪಡೆದುಕೊಂಡಿರುವ ಮಹಿಳಾ ಮೀಸಲಾತಿ ಮಸೂದೆಯ ಕುರಿತು ಸಂಬಂಧಿತ ಕೀ ವರ್ಡ್ ಬಳಸಿ ನಾವು ಗೂಗಲ್ ಸರ್ಚ್‌ ಮಾಡಿದ್ದೇವೆ. ಈ ವೇಳೆ ಸೆಪ್ಟೆಂಬರ್ 22, 2023ರಂದು ‘ದಿ ಹಿಂದೂ’ ಪತ್ರಿಕೆಯ ವೆಬ್‌ಸೈಟ್‌ನಲ್ಲಿ ಪ್ರಕಟಗೊಂಡ ಸುದ್ದಿಯೊಂದು ನಮಗೆ ದೊರೆತಿದೆ.

‘Rajya Sabha clears women’s reservation bill unanimously’ ಎಂಬ ಶೀರ್ಷಿಕೆಯ ಈ ವರದಿಯಲ್ಲಿ “ಸೆಪ್ಟೆಂಬರ್ 20 ರಂದು ಲೋಕಸಭೆಯು ಅಂಗೀಕರಿಸಿದ ನಂತರ ಮಹಿಳಾ ಮೀಸಲಾತಿ ಮಸೂದೆ ಅಥವಾ ನಾರಿ ಶಕ್ತಿ ವಂದನ್ ಅಧಿನಿಯಮ್ ಅನ್ನು ರಾಜ್ಯಸಭೆಯಲ್ಲಿ ಸರ್ವಾನುಮತದಿಂದ ಅಂಗೀಕರಿಸಲಾಗಿದೆ ಎಂದು ಹೇಳಲಾಗಿದೆ. ಅಲ್ಲದೆ, ಜನಗಣತಿ ಮತ್ತು ಕ್ಷೇತ್ರ ಪುನರ್ವಿಂಗಡನೆ ಪ್ರಕ್ರಿಯೆಯ ನಂತರ, 2029 ರ ವೇಳೆಗೆ ಮಸೂದೆಯನ್ನು ಜಾರಿಯಾಗುವ ಸಾಧ್ಯತೆ ಇದೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.

ಸುದ್ದಿ ಲಿಂಕ್ ಇಲ್ಲಿದೆ 

ಸಂಸತ್‌ನಲ್ಲಿ ಅಂಗೀಕಾರಗೊಂಡ ಮಹಿಳಾ ಮೀಸಲಾತಿ ಮಸೂದೆಯ ಪ್ರತಿಯನ್ನು ಫ್ಯಾಕ್ಟ್‌ ಚೆಕ್ಕಿಂಗ್ ವೆಬ್‌ಸೈಟ್‌ ಆಲ್ಟ್‌ ನ್ಯೂಸ್‌ ಪ್ರಕಟಿಸಿದೆ. ಮಸೂದೆಯಲ್ಲೂ ಜನಗಣತಿ ನಡೆದು, ಕ್ಷೇತ್ರ ಪುನರ್ಗವಿಂಗಡೆ ಪ್ರಕ್ರಿಯೆ ಮುಗಿದ ಬಳಿಕ ಮಹಿಳಾ ಮೀಸಲಾತಿ ಮಸೂದೆ-2023 ಜಾರಿಯಾಗಲಿದೆ ಎಂದು ಸ್ಪಷ್ಟವಾಗಿ ಹೇಳಲಾಗಿದೆ.

ಸೆಪ್ಟೆಂಬರ್ 20, 2023ರಂದು ಡೆಕ್ಕನ್ ಹೆರಾಲ್ಡ್ ವೆಬ್‌ಸೈಟ್‌ನಲ್ಲಿ ಪ್ರಕಟಿಸಿದ ಸುದ್ದಿಯಲ್ಲಿ 2024ರ ಲೋಕಸಭೆ ಚುನಾವಣೆ ಬಳಿಕ, ಅತಿ ಶೀಘ್ರದಲ್ಲಿ ಜನಗಣತಿ ಮತ್ತು ಕ್ಷೇತ್ರ ಪುನರ್ವಿಂಗಡನೆ ಮಾಡುವುದಾಗಿ ಅಮಿತ್ ಶಾ ಹೇಳಿದ್ದಾರೆ ಎಂದು ತಿಳಿಸಲಾಗಿದೆ.

ಸುದ್ದಿ ಲಿಂಕ್ ಇಲ್ಲಿದೆ 

ಕ್ಷೇತ್ರ ಪುನರ್ವಿಂಗಡನೆ ದೇಶದ ಜನ ಸಂಖ್ಯೆಯನ್ನು ಆಧರಿಸಿದೆ. ಹಾಗಾಗಿ, ಮೊದಲು ಜನಗಣತಿ ನಡೆಸಿ ಬಳಿಕ ಕ್ಷೇತ್ರ ಪುನರ್ವಿಂಗಡನೆ ಮಾಡಲಾಗುತ್ತದೆ. 2002ರಲ್ಲಿ ಕೊನೆಯ ಬಾರಿಗೆ ದೇಶದಲ್ಲಿ ಕ್ಷೇತ್ರ ಪುನರ್ವಿಂಗಡೆ ನಡೆದಿತ್ತು. ಭಾರತದಲ್ಲಿ 10 ವರ್ಷಗಳಿಗೊಮ್ಮೆ ಜನಗಣತಿ ನಡೆಯುತ್ತದೆ. 2011ರಲ್ಲಿ ಜನಗಣತಿ ನಡೆದ ಬಳಿಕ 2021ರಲ್ಲಿ ನಡೆಬೇಕಿತ್ತು. ಆದರೆ, ಕೋವಿಡ್ ಕಾರಣದಿಂದ 2024 ಆದರೂ, ಜನಗಣತಿ ನಡೆದಿಲ್ಲ. ಹಾಗಾಗಿ, ಈ ಬಾರಿ ಚುನಾವಣೆ ಮುಗಿದ ಬಳಿಕ ಜನಗಣತಿ ನಡೆಯುವ ಸಾಧ್ಯತೆ ಇದೆ.

ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಕಲ್ಪಿಸುವ ಮಹಿಳಾ ಮೀಸಲಾತಿ ಮಸೂದೆ ಇನ್ನೂ ಜಾರಿಯಾಗಿಲ್ಲ, ಹಾಗಾಗಿ, ಈ ಮಸೂದೆಯಿಂದಾಗಿ ತನಗೆ ಬಿಜೆಪಿ ಟಿಕೆಟ್ ಸಿಕ್ಕಿತು ಎಂಬ ಕಂಗನಾ ರಣಾವತ್ ಹೇಳಿಕೆ ಸುಳ್ಳು.

ಇದನ್ನೂ ಓದಿ : Fact Check: 11 ತಿಂಗಳಲ್ಲಿ ಸಿದ್ದರಾಮಯ್ಯ ಸರ್ಕಾರ 1,91,000 ಕೋಟಿ ರೂ. ಸಾಲ ಮಾಡಿರುವುದು ನಿಜವೇ?

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಲೈಂಗಿಕ ದೌರ್ಜನ್ಯ ಪ್ರಕರಣ : ರೇವಣ್ಣ, ಪ್ರಜ್ವಲ್‌ಗೆ ಎಸ್‌ಐಟಿ ನೋಟಿಸ್

0
ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಪಟ್ಟಂತೆ ತನಿಖೆಗೆ ಹಾಜರಾಗಲು ಆರೋಪಿಗಳಾದ ಹೆಚ್‌.ಡಿ ರೇವಣ್ಣ ಹಾಗೂ ಪ್ರಜ್ವಲ್ ರೇವಣ್ಣಗೆ ಎಸ್ಐಟಿ ಅಧಿಕಾರಿಗಳು ಇಂದು (ಏ.30) ನೋಟಿಸ್ ಜಾರಿ ಮಾಡಿದ್ದಾರೆ ಎಂದು ತಿಳಿದು ಬಂದಿದೆ. ಹಾಸನದ ಹೊಳೆನರಸೀಪುರ ನಗರ...