Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್: ಜಿಡಿಪಿ ಪಾತಾಳದಲ್ಲಿದ್ದರೂ ಸುಳ್ಳು ಹೇಳುತ್ತಿರುವ ಕರ್ನಾಟಕ ಬಿಜೆಪಿ..

ಫ್ಯಾಕ್ಟ್‌ಚೆಕ್: ಜಿಡಿಪಿ ಪಾತಾಳದಲ್ಲಿದ್ದರೂ ಸುಳ್ಳು ಹೇಳುತ್ತಿರುವ ಕರ್ನಾಟಕ ಬಿಜೆಪಿ..

ಭಾರತದ ಸಂಖ್ಯಾಶಾಸ್ತ್ರೀಯ ಕಚೇರಿ ಬಿಡುಗಡೆ ಮಾಡಿದ ಅಂಕಿ ಅಂಶದ ಪ್ರಕಾರ 2021ರ ಮೊದಲ ತ್ರೈಮಾಸಿಕ ಏಪ್ರಿಲ್-ಜೂನ್ ಅವಧಿಯಲ್ಲಿ 23.9ರ ಋಣಾತ್ಮಕ ಕುಸಿತ ಕಾಣುವ ಮೂಲಕ ಮಹಾ ಆರ್ಥಿಕ ಕುಸಿತಕ್ಕೆ ಸಾಕ್ಷಿಯಾಗಿದೆ.

- Advertisement -
- Advertisement -

ಕೋವಿಡ್ ಸಾಂಕ್ರಾಮಿಕದ ಹಿನ್ನೆಲೆಯಲ್ಲಿ ಋಣಾತ್ಮಕ ಬೆಳವಣಿಗೆಯನ್ನು ದಾಖಲಿಸುವುದರೊಂದಿಗೆ ವಿಶ್ವದ ಪ್ರಮುಖ ಆರ್ಥಿಕತೆಗಳು ದೊಡ್ಡಮಟ್ಟದ ಹೊಡೆತವನ್ನು ಅನುಭವಿಸುತ್ತಿದ್ದರೆ, ಭಾರತವು 2020 ರಲ್ಲಿ ಸಕಾರಾತ್ಮಕ ಬೆಳವಣಿಗೆಯನ್ನು ಕಾಣುತ್ತಿದೆ ಮತ್ತು ವೇಗವಾಗಿ ಬೆಳೆಯುತ್ತಿರುವ ಆರ್ಥಿಕತೆಯ ಸ್ಥಾನಮಾನವನ್ನು ಉಳಿಸಿಕೊಂಡಿದೆ ಎಂದು ಕರ್ನಾಟಕ ಬಿಜೆಪಿ ಪಕ್ಷದ ಫೇಸ್‌ಬುಕ್‌ನಲ್ಲಿ ಆಗಸ್ಟ್ 23 ರಂದು ಪೋಸ್ಟ್ ಮಾಡಿದೆ. ಅದು ನಿಜವೇ?

ಕೋವಿಡ್ ಸಾಂಕ್ರಾಮಿಕದ ಹಿನ್ನೆಲೆಯಲ್ಲಿ ಋಣಾತ್ಮಕ ಬೆಳವಣಿಗೆಯನ್ನು ದಾಖಲಿಸುವುದರೊಂದಿಗೆ ವಿಶ್ವದ ಪ್ರಮುಖ ಆರ್ಥಿಕತೆಗಳು ದೊಡ್ಡಮಟ್ಟದ ಹೊಡೆತವನ್ನು…

Posted by BJP Karnataka on Sunday, August 23, 2020

ಪೋಸ್ಟ್‌ನ ಆರ್ಕೈವ್ ಮಾಡಲಾದ ಆವೃತ್ತಿ ಇಲ್ಲಿದೆ.

ಪೋಸ್ಟ್‌ನಲ್ಲಿನ ಚಿತ್ರದಲ್ಲಿ ಮಾಹಿತಿ ಮೂಲ ಐಎಂಎಫ್ ಎಂದು ನಮೂದಿಸಿದೆ. ಅದರ ಆಧಾರದಲ್ಲಿ ಐಎಂಎಫ್‌ ಈ ಕುರಿತು ಹುಡುಕಿದಾಗ 2020ರ ಏಪ್ರಿಲ್‌ನಲ್ಲಿ ಬಿಡುಗಡೆಯಾಗಿರುವ ವರ್ಲ್ಡ್ ಎಕಾನಾಮಿಕ್ ಔಟ್‌ಲುಕ್ ವರದಿ ಕಾಣುತ್ತದೆ. ಅದರಲ್ಲಿ ಕೋವಿಡ್-19 ಸಾಂಕ್ರಾಮಿಕದ ಸಮಯದಲ್ಲಿ ವಿಶ್ವದ ಹಲವು ಆರ್ಥಿಕತೆಗಳ ಬೆಳವಣಿಗೆ ದರವನ್ನು ಅಂದಾಜಿಸಲಾಗಿದೆ.

ಆದರೆ 2020ರ ಜೂನ್ ತಿಂಗಳಿನಲ್ಲಿ ಐಎಂಎಫ್ ಮತ್ತೊಂದು ವರದಿಯನ್ನು ಬಿಡುಗಡೆಗೊಳಿಸಿದೆ. ಆ ವರದಿಯಲ್ಲಿ 2020ರ ಭಾರತದ ಜಿಡಿಪಿ ಬೆಳವಣಿಗೆಯು -4.5 ಕ್ಕೆ ಕುಸಿದಿದ್ದು, ಚೀನಾ ಮಾತ್ರವೇ ಸಕರಾತ್ಮಕ (1.0) ಬೆಳವಣಿಗೆ ಹೊಂದಿದೆ ದೇಶವಾಗಿದೆ. ಹಾಗಾಗಿ ಪೋಸ್ಟ್‌ನಲ್ಲಿನ ಪ್ರತಿಪಾದನೆ ಹಿಂದಿನದೇ ಹೊರತು ಇತ್ತೀಚಿನದಲ್ಲ ಎಂದು ಹೇಳಬಹುದಾಗಿದೆ.

ಇನ್ನು ಬಿಜೆಪಿಯು ಆಗಸ್ಟ್ 23 ರಂದು ಈ ರೀತಿ ಭಾರತದ ಜಿಡಿಪಿ ಮಾತ್ರ ಸಕರಾತ್ಮಕವಾಗಿದೆ ಎಂದು ಪೋಸ್ಟ್ ಮಾಡಿದೆ. ಆದರೆ ಅದೇ ಆಗಸ್ಟ್ 31 ರಂದು ಅಂದರೆ ಒಂದು ವಾರದ ನಂತರ ಭಾರತದ ಸಂಖ್ಯಾಶಾಸ್ತ್ರೀಯ ಕಚೇರಿ ಬಿಡುಗಡೆ ಮಾಡಿದ ಅಂಕಿ ಅಂಶದ ಪ್ರಕಾರ 2021ರ ಮೊದಲ ತ್ರೈಮಾಸಿಕ ಏಪ್ರಿಲ್-ಜೂನ್ ಅವಧಿಯಲ್ಲಿ 23.9ರ ಋಣಾತ್ಮಕ ಕುಸಿತ ಕಾಣುವ ಮೂಲಕ ಮಹಾ ಆರ್ಥಿಕ ಕುಸಿತಕ್ಕೆ ಸಾಕ್ಷಿಯಾಗಿದೆ.

1996 ರಿಂದಲೂ ತ್ರೈಮಾಸಿಕ ಜಿಡಿಪಿ ಅಂಕಿಅಂಶ ಬಿಡುಗಡೆ ಮಾಡುತ್ತಿದ್ದರೂ ಇದೇ ಮೊದಲ ಬಾರಿಗೆ ದಾಖಲೆ ಮಟ್ಟದಲ್ಲಿ ಜಿಡಿಪಿ ಕುಸಿತ ಕಂಡಿದೆ. ಈ ರೀತಿಯ ಕುಸಿತಕ್ಕೆ ಕೊರೊನಾ ಲಾಕ್‌ಡೌನ್‌ ಕಾರಣ ಎಂದು ಹಲವರು ಹೇಳುತ್ತಿದ್ದಾರೆ. ಆದರೆ ಕಳೆದ ಕೆಲವು ವರ್ಷಗಳಲ್ಲಿ ಮೋದಿಯವರು ಕೈಗೊಂಡ ನೋಟು ಅಮಾನ್ಯೀಕರಣ, ಜಿಎಸ್‌ಟಿ ಸೇರಿದಂತೆ ಮುಂದಾಲೋಚನೆಯಿಲ್ಲದ ಕ್ರಮಗಳು ಹಾಗೂ ಆರ್ಥಿಕತೆಯನ್ನು ನಿಭಾಯಿಸುವಲ್ಲಿ ಸರ್ಕಾರ ಎಡವಿರುವುದು ಇಂದಿನ ಮಹಾಕುಸಿತಕ್ಕೆ ಕಾರಣ ಎಂದು ದೂರಿದ್ದಾರೆ.

ಸಿಕ್ಕಿದ್ದೇಚಾನ್ಸ್ ಅಂತ ಎಲ್ಲವನ್ನೂ ಸೇರಿಸಿ ದೂಡಿದ್ದು!- – – – – – – – – – ಈವತ್ತು ಪತ್ರಿಕೆಗಳಲ್ಲಿ GDP ಕುಸಿತದ ವರದಿಯ “ಸ್ಪಿನ್”…

Posted by Rajaram Tallur on Monday, August 31, 2020

ಹಾಗಾಗಿ ಜಿಡಿಪಿ ಪಾತಾಳ ಸೇರುತ್ತಿದ್ದರೂ ಬಿಜೆಪಿ ಮಾತ್ರ ಸಾಮಾಜಿಕ ಜಾಲತಾಣದಲ್ಲಿ ನಾವೇ ವಿಶ್ವಗುರು ಎಂದು ಹೇಳಿಕೊಳ್ಳುತ್ತಿರುವುದು ಸಂಪೂರ್ಣ ಸುಳ್ಳಾಗಿದೆ.


ಇದನ್ನೂ ಓದಿ: ಐತಿಹಾಸಿಕ ಕುಸಿತಕ್ಕೆ ಸಾಕ್ಷಿಯಾದ ಭಾರತದ ಆರ್ಥಿಕತೆ; ವರ್ಷದ ಮೊದಲ ತ್ರೈಮಾಸಿಕದಲ್ಲೇ ಶೇ.-23.9 ರಷ್ಟು ಕುಸಿತ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....

‘ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆ..’; ಕೇಂದ್ರದ ಯುಜಿಸಿ ನಿಯಮಗಳನ್ನು ಪ್ರಶಂಸಿದ ಸಿಎಂ ಸ್ಟಾಲಿನ್

ಯುಜಿಸಿ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಈಕ್ವಿಟಿ ಪ್ರಚಾರ) ನಿಯಮಗಳು, 2026 "ಆಳವಾಗಿ ಬೇರೂರಿರುವ ತಾರತಮ್ಯ ಮತ್ತು ಸಾಂಸ್ಥಿಕ ನಿರಾಸಕ್ತಿಯಿಂದ ಬಳಲುತ್ತಿರುವ ಉನ್ನತ ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸುವಲ್ಲಿ ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆಯಾಗಿದೆ" ಎಂದು ತಮಿಳುನಾಡು...

ಹಿರಿಯ ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್ ನಿಧನ

ಕಳೆದ ನಾಲ್ಕು ದಶಕಗಳಿಂದ ಸಾರಿಗೆ ಕ್ಷೇತ್ರದ ಕಾರ್ಮಿಕರ ಪರವಾಗಿ ಧ್ವನಿ ಎತ್ತುತ್ತಿದ್ದ, ಕಾರ್ಮಿಕರ ಹಿತರಕ್ಷಣೆಗಾಗಿ ನಿರಂತರ ಹೋರಾಟ ನಡೆಸುತ್ತಿದ್ದ ಹಿರಿಯ ಕಾರ್ಮಿಕ ಮುಖಂಡ ಎಚ್‌.ವಿ ಅನಂತ ಸುಬ್ಬರಾವ್ ಅವರು ಜನವರಿ 28ರಂದು, ನಿಧನರಾಗಿದ್ದಾರೆ....

ಮುಡಾ ಪ್ರಕರಣ: ಸಿದ್ದರಾಮಯ್ಯಗೆ ಬಿಗ್ ರಿಲೀಫ್, ಲೋಕಾಯುಕ್ತ ಬಿ ರಿಪೋರ್ಟ್ ಪುರಸ್ಕರಿಸಿದ ಕೋರ್ಟ್

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಕುಟುಂಬದ ವಿರುದ್ಧ ಪುರಾವೆಗಳಿಲ್ಲ ಎಂದು ಹೇಳಿ ‘ಕ್ಲೀನ್ ಚೀಟ್’ ನೀಡಿ ‘ಬಿ’ ರಿಪೋರ್ಟ್ ಅನ್ನು ಸಲ್ಲಿಸಿತ್ತು....