Homeಫ್ಯಾಕ್ಟ್‌ಚೆಕ್FACT CHECK : ಕರ್ನಾಟಕದಲ್ಲಿ ಮೋದಿ ಪ್ರತಿಕೃತಿ ದಹಿಸಲು ಹೋದ ಕಾಂಗ್ರೆಸ್ಸಿಗರ ಪಂಚೆಗೆ ಬೆಂಕಿ ತಗುಲಿದೆ...

FACT CHECK : ಕರ್ನಾಟಕದಲ್ಲಿ ಮೋದಿ ಪ್ರತಿಕೃತಿ ದಹಿಸಲು ಹೋದ ಕಾಂಗ್ರೆಸ್ಸಿಗರ ಪಂಚೆಗೆ ಬೆಂಕಿ ತಗುಲಿದೆ ಎಂಬುವುದು ಸುಳ್ಳು

- Advertisement -
- Advertisement -

ಕರ್ನಾಟಕದಲ್ಲಿ ಪ್ರತಿಭಟನೆ ವೇಳೆ ಪ್ರಧಾನಿ ನರೇಂದ್ರ ಮೋದಿಯವರ ಪ್ರತಿಕೃತಿ ದಹಿಸಲು ಹೋದ ಕಾಂಗ್ರೆಸ್ಸಿಗರ ಪಂಚೆಗೆ ಬೆಂಕಿ ತಗುಲಿದೆ ಎಂದು ವಿಡಿಯೋವೊಂದನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳಲಾಗಿದೆ.

“ಕರ್ನಾಟಕದಲ್ಲಿ ನಡೆಯುತ್ತಿದ್ದ ಪ್ರತಿಭಟನೆಯೊಂದರಲ್ಲಿ ಕಾಂಗ್ರೆಸ್‌ ಕಾರ್ಯಕರ್ತರು ಪ್ರಧಾನಿ ಮೋದಿ ಪ್ರತಿಕೃತಿಗೆ ಬೆಂಕಿ ಹಚ್ಚಲು ಹೋದಾಗ, ಐದು ಜನ ಕಾಂಗ್ರೆಸ್‌ ಕಾರ್ಯಕರ್ತರ (ಲುಂಗಿ) ಪಂಚೆಗೆ ಬೆಂಕಿ ತಗುಲಿ ಎಲ್ಲರೂ ಓಡಿ ಹೋದ ಘಟನೆ ನಡೆದಿದೆ. ಈಗ ಮೋದಿ ಪ್ರತಿಕೃತಿ ಕೂಡ ವಿರೋಧಿಗಳಿಗೆ ಪಾಠ ಕಲಿಸಲು ಪಾರಂಭಿಸಿದೆ. ಇದೇ ಮೋದಿ ಹೆಸರಿಗಿರುವ ಶಕ್ತಿ” ಎಂದು ಪ್ರತಿಪಾದಿಸಿ ಎಂದು ಬರೆದುಕೊಂಡು ಅನೇಕರು ವಿಡಿಯೋ ಹಂಚಿಕೊಂಡಿದ್ದಾರೆ.

29 ಸೆಕೆಂಡ್‌ಗಳ ಅವಧಿಯ ಈ ವಿಡಿಯೋದಲ್ಲಿ ಪ್ರತಿಭಟನಾಕಾರರ ಗುಂಪೊಂದು ನೀಲಿ ಬಣ್ಣದ ಧ್ವಜಗಳನ್ನು ಹಿಡಿದು, ಘೋಷಣೆ ಕೂಗುತ್ತಾ ಬಂದು ವೃತ್ತವೊಂದರ ಬಳಿ ಪ್ರತಿಕೃತಿಯನ್ನು ದಹಿಸಲು ಪೆಟ್ರೋಲ್‌ ಸುರಿದು ಬೆಂಕಿ ಹಚ್ಚಲು ಮುಂದಾದಾಗ, ಪಂಚೆ ಮತ್ತು ಬಟ್ಟೆಗೆ ಬೆಂಕಿ ತಗುಲಿ ಎಲ್ಲರೂ ದಿಕ್ಕಾಪಾಲಾಗಿ ಓಡಿ ಹೋಗುವುದನ್ನು ನೋಡಬಹುದು.

ಪೋಸ್ಟ್ ಲಿಂಕ್ ಇಲ್ಲಿದೆ 

ಫ್ಯಾಕ್ಟ್‌ಚೆಕ್ : ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳಲಾದ ವಿಡಿಯೋದ ಸತ್ಯಾಸತ್ಯತೆಯನ್ನು ನಾನುಗೌರಿ.ಕಾಂ ಪರಿಶೀಲನೆ ನಡೆಸಿದೆ. ವಿಡಿಯೋ ಸ್ಕ್ರೀನ್ ಶಾಟ್ ಬಳಸಿ ಗೂಗಲ್ ರಿವರ್ಸ್ ಇಮೇಜ್‌ನಲ್ಲಿ ನಾವು ಹುಡುಕಾಡಿದಾಗ ವೆಬ್‌ಸೈಟ್‌ ಒಂದರಲ್ಲಿ “KSU march at pathanamthitta, fire accident” ಎಂಬ ಶೀರ್ಷಿಕೆಯಲ್ಲಿ ವಿಡಿಯೋ ಕಾಣಿಸಿಕೊಂಡಿದೆ.

“KSU march at pathanamthitta, fire accident” ಎಂಬುವುದನ್ನು ನಾವು ಗೂಗಲ್‌ನಲ್ಲಿ ಸರ್ಚ್ ಮಾಡಿದಾಗ ಮಲಯಾಳಂನ ಏಷ್ಯಾನೆಟ್ ನ್ಯೂಸ್ (Asianetnews)5 ಜುಲೈ 2012ರಂದು ‘Lucky Fire Escape for KSU workers in Pathanamthitta’ ಎಂಬ ಹೆಸರಿನಲ್ಲಿ ವಿಡಿಯೋ ಅಪ್ಲೋಡ್ ಮಾಡಿರುವುದು ಕಂಡು ಬಂದಿದೆ.

ವಿಡಿಯೋದಲ್ಲಿ ಹೇಳುವಂತೆ ಕೇರಳದ ಕೊಟ್ಟಾಯಂನ ಮಹಾತ್ಮ ಗಾಂಧಿ (ಎಂಜಿ) ವಿಶ್ವ ವಿದ್ಯಾನಿಲಯದ ಉಪ ಕುಲಪತಿ ವಿರುದ್ದ ಭಷ್ಟಾಚಾರದ ಆರೋಪ ಕೇಳಿ ಬಂದ ಹಿನ್ನೆಲೆ ಪತ್ತನಂತಿಟ್ಟ ಜಿಲ್ಲಾ ಕೇರಳ ಸ್ಟೂಡೆಂಟ್ ಯೂನಿಯನ್ (ಕೆಎಸ್‌ಯು) ಪ್ರತಿಭಟನೆ ಹಮ್ಮಿಕೊಂಡಿತ್ತು. ಪ್ರತಿಭಟನೆಯ ಕೊನೆಯಲ್ಲಿ ಪತ್ತನಂತಿಟ್ಟದ ಸೆಂಟ್ರಲ್‌ ಜಂಕ್ಷನ್‌ನಲ್ಲಿ ಎಂ.ಜಿ ವಿವಿ ಉಪಕುಲಪತಿಯ ಪ್ರತಿಕೃತಿ ದಹಿಸಲು ಪ್ರತಿಭಟನಾನಿರತರು ಮುಂದಾಗಿದ್ದರು. ಈ ವೇಳೆ ಅವರ ಪಂಚೆಗೆ ಬೆಂಕಿ ತಗುಲಿದೆ. ಆಗ ಅಪಾಯದಿಂದ ತಪ್ಪಿಸಿಕೊಳ್ಳಲು ಅವರು ದಿಕ್ಕಾಪಾಲಾಗಿ ಓಡಿದ್ಧಾರೆ. ಕೆಲವರು ಪ್ರಾಣ ರಕ್ಷಣೆಗಾಗಿ ಬೆಂಕಿ ತಗುಲಿದ್ದ ತಮ್ಮ ಪಂಚೆ ಬಿಟ್ಟು ಓಡಿದ್ದಾರೆ.

ಇದೇ ಘಟನೆಗೆ ಸಂಬಂಧಿಸಿದಂತೆ ಜುಲೈ 24, 2012ರಂದು ಟೈಮ್ಸ್ ಆಫ್ ಇಂಡಿಯಾ “Petion Seeks statewide ban on effigy burning” ಎಂಬ ಶೀರ್ಷಿಕೆಯಲ್ಲಿ ಸುದ್ದಿಯೊಂದನ್ನು ಪ್ರಕಟಿಸಿತ್ತು. ಈ ಸುದ್ದಿಯಲ್ಲಿ ಪ್ರತಿಭಟನೆಗಳ ವೇಳೆ ಪ್ರತಿಕೃತಿ ದಹಿಸುವುದಕ್ಕೆ ನಿಷೇಧ ಹೇರುವಂತೆ ಕೋರಿ ವ್ಯಕ್ತಿಯೊಬ್ಬರು ಕೇರಳ ಹೈಕೋರ್ಟ್ ಅರ್ಜಿ ಸಲ್ಲಿಸಿದ್ದರ ಬಗ್ಗೆ ತಿಳಿಸಲಾಗಿತ್ತು. ಸುದ್ದಿಯಲ್ಲಿ ನಾವು ಮೇಲೆ ಉಲ್ಲೇಖಿಸಿದ ಪತ್ತನಂತಿಟ್ಟದ ಲುಂಗಿಗೆ ಬೆಂಕಿ ತಗುಲಿದೆ ಘಟನೆಯನ್ನು ಉಲ್ಲೇಖಿಸಲಾಗಿತ್ತು.

ವರದಿ ಲಿಂಕ್ ಇಲ್ಲಿದೆ 

ಹಾಗಾಗಿ, ಕರ್ನಾಟಕದಲ್ಲಿ ಪ್ರಧಾನಿ ಮೋದಿಯವರ ಪ್ರತಿಕೃತಿ ದಹಿಸುವಾಗ ಕಾಂಗ್ರೆಸ್ಸಿಗರ ಪಂಚೆಗೆ ಬೆಂಕಿ ತಗುಲಿದೆ ಎಂಬ ಸಾಮಾಜಿಕ ಜಾಲತಾಣದ ಪೋಸ್ಟ್ ಸುಳ್ಳು. ಕರ್ನಾಟಕದಲ್ಲಿ ಆ ರೀತಿಯ ಘಟನೆ ನಡೆದ ಬಗ್ಗೆ ಎಲ್ಲೂ ವರದಿಯಾಗಿಲ್ಲ.

ಇದನ್ನೂ ಓದಿ : FACT CHECK : ಹಿಂದೂಗಳ ಸಂಪತ್ತನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತೇವೆ ಎಂದು ಮಲ್ಲಿಕಾರ್ಜುನ ಖರ್ಗೆ ಹೇಳಿಲ್ಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐದು ರಾಜ್ಯಗಳ ವಿಧಾನಸಭೆ ಚುನಾವಣೆ ದಿನಾಂಕ ಪ್ರಕಟ; ಬಂಗಾಳದಲ್ಲಿ ಮಾತ್ರ ಎರಡು ಹಂತದ ಮತದಾನ

ಅಸ್ಸಾಂ, ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ ಮತ್ತು ಪುದುಚೇರಿ ವಿಧಾನಸಭಾ ಚುನಾವಣೆಗಳ ವೇಳಾಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗದ (ಇಸಿಐ) ಮುಖ್ಯಸ್ಥರಾದ ಜ್ಞಾನೇಶ್ ಕುಮಾರ್ ಪ್ರಕಟಿಸಿದರು. ದೆಹಲಿಯಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯ...

ಫ್ಲಿಪ್‌ಕಾರ್ಟ್‌ನಿಂದ 1 ರೂ.ಗೆ ಹಾಲು ಮಾರಾಟ; ಪ್ರಧಾನಿ ಮೋದಿ ಮಧ್ಯಸ್ಥಿಕೆಗೆ ಬಮುಲ್‌ ಆಗ್ರಹ

ಫ್ಲಿಪ್‌ಕಾರ್ಟ್‌ ಸಂಸ್ಥೆಯು ಆನ್‌ಲೈನ್‌ ಮೂಲಕ 1 ರೂ.ಗೆ ಲೀಟರ್‌ ಹಾಲನ್ನು ಮಾರಾಟ ಮಾಡಿರುವುದು ಭಾರಿ ಜನಾಕ್ರೋಶಕ್ಕೆ ಕಾರಣವಾಗಿದೆ. ಈ ಬಗ್ಗೆ, ಬೆಂಗಳೂರು ನಗರ, ಗ್ರಾಮೀಣ ಮತ್ತು ರಾಮನಗರ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ...

“ಮಕ್ಕಳ ಹಂತಕನನ್ನು ಹುಡುಕಿ ಹತ್ಯೆ ಮಾಡುತ್ತೇವೆ” : ನೆತನ್ಯಾಹು ಸುರಕ್ಷಿತವಾಗಿದ್ದಾರೆ ಎಂಬ ಇಸ್ರೇಲ್ ಸ್ಪಷ್ಟನೆ ಬೆನ್ನಲ್ಲೆ ಐಆರ್‌ಜಿಸಿ ಹೇಳಿಕೆ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರನ್ನು ಹುಡುಕಿ ಹತ್ಯೆ ಮಾಡುತ್ತೇವೆ ಎಂದು ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ಹೇಳಿರುವುದಾಗಿ ವರದಿಯಾಗಿದೆ. ನೆತನ್ಯಾಹು ಅವರ ಹತ್ಯೆಯ ವದಂತಿಗಳನ್ನು ಇಸ್ರೇಲ್ ನಿರಾಕರಿಸಿದ ಬೆನ್ನಲ್ಲೇ, ಐಆರ್‌ಜಿಸಿ ಈ...

ಮಹಾರಾಷ್ಟ್ರ| ಇಫ್ತಾರ್ ಕೂಟಕ್ಕೆ ಸೇರಿದ್ದ ಮುಸ್ಲಿಮರ ಮೇಲೆ ಹಿಂದುತ್ವವಾದಿ ಗುಂಪಿನಿಂದ ದಾಳಿ

ರಂಜಾನ್‌ ಮಾಸದ ಉಪವಾಸ ಮುರಿಯಲು ನೆರೆದಿದ್ದ ಜನರ ಮೇಲೆ ಅಪರಿಚಿತ ವ್ಯಕ್ತಿಗಳ ಗುಂಪೊಂದು ದಾಳಿ ನಡೆಸಿರುವ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ. ಇಫ್ತಾರ್ ಕೂಟಕ್ಕೆ ಸಿದ್ಧತೆ ನಡೆಸುತ್ತಿದ್ದಾಗ, ಸುಮಾರು 100 ಕ್ಕೂ ಹೆಚ್ಚು...

ಆಸ್ಕರ್‌ ಅಂತಿಮ ಪಟ್ಟಿಗೆ ಆಯ್ಕೆಯಾದ ‘ದಿ ವಾಯ್ಸ್ ಆಫ್ ಹಿಂದ್ ರಜಬ್’

ಗಾಝಾದ ಆರು ವರ್ಷದ ಬಾಲಕಿ ಹಿಂದ್ ರಜಬ್‌ ಮತ್ತು ಆಕೆಯ ಸಂಬಂಧಿಕರನ್ನು ಇಸ್ರೇಲಿ ಸೈನಿಕರು ಭೀಕರವಾಗಿ ಹತ್ಯೆ ಮಾಡಿದ ಕಥೆಯನ್ನು ಹೇಳುವ 'ದಿ ವಾಯ್ಸ್ ಆಫ್ ಹಿಂದ್ ರಜಬ್' ಚಲನಚಿತ್ರವು 2026ರ ಆಸ್ಕರ್...

ಉತ್ತರ ಪ್ರದೇಶ| ದಲಿತ ಕುಟುಂಬದ ಮದುವೆ ಮನೆಯಲ್ಲಿ ಸವರ್ಣಿಯರಿಂದ ಹಲ್ಲೆ; ಬಂದೂಕಿನಿಂದ ಬೆದರಿಕೆ

ಮಾರ್ಚ್ 10 ರಂದು ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಟಿಕುನಿಯಾ ಪೊಲೀಸ್ ಠಾಣೆ ಪ್ರದೇಶದಲ್ಲಿ ಜಾತಿ ಆಧಾರಿತ ಹಿಂಸಾಚಾರದ ತೀವ್ರ ಆತಂಕಕಾರಿ ಘಟನೆ ಬೆಳಕಿಗೆ ಬಂದಿದೆ. 24 ಗಂಟೆಗಳ ಒಳಗೆ ಎಫ್‌ಐಆರ್...

’70 ಲಕ್ಷ ಬಂಗಾಳಿ ಮುಸ್ಲಿಮರನ್ನು ಹೊರದಬ್ಬಲು ಸಾಧ್ಯವಿಲ್ಲ..ಅವರೇ ದೇಶ ಬಿಡುವಂತಹ ಪರಿಸ್ಥಿತಿ ಸೃಷ್ಟಿಸುತ್ತೇವೆ’: ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ

ಸುಮಾರು 70 ಲಕ್ಷ 'ಬಂಗಾಳಿ ಮುಸ್ಲಿಮರ'ನ್ನು ಭಾರತದಿಂದ ಹೊರಹಾಕುವುದು 'ಮಾನವೀಯವಾಗಿ ಸಾಧ್ಯವಿಲ್ಲ'. ಹಾಗಾಗಿ, ಅವರಾಗಿಯೇ ದೇಶ ತೊರೆಯುವಂತಹ ಪರಿಸ್ಥಿತಿಯನ್ನು ನಾವು ಸೃಷ್ಟಿಸುತ್ತೇವೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ. ಈ...

ಮೋದಿಯವರ ವಿದೇಶಾಂಗ ನೀತಿ ಸಂಪೂರ್ಣವಾಗಿ ದಿಕ್ಕು ತಪ್ಪಿದೆ, ನಗೆಪಾಟಲಿಗೆ ಈಡಾಗಿದೆ, ಅನೈತಿಕತೆಯಿಂದ ಕೂಡಿದೆ. ಇದು ಜಗಜ್ಜಾಹೀರಾಗಿದೆ – ಶ್ರೀಪಾದ್‌ ಭಟ್

ತಮ್ಮ ಸ್ಥಳೀಯ ಮತಬ್ಯಾಂಕ್ ರಾಜಕಾರಣದ ಜೊತೆಗೆ ವಿದೇಶಿ ನೀತಿಯನ್ನು ತಳುಕು ಹಾಕುವುದು. ಉದಾಹರಣೆಗೆ ಅಮೆರಿಕ-ಇಸ್ರೇಲ್ ಜಂಟಿಯಾಗಿ ನಡೆಸುತ್ತಿರುವ ಇರಾನ್ ಮೇಲಿನ ಯುದ್ಧದ ಸಮಯದಲ್ಲಿ ಮೋದಿ ನೇತೃತ್ವದ ಸರ್ಕಾರವು ತಾನು ಇರಾನ್ ಪರ ನಿಲುವು ತಾಳಿದರೆ...

ದೆಹಲಿ ಪೊಲೀಸರಿಂದ 10 ಮಂದಿ ಹೋರಾಟಗಾರರ ಅಪಹರಣ ಆರೋಪ : ಹೈಕೋರ್ಟ್‌ಗೆ ಹೇಬಿಯಸ್ ಕಾರ್ಪಸ್ ಅರ್ಜಿ

ಸಿವಿಲ್ ಸೊಸೈಟಿಯ ಹತ್ತು ಮಂದಿ ಹೋರಾಟಗಾರರನ್ನು ದೆಹಲಿ ಪೊಲೀಸರು ಅಪಹರಿಸಿದ್ದಾರೆ ಅಥವಾ ಅಕ್ರಮವಾಗಿ ಬಂಧಿಸಿದ್ದಾರೆ ಎಂದು ಮಾನವ ಹಕ್ಕುಗಳ ಗುಂಪುಗಳು ಆರೋಪಿಸಿವೆ. ಹತ್ತು ಮಂದಿಯನ್ನು ದೆಹಲಿ ಪೊಲೀಸರು ಮತ್ತು ಇತರ ರಾಜ್ಯಗಳ ಏಜೆನ್ಸಿಗಳು ಅಪಹರಿಸಿವೆ...

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...