Homeಫ್ಯಾಕ್ಟ್‌ಚೆಕ್FACT CHECK : ರಾಜ್ಯದ ಹಲವೆಡೆ ರಾತ್ರಿ ಹೊತ್ತು ಸಿಂಹಗಳ ಓಡಾಟ...ವೈರಲ್ ವಿಡಿಯೋಗಳ ಅಸಲಿಯತ್ತೇನು?

FACT CHECK : ರಾಜ್ಯದ ಹಲವೆಡೆ ರಾತ್ರಿ ಹೊತ್ತು ಸಿಂಹಗಳ ಓಡಾಟ…ವೈರಲ್ ವಿಡಿಯೋಗಳ ಅಸಲಿಯತ್ತೇನು?

- Advertisement -
- Advertisement -

ರಾಜ್ಯದ ಹಲವೆಡೆ ರಾತ್ರಿ ಹೊತ್ತು ಸಿಂಹಗಳು ಓಡಾಡಿರುವುದಾಗಿ ಕಳೆದ ಕೆಲ ದಿನಗಳಿಂದ ಸಾಮಾಜಿಕ ಜಾಲತಾಣಗಳಲ್ಲಿ ಒಂದೆರಡು ವಿಡಿಯೋಗಳು ವ್ಯಾಪಕವಾಗಿ ಹರಿದಾಡುತ್ತಿವೆ.

ನಮಗೆ ಸಾಮಾಜಿಕ ಜಾಲತಾಣಗಳ ಮೂಲಕ ಲಭ್ಯವಾಗಿರುವ ಎರಡು ವಿಡಿಯೋಗಳು ದಿನಕ್ಕೊಂದು ಊರಿನ ಹೆಸರಿನಲ್ಲಿ ವೈರಲ್ ಆಗುತ್ತಿದೆ.

ಮೊದಲ ವಿಡಿಯೋದಲ್ಲಿ ದೇವಸ್ಥಾನದ ದ್ವಾರವೊಂದರ ಬಳಿ ರಾತ್ರಿ ಹೊತ್ತು ಸಿಂಹ ಓಡಾಡಿರುವುದು ಇದೆ.

ಆಗಸ್ಟ್‌ 31, 2024ರಂದು ಎಕ್ಸ್‌ನಲ್ಲಿ ಈ ವಿಡಿಯೋ ಹಂಚಿಕೊಂಡಿರುವ
wHatNext (@raghunmurthy07) ಎಂಬ ಬಳಕೆದಾರರು “ಬೆಂಗಳೂರು ರಾಜಾಜಿನಗರ ಮಧ್ಯರಾತ್ರಿ 1 ಘಂಟೆ” ಎಂದು ಬರೆದುಕೊಂಡಿದ್ದಾರೆ.

Sai Mohan ‘NTR'(@Sai_Mohan_999) ಎಂಬ ಮತ್ತೊಬ್ಬರು ಎಕ್ಸ್ ಬಳಕೆದಾರರು ಆಗಸ್ಟ್ 31ರಂದು ಅದೇ ವಿಡಿಯೋವನ್ನು ಹಂಚಿಕೊಂಡು “ಇಂದು ಕರ್ನಾಟಕದ ರಸ್ತೆಯಲ್ಲಿ ಭಯವಿಲ್ಲದೆ ಓಡಾಡಿದ ಸಿಂಹ” ಎಂದು ಬರೆದುಕೊಂಡಿದ್ದಾರೆ.

ಅದೇ ರೀತಿ ಮತ್ತೊಂದು ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಇದರಲ್ಲೂ ರಾತ್ರಿ ಹೊತ್ತು ಪೆಟ್ರೋಲ್ ಬಂಕ್ ಒಂದರ ಬಳಿ ಸಿಂಹ ಓಡಾಡಿರುವುದು ಇದೆ.

ಈ ವಿಡಿಯೋ ವಾಟ್ಸಾಪ್‌, ಫೇಸ್‌ಬುಕ್ ಸೇರಿದಂತೆ ಎಲ್ಲೆಡೆ ಹರಿದಾಡುತ್ತಿದೆ. ಇತ್ತೀಚೆಗೆ ವಾಟ್ಸಾಪ್‌ನಲ್ಲಿ “ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಕಾವಲ್‌ಕಟ್ಟೆಯ ಪೆಟ್ರೋಲ್‌ ಬಂಕ್‌ನಲ್ಲಿ ಸಿಂಹ ಓಡಾಡಿದೆ ಎಂಬ ಸಂದೇಶದೊಂದಿಗೆ ವಿಡಿಯೋ ವೈರಲ್‌ ಆಗಿತ್ತು. ಆ ಬಳಿಕ ಅದೇ ವಿಡಿಯೋ “ರಾಯಚೂರು ಜಿಲ್ಲೆಯ ಮಸ್ಕಿಯಲ್ಲಿ ಸಿಂಹ ಕಾಣಿಸಿಕೊಂಡಿದೆ” ಎಂದು ಹರಿದಾಡಿತ್ತು.

write News.in ಎಂಬ ಫೇಸ್‌ಬುಕ್ ಪೇಜ್‌ನಲ್ಲಿ “ನಾಡಿಗೆ ಬಂದ ಕಾಡಿನ ರಾಜ” ಎಂಬ ಶೀರ್ಷಿಕೆಯಲ್ಲಿ ಇತ್ತೀಚೆಗೆ ವಿಡಿಯೋ ಹಂಚಿಕೊಂಡು “ಇಷ್ಟು ದಿನ ಹುಲಿ ಚಿರತೆಗಳು ಬರುತ್ತಿದ್ದವು. ಈಗ ಸಿಂಹನೇ ಬರ್ತಿದೆ. ಕರ್ನಾಟಕನಾ? ಬೇರೆ ರಾಜ್ಯನಾ? ಎಲ್ಲಿ ಇದು” ಎಂದು ಬರೆಯಲಾಗಿತ್ತು.

ಅತ್ರಾಡಿ ಪೃಥ್ವಿರಾಜ್ ಹೆಗ್ಡೆ ಎಂಬವರು ಸೆಪ್ಟೆಂಬರ್ 10ರಂದು ಫೇಸ್‌ಬುಕ್‌ನಲ್ಲಿ ವಿಡಿಯೋ ಹಂಚಿಕೊಂಡು ” ನನ್ನ ಹುಟ್ಟೂರು ಆತ್ರಾಡಿಯಲ್ಲಿ ಸಿಂಹ ತಿರುಗಾಡುತ್ತಿದೆ ಅಂತ ಗುಜರಾತಿನ ಒಂದು Fake video ಇವತ್ತು ಸಿಕ್ಕಾಪಟ್ಟೆ ವೈರಲ್ ಆಗಿದೆ…ಬಹಳ ಮಂದಿ ನನಗೆ ಕರೆಯನ್ನೂ ಮಾಡಿ ವಿಚಾರಿಸಿದರು…ಅಲ್ಲಾ ಮಾರಾಯ್ರೆ ಅದು ಫೇಕ್ ಅಂತ ಅಷ್ಟೂ ಗೊತ್ತಾಗುದಿಲ್ವಾ?! ಆತ್ರಾಡಿಯಲ್ಲಿ ಸದ್ಯ ನಾನೊಬ್ಬನೇ ಸಿಂಹ ಇರುವುದು…ನಾನಿರುವಾಗ ಮತ್ತೊಂದು ಸಿಂಹ ಹೇಗೆ ಬರುವುದಕ್ಕೆ ಸಾಧ್ಯ?!!” ಎಂದು ಬರೆದುಕೊಂಡಿದ್ದರು. ಈ ಅತ್ರಾಡಿ ಉಡುಪಿ ಜಿಲ್ಲೆಯಲ್ಲಿದೆ.

ನಾವು ಗೂಗಲ್‌ನಲ್ಲಿ ವಿಡಿಯೋ ಕುರಿತು ಮಾಹಿತಿ ಹುಡುಕಿದಾಗ, ಎರಡನೇ ವಿಡಿಯೋ ಉತ್ತರ ಪ್ರದೇಶದ ಗಜ್ರೌಲಾ, ಜರ್ವಾಲ್, ಬಲರಾಂಪುರ ಮತ್ತು ಗುಜರಾತ್‌ನ ವಿವಿಧ ಊರುಗಳ ಹೆಸರಿನಲ್ಲಿ ವೈರಲ್ ಆಗಿರುವುದು ಗೊತ್ತಾಗಿದೆ.

ಅಸಲಿಗೆ ಎರಡು ವೈರಲ್ ವಿಡಿಯೋಗಳು ಎಲ್ಲಿಯದ್ದು ಎಂಬ ಮಾಹಿತಿ ಕೆಳಗಿದೆ.

ಫ್ಯಾಕ್ಟ್‌ಚೆಕ್ : ದೇವಸ್ಥಾನದ ದ್ವಾರದ ಮುಂದೆ ಸಿಂಹ ನಡೆದಾಡಿದ ವೈರಲ್ ವಿಡಿಯೋ ಗುಜರಾತ್‌ನ ಅಮ್ರೇಲಿ ಜಿಲ್ಲೆಯ ರಾಜೌಲಾದ ಲಕ್ಷ್ಮೀ ನಾರಾಯಣ ಮಂದಿರದ ಮುಂಭಾಗದ್ದು ಎಂದು ಗೊತ್ತಾಗಿದೆ.

ಈ ಬಗ್ಗೆ ಖಚಿತಪಡಿಸಿಕೊಳ್ಳಲು ಆ ದೇವಸ್ಥಾನದ ಬಗ್ಗೆ ನಾವು ಗೂಗಲ್ ಸರ್ಚ್ ಮಾಡಿದ್ದೇವೆ. ಈ ವೇಳೆ ವೈರಲ್ ವಿಡಿಯೋದಲ್ಲಿರುವ ದೇವಸ್ಥಾನದ ದ್ವಾರವನ್ನೇ ಲಕ್ಷ್ಮೀ ನಾರಾಯಣ ಮಂದಿರ ದ್ವಾರ ಎಂದು ಫೋಟೊ ಹಂಚಿಕೊಂಡಿರುವುದು ಕಂಡು ಬಂದಿದೆ. ಹಾಗಾಗಿ, ವೈರಲ್ ವಿಡಿಯೋ ಲಕ್ಷ್ಮೀ ನಾರಾಯಣ ಮಂದಿರದ ಮುಂಭಾಗದ್ದೇ ಎಂಬುವುದು ಖಚಿತವಾಗಿದೆ.

ಟಿವಿ9 ಗುಜರಾತ್‌ ಮಾರ್ಚ್ 9, 2024ರಂದು ತನ್ನ ಯೂಟ್ಯೂಬ್ ಚಾನೆಲ್‌ನಲ್ಲಿ ವೈರಲ್ ವಿಡಿಯೋ ಕುರಿತು ಸುದ್ದಿ ಪ್ರಕಟಿಸಿತ್ತು. ಅದರಲ್ಲಿ ಅಮ್ರೇಲಿಯ ರಾಜೌಲಾದ ಲಕ್ಷ್ಮೀ ನಾರಾಯಣ ದೇವಸ್ಥಾನದ ಬಳಿ ಸಿಂಹ ಕಾಣಿಸಿಕೊಂಡಿದೆ ಎಂದು ಹೇಳಿತ್ತು.

ಇನ್ನು ನಾವು ಮೇಲೆ ಉಲ್ಲೇಖಿಸಿದ ಮತ್ತೊಂದು ವಿಡಿಯೋ ಕೂಡ ಕರ್ನಾಟಕದಲ್ಲ. ಅದೂ ಗುಜರಾತ್‌ನ ವಿಡಿಯೋ ಆಗಿದೆ.

ಈ ಕುರಿತು ಆಗಸ್ಟ್ 20, 2024ರಂದು ನ್ಯೂಸ್ 18 ಗುಜಾರಾತಿಯ ಯೂಟ್ಯೂಬ್ ಚಾನೆಲ್‌ನಲ್ಲಿ ಸುದ್ದಿ ಪ್ರಕಟಿಸಿಲಾಗಿತ್ತು. ಸುದ್ದಿಯಲ್ಲಿ ಗುಜರಾತ್‌ನ ಅಮ್ರೇಲಿಯ ಧರಿ-ವಿಸಾವದರ್ ರಸ್ತೆಯ ಪೆಟ್ರೋಲ್ ಬಂಕ್‌ನಲ್ಲಿ ರಾತ್ರಿ ಹೊತ್ತು ಸಿಂಹ ಕಾಣಿಸಿಕೊಂಡಿದೆ. ಬಂಕ್‌ನ ಕ್ಯಾಮಾರದಲ್ಲಿ ಈ ದೃಶ್ಯ ಸೆರೆಯಾಗಿದೆ ಎಂದು ತಿಳಿಸಲಾಗಿದೆ.

ಒಟ್ಟಿನಲ್ಲಿ, ವೈರಲ್ ಆಗಿರುವ ಎರಡೂ ವಿಡಿಯೋಗಳು ಗುಜರಾತ್‌ನ ಅಮ್ರೇಲಿ ಜಿಲ್ಲೆಗೆ ಸಂಬಂಧಿಸಿದ್ದು, ಕರ್ನಾಟಕದ್ದಲ್ಲ ಎಂಬುವುದು ವಿವಿಧ ಮೂಲಗಳಿಂದ ನಮಗೆ ಲಭ್ಯವಾದ ಮಾಹಿತಿಯಲ್ಲಿ ಗೊತ್ತಾಗಿದೆ.

ಇದನ್ನೂ ಓದಿ : FACT CHECK : ಪ. ಬಂಗಾಳದಲ್ಲಿ ಮುಸ್ಲಿಂ ಯುವಕ ಹಿಂದೂ ಬಾಲಕಿಗೆ ಇರಿದಿದ್ದಾನೆ ಎಂಬುವುದು ಸುಳ್ಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...