Homeದಲಿತ್ ಫೈಲ್ಸ್ಫ್ಯಾಕ್ಟ್‌ಚೆಕ್ | ಮಹಾ ಕುಂಭಮೇಳ - 2025ರಲ್ಲಿ ಬಿಲ್‌ಗೇಟ್ಸ್‌ ಭಾಗವಹಿಸಿದ್ದು ನಿಜವೇ?

ಫ್ಯಾಕ್ಟ್‌ಚೆಕ್ | ಮಹಾ ಕುಂಭಮೇಳ – 2025ರಲ್ಲಿ ಬಿಲ್‌ಗೇಟ್ಸ್‌ ಭಾಗವಹಿಸಿದ್ದು ನಿಜವೇ?

- Advertisement -
- Advertisement -

ಉತ್ತರಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ಜನವರಿ 13 ರಿಂದ ಆರಂಭವಾಗಿರುವ ಮಹಾ ಕುಂಭಮೇಳದಲ್ಲಿ ಮೈಕ್ರೋಸಾಫ್ಟ್‌ ಸಹ ಸಂಸ್ಥಾಪಕ ಬಿಲ್ ಗೇಟ್ಸ್‌ ಕೂಡಾ ಭಾಗಿಯಾಗಿದ್ದಾರೆ ಎಂದು ಪ್ರತಿಪಾದಿಸಿ ಸಾಮಾಜಿಕ ಮಾಧ್ಯಮಗಳಲ್ಲಿ ವಿಡಿಯೊವೊಂದು ವೈರಲ್ ಆಗಿತ್ತಿದೆ. ಬಿಲ್‌ಗೇಟ್ಸ್‌ ಮಹಾ ಕುಂಭಮೇಳದಲ್ಲಿ

ವ್ಯಕ್ತಿಯೊಬ್ಬರು ಜನರ ಗುಂಪಿನ ನಡುವೆ ನಿಂತಿರುವ ವಿಡಿಯೊವನ್ನು ಹಲವಾರು ಜನರು ಇದು ಪ್ರಯಾಗ್‌ರಾಜ್‌ನ ಮಹಾ ಕುಂಭಮೇಳದಲ್ಲಿ ಬಿಲ್‌ಗೇಟ್ಸ್ ಭಾಗವಹಿಸಿರುವ ವಿಡಿಯೊ ಎಂದು ಪ್ರತಿಪಾದಿಸಿ ಹಂಚಿಕೊಳ್ಳುತ್ತಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

2025ರ ಮಹಾ ಕುಂಭಮೇಳ ನಡೆಯುವ ಈ ಸಂದರ್ಭದಲ್ಲಿ ವಾರಣಾಸಿಯಲ್ಲಿರುವ ಕಾಶಿ ವಿಶ್ವನಾಥ ಮಂದಿರಕ್ಕೆ ಅವರು ಭೇಟಿ ನೀಡಿದ್ದಾರೆ ಎಂದು ಈ ವಿಡಿಯೊ ಹೇಳಿಕೊಳ್ಳುತ್ತವೆ. ಅವುಗಳನ್ನು (ಇಲ್ಲಿ, ಇಲ್ಲಿ ಮತ್ತು ಇಲ್ಲಿ) ನೋಡಬಹುದು. ಸಾಮಾಜಿಕ ಮಾಧ್ಯಮದಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿರುವ ಈ ಪೋಸ್ಟ್‌ನಲ್ಲಿ ಮಾಡಲಾದ ಪ್ರತಿಪಾದನೆ ನಿಜವೇ ಎಂದು ಪರಿಶೀಲಿಸೋಣ. ಬಿಲ್‌ಗೇಟ್ಸ್‌ ಮಹಾ ಕುಂಭಮೇಳದಲ್ಲಿ

ಫ್ಯಾಕ್ಟ್‌ಚೆಕ್ :

ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳುತ್ತಿರುವಂತೆ ಸಾಫ್ಟ್‌ವೇರ್‌ನ ದಿಗ್ಗಜ ಮೈಕ್ರೋಸಾಫ್ಟ್ ಸಹ-ಸಂಸ್ಥಾಪಕ ಬಿಲ್ ಗೇಟ್ಸ್ ಉತ್ತರ ಪ್ರದೇಶದಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳದಲ್ಲಿ ಭಾಗವಹಿಸಿರುವುದು ನಿಜವೇ ಎಂದು ಪರಿಶೀಲಿಸಲು, ಸಂಬಂಧಿತ ಕೀವರ್ಡ್‌ಗಳನ್ನು ಬಳಸಿಕೊಂಡು ಗೂಗಲ್ ಸರ್ಚ್ ಮಾಡಿದಾಗ, ಬಿಲ್ ಗೇಟ್ಸ್‌ ಭೇಟಿಯನ್ನು ದೃಢೀಕರಿಸುವ ಯಾವುದೇ ವಿಶ್ವಾಸಾರ್ಹ ಮಾಧ್ಯಮ ವರದಿಗಳು ಲಭ್ಯವಾಗಿಲ್ಲ.

ಬಿಲ್ ಗೇಟ್ಸ್ ಅವರ ಸಾಮಾಜಿಕ ಮಾಧ್ಯಮಗಳ ಖಾತೆಗಳು ಕೂಡಾ ಮಹಾ ಕುಂಭಮೇಳಕ್ಕೆ ಭೇಟಿ ನೀಡಿದ ಬಗ್ಗೆ ಯಾವುದೇ ಮಾಹಿತಿಯನ್ನು ಉಲ್ಲೇಖಿಸಿಲ್ಲ.  ಫೆಬ್ರವರಿ 2024 ರಲ್ಲಿ ಬಿಲ್ ಗೇಟ್ಸ್‌ ಭಾರತಕ್ಕೆ ನೀಡಿದ್ದಾರೆ. ಅದರ ನಂತರ ಅವರು ಭಾರತಕ್ಕೆ ಬಂದಿಲ್ಲ ಎಂಬ ಮಾಹಿತಿ ಲಭ್ಯವಾಗಿದೆ.

ವೈರಲ್ ಫೋಟೋವನ್ನು ಗೂಗಲ್‌ ರಿವರ್ಸ್ ಇಮೇಜಸ್‌ನಲ್ಲಿ ಸರ್ಚ್ ಮಾಡಿದಾಗ, ಡಿಸೆಂಬರ್ 24, 2024 ರಂದು ‘ಗುಲ್ಲಕ್‘ ಎಂಬ ಯೂಟ್ಯೂಬ್ ಚಾನೆಲ್‌ನಲ್ಲಿ ಅಪ್‌ಲೋಡ್ ಮಾಡಲಾದ ವಿಡಿಯೋ ಲಭ್ಯವಾಗಿದೆ.

ವಿಡಿಯೋದ ವಿವರಣೆಯ ಪ್ರಕಾರ ವಾರಣಾಸಿಯಲ್ಲಿ ಬಿಲ್ ಗೇಟ್ಸ್‌ರನ್ನು ಹೋಲುವ ವ್ಯಕ್ತಿ ಎಂಬ ಶೀರ್ಷಿಕೆಯೊಂದಿಗೆ ಹಂಚಿಕೊಳ್ಳಲಾಗಿದೆ. ಇದೇ ಚಾನೆಲ್‌ನಲ್ಲಿ ಅದೇ ವ್ಯಕ್ತಿಯ ಮತ್ತೊಂದು ವಿಡಿಯೋವನ್ನು ಪೋಸ್ಟ್ ಮಾಡಲಾಗಿದ್ದು, ಅವರನ್ನು ವಾರಣಾಸಿಯ ಮಣಿಕರ್ಣಿಕಾ ಘಾಟ್‌ಗೆ ಭೇಟಿ ನೀಡಿದ “ನಕಲಿ ಬಿಲ್ ಗೇಟ್ಸ್” ಎಂದು ವಿಡಂಬನಾತ್ಮಕವಾಗಿ ಉಲ್ಲೇಖಿಸಿದೆ.

ವೈರಲ್ ವಿಡಿಯೋದಲ್ಲಿರುವ ವ್ಯಕ್ತಿ ದೋರದಿಂದ ನೋಡಿದಾಗ ಬಿಲ್‌ಗೇಟ್ಸ್‌ ಹೋಲಿಕೆಯನ್ನು ಹೊಂದಿರುವಂತೆ ಕಾಣುತ್ತಾರೆ. ಆದರೆ ಈ ವಿಡಿಯೊವನ್ನು ಹತ್ತಿರದಿಂದ ನೋಡಿದರೆ ಆ ವ್ಯಕ್ತಿಯ ಮುಖ ಚಹರೆ ಸ್ಪಷ್ಟವಾಗಿ ಅವರು ಬಿಲ್ ಗೇಟ್ಸ್‌ಅಲ್ಲ ಎಂಬುದು ಸ್ಪಷ್ಟವಾಗುತ್ತದೆ.

ಆಜ್ ತಕ್‌ನ ವರದಿಗಾರ ದೀಪಂಕರ್ ಯಾದವ್ ಅವರೊಂದಿಗೆ ಫ್ಯಾಕ್ಟ್‌ಲಿ ತಂಡ ಮಾತನಾಡಿದ್ದು, ಅವರು ನವೆಂಬರ್ 2024ರಲ್ಲಿ ವಾರಣಾಸಿಗೆ ಭೇಟಿ ನೀಡಿದಾಗ ಈ ವಿಡಿಯೋವನ್ನು ಚಿತ್ರೀಕರಿಸಿದ್ದಾರೆ ತಿಳಿಸಿದ್ದಾರೆ.

ಅವರು ಮಣಿಕರ್ಣಿಕಾ ಘಾಟ್‌ನಲ್ಲಿದ್ದಾಗ, ಘಾಟ್ ಬಳಿಯ ಬಾಲ್ಕನಿಯಲ್ಲಿ ನಿಂತಿದ್ದ ವಿದೇಶಿಯರ ಗುಂಪನ್ನು ನೋಡಿದರು. ಅವರಲ್ಲಿ ಒಬ್ಬರು ಬಿಲ್ ಗೇಟ್ಸ್ ಅವರನ್ನು ಹೋಲುತ್ತಿದ್ದಾರೆ ಎಂದು ಅವರು ಭಾವಿಸಿ ಮನರಂಜನೆಗಾಗಿ ವಿಡಿಯೋವನ್ನು ರೆಕಾರ್ಡ್‌ ಮಾಡಿ, ತಮ್ಮ ಯೂಟ್ಯೂಬ್ ಚಾನೆಲ್‌ನಲ್ಲಿ ಹಂಚಿಕೊಂಡಿದ್ದಾರೆ ಎಂದು ಫ್ಯಾಕ್ಟ್‌ಲಿ ವರದಿ ಮಾಡಿದೆ.

ಒಟ್ಟಾರೆಯಾಗಿ ಹೇಳುವುದಾದರೆ, ಸಂಬಂಧವಿಲ್ಲದ ವಿದೇಶಿ ಪ್ರವಾಸಿಯ ಹಳೆಯ ವಿಡಿಯೋವನ್ನು ಮೈಕ್ರೋಸಾಫ್ಟ್ ಸಹ-ಸಂಸ್ಥಾಪಕ ಬಿಲ್ ಗೇಟ್ಸ್ 2025 ರ ಮಹಾ ಕುಂಭಮೇಳದಲ್ಲಿ ಭಾಗವಹಿಸುತ್ತಿದ್ದಾರೆ ಎಂದು ತಪ್ಪಾಗಿ ಹಂಚಿಕೊಳ್ಳಲಾಗಿದೆ.

(ಫ್ಯಾಕ್ಟ್‌ಚೆಕ್‌ ಅನ್ನು ಮೂಲತಃ FACTLY ಪ್ರಕಟಿಸಿತ್ತು. ನಾನುಗೌರಿ.ಕಾಂ ಶಕ್ತಿ ಕಲೆಕ್ಟಿವ್‌ನ ಭಾಗವಾಗಿ ಇದನ್ನು ಮರುಪ್ರಕಟಿಸಿದೆ)

ಇದನ್ನೂಓದಿ:  ದೆಹಲಿ ಚುನಾವಣೆ | ಬಿಜೆಪಿ ಎಎಪಿಯನ್ನು ನಕಲು ಮಾಡಿದೆ – ಕೇಜ್ರಿವಾಲ್

ದೆಹಲಿ ಚುನಾವಣೆ | ಬಿಜೆಪಿ ಎಎಪಿಯನ್ನು ನಕಲು ಮಾಡಿದೆ – ಕೇಜ್ರಿವಾಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...

ಕರ್ನಾಟಕದಲ್ಲಿ 2 ಗಂಟೆಗಳ ಬೃಹತ್ ಕಾರ್ಯಾಚರಣೆ: 800 ಬಾಲಕಾರ್ಮಿಕರ ರಕ್ಷಣೆ; ಬೆಂಗಳೂರಿನಲ್ಲೇ 503 ಮಕ್ಕಳು

ಬಾಲಕಾರ್ಮಿಕ ಪದ್ಧತಿಯ ವಿರುದ್ಧ ಕರ್ನಾಟಕ ಪೊಲೀಸರು ಹಾಗೂ ಕಾರ್ಮಿಕ ಇಲಾಖೆ ಶನಿವಾರ ರಾಜ್ಯಾದ್ಯಂತ ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ 800 ಮಕ್ಕಳನ್ನು ರಕ್ಷಿಸಲಾಗಿದೆ. ರಾಜ್ಯದ 962 ಪೊಲೀಸ್ ಠಾಣೆಗಳು ಹಾಗೂ ಘಟಕಗಳ ವ್ಯಾಪ್ತಿಯಲ್ಲಿ 16,951...

‘ದಿ ಹಿಂದೂ’, ‘ದೈನಿಕ್ ಭಾಸ್ಕರ್’ ಗಳಲ್ಲಿ ಅತ್ಯಾಚಾರ ಅಪರಾಧಿ ಗುರ್ಮೀತ್ ರಾಮ್ ರಹೀಮ್ ಸಮರ್ಥಿಸುವ ಜಾಹೀರಾತು: ಓದುಗರಲ್ಲಿ ಕ್ಷಮೆಯಾಚಿಸಿದ ‘ದಿ ಹಿಂದೂ’

ನವದೆಹಲಿ: ಇಬ್ಬರು ಮಹಿಳಾ ಶಿಷ್ಯೆಯರ ಮೇಲೆ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಶಿಕ್ಷೆಗೊಳಗಾಗಿರುವ ಡೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಮ್ ಸಿಂಗ್ ಅವರನ್ನು ಸಮರ್ಥಿಸುವ ರೀತಿಯಲ್ಲಿ ಪೂರ್ಣ ಪುಟದ ಮುಖಪುಟ ಜಾಹೀರಾತು...

ದ್ವಿ-ರಾಷ್ಟ್ರ ಪರಿಹಾರ : ಬ್ರಿಕ್ಸ್ ನಿಲುವು ಸ್ವಾಗತಿಸಿದ ಪ್ಯಾಲೆಸ್ತೀನ್

ಪ್ಯಾಲೆಸ್ತೀನ್-ಇಸ್ರೇಲ್ ವಿವಾದಕ್ಕೆ ದ್ವಿ-ರಾಷ್ಟ್ರ ಪರಿಹಾರವನ್ನು ಕಂಡುಕೊಳ್ಳುವಂತೆ ಕರೆ ನೀಡಿರುವ ಬ್ರಿಕ್ಸ್ (BRICS) ಜಂಟಿ ಘೋಷಣೆಯನ್ನು ಪ್ಯಾಲೆಸ್ತೀನ್ ವಿದೇಶಾಂಗ ಮತ್ತು ವಲಸಿಗರ ಸಚಿವಾಲಯವು ಮುಕ್ತಕಂಠದಿಂದ ಸ್ವಾಗತಿಸಿದೆ. ಬ್ರಿಕ್ಸ್‌ ಶೃಂಗಸಭೆ, ಜೆರುಸಲೆಮ್ ಸೇರಿದಂತೆ ಪ್ಯಾಲೆಸ್ತೀನಿಯರನ್ನು ಅವರದೇ ಭೂಮಿಯಿಂದ...

ತೆಲಂಗಾಣ| ಅಂತರ್ಜಾತಿ ವಿವಾಹಕ್ಕೆ ಯುವತಿ ಕುಟುಂಬದ ವಿರೋಧ; ದಲಿತ ಯುವಕನ ಮನೆ ಧ್ವಂಸ

ಹೈದರಾಬಾದ್ ಸಮೀಪದ ಗದ್ವಾಲ್ ಜಿಲ್ಲೆಯ ರೆಪಲ್ಲೆ ಗ್ರಾಮದಲ್ಲಿ ಅಂತರ್ಜಾತಿ ವಿವಾಹದ ಹಿನ್ನೆಲೆಯಲ್ಲಿ ದಲಿತ ಯುವಕನ ಮನೆಯನ್ನು ಧ್ವಂಸಗೊಳಿಸಿರುವ ಘಟನೆಗೆ ಸಂಬಂಧಿಸಿದಂತೆ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ದಲಿತ ಬಹುಜನ ಫ್ರಂಟ್, ಹ್ಯೂಮನ್...

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...