HomeದಿಟನಾಗರFACT CHECK : ಹಿಂದೂಗಳ ಸಂಪತ್ತನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತೇವೆ ಎಂದು ಮಲ್ಲಿಕಾರ್ಜುನ ಖರ್ಗೆ ಹೇಳಿಲ್ಲ

FACT CHECK : ಹಿಂದೂಗಳ ಸಂಪತ್ತನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತೇವೆ ಎಂದು ಮಲ್ಲಿಕಾರ್ಜುನ ಖರ್ಗೆ ಹೇಳಿಲ್ಲ

- Advertisement -
- Advertisement -

“ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಏನು ಮಾಡುತ್ತದೆ ಎಂದು ಅದರ ಅಧ್ಯಕ್ಷ ಖರ್ಗೆ ಯವರ ಬಾಯಿ ಇಂದಲೇ ಕೇಳಿ. ಕಾಂಗ್ರೆಸ್ ಹಿಂದೂಗಳ ಮನೆಗೆ ನುಗ್ಗಿ, ಅಲ್ಲಿರುವ ಬೀರುಗಳ ಬಾಗಿಲು ತೆರೆದು, ಅಲ್ಲಿರುವ ಹಣವನ್ನೆಲ್ಲ ದೋಚಿ ಹೆಚ್ಚು ಮಕ್ಕಳಿರುವ ಮುಸಲ್ಮಾನರಿಗೆ ಹಂಚಲಿದೆ. ಹಿಂದೂಗಳಿಗೆ ಕಡಿಮೆ ಮಕ್ಕಳಿದ್ದರೆ ಕಾಂಗ್ರೆಸ್ ಏನು ಮಾಡಲಿಕ್ಕೆ ಆಗುತ್ತದೆ!? ಅರ್ಥ ಆಯಿತಾ ಹಿಂದೂಗಲೇ!! ಇನ್ನೂ ಸ್ಪಷ್ಟವಾಗಿ ಹೇಳಬೇಕಾ?” ಎಂದು ಬರೆದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರ ವಿಡಿಯೋವೊಂದನ್ನು ಫೇಸ್‌ಬುಕ್‌ನಲ್ಲಿ ಹಂಚಿಕೊಳ್ಳಲಾಗಿದೆ.

‘ನಮೋ ದಿವ್ಯ ಶೆಟ್ಟಿ’ ಎಂಬ ಹೆಸರಿನ ಖಾತೆಯಲ್ಲಿ ವಿಡಿಯೋ ಪೋಸ್ಟ್ ಮಾಡಲಾಗಿದ್ದು, ವಿಡಿಯೋದಲ್ಲಿ ಮೇಲೆ ಬರೆದಂತೆ ಮಲ್ಲಿಕಾರ್ಜುನ ಖರ್ಗೆಯವರು ಹೇಳುವುದನ್ನು ನೋಡಬಹುದು.

ಪೋಸ್ಟ್ ಲಿಂಕ್ ಇಲ್ಲಿದೆ

ಫ್ಯಾಕ್ಟ್‌ಚೆಕ್ : ಫೇಸ್‌ಬುಕ್‌ನಲ್ಲಿ ಹಂಚಿಕೊಳ್ಳಲಾದ ವಿಡಿಯೋದ ಸತ್ಯಾಸತ್ಯತೆಯನ್ನು ನಾನುಗೌರಿ.ಕಾಂ ಪರಿಶೀಲನೆ ನಡೆಸಿದೆ. ಇದಕ್ಕಾಗಿ ಮೊದಲು ಫೇಸ್‌ಬುಕ್‌ನಲ್ಲಿ ಹಂಚಿಕೊಳ್ಳಲಾದ ವಿಡಿಯೋದ ಮೂಲ ವಿಡಿಯೋವನ್ನು ನಾವು ಹುಡುಕಿದ್ದೇವೆ.

ಈ ವೇಳೆ 4 ಮೇ 2024 ರಂದು ಗುಜರಾತ್‌ನ ಅಹಮದಾಬಾದ್‌ನಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರು ಮಾತನಾಡಿರುವ ಮೂಲ ವಿಡಿಯೋ ಲಭ್ಯವಾಗಿದೆ.

ವಿಡಿಯೋದಲ್ಲಿ ಮಲ್ಲಿಕಾರ್ಜುನ ಖರ್ಗೆಯವರ ಭಾಷಣವಿದ್ದು, ಭಾಷಣದಲ್ಲಿ ಅವರು ಕಾಂಗ್ರೆಸ್‌ನ ಪ್ರಣಾಳಿಕೆಯ ಕುರಿತು ವಿವರಿಸಿದ್ದಾರೆ. ದೇಶದಲ್ಲಿ ಜಾತಿ ಜನಗಣತಿ ನಡೆಸುವ ಕಾಂಗ್ರೆಸ್‌ನ ಉದ್ದೇಶವನ್ನು ಜನರಿಗೆ ತಿಳಿಸಿದ್ದಾರೆ.

“ಯಾವ ಜಾತಿಯ ಜನರು ಎಷ್ಟಿದ್ದಾರೆ, ಯಾರು ಎಷ್ಟು ಶಿಕ್ಷಣ ಪಡೆದಿದ್ದಾರೆ, ಯಾರ ಆರ್ಥಿಕ ಸ್ಥಿತಿಗತಿ ಹೇಗಿದೆ ಎಂದು ತಿಳಿಯುವ ಸಲುವಾಗಿ ನಾವು ಜಾತಿ ಗಣತಿ ಮಾಡಲು ನಿರ್ಧರಿಸಿದ್ದೇವೆ. ಆದರೆ, ಮೋದಿಯವರು ಹೇಳುತ್ತಿದ್ದಾರೆ, ‘ಕಾಂಗ್ರೆಸ್‌ನವರು ಏನು ಮಾಡುತ್ತಿದ್ದಾರೆ ನಿಮಗೆ ಗೊತ್ತಾ?.. ಕಾಂಗ್ರೆಸ್‌ನವರು ನಿಮ್ಮ ಮನೆಗೆ ನುಗ್ಗಿ, ಬೀರು ತೆರೆದು, ಹಣವನ್ನೆಲ್ಲ ದೋಚಿ ಹೆಚ್ಚು ಮಕ್ಕಳಿರುವ ಮುಸಲ್ಮಾನರಿಗೆ ಹಂಚಲಿದೆ. ಹಿಂದೂಗಳಿಗೆ ಕಡಿಮೆ ಮಕ್ಕಳಿದ್ದರೆ ಕಾಂಗ್ರೆಸ್ ಏನು ಮಾಡಲಿಕ್ಕೆ ಆಗುತ್ತದೆ!?’ ಎಂದು. ನಾವು ದೋಚುವವರಲ್ಲ, ನಾವು ಯಾರಿಂದಲೂ ಕಿತ್ತುಕೊಳ್ಳುವವರಲ್ಲ. ಮೋದಿಯವರು ಹೇಳಿದ್ದು ಸುಳ್ಳು. ಇದು ಸಮಾಜಕ್ಕೆ, ದೇಶಕ್ಕೆ ಒಳ್ಳೆಯದಲ್ಲ” ಎಂದು ಖರ್ಗೆಯವರು ಹೇಳಿದ್ದಾರೆ.

ಒಟ್ಟು 1 ಗಂಟೆ 1 ನಿಮಿಷ ವಿಡಿಯೋದಲ್ಲಿ 31 ನಿಮಿಷ 55 ಸೆಕೆಂಡ್‌ನಿಂದ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳಲಾದ ಕ್ಲಿಪ್‌ನಲ್ಲಿರುವ ಖರ್ಗೆಯವರ ಭಾಷಣವನ್ನು ಸಂಪೂರ್ಣವಾಗಿ ಕೇಳಬಹುದು.

ಒಟ್ಟಿನಲ್ಲಿ ಮೋದಿ ಕಾಂಗ್ರೆಸ್‌ ಮೇಲೆ ಈ ರೀತಿಯ ಸುಳ್ಳು ಆರೋಪ ಮಾಡುತ್ತಿದ್ದಾರೆ ಎಂದು ಮಲ್ಲಿಕಾರ್ಜುನ ಖರ್ಗೆಯವರು ವಿವರಿಸಿದ್ದನ್ನು ಕಟ್ ಮಾಡಿ ಅವರೇ ಈ ರೀತಿ ಹೇಳಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಮಾಹಿತಿ ಹಂಚಿಕೊಳ್ಳಲಾಗ್ತಿದೆ.

ಇದನ್ನೂ ಓದಿ : FACT CHECK : ಕೇರಳದ ಕಾಂಗ್ರೆಸ್ ನಾಯಕ ಮುಸ್ಲಿಮರ ವಿರುದ್ಧ ದ್ವೇಷ ಭಾಷಣ ಮಾಡಿದ್ರಾ?

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಸ್ವಾತಿ ಮಲಿವಾಲ್ ಹಲ್ಲೆ ಪ್ರಕರಣ: ಅರವಿಂದ್ ಕೇಜ್ರಿವಾಲ್ ಮನೆಯಿಂದ ಸಿಸಿಟಿವಿ ಡಿವಿಆರ್ ವಶಪಡಿಸಿಕೊಂಡ ಪೊಲೀಸರು

0
ಎಎಪಿ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲಿನ ಹಲ್ಲೆ ಪ್ರಕರಣದ ತನಿಖೆಗೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ನಿವಾಸದಲ್ಲಿ ಅಳವಡಿಸಲಾಗಿರುವ ಸಿಸಿಟಿವಿ ಕ್ಯಾಮೆರಾಗಳ ಡಿವಿಆರ್ ಅನ್ನು ವಶಪಡಿಸಿಕೊಂಡಿದ್ದಾರೆ ಎಂದು...