Homeಫ್ಯಾಕ್ಟ್‌ಚೆಕ್FACT CHECK: 'ದೇಶದ ಸಂಪತ್ತಿನಲ್ಲಿ ಮೊದಲ ಅಧಿಕಾರ ಮುಸ್ಲಿಮರಿಗೆ' ಎಂದು ಮನಮೋಹನ್ ಸಿಂಗ್ ಹೇಳಿಲ್ಲ

FACT CHECK: ‘ದೇಶದ ಸಂಪತ್ತಿನಲ್ಲಿ ಮೊದಲ ಅಧಿಕಾರ ಮುಸ್ಲಿಮರಿಗೆ’ ಎಂದು ಮನಮೋಹನ್ ಸಿಂಗ್ ಹೇಳಿಲ್ಲ

- Advertisement -
- Advertisement -

ಭಾನುವಾರ (ಏ.22) ರಾಜಸ್ಥಾನದ ಬನ್‌ಸ್ವಾರಾದಲ್ಲಿ ಬಿಜೆಪಿಯ ಚುನಾವಣಾ ಪ್ರಚಾರ ಸಭೆಯನ್ನು ಉದ್ದೇಶಿಸಿ ಮಾತನಾಡಿದ್ದ ಪ್ರಧಾನಿ ನರೇಂದ್ರ ಮೋದಿ, ಮಾಜಿ ಪ್ರಧಾನಿ ಮನಮೋಹನ್ ಅವರ ಹಳೆಯ ಹೇಳಿಕೆಯೊಂದನ್ನು ಉಲ್ಲೇಖಿಸಿದ್ದಾರೆ.

‘ದೇಶದ ಸಂಪತ್ತಿನಲ್ಲಿ ಮುಸ್ಲಿಮರಿಗೆ ಮೊದಲ ಅಧಿಕಾರ’ ಇರುವುದಾಗಿ ಮನಮೋಹನ್ ಸಿಂಗ್‌ ಹೇಳಿದ್ದಾರೆ ಎಂದು ಮೋದಿ ಪ್ರಸ್ತಾಪಿಸಿದ್ದಾರೆ. ಮೋದಿಯವರ ಭಾಷಣದ 1 ನಿಮಿಷ 13 ಸೆಕೆಂಡ್‌ಗಳ ವಿಡಿಯೋ ವೈರಲ್ ಆಗಿದೆ.

“ಈ ಹಿಂದಿನ ಸರ್ಕಾರದವರು ಹೇಳಿದ್ದರು. ಈ ದೇಶದ ಸಂಪತ್ತಿನ ಮೇಲಿನ ಮೊದಲ ಅಧಿಕಾರ ಮುಸ್ಲಿಮರಿಗಾಗಿದೆ. ಇದರರ್ಥ, ಈ ಸಂಪತ್ತನ್ನೆಲ್ಲಾ ಒಟ್ಟು ಮಾಡಿ, ಯಾರಿಗೆ ಹಂಚ್ತೀವಿ? ಯಾರಿಗೆ ಹೆಚ್ಚು ಮಕ್ಕಳಿದ್ದಾವೋ, ಅವರಿಗೆ ಹಂಚ್ತೀವಿ. ನುಸುಳುಕೋರರಿಗೆ ಹಂಚ್ತೀವಿ. ನಿಮ್ಮ ಶ್ರಮದ ಹಣವನ್ನು ನುಸುಳುಕೋರರಿಗೆ ಕೊಡಬಹುದಾ? ಇದಕ್ಕೆ ನಿಮ್ಮ ಒಪ್ಪಿಗೆ ಇದೆಯಾ? ಇದು ಕಾಂಗ್ರೆಸ್‌ನ ಪ್ರಣಾಳಿಕೆ ಹೇಳ್ತಿದೆ. ತಾಯಂದಿರು, ಸೋದರಿಯರ ಬಳಿಯ ಚಿನ್ನದ ಲೆಕ್ಕ ಹಾಕ್ತಾರೆ. ಅದನ್ನು ಜಪ್ತಿ ಮಾಡ್ತಾರೆ ಮತ್ತು ಆ ಸಂಪತ್ತನ್ನು ಹಂಚಿ ಬಿಡ್ತಾರೆ. ಯಾರಿಗೆ ಹಂಚ್ತಾರೆ ಅಂದ್ರೆ, ಮನಮೋಹನ್‌ ಸಿಂಗ್‌ ಹೇಳಿದ್ರಲ್ಲ, ‘ಸಂಪತ್ತಿನ ಮೇಲೆ ಮೊದಲ ಅಧಿಕಾರ ಇದೆ’ ಅಂತ ಅವರಿಗೆ ಹಂಚ್ತಾರೆ! ಈ ಅರ್ಬನ್‌ ನಕ್ಸಲ್‌ ಚಿಂತನೆ ತಾಯಂದಿರು, ಸೋದರಿಯರ ಮಂಗಳ ಸೂತ್ರವನ್ನೂ ಉಳಿಸುವುದಿಲ್ಲ!” ಎಂದು ಪ್ರಧಾನಿ ತನ್ನ ಭಾಷಣದಲ್ಲಿ ಹೇಳಿದ್ದಾರೆ.

ಫ್ಯಾಕ್ಟ್‌ಚೆಕ್ : ಪ್ರಧಾನಿ ನರೇಂದ್ರ ಮೋದಿ ಭಾಷಣದಲ್ಲಿ ಹೇಳಿದಂತೆ, ದೇಶದ ಸಂಪತ್ತಿನಲ್ಲಿ ಮೊದಲ ಅಧಿಕಾರ ಮುಸ್ಲಿಮರಿಗಿದೆ ಎಂದು ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಹೇಳಿದ್ದಾರಾ? ಎಂಬುವುದರ ಕುರಿತು ನಾನುಗೌರಿ.ಕಾಂ ಸತ್ಯಾಸತ್ಯತೆ ಪರಿಶೀಲನೆ ನಡೆಸಿದೆ.

ಇದಕ್ಕಾಗಿ ನಾವು ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಹಳೆಯ ಭಾಷಣ ಹುಡುಕಾಡಿದ್ದೇವೆ. ಈ ವೇಳೆ ಏಪ್ರಿಲ್ 22,2024ರಂದು ಇಂಡಿಯಾ ಟುಡೇ ಚಾನೆಲ್ ತನ್ನ ಯೂಟ್ಯೂಬ್‌ನಲ್ಲಿ ಸಿಂಗ್ ಅವರ ಹಳೆ ಭಾಷಣ ಮತ್ತು ಮೋದಿಯವರ ವಿವಾದಾತ್ಮಕ ಹೇಳಿಕೆಯ ಕುರಿತು ಅಪ್ಲೋಡ್ ಮಾಡಿರುವ ವಿಡಿಯೋ ದೊರೆತಿದೆ.

ಯೂಟ್ಯೂಬ್ ವಿಡಿಯೋ ಲಿಂಕ್ ಇಲ್ಲಿದೆ

ಇಂಡಿಯಾ ಟುಡೇಯಲ್ಲಿ ಅಪ್ಲೋಡ್ ಮಾಡಲಾದ ವಿಡಿಯೋದಲ್ಲಿ ಮನಮೋಹನ್ ಸಿಂಗ್ ಅವರು, “ಅಲ್ಪ ಸಂಖ್ಯಾತರು, ವಿಶೇಷವಾಗಿ ಮುಸ್ಲಿಂ ಅಲ್ಪ ಸಂಖ್ಯಾತರ ಅಭಿವೃದ್ದಿಗಾಗಿ ನಾವು ಹೊಸ ಹೊಸ ಯೋಜನೆಗಳನ್ನು ರೂಪಿಸಬೇಕು. ಸಂಪತ್ತಿನ ಸಮಾನ ಹಂಚಿಕೆಯಾಗಬೇಕು. ನಮ್ಮ ಸಂಪತ್ತಿನಲ್ಲಿ ಅವರಿಗೂ(ಮುಸ್ಲಿಮರಿಗೂ) ಮೊದಲ ಹಕ್ಕು ಇರಬೇಕು” ಎಂದಿದ್ದಾರೆ.

ನಾವು ವಿಡಿಯೋದಲ್ಲಿ ಗಮನಿಸಿದಂತೆ ಮನಮೋಹನ್ ಸಿಂಗ್ ಅವರು “ದೇಶದ ಸಂಪತ್ತಿನ ಹಂಚಿಕೆಯಲ್ಲಿ ಮುಸ್ಲಿಮರಿಗೆ ಮೊದಲ ಹಕ್ಕು ಇರಬೇಕು ಎಂದಿದ್ದಾರೆಯೇ ಹೊರತು, ಮುಸ್ಲಿಮರಿಗೆ ಮೊದಲ ಅಧಿಕಾರ ಇದೆ” ಎಂದಿಲ್ಲ.

ಪ್ರಧಾನಿ ಕಚೇರಿಯ ವೆಬ್‌ಸೈಟ್‌ನ ಆರ್ಕೈವ್‌ನಲ್ಲಿ ಮನಮೋಹನ್ ಸಿಂಗ್ ಅವರ ಭಾಷಣದ ಅಧಿಕೃತ ಲಿಖಿತ ರೂಪ ನಮಗೆ ದೊರೆತಿದೆ. ಆರ್ಕೈವ್‌ ಪ್ರಕಾರ, ಪ್ರಧಾನಿ ಮೋದಿ ಉಲ್ಲೇಖಿಸಿದ್ದು, 2006ರ ಡಿಸೆಂಬರ್ 9ರಂದು ನವದೆಹಲಿಯಲ್ಲಿ ನಡೆದ ರಾಷ್ಟ್ರೀಯ ಅಭಿವೃದ್ಧಿ ಮಂಡಳಿಯ 52ನೇ ಸಭೆಯನ್ನು ಉದ್ದೇಶಿಸಿ ಮನಮೋಹನ್ ಸಿಂಗ್ ಅವರು ಮಾಡಿದ್ದ ಭಾಷಣದ ಕುರಿತು ಎಂಬುವುದು ಗೊತ್ತಾಗಿದೆ.

ತನ್ನ ಭಾಷಣದಲ್ಲಿ 11ನೇ ಪಂಚವಾರ್ಷಿಕ ಯೋಜನೆಯ ಪ್ರಸ್ತಾವನೆಯನ್ನು ಉಲ್ಲೇಖಿಸುತ್ತಾ “ವೇಗದ ಮತ್ತು ಸರ್ವರನ್ನು ಒಳಗೊಂಡ ಅಭಿವೃದ್ಧಿಯೆಡೆಗೆ” ಎಂಬ ವಿಷಯದ ಬಗ್ಗೆ ಸವಿಸ್ತಾರವಾಗಿ ಮನಮೋಹನ್ ಸಿಂಗ್ ಮಾತನಾಡಿದ್ದರು.

ಭಾಷಣದ ಕೊನೆಯಲ್ಲಿ “ನಮ್ಮ ಸಾಮೂಹಿಕ ಆದ್ಯತೆಗಳು ಸ್ಪಷ್ಟವಾಗಿವೆ ಎಂದು ನನಗೆ ನಂಬಿಕೆ ಇದೆ. ಕೃಷಿ, ನೀರಾವರಿ ಮತ್ತು ಜಲಸಂಪನ್ಮೂಲ, ಆರೋಗ್ಯ, ಶಿಕ್ಷಣ, ಗ್ರಾಮೀಣ ಮೂಲಸೌಕರ್ಯದಲ್ಲಿ ನಿರ್ಣಾಯಕ ಹೂಡಿಕೆ ಮತ್ತು ಸಾಮಾನ್ಯ ಮೂಲಸೌಕರ್ಯಗಳ ಅಗತ್ಯ ಸಾರ್ವಜನಿಕ ಹೂಡಿಕೆ ಅಗತ್ಯಗಳು, ಎಸ್‌ಸಿ/ಎಸ್‌ಟಿ, ಇತರ ಹಿಂದುಳಿದ ವರ್ಗಗಳು, ಅಲ್ಪಸಂಖ್ಯಾತರು ಮತ್ತು ಮಹಿಳೆಯರು ಮತ್ತು ಮಕ್ಕಳ ಉನ್ನತಿಗಾಗಿ ಕಾರ್ಯಕ್ರಮಗಳ ಜೊತೆಗೆ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಘಟಕ ಯೋಜನೆಗಳನ್ನು ಪುನಶ್ಚೇತನಗೊಳಿಸಬೇಕಾಗಿದೆ. ಅಲ್ಪಸಂಖ್ಯಾತರು, ವಿಶೇಷವಾಗಿ ಮುಸ್ಲಿಂ ಅಲ್ಪಸಂಖ್ಯಾತರು, ಅಭಿವೃದ್ಧಿಯ ಫಲಗಳಲ್ಲಿ ಸಮಾನ ಪಾಲು ಪಡೆಯುವ ಹಕ್ಕು ಹೊಂದಲು ನಾವು ನವೀನ ಯೋಜನೆಗಳನ್ನು ರೂಪಿಸಬೇಕಾಗಿದೆ. ಸಂಪನ್ಮೂಲಗಳಲ್ಲಿ ಪಾಲು ಪಡೆಯುವ ಮೊದಲ ಹಕ್ಕು ಅವರಿಗೂ ಇರಬೇಕು” ಎಂದಿದ್ದರು.

ಮನಮೋಹನ್ ಸಿಂಗ್ ಅವರ ಭಾಷಣದ ಆರ್ಖೈವ್ ಇಲ್ಲಿದೆ 

‘ದಿ ಲಲ್ಲನ್‌ಟಾಪ್‌’ನ ಸೌರಭ್ ದ್ವಿವೇದಿ ಅವರು ಮೋದಿ ಉಲ್ಲೇಖಿಸಿದ ಮನಮೋಹನ್ ಸಿಂಗ್ ಅವರ ಭಾಷಣದ ನಿಜವಾದ ಅಂಶವನ್ನು ವಿಡಿಯೋ ಮೂಲಕ ವಿವರಿಸಿದ್ದಾರೆ. ಆ ವಿಡಿಯೋ ಲಿಂಕ್ ಕೆಳಗಿದೆ.

ಮೇಲೆ ನಾವು ಉಲ್ಲೇಖಿಸಿದ ಮೂಲಗಳ ಪ್ರಕಾರ, ಮನಮೋಹನ್ ಸಿಂಗ್ ಅವರು “ದೇಶದ ಸಂಪತ್ತಿನಲ್ಲಿ ಮೊದಲ ಅಧಿಕಾರ ಮುಸ್ಲಿಮರಿಗಿದೆ ಎಂದು ಹೇಳಿಲ್ಲ. ಬದಲಾಗಿ, ಸಂಪತ್ತಿನ ಸಮಾನ ಹಂಚಿಕೆಯಾಗಬೇಕು. ದೇಶದ ಸಂಪತ್ತಿನಲ್ಲಿ ಮುಸ್ಲಿಮರಿಗೂ ಮೊದಲ ಹಕ್ಕು ಇರಬೇಕು” ಎಂದಿದ್ದಾರೆ.

ಇದರರ್ಥ ಇತರ ಧರ್ಮಿಯರಿಗೆ ಇರುವಂತೆ ಮುಸ್ಲಿಮರಿಗೂ ದೇಶದ ಸಂಪತ್ತಿನಲ್ಲಿ ಮೊದಲ ಹಕ್ಕು ಇರಬೇಕು. ಈ ಮೂಲಕ ಸಂಪತ್ತಿನ ಸಮಾನ ಹಂಚಿಕೆಯಾಗಬೇಕು. ತಾರತಮ್ಯ ಇರಬಾರದು ಎಂಬುವುದಾಗಿದೆ.

ಇದನ್ನೂ ಓದಿ : FACT CHECK: ಉತ್ತರ ಪ್ರದೇಶದಲ್ಲಿ ಬುರ್ಖಾಧಾರಿ ಮಹಿಳೆಯರಿಂದ ನಕಲಿ ಮತದಾನ ಎಂದು ಹಳೆಯ ವಿಡಿಯೋ ಹಂಚಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...