Homeಫ್ಯಾಕ್ಟ್‌ಚೆಕ್FACT CHECK | ಹಿಂದೂ ಸಾಧುಗಳ ವೇಷದಲ್ಲಿ ಭಿಕ್ಷೆ ಬೇಡಿದ ಮುಸಲ್ಮಾನರು ಎಂದು ಸುಳ್ಳು ಸುದ್ದಿ...

FACT CHECK | ಹಿಂದೂ ಸಾಧುಗಳ ವೇಷದಲ್ಲಿ ಭಿಕ್ಷೆ ಬೇಡಿದ ಮುಸಲ್ಮಾನರು ಎಂದು ಸುಳ್ಳು ಸುದ್ದಿ ಹಬ್ಬಿದ ಮಾಧ್ಯಮಗಳು

- Advertisement -
- Advertisement -

ಹಿಂದೂ ಸಾಧುಗಳ ರೀತಿ ವಸ್ತ್ರ ಧರಿಸಿ, ಹಣೆ ಮೇಲೆ ವಿಭೂತಿ ಹಚ್ಚಿರುವ ಮೂವರು ಗಡ್ಡದಾರಿ ವ್ಯಕ್ತಿಗಳ ಜೊತೆ ಜನರ ಗುಂಪೊಂದು ವಾಗ್ವಾದ ನಡೆಸುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ವಿಡಿಯೋದಲ್ಲಿ ‘ಮೂವರು ಸಾಧುಗಳನ್ನು ವ್ಯಕ್ತಿಯೊಬ್ಬ”ನಿಮಗೆ ಎಷ್ಟು ದೇವರ ನಾಮಗಳು ಗೊತ್ತಿದೆ?” ಎಂದು ಪ್ರಶ್ನಿಸುವುದು ಮತ್ತು ಇತರ ವ್ಯಕ್ತಿಗಳಿಗೆ ” ಇವರು ನಿಜವಾದ ಸಾಧುಗಳಲ್ಲ, ಸಾಧುಗಳ ವೇಷ ಧರಿಸಿರುವ ಮುಸ್ಲಿಮರು. ಇವರಲ್ಲಿ ಒಬ್ಬಾತನ ಹೆಸರು ಸಲ್ಮಾನ್ ” ಎಂದು ಹೇಳುತ್ತಿರುವುದು ಇದೆ.

ಈ ವಿಡಿಯೋವನ್ನು ವ್ಯಾಪಕವಾಗಿ ಹಂಚಿಕೊಂಡಿರುವ ಸಾಮಾಜಿಕ ಜಾಲತಾಣ ಬಳಕೆದಾರರು, “ಹಿಂದೂ ಸಾಧುಗಳ ವೇಷ ಧರಿಸಿದ್ದ ಓಡಾಡುತ್ತಿದ್ದ ಮುಸ್ಲಿಮರು ಸಿಕ್ಕಿ ಬಿದ್ದಿದ್ದಾರೆ” ಎಂದು ಪ್ರತಿಪಾದಿಸಿದ್ದಾರೆ.

ನವೆಂಬರ್ 2ರಂದು ಈ ವೈರಲ್ ವಿಡಿಯೋವನ್ನು ತನ್ನ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದ್ದ ಗುಜರಾತ್ ಭಾಷೆಯ ಸುದ್ದಿವಾಹಿನಿ ಝೀ 24 ಕಾಲಕ್‘ “ಸಾಧುವಿನ ವೇಷದಲ್ಲಿದ್ದ ಸಲ್ಮಾನ್ ಸಿಕ್ಕಿಬಿದ್ದ! ಸೂರತ್‌ನಲ್ಲಿ ಸಾಧುಗಳಂತೆ ಭಿಕ್ಷೆ ಬೇಡುತ್ತಿದ್ದವರ ವಂಚನೆ ಐಡಿ ಪರಿಶೀಲಿಸಿದಾಗ ಬಹಿರಂಗಗೊಂಡಿದೆ” ಎಂದು ಬರೆದುಕೊಂಡಿತ್ತು. ಈಗಲೂ

ಬಲಪಂಥೀಯ ಸುದ್ದಿ ಸಂಸ್ಥೆ ‘ಓಪ್‌ ಇಂಡಿಯಾ‘ ಕೂಡ ನವೆಂಬರ್ 24ರಂದು ವೈರಲ್ ವಿಡಿಯೋ ಹಂಚಿಕೊಂಡು “ಸಲ್ಮಾನ್ ಮತ್ತು ಆತನ ಸಹಚರರು ಕೇಸರಿ ಬಟ್ಟೆ ಧರಿಸಿ ಭಿಕ್ಷೆ ಬೇಡುತ್ತಿದ್ದರು. ಗುರುತಿನ ಚೀಟಿಯ ಮೂಲಕ ಅವರ ನಿಜವಾದ ಗುರುತು ಬಯಲಾಗಿದೆ. ಅವರಿಗೆ ಯಾವುದೇ ಶ್ಲೋಕ ಪಠಿಸಲು ಅಥವಾ ಹಿಂದೂ ದೇವರು ಮತ್ತು ದೇವತೆಗಳ ಹೆಸರು ಸರಿಯಾಗಿ ಹೇಳಲು ಸಾಧ್ಯವಾಗಿಲ್ಲ” ಎಂದು ಬರೆದುಕೊಂಡಿತ್ತು.

ಮತ್ತೊಂದು ಬಲಪಂಥೀಯ ಸುದ್ದಿ ಸಂಸ್ಥೆ ಸುದರ್ಶನ್ ನ್ಯೂಸ್ ಕೂಡ ನವೆಂಬರ್ 4ರಂದು ವೈರಲ್ ವಿಡಿಯೋ ಹಂಚಿಕೊಂಡು “ಗುಜರಾತ್‌ನ ಸೂರತ್‌ನಲ್ಲಿ, ‘ಜಿಹಾದಿ’ ಸಲ್ಮಾನ್ ಮತ್ತು ಆತನ ಗ್ಯಾಂಗ್ ಸಾಧುಗಳಂತೆ ಪೋಸು ಕೊಡುತ್ತಾ ಭಿಕ್ಷೆ ಬೇಡುತ್ತಿದ್ದರು… ಕೇಸರಿ ವಸ್ತ್ರಗಳನ್ನು ಧರಿಸಿ ಸಾಧುಗಳಂತೆ ಪೋಸು ಕೊಡುತ್ತಿದ್ದ ಮೂವರು ‘ಜಿಹಾದಿ’ಗಳನ್ನು ಬಂಧಿಸಲಾಗಿದೆ” ಎಂದು ಬರೆದುಕೊಂಡಿತ್ತು.

ನವೆಂಬರ್ 4ರಂದು ಎಕ್ಸ್‌ನಲ್ಲಿ ಫೋಟೋಗಳನ್ನು ಹಂಚಿಕೊಂಡಿದ್ದ ಆರ್‌ಎಸ್‌ಎಸ್‌ ಮುಖವಾಣಿ ಪಾಂಚಜನ್ಯ “ಸಾಧುಗಳ ವೇಷದಲ್ಲಿ ಸಿಕ್ಕಿಬಿದ್ದ ಮುಸ್ಲಿಮರು! ನೀವು ಸಾಧು ಆಗಲು ಬಯಸಿದರೆ, ಏಕೆ ಹಿಂದೂ ಆಗಬಾರದು? ಸಲ್ಮಾನ್ ಎಂಬ ಮುಸ್ಲಿಂ ವ್ಯಕ್ತಿ, ಕೇಸರಿ ವೇಷ ಧರಿಸಿ ಸಾಧುವಿನಂತೆ ಪೋಸು ಕೊಟ್ಟು ಭಿಕ್ಷೆ ಬೇಡುತ್ತಿದ್ದಾಗ ಸಿಕ್ಕಿಬಿದ್ದಿದ್ದಾನೆ. ಈ ಘಟನೆ ಗುಜರಾತ್‌ನ ಸೂರತ್‌ನಲ್ಲಿ ನವೆಂಬರ್ 3,2024 ರಂದು ನಡೆದಿದ್ದು, ನಂತರ ಪೊಲೀಸರು ಅವರನ್ನು ಬಂಧಿಸಿದ್ದಾರೆ. ಇದೇ ಮೊದಲಲ್ಲ-ಸಾಧುಗಳ ವೇಷ ಧರಿಸಿದ ಮುಸ್ಲಿಮರು ಈ ಹಿಂದೆ 16 ಬಾರಿ ಸಿಕ್ಕಿಬಿದ್ದಿದ್ದಾರೆ” ಎಂದು ಬರೆದುಕೊಂಡಿತ್ತು.

ಇನ್ನೂ ಅನೇಕ ಬಲಪಂಥೀಯ ಸುದ್ದಿ ಸಂಸ್ಥೆಗಳು ಮತ್ತು ಸಾಮಾಜಿಕ ಜಾಲತಾಣ ಬಳಕೆದಾರರು ವಿಡಿಯೋ, ಫೋಟೋ ಹಂಚಿಕೊಂಡು ಮುಸ್ಲಿಮರು ಹಿಂದೂ ಸಾಧುಗಳ ವೇಷ ಧರಿಸಿ ಭಿಕ್ಷೆ ಬೇಡುತ್ತಿದ್ದಾಗ ಸಿಕ್ಕಿ ಬಿದ್ದಿದ್ದಾರೆ” ಎಂದು ಬರೆದುಕೊಂಡಿದ್ದರು.

ಫ್ಯಾಕ್ಟ್‌ಚೆಕ್ : ವೈರಲ್ ವಿಡಿಯೋದ ಸತ್ಯಾಸತ್ಯತೆ ತಿಳಿಯಲು ನಾವು ಈ ಬಗ್ಗೆ ವರದಿಗಳನ್ನು ಹುಡುಕಿದ್ದೇವೆ. ಈ ವೇಳೆ ದೈನಿಕ್ ಭಾಸ್ಕರ್ ಗ್ರೂಪ್‌ನ ಗುಜರಾತಿ ದಿನಪತ್ರಿಕೆ ದಿವ್ಯಾ ಭಾಸ್ಕರ್ ನವೆಂಬರ್ 4ರಂದು ವಿಡಿಯೋ ಕುರಿತು ಪ್ರಕಟಿಸಿದ ವರದಿ ಲಭ್ಯವಾಗಿದೆ. ಅದರಲ್ಲಿ “ಪೊಲೀಸ್ ತನಿಖೆಯ ನಂತರ ವಿಡಿಯೋದಲ್ಲಿರುವ ಮೂವರೂ ಸಾಧುಗಳು ಹಿಂದೂಗಳು ಮತ್ತು ಅವರು ಜುನಾಗಢದಿಂದ ಬಂದವರು ಎಂದು ತಿಳಿದು ಬಂದಿದೆ” ಎಂಬುವುದಾಗಿ ಹೇಳಿದೆ.

“ಮೂವರು ಸಾಧುಗಳು ಅನುಮಾನಾಸ್ಪದವಾಗಿ ಕಂಡು ಬಂದಿದ್ದರು. ನಂತರ ಅವರನ್ನು ವಿಚಾರಣೆಗೆ ಒಳಪಡಿಸಲಾಗಿದೆ. ವಿಚಾರಣೆ ವೇಳೆ ಅವರು ನೀಡಿದ ಮಾಹಿತಿ ಆಧರಿಸಿ ಜುನಾಗಢದಲ್ಲೂ ಪರಿಶೀಲನೆ ನಡೆಸಲಾಗಿದೆ. ಈ ವೇಳೆ ಅವರು ನೀಡಿರುವ ಮಾಹಿತಿ ಸರಿಯಾಗಿರುವುದು ಗೊತ್ತಾಗಿದೆ. ಮೂವರು ಸಾಧುಗಳಲ್ಲಿ ಒಬ್ಬರ ಹೆಸರು ‘ಸಲ್ಮಾನಾಥ್’. ಇದನ್ನು ಜನರು ಸಲ್ಮಾನ್ ಎಂದು ತಪ್ಪು ತಿಳಿದುಕೊಂಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ ಎಂದು” ದಿವ್ಯಾ ಭಾಸ್ಕರ್ ವರದಿ ವಿವರಿಸಿದೆ.

ಫ್ಯಾಕ್ಟ್‌ಚೆಕ್ ಸಂಸ್ಥೆ ‘ಸಲ್ಮಾನಾಥ್’ ಅವರ ಚುನಾವಣಾ ಗುರುತಿನ ಚೀಟಿಯನ್ನು ಹಂಚಿಕೊಂಡಿದೆ. ಅದರಲ್ಲಿ ಸಲ್ಮಾನಾಥ್ ಅವರ ತಂದೆ ಸೂರಮನಾಥ್ ಪರ್ಮಾರ್ ಎಂದು ಇದೆ. ಪರ್ಮಾರ್ ಎಂಬ ಉಪನಾಮವು ರಜಪೂತ ಸಮುದಾಯಕ್ಕೆ ಸಂಬಂಧಿಸಿದೆ. ಇವರು ಹೆಚ್ಚಾಗಿ ಉತ್ತರ ಮತ್ತು ಮಧ್ಯ ಭಾರತದಲ್ಲಿ, ವಿಶೇಷವಾಗಿ ರಾಜಸ್ಥಾನ, ಗುಜರಾತ್, ಪಂಜಾಬ್, ಹರಿಯಾಣ, ಉತ್ತರಾಖಂಡ, ಉತ್ತರ ಪ್ರದೇಶ, ಬಿಹಾರ, ಜಾರ್ಖಂಡ್, ಮಧ್ಯಪ್ರದೇಶ ಮತ್ತು ಉತ್ತರ ಮಹಾರಾಷ್ಟ್ರದಲ್ಲಿ ನೆಲೆಗೊಂಡಿದ್ದಾರೆ.

pc : altnews.in

ಸಾಧುಗಳನ್ನು, ವಿಶೇಷವಾಗಿ ಮನೆಯಿಂದ ಮನೆಗೆ ತೆರಳಿ ಭಿಕ್ಷೆ ಬೇಡುವವರಿಗೆ ಮುಸ್ಲಿಮರು ಎಂದು ಆಧಾರರಹಿತ ಅನುಮಾನದ ಮೇಲೆ ಕಿರುಕುಳ ನೀಡುತ್ತಿರುವುದು ಇದೇ ಮೊದಲಲ್ಲ. ಈ ವರ್ಷದ ಜುಲೈನಲ್ಲಿ ಮೀರತ್‌ನಲ್ಲಿ ಮೂವರು ಸಾಧುಗಳ ಗುಂಪಿಗೆ ಮುಸ್ಲಿಮರು ಎಂಬ ಹಣೆಪಟ್ಟಿ ಕಟ್ಟಲಾಗಿತ್ತು. ಅಲೆದಾಡುವ ಸನ್ಯಾಸಿಗಳನ್ನು ಮಕ್ಕಳ ಅಪಹರಣಕಾರರು ಎಂದು ಸುಳ್ಳು ಆರೋಪ ಹೊರಿಸಿದ ಇತರ ನಿದರ್ಶನಗಳೂ ಇವೆ.

ಇದನ್ನೂ ಓದಿ | FACT CHECK : ಅಪಘಾತದ ವಿಡಿಯೋಗೆ ಕೋಮು ಬಣ್ಣ ಬಳಿದ ಬಲಪಂಥೀಯರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: 2ಲಕ್ಷ ಮತದಾರರಲ್ಲಿ ಬಸವನಗುಡಿಯಲ್ಲಿ ಉಳಿಯುವುದು 88 ಸಾವಿರ ಮಾತ್ರಾ?: SIR ಪರಿಷ್ಕರಣೆಯ ಆಘಾತಕಾರಿ ಲೆಕ್ಕಾಚಾರ

2023ರ ಚುನಾವಣೆಯಲ್ಲಿ ಬಸವನಗುಡಿಯಲ್ಲಿ 1.28 ಲಕ್ಷ ಮತಗಳು ಚಲಾಯಿಸಲ್ಪಟ್ಟಿದ್ದವು. ಆದರೆ ಪ್ರಸ್ತುತ SIR ಪ್ರಕ್ರಿಯೆಯಲ್ಲಿ 1.13 ಲಕ್ಷ ಜನರನ್ನು ಹೊರಗಿಟ್ಟು, ಕರಡು ಪಟ್ಟಿಯಲ್ಲಿ ಕೇವಲ 1.35 ಲಕ್ಷ ಮತದಾರರನ್ನು ಮಾತ್ರ ಉಳಿಸಿಕೊಳ್ಳಲಾಗಿದೆ. ಇದರ...

ಕರ್ನಾಟಕ ಎಸ್ಐಆರ್: 43.81 ಲಕ್ಷ ಜನರಿಗೆ SIR ನೋಟಿಸ್: ಗಣ್ಯರ ಹೆಸರು ಸರಿಪಡಿಸುವ ಚುನಾವಣಾ ಆಯೋಗಕ್ಕೆ ಜನ-ಸಾಮಾನ್ಯರ ನೋವು ಕಾಣುತ್ತಿಲ್ಲವೇ?

ಕರ್ನಾಟಕದಲ್ಲಿ SIR ವೇಳೆ 43.81 ಲಕ್ಷ ಮತದಾರರ ಪ್ರಕರಣಗಳಿಗೆ ನೋಟಿಸ್‌ಗಳನ್ನು ಸೃಷ್ಟಿಸಲಾಗಿದ್ದು, ಅವರ ದಾಖಲೆಗಳ ಪರಿಶೀಲನೆಗೆ ಕ್ರಮ ಕೈಗೊಳ್ಳಲಾಗಿದೆ. ಈ ಪೈಕಿ 23.45 ಲಕ್ಷ ಪ್ರಕರಣಗಳಲ್ಲಿ 2002ರ ಮತದಾರರ ಪಟ್ಟಿಯೊಂದಿಗೆ ಮ್ಯಾಪಿಂಗ್ ಆಗದಿರುವುದು...

ಪಿಣರಾಯಿ ವಿಜಯನ್ ವಿರುದ್ಧ ಎಫ್‌ಐಆರ್‌ಗೆ ಇಡಿ ಪತ್ರ: ಕಾನೂನು ಪರಿಶೀಲನೆ ನಡೆಸಲಾಗುವುದು ಎಂದ ಸಿಎಂ ವಿ.ಡಿ. ಸತೀಶನ್

ಆರೋಪಿತ ಸಿಎಂಆರ್‌ಎಲ್ ಲಂಚ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಪಿಐ(ಎಂ) ಹಿರಿಯ ನಾಯಕ ಪಿಣರಾಯಿ ವಿಜಯನ್ ಮತ್ತು ಇತರರ ವಿರುದ್ಧ ಎಫ್‌ಐಆರ್ ದಾಖಲಿಸಲು ಜಾರಿ ನಿರ್ದೇಶನಾಲಯ (ಇಡಿ) ನೀಡಿರುವ ಪತ್ರವನ್ನು ಕಾನೂನುಬದ್ಧವಾಗಿ ಪರಿಶೀಲಿಸಲಾಗುವುದು, ಅದರ ನಂತರ...

‘ಸಿಇಸಿ ಜ್ಞಾನೇಶ್ ಕುಮಾರ್ ಮಗಳು’ : ನೋಯ್ಡಾ ಜಿಲ್ಲಾಧಿಕಾರಿಗೆ ಅಲಹಾಬಾದ್ ಹೈಕೋರ್ಟ್ ತಪರಾಕಿ ಬೆನ್ನಲ್ಲೇ ವಿಪಕ್ಷ ನಾಯಕರ ವಾಗ್ದಾಳಿ

ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ (NSA) ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿನಿಯೊಬ್ಬರನ್ನು ಮುನ್ನೆಚ್ಚರಿಕೆ ಕ್ರಮವಾಗಿ ವಶಕ್ಕೆ ಪಡೆದಿದ್ದಕ್ಕಾಗಿ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ಮಗಳು ಹಾಗೂ ನೋಯ್ಡಾ ಜಿಲ್ಲಾಧಿಕಾರಿ ಮೇಧಾ ರೂಪಮ್ ಅವರನ್ನು...

ಮಲ್ಲಿಕಾರ್ಜುನ ಖರ್ಗೆ ಸಭೆಯ ನಂತರ ‘ಶುದ್ಧೀಕರಣ’ ವಿವಾದ: ಅಪರಿಚಿತರ ವಿರುದ್ಧ ಎಫ್‌ಐಆರ್, ತೀವ್ರ ಆಕ್ರೋಶ ವ್ಯಕ್ತಪಡಿಸಿದ ಕಾಂಗ್ರೆಸ್!

ಉತ್ತರಾಖಂಡದ ಹಲ್ದ್ವಾನಿಯ ರಾಮಲೀಲಾ ಮೈದಾನದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಸಾರ್ವಜನಿಕ ಸಭೆ ನಡೆದ ನಂತರ, ಆ ಮೈದಾನವನ್ನು 'ಶುದ್ಧೀಕರಣ' (ಶುದ್ಧೀಕರಣ ಯಜ್ಞ) ಗೊಳಿಸಿದ ವಿವಾದಾತ್ಮಕ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲ್ದ್ವಾನಿಯ ಕೊತ್ವಾಲಿ...

ದೆಹಲಿ ಮತದಾರರ ಪಟ್ಟಿಗೆ ರಾಘವ್ ಚಡ್ಡಾ ಹೆಸರು ಸೇರ್ಪಡೆ; ಸೂಕ್ತ ಪ್ರಕ್ರಿಯೆ ಅನುಸರಿಸಿಲ್ಲ ಎಂದು ಎಎಪಿ ಆರೋಪ

ರಾಷ್ಟ್ರ ರಾಜಧಾನಿಯ ಮತದಾರರ ಪಟ್ಟಿಯ ಪ್ರಸ್ತುತ ನಡೆಯುತ್ತಿರುವ ವಿಶೇಷ ಪರಿಷ್ಕರಣೆ (ಎಸ್‌ಐಆರ್) ಅಡಿಯಲ್ಲಿ, ಪಂಜಾಬ್‌ನ ಬಿಜೆಪಿ ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರನ್ನು ದೆಹಲಿಯ ಮತದಾರರ ಪಟ್ಟಿಗೆ ಸೇರಿಸಲಾಗಿದೆ ಎಂದು ಚುನಾವಣಾ...

ಮಲ್ಲಿಕಾರ್ಜುನ ಖರ್ಗೆ ಭಾಷಣ ಮಾಡಿದ ವೇದಿಕೆ ‘ಶುದ್ಧೀಕರಣ’ : 29 ದಿನಗಳ ನಂತರ ಎಫ್‌ಐಆರ್ ದಾಖಲು

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ್ದ ಉತ್ತರಾಖಂಡದ ಹಲ್ದ್ವಾನಿಯ ವೇದಿಕೆಯೊಂದರಲ್ಲಿ 'ಶುದ್ಧೀಕರಣ' ನಡೆದ ಇಪ್ಪತ್ತೊಂಬತ್ತು ದಿನಗಳ ನಂತರ, ಪೊಲೀಸರು ಮಂಗಳವಾರ (ಸೆಪ್ಟೆಂಬರ್ 8) ಎಸ್‌ಸಿ/ಎಸ್‌ಟಿ ಕಾಯ್ದೆಯ ನಿಬಂಧನೆಗಳ ಅಡಿಯಲ್ಲಿ...

‘ಪ್ರೊ. ಸಿಎನ್ಆರ್ ರಾವ್‌ ಅವರಿಗೆ ನೋಟಿಸ್ ಕೊಟ್ಟಿಲ್ಲ..’; ಚುನಾವಣಾ ಆಯೋಗದ ಸ್ಪಷ್ಟನೆ

ಕರ್ನಾಟಕದ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ (ಎಸ್‌ಐಆರ್) ವೇಳೆ ಹೆಸರಿನ ಕಾಗುಣಿತದಲ್ಲಿನ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ, ದೇಶದ ಪ್ರಸಿದ್ಧ ವಿಜ್ಞಾನಿಗಳಲ್ಲಿ ಒಬ್ಬರಾದ ಭಾರತರತ್ನ ಪ್ರೊ. ಸಿ.ಎನ್.ಆರ್. ರಾವ್ ಅವರಿಗೆ ತಮ್ಮ ಗುರುತನ್ನು ಸಾಬೀತುಪಡಿಸಲು...

‘ಬಂಗಾಳಿಗಳು ಮೀನು ಇಲ್ಲದೆ ಬದುಕಲು ಸಾಧ್ಯವಿಲ್ಲ’; ಆಹಾರ ಪದ್ಧತಿ ನಿರ್ಧಾರ ಬಿಜೆಪಿ ಕೆಲಸವಲ್ಲ: ಬಿಜೆಪಿ ಮುಖ್ಯಸ್ಥ ಸಮಿಕ್ ಭಟ್ಟಾಚಾರ್ಯ 

ಕೊಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಕೆಲವೇ ತಿಂಗಳುಗಳಲ್ಲಿ ದುರ್ಗಾ ಪೂಜೆ ಮತ್ತು ನವರಾತ್ರಿ ಆಚರಣೆಗಳ ಸಂದರ್ಭದಲ್ಲಿ ಆಹಾರ ಪದ್ಧತಿಯ ಕುರಿತು ಕೆಲವು ಧಾರ್ಮಿಕ ನಾಯಕರು ಹಾಗೂ ವಿಶ್ವ ಹಿಂದೂ...

ಮತದಾರ ಇರುವುದು ವಿದೇಶದಲ್ಲಿ, ಆದರೆ ವಿಚಾರಣೆ ನಡೆಯುತ್ತಿರುವುದು ಇಲ್ಲಿ: ಕರ್ನಾಟಕ SIR ತಂದಿಟ್ಟ ಧರ್ಮಸಂಕಟ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ, ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿದ್ದ ಅನೇಕ ಅನಿವಾಸಿ ಕನ್ನಡಿಗರಿಗೆ ಬಿಸಿ ತುಪ್ಪವಾಗಿ ಪರಿಣಮಿಸಿದೆ. ಹೆಸರಿನಲ್ಲಿನ ವ್ಯತ್ಯಾಸ, ವಯಸ್ಸಿನ ವ್ಯತ್ಯಾಸ...