Homeಫ್ಯಾಕ್ಟ್‌ಚೆಕ್FACT CHECK : ಭಾರತದ್ದು ಎಂದು ಪೆರು ರೈಲಿನ ವಿಡಿಯೋ ಹಂಚಿಕೊಂಡ ಸಚಿವ ಅಶ್ವಿನಿ ವೈಷ್ಣವ್

FACT CHECK : ಭಾರತದ್ದು ಎಂದು ಪೆರು ರೈಲಿನ ವಿಡಿಯೋ ಹಂಚಿಕೊಂಡ ಸಚಿವ ಅಶ್ವಿನಿ ವೈಷ್ಣವ್

- Advertisement -
- Advertisement -

ಸೆಪ್ಟೆಂಬರ್ 27, ವಿಶ್ವ ಪ್ರವಾಸೋದ್ಯಮ ದಿನದಂದು ಕೇಂದ್ರ ರೈಲ್ವೆ ಖಾತೆ ಸಚಿವ ಅಶ್ವಿನಿ ವೈಷ್ಣವ್ ಅವರು ತನ್ನ ಎಕ್ಸ್ ಖಾತೆಯಲ್ಲಿ ವಿಡಿಯೋವೊಂದನ್ನು ಹಂಚಿಕೊಂಡಿದ್ದರು. “ವಂದೇ ಭಾರತ್, ಅಮೃತ್ ಭಾರತ್ ಮತ್ತು ನಮೋ ಭಾರತ್ ರೈಲುಗಳ ತ್ರಿವೇಣಿ” ಎಂದು ವಿಡಿಯೋ ಜೊತೆ ಬರೆದುಕೊಂಡಿದ್ದರು. ವಿಡಿಯೋದಲ್ಲಿ ವಿಸ್ಟಾ ಡೋಮ್ ರೈಲೊಂದನ್ನು ತೋರಿಸಲಾಗಿತ್ತು. ನರೇಂದ್ರ ಮೋದಿ ನೇತೃತ್ವದ ಸರ್ಕಾರ ರೈಲ್ವೆ ಇಲಾಖೆಯನ್ನು ಅಭಿವೃದ್ದಿ ಮಾಡುತ್ತಿದೆ ಎಂಬ ಸಂದೇಶವನ್ನು ವಿಡಿಯೋ ಹೊಂದಿತ್ತು.

ಸಚಿವರು ವಿಡಿಯೋ ಪೋಸ್ಟ್ ಮಾಡಿದ್ದ ಸ್ವಲ್ಪ ಹೊತ್ತಿನಲ್ಲೇ ಅದನ್ನು ಡಿಲಿಟ್ ಮಾಡಿದ್ದರು. ಅಷ್ಟರದಲ್ಲಿ ಅದನ್ನು ಸಾವಿರಾರು ಜನರು ನೋಡಿ ಆಗಿತ್ತು. ನಾವು ಕೂಡ ವಿಡಿಯೋ ನೋಡಿದ್ದೆವು. ವಿಡಿಯೋದಲ್ಲಿ “ವಿಸ್ಟಾ ಡೋಮ್’ ಎಂದು ತೋರಿಸಲಾದ ರೈಲಿನ ಮೇಲೆ ‘ಪೆರು ರೈಲ್’ ಎಂದು ಬರೆದಿರುವುದು ನಮ್ಮ ಗಮನ ಸೆಳೆದಿತ್ತು. ಹಾಗಾಗಿ, ವಿಡಿಯೋದಲ್ಲಿರುವ ರೈಲಿನ ಬಗ್ಗೆ ನಾವು ಮಾಹಿತಿ ಹುಡುಕಿದ್ದೇವೆ.

ಫ್ಯಾಕ್ಟ್‌ಚೆಕ್ : ಗೂಗಲ್ ರಿವರ್ಸ್ ಇಮೇಜ್‌ನಲ್ಲಿ ವಿಡಿಯೋ ಸ್ಕ್ರೀನ್ ಶಾಟ್ ಹಾಕಿ ಸರ್ಚ್ ಮಾಡಿದಾಗ
DrGariS ಎಂಬ ಯೂಟ್ಯೂಬ್ ಚಾನೆಲ್‌ನಲ್ಲಿ ಮಾರ್ಚ್ 5,2020ರಂದು “PERU RAIL Train to Machu Picchu service on Vistadome class!” ಎಂಬ ಶೀರ್ಷಿಕೆಯಲ್ಲಿ ಅಪ್ಲೋಡ್ ಮಾಡಿದ ವಿಡಿಯೋ ದೊರೆತಿದೆ.

ವಿಡಿಯೋ ನೋಡಿದಾಗ ಅದರಲ್ಲಿರುವ ಪೆರು ರೈಲು ಮತ್ತು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಹಂಚಿಕೊಂಡಿದ್ದ ವಿಡಿಯೋದಲ್ಲಿದ್ದ ರೈಲು ಒಂದೇ ಎಂದು ನಮಗೆ ಗೊತ್ತಾಗಿದೆ. ಯೂಟ್ಯೂಬ್‌ ಚಾನೆಲ್‌ನಲ್ಲಿ ಇರುವ ರೈಲಿನ ಮೇಲೆ ಬರೆದಿದಿರುವ 534 ಎಂಬ ಸಂಖ್ಯೆಯನ್ನೇ ಸಚಿವರು ಹಂಚಿಕೊಂಡಿದ್ದ ರೈಲಿನ ಮೇಲೂ ಬರೆಯಲಾಗಿತ್ತು. ಹಾಗಾಗಿ, ಸಚಿವರು ವಿಡಿಯೋ ಹಂಚಿಕೊಂಡಿರುವುದು ಭಾರತದ ರೈಲಿನದ್ದಲ್ಲ, ಪೆರು ರೈಲಿನದ್ದು ಎಂದು ನಮಗೆ ಖಚಿತವಾಗಿದೆ.

ಸಚಿವರು ಹಂಚಿಕೊಂಡಿದ್ದ ವಿಡಿಯೋದಲ್ಲಿ ವಿಸ್ಟಾ ಡೋಮ್ ರೈಲಿನ ಒಳ ಭಾಗವನ್ನೂ ತೋರಿಸಲಾಗಿತ್ತು. ಆ ದೃಶ್ಯಗಳ ಕುರಿತು ನಾವು ಪರಿಶೀಲನೆ ನಡೆಸಿದಾಗ, ಅದು PeruRail ಎಂಬ ಯೂಟ್ಯೂಬ್ ಚಾನೆಲ್‌ನಲ್ಲಿ ಅಕ್ಟೋಬರ್ 8, 2019ರಂದು ಹಂಚಿಕೊಂಡಿರುವ ವಿಡಿಯೋದ ತುಣುಕು ಎಂದು ಗೊತ್ತಾಗಿದೆ.

ಸಚಿವ ವೈಷ್ಣವ್ ಅವರು ಹಂಚಿಕೊಂಡಿದ್ದ ವಿಡಿಯೋದಲ್ಲಿ ಪೆರು ರೈಲಿನ ದೃಶ್ಯಗಳಿರುವುದನ್ನು ಕಂಡು ಅನೇಕರು ವ್ಯಂಗ್ಯವಾಡಿದ್ದರು. ಸಚಿವರ ಕಾಲೆಳೆದಿದ್ದರು. ಕೇಂದ್ರ ಸರ್ಕಾರದ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ್ದರು. ಈ ವಿಚಾರ ಗೊತ್ತಾಗುತ್ತಿದ್ದಂತೆ ವಿಡಿಯೋ ಡಿಲಿಟ್ ಮಾಡಿದ ಸಚಿವರು, ಸೆಪ್ಟೆಂಬರ್ 28ರಂದೇ ಭಾರತೀಯ ವಿಸ್ಟಾಡೋಮ್ ರೈಲುಗಳ ತುಣುಕುಗಳಿರುವ ಹೊಸ ವಿಡಿಯೋವನ್ನು ಹಂಚಿಕೊಂಡಿದ್ದರು.

ಇದನ್ನೂ ಓದಿ : FACT CHECK : ಮೊಬೈಲ್ ಕಿತ್ತುಕೊಂಡ ತಾಯಿಯ ತಲೆಗೆ ಬ್ಯಾಟ್‌ನಿಂದ ಹೊಡೆದ ಮಗ..ವೈರಲ್ ವಿಡಿಯೋದ ಅಸಲಿಯತ್ತೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ. ಬಂಗಾಳ | ಮತದಾರರ ಪಟ್ಟಿಯಿಂದ ಕೈಬಿಟ್ಟಿದ್ದಕ್ಕೆ ಸೂಕ್ತ ಕಾರಣ ನೀಡದ ಚುನಾವಣಾ ಆಯೋಗ : ಕಾಂಗ್ರೆಸ್ ಅಭ್ಯರ್ಥಿ ಹೆಸರು ಮರು ಸೇರ್ಪಡೆ

ಪಶ್ಚಿಮ ಬಂಗಾಳದ ಮತದಾರರ ಪಟ್ಟಿಯಿಂದ ಹೆಸರು ಕೈಬಿಡಲ್ಪಟ್ಟವರ ಅರ್ಜಿಗಳ ವಿಚಾರಣೆಗಾಗಿ ಕೋಲ್ಕತ್ತಾದಲ್ಲಿ ಸ್ಥಾಪಿಸಲಾದ ಮೇಲ್ಮನವಿ ನ್ಯಾಯಮಂಡಳಿಯು, ಮುಂಬರುವ ವಿಧಾನಸಭಾ ಚುನಾವಣೆಯ ಫರಕ್ಕಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮೊತಾಬ್ ಶೇಖ್ ಅವರ ಹೆಸರನ್ನು ಭಾನುವಾರ...

ತೂತುಕುಡಿ ಸಾತನ್‌ಕುಳಂ ತಂದೆ-ಮಗನ ಕಸ್ಟಡಿ ಸಾವು ಪ್ರಕರಣ : ಅಪರಾಧಿಗಳಾದ ಎಲ್ಲಾ 9 ಪೊಲೀಸರಿಗೆ ಮರಣದಂಡನೆ ವಿಧಿಸಿದ ನ್ಯಾಯಾಲಯ

ತಮಿಳುನಾಡಿನ ತೂತುಕುಡಿ ಜಿಲ್ಲೆಯ ಸಾತನ್‌ಕುಳಂ ಪೊಲೀಸ್ ಠಾಣೆಯಲ್ಲಿ ಕೋವಿಡ್-19 ಲಾಕ್‌ಡೌನ್ ಸಮಯದಲ್ಲಿ ಸಂಭವಿಸಿದ, ವ್ಯಾಪಾರಿ ಪಿ. ಜಯರಾಜ್ (58) ಮತ್ತು ಅವರ ಮಗ ಜೆ. ಬೆನಿಕ್ಸ್ (31) ಅವರ ಕಸ್ಟಡಿ ಸಾವು ಪ್ರಕರಣದ...

ದಾವಣಗೆರೆ ದಕ್ಷಿಣ ಉಪ-ಸಮರ: ಶಾಮನೂರು ಸಾಮ್ರಾಜ್ಯದಲ್ಲಿ ಅಹಿಂದ ಬಂಡಾಯ!

ತುಂಗಭದ್ರಾ ನದಿ ಪರ‍್ವಕ್ಕೆ ಎತ್ತರದ ಪ್ರದೇಶದಲ್ಲಿರುವ ದಾವಣಗೆರೆ ಮಧ್ಯ ಕರ್ನಾಟಕದ ಪ್ರಮುಖ ವಾಣಿಜ್ಯ ನಗರಿ. ಬೆಣ್ಣೆ ದೋಸೆಯ ಘಮಲಿನ ದಾವಣಗೆರೆಯ ರಾಜಕಾರಣ ಮಾತ್ರ ಮಿರ್ಚಿ-ಮಂಡಕ್ಕಿಯ ಖಡಕ್ ಖಾರಾ ಕುರುಕುಲಿನಂತೆ! ದಾವಣಗೆರೆ ಮತ್ತದರ ಸುತಮುತ್ತಲಿನ...

‘Dr. Nimo Yadav’, ‘Nehr Who’ ಎಕ್ಸ್‌ ಖಾತೆಗಳನ್ನು ತಕ್ಷಣ ಮರುಸ್ಥಾಪಿಸಲು ದೆಹಲಿ ಹೈಕೋರ್ಟ್ ಆದೇಶ

'Dr. Nimo Yadav' ಮತ್ತು 'Nehr Who' ಎಂಬ ಎರಡು ಪರೋಡಿ ಎಕ್ಸ್‌ ಖಾತೆಗಳನ್ನು ತಕ್ಷಣ ಮರು ಸ್ಥಾಪಿಸುವಂತೆ ದೆಹಲಿ ಹೈಕೋರ್ಟ್ ಸೋಮವಾರ (ಏ.6) ಎಕ್ಸ್ ಸಂಸ್ಥೆಗೆ (X Corp) ಆದೇಶಿಸಿದೆ. 'Dr....

ಬಂಗಾಳ| ಮತದಾರರ ಪಟ್ಟಿಯಿಂದ ಹೆಸರು ತೆಗೆದ ಬಳಿಕ ಸಾವಿಗೆ ಶರಣಾದ ಮುಸ್ಲಿಂ ವ್ಯಕ್ತಿ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ನಂತರ ಪಶ್ಚಿಮ ಬಂಗಾಳದಲ್ಲಿ ಮತದಾರರ ಪಟ್ಟಿಯಿಂದ ತನ್ನ ಹೆಸರನ್ನು ತೆಗೆದುಹಾಕಿದ್ದರಿಂದ ಮನನೊಂದ ಮುಸ್ಲಿಂ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಮೃತನನ್ನು ಬಿರ್ಭುಮ್...

‘ಯೋಜನೆಯು ಕೇರಳಕ್ಕೆ ಜೀವನಾಡಿಯಾಗಲಿದೆ’: ವಯನಾಡ್ ಸುರಂಗ ಮಾರ್ಗ ವಿರುದ್ದದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಕೇರಳದ ಕೋಝಿಕ್ಕೋಡ್-ವಯನಾಡ್ ಸುರಂಗ ಮಾರ್ಗ ನಿರ್ಮಾಣಕ್ಕೆ ನೀಡಲಾದ ಪರಿಸರ ಅನುಮತಿ (ಇಸಿ) ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ (ಏ.6) ವಜಾಗೊಳಿಸಿದೆ. ಸುರಂಗ ನಿರ್ಮಾಣದ ಸಮಯದಲ್ಲಿ ಪರಿಸರ ಅನುಮತಿಯ ಷರತ್ತುಗಳ ಉಲ್ಲಂಘನೆಯಾದರೆ, ಅರ್ಜಿದಾರರು...

651 ಕೋಟಿ ರೂ. ಮೌಲ್ಯದ ನಗದು, ಮದ್ಯ, ಮಾದಕ ವಸ್ತು ವಶಪಡಿಸಿಕೊಂಡ ಚುನಾವಣಾ ಆಯೋಗ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದಲ್ಲಿ ನಡೆಯುತ್ತಿರುವ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಅಧಿಕಾರಿಗಳು 651.51 ಕೋಟಿ ರೂ.ಗೂ ಹೆಚ್ಚು ಮೌಲ್ಯದ ನಗದು, ಮದ್ಯ, ಮಾದಕ ವಸ್ತುಗಳು ಮತ್ತು ಇತರ ಉಚಿತ ವಸ್ತುಗಳನ್ನು...

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ಬಾಲಕಿಯನ್ನು ಸರಪಳಿಯಿಂದ ಕಟ್ಟಿ ಥಳಿಸಿದ ಮಾಜಿ ಸೇನಾಧಿಕಾರಿ

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ನಾಲ್ಕು ವರ್ಷದ ಬಾಲಕಿಯನ್ನು ನಿವೃತ್ತ ಸೇನಾಧಿಕಾರಿಯೊಬ್ಬರು ಸರಪಳಿಯಿಂದ ಕಟ್ಟಿಹಾಕಿ ಕ್ರೂರವಾಗಿ ಥಳಿಸಿರುವ ಆಘಾತಕಾರಿ ಘಟನೆ ಹಿಮಾಚಲ ಪ್ರದೇಶದ ಉನಾ ಜಿಲ್ಲೆಯ ಬೆಹಡಾಲ ಗ್ರಾಮದಲ್ಲಿ ನಡೆದಿದೆ. ಬಾಲಕಿಯು ನಿವೃತ್ತ ಸೇನಾಧಿಕಾರಿಯ ತೋಟದ...

ಆಂಧ್ರ ವಿಧಾನಸಭಾ ಸ್ಪೀಕರ್ ಅಯ್ಯಣ್ಣ ಪಾತ್ರುಡು ಅವರಿಂದ ದಲಿತ ವ್ಯಕ್ತಿಗೆ ಕಪಾಳಮೋಕ್ಷ: ವೈಎಸ್‌ಆರ್‌ಸಿಪಿ ವಾಗ್ದಾಳಿ

ಏಪ್ರಿಲ್ 3 ರ ಗುರುವಾರ ನರಸಿಪಟ್ಟಣದಲ್ಲಿ ದಲಿತ ವ್ಯಕ್ತಿಯೊಬ್ಬರಿಗೆ ಕಪಾಳಮೋಕ್ಷ ಮಾಡಿದ್ದಕ್ಕಾಗಿ ಆಂಧ್ರಪ್ರದೇಶ ವಿಧಾನಸಭಾ ಸ್ಪೀಕರ್ ಮತ್ತು ತೆಲುಗು ದೇಶಂ ಪಕ್ಷದ (ಟಿಡಿಪಿ) ನಾಯಕ ಅಯ್ಯಣ್ಣ ಪಾತ್ರುಡು ಅವರ ವಿರುದ್ಧ ವೈಎಸ್‌ಆರ್ ಕಾಂಗ್ರೆಸ್...

ಪ. ಬಂಗಾಳ | ಬಿಜೆಪಿ ಪ್ರಚಾರ ಸಾಮಗ್ರಿ ಸಜ್ಜುಗೊಳಿಸಿದ ವಿಡಿಯೋ ವೈರಲ್ : ಚುನಾವಣಾ ಕರ್ತವ್ಯದಲ್ಲಿದ್ದ ಅಧಿಕಾರಿ ಅಮಾನತು

ಬಿಜೆಪಿ ಪ್ರಚಾರ ಸಾಮಗ್ರಿಗಳನ್ನು ತಯಾರಿಸಲು ಸಹಾಯ ಮಾಡಿದ ಆರೋಪದ ಮೇಲೆ ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯ ಪಾಣಿಹಟಿ ವಿಧಾನಸಭಾ ಕ್ಷೇತ್ರದ ಅಧಿಕಾರಿಯೊಬ್ಬರನ್ನು ಚುನಾವಣಾ ಆಯೋಗ ಅಮಾನತುಗೊಳಿಸಿದೆ ಎಂದು ದಿ ಇಂಡಿಯನ್...