Homeಫ್ಯಾಕ್ಟ್‌ಚೆಕ್FACT CHECK : ಕಾಂಗ್ರೆಸ್ ಪ್ರಣಾಳಿಕೆ ಸರ್ಕಾರಿ ಟೆಂಡರ್‌ಗಳಲ್ಲಿ ಮುಸ್ಲಿಮರಿಗೆ ಮೀಸಲಾತಿ ಭರವಸೆ ನೀಡಿದೆ ಎಂಬ...

FACT CHECK : ಕಾಂಗ್ರೆಸ್ ಪ್ರಣಾಳಿಕೆ ಸರ್ಕಾರಿ ಟೆಂಡರ್‌ಗಳಲ್ಲಿ ಮುಸ್ಲಿಮರಿಗೆ ಮೀಸಲಾತಿ ಭರವಸೆ ನೀಡಿದೆ ಎಂಬ ಮೋದಿ ಹೇಳಿಕೆ ಸುಳ್ಳು

- Advertisement -
- Advertisement -

ಮೇ 2,2024ರಂದು ಗುಜರಾತ್‌ನ ಸುರೇಂದ್ರನಗರದಲ್ಲಿ ಚುನಾವಣಾ ರ್‍ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ” ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ಸರ್ಕಾರಿ ಟೆಂಡರ್‌ಗಳಲ್ಲಿ ಮುಸ್ಲಿಮರಿಗೆ ಮೀಸಲಾತಿ ಕಲ್ಪಿಸುವ ಭರವಸೆ ನೀಡಿದೆ” ಎಂದಿದ್ದಾರೆ.

“ಕಾಂಗ್ರೆಸ್‌ನ ಪ್ರಣಾಳಿಕೆ ಸಂಪೂರ್ಣ ತುಷ್ಠೀಕರಣದಿಂದ ಕೂಡಿದೆ. ಅದರಲ್ಲಿ, ಅಧಿಕಾರಕ್ಕೆ ಬಂದರೆ ಅಲ್ಪ ಸಂಖ್ಯಾತರಿಗೆ ಅಥವಾ ಮುಸ್ಲಿಮರಿಗೆ ವಿಶೇಷ ಮೀಸಲಾತಿ ಕಲ್ಪಿಸುವ ಆಘಾತಕಾರಿ ಭರವಸೆಯನ್ನು ಕಾಂಗ್ರೆಸ್ ಲಿಖಿತವಾಗಿ ನೀಡಿದೆ” ಎಂದು ಪ್ರಧಾನಿ ಹೇಳಿದ್ದಾರೆ.

ಪ್ರಧಾನಿಯ ಅಧಿಕೃತ ಯೂಟ್ಯೂಬ್ ಚಾನೆಲ್‌ನಲ್ಲಿ ಅಪ್ಲೋಡ್ ಮಾಡಲಾದ ಸುರೇಂದ್ರನಗರದ ಕಾರ್ಯಕ್ರಮದ ವಿಡಿಯೋದಲ್ಲಿ 30 ನಿಮಿಷ 32 ಸೆಕೆಂಡ್‌ನಿಂದ ಮೇಲಿನ ಹೇಳಿಕೆಯನ್ನು ಆಲಿಸಬಹುದು.

ಫ್ಯಾಕ್ಟ್‌ಚೆಕ್ : ಪ್ರಧಾನಿಯ ಹೇಳಿಕೆಯ ಸತ್ಯಾಸತ್ಯತೆ ಪರಿಶೀಲಿಸಲು ನಾವು ಕಾಂಗ್ರೆಸ್‌ನ ಲೋಕಸಭೆ ಚುನಾವಣೆಯ ಪ್ರಣಾಳಿಕೆಯನ್ನು ಪರಿಶೀಲಿಸಿದ್ದೇವೆ. ಪ್ರಣಾಳಿಕೆಯಲ್ಲಿ ಎಲ್ಲೂ ‘ಸರ್ಕಾರಿ ಟೆಂಡರ್‌ಗಳಲ್ಲಿ ಮುಸ್ಲಿಮರಿಗೆ ಮೀಸಲಾತಿ’ ನೀಡುತ್ತೇವೆ ಎಂದು ಕಾಂಗ್ರೆಸ್ ಭರವಸೆ ನೀಡಿರುವುದು ನಮಗೆ ಕಂಡು ಬಂದಿಲ್ಲ.

ಒಟ್ಟು 48 ಪುಟಗಳ ಕಾಂಗ್ರೆಸ್‌ ಪ್ರಣಾಳಿಕೆಯಲ್ಲಿ ಎರಡು ಕಡೆ ಸರ್ಕಾರಿ ಕಾಮಗಾರಿಗಳ ಟೆಂಡರ್‌ ಅಥವಾ ಕಾಂಟ್ರಾಕ್ಟ್ ಬಗ್ಗೆ ಉಲ್ಲೇಖಿಸಲಾಗಿದೆ.

1. ಪ್ರಣಾಳಿಕೆಯಲ್ಲಿ ‘ಈಕ್ವಿಟಿ (ಸಮಾನತೆ)’ ಎಂಬ ವಿಭಾಗದ ( ಪುಟ ಸಂಖ್ಯೆ 6) 8 ನೇ ಪ್ಯಾರಾದಲ್ಲಿ “ಎಸ್‌ಸಿ, ಎಸ್‌ಟಿ ಸಮುದಾಯಗಳಿಗೆ ಹೆಚ್ಚಿನ ಗುತ್ತಿಗೆಗಳು ಸಿಗುವಂತೆ ಮಾಡಲು ಸಾರ್ವಜನಿಕ ಗುತ್ತಿಗೆ ಪ್ರಕ್ರಿಯೆಯ ವ್ಯಾಪ್ತಿ ವಿಸ್ತರಿಸುತ್ತೇವೆ” ಎಂದು ಹೇಳಲಾಗಿದೆ.

2. ಪ್ರಣಾಳಿಕೆಯ ‘ಧಾರ್ಮಿಕ ಮತ್ತು ಭಾಷಾ ಅಲ್ಪ ಸಂಖ್ಯಾತರು’ ಎಂಬ ವಿಭಾಗದ (ಪುಟ ಸಂಖ್ಯೆ 7-8) 6ನೇ ಪ್ಯಾರಾದಲ್ಲಿ “ಶಿಕ್ಷಣ, ಆರೋಗ್ಯ, ಸರ್ಕಾರಿ ಉದ್ಯೋಗ, ಸರ್ಕಾರಿ ಕಾಮಗಾರಿ ಒಪ್ಪಂದಗಳು, ಕೌಶಲ್ಯ ಅಭಿವೃದ್ದಿ, ಕ್ರೀಡೆ ಮತ್ತು ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಅಲ್ಪ ಸಂಖ್ಯಾತರು ಯಾವುದೇ ಬೇಧವಿಲ್ಲದೆ ತಮ್ಮ ಪಾಲು ಪಡೆಯುವುದನ್ನು ನಾವು ಖಚಿತಪಡಿಸುತ್ತೇವೆ” ಎಂದು ಹೇಳಲಾಗಿದೆ.

ಮೇಲ್ಗಡೆ ಉಲ್ಲೇಖಿಸಿದ ಎರಡು ಕಡೆ ಹೊರತುಪಡಿಸಿ ಎಲ್ಲೂ ಸರ್ಕಾರಿ ಕಾಮಗಾರಿಗಳ ಕುರಿತು ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ ಪ್ರಸ್ತಾಪಿಸಿಲ್ಲ. ಗಮನಾರ್ಹವಾಗಿ, ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲಿ ಎಲ್ಲೂ ‘ಮುಸ್ಲಿಂ’ ಎಂಬ ಪದವನ್ನು ಉಲ್ಲೇಖಿಸಿಲ್ಲ. ಅನೇಕ ಕಡೆಗಳಲ್ಲಿ ಅಲ್ಪ ಸಂಖ್ಯಾತರು ಎಂದಿದೆ. ಭಾರತದಲ್ಲಿ ಅಲ್ಪ ಸಂಖ್ಯಾತರು ಎಂದರೆ ಕೇವಲ ಮುಸ್ಲಿಮರಲ್ಲ. ಕ್ರೈಸ್ತ, ಬೌದ್ಧ, ಜೈನ ಮತ್ತು ಪಾರ್ಸಿಗಳೂ ಕೂಡ ಈ ದೇಶದ ಅಧಿಕೃತ ಅಲ್ಪ ಸಂಖ್ಯಾತರು.

ಕಾಂಗ್ರೆಸ್‌ನ ಸಂಪೂರ್ಣ ಪ್ರಣಾಳಿಕೆ ಇಲ್ಲಿದೆ  

ಹಾಗಾಗಿ, ಪ್ರಧಾನಿ ನರೇಂದ್ರ ಮೋದಿ ಭಾಷಣದಲ್ಲಿ ಹೇಳಿರುವುದು ಹಸಿ ಸುಳ್ಳು ಎಂದು ಖಚಿತಪಡಿಸಬಹುದು.

ಪ್ರಧಾನಿ ಇತ್ತೀಚಿನ ಭಾಷಣಗಳಲ್ಲಿ ಅನೇಕ ಬಾರಿ ಕಾಂಗ್ರೆಸ್‌ ಮುಸ್ಲಿಮರಿಗೆ ಮೀಸಲಾತಿ ಕೊಟ್ಟಿದೆ ಎಂಬ ಆರೋಪಗಳನ್ನು ಮಾಡುತ್ತಿದ್ದಾರೆ. ಮುಸ್ಲಿಂ ಮೀಸಲಾತಿ ಎಂಬುವುದನ್ನು ಭಯೋತ್ಪಾದನಾ ಕೃತ್ಯದಂತೆ ಬಿಂಬಿಸುತ್ತಿದ್ದಾರೆ. ಆದರೆ, ಭಾರತದಲ್ಲಿ ಮುಸ್ಲಿಮರಿಗೆ ಮೀಸಲಾತಿ ನೀಡಿರುವುದು ಸಂವಿಧಾನ ಬದ್ದವಾಗಿ ಆಗಿದೆ. ಎಲ್ಲೂ ಸಂವಿಧಾನ ಬಾಹಿರವಾಗಿ ಮುಸ್ಲಿಮರಿಗೆ ಮೀಸಲಾತಿ ನೀಡಿಲ್ಲ.

ಮುಸ್ಲಿಂ ಮೀಸಲಾತಿ ಕುರಿತು ಇತ್ತೀಚೆಗೆ ಪ್ರಧಾನಿ ಮೋದಿ ಸರಣಿ ಸುಳ್ಳುಗಳನ್ನು ಹೇಳುತ್ತಿದ್ದಾರೆ. ಈ ಕುರಿತು ಸತ್ಯಾಸತ್ಯತೆ ಪರಿಶೀಲನೆ ನಡೆಸಿರುವ ‘ನಾನುಗೌರಿ.ಕಾಂ‘ ಸಾಕ್ಷಿ ಸಹಿತ ಸಂಪೂರ್ಣ ವಿವರಣೆಯೊಂದಿಗೆ ಸುದ್ದಿ ಪ್ರಕಟಿಸಿದೆ. ಅವುಗಳ ಲಿಂಕ್ ಕೆಳಗೆ ಕೊಡಲಾಗಿದೆ.

FACT CHECK : ಅಧಿಕಾರಕ್ಕೆ ಬಂದರೆ ‘ಪಿತ್ರಾರ್ಜಿತ ಆಸ್ತಿ ತೆರಿಗೆ’ ಜಾರಿಗೊಳಿಸುವುದಾಗಿ ಕಾಂಗ್ರೆಸ್ ಹೇಳಿಲ್ಲ

FACT CHECK : ಆಂಧ್ರದಲ್ಲಿ ಎಸ್‌ಸಿ, ಎಸ್‌ಟಿ ಮೀಸಲಾತಿ ಕಡಿತಗೊಳಿಸಿ ಮುಸ್ಲಿಮರಿಗೆ ನೀಡಲಾಗಿದೆ ಎಂಬ ಮೋದಿ ಹೇಳಿಕೆ ಸುಳ್ಳು

FACT CHECK: ಕರ್ನಾಟಕದಲ್ಲಿ ಎಸ್‌ಸಿ, ಎಸ್‌ಟಿಗಳಿಂದ ಕಿತ್ತುಕೊಂಡು ಮುಸ್ಲಿಮರಿಗೆ ನೀಡಿದ್ದ ಮೀಸಲಾತಿ ರದ್ದುಪಡಿಸಿದ್ದೇವೆ ಎಂಬ ಮೋದಿ ಹೇಳಿಕೆ ಸುಳ್ಳು

FACT CHECK: ‘ದೇಶದ ಸಂಪತ್ತಿನಲ್ಲಿ ಮೊದಲ ಅಧಿಕಾರ ಮುಸ್ಲಿಮರಿಗೆ’ ಎಂದು ಮನಮೋಹನ್ ಸಿಂಗ್ ಹೇಳಿಲ್ಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...