HomeದಿಟನಾಗರFACT CHECK : ಬಿಜೆಪಿ ಮಾತ್ರ 272ಕ್ಕಿಂತ ಹೆಚ್ಚು ಸ್ಥಾನಗಳಲ್ಲಿ ಸ್ಪರ್ಧಿಸಿದೆ ಎಂಬ ಮೋದಿ ಹೇಳಿಕೆ...

FACT CHECK : ಬಿಜೆಪಿ ಮಾತ್ರ 272ಕ್ಕಿಂತ ಹೆಚ್ಚು ಸ್ಥಾನಗಳಲ್ಲಿ ಸ್ಪರ್ಧಿಸಿದೆ ಎಂಬ ಮೋದಿ ಹೇಳಿಕೆ ಸುಳ್ಳು

- Advertisement -
- Advertisement -

ಮೇ 1, 2024 ರಂದು ಗುಜರಾತ್‌ನ ಬನಸ್ಕಾಂತದಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ್ದ ಪ್ರಧಾನಿ ನರೇಂದ್ರ ಮೋದಿ, “ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ 272ಕ್ಕಿಂತ ಹೆಚ್ಚು ಸ್ಥಾನಗಳಲ್ಲಿ ಸ್ಪರ್ಧಿಸಿದ ಏಕೈಕ ಪಕ್ಷ ಬಿಜೆಪಿ” ಎಂದು ಹೇಳಿದ್ದರು.

ಲೋಕಸಭೆಯು 545 ಸ್ಥಾನಗಳನ್ನು ಹೊಂದಿದ್ದು, ಈ ಪೈಕಿ 543 ಸ್ಥಾನಗಳಿಗೆ ಚುನಾವಣೆ ನಡೆಯುತ್ತಿದೆ. ಯಾವುದೇ ಪಕ್ಷ ಸರ್ಕಾರ ರಚಿಸಲು 272 ಸ್ಥಾನಗಳ ಬಹುಮತ ಬೇಕಿದೆ.

ಗುಜರಾತಿ ಭಾಷೆಯಲ್ಲಿ ಮಾತನಾಡಿದ್ದ ಮೋದಿ, “ಯಾವುದೇ ಪಕ್ಷ ಕೇಂದ್ರದಲ್ಲಿ ಸರ್ಕಾರ ರಚಿಸಲು ಕನಿಷ್ಠ 272 ಸ್ಥಾನಗಳ ಅಗತ್ಯವಿದೆ. ಬಿಜೆಪಿ ಹೊರತುಪಡಿಸಿ, ದೇಶದ ಯಾವುದೇ ರಾಜಕೀಯ ಪಕ್ಷಗಳು 272ಕ್ಕಿಂತ ಹೆಚ್ಚು ಸ್ಥಾನಗಳಲ್ಲಿ ಸ್ಪರ್ಧಿಸಿಲ್ಲ. ಕಾಂಗ್ರೆಸ್‌ನವರು ಸರ್ಕಾರ ರಚಿಸುವುದಾಗಿ ಹೇಳುತ್ತಿದ್ದಾರೆ. ದೆಹಲಿಯಲ್ಲಿ ಅವರ ರಾಜ ಮನೆತನದವರು ಕಾಂಗ್ರೆಸ್‌ಗೆ ಮತ ಹಾಕಲು ಅಭ್ಯರ್ಥಿಗಳಿಲ್ಲ. ಭರೂಚ್‌ನಲ್ಲಿ ಕಾಂಗ್ರೆಸ್‌ ನಾಯಕ ಅಹ್ಮದ್ ಪಟೇಲ್ ಅವರ ಕುಟುಂಬ ಮತ ಹಾಕಲು ಕಾಂಗ್ರೆಸ್‌ ಅಭ್ಯರ್ಥಿಗಳಿಲ್ಲ. ಭಾವನಗರದ ದೊಡ್ಡ ದೊಡ್ಡ ಕಾಂಗ್ರೆಸ್‌ ನಾಯಕರು ಕೂಡ ಆ ಪಕ್ಷದ ಅಭ್ಯರ್ಥಿಗೆ ಮತ ಹಾಕಲು ಸಾಧ್ಯವಿಲ್ಲ. ಇದು ಕಾಂಗ್ರೆಸ್‌ನ ಪರಿಸ್ಥಿತಿ” ಎಂದಿದ್ದಾರೆ.

ಫ್ಯಾಕ್ಟ್‌ಚೆಕ್ : ಮೋದಿ ಹೇಳಿಕೆಯ ಸತ್ಯಾಸತ್ಯತೆ ಪರಿಶೀಲಿಸುವ ನಾವು ಮಾಹಿತಿ ಹುಡುಕಿದ್ದೇವೆ. ಈ ವೇಳೆ ಪ್ರಧಾನಿಯ ಹೇಳಿಕೆಯ ಕುರಿತು ಎಎನ್‌ಐ ಸುದ್ದಿ ಸಂಸ್ಥೆ ಹಂಚಿಕೊಂಡಿರುವ ಭಾಷಣಕ್ಕೆ ಕಾಂಗ್ರೆಸ್‌ನ ಮಾಧ್ಯಮ ಮತ್ತು ಪ್ರಚಾರ ವಿಭಾಗದ ಅಧ್ಯಕ್ಷ ಪವನ್ ಖೇರಾ ಅವರು ಪ್ರತಿಕ್ರಿಯೆ ನೀಡಿದ್ದು ಕಂಡು ಬಂದಿದೆ.

“ಕಾಂಗ್ರೆಸ್ ಪಕ್ಷ ಇದುವರೆಗೆ 326 ಸ್ಥಾನಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿದೆ. ನೀವು ಸಂಪೂರ್ಣ ಗಣಿತಶಾಸ್ತ್ರದಲ್ಲಿ ಪದವಿ ಹೊಂದಿದ್ದೀರಾ ಪ್ರಧಾನ ಮಂತ್ರಿಯವರೇ?” ಎಂದು ಪವನ್ ಖೇರಾ ತಿರುಗೇಟು ನೀಡಿದ್ದಾರೆ.

ಕಾಂಗ್ರೆಸ್ ಅಭ್ಯರ್ಥಿಗಳ ಕುರಿತು ನಾವು ಇನ್ನಷ್ಟು ಮಾಹಿತಿ ಹುಡುಕಿದಾಗ ಕಾಂಗ್ರೆಸ್‌ನ ಪ್ರಚಾರ ಘಟಕದ ಅಧಿಕೃತ ಎಕ್ಸ್ ಖಾತೆ INC Sandesh (@incsandesh)ನಲ್ಲಿ ಏಪ್ರಿಲ್ 22, 2024ರಂದು ಪ್ರಕಟಿಸಿದ ಅಭ್ಯರ್ಥಿಗಳ ಸಂಪೂರ್ಣ ಪಟ್ಟಿ ಲಭ್ಯವಾಗಿದೆ. ಈ ಪಟ್ಟಿಯಲ್ಲಿ ಒಟ್ಟು 301 ಅಭ್ಯರ್ಥಿಗಳ ಹೆಸರಿದೆ.

ಇಷ್ಟೇ ಅಲ್ಲದೆ ಏಪ್ರಿಲ್ 30, 2024ರವರೆಗೆ ಬಿಹಾರದ 1, ಆಂಧ್ರ ಪ್ರದೇಶದ 3, ತೆಲಂಗಾಣದ 3, ಮಹಾರಾಷ್ಟ್ರದ 2, ಹರಿಯಾಣದ 9, ಒಡಿಶಾದ 2, ಪಂಜಾಬ್‌ನ 4 ಮತ್ತು ಹಿಮಾಚಲ ಪ್ರದೇಶದ 2 ಕ್ಷೇತ್ರಗಳು ಸೇರಿ 26 ಕ್ಷೇತ್ರಗಳಿಗೆ ಕಾಂಗ್ರೆಸ್‌ ಅಭ್ಯರ್ಥಿಗಳನ್ನು ಪ್ರಕಟಿಸಿದೆ. ಈ ಮೂಲಕ ಪಕ್ಷದ ಒಟ್ಟು ಅಭ್ಯರ್ಥಿಗಳ ಸಂಖ್ಯೆ 327ಕ್ಕೆ ತಲುಪಿದೆ.

ಮೋದಿ ಭಾಷಣದಲ್ಲಿ ಉಲ್ಲೇಖಿಸಿದ ಭರೂಚ್ ಮತ್ತು ಭಾವನಗರ ಕ್ಷೇತ್ರಗಳಿಗೆ ಕಾಂಗ್ರೆಸ್‌ ಅಭ್ಯರ್ಥಿಗಳನ್ನು ಘೋಷಿಸಿಲ್ಲ. ಈ ಕ್ಷೇತ್ರಗಳಲ್ಲಿ ಕಾಂಗ್ರೆಸ್‌ನ ಮಿತ್ರ ಪಕ್ಷ ಆಮ್‌ ಆದ್ಮಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ.

ವರದಿ ಲಿಂಕ್ ಇಲ್ಲಿದೆ 

ಹಾಗಾಗಿ, ಬಿಜೆಪಿ ಮಾತ್ರ 272ಕ್ಕಿಂತ ಸ್ಥಾನಗಳಲ್ಲಿ ಸ್ಪರ್ಧಿಸಿದೆ ಎಂಬ ಪ್ರಧಾನಿ ಮೋದಿಯವರ ಹೇಳಿಕೆ ಸುಳ್ಳು

ಇದನ್ನೂ ಓದಿ : FACT CHECK : ಕಾಂಗ್ರೆಸ್ ಪ್ರಣಾಳಿಕೆ ಸರ್ಕಾರಿ ಟೆಂಡರ್‌ಗಳಲ್ಲಿ ಮುಸ್ಲಿಮರಿಗೆ ಮೀಸಲಾತಿ ಭರವಸೆ ನೀಡಿದೆ ಎಂಬ ಮೋದಿ ಹೇಳಿಕೆ ಸುಳ್ಳು

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಸ್ವಾತಿ ಮಲಿವಾಲ್‌ ವಿರುದ್ಧ ದೂರು ನೀಡಿದ ಕೇಜ್ರಿವಾಲ್ ಸಹಾಯಕ ಬಿಭವ್ ಕುಮಾರ್

0
ದೆಹಲಿ ಎಎಪಿ ನಾಯಕಿ, ರಾಜ್ಯಸಭಾ ಸದಸ್ಯೆ ಸ್ವಾತಿ ಮಲಿವಾಲ್‌ ಮೇಲಿನ ಹಲ್ಲೆ ಪ್ರಕರಣ ವಿಭಿನ್ನ ತಿರುವನ್ನು ಪಡೆದುಕೊಂಡಿದೆ. ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಸಹಾಯಕ ಬಿಭವ್ ಕುಮಾರ್ ಅವರು ಶುಕ್ರವಾರ ಎಎಪಿ...