HomeದಿಟನಾಗರFACT CHECK: ಉತ್ತರ ಪ್ರದೇಶದಲ್ಲಿ ಬುರ್ಖಾಧಾರಿ ಮಹಿಳೆಯರಿಂದ ನಕಲಿ ಮತದಾನ ಎಂದು ಹಳೆಯ ವಿಡಿಯೋ ಹಂಚಿಕೆ

FACT CHECK: ಉತ್ತರ ಪ್ರದೇಶದಲ್ಲಿ ಬುರ್ಖಾಧಾರಿ ಮಹಿಳೆಯರಿಂದ ನಕಲಿ ಮತದಾನ ಎಂದು ಹಳೆಯ ವಿಡಿಯೋ ಹಂಚಿಕೆ

- Advertisement -
- Advertisement -

ನಿನ್ನೆ (ಏ.19, 2024) ಲೋಕಸಭೆ ಚುನಾವಣೆಯ ಮೊದಲ ಹಂತದ ಮತದಾನ ನಡೆದಿದೆ. ದೇಶದ 17 ರಾಜ್ಯಗಳು ಮತ್ತು 4 ಕೇಂದ್ರಾಡಳಿತ ಪ್ರದೇಶಗಳ 102 ಕ್ಷೇತ್ರಗಳ ಜನರು ತಮ್ಮ ಹಕ್ಕು ಚಲಾಯಿಸಿದ್ದಾರೆ.

ಈ ವೇಳೆ ಉತ್ತರ ಪ್ರದೇಶದಲ್ಲಿ ಬುರ್ಖಾಧಾರಿ ಮಹಿಳೆಯರು ನಕಲಿ ಮತದಾನಕ್ಕೆ ಪ್ರಯತ್ನಿಸಿದ್ದು, ಅವರನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಪ್ರತಿಪಾದಿಸಿ ವಿಡಿಯೋವೊಂದನ್ನು ಹಂಚಿಕೊಳ್ಳಲಾಗ್ತಿದೆ.

ಬಲಪಂಥೀಯ ಯೂಟ್ಯೂಬ್ ಚಾನೆಲ್‌ ‘ಸಂವಾದದಲ್ಲಿ’ ಏ.19, 2024ರಂದು “ಬುರ್ಖಾಧಾರಿ ಮಹಿಳೆಯಿಂದ ನಕಲಿ ಮತ ಚಲಾವಣೆಗೆ ಪ್ರಯತ್ನ” ಎಂದು ವಿಡಿಯೋ ಅಪ್ಲೋಡ್ ಮಾಡಲಾಗಿದೆ.

ವಿಡಿಯೋ ಲಿಂಕ್ ಇಲ್ಲಿದೆ 

ಫ್ಯಾಕ್ಟ್‌ಚೆಕ್ : ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿರುವ ವಿಡಿಯೋದ ಸತ್ಯಾಸತ್ಯತೆಯನ್ನು ನಾನುಗೌರಿ.ಕಾಂ ಪರಿಶೀಲನೆ ನಡೆಸಿದೆ. ಈ ವೇಳೆ, ವೈರಲ್ ವಿಡಿಯೋ 2022ರ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯ ಸಂದರ್ಭದ್ದು, ಮತದಾನದ ವೇಳೆ ವಂಚನೆ ಮಾಡಲು ಅಥವಾ ನಕಲಿ ಮತ ಚಲಾಯಿಸಲು ಯತ್ನಿಸಿದ ಬುರ್ಖಾಧಾರಿ ಮಹಿಳೆಯರನ್ನು ರಾಮ್‌ಪುರ ಪೊಲೀಸರು ವಶಕ್ಕೆ ಪಡೆದಿರುವುದು ಎಂದು ಗೊತ್ತಾಗಿದೆ.

ಫೆ.15, 2022ರಂದು ಇದೇ ವಿಡಿಯೋವನ್ನು DEEWAN (@Spoof_Junkey) ಎಂಬ ಎಕ್ಸ್ ಬಳಕೆದಾರ ಹಂಚಿಕೊಂಡಿದ್ದರು. “ರಾಮ್‌ಪುರದಲ್ಲಿ ಬುರ್ಖಾಧಾರಿ ಮಹಿಳೆಯರಿಂದ ನಕಲಿ ಮತದಾನಕ್ಕೆ ಯತ್ನ, ಉತ್ತರ ಪ್ರದೇಶದ ಪೊಲೀಸರು ಥಳಿಸಿ ಬಂಧಿಸಿದ್ದಾರೆ” ಎಂದು ಬರೆದುಕೊಂಡಿದ್ದರು.

ಪೋಸ್ಟ್ ಲಿಂಕ್ ಇಲ್ಲಿದೆ 

ಘಟನೆಯ ಕುರಿತು ಫೆ.15, 2022ರಂದು ನ್ಯೂಸ್‌ 18 ಹಿಂದಿ “ರಾಮ್‌ಪುರ: ಬುರ್ಖಾ ಧರಿಸಿ ನಕಲಿ ಮತದಾನ ಮಾಡುತ್ತಿದ್ದ ಇಬ್ಬರು ಮಹಿಳೆಯರು ಸಿಕ್ಕಿಬಿದ್ದಿದ್ದು, ಬಿಜೆಪಿ ಚುನಾವಣಾ ಆಯೋಗಕ್ಕೆ ದೂರು ನೀಡಿದೆ” ಎಂಬ ಶೀರ್ಷಿಕೆಯಲ್ಲಿ ಸುದ್ದಿ ಪ್ರಕಟಿಸಿತ್ತು.

ಫೆ.14, 2022ರಂದು ಲೈವ್ ಹಿಂದೂಸ್ತಾನ್ ವೆಬ್‌ಸೈಟ್‌ ಕೂಡ ಈ ಕುರಿತು ಸುದ್ದಿ ಪ್ರಕಟಿಸಿತ್ತು “ರಾಮ್‌ಪುರ: ಬುರ್ಖಾ ಧರಿಸಿ ನಕಲಿ ಮತದಾನಕ್ಕೆ ಆಗಮಿಸಿದ್ದ ಇಬ್ಬರು ಮಹಿಳೆಯರನ್ನು ಡಿಎಂ ಸೆರೆ ಹಿಡಿದಿದ್ದಾರೆ” ಎಂಬ ಶೀರ್ಷಿಕೆಯಲ್ಲಿ ಸುದ್ದಿ ಪ್ರಕಟಿಸಿತ್ತು.

ವರದಿ ಲಿಂಕ್ ಇಲ್ಲಿದೆ 

ಹಾಗಾಗಿ, ಬುರ್ಖಾಧಾರಿ ಮಹಿಳೆಯರಿಂದ ನಕಲಿ ಮತದಾನಕ್ಕೆ ಯತ್ನ ಎಂಬ ವೈರಲ್ ವಿಡಿಯೋ ಏ.19, 2024ರದ್ದು ಅಲ್ಲ, ಫೆ.14, 2022ರದ್ದು ಎಂದು ತಿಳಿದು ಬಂದಿದೆ.

ಇದನ್ನೂ ಓದಿ : FACT CHEK : ಡಿ.ಕೆ ಶಿವಕುಮಾರ್ ಮುಖ್ಯಮಂತ್ರಿ ಎಂದು ರಾಹುಲ್ ಗಾಂಧಿ ಹೇಳಿಲ್ಲ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಬ್ರಿಜ್ ಭೂಷಣ್ ಪುತ್ರನಿಗೆ ಬಿಜೆಪಿ ಟಿಕೆಟ್‌: ನಿರಾಶೆ ವ್ಯಕ್ತಪಡಿಸಿದ ಕುಸ್ತಿಪಟುಗಳು

0
ಕುಸ್ತಿಪಟುಗಳಿಗೆ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಿಜೆಪಿ ಸಂಸದ, ಭಾರತೀಯ ಕುಸ್ತಿ ಫೆಡರೇಶನ್‌ ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಕುಸ್ತಿಪಟುಗಳು ವ್ಯಾಪಕ ಪ್ರತಿಭಟನೆ ನಡೆಸಿದ್ದರು. ಅವರನ್ನು ಆ ಬಳಿಕ ಕುಸ್ತಿ...