HomeUncategorizedFACT CHECK: ಟಿವಿಕೆ ಪಕ್ಷ ಅಧಿಕಾರಕ್ಕೆ ಬರುತ್ತಿದಂತೆ ಹಿಂದಿ ಹೇರಿಕೆ ವಿರುದ್ದ ಪ್ರತಿಭಟನೆ ಎಂದು ಹಳೆಯ...

FACT CHECK: ಟಿವಿಕೆ ಪಕ್ಷ ಅಧಿಕಾರಕ್ಕೆ ಬರುತ್ತಿದಂತೆ ಹಿಂದಿ ಹೇರಿಕೆ ವಿರುದ್ದ ಪ್ರತಿಭಟನೆ ಎಂದು ಹಳೆಯ ವಿಡಿಯೋ ಹಂಚಿಕೆ

- Advertisement -
- Advertisement -

ಹಿಂದಿ ಹೇರಿಕೆ ವಿರುದ್ದದ ಹೋರಾಟವು ತಮಿಳುನಾಡಿಗೆ ಹೊಸದೇನು ಅಲ್ಲ. ಆದರೆ ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಅಧಿಕಾರ ವಹಿಸಿಕೊಂಡ ನಂತರ ತಮ್ಮ ಚೊಚ್ಚಲ ಭಾಷಣದಲ್ಲಿ, ‘ನಿಜವಾದ ಜಾತ್ಯತೀತತೆ ಮತ್ತು ಸಾಮಾಜಿಕ ನ್ಯಾಯ’ಕ್ಕೆ ಬದ್ಧವಾಗಿರುವ ಹೊಸ ಯುಗ ಪ್ರಾರಂಭವಾಗಿದೆ ಎಂದು ವಿಜಯ್ ಹೇಳಿದ ಬೆನ್ನಲ್ಲೆ, ತಮಿಳುನಾಡಿನಲ್ಲಿ ಹಿಂದಿ ಹೇರಿಕೆಯ ವಿರುದ್ದ ಪ್ರತಿಭಟನೆಗಳು ದಾಖಲಾಗಿವೆ ಎಂಬ ಪೋಸ್ಟ್‌ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗುತ್ತಿವೆ.

ಈ ಹಿನ್ನೆಲೆಯಲ್ಲಿ, ಹಿಂದಿ ವಿರುದ್ಧದ ಪ್ರತಿಭಟನೆಗಳನ್ನು ತೋರಿಸುವ ವೀಡಿಯೊವನ್ನು ಸಾಮಾಜಿಕ ಮಾಧ್ಯಮದಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. ವಿಜಯ್ ಮುಖ್ಯಮಂತ್ರಿಯಾದ ತಕ್ಷಣ ಹಿಂದಿ ವಿರೋಧಿ ಚಳುವಳಿಯ ಆರಂಭವಾಗಿದೆ ಎಂದು ಪ್ರತಿಪಾದಿಸಲಾಗುತ್ತಿದೆ.

ವೈರಲ್ ಆಗಿರುವ ಈ ಕ್ಲಿಪ್‌ನಲ್ಲಿ, ಪ್ರತಿಭಟನಾಕಾರರು ಬೀದಿಗಳಲ್ಲಿ ಹಿಂದಿ ಹೇರಿಕೆಯ ವಿರುದ್ಧ ಘೋಷಣೆಗಳನ್ನು ಕೂಗುತ್ತಿರುವುದು ಕಂಡುಬರುತ್ತದೆ. ಅಲ್ಲದೆ ಚೆನ್ನೈನ ರೈಲು ನಿಲ್ದಾಣದ ಸೈನ್‌ಬೋರ್ಡ್‌ಗಳಿಗೆ ಕಪ್ಪು ಬಣ್ಣವನ್ನು ಬಳಿದು ಹಿಂದಿ ಅಕ್ಷರಗಳನ್ನು ಅಳಿಸುತ್ತಿರುವುದನ್ನು ಕಾಣಬಹುದು.

ಫೇಸ್​ಬುಕ್ ಬಳಕೆದಾರರೊಬ್ಬರು ಈ ವೀಡಿಯೊವನ್ನು ಹಂಚಿಕೊಂಡು, ‘‘ತಮಿಳುನಾಡಲ್ಲಿ ಮತ್ತೆ ಶುರುವಾಯಿತು ಹಿಂದಿ ಹೇರಿಕೆ ವಿರೋಧಿ ಹೋರಾಟ’’ ಎಂದು ಬರೆದುಕೊಂಡಿದ್ದಾರೆ. ಹಾಗಿದ್ದರೆ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆ ನಿಜವೇ ಎಂದು ಪರಿಶೀಲಿಸೋಣ.

ಫ್ಯಾಕ್ಟ್‌ಚೆಕ್:

ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾಗುತ್ತಿರುವ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆಯನ್ನು ಪರಿಶೀಲಿಸಲು, ವಿಡಿಯೋದ ಕೀಫ್ರೇಮ್‌ಗಳನ್ನು ತೆಗೆದು ಗೂಗಲ್ ರಿವರ್ಸ್ ಇಮೇಜಸ್‌ನಲ್ಲಿ ಸರ್ಚ್ ಮಾಡಿದಾಗ ಮಾರ್ಚ್ 12 ರಂದು ಸನ್ ನ್ಯೂಸ್ ಪೋಸ್ಟ್ ಮಾಡಿದ ಇನ್‌ಸ್ಟಾಗ್ರಾಮ್ ರೀಲ್ ಲಭ್ಯವಾಗಿದೆ. ಮೇ 17 ರಂದು ಪ್ರತಿಭಟನಾಕಾರರು ಚೆನ್ನೈನ ರೈಲು ನಿಲ್ದಾಣಗಳಲ್ಲಿ ಹಿಂದಿ ಅಕ್ಷರಗಳಿ ಕಪ್ಪು ಮಸಿ ಬಳಿಯುವ ಮೂಲಕ ಪ್ರತಿಭಟನೆ ನಡೆಸಿದರು ಎಂದು ಶೀರ್ಷಿಕೆಯಲ್ಲಿ ಹೇಳಲಾಗಿದೆ.

 
 
 
 
 
View this post on Instagram
 
 
 
 
 
 
 
 
 
 
 

 

A post shared by Sun News Tamil (@sunnews)

ಸನ್ ನ್ಯೂಸ್ ರೀಲ್‌ನಲ್ಲಿರುವ ದೃಶ್ಯಗಳು ವೈರಲ್ ವೀಡಿಯೊಗೆ ಹೊಂದಿಕೆಯಾಗುತ್ತವೆ. ಮಾರ್ಚ್ 12 ರಂದು ದಿ ವೈರ್ ಪ್ರಕಟಿಸಿದ ‘ಚಿನ್ನಸಾಮಿಯಿಂದ ಚೆನ್ನೈ ಪಾರ್ಕ್‌ವರೆಗೆ, ತಮಿಳುನಾಡು ಹಿಂದಿ ಹೇರಿಕೆಯನ್ನು ವಿರೋಧಿಸುತ್ತದೆ’ ಎಂಬ ಶೀರ್ಷಿಕೆಯ ವರದಿಯಲ್ಲಿ ಇದನ್ನೆ ಉಲ್ಲೇಖಿಸಲಾಗಿದೆ.

ವರದಿಯ ಪ್ರಕಾರ, ಮಾರ್ಚ್ 11 ರಂದು ಪ್ರಧಾನಿ ನರೇಂದ್ರ ಮೋದಿ ಅವರು ತಮಿಳುನಾಡಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಹಿಂದಿ ವಿರೋಧಿ ಪ್ರತಿಭಟನೆಗಳು ನಡೆದಿತ್ತು. ಆಯೋಜಕ ತಿರುಮುರುಗನ್ ಗಾಂಧಿ ನೇತೃತ್ವದ ಮೇ 17 ಹೋರಾಟದಲ್ಲಿ, ಚೆನ್ನೈ ಪಾರ್ಕ್ ರೈಲ್ವೆ ನಿಲ್ದಾಣಕ್ಕೆ ಪ್ರವೇಶಿಸಿ ಇತ್ತೀಚೆಗೆ ನಿರ್ಮಾಣವಾದ ನಿಲ್ದಾಣದ ಸೈನ್‌ಬೋರ್ಡ್‌ಗಳಿಗೆ ಕಪ್ಪು ಬಣ್ಣ ಬಳಿದಿದ್ದಾರೆ, ಮಧ್ಯದಲ್ಲಿ ಹಿಂದಿ, ಮೇಲೆ ತಮಿಳು ಮತ್ತು ಕೆಳಗೆ ಇಂಗ್ಲಿಷ್ ಅನ್ನು ಇರಿಸಲಾಗಿತ್ತು ಎಂದು ವರದಿ ತಿಳಿಸಿದೆ.

ವರದಿಯಲ್ಲಿ ಶಿವ ದಿಲೀಪನ್ ಎಂಬ ಕಾರ್ಯಕರ್ತ ತಮಿಳು ಭಾಷೆಯನ್ನು ಬೆಂಬಲಿಸಿ ಮತ್ತು ಹಿಂದಿ ವಿರುದ್ಧ ಘೋಷಣೆಗಳನ್ನು ಕೂಗುತ್ತಾ ನಿಲ್ದಾಣಕ್ಕೆ ಪ್ರವೇಶಿಸುತ್ತಿದ್ದ. ಇದೇ ಸಂದರ್ಭದಲ್ಲಿ ರೈಲಿನ ಮುಂದೆ ಹಾರಿ ಸಾವನ್ನಪ್ಪಿದ್ದಾನೆ ಎಂದು ಉಲ್ಲೇಖಿಸಲಾಗಿದೆ.

ಹಾಗಾಗಿ ಈ ಘಟನೆ ವಿಜಯ್ ತಮಿಳುನಾಡು ಮುಖ್ಯಮಂತ್ರಿಯಾಗುವ ಮೊದಲೇ ಈ ಪ್ರತಿಭಟನೆ ದಾಖಲಾಗಿದ್ದು ಇದರ ವಿಡಿಯೋ ಕೂಡ ಲಭ್ಯವಿದೆ. ಇದು ಮಾರ್ಚ್ ತಿಂಗಳಿನಲ್ಲಿ ನಡೆದ ಪ್ರತಿಭಟನೆಯ ದೃಶ್ಯಗಳು ಎಂಬುದು ಸ್ಪಷ್ಟವಾಗಿದೆ.

ಒಟ್ಟಾರೆಯಾಗಿ ಹೇಳುವುದಾದರೆ, ತಮಿಳುನಾಡಿನಲ್ಲಿ ಮಾರ್ಚ್‌ನಲ್ಲಿ ನಡೆದ ಹಿಂದಿ ವಿರೋಧಿ ಪ್ರತಿಭಟನೆಯ ಹಳೆಯ ವಿಡಿಯೋವನ್ನು ಟಿವಿಕೆ ಪಕ್ಷದ ನಾಯಕ ವಿಜಯ್ ತಮಿಳುನಾಡಿನಲ್ಲಿ ಅಧಿಕಾರ ವಹಿಸಿಕೊಂಡ ನಂತರ ನಡೆದ ಪ್ರತಿಭಟನೆಯ ವಿಡಿಯೋ ಎಂದು ಸುಳ್ಳು ಪ್ರತಿಪಾದನೆಯೊಂದಿಗೆ ಹಂಚಿಕೊಳ್ಳಲಾಗುತ್ತಿದೆ. ಹಾಗಾಗಿ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆ ತಪ್ಪಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉಪಚುನಾವಣೆ : ಬಿಹಾರದ ಬಂಕಿಪುರದಲ್ಲಿ ಪ್ರಶಾಂತ್ ಕಿಶೋರ್‌ಗೆ ಐತಿಹಾಸಿಕ ಗೆಲುವು; ಇನ್ನೆರಡು ಕ್ಷೇತ್ರಗಳು ಕಾಂಗ್ರೆಸ್-ಬಿಜೆಪಿ ಪಾಲು

ಬಿಹಾರದ ಬಂಕಿಪುರ, ಗುಜರಾತ್‌ನ ಮಂಜಲ್‌ಪುರ ಮತ್ತು ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರಗಳಿಗೆ ಜುಲೈ 30ರಂದು ನಡೆದ ಉಪಚುನಾವಣೆಯ ಫಲಿತಾಂಶ ಸೋಮವಾರ (ಆ.3) ಹೊರಬಿದ್ದಿದ್ದಿದೆ. ಬಿಜೆಪಿಯ ಭದ್ರಕೋಟೆ ಎನಿಸಿಕೊಂಡಿದ್ದ, ಕಳೆದ 31 ವರ್ಷಗಳಿಂದ ಬಿಜೆಪಿಯೇ...

‘ಪಂಕ್ಚರ್-ತಲಾ ಬನಾನೆ ವಾಲೆಗಳೇ ಹೆಚ್ಚು’: ನೀಟ್ ಅಕ್ರಮಗಳ ವಿರುದ್ಧ ಪ್ರತಿಭಟಿಸಿದವರ ವಿರುದ್ಧ ನಾಲಿಗೆ ಹರಿಬಿಟ್ಟ ಬಿಜೆಪಿ ನಾಯಕ ರಮೇಶ್ ಬಿಧು

ದೆಹಲಿಯ ಜಂತರ್ ಮಂತರ್‌ನಲ್ಲಿ ‘ನೀಟ್’ (NEET) ಪರೀಕ್ಷೆಯ ಅಕ್ರಮಗಳ ವಿರುದ್ಧ ಧ್ವನಿಯೆತ್ತಿದ ಯುವಜನತೆ ಮತ್ತು ವಿದ್ಯಾರ್ಥಿಗಳ ಹೋರಾಟವನ್ನು ದಮನ ಮಾಡಲು ಯತ್ನಿಸುತ್ತಿರುವ ಬಿಜೆಪಿ, ಈಗ ಅವರ ವಿರುದ್ಧವೇ ಅತ್ಯಂತ ಕೀಳುಮಟ್ಟದ ಇಸ್ಲಾಮೋಫೋಬಿಕ್ ಮತ್ತು...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಖುಲಾಸೆ : ಇಡೀ ವ್ಯವಸ್ಥೆಯೇ ಬ್ರಿಜ್ ಭೂಷಣ್‌ರನ್ನು ರಕ್ಷಿಸಿತು ಎಂದ ವಿನೇಶ್ ಫೋಗಟ್; ಮೇಲ್ಮನವಿ ಸಲ್ಲಿಸಲು ಮಹಿಳಾ ಕುಸ್ತಿಪಟುಗಳ ನಿರ್ಧಾರ

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿದ್ದ ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ಮಾಜಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ದೆಹಲಿಯ ರೋಸ್...

ಕರ್ನಾಟಕದಲ್ಲಿ SIR ಬಿಹಾರ-ಬಂಗಾಳಕ್ಕಿಂತ ಭೀಕರ: ಆಗಸ್ಟ್ 4 ರಂದು ಜನಪರ ಸಂಘಟನೆಗಳಿಂದ ಮಹತ್ವದ ಮಾಧ್ಯಮಗೋಷ್ಠಿ

ಬೆಂಗಳೂರು: ಕರ್ನಾಟಕದಲ್ಲಿ ನಡೆಯುತ್ತಿರುವ ಎಸ್‌ಐಆರ್ (SIR) ಪ್ರಕ್ರಿಯೆಯು ಬಿಹಾರ ಮತ್ತು ಪಶ್ಚಿಮ ಬಂಗಾಳ ರಾಜ್ಯಗಳಿಗಿಂತಲೂ ಅತ್ಯಂತ ಭೀಕರ ರೂಪ ಪಡೆದುಕೊಳ್ಳುತ್ತಿದೆ ಎಂದು 'SIR ವಿರೋಧಿ ಜಾತ್ಯತೀತ ಪಕ್ಷಗಳು ಮತ್ತು ಜನಪರ ಸಂಘಟನೆಗಳ ಒಕ್ಕೂಟ'...

“ನೈರ್ಮಲ್ಯ ಕಾರ್ಮಿಕರು ಕೆಲಸ ಬಿಡಲು ಸಾಧ್ಯವಿಲ್ಲ”: ದೇಶಾದ್ಯಂತ ಪ್ರತಿಭಟನೆಗೆ DASAM ಬೆಂಬಲ, ಉದ್ಯೋಗ ಖಾಯಂಗೊಳಿಸಲು ತೀವ್ರ ಒತ್ತಾಯ

ನವದೆಹಲಿ: ಉದ್ಯೋಗ ಕ್ರಮಬದ್ಧಗೊಳಿಸುವಿಕೆ (ಖಾಯಂಗೊಳಿಸುವುದು), ನ್ಯಾಯಯುತ ವೇತನ, ಸಾಮಾಜಿಕ ಭದ್ರತೆ, ಸುರಕ್ಷಿತ ಕೆಲಸದ ವಾತಾವರಣ ಮತ್ತು ಕೆಲಸದ ಸ್ಥಳದಲ್ಲಿ ಮಾನವ ಘನತೆಯನ್ನು ಎತ್ತಿಹಿಡಿಯುವಂತೆ ಒತ್ತಾಯಿಸಿ ದೇಶದ ನಾನಾ ಭಾಗಗಳಲ್ಲಿ ನೈರ್ಮಲ್ಯ ಕಾರ್ಮಿಕರು ನಡೆಸುತ್ತಿರುವ...

ದ್ವೇಷ ಭಾಷಣ ಪ್ರಕರಣ: ಬಿಜೆಪಿ ನಾಯಕರಾದ ಅನುರಾಗ್‌ ಠಾಕೂರ್‌, ಪರ್ವೇಶ್‌ ವರ್ಮಾಗೆ ಕ್ಲೀನ್ ಚೀಟ್: ಪುನರ್ ಪರಿಶೀಲನಾ ಅರ್ಜಿ ವಜಾಗೊಳಿಸಿದ ಸುಪ್ರೀಂ

ನವದೆಹಲಿ: 2020ರ ದೆಹಲಿಯಲ್ಲಿ ನಡೆದ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರೋಧಿ ಪ್ರತಿಭಟನೆಗಳ ಸಂದರ್ಭದಲ್ಲಿ ಉದ್ರೇಕಕಾರಿ ಹಾಗೂ ದ್ವೇಷಪೂರಿತ ಭಾಷಣ ಮಾಡಿದ ಆರೋಪ ಹೊತ್ತಿದ್ದ ಬಿಜೆಪಿ ನಾಯಕರಾದ ಅನುರಾಗ್ ಠಾಕೂರ್ ಮತ್ತು ಪರ್ವೇಶ್‌...

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ: ನೂತನ ಸಚಿವರ ಪಟ್ಟಿಗೆ ವರಿಷ್ಠರ ಅನುಮೋದನೆ: ಇಂದು ಸಂಜೆ 4:05 ಕ್ಕೆ ಪ್ರಮಾಣ ವಚನ

ಬಹುನಿರೀಕ್ಷಿತ ಕರ್ನಾಟಕ ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ಮುಹೂರ್ತ ನಿಗದಿಯಾಗಿದ್ದು, ಕಾಂಗ್ರೆಸ್ ಹೈಕಮಾಂಡ್ ನೂತನ ಸಚಿವರ ಪಟ್ಟಿಗೆ ಅಧಿಕೃತ ಅನುಮೋದನೆ ನೀಡಿದೆ. ಇದರೊಂದಿಗೆ ಕಳೆದ ಕೆಲವು ದಿನಗಳಿಂದ ರಾಜ್ಯ ರಾಜಕಾರಣದಲ್ಲಿ ತೀವ್ರ...

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ಪ್ರಕರಣ : WFI ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್‌ ಸಿಂಗ್‌ ಖುಲಾಸೆ

ದೆಹಲಿ ನ್ಯಾಯಾಲಯವು ಸೋಮವಾರ (ಆ.3) ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಮತ್ತು ಬಿಜೆಪಿ ನಾಯಕ ಬ್ರಿಜ್ ಭೂಷಣ್ ಸಿಂಗ್ ಅವರನ್ನು ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಪ್ರಕರಣದಿಂದ...

ಪ್ರಶ್ನೆ ಪತ್ರಿಕೆ ಸೋರಿಕೆ : ಫಾಸ್ಟ್‌ ಟ್ರ್ಯಾಕ್ ಕೋರ್ಟ್ ನ್ಯಾಯಾಧೀಶೆ ಒಂದೇ ವಾರದಲ್ಲಿ ವರ್ಗಾವಣೆ

ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳ ವಿಚಾರಣೆಗಾಗಿ ಸ್ಥಾಪಿಸಲಾದ ತ್ವರಿತಗತಿ (ಫಾಸ್ಟ್‌ ಟ್ರ್ಯಾಕ್) ನ್ಯಾಯಾಲಯದ ನೇತೃತ್ವ ವಹಿಸಲು ನೇಮಕಗೊಂಡ ಕೇವಲ ಒಂದು ವಾರದ ನಂತರ, ದೆಹಲಿ ಹೈಕೋರ್ಟ್ ಶನಿವಾರ (ಆಗಸ್ಟ್ 1) ವಿಶೇಷ ನ್ಯಾಯಾಧೀಶರಾದ...

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...