Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್: ತೈಲ ಬೆಲೆ ಏರಿಕೆ ಖಂಡಿಸಿ ಪೆಟ್ರೋಲ್ ಬಂಕ್‌ ಮೇಲೆ ದಾಳಿ?

ಫ್ಯಾಕ್ಟ್‌ಚೆಕ್: ತೈಲ ಬೆಲೆ ಏರಿಕೆ ಖಂಡಿಸಿ ಪೆಟ್ರೋಲ್ ಬಂಕ್‌ ಮೇಲೆ ದಾಳಿ?

ಪ್ರತಿದಿನ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯಾದರೆ ಜನ ಸುಮ್ಮನಿರುವರೆ? ಇಲ್ಲಿ ನೋಡಿ ಅವರ ಆಕ್ರೋಶವನ್ನು ಎಂದು ಹಲವಾರು ಜನರು ಈ ವಿಡಿಯೋವನ್ನು ‍ಷೇರ್ ಮಾಡಿದ್ದಾರೆ.

- Advertisement -
- Advertisement -

ಪ್ರತಿನಿತ್ಯ ಏರುತ್ತಿರುವ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳ ಬಗ್ಗೆ ಜನರು ತಮ್ಮ ಕೋಪವನ್ನು ತೋರಿಸುತ್ತಿದ್ದಾರೆ ಎಂದು ಹೇಳುವ, ಪೆಟ್ರೋಲ್ ಪಂಪ್ ಅನ್ನು ಧ್ವಂಸ ಮಾಡುವ ವಿಡಿಯೋ ಒಂದು ವೈರಲ್ ಆಗುತ್ತಿದೆ.

#ये_खामोश_मिजाज़ी_तुम्हें_जीने_नहीं_देगी#इज़्ज़त_से_अगर_रहना_है_तो_कोहराम_मचा_दोये देखिये जनता का आक्रोशभड़क चुकी है जनता अब #पेट्रोल #डीज़ल के बढ़ते दाम पे और महंगाई को लेकर कर रही पेट्रोल पंप पर बवाल ,, #_यही_होना_ज़रूरी_है_पूरे_भारत_में_हर_जगह //

Posted by Hansraj Singh Yadav on Wednesday, June 24, 2020

ಜೂನ್ 7 ರಿಂದ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಕೇಂದ್ರ ಸರ್ಕಾರ ನಿರಂತರವಾಗಿ ಏರಿಸುತ್ತಿದೆ. ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಇಳಿದಿದ್ದರೂ ಸಹ ಪೆಟ್ರೋಲ್ ಡೀಸೆಲ್ ಬೆಲೆ ಏರುತ್ತಿರುವುದಕ್ಕೆ ಸಾರ್ವಜನಿಕರು ಅಸಮಧಾನ ವ್ಯಕ್ತಪಡಿಸಿದ್ದಾರೆ. ಹಾಗಾಗಿ ಈ ವಿಡಿಯೋ ನಿಜವಿರಬಹುದು ಎಂದು ಬಹಳಷ್ಟು ಜನರು ನಂಬಿದ್ದಾರೆ.

ಆದರೆ ಈ ಘಟನೆಯು ಒಡಿಶಾದ ಪುರಿಯಲ್ಲಿ 2018 ರಲ್ಲಿ ನಡೆದಿರುವುದನ್ನು ನಾವು ಕಂಡುಕೊಂಡಿದ್ದೇವೆ. ಜೊತೆಗೆ ಜನಸಮೂಹವು ಪೆಟ್ರೋಲ್ ಪಂಪ್ ಅನ್ನು ಧ್ವಂಸಗೊಳಿಸಿದ್ದು ಬೆಲೆಗಳ ಏರಿಕೆಯಿಂದಲ್ಲ. ಬದಲಿಗೆ ಕಡಿಮೆ ಪೆಟ್ರೋಲ್ ಹಾಕಿ ಗ್ರಾಹಕರಿಗೆ ಮೋಸ ಮಾಡುತ್ತಿದ್ದಾರೆ ಎಂದು ಆರೋಪಿಸಿ ಜನರು ಪೆಟ್ರೋಲ್ ಪಂಪ್‌ ಮೇಲೆ ದಾಳಿ ನಡೆಸಿದ್ದರು.

ವೀಡಿಯೊವನ್ನು ಎಚ್ಚರಿಕೆಯಿಂದ ನೋಡಿದಾಗ, ಪೆಟ್ರೋಲ್ ಪಂಪ್ ಯಂತ್ರಗಳಲ್ಲಿ ಗೋಚರಿಸುವ ಹಳದಿ ಬ್ಯಾಂಡ್‌ನಲ್ಲಿ ಕೆಲವು ಪಠ್ಯ ಬರೆಯಲಾಗಿದೆ ಎಂದು ನಾವು ಗಮನಿಸಿದ್ದೇವೆ. ಅದನ್ನು ಜೂಮ್ ಮಾಡಿ ನೋಡಿದರೆ, ಅದು ಒರಿಯಾ ಭಾಷೆಯಲ್ಲಿರುವುದು ತಿಳಿಯುತ್ತದೆ.

 

ಅದರ ಆಧಾರದಲ್ಲಿ ಹುಡುಕಾಡಿದಾಗ 29 ಸೆಪ್ಟೆಂಬರ್ 2018 ರಿಂದ ಒಡಿಶಾದ ಪುರಿಯಲ್ಲಿ ಈ ಘಟನೆ ನಡೆದಿದೆ ಎಂದು ತಿಳಿದುಬಂದಿದೆ. ಹಲವು ಪತ್ರಿಕಾ ವರದಿಗಳು ಲಭ್ಯವಿವೆ.

ವರದಿಯ ಪ್ರಕಾರ, ಗ್ರಾಹಕನು ಪೆಟ್ರೋಲ್ ಪಂಪ್‌ಗೆ ತಾನು ಪಾವತಿಸಿದ್ದಕ್ಕಿಂತ ಕಡಿಮೆ ಪೆಟ್ರೋಲ್ ಹಾಕುತ್ತಿದ್ದರು ಎಂದು ಆರೋಪಿಸಿದ್ದಾನೆ. ಇದು ವಾಗ್ವಾದಕ್ಕೆ ಕಾರಣವಾಗಿ ಅಂತಿಮವಾಗಿ ಸ್ಥಳೀಯರು ಪೆಟ್ರೋಲ್ ಪಂಪ್ ಮೇಲೆ ದಾಳಿ ನಡೆಸಿದ್ದಾರೆ. ಕೊನೆಗೆ ಪೊಲೀಸರು ಬಂದು ಪರಿಸ್ಥಿತಿಯನ್ನು ಶಾಂತಗೊಳಿಸಲು, ಜನಸಮೂಹವನ್ನು ನಿಯಂತ್ರಿಸಲು ಲಾಠಿಚಾರ್ಜ್ ಮಾಡಿದರು ಎಂದು ತಿಳಿಸಲಾಗಿದೆ.


ಇದನ್ನೂ ಓದಿ: ಜಿಯೋ ಜಾಹಿರಾತಿನಿಂದ ಶಾರುಖ್ ಖಾನ್‌ನನ್ನು ಕಿತ್ತೆಸೆದರೆ ಮುಖೇಶ್ ಅಂಬಾನಿ ?; ಫ್ಯಾಕ್ಟ್‌ಚೆಕ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...