Homeಫ್ಯಾಕ್ಟ್‌ಚೆಕ್FACT CHECK : ನಟ ದರ್ಶನ್ ಪತ್ನಿ ದೇವರ ಮೊರೆ ಎಂದು ಒಂದು ವರ್ಷದ ಹಿಂದಿನ...

FACT CHECK : ನಟ ದರ್ಶನ್ ಪತ್ನಿ ದೇವರ ಮೊರೆ ಎಂದು ಒಂದು ವರ್ಷದ ಹಿಂದಿನ ಹಳೆಯ ಫೋಟೊ ಹಂಚಿಕೊಳ್ಳಲಾಗ್ತಿದೆ

- Advertisement -
- Advertisement -

ಚಿತ್ರದುರ್ಗದ ರೇಣುಕಾಸ್ವಾಮಿಯ ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ನಟ ದರ್ಶನ್ ಆರೋಪ ಮುಕ್ತರಾಗಿ ಹೊರ ಬರಲಿ ಎಂದು ಪತ್ನಿ ವಿಜಯಲಕ್ಷಿ ಬಂಡೆ ಮಹಾಕಾಳಿ ದೇವಸ್ಥಾನಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿದ್ದಾರೆ ಎಂದು ಕನ್ನಡದ ಕೆಲ ಮಾಧ್ಯಮಗಳು ವರದಿ ಮಾಡಿವೆ ಮತ್ತು ದರ್ಶನ್ ಅವರ ಅಭಿಮಾನಿಗಳು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿದ್ದಾರೆ.

ಕನ್ನಡ ಮುಖ್ಯವಾಹಿನಿ ಮಾಧ್ಯಮ ಝೀ ಕನ್ನಡ ಚಾನೆಲ್ ತನ್ನ ಡಿಜಿಟಲ್ ವೇದಿಕೆಗಳಲ್ಲಿ ಜುಲೈ 7ರಂದು ಈ ಕುರಿತು ಸುದ್ದಿ ಪ್ರಕಟಿಸಿತ್ತು.

“ವಿಜಯಲಕ್ಷ್ಮಿಯವರು ತಮ್ಮ ಪತಿಯನ್ನು ಜೈಲಿನಿಂದ ಹೊರ ಕರೆತರಲು ಶಕ್ತಿ ದೇವತೆಯ ಮೊರೆ ಹೋಗಿ ಪ್ರಾರ್ಥನೆ ಸಲ್ಲಿಸಿದ್ದಾರೆ. ಬೆಂಗಳೂರಿನ ಚಾಮರಾಜಪೇಟೆಯ ಗವಿಪುರಂನಲ್ಲಿರುವ ಶ್ರೀ ಬಂಡೆ ಮಹಾಕಾಳಿ ದೇವಸ್ಥಾನಕ್ಕೆ ಬೇಟಿ ನೀಡಿದ ವಿಜಯಲಕ್ಷ್ಮಿ, ದರ್ಶನ್‌ ಹೆಸರಿನಲ್ಲಿ ವಿಶೇಷ ಪೂಜೆ ಮಾಡಿಸಿದ್ದಾರೆ. ಆಷಾಢ ಶನಿವಾರದಂದು ಪೂಜೆ ಮಾಡಿ ಅವರು, ತಮ್ಮ ಗಂಡನಿಗಾಗಿ ಪ್ರಾರ್ಥಿಸಿದ್ದಾರೆ” ಎಂದು ಸುದ್ದಿಯಲ್ಲಿ ಹೇಳಲಾಗಿತ್ತು.

ಡಿ ಬಾಸ್ ಕಲ್ಟ್ಸ್ ಅಫೀಷಿಯಲ್ (Dboss Cults Official) ಎಂಬ ಇನ್​ಸ್ಟಾಗ್ರಾಂ ಖಾತೆಯಲ್ಲಿ ಕೂಡ ಈ ಕುರಿತು ಫೋಟೋ ಹಂಚಿಕೊಳ್ಳಲಾಗಿದೆ. ಅದರಲ್ಲಿ, “ಬಂಡೆ ಮಹಾಕಾಳಿ ದೇವಸ್ಥಾನದಲ್ಲಿ ವಿಜಯಲಕ್ಷ್ಮಿ ಮೇಡಂ. ಬಾಸ್ ಬೇಗ ಈಚೆ ಬರ್ಲಿ” ಎಂದು ಬರೆಯಲಾಗಿದೆ.

ಫ್ಯಾಕ್ಟ್‌ಚೆಕ್ : ಝೀ ಕನ್ನಡ ವಾಹಿನಿಯ ಡಿಜಿಟಲ್ ವೇದಿಕೆ ಮತ್ತು ಸಾಮಾಜಿಕ ಜಾಲತಾಣ ಪೇಜ್‌ಗಳಲ್ಲಿ ಹಂಚಿಕೊಂಡಿರುವ ಸುದ್ದಿ ಇತ್ತೀಚಿನದ್ದಲ್ಲ. ಹಳೆಯ ಫೋಟೋ ಬಳಸಿ ಈಗ ಸುದ್ದಿ ಮಾಡಲಾಗಿದೆ ಎಂಬ ಮಾಹಿತಿ ದೊರೆತ ಹಿನ್ನೆಲೆ ನಾವು ಸುದ್ದಿಯ ಸತ್ಯಾಸತ್ಯತೆ ಪರಿಶೀಲಿಸಿದ್ದೇವೆ.

ಸುದ್ದಿಯಲ್ಲಿರುವ ಫೋಟೊವನ್ನು ಗೂಗಲ್ ರಿವರ್ಸ್ ಇಮೇಜ್‌ನಲ್ಲಿ ಸರ್ಚ್ ಮಾಡಿದಾಗ, 7 ಜುಲೈ , 2023 ರಂದು ಲತಾ ಜೈಪ್ರಕಾಶ್ ಎಂಬವರು ತಮ್ಮ ಫೇಸ್​ಬುಕ್ ಖಾತೆಯಲ್ಲಿ ಹಂಚಿಕೊಂಡ ಫೋಟೋ ಲಭ್ಯವಾಗಿದೆ.

ಲತಾ ಅವರು ”ವಿಜಿ ಅತ್ತಿಗೆ”ಎಂದು ಬರೆದುಕೊಂಡು ಸುದ್ದಿಯಾಗಿರುವ ಪೋಟೋ ಹಂಚಿಕೊಂಡಿದ್ದರು. ಅದನ್ನು ಜುಲೈ 7, 2024ರಂದು ಫೇಸ್‌ಬುಕ್ ಮೆಮೋರಿಯಾಗಿ ತೋರಿಸಿತ್ತು. ವರ್ಷದ ಬಳಿಕ ಹಳೆಯ ಪೋಸ್ಟ್‌ಗೆ ಪ್ರತಿಕ್ರಿಯೆ ನೀಡಿದ್ದ ಲತಾ ಜೈಪ್ರಕಾಶ್ ಅವರು “ಒಂದು ವರ್ಷವಾಯಿತು. ಆದರೆ, ಆದರೆ ಈ ಬಾರಿ ಉತ್ತಮ ಸ್ಥಿತಿಯಲ್ಲಿಲ್ಲ. ಈ ಪರಿಸ್ಥಿತಿಯಿಂದ ಹೊರ ಬರಲು ಅಮ್ಮ ಆಶಿರ್ವದಿಸಲಿ ಎಂದು ನಾನು ಪ್ರಾರ್ಥಿಸುತ್ತೇನೆ. ಅಮ್ಮ ನಿಮಗೆ ಹೆಚ್ಚು ಶಕ್ತಿ, ಧೈರ್ಯ ಮತ್ತು ಆಶಿರ್ವಾದ ನೀಡಲಿ ಎಂದು ಬರೆದುಕೊಂಡಿದ್ದರು.

ಒಟ್ಟಿನಲ್ಲಿ, ದರ್ಶನ್ ಮತ್ತು ವಿಜಯಲಕ್ಷ್ಮೀ ಬಂಡೆ ಮಕಾಳಾಮ್ಮ ದೇವರನ್ನ ಬಲವಾಗಿ ನಂಬುತ್ತಾರೆ. ಈ ಹಿಂದೆ ಅನೇಕ ಬಾರಿ ಇಲ್ಲಿಗೆ ತೆರಳಿದ್ದರು. ದೇವಸ್ಥಾನದ ಪೂಜಾರಿಯೊಬ್ಬರನ್ನ ಮನೆಗೆ ಕರೆಸಿ ತಡೆ ಒಡೆಸಿಕೊಳ್ಳುತ್ತಿದ್ದರು. ಆದರೆ, ಇದೀಗ ದರ್ಶನ್ ಬೇಗನೆ ಜೈಲಿನಿಂದ ಹೊರಬರಲೆಂದು ಬಂಡೆ ಮಹಾಕಾಳಿ ದೇಸ್ಥಾನಕ್ಕೆ ವಿಜಯಲಕ್ಷ್ಮೀ ತೆರಳಿದ್ದಾರೆ ಎನ್ನುವ ಸುದ್ದಿ ಸುಳ್ಳಾಗಿದೆ. ವಾಸ್ತವವಾಗಿ ಈಗ ವೈರಲ್ ಆಗುತ್ತಿರುವ ಚಿತ್ರ ಒಂದು ವರ್ಷದಷ್ಟು ಹಿಂದಿನದ್ದು.

ಇದನ್ನೂ ಓದಿ : FACT CHECK : ‘ಸ್ಟಾರ್’ ಚಿಹ್ನೆಯಿರುವ 500 ರೂ. ನೋಟು ನಕಲಿಯೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ರೈತರ ವಿಚಾರದಲ್ಲಿ ಸರ್ಕಾರದ ನಿರ್ಧಾರ ಸ್ವಾಗತಾರ್ಹ ಆದರೆ.., ಸಂಯುಕ್ತ ಹೋರಾಟ ಸಮಿತಿಯ ಎಚ್ಚರಿಕೆಯ ಮಾತು

ಬಿಡದಿ ಟೌನ್‌ಶಿಪ್ ವಿಚಾರದಲ್ಲಿ ಬಲವಂತವಾಗಿ ಯಾವುದೇ ರೈತರ ಭೂಮಿ ಕಿತ್ತುಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳುತ್ತಿರುವುದು ಕೇವಲ ಮಾತಿನ ಜಾಣ್ಮೆಯಷ್ಟೇ. ಬಿಡದಿ ಭಾಗದ ಮೂರು ಗ್ರಾಮಗಳಿಗೆ ಹೊರಡಿಸಲಾಗಿರುವ ಭೂಸ್ವಾಧೀನದ ಅಂತಿಮ ಅಧಿಸೂಚನೆಯನ್ನು ಸಂಪೂರ್ಣವಾಗಿ...

“8.5 ಕೆಜಿ ತೂಕ ಇಳಿಸಿಕೊಂಡ ಸೋನಮ್ ವಾಂಗ್‌ಚುಕ್ ಜೀವಕ್ಕೆ ಅಪಾಯ: ಬಲವಂತ ಆಹಾರ ನೀಡುವಂತೆ ದೆಹಲಿ ಹೈಕೋರ್ಟ್‌ನಲ್ಲಿ ಪಿಐಎಲ್”

ದೇಶದ ಶೈಕ್ಷಣಿಕ ವ್ಯವಸ್ಥೆಯ ಭವಿಷ್ಯವನ್ನು ಗಾಳಿಗೆ ತೂರಿರುವ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಸಾಲು ಸಾಲು ಭ್ರಷ್ಟಾಚಾರದ ವಿರುದ್ಧ ಸಿಡಿದೆದ್ದು, ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪ್ರಖ್ಯಾತ ಹವಾಮಾನ ಮತ್ತು...

ಇನ್‌ಸ್ಟಾಮಾರ್ಟ್‌ನಲ್ಲಿ ಸಿಗಲಿದೆ ಎಲ್‌ಪಿಜಿ ಸಿಲಿಂಡರ್: ಬೆಂಗಳೂರಿನಲ್ಲಿ ಹೊಸ ಸೇವೆ ಆರಂಭ!

ಬೆಂಗಳೂರು: ದೇಶದಲ್ಲೇ ಮೊದಲ ಬಾರಿಗೆ ಬೆಂಗಳೂರಿನ ಗ್ರಾಹಕರು ಇನ್ನು ಮುಂದೆ ಪ್ರಮುಖ ಕ್ವಿಕ್ ಕಾಮರ್ಸ್ ಸಂಸ್ಥೆಯಾದ 'ಇನ್‌ಸ್ಟಾಮಾರ್ಟ್' (Instamart) ಆ್ಯಪ್ ಮೂಲಕವೇ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳನ್ನು ಬುಕ್ ಮಾಡಬಹುದು. ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್...

ಬಿಡದಿ ರೈತರ ಹೋರಾಟಕ್ಕೆ ಜಯ: ಬಲವಂತವಾಗಿ ಒಬ್ಬೇ ಒಬ್ಬ ರೈತರ ಜಮೀನನ್ನೂ ಪಡೆಯಲ್ಲ ಸಿಎಂ ಡಿ.ಕೆ.ಶಿವಕುಮಾರ್

"ಬಿಡದಿ ಸ್ಮಾರ್ಟ್ ಸಿಟಿ/ಟೌನ್ ಶಿಪ್ ಯೋಜನೆಯ ಹೆಸರಿನಲ್ಲಿ ಬಲವಂತವಾಗಿ ಒಬ್ಬೇ ಒಬ್ಬ ರೈತರ ಅಥವಾ ರೈತ ಮಹಿಳೆಯರ ಜಮೀನನ್ನು ನಮ್ಮ ಸರ್ಕಾರ ಭೂಸ್ವಾಧೀನ ಮಾಡಿಕೊಳ್ಳುವುದಿಲ್ಲ," ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಬಿಡದಿ ಟೌನ್‌ಶಿಪ್...

ಪಶ್ಚಿಮ ಬಂಗಾಳ: TMC ಬಂಡಾಯ ನಾಯಕ ರಿತಬ್ರತ ಬ್ಯಾನರ್ಜಿಗೆ ವಿಪಕ್ಷ ಸ್ಥಾನ ನೀಡಿದ್ದಕ್ಕೆ ನ್ಯಾಯಾಧೀಶರ ತೀವ್ರ ಆಕ್ಷೇಪ

ತೃಣಮೂಲ ಕಾಂಗ್ರೆಸ್‌ನ ಬಂಡಾಯ ಬಣದ ಮುಖ್ಯಸ್ಥ ರಿತಬ್ರತ ಬ್ಯಾನರ್ಜಿ ಅವರನ್ನು ಪಶ್ಚಿಮ ಬಂಗಾಳದ ವಿಧಾನಸಭೆಯ ವಿರೋಧ ಪಕ್ಷದ ನಾಯಕರನ್ನಾಗಿ ನೇಮಕ ಮಾಡುವಲ್ಲಿ ಸ್ಪೀಕರ್ ರತೀಂದ್ರ ಬೋಸ್ ತೋರಿರುವ "ತರಾತುರಿ"ಯನ್ನು ಕಲ್ಕತ್ತಾ ಹೈಕೋರ್ಟ್‌ನ ನ್ಯಾಯಮೂರ್ತಿ...

ಎರಡು ವರ್ಷಗಳಲ್ಲಿ 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ; ಇವರಲ್ಲಿ 193 ಮಂದಿ ವಿದೇಶಿಯರೆಂದು ಘೋಷಿತರು: ಅಸ್ಸಾಂ ಸರ್ಕಾರ

ಗುವಾಹಟಿ: ಕಳೆದ ಎರಡು ವರ್ಷಗಳ ಅವಧಿಯಲ್ಲಿ ಗಡೀಪಾರು, ಗಡಿಯಿಂದ ಆಚೆಗೆ ತಳ್ಳುವಿಕೆ (ಪುಶ್‌ಬ್ಯಾಕ್) ಅಥವಾ ಉಚ್ಚಾಟನೆ ಪ್ರಕ್ರಿಯೆಯ ಮೂಲಕ ಒಟ್ಟು 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ ಎಂದು ಅಸ್ಸಾಂ ಸರ್ಕಾರ ರಾಜ್ಯ ವಿಧಾನಸಭೆಗೆ...

17 ದಿನ, 9 ಕೆಜಿ ತೂಕ ಇಳಿಕೆ, ಸೋನಮ್ ವಾಂಗ್‌ಚುಕ್ ಆರೋಗ್ಯ ಸ್ಥಿತಿ ಗಂಭೀರ: ಉಪವಾಸ ಕೈಬಿಡುವಂತೆ ಅಖಿಲೇಶ್-ಕೇಜ್ರಿವಾಲ್ ಮನವಿ

ದೇಶದ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಸರಣಿ ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಭ್ರಷ್ಟಾಚಾರವನ್ನು ವಿರೋಧಿಸಿ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಖ್ಯಾತ ಪರಿಸರ ಕಾರ್ಯಕರ್ತ ಸೋನಮ್...

ಎನ್‌ಸಿಪಿಯ ಎರಡೂ ಬಣಗಳಲ್ಲೂ ಬಿರುಸಿನ ಬೆಳವಣಿಗೆ : ಬಿಜೆಪಿ ತೆಕ್ಕೆಗೆ ಮತ್ತೊಂದು ಪಕ್ಷ?

ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿಯ (ಎನ್‌ಸಿಪಿ) ಎರಡೂ ಬಣಗಳ ಮುಖ್ಯ ನಾಯಕರು ಮಂಗಳವಾರ (ಜು.14) ರಾತ್ರಿ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ಈ ಸಭೆಯು ಶರದ್ ಪವಾರ್ ಅವರ...

ಮೋದಿಯ ಮೌನವನ್ನು ಪ್ರಶ್ನಿಸುವ ರಾಹುಲ್ ಗಾಂಧಿ, ಸಾರ್ವಜನಿಕ ಹಿತಾಸಕ್ತಿಯ ಈ ವಿಷಯಗಳಲ್ಲಿ ತಾವೇಕೆ ಮೌನ?

ಪ್ರಧಾನಿ ಮೋದಿಯವರದ್ದು ಜಾಣ ಮೌನ ಎಂದು ಈಗಾಗಲೇ ಈ ದೇಶದ ಜನಕ್ಕೆ ಮನವರಿಕೆಯಾಗಿದೆ. ಕಳೆದ 14ವರ್ಷದಲ್ಲಿ ಒಂದೇ ಒಂದು ಪ್ರೆಸ್ ಮೀಟ್‌ಅನ್ನು ಅಡ್ರೆಸ್ ಮಾಡದೆ ಇರುವವರ ಬಗ್ಗೆ ಜನ ಹೆಚ್ಚಿನದ್ದೇನನ್ನು ನಿರೀಕ್ಷಿಸಲಾರರು, ಆದರೆ...

ಹೊಸ ಮತದಾರರ ಫಾರಂ 6ಕ್ಕೆ ಪೋಷಕರ ಎಸ್‌ಐಆರ್ ಕಡ್ಡಾಯಗೊಳಿಸಿದ ಚು. ಆಯೋಗ : ಸಂಪೂರ್ಣ ಕಾನೂನುಬಾಹಿರ ಎಂದ ಸಂಸದ ಜಾನ್ ಬ್ರಿಟ್ಟಾಸ್

ಹೊಸ ಮತದಾರರನ್ನು ನೋಂದಾಯಿಸಲು ಬಳಸುವ ತನ್ನ ಆನ್‌ಲೈನ್ ಅರ್ಜಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಹೊಸ ವಿಭಾಗವನ್ನು ಸೇರಿಸುವ ಮೂಲಕ ಚುನಾವಣಾ ಆಯೋಗವು (ಇಸಿ) "ಸಂಪೂರ್ಣವಾಗಿ ಕಾನೂನು ಅಧಿಕಾರವಿಲ್ಲದೆ ಕಾರ್ಯನಿರ್ವಹಿಸಿದೆ" ಎಂದು...