Homeಫ್ಯಾಕ್ಟ್‌ಚೆಕ್FACT CHECK : ಬುರ್ಖಾಧಾರಿ ಮಹಿಳೆಯರಿಗೆ ಸರಪಳಿ ಬಿಗಿದು ಕರೆದೊಯ್ಯುತ್ತಿರುವ ಫೋಟೋ ಎಡಿಟೆಡ್

FACT CHECK : ಬುರ್ಖಾಧಾರಿ ಮಹಿಳೆಯರಿಗೆ ಸರಪಳಿ ಬಿಗಿದು ಕರೆದೊಯ್ಯುತ್ತಿರುವ ಫೋಟೋ ಎಡಿಟೆಡ್

- Advertisement -
- Advertisement -

ಮೂವರು ಬುರ್ಖಾಧಾರಿ ಮಹಿಳೆಯರ ಕಾಲಿಗೆ ಸರಪಳಿ ಬಿಗಿದು, ಆ ಸರಪಳಿಯ ಒಂದು ತುದಿಯನ್ನು ಹಿಡಿದುಕೊಂಡು ವ್ಯಕ್ತಿಯೊಬ್ಬರು ನಡೆಯುತ್ತಿರುವ ಫೋಟೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

“ವ್ಯಕ್ತಿಯೊಬ್ಬ ತನ್ನ ಮೂವರು ಪತ್ನಿಯರನ್ನು ವಾಯು ವಿಹಾರಕ್ಕೆ ಕರೆದೊಯ್ಯುತ್ತಿರುವ ಫೋಟೋ ಇದು” ಎಂದು ಎಕ್ಸ್‌ ಬಳಕೆದಾರ Naughty BuBu(@INaughtyBuBu) ಬರೆದುಕೊಂಡಿದ್ದಾರೆ.

ಈ ಹಿಂದೆಯೂ ಇದೇ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಆಗಸ್ಟ್ 20, 2021ರಂದು ಈ ಫೋಟೋವನ್ನು ಎಕ್ಸ್‌ನಲ್ಲಿ ಹಂಚಿಕೊಂಡಿದ್ದ Rakesh Krishnan Simha(@ByRakeshSimha)ಎಂಬ ಎಕ್ಸ್ ಬಳಕೆದಾರ “ಅರ್ಫಾ, ಸಬಾ ಮತ್ತು ಸ್ವರಾ ಎಂಬವರು ಉತ್ತರ ಕಾಬೂಲ್‌ನಲ್ಲಿ ವಾಯು ವಿಹಾರಕ್ಕೆ ತೆರಳುತ್ತಿರುವ ಫೋಟೋ ಎಂದು ಒಬ್ಬರು ಇದನ್ನು ನನಗೆ ಕಳುಹಿಸಿದ್ದಾರೆ. ಯಾರಾದರು ಇದು ನಿಜವೋ? ಸುಳ್ಳೋ? ಎಂಬುವುದನ್ನು ಖಚಿತಪಡಿಸಿ. ಸುಳ್ಳು ಸುದ್ದಿ ಹಬ್ಬಿದ ಆರೋಪ ಹೊತ್ತುಕೊಳ್ಳಲು ನನಗೆ ಇಷ್ಟವಿಲ್ಲ” ಎಂದು ಬರೆದುಕೊಂಡಿದ್ದರು.

ಆಗಸ್ಟ್ 16, 2021ರಂದು Dr Meena Kandasamy (@meenakandasamy) ಎಂಬ ಎಕ್ಸ್ ಬಳಕೆದಾರರು “ತಾಲಿಬಾನ್ ಅನ್ನು ತ್ವರಿತವಾಗಿ ಅರ್ಥಮಾಡಿಕೊಳ್ಳಲು ಬಯಸುವ ಪ್ರತಿಯೊಬ್ಬರಿಗೂ, ಅವರು ಅಫ್ಘಾನಿಸ್ತಾನದಲ್ಲಿ ಹೆಚ್ಚು ಕಡಿಮೆ ಆರ್‌ಎಸ್‌ಎಸ್ ಸಮಾನರು” ಎಂದು ಎಕ್ಸ್‌ನಲ್ಲಿ ಪೋಸ್ಟ್ ಹಾಕಿದ್ದರು.

ಇದಕ್ಕೆ ತಿರುಗೇಟು ಕೊಡುವ ವೇಳೆ ನಾವು ಮೇಲ್ಗಡೆ ಉಲ್ಲೇಖಿಸಿದ ವೈರಲ್ ಪೋಟೋವನ್ನು ಹಂಚಿಕೊಂಡಿದ್ದ
TheCorporateLady🇮🇳 (@PallaviJaiswal0)ಎಂಬ ಬಳಕೆದಾರರು ” ತಾಲಿಬಾನ್ ಅನ್ನು ಅರ್ಥಮಾಡಿಕೊಳ್ಳಲು ತ್ವರಿತ ಮಾರ್ಗ! ಅದು ಇಂದಿನ ಆಫ್ಘಾನಿಸ್ತಾನದಲ್ಲಿ. ನೀವೂ ಒಮ್ಮೆ ಅಲ್ಲಿಯೇ ಇರಲು ಪ್ರಯತ್ನಿಸಿ. ಆರ್‌ಎಸ್‌ಎಸ್‌ ಅನ್ನು ಅರ್ಥಮಾಡಿಕೊಳ್ಳಲು ನಿಮಗೆ ಬುದ್ಧಿ ಶಕ್ತಿಯ ಅಗತ್ಯವಿದೆ. ಭಾರತದಲ್ಲಿ ಮಹಿಳೆಯರು ಸುರಕ್ಷಿತವಾಗಿದ್ದಾರೆ ಮತ್ತು ಮುಕ್ತವಾಗಿ ತಿರುಗಾಡುತ್ತಿದ್ದಾರೆ.” ಎಂದು ಬರೆದುಕೊಂಡಿದ್ದರು.

 

ಫ್ಯಾಕ್ಟ್‌ಚೆಕ್ : ನಾವು ಮೇಲ್ಗಡೆ ಉಲ್ಲೇಖಿಸಿದ ವೈರಲ್ ಫೋಟೋದ ಕುರಿತು ಸತ್ಯಾಸತ್ಯತೆ ಪರಿಶೀಲಿಸಿದ್ದೇವೆ. ಮೊದಲು fakeimagedetector.com ಎಂಬ ವೆಬ್‌ಸೈಟ್‌ನಲ್ಲಿ ಫೋಟೋ ನಿಜವಾದ್ದದ್ದೇ ಅಥವಾ ಎಡಿಟೆಡಾ? ಎಂದು ಪರಿಶೀಲಿಸಿದ್ದೇವೆ. ಈ ವೇಳೆ ಈ ಫೋಟೋ ರಚಿತ ಅಥವಾ ಎಡಿಟೆಡ್ ಎಂದು ತೋರುತ್ತಿದೆ ಎಂಬುವುದಾಗಿ ವೆಬ್‌ಸೈಟ್‌ ತಿಳಿಸಿದೆ.

ಬಳಿಕ ನಾವು ಗೂಗಲ್‌ ರಿವರ್ಸ್ ಇಮೇಜ್‌ನಲ್ಲಿ ಫೋಟೋ ಹಾಕಿ ಸರ್ಚ್ ಮಾಡಿದ್ದೇವೆ. ಈ ವೇಳೆ ನಮಗೆ ಫೋಟೋ ಕುರಿತು ಯಾವುದೇ ಸ್ಪಷ್ಟ ಮಾಹಿತಿ ದೊರೆತಿಲ್ಲ.

ಆದರೆ 29 ಮಾರ್ಚ್‌ 2017 ರಂದು ಈ ವೈರಲ್‌ ಫೋಟೋಗೆ ಹೋಲಿಕೆಯಾಗುವಂತಹ ಒಂದು ಫೋಟೋ ಮಾರ್ಡನ್‌ ಡಿಪ್ಲೋಮೆಸಿ ಎಂಬ ವೆಬ್‌ ಸೈಟ್‌ ಅಂಕಣದಲ್ಲಿ ಬಳಸಿಕೊಂಡಿರುವುದು ಕಂಡು ಬಂದಿದೆ. ಆದರೆ, ವೆಬ್‌ಸೈಟ್‌ನಲ್ಲಿ ಫೋಟೋದಲ್ಲಿ ವೈರಲ್‌ ಫೋಟೋದಲ್ಲಿ ಇದ್ದಂತ ಸರಪಳಿ ಕಂಡು ಬಂದಿಲ್ಲ.

ಇದೇ ರೀತಿಯಾಗಿ 27 ಆಗಸ್ಟ್‌ 2017 ರಂದು ‘ಪತಿಗಿಂತ ಪತ್ನಿ ಒಂದು ಹೆಜ್ಜೆ ಮುಂದೆ ಇಡುತ್ತಿದ್ದ ಕಾರಣ ಪತಿ ಪತ್ನಿಗೆ ವಿಚ್ಚೇದನ ನೀಡಿದ್ದಾರೆ’ ಎಂಬ ವರದಿಯೊಂದಿಗೆ ಎಬಿಪಿ ಬೆಂಗಾಲ್ ಈ ಫೋಟೋ ಹಂಚಿಕೊಳ್ಳಲಾಗಿದೆ. ಆದರೆ, ಈ ವರದಿಯಲ್ಲಿ ಪೋಟೋವನ್ನು ಸಾಂಕೇತಿಕ ಚಿತ್ರ ಎಂದು ಉಲ್ಲೇಖಿಸಲಾಗಿದೆ. ಹಾಗಾಗಿ, ಈ ವರದಿಯಲ್ಲಿ ಕೂಡ ಇದು ಸಾಂಕೇತಿಕ ಚಿತ್ರವಾಗಿ ಬಳಕೆಯಾಗಿದೆ.

ನಾವು ಫೋಟೋ ಕುರಿತು ಇನ್ನಷ್ಟು ಮಾಹಿತಿ ಹುಡುಕಿದಾಗ 2011ರಲ್ಲಿ RabbitMatch.org ಮತ್ತು Wicked Thoughts ಎಂಬ ಎರಡೂ ಬ್ಲಾಗ್‌ಗಳು ಅಫ್ಘಾನಿಸ್ತಾನದಲ್ಲಿನ ಲಿಂಗ ತಾರತಮ್ಯಗಳ ಕುರಿತು ಅಂಕಣ ಬರೆಯಲು ಈ ಚಿತ್ರಗಳನ್ನು ಬಳಸಿಕೊಂಡಿರುವುದು ಕಂಡು ಬಂದಿದೆ. ಆದರೆ, ಅಲ್ಲೂ ಕೂಡ ಈ ಫೋಟೋವನ್ನು ಸಾಂಕೇತಿಕವಾಗಿ ಬಳಸಿಕೊಳ್ಳಲಾಗಿದೆ. ಆದರೆ, ಇಲ್ಲೂ ಕೂಡ ಸರಪಳಿಗಳು ಕಂಡು ಬಂದಿಲ್ಲ. ಹಾಗಾಗಿ, ಇದೊಂದು ಎಡಿಟೆಡ್‌ ಫೋಟೋ ಎಂಬುವುದು ಸ್ಪಷ್ಟವಾಗಿದೆ.

ಲಭ್ಯ ಮೂಲಗಳನ್ನು ಬಳಸಿ ನಾವು ನಡೆಸಿದ ಪರಿಶೀಲನೆಯಲ್ಲಿ ಮುಸ್ಲಿಂ ವ್ಯಕ್ತಿಯೊಬ್ಬ ತನ್ನ ಮೂವರು ಪತ್ನಿಯರ ಕಾಲಿಗೆ ಸರಪಳಿ ಬಿಗಿದು ವಾಯು ವಿಹಾರಕ್ಕೆ ಕರೆದೊಯ್ಯುತ್ತಿದ್ದಾನೆ ಎಂದು ಹಂಚಿಕೊಳ್ಳಲಾದ ಫೋಟೋ ಎಡಿಟೆಡ್ ಎಂದು ಗೊತ್ತಾಗಿದೆ.

ಇದನ್ನೂ ಓದಿ : FACT CHECK : ಕಾಸರಗೋಡಿನಲ್ಲಿ ಮುಸ್ಲಿಂ ಯುವಕರು ಪಾಕಿಸ್ತಾನ ಕ್ರಿಕೆಟ್ ತಂಡದ ಜೆರ್ಸಿ ಧರಿಸಿ ಸಂಭ್ರಮಿಸಿದ್ದಾರೆ ಎಂಬುವುದು ಸುಳ್ಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...

ಜಗತ್ತಿನ ಪ್ರತಿಯೊಬ್ಬರಿಗೂ ಲ್ಯಾಪ್‌ಟಾಪ್ ಕೊಳ್ಳುವಷ್ಟು ಕಪ್ಪು ಹಣ ಪ್ರಪಂಚದಲ್ಲಿದೆ: ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್

ಅಕ್ರಮ ಹಣ ವರ್ಗಾವಣೆ (Money Laundering) ಮತ್ತು 'ಡಿಜಿಟಲ್ ಅರೆಸ್ಟ್' ನಂತಹ ಆನ್‌ಲೈನ್ ವಂಚನೆಗಳ ಪ್ರಮಾಣದ ಕುರಿತು ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ರೀತಿಯ...

ಪೆಟ್ರೋಲ್‌ನಲ್ಲಿ ಎಥನಾಲ್ ಪ್ರಮಾಣ ಬಹಿರಂಗಪಡಿಸುವಂತೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಪೆಟ್ರೋಲ್‌ನಲ್ಲಿ ಬೆರೆಸಲಾಗುವ ಎಥನಾಲ್ ಪ್ರಮಾಣವನ್ನು ಕಡ್ಡಾಯವಾಗಿ ನಮೂದಿಸಬೇಕು ಮತ್ತು ವಾಹನಗಳಿಗೆ ಎಥನಾಲ್ ಮಿಶ್ರಿತ ಇಂಧನದ ಹೊಂದಾಣಿಕೆಯ ಬಗ್ಗೆ ಹೆಚ್ಚಿನ ಪಾರದರ್ಶಕತೆ ತರಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆ...

ದೆಹಲಿ| ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಿದ ಎಂಸಿಡಿ

ದೆಹಲಿ ಹೈಕೋರ್ಟ್ ನಿರ್ದೇಶನದಂತೆ, ಮೊಘಲರ ಕಾಲದ ಐತಿಹಾಸಿಕ ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ನಿರ್ಮಾಣಗಳನ್ನು ಸಮೀಕ್ಷೆ ಮಾಡಿ, ಒತ್ತುವರಿಯನ್ನು ತೆರವುಗೊಳಿಸುವ ಬೃಹತ್ ಕಾರ್ಯಾಚರಣೆಯನ್ನು ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) ಸೋಮವಾರ (ಆ.31) ಪ್ರಾರಂಭಿಸಿದೆ...

ವೆನೆಜುವೆಲಾ ಮತ್ತೆ ಎದ್ದು ನಿಲ್ಲಲಿದೆ: ಬಂಧನದಲ್ಲಿರುವ ವೆನೆಜುವೆಲಾ ಮಾಜಿ ಅಧ್ಯಕ್ಷ ಮಡುರೊ ಮೊದಲ ಫೋಟೋ ಹಂಚಿಕೆ

ಜನವರಿಯಲ್ಲಿ ಅಮೆರಿಕ ಪಡೆಗಳಿಂದ ಬಂಧನಕ್ಕೊಳಗಾಗಿದ್ದ ವೆನೆಜುವೆಲಾದ ಮಾಜಿ ಅಧ್ಯಕ್ಷ ನಿಕೋಲಸ್ ಮಡುರೊ, ಅಮೆರಿಕದ ಬಂಧನ ಕೇಂದ್ರದಿಂದ ತಮ್ಮ ಎರಡು ಛಾಯಾಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಬಂಧನದ ಬಳಿಕ ಮಡುರೊ ಅವರ ಫೋಟೋಗಳು ಹೊರಬಂದಿರುವುದು...

‘ಮಹಿಳೆಯರು ಆಭರಣದಂತೆ ಮನೆಯಲ್ಲೇ ಇರಬೇಕು’ ಮುಸ್ಲಿಂ ಧರ್ಮಗುರು ವಿವಾದಾತ್ಮಕ ಹೇಳಿಕೆ

ಮಹಿಳೆಯರು ಮನೆಯಲ್ಲೇ ಇರಬೇಕು ಮತ್ತು ಸಾರ್ವಜನಿಕ ಕ್ಷೇತ್ರಕ್ಕೆ ಪ್ರವೇಶಿಸಬಾರದು ಎಂದು ಕೇರಳದ ಪ್ರಭಾವಿ ಮುಸ್ಲಿಂ ಧರ್ಮಗುರು ಶೇಖ್ ಅಬೂಬಕರ್ ಅಹ್ಮದ್ ನೀಡಿದ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ...

ಹಲ್ದ್ವಾನಿ ‘ಶುದ್ಧೀಕರಣ’ ವಿವಾದ : ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್

ಉತ್ತರಾಖಂಡದ ಹಲ್ದ್ವಾನಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ರ್‍ಯಾಲಿ ನಡೆದ ಸ್ಥಳದಲ್ಲಿ ಬಿಜೆಪಿ ಬೆಂಬಲಿಗರು 'ಶುದ್ಧೀಕರಣ' ನಡೆಸಿದ ವಿವಾದ ಹೊಸ ರಾಜಕೀಯ ಮತ್ತು ಕಾನೂನು ತಿರುವು ಪಡೆದುಕೊಂಡಿದೆ. ಜಾತಿ ನಿಂದನೆಗೆ ಸಂಬಂಧಿಸಿದಂತೆ...

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...

ನೇಪಾಳ: ಶಿಕ್ಷಕನ ಸಮಯಪ್ರಜ್ಞೆಯಿಂದ ಉಳಿಯಿತು 1643 ಮಕ್ಕಳ ಪ್ರಾಣ

ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಜಲಪ್ರಳಯಕ್ಕೆ ಬಲಿಯಾದವರ ಸಂಖ್ಯೆ 700ರ ಗಡಿ ದಾಟಿದೆ. 2,000ಕ್ಕೂ ಹೆಚ್ಚು ಜನರು ಇಂದಿಗೂ ನಾಪತ್ತೆಯಾಗಿದ್ದು, ರಕ್ಷಣಾ ಪಡೆಗಳು ಅವಿಶ್ರಾಂತವಾಗಿ ಶೋಧ ಕಾರ್ಯ ನಡೆಸುತ್ತಿವೆ. ಪ್ರಕೃತಿ ತನ್ನ...