Homeಫ್ಯಾಕ್ಟ್‌ಚೆಕ್FACT CHECK : ಅನಂತ್, ರಾಧಿಕಾ ಮದುವೆಯಲ್ಲಿ ಸಲ್ಮಾನ್ ಖಾನ್- ಐಶ್ವರ್ಯಾ ರೈ ಜೊತೆ ಫೋಟೋ?...

FACT CHECK : ಅನಂತ್, ರಾಧಿಕಾ ಮದುವೆಯಲ್ಲಿ ಸಲ್ಮಾನ್ ಖಾನ್- ಐಶ್ವರ್ಯಾ ರೈ ಜೊತೆ ಫೋಟೋ? ಅಸಲಿಯತ್ತೇನು?

- Advertisement -
- Advertisement -

ರಿಲಯನ್ಸ್ ಇಂಡಸ್ಟ್ರೀಸ್ ಮುಖ್ಯಸ್ಥ ಮುಕೇಶ್ ಅಂಬಾನಿ ಹಾಗೂ ರಿಲಯನ್ಸ್ ಫೌಂಡೇಷನ್  ಅಧ್ಯಕ್ಷೆ ನೀತಾ ಅಂಬಾನಿ ದಂಪತಿಯ ಕಿರಿಯ ಮಗ ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್  ಅವರ ವಿವಾಹವು ಶುಕ್ರವಾರ ಅದ್ಧೂರಿಯಾಗಿ ನಡೆಯಿತು. ದೇಶ, ವಿದೇಶಗಳಿಂದ ಬಂದಿದ್ದ ಸಾವಿರಾರು ಸಂಖ್ಯೆಯ ಅತಿಥಿಗಳು ಮದುವೆ ಸಮಾರಂಭದಲ್ಲಿ ಭಾಗಿಯಾಗಿದ್ದರು. ರಾಜಕೀಯ ಕ್ಷೇತ್ರದ ಹಲವು ಗಣ್ಯರು, ಸಿನಿ ತಾರೆಯರು ನವ ದಂಪತಿಗೆ ಶುಭ ಕೋರಿದ್ದಾರೆ.

ರಾಧಿಕಾ ಮರ್ಚೆಂಟ್ ಮತ್ತು ಅನಂತ್ ಅಂಬಾನಿ ಅವರ ವಿವಾಹ ಸಮಾರಂಭದಲ್ಲಿ ಸೆಲೆಬ್ರಿಟಿಗಳು ಒಟ್ಟಿಗೆ ಪೋಸ್ ನೀಡುತ್ತಿರುವ ಹಲವಾರು ಫೋಟೋಗಳು ಮತ್ತು ವಿಡಿಯೋಗಳು ಸಾಮಾಜಿಕ ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿವೆ. ಆದರೆ ನೆಟ್ಟಿಗರನ್ನು ಸ್ಕ್ರೋಲಿಂಗ್ ಮಾಡುವುದನ್ನು ನಿಲ್ಲಿಸುವಂತೆ ಮಾಡಿದ ಒಂದು ಚಿತ್ರವೆಂದರೆ ಐಶ್ವರ್ಯಾ ರೈ ಮತ್ತು ಸಲ್ಮಾನ್ ಖಾನ್ ಒಟ್ಟಿಗೆ ಪೋಸ್ ನೀಡಿರುವ ಫೋಟೊ.

ಐಶ್ವರ್ಯಾ ಮತ್ತು ಸಲ್ಮಾನ್ ಒಟ್ಟಿಗೆ ಪೋಸ್ ನೀಡಿರುವ ಫೋಟೋವನ್ನು ಹಂಚಿಕೊಂಡ ವ್ಯಕ್ತಿಯೊಬ್ಬರು ಹೀಗೆ ಬರೆದಿದ್ದಾರೆ, “ಐಶ್ವರ್ಯಾ ಬಚ್ಚನ್ ಕುಟುಂಬದವರೊಂದಿಗೆ ಬಂದಿಲ್ಲ, ಮತ್ತು ಈಗ ಅವರು ಸಲ್ಮಾನ್ ಭಾಯ್ ಅವರೊಂದಿಗೆ ಪೋಸ್‌ ನೀಡುವ ಮೂಲಕ ಹುಚ್ಚುತನ ಮೆರೆದಿದ್ದಾರೆ. ಎಂಬ ಹೇಳಿಕೆಯನ್ನು ಸೇರಿಸಿದ್ದಾರೆ. 

ಆದರೆ ಐಶ್ವರ್ಯಾ ಮತ್ತು ಸಲ್ಮಾನ್ ಒಟ್ಟಿಗೆ ಪೋಸ್ ನೀಡಿರುವ ಬಗ್ಗೆ ಹಲವರು ಅನುಮಾನ ವ್ಯಕ್ತಪಡಿಸಿದ್ದು ಈ ವೈರಲ್ ಚಿತ್ರ ಎಡಿಟೆಡ್ ಎಂದು ಪ್ರತಿಕ್ರಿಯಿಸಿದ್ದಾರೆ. ಹಾಗಿದ್ದರೆ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆ ನಿಜವೇ ಎಂದು ಪರಿಶೀಲಿಸೋಣ.

ಫ್ಯಾಕ್ಟ್‌ಚೆಕ್ : ಸಾಮಾಜಿಕ ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿರುವ ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್  ಅವರ ಮದುವೆ ಪೋಟೊಗಳಲ್ಲಿ ಹೆಚ್ಚು ವೈರಲ್ ಆಗುತ್ತಿರುವ ಐಶ್ವರ್ಯಾ ಮತ್ತು ಸಲ್ಮಾನ್ ಒಟ್ಟಿಗೆ ಪೋಸ್ ನೀಡಿರುವ ಫೋಟೊದ ನೈಜತೆಯನ್ನು ಪರಿಶೀಲಿಸಲು ಗೂಗಲ್ ಸರ್ಚ್ ಮಾಡಿದಾಗ,  ಜೂಮ್ ಟಿವಿ ಹಂಚಿಕೊಂಡಿರುವ ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್ ಅವರ ಮದುವೆಯ ಸಂದರ್ಭದಲ್ಲಿ ಸಲ್ಮಾನ್ ಖಾನ್ ಚಿತ್ರಗಳನ್ನು ಹಂಚಿಕೊಂಡಿದ್ದು ನಮಗೆ ಲಭ್ಯವಾಗಿವೆ. ಫೋಟೊದಲ್ಲಿ, ನಟ ಸಲ್ಮಾನ್ ಖಾನ್ ತನ್ನ ಸಹೋದರಿ ಅರ್ಪಿತಾ ಖಾನ್ ಜೊತೆ ಪೋಸ್ ನೀಡಿದ್ದು, ವೈರಲ್ ಫೋಟೋದಲ್ಲಿ ಕಂಡುಬರುವಂತೆ ಅದೇ ಹಿನ್ನೆಲೆಯಲ್ಲಿ ಮತ್ತು ಉಡುಪಿನಲ್ಲಿ ಕಾಣಿಸಿಕೊಂಡಿದ್ದಾರೆ. 

ಜುಲೈ 12 ರಂದು ಮುಕೇಶ್ ಅಂಬಾನಿ ಮಗ ಅಂನತ್ ಅಂಬಾನಿ ಮದುವೆಗೆ ಬಾಲಿವುಡ್ ನಟರು ಆಗಮಿಸುವ ಮಾಧ್ಯಮದ ತುಣುಕುಗಳು ಲಭ್ಯವಾಗಿದೆ. ವಿವಿಧ ಮಾಧ್ಯಮಗಳು ಹಂಚಿಕೊಂಡ ಹಲವಾರು ವಿಡಿಯೋಗಳಲ್ಲಿ ಸಲ್ಮಾನ್ ಖಾನ್ ಸಹೋದರಿ ಅರ್ಪಿತಾ ಖಾನ್ ಅವರೊಂದಿಗೆ ಸ್ಥಳಕ್ಕೆ ಆಗಮಿಸುತ್ತಿರುವುದನ್ನು ತೋರಿಸಿದೆ. ಮತ್ತೊಂದೆಡೆ ಐಶ್ವರ್ಯಾ ರೈ ಬಚ್ಚನ್ ತಮ್ಮ ಮಗಳು ಆರಾಧ್ಯ ಜೊತೆ ಫೋಟೋಗಳಿಗೆ ಪೋಸ್ ಕೊಟ್ಟಿದ್ದಾರೆ. ಈ ಸಮಯದಲ್ಲಿ ಸಲ್ಮಾನ್ ಮತ್ತು ಐಶ್ವರ್ಯಾ ಒಟ್ಟಿಗೆ ಇರುವ ಯಾವ ಚಿತ್ರವನ್ನು ಮಾಧ್ಯಮಗಳು ಹಂಚಿಕೊಂಡಿಲ್ಲ ಎಂಬುದು ಸ್ಪಷ್ಟವಾಗಿದೆ.

ವಾಸ್ತವವಾಗಿ, ನಟ ಸಲ್ಮಾನ್ ಖಾನ್ ಮತ್ತು ಐಶ್ವರ್ಯಾ ರೈ ಇಬ್ಬರೂ ಮದುವೆ ಸಮಾರಂಭದಲ್ಲಿ ಭಾಗವಹಿಸಿದ್ದು ನಿಜ, ಆದರೆ ಇಬ್ಬರು ಜೊತೆಯಾಗಿ ನಿಂತು ಫೋಟೊಗೆ ಪೋಸ್‌ ನೀಡಿದ್ದಾರೆ ಎಂಬುದು ಸುಳ್ಳು, ಎರಡು ಬೇರೆ ಬೇರೆ ಚಿತ್ರವನ್ನು ಎಡಿಟ್‌ ಮಾಡಿ ಸಲ್ಮಾನ್ ಖಾನ್ ಮತ್ತು ಐಶ್ವರ್ಯಾ ರೈ ಒಟ್ಟಿಗೆ ಫೋಸ್ ನೀಡಿರುವಂತೆ ರಚಿಸಲಾಗಿದೆ.

 

ಈಗ ಕೃತಕ ಬುದ್ಧಿಮತ್ತೆಯ(AI) ಜಗತ್ತಿನಲ್ಲಿ ವಾಸಿಸುತ್ತಿದ್ದೇವೆ ಮತ್ತು ಸಲ್ಮಾನ್ ಖಾನ್ ಐಶ್ವರ್ಯಾ ರೈ ಅವರೊಂದಿಗೆ ಪೋಸ್ ನೀಡುತ್ತಿರುವ ಈ ಚಿತ್ರದಂತೆಯೇ ನಾವು ನೋಡುವ ಎಲ್ಲವೂ ನಿಜವಲ್ಲ. ಈ ಚಿತ್ರವು ಕಾಡ್ಗಿಚ್ಚಿನಂತೆ ವೈರಲ್ ಆಗುತ್ತಿದೆ ಮತ್ತು ಇದು ‘ಹಮ್ ದಿಲ್ ದೇ ಚುಕೇ ಸನಮ್ 2’ ಕೇಳುವ ಅನೇಕರನ್ನು ಗೊಂದಲಕ್ಕೀಡು ಮಾಡಿದೆ. ಒಬ್ಬ ಅಭಿಮಾನಿ “ಹಮ್ ದಿಲ್ ದೇ ಚುಕೆ ಸನಮ್ 2 ಗಾಗಿ ಸಲ್ಮಾನ್ ಖಾನ್ ಮತ್ತು ಐಶ್ವರ್ಯಾ ರೈ ಒಟ್ಟಿಗೆ” ಎಂದು ಬರೆದಿದ್ದಾರೆ. “AI ನಿಜವಾಗಿಯೂ ಅಪಾಯಕಾರಿ” ಎಂದು ಜಾಗೃತ ಅಭಿಮಾನಿಯೊಬ್ಬರು ಕಾಮೆಂಟ್ ಮಾಡಿದ್ದಾರೆ.

ಸಲ್ಮಾನ್ ಖಾನ್ ತಮ್ಮ ಸಹೋದರಿ ಅರ್ಪಿತಾ ಅವರೊಂದಿಗೆ ಕ್ಯಾಮೆರಾಗೆ ಪೋಸ್ ನೀಡಿದರೆ, ಐಶ್ವರ್ಯಾ ರೈ ತಮ್ಮ ಮಗಳು ಆರಾಧ್ಯ ಅವರೊಂದಿಗೆ ಫೋಟೊದಲ್ಲಿ ಇರುವುದನ್ನು ಕಾಣಬಹುದು.  ಈ ಎರಡು ಬೇರೆ ಬೇರೆ ಚಿತ್ರವನ್ನು ಜೋಡಿಸಿ ಎಡಿಟ್ ಮಾಡಿ ತಪ್ಪಾಗಿ ಹಂಚಿಕೊಳ್ಳಲಾಗಿದೆ. 

ಇದನ್ನೂ ಓದಿ : FACT CHECK : ನಿರ್ಮಲಾ ಸೀತಾರಾಮನ್ ಕಚೇರಿಗೆ ಹೋಗಲು ದೆಹಲಿ ಮೆಟ್ರೋ ಬಳಸುತ್ತಾರೆ ಎಂಬುವುದು ನಿಜವೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘Dr. Nimo Yadav’, ‘Nehr Who’ ಎಕ್ಸ್‌ ಖಾತೆಗಳನ್ನು ತಕ್ಷಣ ಮರುಸ್ಥಾಪಿಸಲು ದೆಹಲಿ ಹೈಕೋರ್ಟ್ ಆದೇಶ

'Dr. Nimo Yadav' ಮತ್ತು 'Nehr Who' ಎಂಬ ಎರಡು ಪರೋಡಿ ಎಕ್ಸ್‌ ಖಾತೆಗಳನ್ನು ತಕ್ಷಣ ಮರು ಸ್ಥಾಪಿಸುವಂತೆ ದೆಹಲಿ ಹೈಕೋರ್ಟ್ ಸೋಮವಾರ (ಏ.6) ಎಕ್ಸ್ ಸಂಸ್ಥೆಗೆ (X Corp) ಆದೇಶಿಸಿದೆ. 'Dr....

ಬಂಗಾಳ| ಮತದಾರರ ಪಟ್ಟಿಯಿಂದ ಹೆಸರು ತೆಗೆದ ಬಳಿಕ ಸಾವಿಗೆ ಶರಣಾದ ಮುಸ್ಲಿಂ ವ್ಯಕ್ತಿ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ನಂತರ ಪಶ್ಚಿಮ ಬಂಗಾಳದಲ್ಲಿ ಮತದಾರರ ಪಟ್ಟಿಯಿಂದ ತನ್ನ ಹೆಸರನ್ನು ತೆಗೆದುಹಾಕಿದ್ದರಿಂದ ಮನನೊಂದ ಮುಸ್ಲಿಂ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಮೃತನನ್ನು ಬಿರ್ಭುಮ್...

‘ಯೋಜನೆಯು ಕೇರಳಕ್ಕೆ ಜೀವನಾಡಿಯಾಗಲಿದೆ’: ವಯನಾಡ್ ಸುರಂಗ ಮಾರ್ಗ ವಿರುದ್ದದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಕೇರಳದ ಕೋಝಿಕ್ಕೋಡ್-ವಯನಾಡ್ ಸುರಂಗ ಮಾರ್ಗ ನಿರ್ಮಾಣಕ್ಕೆ ನೀಡಲಾದ ಪರಿಸರ ಅನುಮತಿ (ಇಸಿ) ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ (ಏ.6) ವಜಾಗೊಳಿಸಿದೆ. ಸುರಂಗ ನಿರ್ಮಾಣದ ಸಮಯದಲ್ಲಿ ಪರಿಸರ ಅನುಮತಿಯ ಷರತ್ತುಗಳ ಉಲ್ಲಂಘನೆಯಾದರೆ, ಅರ್ಜಿದಾರರು...

651 ಕೋಟಿ ರೂ. ಮೌಲ್ಯದ ನಗದು, ಮದ್ಯ, ಮಾದಕ ವಸ್ತು ವಶಪಡಿಸಿಕೊಂಡ ಚುನಾವಣಾ ಆಯೋಗ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದಲ್ಲಿ ನಡೆಯುತ್ತಿರುವ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಅಧಿಕಾರಿಗಳು 651.51 ಕೋಟಿ ರೂ.ಗೂ ಹೆಚ್ಚು ಮೌಲ್ಯದ ನಗದು, ಮದ್ಯ, ಮಾದಕ ವಸ್ತುಗಳು ಮತ್ತು ಇತರ ಉಚಿತ ವಸ್ತುಗಳನ್ನು...

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ಬಾಲಕಿಯನ್ನು ಸರಪಳಿಯಿಂದ ಕಟ್ಟಿ ಥಳಿಸಿದ ಮಾಜಿ ಸೇನಾಧಿಕಾರಿ

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ನಾಲ್ಕು ವರ್ಷದ ಬಾಲಕಿಯನ್ನು ನಿವೃತ್ತ ಸೇನಾಧಿಕಾರಿಯೊಬ್ಬರು ಸರಪಳಿಯಿಂದ ಕಟ್ಟಿಹಾಕಿ ಕ್ರೂರವಾಗಿ ಥಳಿಸಿರುವ ಆಘಾತಕಾರಿ ಘಟನೆ ಹಿಮಾಚಲ ಪ್ರದೇಶದ ಉನಾ ಜಿಲ್ಲೆಯ ಬೆಹಡಾಲ ಗ್ರಾಮದಲ್ಲಿ ನಡೆದಿದೆ. ಬಾಲಕಿಯು ನಿವೃತ್ತ ಸೇನಾಧಿಕಾರಿಯ ತೋಟದ...

ಆಂಧ್ರ ವಿಧಾನಸಭಾ ಸ್ಪೀಕರ್ ಅಯ್ಯಣ್ಣ ಪಾತ್ರುಡು ಅವರಿಂದ ದಲಿತ ವ್ಯಕ್ತಿಗೆ ಕಪಾಳಮೋಕ್ಷ: ವೈಎಸ್‌ಆರ್‌ಸಿಪಿ ವಾಗ್ದಾಳಿ

ಏಪ್ರಿಲ್ 3 ರ ಗುರುವಾರ ನರಸಿಪಟ್ಟಣದಲ್ಲಿ ದಲಿತ ವ್ಯಕ್ತಿಯೊಬ್ಬರಿಗೆ ಕಪಾಳಮೋಕ್ಷ ಮಾಡಿದ್ದಕ್ಕಾಗಿ ಆಂಧ್ರಪ್ರದೇಶ ವಿಧಾನಸಭಾ ಸ್ಪೀಕರ್ ಮತ್ತು ತೆಲುಗು ದೇಶಂ ಪಕ್ಷದ (ಟಿಡಿಪಿ) ನಾಯಕ ಅಯ್ಯಣ್ಣ ಪಾತ್ರುಡು ಅವರ ವಿರುದ್ಧ ವೈಎಸ್‌ಆರ್ ಕಾಂಗ್ರೆಸ್...

ಪ. ಬಂಗಾಳ | ಬಿಜೆಪಿ ಪ್ರಚಾರ ಸಾಮಗ್ರಿ ಸಜ್ಜುಗೊಳಿಸಿದ ವಿಡಿಯೋ ವೈರಲ್ : ಚುನಾವಣಾ ಕರ್ತವ್ಯದಲ್ಲಿದ್ದ ಅಧಿಕಾರಿ ಅಮಾನತು

ಬಿಜೆಪಿ ಪ್ರಚಾರ ಸಾಮಗ್ರಿಗಳನ್ನು ತಯಾರಿಸಲು ಸಹಾಯ ಮಾಡಿದ ಆರೋಪದ ಮೇಲೆ ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯ ಪಾಣಿಹಟಿ ವಿಧಾನಸಭಾ ಕ್ಷೇತ್ರದ ಅಧಿಕಾರಿಯೊಬ್ಬರನ್ನು ಚುನಾವಣಾ ಆಯೋಗ ಅಮಾನತುಗೊಳಿಸಿದೆ ಎಂದು ದಿ ಇಂಡಿಯನ್...

ಮುಸ್ಲಿಮರ ವಿರುದ್ಧ ದ್ವೇಷ ಕಾರುವ ಅಸ್ಸಾಂ ಸಿಎಂ ಪತ್ನಿ ಬಳಿ 2 ಮುಸ್ಲಿಂ ದೇಶಗಳ ಪಾಸ್‌ಪೋರ್ಟ್ ಇದೆ : ಕಾಂಗ್ರೆಸ್ ಆರೋಪ

ಮತದಾನಕ್ಕೆ ಇನ್ನೇನು ಮೂರು ದಿನಗಳು ಬಾಕಿ ಇರುವಾಗ, ಅಸ್ಸಾಂನಲ್ಲಿ ಕಾಂಗ್ರೆಸ್‌-ಬಿಜೆಪಿ ನಡುವೆ ವೈಯಕ್ತಿಕ ವಿಚಾರಗಳ ಕುರಿತ ವಾಗ್ಯುದ್ಧ ತಾರಕಕ್ಕೇರಿದೆ. ಸಿಎಂ ಹಿಮಂತ ಬಿಸ್ವಾ ಶರ್ಮಾ ಮತ್ತು ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ...

ದಟ್ಟಾರಣ್ಯದೊಳಗೆ ಮೂರು ದಿನಗಳನ್ನು ಕಳೆದಿದ್ದು ಹೇಗೆ..ದಾರಿ ತಪ್ಪಿದ ಬಳಿಕ ಏನಾಯ್ತು? ನಾಪತ್ತೆ ವಿಚಾರ ಬಿಚ್ಚಿಟ್ಟ ಶರಣ್ಯ

ಕಳೆದ ಗುರುವಾರ (ಏಪ್ರಿಲ್ 2, 2026) ಕೊಡಗಿನ ತಡಿಯಂಡಮೋಳ್ ಬೆಟ್ಟಕ್ಕೆ ಚಾರಣಕ್ಕೆ ತೆರಳಿ ನಾಪತ್ತೆಯಾಗಿದ್ದ ಕೇರಳದ ಯುವತಿ ಶರಣ್ಯ, ಮೂರು ದಿನಗಳ ಬಳಿಕ, ಅಂದರೆ ನಾಪತ್ತೆಯಾದ ನಾಲ್ಕನೇ ದಿನ ಭಾನುವಾರ (ಏಪ್ರಿಲ್ 4,...

ಮಗಳ ವಿಚ್ಛೇದನ: ಸಿಹಿ ಹಂಚಿ, ಮೆರವಣಿಗೆಯಲ್ಲಿ ಆಕೆಯನ್ನು ಮನೆಗೆ ಕರೆತಂದ ನೀವೃತ್ತ ನ್ಯಾಯಾದೀಶ ಮತ್ತು ಕುಟುಂಬ

ಮೀರತ್: ಕೌಟುಂಬಿಕ ನ್ಯಾಯಾಲಯದಲ್ಲಿ ಮಗಳ ವಿಚ್ಛೇದನ ಅಂತಿಮವಾದ ನಂತರ ಆಕೆಯನ್ನು ಡೋಲು, ನೃತ್ಯಗಳ ಮೆರವಣಿಗೆಯಲ್ಲಿ ಸಂಭ್ರಮದಿಂದ ತಂದೆ ಮನೆಗೆ ಕರೆತಂದ ಘಟನೆ ಮೀರನ್ ನಲ್ಲಿ ನಡೆದಿದೆ.  ಪೋಷಕರ ಬೆಂಬಲದ ಅಪರೂಪದ ಮತ್ತು ಹೃದಯಸ್ಪರ್ಶಿ ಪ್ರದರ್ಶನದಲ್ಲಿ,...