Homeಫ್ಯಾಕ್ಟ್‌ಚೆಕ್FACT CHECK : ಕ್ರೈಸ್ತರಿಂದ ಭಾರತಕ್ಕೆ ಭಾನುವಾರ ರಜಾ ದಿನ ಬಂತು ಎಂಬ ಪ್ರಧಾನಿ ಮೋದಿ...

FACT CHECK : ಕ್ರೈಸ್ತರಿಂದ ಭಾರತಕ್ಕೆ ಭಾನುವಾರ ರಜಾ ದಿನ ಬಂತು ಎಂಬ ಪ್ರಧಾನಿ ಮೋದಿ ಹೇಳಿಕೆ ಸುಳ್ಳು

- Advertisement -
- Advertisement -

ಮೇ 28ರಂದು ಜಾರ್ಖಂಡ್‌ನ ದುಮ್ಕಾದಲ್ಲಿ ಚುನಾವಣಾ ಭಾಷಣ ಮಾಡಿದ ಪ್ರಧಾನಿ ನರೇಂದ್ರ ಮೋದಿ, “ನಮ್ಮ ದೇಶದಲ್ಲಿ ಭಾನುವಾರ ವಾರದ ರಜೆ ಇದೆ. ಬ್ರಿಟಿಷರು ಇಲ್ಲಿ ಆಳ್ವಿಕೆ ನಡೆಸುತ್ತಿದ್ದಾಗ ಕ್ರಿಶ್ಚಿಯನ್ ಸಮುದಾಯದವರು ರಜಾದಿನವನ್ನು ಹೊಂದಿದ್ದರು. ಈ ಸಂಪ್ರದಾಯ ಅಂದಿನಿಂದ ಪ್ರಾರಂಭವಾಯಿತು. ಭಾನುವಾರದ ರಜೆಗೂ ಹಿಂದೂಗಳಿಗೂ ಸಂಬಂಧವಿಲ್ಲ. ಕಳೆದ 200-300 ವರ್ಷಗಳಿಂದ ಇದು ಚಾಲ್ತಿಯಲ್ಲಿದೆ. ಈಗ ಜಾರ್ಖಂಡ್‌ನ ಒಂದು ಜಿಲ್ಲೆಯಲ್ಲಿ ಭಾನುವಾರದ ಬದಲು, ಶುಕ್ರವಾರ ಅಧಿಕೃತ ರಜೆ ನೀಡಲಾಗುತ್ತಿದೆ” ಎಂದು ಹೇಳಿದ್ದರು.

ಪ್ರಧಾನಿ ಮೋದಿಯವರ ಅಧಿಕೃತ ಯೂಟ್ಯೂಬ್ ಚಾನೆಲ್‌ನಲ್ಲಿ ಅಪ್ಲೋಡ್ ಮಾಡಲಾದ ಭಾಷಣದ ವಿಡಿಯೋದಲ್ಲಿ 34 ನಿಮಿಷ 55 ಸೆಕೆಂಡ್‌ನಿಂದ ಮೇಲಿನ ಮಾತುಗಳನ್ನು ಆಲಿಸಬಹುದು.

ಫ್ಯಾಕ್ಟ್‌ಚೆಕ್ : ಪ್ರಧಾನಿ ಮೋದಿ ತನ್ನ ಭಾಷಣದಲ್ಲಿ ಹೇಳಿರುವುದು ಸುಳ್ಳು. ಭಾರತದಲ್ಲಿ ಸಮಾಜ ಸುಧಾರಕ, ಹೋರಾಟಗಾರ ನಾರಾಯಣ್ ಮೇಘಾಜಿ ಲೋಖಂಡೆ ಅವರ ಪ್ರಯತ್ನದ ಫಲವಾಗಿ ಮೊದಲ ‘ಬಾಂಬೆ ಮಿಲ್ ಹ್ಯಾಂಡ್ಸ್ ಅಸೋಸಿಯೇಷನ್‘ ​​1890ರಲ್ಲಿ ಎಲ್ಲಾ ಕಾರ್ಮಿಕರಿಗೆ ಭಾನುವಾರದ ರಜಾದಿನವನ್ನು ಘೋಷಿಸಿತು.

ಭಾರತದಲ್ಲಿದ್ದ ಬ್ರಿಟಿಷರು ಚರ್ಚ್‌ಗೆ ತೆರಳಲು ಮತ್ತು ವಾರಾಂತ್ಯದಲ್ಲಿ ಬಿಡುವು ಮಾಡಿಕೊಳ್ಳಲು ಭಾನುವಾರದ ದಿನ ರಜೆಯನ್ನು ಹೊಂದಿದ್ದರು. ಆದರೆ, ಭಾರತದ ಕಾರ್ಮಿಕರಿಗೆ ಮಾತ್ರ ಯಾವುದೇ ರೀತಿಯ ವಾರದ ರಜೆ ಇರಲಿಲ್ಲ. ಭಾರತದ ಕಾರ್ಮಿಕರು ವಾರದ 7 ದಿನವೂ ಕೂಡ ದುಡಿಯಲೇ ಬೇಕಾಗಿತ್ತು. ಹೀಗಾಗಿ, ಮೊದಲು ಮುಂಬೈನ ಹತ್ತಿ ಗಿರಣಿಯಲ್ಲಿ ಕೆಲಸ ಮಾಡುತ್ತಿದ್ದ ನಾರಾಯಣ್ ಮೇಘಾಜಿ ಲೋಖಂಡೆ ಅವರು 1880ರಲ್ಲಿ ತಮ್ಮ ಕೆಲಸವನ್ನು ತೊರೆದಿದ್ದರು.

ಬಳಿಕ ಮರಾಠಿಯ ದೀನ ಬಂಧು ಪತ್ರಿಕೆಯ ಕಾರ್ಯನಿರ್ವಹಣೆಯನ್ನು ನೋಡಿಕೊಂಡಿದ್ದ ಅವರು, ದೇಶದ ಕಾರ್ಮಿಕರ ಸಮಸ್ಯೆಯನ್ನು ಬಗೆಹರಿಸಲು ‘ಬಾಂಬೆ ಮಿಲ್ ಹ್ಯಾಂಡ್ಸ್ ಅಸೋಸಿಯೇಷನ್’ ​​ಎಂದು ಕರೆಯಲ್ಪಡುವ ಭಾರತದಲ್ಲಿ ಮೊದಲ ಕಾರ್ಮಿಕ ಸಂಘವನ್ನು ಪ್ರಾರಂಭಿಸಿದರು. ಈ ಸಂಘಟನೆಯ ಮೂಲಕ ಭಾನುವಾರ ಭಾರತದ ಕಾರ್ಮಿಕರಿಗೆ ರಜೆ ಘೋಷಣೆ ಮಾಡಲು ಹೆಚ್ಚು ಪ್ರಚಾರ ಮಾಡಲಾಯಿತು.

ಜೂನ್‌ 10,1890ರಲ್ಲಿ ಬಾಂಬೆಯ ರೇಸ್ ಕೋರ್ಸ್ ಮೈದಾನದಲ್ಲಿ 10 ಸಾವಿರ ಕಾರ್ಮಿಕರು ಪ್ರತಿಭಟನೆ ನಡೆಸಿ ಮುಷ್ಕರವನ್ನು ಘೋಷಿಸಿದ ನಂತರ, ಗಿರಣಿ ಮಾಲೀಕರ ಸಂಘವು ಅಂತಿಮವಾಗಿ ಶರಣಾಯಿತು ಮತ್ತು 1890 ರಲ್ಲಿ ಕಾರ್ಮಿಕರಿಗೆ ಭಾನುವಾರ ರಜಾದಿನವನ್ನು ಘೋಷಿಸಿತು.

ಮಹಾರಾಷ್ಟ್ರದ ಪುಣೆ ಜಿಲ್ಲೆಯಲ್ಲಿ ಜನಿಸಿದ ಸಮಾಜ ಸುಧಾರಕ ಮತ್ತು ಹೋರಾಟಗಾರ ಲೋಖಂಡೆ ಅವರು ‘ಭಾರತದ ಟ್ರೇಡ್ ಯೂನಿಯನ್ ಚಳವಳಿಯ ಪಿತಾಮಹ’ ಎಂದು ಪ್ರಶಂಸಿಸಲ್ಪಟ್ಟರು.

1997ರಲ್ಲಿ ಪ್ರಕಟವಾದ ನಳಿನಿ ಪಂಡಿತ್ ಅವರ ‘ನಾರಾಯಣ ಮೇಘಾಜಿ ಲೋಖಂಡೆ: ದಿ ಫಾದರ್ ಆಫ್ ಟ್ರೇಡ್ ಯೂನಿಯನ್ ಮೂವ್ಮೆಂಟ್ ಇನ್ ಇಂಡಿಯಾ’ ಎಂಬ ಜರ್ನಲ್ ಲೇಖನದಲ್ಲಿ ಈ ಕುರಿತು ಮಾಹಿತಿಯಿದೆ.

ಲೇಖನದ ಲಿಂಕ್ ಇಲ್ಲಿದೆ

ಲೋಖಂಡೆಯವರ ಪ್ರಯತ್ನದಿಂದ ಭಾನುವಾರದ ರಜೆ ಮಾತ್ರವಲ್ಲದೆ, ಕಾರ್ಮಿಕ ವಲಯದಲ್ಲಿ ಇತರ ಹಲವು ಬದಲಾವಣೆಯೂ ಅಯಿತು. ಅವುಗಳು ಹೀಗಿವೆ…

  • ಗಿರಣಿ ಕಾರ್ಮಿಕರಿಗೆ ಭಾನುವಾರ ವಾರದ ರಜೆ
  • ಕೆಲಸಗಾರರಿಗೆ ಮಧ್ಯಾಹ್ನದ ಅರ್ಧ ಗಂಟೆಯ ವಿರಾಮ
  • ಬೆಳಿಗ್ಗೆ 6:30ಕ್ಕೆ ಕೆಲಸ ಪ್ರಾರಂಭಿಸಿ, ಸೂರ್ಯಾಸ್ತದ ಹೊತ್ತಿಗೆ ಕೊನೆಗೊಳಿಸುವುದು
  • ಕಾರ್ಮಿಕರಿಗೆ ಪ್ರತಿ ತಿಂಗಳು 15ನೇ ತಾರೀಖಿನೊಳಗೆ ವೇತನ ನೀಡುವುದು

‘ಎನ್‌.ಎಂ ಲೋಖಂಡೆ ಮಹಾರಾಷ್ಟ್ರ ಇನ್‌ಸ್ಟಿಟ್ಯೂಟ್ ಆಫ್ ಲೇಬರ್ ಸ್ಟಡೀಸ್’ ಅನ್ನು 7 ಜುಲೈ 1947 ರಂದು ಭಾರತದ ಮಾಜಿ ಹಂಗಾಮಿ ಪ್ರಧಾನ ಮಂತ್ರಿ ಮತ್ತು ಬಾಂಬೆ ಪ್ರಾಂತ್ಯದ ಕಾರ್ಮಿಕ ಸಚಿವ ಗುಲ್ಜಾರಿಲಾಲ್ ನಂದಾ ಅವರು ಸ್ಥಾಪಿಸಿದರು.

ಈ ಕಾಲೇಜಿನ ಅಧಿಕೃತ ವೆಬ್‌ಸೈಟ್ ಕೂಡ 1890 ರಲ್ಲಿ ಭಾನುವಾರವನ್ನು ರಜಾದಿನವಾಗಿ ಘೋಷಿಸಿದ ಬಗ್ಗೆ ಮಾಹಿತಿಯನ್ನು ನೀಡುತ್ತದೆ.

ಇದನ್ನೂ ಓದಿ : FACT CHECK : ರಾಹುಲ್ ಗಾಂಧಿಯ ಹಿಂಬದಿ ಇರುವ ಫೋಟೋ ಕ್ರೈಸ್ತ ಧರ್ಮಕ್ಕೆ ಸಂಬಂಧಿಸಿದ್ದಲ್ಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ತಪ್ಪಾಗಿದೆ’ : ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್‌ ವಿಧೇಯಕದ ಕುರಿತ ಟೀಕೆಗಳನ್ನು ಕೈಬಿಟ್ಟ ರಾಜಸ್ಥಾನ ಹೈಕೋರ್ಟ್

ಟ್ರಾನ್ಸ್‌ಜೆಂಡರ್ ಕಾಯ್ದೆ, 2019ರಲ್ಲಿ ಬದಲಾವಣೆಗಳನ್ನು ತರಲಿರುವ ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ವಿಧೇಯ, 2026ರ ಕುರಿತು ಈ ಹಿಂದೆ ಮಾಡಿದ್ದ ವಿಮರ್ಶಾತ್ಮಕ ಟಿಪ್ಪಣಿಗಳನ್ನು ರಾಜಸ್ಥಾನ ಹೈಕೋರ್ಟ್ ತೆಗೆದುಹಾಕಿದೆ ಎಂದು...

ಯುಸಿಸಿ ಜಾರಿ ನಂತರ ‘ಜನಸಂಖ್ಯಾ ನಿಯಂತ್ರಣ’ ಕಾನೂನಿಗೆ ಮುಂದಾದ ಉತ್ತರಾಖಂಡ ಬಿಜೆಪಿ ಸರ್ಕಾರ

ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತಂದ ನಂತರ, ಉತ್ತರಾಖಂಡ ಸರ್ಕಾರ ಈಗ ಜನಸಂಖ್ಯಾ ನಿಯಂತ್ರಣ ಕಾನೂನನ್ನು ತರುವ ಬಗ್ಗೆ ಯೋಚಿಸುತ್ತಿದೆ ಎಂದು ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಶುಕ್ರವಾರ ಸೂಚಿಸಿದ್ದಾರೆ. ಪ್ರಸ್ತಾವಿತ ಕ್ರಮದ...

ಪಶ್ಚಿಮ ಬಂಗಾಳ| ಟಿಎಂಸಿ ನಾಯಕರ ಭದ್ರತೆಗೆ ಭಾರೀ ಪೊಲೀಸ್ ನಿಯೋಜನೆ; ಇಸಿಐ ಆಕ್ಷೇಪ

ರಾಜ್ಯದ ವಿವಿಧ ಹಂತಗಳಲ್ಲಿ ತೃಣಮೂಲ ಕಾಂಗ್ರೆಸ್ ನಾಯಕರಿಗೆ ವೈಯಕ್ತಿಕ ಭದ್ರತೆ ಒದಗಿಸಲು ಪಶ್ಚಿಮ ಬಂಗಾಳ ಪೊಲೀಸರು ಮತ್ತು ಕೋಲ್ಕತ್ತಾ ಪೊಲೀಸರು ನಿಯೋಜಿಸಿರುವ ಹೆಚ್ಚಿನ ಸಂಖ್ಯೆಯ ಸಿಬ್ಬಂದಿಯನ್ನು ಭಾರತೀಯ ಚುನಾವಣಾ ಆಯೋಗ (ಇಸಿಐ) ಗಂಭೀರವಾಗಿ...

ಅಮೆರಿಕದ ಕದನ ವಿರಾಮ ಪ್ರಸ್ತಾವನೆ ತಿರಸ್ಕರಿಸಿದ ಇರಾನ್ : ಪಶ್ಚಿಮ ಏಷ್ಯಾ ಸಂಘರ್ಷ ಉಲ್ಬಣ

ಅಲ್ಪಾವಧಿಯ ಕದನ ವಿರಾಮಕ್ಕಾಗಿ ಅಮೆರಿಕ ಮುಂದಿಟ್ಟಿದ್ದ ಪ್ರಸ್ತಾವನೆಯನ್ನು ಇರಾನ್ ತಿರಸ್ಕರಿಸಿದೆ ಎಂದು ವರದಿಯಾಗಿದೆ. ಏಪ್ರಿಲ್ 1, 2026ರ ಬುಧವಾರದಂದು ಅಮೆರಿಕವು ಅನಾಮಧೇಯ ಮಧ್ಯಸ್ಥಿಕೆ ರಾಷ್ಟ್ರದ ಮೂಲಕ ಇರಾನ್‌ಗೆ 48 ಗಂಟೆಗಳ ತಾತ್ಕಾಲಿಕ ಕದನ ವಿರಾಮದ ಆಫರ್...

ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನರಿಗೆ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿ

ಹಿರಿಯ ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನ ಹಿರಿಯ ಸಾಧಕರು 2026ನೇ ಸಾಲಿನ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿಗೆ ಭಾಜನರಾಗಿದ್ದಾರೆ. ರಾಯಚೂರು ಜಿಲ್ಲೆಯ ಹಿರಿಯ ದಲಿತ ಹೋರಾಟಗಾರ...

ಗಾಜಾ; ಗೊಂಬೆಯೊಂದಿಗೆ ‘ಅಂತ್ಯಕ್ರಿಯೆ’ ಆಟ ಆಡುವ ಎಳೆಯ ಮಕ್ಕಳ ವಿಡಿಯೋ ವೈರಲ್; ಸುತ್ತಲಿನ ಘಟನೆಯನ್ನು ಪುನರಾವರ್ತಿಸುವ ಮಕ್ಕಳು

ಅಕ್ಟೋಬರ್ 2023 ರಲ್ಲಿ ಇಸ್ರೇಲಿ ಮಿಲಿಟರಿ ದಾಳಿಯನ್ನು ಪ್ರಾರಂಭಿಸಿದ ನಂತರ ಗಾಜಾದಿಂದ ದುಃಖಕರ ದೃಶ್ಯಗಳು ಹೊರಹೊಮ್ಮುತ್ತಿವೆ. ಇತ್ತೀಚಿನ ಒಂದು ಘಟನೆಯಲ್ಲಿ, ಚಿಕ್ಕ ಮಕ್ಕಳು ಅಂತ್ಯಕ್ರಿಯೆಗಾಗಿ ಗೊಂಬೆಯನ್ನು ಹೊತ್ತುಕೊಂಡು ಹೋಗುವುದನ್ನು ಕಾಣಬಹುದು - ಇದು ಅವರು...

ದೆಹಲಿ| ಆಳವಾದ ಚರಂಡಿಗೆ ಬಿದ್ದು ನೈರ್ಮಲ್ಯ ಕಾರ್ಮಿಕ ಸಾವು; ನ್ಯಾಯಕ್ಕೆ ಆಗ್ರಹಿಸಿದ ಮೃತನ ಕುಟುಂಬ

ಮಾರ್ಚ್ 30 ರಂದು ಪೂರ್ವ ದೆಹಲಿಯ ದಿಲ್ಶಾದ್ ಗಾರ್ಡನ್ ಪ್ರದೇಶದಲ್ಲಿ ಸುರಕ್ಷತಾ ಸಾಧನಗಳಿಲ್ಲದೆ ಆಳವಾದ ಚರಂಡಿ ಸ್ವಚ್ಛಗೊಳಿಸುವ ಸಮಯದಲ್ಲಿ ಯುವ ನೈರ್ಮಲ್ಯ ಕಾರ್ಮಿಕ ರಾಹುಲ್ ಎಂಬುವವರು ಸಾವನ್ನಪ್ಪಿದ್ದಾರೆ. ಮಧ್ಯಾಹ್ನ 2:00 ರ ಸುಮಾರಿಗೆ...

ನಿವೃತ್ತ ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ ಆಸ್ಪತ್ರೆಗೆ ದಾಖಲು; ಕಾರ್ಯಕ್ರಮದಲ್ಲಿ ಏಕಾಏಕಿ ಕುಸಿದು ಬಿದ್ದು ಅಸ್ವಸ್ಥ

ಬೆಂಗಳೂರು: ಕರ್ನಾಟಕದ ನಿವೃತ್ತ ಲೋಕಾಯುಕ್ತ ಎನ್‌.ಸಂತೋಷ್‌ ಹೆಗ್ಡೆ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಭಾಷಣದ ವೇಳೆ ಕುಸಿದು ಬಿದ್ದು ಅಸ್ವಸ್ಥರಾಗಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಏಪ್ರಿಲ್ 4ರ, ಶುಕ್ರವಾರ ಬೆಂಗಳೂರಿನ ಕೊಂಡಜಿ ಬಸಪ್ಪ ಸಭಾಂಗಣದಲ್ಲಿ...

ಎಸ್‌ಎಸ್‌ಎಲ್‌ಸಿಯಲ್ಲಿ ತೃತೀಯ ಭಾಷೆಗೆ ಗ್ರೇಡ್: ನಿರ್ಧಾರ ಪರಿಶೀಲಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದ ರಾಜ್ಯಪಾಲ ಗೆಹ್ಲೋಟ್ 

ಬೆಂಗಳೂರು: 10ನೇ ತರಗತಿ ಪರೀಕ್ಷೆಯಲ್ಲಿ ತೃತೀಯ ಭಾಷೆಯ ವಿಷಯಕ್ಕೆ ಅಂಕಗಳನ್ನು ಬದಲಿಸುವ ನಿರ್ಧಾರವನ್ನು ಮರುಪರಿಶೀಲಿಸುವಂತೆ ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ರಾಜ್ಯ ಸರ್ಕಾರವನ್ನು ಕೇಳಿದ್ದಾರೆ. ಸರ್ಕಾರವು ಈ ನಿರ್ಧಾರವನ್ನು "ಸಮಗ್ರವಾಗಿ ಪರಿಶೀಲಿಸಬೇಕು" ಎಂದು ಲೋಕಭವನವು...

ತಿರುಚ್ಚಿ ಪೂರ್ವದ ಪೆರಂಬೂರಿನಲ್ಲಿ ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಅಫಿಡವಿಟ್‌ಗಳಲ್ಲಿ ಹಲವು ವ್ಯತ್ಯಾಸಗಳಿರುವುದಾಗಿ ವರದಿ  

ಚೆನ್ನೈ: ನಟ ಮತ್ತು ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಎರಡು ಪ್ರತ್ಯೇಕ ಚುನಾವಣಾ ಅಫಿಡವಿಟ್‌ಗಳಲ್ಲಿ ವ್ಯತ್ಯಾಸಗಳು ಕಾಣಿಸಿಕೊಂಡಿದ್ದು, ವಿಧಾನಸಭಾ ಚುನಾವಣೆಗೆ ಮುನ್ನ ಕಾನೂನು ಮತ್ತು ರಾಜಕೀಯ ಪರಿಶೀಲನೆಗೆ ಅವಕಾಶ ನೀಡುವ ಸಾಧ್ಯತೆಯಿದೆ. ಪೆರಂಬೂರು ಮತ್ತು...