Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್: ನೈಜೀರಿಯಾದಲ್ಲಿ ನಟ ಸುಶಾಂತ್‌ಗೆ ನ್ಯಾಯ ಕೋರಿ ನಡೆಯಿತೆ ಪ್ರತಿಭಟನೆ?

ಫ್ಯಾಕ್ಟ್‌ಚೆಕ್: ನೈಜೀರಿಯಾದಲ್ಲಿ ನಟ ಸುಶಾಂತ್‌ಗೆ ನ್ಯಾಯ ಕೋರಿ ನಡೆಯಿತೆ ಪ್ರತಿಭಟನೆ?

ಈ ಚಿತ್ರ ಅಕ್ಟೋಬರ್ 13ರ ಸಿಎನ್ಎನ್ ವರದಿಯಲ್ಲಿ ಪತ್ತೆಯಾಗಿದೆ. ಇದು ನೈಜೀರಿಯಾದಲ್ಲಿ ಪೊಲೀಸ್ ದೌರ್ಜನ್ಯದ ವಿರುದ್ಧ ನಡೆದ ಪ್ರತಿಭಟನೆಯ ಚಿತ್ರ.

- Advertisement -
- Advertisement -

ದಿವಂಗತ ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಅವರ ಸಾವಿಗೆ ನ್ಯಾಯ ನೀಡಿ ಎಂದು ನೈಜೀರಿಯಾದಲ್ಲಿ ಪ್ರತಿಭಟನೆ ನಡೆದಿದೆ. ರ್‍ಯಾಲಿಯಲ್ಲಿ ‘ಜಸ್ಟೀಸ್ ಫಾರ್ ಸುಶಾಂತ್’  ಎನ್ನುವ ಫಲಕಗಳನ್ನು ಹಿಡಿದು ಪ್ರತಿಭಟನೆ ನಡೆಸುತ್ತಿದ್ದಾರೆ ಎಂದು ಒಂದು ಚಿತ್ರವನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಳ್ಳಲಾಗುತ್ತಿದೆ.

ಈ ಚಿತ್ರವು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಈ ಚಿತ್ರವನ್ನು ಫೋಟೋಶಾಪ್ ಮಾಡಲಾಗಿದ್ದು, ಇದು ನೈಜೀರಿಯಾದಲ್ಲಿ ಪೊಲೀಸ್ ದೌರ್ಜನ್ಯದ ವಿರುದ್ಧ ನಡೆದ ಪ್ರತಿಭಟನೆಯ ಚಿತ್ರ ಎಂಬುದು ತಿಳಿದುಬಂದಿದೆ.

An archived version of the post can be accessed <a href="https://archive.is/heGbs">here</a>.

ಚಿತ್ರದಲ್ಲಿ ಮೂವರು ಪ್ರತಿಭಟನಾಕಾರರು ಕುರ್ಚಿಗಳ ಮೇಲೆ ಕುಳಿತು, ಸುಶಾಂತ್ ಸಿಂಗ್ ರಜಪೂತ್ ಅವರ ಫೋಟೋಗಳನ್ನು ಹಿಡಿದುಕೊಂಡು ಜೊತೆಗೆ ಸುಶಾಂತ್‌ಗೆ ನ್ಯಾಯ ಬೇಕು ಎಂದು ಪ್ರತಿಭಟಿಸುತ್ತಿದ್ದಾರೆ. ಚಿತ್ರದ ಜೊತೆಗೆ  “ಎಸ್‌ಎಸ್‌ಆರ್‌ಗೆ ನ್ಯಾಯಕ್ಕಾಗಿ ಜಗತ್ತು ಒತ್ತಾಯಿಸುತ್ತಿದೆ. ನಮಗೆ ನ್ಯಾಯ ಬೇಕು, ಜಗತ್ತು ಸುಶಾಂತ್ ಸಿಂಗ್ ರಜಪೂತ್‌ಗೆ ನ್ಯಾಯವನ್ನು ಬಯಸುತ್ತದೆ. ಧನ್ಯವಾದಗಳು, ನೈಜೀರಿಯಾ” ಎಂದು ಶೀರ್ಷಿಕೆ ನೀಡಲಾಗಿದೆ.

An archived version of the tweet can be accessed <a href="https://archive.is/oqAVM">here</a>.

ಇದನ್ನೂ ಓದಿ: ಸುಳ್ಳು ಸುದ್ದಿ ಪ್ರಸಾರ: ರಿಪಬ್ಲಿಕ್ ಟಿವಿಯಿಂದ 200 ಕೋಟಿ ಮಾನನಷ್ಟ ಪರಿಹಾರ ಕೇಳಿದ ಸುಶಾಂತ್ ಗೆಳೆಯ!

An archived version of the tweet can be accessed <a href="https://archive.is/koqGD">here</a>.

ಈ ಚಿತ್ರಗಳನ್ನು ರಿವರ್ಸ್ ಇಮೇಜ್ ಹುಡುಕಾಡಿದಾಗ, ಚಿತ್ರವು ಅಕ್ಟೋಬರ್ 13ರ ಸಿಎನ್ಎನ್ ವರದಿಯಲ್ಲಿ ಪತ್ತೆಯಾಗಿದೆ.

No, This Isn’t a Protest in Nigeria Demanding ‘Justice for SSR’

ಈ ವರದಿಯಲ್ಲಿ, “ವಿಶೇಷ ದರೋಡೆ ವಿರೋಧಿ ದಳ (SARS) ಎಂದು ಕರೆಯಲ್ಪಡುವ ಪೊಲೀಸ್ ಘಟಕದಿಂದ ಅಪಹರಣ, ಕಿರುಕುಳ ಮತ್ತು ಸುಲಿಗೆ ಆರೋಪದ ಬಗ್ಗೆ ದೇಶದ ಯುವಜನರು ಆನ್‌ಲೈನ್‌ನಲ್ಲಿ ಆಕ್ರೋಶ ವ್ಯಕ್ತಪಡಿಸಿದ ನಂತರ, ನೈಜೀರಿಯಾದಲ್ಲಿ ಪ್ರತಿಭಟನೆಗಳು ಭುಗಿಲೆದ್ದವು.” ಎಂದು ಉಲ್ಲೇಖಿಸಲಾಗಿದೆ.

ಇದನ್ನೂ ಓದಿ: ಸುಶಾಂತ್ ಪ್ರಕರಣದಲ್ಲಿ ಮುಂಬೈ ಪೊಲೀಸರನ್ನು ಹಣಿಯಲು 80 ಸಾವಿರ ಫೇಕ್ ಅಕೌಂಟ್‌ಗಳ ಸೃಷ್ಠಿ : BJP ಕೈವಾಡದ ಆರೋಪ

ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿರುವ ಚಿತ್ರ ಮತ್ತು ಮೂಲ ಚಿತ್ರದ ಹೋಲಿಕೆ ಇಲ್ಲಿದೆ.

No, This Isn’t a Protest in Nigeria Demanding ‘Justice for SSR’

ನೈಜೀರಿಯಾದಲ್ಲಿ ನಡೆದ ರ್‍ಯಾಲಿಯಲ್ಲಿನ ಪ್ರತಿಭಟನಾಕಾರರ ಫೋಟೋಶಾಪ್ ಚಿತ್ರವನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಳ್ಳಲಾಗುತ್ತಿದೆ. ಈ ಮೂಲಕ ಸುಶಾಂತ್ ಸಿಂಗ್ ರಜಪೂತ್‌ಗೆ ನ್ಯಾಯ ಕೋರಿ ಪ್ರತಿಭಟನೆಗಳು ವಿಶ್ವದಾದ್ಯಂತ ಆಯೋಜಿಸಲಾಗುತ್ತಿದೆ ಎಂದು ಜನರನ್ನು ಪ್ರಚೋದಿಸಲಾಗುತ್ತಿದೆ.

ಈ ವರ್ಷದ ಜೂನ್‌ನಲ್ಲಿ ಸುಶಾಂತ್ ಸಿಂಗ್ ರಜಪೂತ್ ಅವರ ಅಸಹಜ ಸಾವು ಸಾಮಾಜಿಕ ಮಾಧ್ಯಮ ಸೇರಿದಂತೆ ಮುಖ್ಯವಾಹಿನಿಯ ಮಾಧ್ಯಮಗಳಲ್ಲಿ ಕೂಡಾ ಹಲವಾರು ನಕಲಿ ಸುದ್ದಿ ಮತ್ತು ಪಿತೂರಿಗಳನ್ನು ಹರಡಲಾಗುತ್ತಿದೆ.

ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ನಿಧನದ ನಂತರ ಟ್ವಿಟ್ಟರ್‌ನಲ್ಲಿ ರಿಪಬ್ಲಿಕ್ ಚಾನೆಲ್ ನಡೆಸುತ್ತಿರುವ ‘#ಅರೆಸ್ಟ್ ರಿಯಾ’ ಎಂಬ ಹ್ಯಾಶ್‌ಟ್ಯಾಗ್ ಅಭಿಯಾನವನ್ನು ಬಾಂಬೆ ಹೈಕೋರ್ಟ್ ರಿಪಬ್ಲಿಕ್ ಟಿವಿ ಪರ ವಕೀಲರನ್ನು ತರಾಟೆಗೆ ತೆಗೆದುಕೊಂಡಿತ್ತು.

ಸುಶಾಂತ್ ಸಿಂಗ್ ಪ್ರಕರಣದಲ್ಲಿ ಸುಳ್ಳು ಸುದ್ದಿ ಹರಡುತ್ತಿದ್ದ ದೆಹಲಿ ಮೂಲದ ವ್ಯಕ್ತಿಯನ್ನು ಮುಂಬೈ ಪೊಲೀಸರು ವಶಕ್ಕೆ ಪಡೆದಿದ್ದಾರೆ. ನಟನಿಗೆ ಸಂಬಂಧಿಸಿದ ನಕಲಿ ಟ್ವೀಟ್‌ಗಳನ್ನು ಪ್ರಸಾರ ಮಾಡಿದ್ದಕ್ಕಾಗಿ ನ್ಯೂಸ್ ಬ್ರಾಡ್‌ಕಾಸ್ಟಿಂಗ್ ಸ್ಟ್ಯಾಂಡರ್ಡ್ಸ್ ಅಥಾರಿಟಿಯು ನ್ಯೂಸ್ ಚಾನೆಲ್ ಆಜ್‌ತಕ್ ಸುದ್ದಿ ವಾಹಿನಿಗೆ 1 ಲಕ್ಷ ರೂಪಾಯಿಗಳ ದಂಡ ವಿಧಿಸಿತ್ತು.


ಇದನ್ನೂ ಓದಿ: ಸುಶಾಂತ್ ಪ್ರಕರಣ: ರಿಪಬ್ಲಿಕ್ ಟಿವಿಯನ್ನು ತರಾಟೆಗೆ ತೆಗೆದುಕೊಂಡ ಬಾಂಬೆ ಹೈಕೋರ್ಟ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...