Homeಫ್ಯಾಕ್ಟ್‌ಚೆಕ್FACT CHECK | ಕುತುಬ್ ಮಿನಾರ್ ನಿರ್ಮಿಸಿದ್ದು ಮೊಘಲರಲ್ಲವೇ ? ಇತಿಹಾಸ ತಿರುಚಲಾಗಿದೆಯಾ?

FACT CHECK | ಕುತುಬ್ ಮಿನಾರ್ ನಿರ್ಮಿಸಿದ್ದು ಮೊಘಲರಲ್ಲವೇ ? ಇತಿಹಾಸ ತಿರುಚಲಾಗಿದೆಯಾ?

- Advertisement -
- Advertisement -

“ಕುತುಬ್ ಮಿನಾರ್ ನಿರ್ಮಿಸಿದ್ದು ಮೊಘಲರು ಅಂತಾ ಇತಿಹಾಸದಲ್ಲಿ ಬರೆಯಲಾಗಿತ್ತು!! ಆದ್ರೆ ಅಲ್ಲಿ ಇರುವ ಕಬ್ಬಿಣದ ಕಂಬದ ಮೇಲೆ ಯಾರ ಹೆಸರಿದೆ ಎಂದೂ ಸ್ವಲ್ಪ ಜೂಮ್ ಮಾಡಿ ನೋಡಿದರೆ ನೈಜ ಸತ್ಯ ಸಂಗತಿ ತಿಳಿಯಲಿದೆ. ಇದು 1500 ವರ್ಷಗಳ ಹಿಂದಿನ ವರಾಹಮಿಹಿರನ ಕಾಲದ ವಿಷ್ಣು ಸ್ಥಂಭ.. ನಮ್ಮ ದೇಶದ ಇತಿಹಾಸವನ್ನು ಬರೆದ ಇತಿಹಾಸ ತಜ್ಞರ ಕಣ್ಣುಗಳಿಗೆ ಇದು ಕಾಣಲಿಲ್ಲ ಕಣ್ಣು ಕುರುಡಾಗುವಷ್ಟು ಮೊಘಲರು ಎಂಜಲು ತಿನ್ನಿಸಿರಬೇಕು ಡೋಂಗಿ ಇತಿಹಾಸ ತಜ್ಞರಿಗೆ ಯಾರೋ ಸ್ಥಾಪಿಸಿದ ಪರಂಪರೆಯನ್ನು ತಮ್ಮದು ಎಂದೂ ಇಲ್ಲಿವರೆಗೆ ಹೇಳಿಕೊಂಡ ನಕಲಿಗಳಿಗೆ ನಾಚಿಕೆಯಾಗಬೇಕು” ಎಂಬ ಸಂದೇಶವೊಂದು ವಾಟ್ಸಾಪ್‌ನಲ್ಲಿ ಹಂಚಿಕೊಳ್ಳಲಾಗುತ್ತಿದೆ.

ಜೊತೆಗೆ, ಕುತುಬ್ ಮಿನಾರ್ ಪ್ರದೇಶದಲ್ಲಿ ಇರುವ ಕಬ್ಬಿಣದ ಸ್ತಂಭದಲ್ಲಿ ಹಿಂದೂ ಹೆಸರುಗಳಿವೆ ಇದರಿಂದ ಸತ್ಯ ತಿಳಿಯುತ್ತದೆ ಎಂದು ಪ್ರತಿಪಾದಿಸಿದ ಕಂಬವೊಂದರ ಫೋಟೋ ಕೂಡ ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಳ್ಳಲಾಗುತ್ತಿದೆ. ಹಾಗಿದ್ದರೆ, ವೈರಲ್ ಪೋಸ್ಟ್‌ನಲ್ಲಿ ಮಾಡಿರುವ ಪ್ರತಿಪಾದನೆ ನಿಜವೇ? ಎಂದು ಪರಿಶೀಲಿಸೋಣ.

ಫ್ಯಾಕ್ಟ್‌ಚೆಕ್ : ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾದ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆಯನ್ನು ಪರಿಶೀಲಿಸಲು ವೈರಲ್ ಫೋಟೋವನ್ನು  ಗೂಗಲ್ ರಿವರ್ಸ್ ಇಮೇಜ್‌ನಲ್ಲಿ ಹಾಕಿ ಸರ್ಚ್ ಮಾಡಿದಾಗ, ಹಲವು ವೆಬ್‌ಸೈಟ್‌ಗಳಲ್ಲಿ ಆ ಫೋಟೋ ಅಪ್ಲೋಡ್ ಆಗಿರುವುದು ಕಂಡು ಬಂದಿದೆ.

ಈ ಪೈಕಿ ಫ್ಲಿಕ್ಕರ್‌ ವೆಬ್‌ಸೈಟ್‌ನಲ್ಲಿ ಅಕ್ಟೋಬರ್ 19, 2009ರಂದು ಡೇವಿಡ್ ರಾಸ್‌ ಎಂಬವರು ಅಪ್ಲೋಡ್ ಮಾಡಿರುವ ಫೋಟೋವನ್ನು ಪರಿಶೀಲಿಸಿದಾಗ ಐರನ್‌ ಪಿಲ್ಲರ್ ಭರತ್‌ಪುರ ಫೋರ್ಟ್, ಭರತ್‌ಪುರ ಇಂಡಿಯಾ ಎಂದು ಬರೆದಿರುವುದು ಕಂಡು ಬಂದಿದೆ. ಆ ಫೋಟೋ ಮತ್ತು ವಾಟ್ಸಾಪ್‌ನಲ್ಲಿ ಹರಿದಾಡುತ್ತಿರುವ ಫೋಟೋವನ್ನು ಹೋಲಿಕೆ ಮಾಡಿ ನೋಡಿದಾಗ ಅವೆರಡು ಒಂದೇ ಫೋಟೋ ಎಂದು ಗೊತ್ತಾಗಿದೆ.

ಹಿಸ್ಟರಿ ಎನ್ಸೈಕ್ಲೋಪೀಡಿಯಾ ಎಂಬ ಎಕ್ಸ್‌ ಖಾತೆಯಲ್ಲೂ ನವೆಂಬರ್ 3, 2021ರಂದು ಹಾಕಿರುವ ಪೋಸ್ಟ್‌ನಲ್ಲಿ ವೈರಲ್ ಫೋಟೋ ಅಪ್ಲೋಡ್ ಮಾಡಿರುವುದು ಕಂಡು ಬಂದಿದೆ. ಅದರಲ್ಲಿ “ರಾಜಸ್ಥಾನದ ಭರತ್‌ಪುರ ಕೋಟೆಯಲ್ಲಿ (ಕಬ್ಬಿಣದ ಕೋಟೆ) ಕಬ್ಬಿಣದ ಕಂಬವನ್ನು ಭರತ್‌ಪುರದ ಜಾಟ್ ಆಡಳಿತಗಾರರು ನಿರ್ಮಿಸಿದ್ದಾರೆ. ಮಹಾರಾಜ ಸೂರಜ್ ಮಾಲ್ (1707-1763) ರ ಅಡಿಯಲ್ಲಿ ಜಾಟ್ ಸಾಮ್ರಾಜ್ಯವು ತನ್ನ ಉತ್ತುಂಗವನ್ನು ತಲುಪಿತ್ತು. ಅವರು ಸಾಮ್ರಾಜ್ಯದಾದ್ಯಂತ ಹಲವಾರು ಕೋಟೆಗಳು ಮತ್ತು ಅರಮನೆಗಳನ್ನು ನಿರ್ಮಿಸಿದರು. ಈ ಪೈಕಿ ಲೋಹಗಢ್ ಕೋಟೆಯು ಪ್ರಬಲವಾಗಿದೆ” ಎಂದು ಬರೆಯಲಾಗಿದೆ.

ಡಿಸೆಂಬರ್ 25, 2021ರಂದು  ದೈನಿಕ್‌ ಭಾಸ್ಕರ್  ಮಾಡಿರುವ ಫೇಸ್‌ಬುಕ್‌ ಪೋಸ್ಟ್‌ನಲ್ಲಿ ವೈರಲ್ ಫೋಟೋದಲ್ಲಿರುವ ಲೋಹಸ್ತಂಭದಲ್ಲಿ ಬರೆದಿರುವ ರಾಜರ ಹೆಸರುಗಳ ಬಗ್ಗೆಯೂ ವಿವರಗಳನ್ನು ನೀಡಲಾಗಿದೆ.

ಭರತ್‌ಪುರದ ಲೋಹಸ್ತಂಭದ ಬಗ್ಗೆ ನವೆಂಬರ್ 26, 2018ರಂದು  ನೇಹಾ ವಿಡಿಯೋ ಫಿಲ್ಮ್ ಪ್ರೊಡಕ್ಷನ್ ಯೂಟ್ಯೂಬ್‌ ಚಾನೆಲ್‌ನಲ್ಲಿ ವಿಡಿಯೋ ಅಪ್ಲೋಡ್ ಮಾಡಲಾಗಿದೆ.  ಅದರಲ್ಲಿ “ಜವಾಹರ್ ಬುರ್ಜ್ ಭರತ್‌ಪುರವನ್ನು ಮಹಾರಾಜ ಸೂರಜ್ ಮಾಲ್ ನಿರ್ಮಿಸಿದನು. ಆದರೆ, ಅದರ ಮೇಲಿನ ರಚನೆಗಳನ್ನು ಮಹಾರಾಜ ಜವಾಹರ್ ಸಿಂಗ್ ಅವರು ದೆಹಲಿಯ ವಿಜಯದ ಸ್ಮಾರಕದಲ್ಲಿ ರಚಿಸಿದರು” ಎಂದು ವಿವರಿಸಲಾಗಿದೆ.

ಒಟ್ಟಾರೆಯಾಗಿ ಹೇಳುವುದಾದರೆ, ಕುತುಬ್ ಮಿನಾರ್ ನಿರ್ಮಿಸಿದ್ದು ಮೊಘಲರಲ್ಲ ಎಂದು ರಾಜಸ್ಥಾನದ ಕಬ್ಬಿಣದ ಕಂಬದ ಫೋಟೊವನ್ನು ತಪ್ಪಾಗಿ ಹಂಚಿಕೊಳ್ಳಲಾಗುತ್ತಿದೆ. ವಾಸ್ತವವಾಗಿ ವೈರಲ್ ಫೋಟೊದಲ್ಲಿರುವ ಸ್ತಂಭವು ಕುತುಬ್ ಮಿನಾರ್ ಅಲ್ಲ, ಅದು ರಾಜಸ್ಥಾನದ ಭರತ್‌ಪುರದ ಜವಾಹರ್ ಭುರ್ಜ್ ಎಂಬ ಲೋಹಸ್ತಂಭದ್ದಾಗಿದೆ. ಹಾಗಾಗಿ, ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆ ತಪ್ಪಾಗಿದೆ.

ಇದನ್ನೂ ಓದಿ : ಪಾವಗಡದಲ್ಲಿ ಸಿಂಹ ಎಂದು ಸುಳ್ಳು ವಿಡಿಯೊ ಪ್ರಸಾರ ಮಾಡಿದ ‘ಝೀ ಕನ್ನಡ ನ್ಯೂಸ್’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಕ್ಕಳು ಸೇರಿದಂತೆ ಪ್ರತಿಯೊಬ್ಬರಿಗೂ ಇಂಟರ್‌ನೆಟ್ ಬಳಕೆ ಮೂಲಭೂತ ಹಕ್ಕು : ಸುಪ್ರೀಂ ಕೋರ್ಟ್

ಮಹತ್ವದ ತೀರ್ಪಿನಲ್ಲಿ, ಸಂವಿಧಾನದ 21 ಮತ್ತು 19(1)(ಎ) ವಿಧಿಗಳ ಅಡಿಯಲ್ಲಿ ಇಂಟರ್‌ನೆಟ್ ಪಡೆಯುವ ಮತ್ತು ಬಳಸುವ ಹಕ್ಕನ್ನು ಸುಪ್ರೀಂ ಕೋರ್ಟ್ 'ಮೂಲಭೂತ ಹಕ್ಕು' ಎಂದು ಘೋಷಿಸಿದೆ. ಮಕ್ಕಳು ಸೇರಿದಂತೆ ಪ್ರತಿಯೊಬ್ಬ ವ್ಯಕ್ತಿಗೂ ಈ...

ಸಿಜೆಐ ಸೂರ್ಯಕಾಂತ್ ವಿರುದ್ಧದ ಪೋಸ್ಟ್: ಕೇರಳ ಕಾಂಗ್ರೆಸ್ ಅಧ್ಯಕ್ಷರಿಗೆ ಎಸ್‌ಸಿಬಿಎ ಜಂಟಿ ಕಾರ್ಯದರ್ಶಿಯಿಂದ ಲೀಗಲ್ ನೋಟಿಸ್!

ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯಕಾಂತ್ ಅವರನ್ನು ಗುರಿಯಾಗಿಸಿ ಕೇರಳ ಕಾಂಗ್ರೆಸ್‌ನ ಅಧಿಕೃತ ಎಕ್ಸ್ (X) ಖಾತೆಯಿಂದ ಮಾಡಲಾಗಿತ್ತು ಎನ್ನಲಾದ ಪೋಸ್ಟ್‌ಗೆ ಸಂಬಂಧಿಸಿದಂತೆ, ಸುಪ್ರೀಂ ಕೋರ್ಟ್ ಬಾರ್ ಅಸೋಸಿಯೇಷನ್‌ನ (SCBA) ಜಂಟಿ...

ದೆಹಲಿ | ತಿರಂಗಾ ರ‍್ಯಾಲಿ ವೇಳೆ ಬಂಧಿತರಾಗಿದ್ದ ನೇಹಾ ಬೋರಾ ಬಿಡುಗಡೆ : ಅಭಿಜಿತ್ ದೀಪ್ಕೆಯನ್ನು ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಲಿರುವ ಪೊಲೀಸರು

ಶುಕ್ರವಾರ (ಅಕ್ಟೋಬರ್ 16) ಬಂಧಿತರಾಗಿದ್ದ ಆಲ್ ಇಂಡಿಯಾ ಸ್ಟೂಡೆಂಟ್ಸ್ ಅಸೋಸಿಯೇಷನ್ (ಎಐಎಸ್‌ಎ) ಅಧ್ಯಕ್ಷೆ ನೇಹಾ ಬೋರಾ ಅವರನ್ನು ಶನಿವಾರ (ಅ.17) ಮುಂಜಾನೆ ಬಿಡುಗಡೆ ಮಾಡಲಾಗಿದ್ದು, ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜಿತ್...

ಬೆಂಗಳೂರಿನಲ್ಲಿ ತಿರಂಗ ಯಾತ್ರೆಗೆ ಪೊಲೀಸರ ಷರತ್ತುಬದ್ಧ ಅನುಮತಿ: ಪ್ರತಿಭಟನೆ, ಘೋಷಣೆಗಳಿಗೆ ನಿರ್ಬಂಧ

ಬೆಂಗಳೂರು: ದೆಹಲಿಯಲ್ಲಿ ಸಿಜೆಪಿಯ ‘ಲೆಹ್ರಾ ದೋ ತಿರಂಗಾ’ ಮೆರವಣಿಗೆ ವಿಚಾರವಾಗಿ ರಾಜಕೀಯ ಸಂಘರ್ಷ ತೀವ್ರಗೊಂಡಿರುವ ಬೆನ್ನಲ್ಲೇ, ಬೆಂಗಳೂರಿನಲ್ಲಿ ಅಕ್ಟೋಬರ್ 16ರಂದು ಟೌನ್ ಹಾಲ್‌ನಿಂದ ಬನ್ನಪ್ಪ ಪಾರ್ಕ್‌ನಲ್ಲಿರುವ ಕ್ವಿಟ್ ಇಂಡಿಯಾ ಸ್ಮಾರಕದವರೆಗೆ ಹಮ್ಮಿಕೊಂಡಿರುವ ತಿರಂಗ...

ಸುಪ್ರೀಂ ವಿಚಾರಣೆಗೆ ಸಜ್ಜಾಗುತ್ತಿದ್ದಂತೆ ಸಿಜೆಪಿಯ ತಿರಂಗಾ ಮೆರವಣಿಗೆ ಆರಂಭ; ಪೊಲೀಸರ ನೋಟಿಸ್ ಧಿಕ್ಕರಿಸಿ ತೆರಳುತ್ತಿದ್ದ ಅಭಿಜೀತ್ ದೀಪ್ಕೆ ವಶಕ್ಕೆ

ನವದೆಹಲಿ: ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುವ ಹಕ್ಕಿನ ಕುರಿತ ಅರ್ಜಿಯ ವಿಚಾರಣೆಗೆ ಸುಪ್ರೀಂ ಕೋರ್ಟ್ ಸಜ್ಜಾಗುತ್ತಿದ್ದ ಬೆನ್ನಲ್ಲೇ, ದೆಹಲಿ ಪೊಲೀಸರ ಸೂಚನೆಯನ್ನು ಧಿಕ್ಕರಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ‘ಲೆಹ್ರಾ ದೋ ತಿರಂಗಾ’...

‘ದಿಮಾಗಿ ನಕ್ಸಲ್’, ‘ದೇಶದ್ರೋಹಿ’ ಎಂದು ಪಟ್ಟ ಕಟ್ಟುವುದು ಅಧಿಕಾರ ಕಳೆದುಕೊಳ್ಳುವ ಭೀತಿಯ ಸಂಕೇತ”: ಮೋದಿ-ಅಮಿತ್ ಶಾ ವಿರುದ್ಧ ಪವನ್ ಖೇರಾ ವಾಗ್ದಾಳಿ!

ನವದೆಹಲಿ: ಕೇಂದ್ರದ ಬಿಜೆಪಿ ಸರ್ಕಾರವು ತನ್ನ ನೀತಿಗಳು ಮತ್ತು ನಡೆಯನ್ನು ಪ್ರಶ್ನಿಸುವ ನಾಗರಿಕರಿಗೆ ‘ರಾಷ್ಟ್ರವಿರೋಧಿ’, ‘ಎಡಪಂಥೀಯ’ ಹಾಗೂ ‘ದಿಮಾಗಿ ನಕ್ಸಲ್’ ಎಂದು ಪಟ್ಟ ಕಟ್ಟುತ್ತಿರುವುದು ಅದರ ಅಧಿಕಾರ ಕಳೆದುಕೊಳ್ಳುವ ಭೀತಿಯನ್ನು ತೋರಿಸುತ್ತದೆ ಎಂದು...

ಸಿಜೆಪಿಯ ‘ಲೆಹ್ರಾ ದೋ ತಿರಂಗಾ’ ಮೆರವಣಿಗೆಗೆ ಹೆಚ್ಚಿದ ನಿರ್ಬಂಧ: 25 ಸಾವಿರಕ್ಕೂ ಹೆಚ್ಚು ಭದ್ರತಾ ಸಿಬ್ಬಂದಿ ನಿಯೋಜನೆ, ಸೆಂಟ್ರಲ್ ಪಾರ್ಕ್ ಬಂದ್

ನವದೆಹಲಿ: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಅಕ್ರಮಗಳು ನಡೆದಿವೆ ಎಂದು ಆರೋಪಿಸಿ, ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಒತ್ತಾಯಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)...

ಸಿಜೆಪಿಯ ತಿರಂಗಾ ಮೆರವಣಿಗೆ: ಸೆಂಟ್ರಲ್ ಪಾರ್ಕ್ ಮುಚ್ಚುವಿಕೆ ಪ್ರಶ್ನಿಸಿದ ಅರ್ಜಿಯ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ ನಕಾರ

ನವದೆಹಲಿ: ದೆಹಲಿಯ ಕನ್ನಾಟ್ ಪ್ಲೇಸ್‌ನ ಸೆಂಟ್ರಲ್ ಪಾರ್ಕ್ ಮುಚ್ಚುವ ನವದೆಹಲಿ ಮುನ್ಸಿಪಲ್ ಕೌನ್ಸಿಲ್ (ಎನ್‌ಡಿಎಂಸಿ) ಆದೇಶವನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ ಶುಕ್ರವಾರ ನಿರಾಕರಿಸಿದೆ. ಕಾಕ್ರೋಚ್ ಜನತಾ ಪಾರ್ಟಿ...

ದೆಹಲಿ ಬಿಟ್ಟು ರಿಲಯನ್ಸ್ ರಿಫೈನರಿ ಇರುವ ಜಾಮ್‌ನಗರಕ್ಕೆ ಅಮೆರಿಕ ವಿದೇಶಾಂಗ ಕಾರ್ಯದರ್ಶಿ ಭೇಟಿ: ಮೋದಿ ಸರ್ಕಾರದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ!

ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೋ ರುಬಿಯೋ ಅವರ ಮುಂಬರುವ ಭಾರತ ಭೇಟಿ ಹಾಗೂ ವಿದೇಶಾಂಗ ಸಚಿವಾಲಯದ ನಿರ್ಧಾರಗಳ ಕುರಿತು ವಿಪಕ್ಷ ನಾಯಕ ರಾಹುಲ್ ಗಾಂಧಿ ವಿಮರ್ಶಾತ್ಮಕವಾಗಿ ಪ್ರತಿಕ್ರಿಯಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರ...

ದೆಹಲಿ ಪ್ರತಿಭಟನೆ: ‘ತಿರಂಗ ಹಾರಿಸಿದ್ದಕ್ಕೆ ಜೈಲಿಗೆ ಹೋಗಲೂ ಸಿದ್ಧ’: ಮೋದಿ ಸರ್ಕಾರದ ವಿರುದ್ಧ ಅಭಿಜೀತ್ ದೀಪ್ಕೆ ತೀವ್ರ ವಾಗ್ದಾಳಿ

ನವದೆಹಲಿ: ರಾಷ್ಟ್ರಧ್ವಜ ಹಾರಿಸುವುದನ್ನೇ ಅಪರಾಧವೆಂದು ಪರಿಗಣಿಸುವ ಪರಿಸ್ಥಿತಿ ದೇಶದಲ್ಲಿ ನಿರ್ಮಾಣವಾಗಿದೆಯೇ ಎಂದು ಪ್ರಶ್ನಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ತಿರಂಗ ಹಾರಿಸಿದ್ದಕ್ಕಾಗಿ ಜೈಲಿಗೆ ಹೋಗಬೇಕಾದರೂ ಸಿದ್ಧ ಎಂದು ಘೋಷಿಸಿದ್ದಾರೆ....