Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್: ಊಟದ ವೇಳೆ ರಾಹುಲ್ ಗಾಂಧಿ ಮಾಸ್ಕ್ ಧರಿಸಿರಲಿಲ್ಲ

ಫ್ಯಾಕ್ಟ್‌ಚೆಕ್: ಊಟದ ವೇಳೆ ರಾಹುಲ್ ಗಾಂಧಿ ಮಾಸ್ಕ್ ಧರಿಸಿರಲಿಲ್ಲ

- Advertisement -
- Advertisement -

ಮಾಸ್ಕ್ ಧರಿಸಿದ ರಾಹುಲ್ ಗಾಂಧಿ ಹಲವು ಮಹಿಳೆಯರೊಂದಿಗೆ ಊಟದ ಸಾಲಿನಲ್ಲಿ ಕುಳಿತಿರುವ ಫೋಟೊವೊಂದನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡು, ‘ರಾಹುಲ್ ಗಾಂಧಿ ಮಾತ್ರ ಮಾಸ್ಕ್ ಹಾಕಿಕೊಂಡೇ ಊಟ ಮಾಡಬಹುದು ಎಂದು ವ್ಯಂಗ್ಯ ಮಾಡಲಾಗುತ್ತಿದೆ. ಇದು ನಿಜವೇ  ಪರಿಶೀಲಿಸೋಣ.

ಪೋಸ್ಟ್‌ನ ಆರ್ಕೈವ್ ಮಾಡಲಾದ ಆವೃತ್ತಿ ಇಲ್ಲಿದೆ.

ಫ್ಯಾಕ್ಟ್‌ಚೆಕ್

ಫೋಟೊವನ್ನು ಗೂಗಲ್ ರಿವರ್ಸ್ ಇಮೇಜ್ ಸರ್ಚ್ ಮೂಲಕ ಹುಡುಕಿದಾಗ ತಮಿಳುನಾಡು ಕಾಂಗ್ರೆಸ್ ಸಮಿತಿ ಟ್ವಿಟರ್‌ನಲ್ಲಿ ರಾಹುಲ್ ಗಾಂಧಿ ಊಟದ ಹಲವು ಫೋಟೊಗಳನ್ನು ಹಂಚಿಕೊಳ್ಳಲಾಗಿದೆ. ಅದರಲ್ಲಿ ಅವರು ಮಾಸ್ಕ್ ಇಲ್ಲದೇ ಊಟ ಮಾಡುತ್ತಿರುವುದನ್ನು ಮತ್ತು ಊಟದ ನಂತರ ಮಾಸ್ಕ್ ಧರಿಸಿ ಮಹಿಳೆಯರೊಂದಿಗೆ ಮಾತನಾಡುತ್ತಿರುವುದನ್ನು ಗಮನಿಸಬಹುದು.

ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಹುಡುಕಾಡಿದಾಗ ದಿ ಹಿಂದೂ ಸುದ್ದಿ ವರದಿ ದೊರಕಿತು. ಅದರಲ್ಲಿ ರಾಹುಲ್ ಗಾಂಧಿ ಊಟ ಮಾಡುವಾಗ ಯಾವುದೇ ಮಾಸ್ಕ್ ಧರಿಸಿಲ್ಲದ ಅವರ ಚಿತ್ರವನ್ನು ಪ್ರಕಟಿಸಿದೆ. ಲೇಖನದ ಪ್ರಕಾರ, ಈ ಚಿತ್ರವು ರಾಹುಲ್ ಗಾಂಧಿಯವರ ಈರೋಡ್ ಭೇಟಿಯ ಸಮಯದಲ್ಲಿ ಒಡನಿಲೈನಲ್ಲಿ ನೇಕಾರರೊಂದಿಗೆ ಊಟ ಮಾಡುತ್ತಿರುವ ಸಮಯದಲ್ಲಿ ತೆಗೆದುದ್ದಾಗಿದೆ. ಕೆಲವು ಪ್ರಾದೇಶಿಕ ಮತ್ತು ಆನ್‌ಲೈನ್ ಸುದ್ದಿ ಲೇಖನಗಳು ಸಹ  ರಾಹುಲ್ ಗಾಂಧಿಯವರ ಮಾಸ್ಕ್ ಇಲ್ಲದೇ ಊಟ ಮಾಡುವ ಚಿತ್ರವನ್ನು ಪ್ರಕಟಿಸಿವೆ. ಆ ಲೇಖನಗಳನ್ನು ಇಲ್ಲಿ ಮತ್ತು ಇಲ್ಲಿ ನೋಡಬಹುದು. ಕೆಲವು ತಮಿಳುನಾಡು ಕಾಂಗ್ರೆಸ್ ಮುಖಂಡರು ಮಾಸ್ಕ್ ಇಲ್ಲದೆ ರಾಹುಲ್ ಗಾಂಧಿಯವರ ಊಟದ ಚಿತ್ರಗಳನ್ನು ಹಂಚಿಕೊಂಡಿದ್ದಾರೆ, ಅವುಗಳನ್ನು ಇಲ್ಲಿ ಮತ್ತು ಇಲ್ಲಿ ನೋಡಬಹುದು.

ಯೂಟ್ಯೂಬ್‌ನಲ್ಲಿ ಈ ಕುರಿತು ಹುಡುಕಾಡಿದಾಗ ಪ್ರಾದೇಶಿಕ ತಮಿಳು ಚಾನೆಲ್ ಒಂದು ರಾಹುಲ್‌ಗಾಂಧಿಯವರ ಈರೋಡ್ ಕಾರ್ಯಕ್ರಮದ ಬಗ್ಗೆ ವಿಡಿಯೋ ವರದಿ ಮಾಡಿದೆ. ಅದರಲ್ಲಿಯೂ ಸಹ ರಾಹುಲ್ ಗಾಂಧಿ ಮಾಸ್ಕ್ ಧರಿಸದೇ ಊಟ ಮಾಡುವುದನ್ನು ನೋಡಬಹುದಾಗಿದೆ.

ಒಟ್ಟಿನಲ್ಲಿ ಊಟದ ವೇಳೆ ರಾಹುಲ್ ಗಾಂಧಿ ಮಾಸ್ಕ್ ಧಿರಿಸಿದ್ದರು ಎಂದು ವ್ಯಂಗ್ಯ ಮಾಡಲಾಗುತ್ತಿದೆಯೇ ಹೊರತು ಅದು ನಿಜವಲ್ಲ.

ಕೃಪೆ: ಫ್ಯಾಕ್ಟ್ಲಿ


ಇದನ್ನೂ ಓದಿ: ‘ನಾಯಕರೇ, ರೈತರನ್ನು ದಾರಿ ತಪ್ಪಿಸುವ ಐಡಿಯಾ ಕೊಡಿ’: ಬಿಜೆಪಿ ಕಾರ್ಯಕರ್ತರ ಆಗ್ರಹ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...