Homeಫ್ಯಾಕ್ಟ್‌ಚೆಕ್FACT CHECK : ರಾಹುಲ್ ಗಾಂಧಿ ಹಿಂದೂಗಳಿಗೆ ಎಚ್ಚರಿಕೆ ನೀಡಿದ್ದಾರೆ ಎಂದು ಎಡಿಟೆಡ್ ವಿಡಿಯೋ ಹಂಚಿಕೊಳ್ಳಲಾಗುತ್ತಿದೆ

FACT CHECK : ರಾಹುಲ್ ಗಾಂಧಿ ಹಿಂದೂಗಳಿಗೆ ಎಚ್ಚರಿಕೆ ನೀಡಿದ್ದಾರೆ ಎಂದು ಎಡಿಟೆಡ್ ವಿಡಿಯೋ ಹಂಚಿಕೊಳ್ಳಲಾಗುತ್ತಿದೆ

- Advertisement -
- Advertisement -

“ಅವರು ಏನು ಬೇಕಾದರು ಮಾಡಲಿ. ಆದರೆ, ಒಂದಲ್ಲ ಒಂದು ದಿನ ಬಿಜೆಪಿ ಸರ್ಕಾರ ಬದಲಾಗಲಿದೆ. ಆಗ ನಾವು ಕ್ರಮ ಕೈಗೊಳ್ಳುತ್ತೇವೆ. ಆ ಬಳಿಕ ಮುಂದೆ ಯಾವತ್ತೂ ಆ ರೀತಿ ಆಗುವುದಿಲ್ಲ. ಇದಕ್ಕೆ ನಾನು ಗ್ಯಾರಂಟಿ ಕೊಡುತ್ತೇನೆ” ಎಂಬರ್ಥದಲ್ಲಿ ಕಾಂಗ್ರೆಸ್‌ ಸಂಸದ ಹಾಗೂ ಲೋಕಸಭೆಯ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಹೇಳಿಕೆ ನೀಡಿರುವ ವಿಡಿಯೋ ಕ್ಲಿಪ್ ಒಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

ಈ ವಿಡಿಯೋ ಹಂಚಿಕೊಂಡಿರುವ ಕೆಲ ಫೇಸ್‌ಬುಕ್, ಎಕ್ಸ್‌ ಬಳಕೆದಾರರು “ರಾಹುಲ್ ಗಾಂಧಿ ಹಿಂದೂಗಳಿಗೆ ಎಚ್ಚರಿಕೆ ನೀಡುತ್ತಿದ್ದಾರೆ” ಎಂದು ಬರೆದುಕೊಂಡಿದ್ದಾರೆ.

ಜೀವನ್ ಮಹಲ್ಲೆ ಎಂಬ ಫೇಸ್‌ಬುಕ್ ಬಳಕೆದಾರರು ವಿಡಿಯೋ ಹಂಚಿಕೊಂಡು ” ಖಾನ್ ಮೊಮ್ಮಗ ಹಿಂದೂಗಳಿಗೆ ಎಚ್ಚರಿಕೆ ನೀಡುವುದನ್ನು ಕೇಳಿ. ಒಳ್ಳೆಯದು ರಾಹುಲ್ ಬಾಬಾ, ನೀವು ನಿಮ್ಮ ನಿಜವಾದ ಮುಖವನ್ನು ಬಹಿರಂಗಪಡಿಸಿದ್ದೀರಿ. ತಮ್ಮ ಪರಂಪರೆಯನ್ನು ಅಪ್ಪಿಕೊಂಡ ಪ್ರತಿಯೊಬ್ಬ ಹಿಂದೂವೂ ಈ ಹಿಂದೂ ವಿರೋಧಿ, ಸನಾತನ ವಿರೋಧಿ ರಾಹುಲ್ ಖಾನ್ ಅವರನ್ನು ಎದುರಿಸಲು ಸಜ್ಜಾಗಬೇಕು. ಅವರು ಬಹಿರಂಗವಾಗಿ ಬೆದರಿಕೆ ಹಾಕುತ್ತಿದ್ದಾರೆ” ಎಂಬ ಎಂದು ಬರೆದುಕೊಂಡಿದ್ದಾರೆ.

ವಿರಾಜ್ ರೇವಡೇಖರ್ ಎಂಬ ಮತ್ತೊಬ್ಬ ಫೇಸ್‌ಬುಕ್ ಬಳಕೆದಾರ ಕೂಡ ವಿಡಿಯೋ ಹಂಚಿಕೊಂಡು “ಖಾನ್ ಮೊಮ್ಮಗ ಹಿಂದೂಗಳಿಗೆ ಎಚ್ಚರಿಕೆ ನೀಡಿದ್ದಾರೆ” ಎಂದು ಬರೆದುಕೊಂಡಿದ್ದಾರೆ.

ಇದೇ ರೀತಿಯ ಬರಹಗಳೊಂದಿಗೆ ಇನ್ನೂ ಅನೇಕರು ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಹಂಚಿಕೊಂಡಿದ್ದಾರೆ.

ಫ್ಯಾಕ್ಟ್‌ಚೆಕ್ : ವೈರಲ್ ಆಗಿರುವ ರಾಹುಲ್ ಗಾಂಧಿಯವರ ಹೇಳಿಕೆಯ ವಿಡಿಯೋ ಕ್ಲಿಪ್‌ನ ಸತ್ಯಾಸತ್ಯತೆ ತಿಳಿಯಲು ನಾವು ರಾಹುಲ್ ಹೇಳಿಕೆಯ ಮೂಲ ವಿಡಿಯೋ ಹುಡುಕಿದ್ದೇವೆ. ಮಾರ್ಚ್ 29, 2024ರಂದು ರಾಹುಲ್ ಗಾಂಧಿಯವರ ಅಧಿಕೃತ ಎಕ್ಸ್ ಹ್ಯಾಂಡಲ್‌ನಲ್ಲಿ ವಿಡಿಯೋ ಪೋಸ್ಟ್ ಆಗಿರುವುದು ಕಂಡು ಬಂದಿದೆ.

ವಿಡಿಯೋದಲ್ಲಿ “ಸಂಸ್ಥೆಗಳು ಅವರ ಕೆಲಸ ಮಾಡಿದ್ದರೆ, ಸಿಬಿಐ, ಇಡಿ ಅವರ ಕರ್ತವ್ಯ ನಿಭಾಯಿಸಿದ್ದರೆ ಇದು ಆಗುತ್ತಿರಲಿಲ್ಲ. ಇದೆಲ್ಲ ಮಾಡುವವರು ಒಂದು ಯೋಚನೆ ಮಾಡಬೇಕು, ಒಂದಲ್ಲ ಒಂದು ದಿನ ಬಿಜೆಪಿ ಸರ್ಕಾರ ಬದಲಾಗಲಿದೆ. ನಂತರ ಕ್ರಮ ಕೈಗೊಳ್ಳಲಾಗುವುದು. ಆ ಬಳಿಕ ಅದು ಮತ್ತೆ ಎಂದಿಗೂ ಸಂಭವಿಸುವುದಿಲ್ಲ. ಇದಕ್ಕೆ ನಾನು ಗ್ಯಾರಂಟಿ” ಎಂದು ರಾಹುಲ್ ಗಾಂಧಿ ಹೇಳಿರುವುದು ಇದೆ.

ವಿಡಿಯೋ ಜೊತೆಗೆ “ಸರ್ಕಾರ ಬದಲಾದಾಗ ‘ಪ್ರಜಾಪ್ರಭುತ್ವ ವಿಘಟನೆ’ ಮಾಡುವವರ ವಿರುದ್ಧ ಖಂಡಿತ ಕ್ರಮ ಕೈಗೊಳ್ಳಲಾಗುವುದು!. ಇದನ್ನೆಲ್ಲ ಮತ್ತೊಮ್ಮೆ ಮಾಡಲು ಯಾರಿಗೂ ಧೈರ್ಯ ಬರದಂತಹ ಕ್ರಮ ಕೈಗೊಳ್ಳಲಾಗುವುದು. ಇದು ನನ್ನ ಗ್ಯಾರಂಟಿ” ಎಂದು ಬರೆದುಕೊಳ್ಳಲಾಗಿದೆ.

ವಿಡಿಯೋ ಗಮನಿಸಿದಾಗ ರಾಹುಲ್ ಗಾಂಧಿ ಸಿಬಿಐ, ಇಡಿಯಂತಹ ಸಂಸ್ಥೆಗಳ ಕುರಿತು ಮಾತನಾಡಿರುವುದು ನಮಗೆ ಸ್ಪಷ್ಟವಾಗಿದೆ. ಹಾಗಾಗಿ, ರಾಹುಲ್ ಗಾಂಧಿ ಹೇಳಿಕೆಯ ಕುರಿತ ವರದಿಗಳನ್ನು ನಾವು ಹುಡುಕಿದ್ದೇವೆ. ಈ ವೇಳೆ ಹಿಂದೂಸ್ತಾನ್, ಎನ್‌ಡಿಟಿವಿ ಮತ್ತು ಎಬಿಪಿ ನ್ಯೂಸ್ ಲೈವ್‌ ಮಾರ್ಚ್ 29,2024 ರ ಮಾಡಿರುವ ವರದಿಗಳು ಲಭ್ಯವಾಗಿದೆ.

ವರದಿಗಳ ಪ್ರಕಾರ, ಆದಾಯ ತೆರಿಗೆ ಇಲಾಖೆ ಕಾಂಗ್ರೆಸ್ ಪಕ್ಷಕ್ಕೆ ನೀಡಿದ 1,823 ಕೋಟಿ ರೂ.ಗಳ ಬೇಡಿಕೆ ನೋಟಿಸ್‌ಗೆ ಪ್ರತಿಕ್ರಿಯೆಯಾಗಿ ರಾಹುಲ್ ಗಾಂಧಿ ಈ ಹೇಳಿಕೆ ನೀಡಿದ್ದಾರೆ. ದಂಡ ಮತ್ತು ಬಡ್ಡಿಯನ್ನು ಒಳಗೊಂಡ ಈ ನೋಟಿಸ್ 2017-18 ರಿಂದ 2020-21ರ ಅವಧಿಯನ್ನು ಒಳಗೊಂಡಿದೆ. ಲೋಕಸಭಾ ಚುನಾವಣೆಗೆ ಮುನ್ನ ತೀವ್ರ ನಗದು ಬಿಕ್ಕಟ್ಟನ್ನು ಎದುರಿಸುತ್ತಿದ್ದ ಕಾಂಗ್ರೆಸ್‌ಗೆ ಈ ನೋಟಿಸ್ ದೊಡ್ಡ ಹಿನ್ನಡೆಯಾಗಿತ್ತು.

“ಸರ್ಕಾರ ಬದಲಾದಾಗ, ಪ್ರಜಾಪ್ರಭುತ್ವದ ಮೇಲೆ ದೌರ್ಜನ್ಯ ಎಸಗುವವರ ವಿರುದ್ಧ ಖಂಡಿತವಾಗಿಯೂ ಕ್ರಮ ಕೈಗೊಳ್ಳಲಾಗುವುದು” ಎಂದು ರಾಹುಲ್ ಗಾಂಧಿ ಆದಾಯ ತೆರಿಗೆ ಇಲಾಖೆಯ ನೋಟಿಸ್ ಅನ್ನು ಉದ್ದೇಶಿಸಿ ಹೇಳಿದ್ದರು. “ನಮ್ಮ ಕ್ರಮ ಹೇಗಿರುತ್ತದೆ ಎಂದರೆ ಯಾರೂ ಮತ್ತೆ ಅದನ್ನು ಮಾಡಲು ಧೈರ್ಯ ಮಾಡುವುದಿಲ್ಲ. ನಾನು ಇದನ್ನು ಖಾತರಿಪಡಿಸುತ್ತೇನೆ” ಎಂದಿದ್ದರು.

ಒಟ್ಟಾರೆಯಾಗಿ ಹೇಳುವುದಾರೆ ಬಿಜೆಪಿ ಸರ್ಕಾರದ ಅಣತಿಯಂತೆ ಐಟಿ, ಇಡಿ, ಸಿಬಿಐಗಳು ಕಾಂಗ್ರೆಸ್‌ ಪಕ್ಷವನ್ನು ಗುರಿಯಾಗಿಸುತ್ತಿದೆ. ನೀವುಗಳು ನೆನಪಿಡಿ, ಬಿಜೆಪಿ ಸರ್ಕಾರ ಶಾಸ್ವತವಾಗಿ ಇರುವುದಿಲ್ಲ. ಒಂದಲ್ಲ ಒಂದು ದಿನ ಸರ್ಕಾರ ಬದಲಾಗಲಿದೆ. ಆಗ ನಮ್ಮ ಸರ್ಕಾರ ಬರಲಿದೆ. ನಾವು ಅಧಿಕಾರಕ್ಕೆ ಬಂದರೆ ಪ್ರಜಾಪ್ರಭುತ್ವ ವಿರೋಧಿಯಾಗಿ ಕಾರ್ಯ ನಿರ್ವಹಿಸುವ ಸಂಸ್ಥೆಗಳ ಮೇಲೆ ಕ್ರಮ ಕೈಗೊಳ್ಳುತ್ತೇವೆ. ಆ ಕ್ರಮ ಹೇಗಿರುತ್ತದೆ ಎಂದರೆ, ಸಂಸ್ಥೆಗಳು ಮತ್ತೆ ಆ ರೀತಿಯ ತಪ್ಪು ಮಾಡಬಾರದು ಎಂಬರ್ಥದಲ್ಲಿ ರಾಹುಲ್ ಗಾಂಧಿ ಹೇಳಿದ್ದರು. ಈ ಹೇಳಿಕೆಗೆ ಕೋಮು ಬಣ್ಣ ಬಳಿದು, ರಾಹುಲ್ ಗಾಂಧಿ ಹಿಂದೂಗಳಿಗೆ ಎಚ್ಚರಿಕೆ ನೀಡಿದ್ದಾರೆ ಎಂದು ತಪ್ಪಾಗಿ ಹಂಚಿಕೊಳ್ಳಲಾಗಿದೆ.

ಇದನ್ನೂ ಓದಿ : FACT CHECK : ಮನೆಯಿಂದ 60 ಕಿ.ಮೀ. ದೂರದೊಳಗೆ ಟೋಲ್‌ ಬೂತ್ ಇದ್ದರೆ ಟೋಲ್ ಶುಲ್ಕ ಕಟ್ಟುವಂತಿಲ್ಲ ಎಂಬುವುದು ನಿಜಾನಾ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...