Homeಫ್ಯಾಕ್ಟ್‌ಚೆಕ್FACT CHECK | ಶೀಘ್ರದಲ್ಲೇ ಆರ್‌ಬಿಐನಿಂದ 5 ಸಾವಿರ ರೂಪಾಯಿಯ ಹೊಸ ನೋಟು ಬಿಡುಗಡೆ?..ಈ ಸ್ಟೋರಿ...

FACT CHECK | ಶೀಘ್ರದಲ್ಲೇ ಆರ್‌ಬಿಐನಿಂದ 5 ಸಾವಿರ ರೂಪಾಯಿಯ ಹೊಸ ನೋಟು ಬಿಡುಗಡೆ?..ಈ ಸ್ಟೋರಿ ಓದಿ

- Advertisement -
- Advertisement -

ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ಬಿಐ) ಶೀಘ್ರದಲ್ಲೇ 5,000 ರೂಪಾಯಿ ಮುಖಬೆಲೆಯ ಕರೆನ್ಸಿ ನೋಟನ್ನು ಬಿಡುಗಡೆ ಮಾಡಲಿದೆ ಎಂದು ಫೋಟೋವೊಂದು ವೈರಲ್ ಆಗಿದೆ.

ಫೇಸ್‌ಬುಕ್ ಮತ್ತು ಥ್ರೆಡ್‌ ಸೇರಿದಂತೆ ಸಾಮಾಜಿಕ ಮಾಧ್ಯಮಗಳಲ್ಲಿ ಈ ಫೋಟೋವನ್ನು ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. ಅವುಗಳನ್ನು ಇಲ್ಲಿ, ಇಲ್ಲಿ, ಇಲ್ಲಿ ನೋಡಬಹುದು.

ಫ್ಯಾಕ್ಟ್‌ಚೆಕ್ : ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ಬಿಐ) ಭಾರತದಲ್ಲಿ ಕರೆನ್ಸಿ ನೋಟುಗಳ ಮುದ್ರಣ ಮತ್ತು ಪ್ರಸಾರದ ಅಧಿಕಾರ ಹೊಂದಿದೆ. ಯಾವುದೇ ಹೊಸ ಕರೆನ್ಸಿ ನೋಟು ಮುದ್ರಿಸಿ ಮಾರುಕಟ್ಟೆಗೆ ಬಿಡುವುದಾದರೆ, ಅಥವಾ ಚಾಲ್ತಿಯಲ್ಲಿರುವ ನೋಟು ಹಿಂಪಡೆಯುವುದಾದರೆ ಅದಕ್ಕೂ ಮುನ್ನ ಆರ್‌ಬಿಐ ಗವರ್ನರ್ ಸುದ್ದಿಗೋಷ್ಠಿ ಕರೆದು ಜನರಿಗೆ ಮಾಹಿತಿ ನೀಡುತ್ತಾರೆ.

ನಮಗೆ ಲಭ್ಯವಾದ ಮಾಹಿತಿ ಪ್ರಕಾರ, ಆರ್‌ಬಿಐ 5,000 ರೂ. ಮುಖಬೆಲೆಯ ಕರೆನ್ಸಿ ನೋಟುಗಳನ್ನು ಬಿಡುಗಡೆ ಮಾಡುತ್ತಿರುವ ಬಗ್ಗೆ ಯಾವುದೇ ಮಾಹಿತಿಯನ್ನು ಇದುವರೆಗೆ ನೀಡಿಲ್ಲ.

ಆರ್‌ಬಿಐನ ಅಧಿಕೃತ ವೆಬ್‌ಸೈಟ್‌ನಲ್ಲಿ ಈ ಕುರಿತು ಯಾವುದೇ ಪತ್ರಿಕಾ ಪ್ರಕಟಣೆ ಕಂಡು ಬಂದಿಲ್ಲ.

ಜನವರಿ 1ರ ಆರ್‌ಬಿಐ ಪತ್ರಿಕಾ ಪ್ರಕಟಣೆ

ಜನವರಿ 1ರಂದು ಆರ್‌ಬಿಐ ಹೊರಡಿಸಿದ ಪತ್ರಿಕಾ ಪ್ರಕಟನೆಯೊಂದರಲ್ಲಿ ರೂ. 2000 ಮುಖ ಬೆಲೆಯ ಕರೆನ್ಸಿ ನೋಟುಗಳ ಹಿಂಪಡೆಯುವಿಕೆಯ ಸ್ಥಿತಿಯ ಕುರಿತು ಮಾಹಿತಿ ನೀಡಿದೆ.

ಮೇ 19, 2023ರಂತೆ ಚಲಾವಣೆಯಲ್ಲಿರುವ ಸುಮಾರು 98.12 ಶೇಖಡ 2000 ಮುಖಬೆಲೆಯ ಕರೆನ್ಸಿ ನೋಟುಗಳನ್ನು ವಾಪಸ್ ಪಡೆಯಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

ವೆಬ್‌ಸೈಟ್‌ನಲ್ಲಿ ಪದೇ ಪದೇ ಕೇಳಲಾಗುವ ಪ್ರಶ್ನೆ (FAQ)ವಿಭಾಗದಲ್ಲಿ ಪ್ರಸ್ತುತ ರೂ. 10, ರೂ. 20, ರೂ. 50, ರೂ. 100, ರೂ. 200, ರೂ. 500 ಮತ್ತು ರೂ. 2000 ಮುಖಬೆಲೆಯ ನೋಟುಗಳನ್ನು ಚಾಲ್ತಿಯಲ್ಲಿದೆ ಎಂದು ಸ್ಪಷ್ಟವಾಗಿ ಹೇಳಲಾಗಿದೆ.

ಜನವರಿ 1ರ ಆರ್‌ಬಿಐ ಪತ್ರಿಕಾ ಪ್ರಕಟಣೆ

ಆರ್‌ಬಿಐ ವೆಬ್‌ಸೈಟ್‌ನಲ್ಲಿ ಪ್ರಸ್ತುತ ಚಾಲ್ತಿಯಲ್ಲಿರುವ ಕರೆನ್ಸಿ ನೋಟುಗಳ ಚಿತ್ರವನ್ನು ಪ್ರಕಟಿಸಲಾಗಿದೆ. ಅದರಲ್ಲೂ 5 ಸಾವಿರ ಮುಖಬೆಲೆಯ ನೋಟಿನ ಚಿತ್ರ ಕಂಡು ಬಂದಿಲ್ಲ.

ಕೇಂದ್ರ ಸರ್ಕಾರದ ಮಾಹಿತಿ ಮತ್ತು ಪ್ರಸಾರ ಸಚಿವಾಲಯದ ಅಧೀನಲ್ಲಿ ಕಾರ್ಯಾಚರಿಸುವ ಪ್ರೆಸ್ ಇನ್ಫರ್ಮೇಶನ್ ಬ್ಯೂರೋ (ಪಿಐಬಿ) ಕೂಡ ಜನವರಿ 4ರಂದು ತನ್ನ ಎಕ್ಸ್‌ ಖಾತೆಯಲ್ಲಿ ಈ ಸಂಬಂಧ ಸ್ಪಷ್ಟನೆ ಕೊಟ್ಟಿದ್ದು, “ಆರ್‌ಬಿಐ 5 ಸಾವಿರ ಮುಖಬೆಲೆಯ ಕರೆನ್ಸಿ ನೋಟು ಬಿಡುಗಡೆ ಮಾಡುತ್ತಿದೆ” ಎಂಬ ಸುದ್ದಿ ಸುಳ್ಳು ಎಂದಿದೆ.

ಯಾವುದೇ ಮುಖ್ಯವಾಹಿನಿ ಮಾಧ್ಯಮಗಳು ಕೂಡ 5 ಸಾವಿರ ಮುಖ ಬೆಲೆಯ ಕರೆನ್ಸಿ ನೋಟುಗಳನ್ನು ಬಿಡುಗಡೆ ಮಾಡುವ ಕುರಿತು ವರದಿ ಮಾಡಿಲ್ಲ.

ನಾವು ನಡೆಸಿದ ಪರಿಶೀಲನೆಯಲ್ಲಿ ಶೀಘ್ರದಲ್ಲೇ ರೂ. 5 ಸಾವಿರ ಮುಖಬೆಲೆಯ ಕರೆನ್ಸಿ ನೋಟುಗಳು ಬಿಡುಗಡೆಯಾಗಲಿದೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಸುದ್ದಿ ಸುಳ್ಳು ಎಂದು ತಿಳಿದು ಬಂದಿದೆ.

FACT CHECK : ಅಜ್ಮೀರ್ ದರ್ಗಾ ವಿರುದ್ಧ ಪಂಜಿನ ಮೆರವಣಿಗೆ ವೇಳೆ ಬೆಂಕಿ ಅವಘಡ..ವೈರಲ್ ವಿಡಿಯೋದ ಅಸಲಿಯತ್ತೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಹುಲ್ ಗಾಂಧಿಯನ್ನು ‘ಟಪೋರಿ’ ಎಂದು ಕರೆದ ಬಿಜೆಪಿ ಸಂಸದೆ ಕಂಗನಾ ರಣಾವತ್

ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ವಾಗ್ದಾಳಿ ನಡೆಸಿರುವ ಬಿಜೆಪಿ ಸಂಸದೆ - ನಟಿ ಕಂಗನಾ ರನೌತ್, ಅವರನ್ನು ಟಪೋರಿ ಎಂದು ಕರೆದಿದ್ದಾರೆ. ಅವರ ನಡವಳಿಕೆಯು ಮಹಿಳೆಯರಿಗೆ ಅನಾನುಕೂಲವನ್ನುಂಟು ಮಾಡುತ್ತದೆ ಎಂದು...

ಎಸ್‌ಬಿಐಗೆ ವಂಚನೆ ಪ್ರಕರಣ : ಅನಿಲ್ ಅಂಬಾನಿ ವಿಚಾರಣೆ ನಡೆಸಿದ ಸಿಬಿಐ

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ದೂರಿನ ಮೇರೆಗೆ ರಿಲಯನ್ಸ್ ಕಮ್ಯುನಿಕೇಷನ್ಸ್ ಲಿಮಿಟೆಡ್ ವಿರುದ್ಧ ದಾಖಲಾಗಿರುವ 2,929 ಕೋಟಿ ರೂಪಾಯಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗುರುವಾರ (ಮಾ.19) ಕೈಗಾರಿಕೋದ್ಯಮಿ ಅನಿಲ್ ಅಂಬಾನಿ ಅವರನ್ನು ಕೇಂದ್ರ...

ಬೆಂಗಳೂರಿನಲ್ಲಿ 2ನೇ ವಿಮಾನ ನಿಲ್ದಾಣಕ್ಕೆ ಕೇಂದ್ರದಿಂದ ಬೆಂಬಲ, ಭರವಸೆ: ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್

ನವದೆಹಲಿ: ರಾಜ್ಯದಿಂದ ಕಾರ್ಯಸಾಧ್ಯತಾ ವರದಿ ಬಂದ ನಂತರ, ಬೆಂಗಳೂರಿನ ಎರಡನೇ ವಿಮಾನ ನಿಲ್ದಾಣಕ್ಕೆ ಅಗತ್ಯವಿರುವ ಎಲ್ಲಾ ಅನುಮತಿಗಳನ್ನು ಕೇಂದ್ರವು ನೀಡಲಿದೆ ಎಂದು ಕೇಂದ್ರ ನಾಗರಿಕ ವಿಮಾನಯಾನ ಸಚಿವ ಕಿಂಜರಪು ರಾಮ್ ಮೋಹನ್ ನಾಯ್ಡು...

ಮಧ್ಯಪ್ರದೇಶ| ಪ್ರಬಲಜಾತಿ ಗುಂಪಿನಿಂದ ಹಲ್ಲೆ-ಜಾತಿನಿಂದನೆ; ನ್ಯಾಯ ಸಿಗದಿದ್ದರೆ ಸಾಮೂಹಿಕ ಆತ್ಮಹತ್ಯೆ ಮಾಡಿಕೊಳ್ಳುತ್ತೇವೆ ಎಂದ ದಲಿತ ಕುಟುಂಬ

ಮಧ್ಯಪ್ರದೇಶದ ನೀಮಚ್ ಜಿಲ್ಲೆಯ ದಲಿತ ಕುಟುಂಬವೊಂದರ ಮೇಲೆ ಗ್ರಾಮದ ಪ್ರಬಲಜಾತಿ ಗುಂಪೊಂದು ಜಾತಿ ಆಧಾರಿತ ನಿಂದನೆ ಮಾಡಿ ಹಲ್ಲೆ ನಡೆಸಿದ್ದಾರೆ. ದೂರ ನೀಡಿದರೂ ಕ್ರಮ ತಗೆದುಕೊಂಡಿದ್ದ ಎಂದು ಆರೋಪಿಸಿರುವ ಕುಟುಂಬ, ಪೊಲೀಸರು ನಿಷ್ಕ್ರಿಯತೆ...

ವಿಶ್ವದ ಅತಿದೊಡ್ಡ ಎಲ್‌ಎನ್‌ಜಿ ಹಬ್ ಖತಾರ್‌ನ ರಾಸ್ ಲಫನ್ ಇಂಡಸ್ಟ್ರಿಯಲ್ ಸಿಟಿ ಮೇಲೆ ಇರಾನ್ ಕ್ಷಿಪಣಿ ದಾಳಿ

ವಿಶ್ವದ ಅತಿದೊಡ್ಡ ಲಿಕ್ವಿಫೈಡ್ ನ್ಯಾಚುರಲ್ ಗ್ಯಾಸ್ (ಎಲ್‌ಎನ್‌ಜಿ) ರಫ್ತು ಕೇಂದ್ರಗಳಲ್ಲಿ ಒಂದಾದ ಖತಾರ್‌ನ ರಾಸ್ ಲಫನ್ ಇಂಡಸ್ಟ್ರಿಯಲ್ ಸಿಟಿ ಮೇಲೆ ಇರಾನ್ ಕ್ಷಿಪಣಿ ದಾಳಿ ನಡೆಸಿದೆ. ಈ ದಾಳಿಯಿಂದಾಗಿ ಅಲ್ಲಿನ ಅನಿಲ ಸೌಲಭ್ಯಗಳಲ್ಲಿ...

ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ : ತನಿಖಾ ವರದಿ ಸಲ್ಲಿಸಲು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ನಿರ್ದೇಶನ

ಧರ್ಮಸ್ಥಳ ಗ್ರಾಮದಲ್ಲಿ 1990ರಿಂದ 2021ರ ನಡುವೆ ಸಂಭವಿಸಿದೆ ಎನ್ನಲಾದ 74 ಅಸಹಜ ಸಾವಿನ ಪ್ರಕರಣಗಳಿಗೆ ಸಂಬಂಧಿಸಿದಂತೆ ವರದಿ ಸಲ್ಲಿಸಲು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ಬುಧವಾರ (ಮಾ.18) ನಿರ್ದೇಶಿಸಿದೆ ಎಂದು barandbench.com ವರದಿ ಮಾಡಿದೆ....

ಛತ್ತೀಸ್‌ಗಢ| ಕ್ರಿಶ್ಚಿಯನ್ ಯುವಕನ ಮೇಲೆ ಹಿಂದುತ್ವವಾದಿ ಗುಂಪಿನಿಂದ ಹಲ್ಲೆ; ‘ಜೈ ಶ್ರೀ ರಾಮ್’ ಕೂಗುವಂತೆ ಒತ್ತಾಯ

ಛತ್ತೀಸ್‌ಗಢದ ಜಂಜ್‌ಗೀರ್-ಚಂಪಾ ಜಿಲ್ಲೆಯಲ್ಲಿ ಕ್ರಿಶ್ಚಿಯನ್ ಯುವಕನ ಮೇಲೆ ಹಿಂದುತ್ವವಾದಿಗಳ ಗುಂಪೊಂದು ಹಲ್ಲೆ ನಡೆಸಿ, ಜೈಶ್ರೀರಾಮ್ ಎಂದು ಘೋಷಣೆಗಳನ್ನು ಕೂಗುವಂತೆ ಒತ್ತಾಯಿಸಿದೆ ಎಂಬ ಆರೋಪ ಕೇಳಿಬಂದಿದೆ. ಇಂದು (ಮಾ.18) ನಡೆದಿದೆ ಎನ್ನಲಾದ ಈ ಘಟನೆಯ...

ಯುಪಿಎಸ್‌ಸಿ 440 ನೇ ರ‍್ಯಾಂಕ್ ಎಂದು ಸುಳ್ಳು ಹೇಳಿ ಸಂಭ್ರಮಾಚರಣೆ ಮಾಡಿದ್ದ ಬಿಹಾರದ ಯುವಕನ ಬಂಧನ

ಕೇಂದ್ರ ಲೋಕಸೇವಾ ಆಯೋಗ (ಯುಪಿಎಸ್‌ಸಿ) ನಾಗರಿಕ ಸೇವಾ ಪರೀಕ್ಷೆ (ಸಿಎಸ್‌ಇ) 2025 ರಲ್ಲಿ ಅಖಿಲ ಭಾರತ ರ‍್ಯಾಂಕ್ (ಎಐಆರ್) 440 ಗಳಿಸಿದ್ದೇನೆ ಎಂದು ಸುಳ್ಳು ಹೇಳಿಕೊಂಡ ಕೆಲವು ದಿನಗಳ ನಂತರ, ಬಿಹಾರದ ಶೇಖ್‌ಪುರ...

‘ಜೈ ಬಾಂಗ್ಲಾ’ ಘೋಷಣೆ ಕೂಗಿದ ಆರೋಪ: ಮಹಿಳೆಗೆ ಜಾಮೀನು ನೀಡಿದ ಹೈಕೋರ್ಟ್

ಬೆಂಗಳೂರಿನ ಹೆಬ್ಬಗೂಡಿಯಲ್ಲಿ ಅಕ್ರಮ ಎನ್ನಲಾದ ಶೆಡ್‌ಗಳ ತೆರವು ಕಾರ್ಯಾಚರಣೆ ವೇಳೆ 'ಜೈ ಬಾಂಗ್ಲಾ' ಘೋಷಣೆ ಕೂಗಿದ ಆರೋಪದ ಮೇಲೆ ಬಂಧಿತರಾದ ಪಶ್ಚಿಮ ಬಂಗಾಳದ ಮಹಿಳೆಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ. ನ್ಯಾಯಮೂರ್ತಿ ಎಸ್.ರಾಚಯ್ಯ...

ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಡಿಜೆ, ಐಟಂ ಹಾಡು ನಿಷೇಧಿಸಲು ಕರ್ನಾಟಕ ಯೋಜನೆ; ವಿಧಾನಸಭೆಯಲ್ಲಿ ಸಂತೋಷ್ ಲಾಡ್ ಪ್ರಸ್ತಾಪ

ಬೆಂಗಳೂರು: ಸಾಂಸ್ಕೃತಿಕ ಕಾರ್ಯಕ್ರಮಗಳು ಮತ್ತು ಧಾರ್ಮಿಕ ಮೆರವಣಿಗೆಗಳಲ್ಲಿ ಅಬ್ಬರದ ಸಂಗೀತ ಮತ್ತು "ಐಟಂ ಹಾಡುಗಳನ್ನು" ನುಡಿಸುವ ಡಿಸ್ಕ್ ಜಾಕಿಗಳನ್ನು (ಡಿಜೆ) ನಿಷೇಧಿಸುವ ಪರವಾಗಿ ಕರ್ನಾಟಕ ಸರ್ಕಾರವಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ...