Homeಫ್ಯಾಕ್ಟ್‌ಚೆಕ್FACT CHECK : ಕಲಬುರಗಿಯ ಹಳೆಯ ವಿಡಿಯೋಗೆ ಕೋಮು ಬಣ್ಣ ಬಳಿದು ಹಂಚಿಕೊಳ್ಳುತ್ತಿರುವ ಬಲಪಂಥೀಯರು

FACT CHECK : ಕಲಬುರಗಿಯ ಹಳೆಯ ವಿಡಿಯೋಗೆ ಕೋಮು ಬಣ್ಣ ಬಳಿದು ಹಂಚಿಕೊಳ್ಳುತ್ತಿರುವ ಬಲಪಂಥೀಯರು

- Advertisement -
- Advertisement -

ಇಬ್ಬರು ವ್ಯಕ್ತಿಗಳು ಬಾಲಕನೋರ್ವನ ಕೈ ಹಿಡಿದುಕೊಂಡು, ಆತನಿಂದ ರೈಲು ಹಳಿ ಮೇಲೆ ಇಟ್ಟಿರುವ ಕಲ್ಲುಗಳನ್ನು ತೆಗೆಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

ವಿಡಿಯೋದಲ್ಲಿ, ಆ ವ್ಯಕ್ತಿಗಳು ಕನ್ನಡ ಭಾಷೆಯಲ್ಲಿ “ಎಷ್ಟು ರೈಲುಗಳಿಗೆ ಈ ರೀತಿ ಕಲ್ಲು ಇಟ್ಟಿದ್ದೀರಿ? ಎಂದು ಕೇಳುತ್ತಿರುವುದು ಮತ್ತು ಅದಕ್ಕೆ, “ಇದೇ ಮೊದಲ ಬಾರಿ ಇಟ್ಟಿದ್ದೀನಿ ಅಂಕಲ್. ನಿಮ್ಮ ಕಾಲಿಗೆ ಬೀಳುತ್ತೇನೆ, ದಯವಿಟ್ಟು ಬಿಟ್ಟು ಬಿಡಿ” ಎಂದು ಬಾಲಕ ಹೇಳುತ್ತಿರುವುದನ್ನು ನೋಡಬಹುದು.

ಸದಾ ಸುಳ್ಳು ಮತ್ತು ಕೋಮು ದ್ವೇಷದ ಸುದ್ದಿಗಳನ್ನು ಹಂಚಿಕೊಳ್ಳುವ ಬಲಪಂಥೀಯ ಎಕ್ಸ್ ಬಳಕೆದಾರ ರೌಶನ್ ಸಿಹ್ಹಾ ಅಥವಾ ಮಿ.ಸಿನ್ಹಾ ಇಂದು (ಸೆಪ್ಟೆಂಬರ್ 8, 2024) ವಿಡಿಯೋ ಪೋಸ್ಟ್ ಮಾಡಿ “ಇದು ತಮಾಷೆಯಲ್ಲ; ಇದು ಗಂಭೀರ ಸಮಸ್ಯೆ!. ದಿನಾಂಕ ಮತ್ತು ಸ್ಥಳ ತಿಳಿದಿಲ್ಲ. ಆದರೆ, ಇಂತಹ ವಿಡಿಯೋಗಳು ಬಹುತೇಕ ಪ್ರತಿದಿನ ಹೊರ ಬರುತ್ತಿವೆ. ರೈಲು ಹಳಿತಪ್ಪಿಸುವ ಉದ್ದೇಶದಿಂದ ಇಂತಹ ಕೆಲಸಗಳನ್ನು ಮಾಡಲು ಅವರಿಗೆ ಕಲಿಸಲಾಗುತ್ತಿದೆಯೇ?” ಎಂದು ಬರೆದುಕೊಂಡಿದ್ದಾರೆ.

ಮತ್ತೋರ್ವ ಬಲ ಪಂಥೀಯ ಎಕ್ಸ್ ಬಳಕೆದಾರ ದೀಪಕ್ ಶರ್ಮಾ (@SonOfBharat7)ಸೆಪ್ಟೆಂಬರ್ 6, 2024ರಂದು ವಿಡಿಯೋ ಹಂಚಿಕೊಂಡು ” ಹಿಂದೂಗಳೇ ನಿಮ್ಮನ್ನು ಕೊಲ್ಲಲು ನರಭಕ್ಷಕ ಜಿಹಾದಿಗಳ ಮಗು ಸಿದ್ದವಾಗಿದೆ. ನಿಮ್ಮ ಪ್ರೀತಿ ಪಾತ್ರರ ಮೃತದೇಹಗಳನ್ನು ನಿಮ್ಮ ನಾಲ್ಕು ಭುಜಗಳ ಮೇಲೆ ಹೊತ್ತುಕೊಂಡು ಹೋಗುತ್ತೀರಿ. ಈ ವಿಡಿಯೋ ಕರ್ನಾಟಕದದ್ದು ಎನ್ನಲಾಗಿದೆ. ಎಕ್ಸ್ ಪ್ರೆಸ್ ರೈಲು ಪಲ್ಟಿಯಾಗಿ ಎಷ್ಟೋ ಜನ ಪ್ರಾಣ ಕಳೆದುಕೊಂಡಿದ್ದಾರೆ. ಹೀಗೊಂದು ಸುದ್ದಿ ಬರುವ ದಿನ ದೂರವಿಲ್ಲ. ಎಚ್ಚರಿಕೆ” ಎಂದು ಹಿಂದಿ ಭಾಷೆಯಲ್ಲಿ ಬರೆದುಕೊಂಡಿದ್ದರು

ಕೋಮು ದ್ವೇಷದ ಸುದ್ದಿಗಳನ್ನು ಹಂಚಿಕೊಳ್ಳುವ ಫ್ರಂಟಲ್ ಪೋರ್ಸ್ (@FrontalForce) ಎಂಬ ಇನ್ನೊಂದು ಎಕ್ಸ್ ಖಾತೆಯಲ್ಲಿ ಸೆಪ್ಟೆಂಬರ್ 7ರಂದು ವಿಡಿಯೋ ಹಂಚಿಕೊಂಡು “ಬ್ರೇಕಿಂಗ್, ರೈಲು ಅಪಘಾತ ಉಂಟು ಮಾಡಲು ರೈಲು ಹಳಿಗಳ ಮೇಲೆ ಕಲ್ಲು ಮತ್ತು ಇತರ ವಸ್ತುಗಳನ್ನು ಇಟ್ಟು ಸ್ಥಳೀಯರ ಕೈಗೆ ಸಿಕ್ಕಿಬಿದ್ದ ಮೂಲಭೂತವಾದಿ ಎಂದು ಬರೆದುಕೊಂಡಿದ್ದರು.

ಇನ್ನೂ ಅನೇಕ ಬಲಪಂಥೀಯ ಸಾಮಾಜಿಕ ಜಾಲತಾಣ ಬಳಕೆದಾರರು ವಿಡಿಯೋ ಹಂಚಿಕೊಂಡಿದ್ದಾರೆ.

ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಹಂಚಿಕೊಂಡವರಲ್ಲಿ ಕೆಲವರು ‘ಮುಸ್ಲಿಂ ಹುಡುಗ’ ರೈಲು ಹಳಿ ಮೇಲೆ ಕಲ್ಲುಗಳನ್ನು ಇಟ್ಟು ಸಿಕ್ಕಿ ಬಿದ್ದಿದ್ದಾನೆ ಎಂದು ನೇರವಾಗಿ ಬರೆದುಕೊಂಡರೆ, ಇನ್ನೂ ಕೆಲವರು ಪರೋಕ್ಷವಾಗಿ ವಿಡಿಯೋಗೆ ಕೋಮು ಬಣ್ಣ ಬಳಿಯುವ ಪ್ರಯತ್ನ ಮಾಡಿದ್ದಾರೆ.

ವಿಡಿಯೋ ಪೋಸ್ಟ್ ಮಾಡಿದವರು ಸದಾ ಸುಳ್ಳು ಮತ್ತು ಕೋಮುದ್ವೇಷದ ಸುದ್ದಿಗಳನ್ನು ಹಂಚಿಕೊಳ್ಳುವವರಾದ್ದರಿಂದ ವಿಡಿಯೋದ ಸತ್ಯಾಸತ್ಯತೆಯನ್ನು ನಾವು ಪರಿಶೀಲಿಸಿದ್ದೇವೆ.

ಫ್ಯಾಕ್ಟ್‌ಚೆಕ್ : ವೈರಲ್ ಆಗಿರುವ ವಿಡಿಯೋ ಕರ್ನಾಟಕದ ಕಲಬುರಗಿ ಜಿಲ್ಲೆಯದ್ದು ಮತ್ತು ಆರು ವರ್ಷ ಹಳೆಯದ್ದಾಗಿದೆ. ಅಂದರೆ, 2018ರಲ್ಲಿ ನಡೆದ ಘಟನೆಯದ್ದಾಗಿದೆ.

ಕಲಬುರಗಿ ಕೇಂದ್ರ ರೈಲು ನಿಲ್ದಾಣದಿಂದ ಹಿರೇನಂದೂರು ಕಡೆಗೆ ಸುಮಾರು 2 ಕಿಮೀ ದೂರದಲ್ಲಿ ಈ ಘಟನೆ ನಡೆದಿದೆ. ವಿಡಿಯೋದಲ್ಲಿರುವ ಬಾಲಕ ಪಕ್ಕದ ಕೊಳಗೇರಿಯ ನಿವಾಸಿಯಾಗಿದ್ದು, ಆತ ಮತ್ತು ಸ್ನೇಹಿತರು ಆಟವಾಡುತ್ತಾ ರೈಲು ಹಳಿ ಮೇಲೆ ಕಲ್ಲುಗಳನ್ನು ಜೋಡಿಸಿದ್ದಾರೆ. ಅವರಿಗೆ ಹಳಿ ಮೇಲೆ ಕಲ್ಲುಗಳನ್ನು ಇಟ್ಟು ಅಪಘಾತ ಉಂಟು ಮಾಡುವ ಯಾವುದೇ ಉದ್ದೇಶ ಇರಲಿಲ್ಲ.

ಮಕ್ಕಳು ರೈಲು ಹಳಿಗಳ ಮೇಲೆ ಕಲ್ಲು ಇಟ್ಟಿರುವುದನ್ನು ಗಮನಿಸಿದ ಟ್ರ್ಯಾಕ್‌ಮೆನ್‌ಗಳಾದ ಗೋಪಾಲ್, ರಾಜ್‌ಕುಮಾರ್ ಮತ್ತು ರಾಜು ಬಾಲಕನೋರ್ವನನ್ನು ಹಿಡಿದು ಕಲ್ಲುಗಳನ್ನು ತೆಗೆಸಿದ್ದರು.

ಈ ಘಟನೆಯ ವಿಡಿಯೋ 2018ರ ಬಳಿಕ ಅನೇಕ ಬಾರಿ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿತ್ತು. ಮುಸ್ಲಿಂ ಬಾಲಕರು ರೈಲು ಹಳಿಗಳ ಮೇಲೆ ಕಲ್ಲುಗಳನ್ನು ಇಟ್ಟಿದ್ದಾರೆ ಎಂದು ಸುಳ್ಳು ಸುದ್ದಿ ಹಬ್ಬಿಸಲಾಗಿತ್ತು. ಅಸಲಿಗೆ ರೈಲು ಹಳಿಗೆ ಕಲ್ಲುಗಳನ್ನು ಇಟ್ಟ ಬಾಲಕ ಹಿಂದೂ ಧರ್ಮದವನಾಗಿದ್ದಾನೆ.

ಇಲ್ಲಿ ಬಾಲಕನ ಧರ್ಮವನ್ನು ಹೇಳುವ ಅಗತ್ಯವಿಲ್ಲ. ಆದರೆ, ಇತ್ತೀಚಿಗೆ ಯಾವುದೇ ರೈಲು ಹಳಿಗಳ ಮೇಲೆ ಯಾವುದೇ ವಸ್ತುಗಳನ್ನು ಇಟ್ಟಿರುವುದು ಕಂಡು ಬಂದರೆ ಅಥವಾ ನೂತನ ವಂದೇ ಭಾರತ್ ರೈಲಿಗೆ ಯಾರಾದರು ಕಲ್ಲು ಎಸೆದರೆ, ಅದನ್ನು ಮುಸ್ಲಿಮರೇ ಮಾಡಿದ್ದಾರೆ ಎಂದು ಹೇಳುವುದು ಕೆಲವರಿಗೆ ವಾಡಿಕೆಯಾಗಿದೆ. ಈ ಮೂಲಕ ಮುಸ್ಲಿಂ ಸಮುದಾಯವನ್ನು ದೇಶ ವಿರೋಧಿಗಳ ರೀತಿ ಬಿಂಬಿಸಲಾಗುತ್ತಿದೆ.

ಇತ್ತೀಚೆಗೆ ಪಾಕಿಸ್ತಾನದಲ್ಲಿ ರೈಲು ಹಳಿಯೊಂದರಿಂದ ಮಕ್ಕಳು ಕಬ್ಬಿಣದ ವಸ್ತುಗಳನ್ನು ಕಳವು ಮಾಡಿದ ಘಟನೆಯನ್ನು ಭಾರತದಲ್ಲಿ ರೈಲು ಅಪಘಾತ ಉಂಟು ಮಾಡಲು ಮುಸ್ಲಿಂ ಮಕ್ಕಳು ರೈಲು ಹಳಿಗೆ ಹಾನಿ ಮಾಡುತ್ತಿದ್ದಾರೆ ಎಂಬ ಸುದ್ದಿ ಹಬ್ಬಿತ್ತು. ಅದನ್ನು ನಾವು ಫ್ಯಾಕ್ಟ್‌ಚೆಕ್ ಮಾಡಿ ಜನರಿಗೆ ಸತ್ಯಾಸತ್ಯತೆ ತಿಳಿಸುವ ಪ್ರಯತ್ನ ಮಾಡಿದ್ದೇವೆ. ಆ ಸುದ್ದಿಯ ಲಿಂಕ್ ಕೆಳಗಿದೆ.

FACT CHECK : ಮುಸ್ಲಿಂ ಮಕ್ಕಳು ರೈಲ್ವೆ ಹಳಿಗೆ ಹಾನಿ ಮಾಡಿದ್ದಾರೆ ಎಂದು ಸುಳ್ಳು ವಿಡಿಯೋ ಹಂಚಿಕೆ

ಕಳೆದ ವರ್ಷ ಕಲಬುರಗಿಯ ಬಾಲಕನ ವಿಡಿಯೋ ಸುಳ್ಳು ಪ್ರತಿಪಾದನೆ ಮತ್ತು ಕೋಮು ಬಣ್ಣದೊಂದಿಗೆ ವೈರಲ್ ಆಗಿತ್ತು. ಆಗ ಖ್ಯಾತ ಫ್ಯಾಕ್ಟ್‌ಚೆಕ್ ಸಂಸ್ಥೆ ಆಲ್ಟ್‌ ನ್ಯೂಸ್ ವರದಿ ಪ್ರಕಟಿಸಿ ಜನರಿಗೆ ಸತ್ಯ ತಿಳಿಸಿತ್ತು. ಅದರ ಲಿಂಕ್ ಕೆಳಗಿದೆ.

5-yr-old video of boy placing stones on rail tracks viral with misleading claims

ಆಲ್ಟ್‌ ನ್ಯೂಸ್ ಸುದ್ದಿ ಬರೆಯುವ ವೇಳೆ, ರಾಯಚೂರು ರೈಲ್ವೆಯ ವೃತ್ತ ನಿರೀಕ್ಷಕ ರವಿಕುಮಾರ್ ಅವರನ್ನು ಸಂಪರ್ಕಿಸಿತ್ತು. ಅವರು ಕಲಬುರಗಿಯಲ್ಲಿ ಮಕ್ಕಳು ಆಟವಾಡುತ್ತಾ ರೈಲು ಹಳಿ ಮೇಲೆ ಕಲ್ಲು ಇಟ್ಟಿರುವುದನ್ನು ಖಚಿತಪಡಿಸಿದ್ದರು.

ಇಂದು (ಸೆ.8, 2024) ಆಲ್ಟ್‌ ನ್ಯೂಸ್ ಸಹ ಸಂಸ್ಥಾಪಕ ಮೊಹಮ್ಮದ್ ಝುಬೈರ್ ಅವರು ಎಕ್ಸ್‌ನಲ್ಲಿ ಪೋಸ್ಟ್‌ನಲ್ಲಿ ಕಲಬುರಗಿಯ ಹಳೆಯ ವಿಡಿಯೋಗೆ ಬಲಪಂಥೀಯರು ಕೋಮು ಬಣ್ಣ ಬಳಿದಿರುವುದನ್ನು ವಿವರಿಸಿದ್ದಾರೆ.

 

ಒಟ್ಟಿನಲ್ಲಿ, ಕಲಬುರಗಿಯಲ್ಲಿ 6 ವರ್ಷಗಳ ಹಿಂದೆ ನಡೆದ ಘಟನೆಯೊಂದರ ವಿಡಿಯೋವನ್ನು ಈಗ ಹಂಚಿಕೊಂಡು, ಅದಕ್ಕೆ ಕೋಮು ಬಣ್ಣ ಬಳಿಯಲಾಗಿದೆ.

ಇದನ್ನೂ ಓದಿ : FACT CHECK : ಹಿಂದೂ ಬಾಲಕನ ತಾಯತವನ್ನು ಮುಸ್ಲಿಮರು ಬಲವಂತದಿಂದ ತೆಗೆದಿದ್ದಾರೆ ಎಂಬುವುದು ಸುಳ್ಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...

ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ : ಮೊದಲ ಬೀದಿ ಹೋರಾಟಕ್ಕೆ ಸಜ್ಜಾದ ಕಾಕ್ರೋಚ್ ಜನತಾ ಪಾರ್ಟಿ

ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಅಲೆಯನ್ನು ಸೃಷ್ಟಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ತನ್ನ ಮೊದಲ ಬೀದಿ ಹೋರಾಟಕ್ಕೆ ಸಜ್ಜಾಗಿದೆ. ಜೂನ್ 6, 2026ರಂದು ನವದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ಪ್ರತಿಭಟನೆ ಆಯೋಜಿಸಿದ್ದು, ಇದರ...