Homeಫ್ಯಾಕ್ಟ್‌ಚೆಕ್FACT CHECK : ಕರ್ನಾಟಕ ಸರ್ಕಾರದಿಂದ ಗಣೇಶ ಮೆರವಣಿಗೆಗೆ ಅಡ್ಡಿ ಎಂದು ಸುಳ್ಳು ಸುದ್ದಿ ಹಬ್ಬಿಸಿದ...

FACT CHECK : ಕರ್ನಾಟಕ ಸರ್ಕಾರದಿಂದ ಗಣೇಶ ಮೆರವಣಿಗೆಗೆ ಅಡ್ಡಿ ಎಂದು ಸುಳ್ಳು ಸುದ್ದಿ ಹಬ್ಬಿಸಿದ ಬಲಪಂಥೀಯರು

ದನಿಗೂಡಿಸಿದ ಪ್ರಧಾನಿ ಮೋದಿ!

- Advertisement -
- Advertisement -

ಸೆಪ್ಟೆಂಬರ್ 14, 2024 ರಂದು ಹರಿಯಾಣದ ಕುರುಕ್ಷೇತ್ರದಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, “ಕಾಂಗ್ರೆಸ್ ಆಡಳಿತವಿರುವ ಕರ್ನಾಟಕದಲ್ಲಿ ಗಣಪತಿಯನ್ನೂ ಜೈಲಿಗೆ ಹಾಕಲಾಗುತ್ತಿದೆ. ಗಣಪತಿಯನ್ನು ಪೊಲೀಸ್ ವ್ಯಾನಿನಲ್ಲಿಟ್ಟು ಬೀಗ ಹಾಕಿದ್ದಾರೆ. ಇಡೀ ರಾಷ್ಟ್ರ ಗಣೇಶ ಉತ್ಸವವನ್ನು ಆಚರಿಸುತ್ತಿದ್ದರೆ, ವಿಘ್ನ ವಿನಾಶಕನಾದ ಗಣಪತಿಯನ್ನು ಪೂಜಿಸಲು ಕಾಂಗ್ರೆಸ್ ಅಡ್ಡಿಪಡಿಸುತ್ತಿದೆ. ತುಷ್ಟೀಕರಣಕ್ಕಾಗಿ ಕಾಂಗ್ರೆಸ್ ಯಾವ ಹಂತಕ್ಕೂ ಹೋಗಬಹುದು” ಎಂದು ಹೇಳಿದ್ದರು.

ಸೆಪ್ಟೆಂಬರ್ 17ರಂದು ಒಡಿಶಾದ ಭುವನೇಶ್ವರದಲ್ಲಿ ಭಾಷಣ ಮಾಡುವಾಗಲೂ ಪ್ರಧಾನಿ ಈ ಮಾತುಗಳು  ಪುನರುಚ್ಚರಿಸಿದ್ದರು “ಅವರ (ಕಾಂಗ್ರೆಸ್) ಸರ್ಕಾರವು ಅಧಿಕಾರದಲ್ಲಿರುವ ಕರ್ನಾಟಕದಲ್ಲಿ ಗಣೇಶನ ವಿಗ್ರಹವನ್ನು ಕಂಬಿ ಹಿಂದೆ ಇರಿಸುವ ಮೂಲಕ ದೊಡ್ಡ ಅಪರಾಧ ಮಾಡಿದ್ದಾರೆ” ಎಂದಿದ್ದರು.

ಹರಿಯಾಣದಲ್ಲಿ ಪ್ರಧಾನಿ ಮೋದಿ ಹೇಳಿಕೆ ಕೊಟ್ಟಾಗ ಕರ್ನಾಟಕದಲ್ಲಿ ಗಣೇಶ ಮೂರ್ತಿಯನ್ನು ಪೊಲೀಸ್ ವ್ಯಾನ್‌ನಲ್ಲಿಟ್ಟ ಫೋಟೋ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿತ್ತು.

ಸೆಪ್ಟೆಂಬರ್ 13, 2024 ರಂದು ಎಕ್ಸ್‌ನಲ್ಲಿ ವೈರಲ್ ಫೋಟೋ ಹಂಚಿಕೊಂಡಿದ್ದ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ “ಕಾಂಗ್ರೆಸ್ ಹಿಂದೂಗಳ ನಂಬಿಕೆಯನ್ನು ಅವಮಾನಿಸಿದೆ” ಎಂದು ಬರೆದುಕೊಂಡಿದ್ದರು.

ವೈರಲ್ ಫೋಟೋವನ್ನು ಎಕ್ಸ್ ಬಳಕೆದಾರ ಗಿರೀಶ್ ಭಾರದ್ವಾಜ್ (@Girishvhp) ಎಂಬವರು ಕೂಡ ಸೆ.13, 2024ರಂದು ಹಂಚಿಕೊಂಡಿದ್ದರು. ಗಿರೀಶ್ ಅವರು ತಮ್ಮ ಎಕ್ಸ್ ಬಯೋದಲ್ಲಿ ‘ಸ್ವಯಂಸೇವಕ’ ಹಾಗೂ  ವಿಶ್ವ ಹಿಂದೂ ಪರಿಷತ್‌ನೊಂದಿಗೆ ಗುರುತಿಸಿಕೊಂಡಿರುವುದಾಗಿ ಬರೆದುಕೊಂಡಿದ್ದಾರೆ. “ಭಗವಾನ್ ಗಣೇಶನನ್ನು ಕರ್ನಾಟಕ ಪೊಲೀಸರು ಬಂಧಿಸಿದ್ದಾರೆ. ಮಂಡ್ಯದ ನಾಗಮಂಗಲದಲ್ಲಿ ಗಣೇಶ ಮೆರವಣಿಗೆ ಮೇಲೆ ಮುಸ್ಲಿಮರು ಕಲ್ಲು ತೂರಾಟ ನಡೆಸಿದ ಘಟನೆಯನ್ನು ಖಂಡಿಸಿ ನಡೆದ ಪ್ರತಿಭಟನೆಯ ವೇಳೆ ಈ ಬಂಧನ ನಡೆದಿದೆ ಎಂದೂ ಅವರು ತಮ್ಮ ಪೋಸ್ಟ್‌ನಲ್ಲಿ ತಿಳಿಸಿದ್ದರು.

ನಾವು ಈ ಸುದ್ದಿ ಬರೆಯುವ ಹೊತ್ತಿಗೆ ಗಿರೀಶ್ ಅವರ ಪೋಸ್ಟ್ 2 ಲಕ್ಷದ 70 ಸಾವಿರ ವೀಕ್ಷಣೆಗಳನ್ನು ಪಡೆದಿತ್ತು.

ಬಿಜೆಪಿಯ ಉನ್ನತ ನಾಯಕರು ಸೇರಿದಂತೆ ಹಲವಾರು ಎಕ್ಸ್‌ ಬಳಕೆದಾರರು ಕೂಡ ವೈರಲ್ ಫೋಟೋ ಹಂಚಿಕೊಂಡು ಕರ್ನಾಟಕದ ಕಾಂಗ್ರೆಸ್ ಸರ್ಕಾರವನ್ನು ಹಿಂದೂ ವಿರೋಧಿ ಎಂದು ಟೀಕಿಸಿದ್ದರು.

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ ಎಲ್ ಸಂತೋಷ್ (@blsantosh), ಕರ್ನಾಟಕ ರಾಜ್ಯ ಬಿಜೆಪಿ ಅಧ್ಯಕ್ಷ ವಿಜಯೇಂದ್ರ ಯಡಿಯೂರಪ್ಪ (@BYVijayendra), ರಾಷ್ಟ್ರೀಯ ವಕ್ತಾರ ಶೆಹಜಾದ್ ಪೂನಾವಾಲಾ (@Shehzad_Ind), ಪಕ್ಷದ ಬೆಂಗಳೂರು ಕೇಂದ್ರ ಸಂಸದ ಪಿ ಸಿ ಮೋಹನ್ (@PCMohanMP), ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಇಲಾಖೆಯ ರಾಜ್ಯ ಖಾತೆ ಸಚಿವೆ ಶೋಭಾ ಕರಂದ್ಲಾಜೆ (@shobabjp) ಫೋಟೋ ಹಂಚಿಕೊಂಡವರಲ್ಲಿ ಪ್ರಮುಖರು.

ಮಾಧ್ಯಮಗಳು ಕೂಡ ಘಟನೆಯ ಬಗ್ಗೆ ವರದಿ ಮಾಡಿತ್ತು. ಸುದ್ದಿ ಸಂಸ್ಥೆ ಎಎನ್‌ಐ (@ANI) ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರ ಹೇಳಿಕೆಯನ್ನು ಎಕ್ಸ್‌ನಲ್ಲಿ ಹಂಚಿಕೊಂಡಿತ್ತು.

ಸೆಪ್ಟೆಂಬರ್ 14ರಂದು ವರದಿ ಪ್ರಕಟಿಸಿದ್ದ ರಿಪಬ್ಲಿಕ್ ಟಿವಿ ಇಂಗ್ಲಿಷ್ “ಕಾಂಗ್ರೆಸ್ ಆಡಳಿತದ ಕರ್ನಾಟಕದಲ್ಲಿ ಗಣಪತಿಯನ್ನೂ ಕಂಬಿ ಹಿಂದೆ ತಳ್ಳಲಾಗಿದೆ” ಎಂಬ ಪ್ರಧಾನಿ ಮೋದಿಯವರ ಹೇಳಿಕೆಯನ್ನು ಉಲ್ಲೇಖಿಸಿತ್ತು.

ಫ್ಯಾಕ್ಟ್‌ಚೆಕ್  : ಪ್ರಧಾನಿ ಮೋದಿ ಭಾಷಣದಲ್ಲಿ ಉಲ್ಲೇಖಿಸಿರುವ, ಬಿಜೆಪಿ ನಾಯಕರು ಎಕ್ಸ್‌ನಲ್ಲಿ ಹಂಚಿಕೊಂಡಿರುವ ವೈರಲ್ ಫೋಟೋದ ಕುರಿತು ಸತ್ಯಾಸತ್ಯತೆಯನ್ನು ನಾವು ಪರಿಶೀಲಿಸಿದ್ದೇವೆ.

ಈ ಕುರಿತ ಮಾಧ್ಯಮ ವರದಿಗಳನ್ನು ಪರಿಶೀಲಿಸಿದಾಗ ” ಹಲವು ವರದಿಗಳು ನಮಗೆ ಲಭ್ಯವಾಗಿದೆ. ಈ ಪೈಕಿ ದಿ ನ್ಯೂಸ್ ಮಿನಿಟ್ ವೆಬ್‌ಸೈಟ್ “Controversy erupts in Bengaluru over Ganesha idol in police van: What really happened?” ಎಂಬ ಶೀರ್ಷಿಕೆಯ ವರದಿಯನ್ನು ನಾವು ಪರಿಶೀಲಿಸಿದ್ದೇವೆ.

ವರದಿಯಲ್ಲಿ “ಮಂಡ್ಯದ ಸೆಪ್ಟೆಂಬರ್ 11ರಂದು ಮಂಡ್ಯದ ನಾಗಮಂಗಲದಲ್ಲಿ ಗಣೇಶ ಮೆರವಣಿಗೆ ವೇಳೆ ಕಲ್ಲು ತೂರಾಟ, ಗಲಾಟೆ ನಡೆದಿರುವುದನ್ನು ಖಂಡಿಸಿ ಸೆಪ್ಟೆಂಬರ್ 13ರಂದು ಬೆಂಗಳೂರಿನ ಟೌನ್‌ಹಾಲ್ ಮುಂಭಾಗದಲ್ಲಿ ‘ಬೆಂಗಳೂರು ಮಹಾನಗರ ಗಣೇಶ ಉತ್ಸವ ಸಮಿತಿ’ ವತಿಯಿಂದ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಪ್ರತಿಭಟನಾ ನಿರತರು ಗಣೇಶ ಮೂರ್ತಿಯನ್ನು ಹೊತ್ತು ತಂದಿದ್ದರು. ಪ್ರತಿಭಟನಾಕಾರರನ್ನು ಸ್ಥಳದಿಂದ ಚದುರಿಸುವಾಗ ಪೊಲೀಸರು ಗಣೇಶ ಮೂರ್ತಿಯನ್ನು ಎತ್ತಿಕೊಂಡು ಹೋಗಿ ಪೊಲೀಸ್ ವ್ಯಾನ್‌ನಲ್ಲಿಟ್ಟಿದ್ದರು. ಈ ಕುರಿತ ಫೋಟೋ ವೈರಲ್ ಆಗಿದ್ದು, ಬಿಜೆಪಿ ನಾಯಕರು ಹಾಗೂ ಮತ್ತಿತರು ಪೊಲೀಸರ ನಡೆಯನ್ನು ಖಂಡಿಸಿದ್ದಾರೆ” ಎಂದಿದೆ.

“ಹೈಕೋರ್ಟ್ ಆದೇಶದಂತೆ ಬೆಂಗಳೂರು ನಗರದಲ್ಲಿ ಸ್ವಾತಂತ್ರ್ಯ ಉದ್ಯಾನವದಲ್ಲಿ (ಫ್ರೀಡಂ ಪಾರ್ಕ್‌) ಮಾತ್ರ ಯಾವುದೇ ಪ್ರತಿಭಟನೆ ಮಾಡಬೇಕು. ಗಣೇಶ ಉತ್ಸವ ಸಮಿತಿಯವರು ನಿಯಮ ಉಲ್ಲಂಘಿಸಿ ಟೌನ್ ಹಾಲ್ ಬಳಿ ಪ್ರತಿಭಟಿಸಿದ್ದಕ್ಕೆ ಪೊಲೀಸರು ಅಡ್ಡಿಪಡಿಸಿದ್ದಾರೆ” ಎಂದೂ ವರದಿಯಲ್ಲಿ ತಿಳಿಸಲಾಗಿದೆ.

“ಪ್ರತಿಭಟನೆಗೆ ಸಂಬಂಧಿಸಿದಂತೆ ಪೊಲೀಸರು ಸುಮಾರು 40 ಮಂದಿಯನ್ನು ಬಂಧಿಸಿದ್ದರು. ಅವರಿಂದ ವಶಪಡಿಸಿಕೊಂಡ ಗಣೇಶ ಮೂರ್ತಿಯನ್ನು ಹಲಸೂರು ಕೆರೆಯಲ್ಲಿ ವಿಸರ್ಜನೆ ಮಾಡಿದ್ದಾರೆ” ಎಂದು ವರದಿಯಲ್ಲಿ ವಿವರಿಸಲಾಗಿದೆ.

ವೈರಲ್ ಫೋಟೋ ಮತ್ತು ಅದರ ಸುತ್ತಮುತ್ತ ಉಂಟಾಗಿರುವ ಗೊಂದಲದ ಕುರಿತು ಸೆಪ್ಟೆಂಬರ್ 15ರಂದು ಬೆಂಗಳೂರು ಕೇಂದ್ರೀಯ ವಿಭಾಗದ ಡಿಸಿಪಿ (@DCPCentralBCP)ಯವರ ಅಧಿಕೃತ ಎಕ್ಸ್ ಹ್ಯಾಂಡಲ್ ಸ್ಪಷ್ಟನೆ ಕೊಡಲಾಗಿತ್ತು.

“ಬೆಂಗಳೂರಿನ ಟೌನ್ ಹಾಲ್ ಬಳಿ ನಿಮಜ್ಜನಕ್ಕೆ ತೆರಳುತ್ತಿದ್ದ ಭಕ್ತರಿಂದ ಗಣೇಶ ಮೂರ್ತಿಯನ್ನು ಅಧಿಕಾರಿಗಳು ಕಸಿದುಕೊಂಡಿದ್ದಾರೆ ಎಂಬ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿರುವ ಪೋಸ್ಟ್‌ಗಳ ಬಗ್ಗೆ ಸ್ಪಷ್ಟನೆ”

ಸೆಪ್ಟೆಂಬರ್ 13, 2024 ರಂದು, ಹಿಂದೂ ಗುಂಪುಗಳು ಬೆಂಗಳೂರಿನ ಟೌನ್ ಹಾಲ್‌ ಬಳಿ ನಾಗಮಂಗಲ ಗಣೇಶ ಮೆರವಣಿಗೆಯ ಘಟನೆಯನ್ನು ಖಂಡಿಸಿ, ಹೈಕೋರ್ಟ್ ಆದೇಶವನ್ನು ಧಿಕ್ಕರಿಸಿ ಪ್ರತಿಭಟಿಸಿದ್ದವು. ಪ್ರತಿಭಟನಾಕಾರರನ್ನು ಬಂಧಿಸಲಾಗಿದೆ. ಬಳಿಕ ಗಣಪತಿ ಮೂರ್ತಿಯನ್ನು ಅಧಿಕಾರಿಗಳು ವಿಧಿ ವಿಧಾನಗಳೊಂದಿಗೆ ನಿಮಜ್ಜನ ಮಾಡಿದ್ದಾರೆ” ಎಂದು ಡಿಸಿಪಿಯವರ ಎಕ್ಸ್‌ ಹ್ಯಾಂಡಲ್‌ನಲ್ಲಿ ಹೇಳಲಾಗಿತ್ತು.

 

ಒಟ್ಟಿನಲ್ಲಿ , ನಾಗಮಂಗಲದ ಘಟನೆಯನ್ನು ಖಂಡಿಸಿ ಬೆಂಗಳೂರಿನ ಟೌನ್‌ಹಾಲ್‌ ಬಳಿ ಬೆಂಗಳೂರು ಗಣೇಶ ಉತ್ಸವ ಸಮಿತಿಯಿಂದ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಪ್ರತಿಭಟನಾಕಾರರು ತಂದಿದ್ದ ಗಣೇಶ ಮೂರ್ತಿಯನ್ನು ವಶಪಡಿಸಿಕೊಂಡಿದ್ದ ಪೊಲೀಸರು, ಅದನ್ನು ಖಾಲಿ ಪೊಲೀಸ್ ವ್ಯಾನ್‌ನಲ್ಲಿಟ್ಟಿದ್ದರು. ಈ ಕುರಿತ ಪೋಟೋವನ್ನು ಹಂಚಿಕೊಂಡ ಬಿಜೆಪಿ ನಾಯಕರು ಮತ್ತು ಬಲಪಂಥೀಯ ಸಾಮಾಜಿಕ ಜಾಲತಾಣ ಬಳಕೆದಾರರು ” ಕಾಂಗ್ರೆಸ್ ಆಡಳಿತ ಕರ್ನಾಟಕದಲ್ಲಿ ಗಣೇಶ ಮೆರವಣಿಗೆಗೆ ಪೊಲೀಸರು ಅಡ್ಡಿಪಡಿಸಿದ್ದಾರೆ. ಗಣೇಶ ಮೂರ್ತಿಯನ್ನು ಬಂಧಿಸಿ ಕಂಬಿ ಹಿಂದೆ ತಳ್ಳಿದ್ದಾರೆ” ಎಂದು ಸುಳ್ಳು ಸಂದೇಶ ಹಂಚಿಕೊಂಡಿದ್ದರು. ಇದನ್ನೇ ಭಾಷಣದಲ್ಲಿ ಉಲ್ಲೇಖಿಸುವ ಮೂಲಕ ಸುಳ್ಳು ಸುದ್ದಿಗೆ ಪ್ರಧಾನಿ ಧನಿಗೂಡಿಸಿದ್ದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...