Homeಫ್ಯಾಕ್ಟ್‌ಚೆಕ್FACT CHECK : ತಂದೆ ಇಲ್ಲದ ಮಕ್ಕಳ ಖಾತೆಗೆ ವರ್ಷಕ್ಕೆ 24 ಸಾವಿರ ರೂ. ಸ್ಕಾಲರ್‌ಶಿಪ್...ವೈರಲ್...

FACT CHECK : ತಂದೆ ಇಲ್ಲದ ಮಕ್ಕಳ ಖಾತೆಗೆ ವರ್ಷಕ್ಕೆ 24 ಸಾವಿರ ರೂ. ಸ್ಕಾಲರ್‌ಶಿಪ್…ವೈರಲ್ ಸಂದೇಶದ ಸತ್ಯಾಸತ್ಯತೆ ಏನು?

- Advertisement -
- Advertisement -

“ತಂದೆ ಇಲ್ಲದ ಮಕ್ಕಳ ಖಾತೆಗೆ ಒಂದು ವರ್ಷ 24,000 ರೂ.ಗಳ ಸ್ಕಾಲರ್ ಶಿಪ್ ಸೌಲಭ್ಯವಿದ್ದು, ಆದುದರಿಂದ ತಮಗೆ ಗೊತ್ತಿರುವ ಯಾರಾದರೂ ತಂದೆ ಇಲ್ಲದ ಮಗು ಇದ್ದಲ್ಲಿ ಅವರ ಪೋಷಕರಿಗೆ ಕೂಡಲೇ ಅರ್ಜಿ ಸಲ್ಲಿಸಲು ತಿಳಿಸಿ. ಇದು ಆನ್ಲೈನ್ ಮೂಲಕ ಅಂದರೆ ಯಾವುದೇ ಸೈಬರ್ ಮೂಲಕ ಸಲ್ಲಿಕೆ ಇರುವುದಿಲ್ಲ. ಮಗುವಿಗೆ 18 ವರ್ಷಕ್ಕಿಂತ ಕಡಿಮೆ ವಯಸ್ಸು ಇರಬೇಕು. ಅರ್ಜಿ ಫಾರಂನ್ನು ಖುದ್ದಾಗಿ ಡಿಸಿ ಕಛೇರಿಯಿಂದ ತಂದು ಬೇಕಾಗುವ ದಾಖಲೆಗಳನ್ನು ಇಟ್ಟು ಶಾಲೆ ಅಥವಾ ಕಾಲೇಜು ಮುಖ್ಯೋಪಾಧ್ಯಾಯ/ ಪ್ರಾಂಶುಪಾಲರ ಸಹಿ ಮತ್ತು ಸೀಲ್ ಮಾಡಿದ ಮೇಲೆ ಪುನಃ ಡಿಸಿ ಆಫೀಸಿಗೆ ಸಲ್ಲಿಸಬೇಕು. ನಂತರ ಅವರ ಸಿಬ್ಬಂದಿಗಳು ಮನೆ ಭೇಟಿ ನೀಡಿ ಪರಿಶೀಲನೆ ಮಾಡಿದ ಮೇಲೆ ಯೋಜನೆ ಪ್ರಾರಂಭವಾಗುತ್ತದೆ”

ಈ ರೀತಿಯ ಸಂದೇಶವೊಂದು ವಿವಿಧ ಜಿಲ್ಲೆಗಳ ಮಕ್ಕಳ ರಕ್ಷಣಾಧಿಕಾರಿಗಳ ಕಚೇರಿಗಳ ಹೆಸರಿನಲ್ಲಿ ವಾಟ್ಸಾಪ್ ಗ್ರೂಪ್‌ಗಳಲ್ಲಿ ಹರಿದಾಡುತ್ತಿದೆ.

ಈ ಕುರಿತು ನಾವು ಸತ್ಯಾಸತ್ಯತೆ ಪರಿಶೀಲಿಸಿದ್ದೇವೆ.

ಫ್ಯಾಕ್ಟ್‌ಚೆಕ್ : ಆರಂಭದಲ್ಲಿ ಉತ್ತರ ಕನ್ನಡ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳ ಕಚೇರಿಯ ಹೆಸರಿನಲ್ಲಿರುವ ಸಂದೇಶ ನಮಗೆ ವಾಟ್ಸಾಪ್‌ನಲ್ಲಿ ಲಭ್ಯವಾಗಿತ್ತು. ಆದ್ದರಿಂದ ನಾವು ಉತ್ತರ ಕನ್ನಡ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಸೋನಲ್ ಐಗಲ್ ಅವರಿಗೆ ಕರೆಮಾಡಿ ಮಾಹಿತಿ ಪಡೆದಿದ್ದೇವೆ.

ಸೋನಲ್ ಐಗಲ್ ಅವರು ನೀಡಿರುವ ಮಾಹಿತಿ ಪ್ರಕಾರ, “ಕೇಂದ್ರ ಸರ್ಕಾರದ ಶೇ.60 ಅನುದಾನ ಮತ್ತು ರಾಜ್ಯ ಸರ್ಕಾರದ ಶೇ. 40 ಅನುದಾನೊಂದಿಗೆ ಪ್ರಾಯೋಜಕತ್ವ ಯೋಜನೆಯೊಂದು ಜಾರಿಯಲ್ಲಿದೆ. ಈ ಯೋಜನೆಯಡಿ ಅನಾಥ ಮಕ್ಕಳು, ಪೋಷಕರು ಜೈಲಿನಲ್ಲಿರುವ ಮಕ್ಕಳು, ಲೈಂಗಿಕ ಕಾರ್ಯಕರ್ತೆಯರು, ದೇವದಾಸಿ ಪದ್ದತಿಗೆ ಒಳಗಾಗಿರುವವ ಮಕ್ಕಳು, ಏಕ ಪೋಷಕ (ತಂದೆ ಅಥವಾ ತಾಯಿ) ಮಕ್ಕಳು, ಲೈಂಗಿಕ ದೌರ್ಜನ್ಯಕ್ಕೆ ಒಳಗಾಗಿರುವ ಮಕ್ಕಳು, ಭಿಕ್ಷುಕರ ಮಕ್ಕಳು, ಆತ್ಮಹತ್ಯೆ ಮಾಡಿಕೊಂಡಿರುವ ರೈತರ ಮಕ್ಕಳು ಮತ್ತು ಶಿರೂರು ದುರಂತದಂತಹ ಪ್ರಕೃತಿ ವಿಕೋಪಕ್ಕೆ ತುತ್ತಾಗಿರುವವರ ಮಕ್ಕಳಿಗೆ ಧನ ಸಹಾಯ ನೀಡಲಾಗುತ್ತದೆ. ಮೇಲೆ ಉಲ್ಲೇಖಿಸಿದ ಮಕ್ಕಳ ಶಿಕ್ಷಣ, ಆರೋಗ್ಯ ಸುಧಾರಣೆ ಮತ್ತು ಅವರನ್ನು ಬಾಲ ಕಾರ್ಮಿಕ ಪದ್ದತಿಯಿಂದ ತಡೆಯುವ ಉದ್ದೇಶದಿಂದ ಈ ಪ್ರಾಯೋಜಕತ್ವ ಯೋಜನೆ ರೂಪಿಸಲಾಗಿದೆ.

ಗಮನಿಸಿ : ವೈರಲ್ ಸಂದೇಶದಲ್ಲಿ ‘ತಂದೆ ಇಲ್ಲದ ಮಕ್ಕಳಿಗೆ ‘ಎಂದು ಉಲ್ಲೇಖಿಸಲಾಗಿದೆ. ಆದರೆ, ಅದು ತಪ್ಪು ಮಾಹಿತಿ. ಈ ಯೋಜನೆಯ ಅರ್ಹರು ಯಾರೆಂದು ನಾವು ಮೇಲೆ ತಿಳಿಸಿದ್ದೇವೆ.   

ವಾರ್ಷಿಕ 24 ಸಾವಿರ ಸ್ಕಾಲರ್‌ ಶಿಪ್ ಸಿಗುತ್ತಿದೆ ಎಂದೂ ವೈರಲ್ ಸಂದೇಶದಲ್ಲಿದೆ. ಆದರೆ, ಅದು ತಪ್ಪು ಮಾಹಿತಿ, ಸೋನಲ್ ಐಗಲ್ ಅವರು ಹೇಳಿರುವಂತೆ ಮಾಸಿಕ 4 ಸಾವಿರ ರೂಪಾಯಿಯಂತೆ ವಾರ್ಷಿಕ 48 ಸಾವಿರ ರೂಪಾಯಿ ಧನ ಸಹಾಯ ಸಿಗುತ್ತದೆ. 18 ವರ್ಷದೊಳಗಿನ ಗಂಡು ಮತ್ತು ಹೆಣ್ಣು ಮಕ್ಕಳು ಈ ಯೋಜನೆಗೆ ಅರ್ಹರು. ಅರ್ಹರು ಅವರಾಗಿಯೇ ಅರ್ಜಿ ಸಲ್ಲಿಸಬಹುದು ಅಥವಾ ಸಿಬ್ಬಂದಿಯ ಮೂಲಕ ಇಲಾಖೆಯೇ ಅರ್ಹರನ್ನು ಪತ್ತೆ ಮಾಡುತ್ತದೆ.

ಅರ್ಜಿಗಳನ್ನು ನೇರವಾಗಿ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳ ಕಚೇರಿಗೆ ಸಲ್ಲಿಸಬಹುದು ಅಥವಾ ತಾಲೂಕು ಶಿಶು ಅಭಿವೃದ್ದಿ ಯೋಜನಾಧಿಕಾರಿ ಮೂಲಕವೂ ನೀಡಬಹುದು. ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ವ್ಯವಸ್ಥೆಯಿಲ್ಲ, ಕೇವಲ ಆಫ್‌ಲೈನ್ ಮೂಲಕ ಸಲ್ಲಿಸಬೇಕಿದೆ. ಅರ್ಜಿ ಸಲ್ಲಿಸಲು ಆಧಾರ್ ಕಾರ್ಡ್‌, ಬ್ಯಾಂಕ್ ಸ್ಟೇಟ್‌ಮೆಂಟ್, ಮಗುವಿನ ಜನನ ಪ್ರಮಾಣ ಪತ್ರ, ತಂದೆ ತಾಯಿ ನಿಧರಾಗಿದ್ದರೆ ಅವರ ಮರಣ ಪ್ರಮಾಣ ಪತ್ರ ಬೇಕಿದೆ. ಸಲ್ಲಿಕೆಯಾದ ಅರ್ಜಿಯನ್ನು ಮಕ್ಕಳ ರಕ್ಷಣಾ ಇಲಾಖೆ ಆಂತರಿಕವಾಗಿ ಪರಿಶೀಲನೆ ಮಾಡುತ್ತದೆ ಮತ್ತು ಅರ್ಜಿ ಸಲ್ಲಿಸಿದವರ ಮನೆಗೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸುತ್ತಾರೆ. ಬಳಿಕ ಅರ್ಹರನ್ನು ಯೋಜನೆಗೆ ಆಯ್ಕೆ ಮಾಡಲಾಗುತ್ತದೆ.

ಈ ಹಿಂದೆ ಯೋಜನೆಯ ಅವಧಿ ಮೂರು ವರ್ಷ ಇತ್ತು. ಈಗ ಒಂದು ವರ್ಷಕ್ಕೆ ಸೀಮಿತಗೊಳಿಸಲಾಗಿದೆ. ಪ್ರಸ್ತುತ ಒಂದು ಮಗುವಿಗೆ ಒಂದು ವರ್ಷದವರೆಗೆ ಮಾತ್ರ ಯೋಜನೆಯ ಲಾಭ ಸಿಗಲಿದೆ. ತೀರ ಅನಿವಾರ್ಯವಿದ್ದರೆ ಮೂರು ವರ್ಷದವರೆಗೆ ಮುಂದುವರೆಸಲಾಗುತ್ತದೆ.

ವರ್ಷಕ್ಕೆ ಒಂದು ಬಾರಿ ಮಾತ್ರ ಯೋಜನೆಗೆ ಪ್ರಸ್ತಾವ ಸಲ್ಲಿಸಲಾಗುತ್ತದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಕಳೆದ ವರ್ಷ 200 ಮತ್ತು ಈ ವರ್ಷ 300 ಮಕ್ಕಳನ್ನು ಯೋಜನೆಗೆ ಆಯ್ಕೆ ಮಾಡಲಾಗಿದೆ. ಈ ಬಾರಿ ಪ್ರಾಕೃತಿಕ ವಿಕೋಪಕ್ಕೆ ತುತ್ತಾಗಿರುವ ಮಕ್ಕಳ ಬಗ್ಗೆ ಹೆಚ್ಚು ಗಮನಹರಿಸಲಾಗಿದೆ ಎಂದು ಸೋನಲ್ ಐಗಲ್ ಹೇಳಿದ್ದಾರೆ.

ಒಟ್ಟಿನಲ್ಲಿ, ವಾಟ್ಸಾಪ್‌ನಲ್ಲಿ ಹರಿದಾಡುತ್ತಿರುವ ಸಂದೇಶಲ್ಲಿ ಹೇಳಿರುವಂತೆ 18 ವರ್ಷದೊಳಗಿನ ಮಕ್ಕಳಿಗೆ ಧನ ಸಹಾಯ ನೀಡುವ ಯೋಜನೆ ಜಾರಿಯಲ್ಲಿರುವುದು ನಿಜ. ಆದರೆ, ಅದು ತಂದೆಯಿಲ್ಲದ ಮಕ್ಕಳಿಗೆ ಮಾತ್ರ ಇರುವ ಯೋಜನೆಯಲ್ಲ. ಹಲವು ಅರ್ಹರು ಯೋಜನೆಯ ಲಾಭ ಪಡೆಯಬಹುದು. ಅಲ್ಲದೆ, ವಾರ್ಷಿಕವಾಗಿ 48 ಸಾವಿರ ರೂ. ಧನ ಸಹಾಯ ಸಿಗುತ್ತದೆ.

ಇದನ್ನೂ ಓದಿ : FACT CHECK : ಇಸ್ರೇಲ್ ಅನ್ನು ಅಂತಾರಾಷ್ಟ್ರೀಯ ನ್ಯಾಯಾಲಯ ‘ಅಕ್ರಮ ರಾಷ್ಟ್ರ’ವೆಂದು ಘೋಷಿಸಿರುವುದು ನಿಜಾನಾ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

6 COMMENTS

LEAVE A REPLY

Please enter your comment!
Please enter your name here

- Advertisment -

ಧರ್ಮದ ಕಾರಣಕ್ಕೆ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಗೆ ಹಲವು ಬಾರಿ ಇರಿತ: ಅಮೆರಿಕದ ಮಾಲ್‌ನಲ್ಲಿ ಕೃತ್ಯ

ಅಮೆರಿಕದ ಉತಾಹ್‌ನಲ್ಲಿರುವ ಶಾಪಿಂಗ್ ಮಾಲ್‌ನಲ್ಲಿ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಯೊಬ್ಬನಿಗೆ ಹಲವು ಬಾರಿ ಇರಿತದ ಆರೋಪ ಹೊರಿಸಲಾಗಿದೆ. ಹೈದರಾಬಾದ್‌ ನಗರದ ಟೋಲಿಚೌಕಿಯ ನಿವಾಸಿ ಸೈಯದ್ ಸೊಹೈಲ್ ಉದ್ದೀನ್, ಉತಾಹ್‌ನ ಸಾಲ್ಟ್ ಲೇಕ್ ಕೌಂಟಿಯ...

47 ವರ್ಷಗಳ ನಂತರ ಸಾಮೂಹಿಕ ಅತ್ಯಾಚಾರ ಪ್ರಕರಣದ ಶಿಕ್ಷೆ ಎತ್ತಿಹಿಡಿದ ಅಲಹಾಬಾದ್ ಹೈಕೋರ್ಟ್

1979 ರಲ್ಲಿ ನಡೆದಿದ್ದ ಅಪ್ರಾಪ್ತೆ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ 71 ವರ್ಷದ ವ್ಯಕ್ತಿಯ ಶಿಕ್ಷೆಯನ್ನು ಅಲಹಾಬಾದ್ ಹೈಕೋರ್ಟ್ ಎತ್ತಿಹಿಡಿದಿದೆ. ಆದರೆ, ಕ್ರಿಮಿನಲ್ ಮೇಲ್ಮನವಿಯ 43 ವರ್ಷಗಳ ಸುದೀರ್ಘ ವಿಚಾರಣೆ ಮತ್ತು ಆತನ...

ಪಶ್ಚಿಮ ಬಂಗಾಳ: ಮುರ್ಷಿದಾಬಾದ್‌ನಲ್ಲಿ ಶಾಲಾ ವ್ಯಾನ್‌ಗೆ ರೈಲು ಡಿಕ್ಕಿ: ಇಬ್ಬರು ವಿದ್ಯಾರ್ಥಿಗಳು ಸೇರಿ 3 ಮಂದಿ ಸಾವು

ಮುರ್ಷಿದಾಬಾದ್: ದೇಶದಲ್ಲಿ ರೈಲ್ವೆ ಸುರಕ್ಷತೆಯ ಕುರಿತು ಸರ್ಕಾರಗಳು ದೊಡ್ಡ ದೊಡ್ಡ ಭರವಸೆ ಹಾಗೂ ಯೋಜನೆಗಳನ್ನು ಮಂಡಿಸುತ್ತಿದ್ದರೂ, ತಳಮಟ್ಟದ ವಾಸ್ತವ ಮಾತ್ರ ಇಂದಿಗೂ ಅತ್ಯಂತ ಭೀಕರವಾಗಿದೆ ಎಂಬುದಕ್ಕೆ ಪಶ್ಚಿಮ ಬಂಗಾಳದಲ್ಲಿ ನಡೆದ ಈ ಘೋರ...

ವಿಜಯ್ ನೇತೃತ್ವದ ಟಿವಿಕೆ ಸರ್ಕಾರವನ್ನು ಅಸ್ಥಿರಗೊಳಿಸಲು ‘ಪ್ರಾಜೆಕ್ಟ್ ಮೇಘಾಲಯ’ ಸಂಚು ಆರೋಪ : ಪತ್ರಕರ್ತನ ವಿಚಾರಣೆ

ತಮಿಳುನಾಡಿನ ಆಡಳಿತಾರೂಢ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಶಾಸಕ ಎನ್. ಇಲೈಯರಾಜ ಅವರಿಗೆ ಹಣದ ಆಮಿಷವೊಡ್ಡಲು ಯತ್ನಿಸಿದ ಆರೋಪ ಪ್ರಕರಣ ಸಂಬಂಧ ಚೆನ್ನೈ ಪೊಲೀಸರು 'ಪುದಿಯಾ ತಲೈಮುರೈ' ವಾಹಿನಿಯ ಪತ್ರಕರ್ತ ವಿಜಯನ್...

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...

E20 ಪೆಟ್ರೋಲ್ ಪ್ರಕರಣ : ‘ಗ್ರ್ಯಾಂಡ್ ವಿಟಾರಾ’ ಕಾರು ಬದಲಾಯಿಸಿ ಕೊಡಲು ಮಾರುತಿ ಸುಝುಕಿಗೆ ಗ್ರಾಹಕ ನ್ಯಾಯಾಲಯ ಆದೇಶ

ಛತ್ತೀಸ್‌ಗಢದ ರಾಯ್‌ಪುರದ ಜಿಲ್ಲಾ ಗ್ರಾಹಕ ವಿವಾದಗಳ ಪರಿಹಾರ ಆಯೋಗವು (ಡಿಸಿಡಿಆರ್‌ಸಿ), E20 ಇಂಧನ (ಪೆಟ್ರೋಲ್) ಬಳಕೆಯಿಂದಾಗಿ ಕಾರು ಕೆಟ್ಟುಹೋಗಿದೆ ಎಂದು ಆರೋಪಿಸಿದ ವ್ಯಕ್ತಿಗೆ ಹೊಸ 'ಗ್ರಾಂಡ್ ವಿಟಾರಾ' ಕಾರನ್ನು ನೀಡುವಂತೆ ಕಾರು ತಯಾರಿಕಾ...

ಸಿಜೆಪಿ ಶಾಂತಿಯುತ ಪ್ರತಿಭಟನೆಗೆ ನಿರಂತರ ಪೊಲೀಸ್ ಕಣ್ಗಾವಲು ಪ್ರಶ್ನಿಸಿ ದೆಹಲಿ ಹೈಕೋರ್ಟ್‌ಗೆ ಅರ್ಜಿ

ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್ ಮಂತರ್‌ನಲ್ಲಿ ಜಿರಳೆ ಜನತಾ ಪಕ್ಷ (ಸಿಜೆಪಿ) ಆಯೋಜಿಸಿರುವ ಶಾಂತಿಯುತ ಧರಣಿ ಮತ್ತು ಉಪವಾಸ ಸತ್ಯಾಗ್ರಹದಲ್ಲಿ ಭಾಗವಹಿಸುವ ನಾಗರಿಕರ ಮೇಲೆ ದೆಹಲಿ ಪೊಲೀಸರು ನಿರಂತರ ಮತ್ತು ವ್ಯಾಪಕ ಕಣ್ಗಾವಲು...

IAS ಆಗುವ ಮುನ್ನ ‘ಪರಿಪೂರ್ಣ ತಾಯಿ’ಯಾಗಿ ಎಂದ ರಾಜ್ಯಪಾಲರ ಸಲಹೆ ಪುರುಷ ಪ್ರಾಧ್ಯಾನ್ಯತೆಯ ಮುಂದುವರೆದ ಆಚರಣೆ ಅಲ್ಲವೆ?

ಇತ್ತೀಚೆಗೆ ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಅವರು, "ಮಹಿಳೆಯರು IAS ಅಧಿಕಾರಿ ಅಥವಾ ಶಿಕ್ಷಕಿಯಾಗುವ ಕನಸು ಕಾಣುವ ಮೊದಲು 'ಪರಿಣಿತ ತಾಯಿ' ಆಗುವುದನ್ನು ಕಲಿಯಬೇಕು ಎಂದು ಸಲಹೆ ನೀಡಿದ್ದರು. ಕಾನ್ಪುರದ ಛತ್ರಪತಿ...

ಹಿಂದಿನ ಮದುವೆ, ಮಗು ವಿಚಾರ ಮುಚ್ಚಿಟ್ಟಿದ್ದಕ್ಕೆ ಸಹೋದರನೊಂದಿಗಿನ ಸಂಬಂಧ ಮುರಿದುಕೊಂಡಿದ್ದ ಕಾನೂನು ವಿದ್ಯಾರ್ಥಿನಿಯನ್ನು ಇರಿದು ಕೊಂದ ತಮ್ಮ

ಬೆಂಗಳೂರು: ಮೊದಲ ಮದುವೆ ಹಾಗೂ ಮಗುವಿದ್ದ ವಿಷಯವನ್ನು ಮುಚ್ಚಿಟ್ಟು ವಂಚಿಸಿದ್ದ ಪ್ರಿಯಕರನೊಂದಿಗಿನ ಸಂಬಂಧವನ್ನು ಮುರಿದುಕೊಂಡ ಕಾರಣಕ್ಕೆ, ಆತನ ಸಹೋದರನಿಂದಲೇ ಚಾಕು ಇರಿತಕ್ಕೊಳಗಾಗಿದ್ದ ಕಾನೂನು ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ...

ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ಅಮೆರಿಕ ದಾಳಿಗೆ ಇರಾನ್‌ನಿಂದ ಪ್ರತೀಕಾರ

ಕಳೆದ ಗುರುವಾರ (ಜು.16) ಖುಜೆಸ್ತಾನ್ ಪ್ರಾಂತ್ಯದಲ್ಲಿರುವ ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ನಡೆದ ದಾಳಿಗೆ ಪ್ರತೀಕಾರವಾಗಿ, ಕುವೈತ್ ಮತ್ತು ಬಹ್ರೇನ್ ಸೇರಿದಂತೆ ಗಲ್ಫ್ ರಾಷ್ಟ್ರಗಳಲ್ಲಿರುವ ಅಮೆರಿಕದ ವಾಯು ನೆಲೆಗಳ ಮೇಲೆ ಇರಾನ್ ಪ್ರತಿದಾಳಿ...