Homeಫ್ಯಾಕ್ಟ್‌ಚೆಕ್FACT CHECK : ಸಾವರ್ಕರ್ ಸಿನಿಮಾ ಆಸ್ಕರ್‌ಗೆ ಪ್ರವೇಶ ಪಡೆದಿಲ್ವಾ? ನಿರ್ಮಾಪಕರು ಸುಳ್ಳು ಹೇಳಿದ್ರಾ?

FACT CHECK : ಸಾವರ್ಕರ್ ಸಿನಿಮಾ ಆಸ್ಕರ್‌ಗೆ ಪ್ರವೇಶ ಪಡೆದಿಲ್ವಾ? ನಿರ್ಮಾಪಕರು ಸುಳ್ಳು ಹೇಳಿದ್ರಾ?

- Advertisement -
- Advertisement -

ಸಾವರ್ಕರ್ ಕುರಿತ ಸಿನಿಮಾ ‘ಸ್ವಾತಂತ್ರ್ಯ ವೀರ ಸಾವರ್ಕರ್’ ಆಸ್ಕರ್‌ಗೆ ಪ್ರವೇಶ ಪಡೆದಿದೆ ಎಂದು ಕಳೆದ ಸೆಪ್ಟೆಂಬರ್ 24ರಂದು ಎಲ್ಲೆಡೆ ಸುದ್ದಿಯಾಗಿತ್ತು. ಭಾರತದಿಂದ ‘ಲಾಪತಾ ಲೇಡಿಸ್’ ಸಿನಿಮಾ ಆಸ್ಕರ್‌ಗೆ ಸಲ್ಲಿಕೆಯಾಗಿದೆ ಎಂದ ಮರುದಿನವೇ ಸಾರ್ವಕರ್ ಸಿನಿಮಾ ಕೂಡ ಪ್ರವೇಶ ಪಡೆದಿದೆ ಎಂದು ವರದಿಯಾಗಿತ್ತು.

ಸಾವರ್ಕರ್ ಸಿನಿಮಾದ ನಿರ್ಮಾಪಕರಲ್ಲಿ ಒಬ್ಬರಾದ ಸಂದೀಪ್ ಸಿಂಗ್ ಸ್ವತಃ ಇನ್‌ಸ್ಟಾಗ್ರಾಂನಲ್ಲಿ ಪೋಸ್ಟ್ ಹಾಕಿ “ನಮ್ಮ ಸಿನಿಮಾ ‘ಸ್ವಾತಂತ್ರ್ಯ ವೀರ ಸಾವರ್ಕರ್’ ಅನ್ನು ಅಧಿಕೃತವಾಗಿ ಆಸ್ಕರ್‌ಗೆ ಸಲ್ಲಿಕೆಯಾಗಿರುವುದಕ್ಕೆ ಹೆಮ್ಮೆಯಾಗುತ್ತಿದೆ. ಫಿಲ್ಮ್‌ ಫೆಡರೇಶನ್ ಆಫ್ ಇಂಡಿಯಾ (ಎಫ್‌ಎಫ್ಐ) ನಿಮ್ಮ ಪ್ರೋತ್ಸಾಹಕ್ಕೆ ಧನ್ಯವಾದಗಳು. ಇದೊಂದು ಅಧ್ಯತ್ಭುತ ಪಯಣ. ನಮ್ಮನ್ನು ಪ್ರೋತ್ಸಾಹಿಸಿದ ಸರ್ವರಿಗೂ ಅಭಾರಿಯಾಗಿದ್ದೇವೆ” ಎಂದು ಬರೆದುಕೊಂಡಿದ್ದರು.

ಸಂದೀಪ್ ಸಿಂಗ್ ಅವರ ಪೋಸ್ಟ್ ಆಧರಿಸಿ ನೂರಾರು ಮಾಧ್ಯಮಗಳು ಸಾವರ್ಕರ್ ಸಿನಿಮಾ ಆಸ್ಕರ್‌ಗೆ ಪ್ರವೇಶ ಪಡೆದಿದೆ ಎಂದು ಸುದ್ದಿ ಪ್ರಕಟಿಸಿತ್ತು. ಇನ್‌ಸ್ಟಾಗ್ರಾಂ, ಫೇಸ್‌ಬುಕ್, ಟ್ವಿಟ್ಟರ್‌ ಸೇರಿದಂತೆ ಸಾಮಾಜಿಕ ಮಾಧ್ಯಮಗಳಲ್ಲಿ ಅನೇಕ ಮಂದಿ ಸಾವರ್ಕರ್ ಚಿತ್ರಂಡಕ್ಕೆ ಅಭಿನಂದನೆ ಹೇಳಿ ಪೋಸ್ಟ್ ಹಾಕಿದ್ದರು.

ಆದರೆ, ಮರುದಿನ ಸಾರ್ವಕರ್ ಸಿನಿಮಾ ಆಸ್ಕರ್‌ಗೆ ಪ್ರವೇಶ ಪಡೆದಿಲ್ಲ. ಸಿನಿಮಾ ತಂಡ ಸುಳ್ಳು ಹೇಳಿಕೆ ಕೊಟ್ಟು ನಗೆಪಾಟಲಿಗೀಡಾಗಿದೆ ಎಂದು ವರದಿಯಾಗಿತ್ತು. ಈ ವಿಚಾರ ಸಾಮಾಜಿಕ ಮಾಧ್ಯಮಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿತ್ತು.

ಹಾಗಾದರೆ, ಸಾರ್ವಕರ್ ಕುರಿತ ಸಿನಿಮಾ ಆಸ್ಕರ್‌ಗೆ ಪ್ರವೇಶ ಪಡೆದಿದೆ ಎಂಬುವುದು ಸುಳ್ಳಾ? ಚಿತ್ರತಂಡ ಇಡೀ ದೇಶದ ಜನತೆಗೆ ಸುಳ್ಳು ಹೇಳಿತಾ? ಎಂಬವುದನ್ನು ನೋಡೋಣ.

ಫ್ಯಾಕ್ಟ್‌ಚೆಕ್ : ಅಸಲಿಗೆ ಸಾವರ್ಕರ್ ಕುರಿತ ಸಿನಿಮಾ ಅಧಿಕೃತವಾಗಿ ಭಾರತದಿಂದ ಆಸ್ಕರ್‌ಗೆ ಸಲ್ಲಿಕೆಯಾಗಿಲ್ಲ. ಒಂದು ದೇಶವನ್ನು ಪ್ರತಿನಿಧಿಸಿ ಆಸ್ಕರ್‌ಗೆ ಸಿನಿಮಾ ಕಳಿಸಬೇಕಾದರೆ, ಅದನ್ನು ಆಯಾ ದೇಶದ ಉನ್ನತ ಮಟ್ಟದ ಸಮಿತಿ ಆಯ್ಕೆ ಮಾಡುತ್ತದೆ. ಭಾರತದಲ್ಲಿ ಫಿಲ್ಮ್ ಫೆಡರೇಷನ್ ಆಫ್ ಇಂಡಿಯಾ ಆಸ್ಕರ್‌ಗೆ ಕಳಿಸುವ ಸಿನಿಮಾವನ್ನು ಆಯ್ಕೆ ಮಾಡುತ್ತದೆ. ಒಂದು ದೇಶದಿಂದ ಅಧಿಕೃತ ಪ್ರವೇಶಕ್ಕೆ ಒಂದು ಸಿನಿಮಾಗೆ ಮಾತ್ರ ಅವಕಾಶವಿರುತ್ತದೆ. ಈ ಬಾರಿ ಭಾರತದಿಂದ ‘ಲಾಪತಾ ಲೇಡಿಸ್‌’ ಸಿನಿಮಾವನ್ನು ಕಳಿಸಿಕೊಡಲಾಗಿದೆ.

ವೈಯಕ್ತಿಕವಾಗಿ ಅಥವಾ ಸ್ವತಂತ್ರವಾಗಿ ಯಾವುದೇ ಸಿನಿಮಾ ನಿರ್ಮಾಪಕರು ತಮ್ಮ ಸಿನಿಮಾಗಳನ್ನು ಆಸ್ಕರ್‌ಗೆ ಸಲ್ಲಿಕೆ ಮಾಡಬಹುದು. ಈ ರೀತಿ ಸಾವರ್ಕರ್ ಸಿನಿಮಾವನ್ನು ಸಲ್ಲಿಕೆ ಮಾಡಲಾಗಿದೆಯೇ? ಎಂಬುವುದರ ಬಗ್ಗೆ ಮಾಹಿತಿಯಿಲ್ಲ.

ಸಾವರ್ಕರ್ ಸಿನಿಮಾ ಆಸ್ಕರ್‌ಗೆ ಪ್ರವೇಶ ಪಡೆದಿದೆಯೇ? ಎಂಬ ಪ್ರಶ್ನೆಗೆ ಉತ್ತರಿಸಿರುವ ಫಿಲ್ಮ್‌ ಫೆಡರೇಷನ್ ಆಫ್ ಇಂಡಿಯಾದ ಅಧ್ಯಕ್ಷ ರವಿ ಕೋಟ್ಟಕ್ಕರ “ಎಫ್‌ಫ್‌ಐ ಸಾವರ್ಕರ್ ಕುರಿತ ಸಿನಿಮಾವನ್ನು ಆಸ್ಕರ್‌ಗೆ ಕಳಿಸಿಲ್ಲ. ಸಾವರ್ಕರ್ ಸಿನಿಮಾ ನಿರ್ಮಾಪಕರು ತಪ್ಪು ಹೇಳಿಕೆ ನೀಡಿದ್ದಾರೆ. ಈ ಸಂಬಂಧ ಸ್ಪಷ್ಟನೆ ನೀಡಿ ಹೇಳಿಕೆ ಬಿಡುಗಡೆ ಮಾಡುತ್ತೇವೆ.. ಸ್ವತಂತ್ರವಾಗಿ ಕಳಿಸಿಕೊಡುವ ಸಿನಿಮಾಗಳಿಗೂ ಎಫ್‌ಎಫ್‌ಐಗೂ ಯಾವುದೇ ಸಂಬಂಧವಿಲ್ಲ ಎಂದು ಹೇಳಿದ್ದಾರೆ.

ಸಾವರ್ಕರ್ ಸಿನಿಮಾ ನಿರ್ಮಾಪಕ ಸಂದೀಪ್ ಸಿಂಗ್ ತನ್ನ ಪೋಸ್ಟ್‌ನಲ್ಲಿ ತಮ್ಮ ಸಿನಿಮಾವನ್ನು ಆಸ್ಕರ್‌ಗೆ ಕಳಿಸಿಕೊಡಲು ಆಯ್ಕೆ ಮಾಡಿದ್ದಕ್ಕೆ ಎಫ್‌ಎಫ್‌ಐಗೆ ಧನ್ಯವಾದ ಎಂಬಂತೆ ಬರೆದುಕೊಂಡಿದ್ದಾರೆ. ಇದು ದಾರಿ ತಪ್ಪಿಸುವ ಹೇಳಿಕೆಯಾಗಿದೆ.

29 ಸಿನಿಮಾಗಳಲ್ಲಿ ‘ಲಾಪತಾ ಲೇಡಿಸ್’ ಆಯ್ಕೆ 

ಭಾರತದಿಂದ ಆಸ್ಕರ್‌ಗೆ ಕಳಿಸುವ ಸಿನಿಮಾವನ್ನು ಎಫ್‌ಎಫ್‌ಐ ಆಯ್ಕೆ ಮಾಡುತ್ತದೆ. ಈ ಆಯ್ಕೆಗೆ ದೇಶದಲ್ಲಿ ಯಾರು ಬೇಕಾದರೂ ನಿಯಮಗಳಿಗೆ ಅನುಸಾರವಾಗಿರುವ ಯಾವುದೇ ಸಿನಿಮಾಗಳನ್ನು ಕಳಿಸಿಕೊಡಬಹುದು. ಈ ವರ್ಷ ಒಟ್ಟು 29 ಸಿನಿಮಾಗಳು ಎಫ್‌ಎಫ್‌ಐಗೆ ಸಲ್ಲಿಕೆಯಾಗಿತ್ತು.

ಅವುಗಳಲ್ಲಿ ಪಾಯಲ್ ಕಪಾಡಿಯಾ ಅವರ ಕೇನ್ಸ್ ಪ್ರಶಸ್ತಿ ವಿಜೇತ ಆಲ್ ವಿ ಇಮ್ಯಾಜಿನ್ ಆಸ್ ಲೈಟ್, ಆನಂದ್ ಎಕ್ರಾಶಿ ಅವರ ರಾಷ್ಟ್ರೀಯ ಪ್ರಶಸ್ತಿ ವಿಜೇತ ಆಟಂ, ಕ್ರೀಡಾ ಡ್ರಾಮ ಮೈದಾನ್, ಚಂದು ಚಾಂಪಿಯನ್, ಆರ್ಟಿಕಲ್ 370, ಶ್ರೀಕಾಂತ್, ಸ್ಯಾಮ್ ಬಹದ್ದೂರ್, ಕಿಲ್, ಗುಡ್ ಲಕ್, ಅನಿಮಲ್, ಕಲ್ಕಿ 2898 ಎಡಿ, ತಂಗಲಾನ್, ವಾಝೈ, ಲಾಪತಾ ಲೇಡೀಸ್, ಸ್ವಾತಂತ್ರ್ಯ ವೀರ್ ಸಾವರ್ಕರ್. ಕೊಟ್ಟುಕ್ಕಲಿ, ಜಮಾ, ಜಿಗರ್ತಂಡ ಡಬಲ್ ಎಕ್ಸ್, ಉಲ್ಲೋಝುಕ್ಕು, ಅಭಾ, ಘರತ್ ಗಣಪತಿ, ಸ್ವರ್ಗಂಧರ್ವ ಸುಧೀರ್ ಫಡ್ಕೆ, ಮಹಾರಾಜ, ಮಂಗಳವಾರಂ ಮತ್ತು ಹನು-ಮಾನ್ ಒಳಗೊಂಡಿತ್ತು. ಈ ಪೈಕಿ ಲಾಪತಾ ಲೇಡಿಸ್ ಅನ್ನು ಎಫ್‌ಎಫ್‌ಐ ಆಯ್ಕೆ ಮಾಡಿದೆ.

ಮುಂದಿನ ಆಸ್ಕರ್ ಪ್ರಶಸ್ತಿ ಪ್ರಧಾನ ಕಾರ್ಯಕ್ರಮ ಮಾರ್ಚ್ 2, 2025ರಂದು ಭಾನುವಾರ ಸಂಜೆ 5:30ರಿಂದ ರಾತ್ರಿ 8:30ರ ನಡುವೆ ಯುಎಸ್‌ನ ಕ್ಯಾಲಿಫೋರ್ನಿಯಾದ ಲಾಸ್ ಏಂಜಲೀಸ್‌ ನಗರದ ಹಾಲಿವುಡ್ ಡಾಲ್ಬಿ ಥಿಯೇಟರ್‌ನಲ್ಲಿ ನಡೆಯಲಿದೆ.

ಇದನ್ನೂ ಓದಿ : FACT CHECK : ಉತ್ತರ ಪ್ರದೇಶದಲ್ಲಿ ವೃದ್ದನ ಮುಖಕ್ಕೆ ಸ್ಪ್ರೇ ಮಾಡಿದವರು ಮುಸ್ಲಿಮರು ಎಂಬುವುದು ಸುಳ್ಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಿಶಾ ಸಾಲ್ಯಾನ್ ಸಾವು ಪ್ರಕರಣ: ಸಿಬಿಐ ತನಿಖೆಗೆ ಬಾಂಬೆ ಹೈಕೋರ್ಟ್ ಆದೇಶ

ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ಆಗಿದ್ದ ದಿಶಾ ಸಾಲಿಯಾನ್ ಅವರ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಂಬೆ ಹೈಕೋರ್ಟ್ ಬುಧವಾರ (ಸೆಪ್ಟೆಂಬರ್ 2) ಸಿಬಿಐ ತನಿಖೆಗೆ ಆದೇಶಿಸಿದೆ. ಜೂನ್...

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...