Homeಫ್ಯಾಕ್ಟ್‌ಚೆಕ್FACT CHECK : ಮೋದಿ ಸರ್ಕಾರಕ್ಕೂ ಮುನ್ನ ಭಾರತ ಒಲಿಂಪಿಕ್ಸ್‌ನಲ್ಲಿ ಪದಕ ಗೆದ್ದಿರಲಿಲ್ಲ ಎಂಬ ಶೋಭಾ...

FACT CHECK : ಮೋದಿ ಸರ್ಕಾರಕ್ಕೂ ಮುನ್ನ ಭಾರತ ಒಲಿಂಪಿಕ್ಸ್‌ನಲ್ಲಿ ಪದಕ ಗೆದ್ದಿರಲಿಲ್ಲ ಎಂಬ ಶೋಭಾ ಕರಂದ್ಲಾಜೆ ಹೇಳಿಕೆ ಸುಳ್ಳು

- Advertisement -
- Advertisement -

“ಪ್ರಧಾನಿ ಮೋದಿ ಸರ್ಕಾರ ಅಧಿಕಾರಕ್ಕೆ ಬರುವ ಮುನ್ನ ಭಾರತ ಒಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಭಾಗವಹಿಸುತ್ತಿತ್ತು. ಆದರೆ, ನಾವು ಪದಕಗಳ ಪಟ್ಟಿಯಲ್ಲಿ ಇರುತ್ತಿರಲಿಲ್ಲ. ಕಳೆದ 10 ವರ್ಷಗಳಲ್ಲಿ ಮೋದಿ ಸರ್ಕಾರದಲ್ಲಿ ಕ್ರೀಡಾಪಟುಗಳಿಗೆ ಬೆಂಬಲ ನೀಡುವ ಕೆಲಸ ಮಾಡಲಾಗಿದೆ. ಈ ಮೂಲಕ ಈ ಬಾರಿಯ ಮೊದಲ ಪದಕವನ್ನು ಭಾರತೀಯ ಮಹಿಳೆಯೊಬ್ಬರು ಗೆದ್ದಿರುವುದು ನನಗೆ ತುಂಬಾ ಸಂತಸವನ್ನು ತಂದಿದೆ” ಎಂದು ಸಚಿವೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ.

ಹಾಗಾದರೆ, ಶೋಭಾ ಕರಂದ್ಲಾಜೆ ಹೇಳಿದಂತೆ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಬರುವ ಮೊದಲು ಭಾರತ ಒಲಿಂಪಿಕ್ಸ್‌ನಲ್ಲಿ ಪದಕಗಳನ್ನೇ ಪಡೆದಿಲ್ವಾ? ಎಂಬುವುದನ್ನು ನೋಡೋಣ.

ಫ್ಯಾಕ್ಟ್‌ಚೆಕ್ : ಮೋದಿ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬರುವ ಮುನ್ನ ಭಾರತ ಒಲಿಂಪಿಕ್ಸ್‌ ಪದಕಗಳ ಪಟ್ಟಿಯಲ್ಲಿ ಇರುತ್ತಿರಲಿಲ್ಲ ಅಥವಾ ಭಾರತ ಪದಕಗಳನ್ನು ಪಡೆಯುತ್ತಿರಲಿಲ್ಲ ಎಂಬ ಸಚಿವೆ ಶೋಭಾ ಕರಂದ್ಲಾಜೆಯ ಹೇಳಿಕೆ ಸುಳ್ಳು.

ಭಾರತ ಒಲಿಂಪಿಕ್ಸ್‌ನಲ್ಲಿ ಮೊದಲ ಪದಕ ಪಡೆದಿರುವುದು 1900ನೇ ಇಸವಿಯಲ್ಲಿ. ಕೊಲ್ಕತ್ತಾ ಮೂಲದ ನಾರ್ಮನ್ ಪ್ರಿಚರ್ಡ್ ದೇಶಕ್ಕೆ ಎರಡು ಬೆಳ್ಳಿಯ ಪದಕಗಳನ್ನು ತಂದು ಕೊಟ್ಟಿದ್ದರು. ಇದು ಎಷ್ಯಾದ ಮೊದಲ ಪದಕವೂ ಹೌದು. ಆದರೆ, ನಾರ್ಮನ್ ಪ್ರಿಚರ್ಡ್ ನಮ್ಮವ ಎಂದು ಆಂಗ್ಲರಾಷ್ಟ್ರ ಬ್ರಿಟನ್ ವಾದಿಸುತ್ತಿತ್ತು. ಭಾರತ ನಮ್ಮವನು ಎಂದಿತ್ತು. ಹಾಗಾಗಿ, 125 ವರ್ಷಗಳ ಬಳಿಕವೂ ಭಾರತದ ಮೊದಲ ಒಲಿಂಪಿಕ್ಸ್ ಪದಕ ವಿವಾದಾತ್ಮಕವಾಗಿಯೇ ಉಳಿದಿದೆ.

1947ರಲ್ಲಿ ಭಾರತ ಸ್ವಾತಂತ್ರ್ಯ ಪಡೆದ ಬಳಿಕ ಮೊದಲ ಬಾರಿಗೆ 1952ರಲ್ಲಿ ನಡೆದ ಒಲಿಂಪಿಕ್ಸ್‌ನಲ್ಲಿ ಭಾರತದ ಕೆ.ಡಿ ಜಾಧವ್ ಅವರು ರೆಸ್ಲಿಂಗ್‌ನಲ್ಲಿ ಕಂಚಿನ ಪದಕ ಪಡೆದಿದ್ದರು.

ಇನ್ನು 2000ದಿಂದ 2010ರ ನಡುವೆ ದೇಶದಲ್ಲಿ ಕಾಂಗ್ರೆಸ್‌ ಸರ್ಕಾರದ ಆಡಳಿತವಿದ್ದಾಗ 2004ರಲ್ಲಿ ರಾಜ್ಯವರ್ಧನ್ ಸಿಂಗ್ ರಾಥೋಡ್, ಅಭಿನವ್ ಬಿಂದ್ರಾ, ವಿಜೇಂದರ್ ಸಿಂಗ್, ಸುಶೀಲ್ ಕುಮಾರ್ ಪದಕಗಳನ್ನು ಪಡೆದಿದ್ದರು.

1900ರ ಬಳಿಕ 2024ರವರೆಗೆ ಭಾರತದ ಕ್ರೀಡಾಪಟುಗಳು ಒಲಿಂಪಿಕ್ಸ್‌ನಲ್ಲಿ ಹಲವು ಪದಕಗಳನ್ನು ಪಡೆದಿದ್ದಾರೆ. ಈ ಬಗ್ಗೆ ಅಂತರ್ಜಾಲದಲ್ಲಿ ಸುಲಭವಾಗಿ ಮಾಹಿತಿ ಲಭ್ಯವಿದ್ದು, ಯಾರು ಬೇಕಾದರು ಪರಿಶೀಲಿಸಬಹುದು. ವಿಕಿಪೀಡಿಯಾದಲ್ಲಿ ಲಭ್ಯವಿರುವ ಪದಕಗಳ ಪಟ್ಟಿಯನ್ನು ಪರಿಶೀಲಿಸಲು ಕೆಳಗಿನ ಲಿಂಕ್ ಒತ್ತಿ.

ಲಿಂಕ್ ಇಲ್ಲಿದೆ

ಒಟ್ಟಿನಲ್ಲಿ ಸ್ವಾತಂತ್ರ್ಯಪೂರ್ವದಿಂದಲೇ ಭಾರತ ಒಲಿಂಪಿಕ್ಸ್ ಕ್ರೀಡಾಕೂಟಗಳಲ್ಲಿ ಪದಕಗಳನ್ನು ಪಡೆಯುತ್ತಿದೆ. ಹಾಗಾಗಿ, ಮೋದಿ ಸರ್ಕಾರ ಬರುವ ಮೊದಲು ಭಾರತ ಪದಕಗಳ ಪಟ್ಟಿಯಲ್ಲಿ ಇರುತ್ತಿರಲಿಲ್ಲ ಎಂಬ ಸಚಿವೆ ಶೋಭಾ ಕರಂದ್ಲಾಜೆಯವರ ಹೇಳಿಕೆ ಸುಳ್ಳು

ಇದನ್ನೂ ಓದಿ : FACT CHECK : ಬೃಂದಾವನ ಉದ್ಯಾನವನವನ್ನು ಸಿದ್ದರಾಮಯ್ಯ ಸರ್ಕಾರ ನಾಶ ಮಾಡಲು ಹೊರಟಿದೆ ಎಂಬುವುದು ಸುಳ್ಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ಯಾಲೆಸ್ತೀನ್ ಜನರೊಂದಿಗೆ ಒಗ್ಗಟ್ಟು ಪ್ರದರ್ಶನ: ದೆಹಲಿಯ ಮೆಕ್‌ಡೊನಾಲ್ಡ್ಸ್ ಹೊರಗೆ ಪ್ರತಿಭಟನೆ

ಪ್ಯಾಲೆಸ್ಟೈನ್ ಜೊತೆ ಒಗ್ಗಟ್ಟಿನ ಭಾರತೀಯ ಜನರು (ಐಪಿಎಸ್‌ಪಿ) ಗುಂಪಿನ ಸದಸ್ಯರು (ಏ.3) ಜನಪಥ್ ಪ್ರದೇಶದ ಮೆಕ್‌ಡೊನಾಲ್ಡ್ಸ್ ಔಟ್‌ಲೆಟ್‌ನ ಹೊರಗೆ ದಿಢೀರ್ ಪ್ರತಿಭಟನೆಯನ್ನು ಆಯೋಜಿಸಿದ್ದರು. ಪ್ಯಾಲೆಸ್ತೀನಿಯನ್ನರನ್ನು ಒಳಗೊಂಡ ನಡೆಯುತ್ತಿರುವ ಸಂಘರ್ಷದಲ್ಲಿ ಮೆಕ್‌ಡೊನಾಲ್ಡ್ಸ್ ಮತ್ತು ಕೋಕಾ-ಕೋಲಾದಂತಹ ಬಹುರಾಷ್ಟ್ರೀಯ...

‘ಇರಾನಿಯನ್ನರು ಸ್ಮಾರ್ಟ್ ಚೆಸ್ ಆಡುತ್ತಿದ್ದು, ಟ್ರಂಪ್ ಭ್ರಮಾಲೋಕದಲ್ಲಿದ್ದಾರೆ..’; ಮಾಜಿ ರಾಜತಾಂತ್ರಿಕ ಅಧಿಕಾರಿ ಕೆ.ಪಿ. ಫ್ಯಾಬಿಯನ್

ಪ್ರಸ್ತುತ ನಡೆಯುತ್ತಿರುವ ಪಶ್ಚಿಮ ಏಷ್ಯಾ ಸಂಘರ್ಷದ ಬಗ್ಗೆ ಮಾತನಾಡಿದ ಭಾರತದ ಮಾಜಿ ರಾಯಭಾರಿ ಕೆ.ಪಿ. ಫ್ಯಾಬಿಯನ್, "ಇರಾನಿಯನ್ನರು ಸ್ಮಾರ್ಟ್ ಚೆಸ್ ಆಟವನ್ನು ಆಡುತ್ತಿದ್ದಾರೆ. ಆದರೆ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗಳು...

‘ನಾನು ಸಂಸತ್ತಿಗೆ ಹೋಗುವುದು ಗದ್ದಲ ಸೃಷ್ಟಿಸಲು ಅಲ್ಲ’ : ಎಎಪಿ ಆರೋಪಗಳನ್ನು ತಳ್ಳಿ ಹಾಕಿದ ರಾಘವ್ ಚಡ್ಡಾ

ತನ್ನ ವಿರುದ್ದ ಆಮ್‌ ಆದ್ಮಿ ಪಕ್ಷ (ಎಎಪಿ) ಮಾಡಿರುವ ಎಲ್ಲಾ ಆರೋಪಗಳನ್ನು ರಾಘವ್ ಚಡ್ಡಾ ಶನಿವಾರ (ಏ.4) ಅಲ್ಲಗಳೆದಿದ್ದು, "ಅವೆಲ್ಲವೂ ಸುಳ್ಳು ಮತ್ತು ಸಂಘಟಿತ ಅಭಿಯಾನದ ಭಾಗ" ಎಂದಿದ್ದಾರೆ. "ಸಂಸತ್ತಿನಲ್ಲಿ ನನ್ನ ಉದ್ದೇಶ...

ಎಡರಂಗದಲ್ಲಿ ಎಡಪಂಥೀಯರೇ ಇಲ್ಲ; ದ್ವೇಷ ಹರಡುವ ಜನರೊಂದಿಗೆ ಪಿಣರಾಯಿ ಪಾಲುದಾರಿಕೆ ಹೊಂದಿದ್ದಾರೆ: ರಾಹುಲ್ ಗಾಂಧಿ

ಕೇರಳ ವಿಧಾನಸಭಾ ಚುನಾವಣೆ ಪ್ರಚಾರವು ಅಂತಿಮ ಹಂತಕ್ಕೆ ತಲುಪುತ್ತಿದ್ದಂತೆ ತೀಕ್ಷ್ಣವಾದ ರಾಜಕೀಯ ದಾಳಿಯನ್ನು ಆರಂಭಿಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, "ಸಿಪಿಐ-ಎಂ ನೇತೃತ್ವದ ಎಡಪಕ್ಷವು ತನ್ನ ಸೈದ್ಧಾಂತಿಕ ತಿರುಳನ್ನು ಕಳೆದುಕೊಳ್ಳುತ್ತಿದೆ" ಎಂದು ಆರೋಪಿಸಿದ್ದಾರೆ. "ಎಲ್‌ಡಿಎಫ್...

ಬಿಜೆಪಿ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಅಂದಿದ್ದೆ : ಅಣ್ಣಾಮಲೈ

"ವಿಧಾನಸಭಾ ಚುನಾವಣೆಗೆ ಬಿಜೆಪಿ ನನಗೆ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಎಂದು ಮುಂಚಿತವಾಗಿ ಹೈಕಮಾಂಡ್‌ಗೆ ತಿಳಿಸಿದ್ದೆ" ಎಂದು ತಮಿಳುನಾಡು ಬಿಜೆಪಿಯ ಮಾಜಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಹೇಳಿದ್ದಾರೆ. ಚೆನ್ನೈ ವಿಮಾನ ನಿಲ್ದಾಣದಲ್ಲಿ ಶನಿವಾರ...

ಸುರಕ್ಷಿತವಾಗಿ ಹಾರ್ಮುಜ್ ದಾಟಿದ 7ನೇ ಎಲ್‌ಪಿಜಿ ಹಡಗು; ಸರದಿಯಲ್ಲಿ ಕಾಯುತ್ತಿವೆ ಭಾರತದ 17 ಟ್ಯಾಂಕರ್‌ಗಳು

ಭಾರತದ ಧ್ವಜ ಹೊಂದಿದ್ದ ಮತ್ತೊಂದು ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಟ್ಯಾಂಕರ್, ಗ್ರೀನ್ ಸಾನ್ವಿ ಹೆಸರಿನ ಹಡಗು ಹಾರ್ಮುಜ್ ಜಲಸಂಧಿಯ ಪೂರ್ವಕ್ಕೆ ಯಶಸ್ವಿಯಾಗಿ ತಲುಪಿದೆ. ಹಡಗು ಟ್ರ್ಯಾಕಿಂಗ್ ದತ್ತಾಂಶದ ಪ್ರಕಾರ, ನಡೆಯುತ್ತಿರುವ ಪಶ್ಚಿಮ...

ಸಿಬಿಎಸ್‌ಇ ಹಿಂದಿ ಹೇರಿಕೆಯು ತ್ರಿಭಾಷಾ ಸೂತ್ರ ಜಾರಿಯ ‘ರಹಸ್ಯ ಕಾರ್ಯವಿಧಾನ’: ಸ್ಟಾಲಿನ್ ಆರೋಪ

ಸಿಬಿಎಸ್‌ಇ ಇತ್ತೀಚೆಗೆ ಅನಾವರಣಗೊಳಿಸಿದ ಪಠ್ಯಕ್ರಮ ಚೌಕಟ್ಟಿನ ಕುರಿತು ಮಾತನಾಡಿದ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್, "ಮೂರು ಭಾಷಾ ಸೂತ್ರ ಎಂದು ಕರೆಯಲ್ಪಡುವುದು ವಾಸ್ತವದಲ್ಲಿ ಹಿಂದಿ ಮಾತನಾಡದ ಪ್ರದೇಶಗಳಿಗೆ ಹಿಂದಿ ವಿಸ್ತರಿಸುವ ರಹಸ್ಯ ಕಾರ್ಯವಿಧಾನವಾಗಿದೆ"...

‘ತಿಂದ ಮನೆಗೆ ಕನ್ನ ಹಾಕುವುದು ತರವಲ್ಲ, ನಿಮ್ಮ ಅಧಿಕ ಪ್ರಸಂಗ ಕರ್ನಾಟಕದ ಜನತೆ ಒಪ್ಪುವುದಿಲ್ಲ’ : ರಾಜ್ಯಪಾಲರ ವಿರುದ್ಧ ಕರವೇ ಕಿಡಿ

ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ತೃತೀಯ ಭಾಷೆಗೆ ಗ್ರೇಡಿಂಗ್ ನೀಡುವ ಸರ್ಕಾರದ ನಿರ್ಧಾರವನ್ನು ಮರುಪರಿಶೀಲಿಸುವಂತೆ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ರಾಜ್ಯಾಧ್ಯಕ್ಷ...

‘ತಪ್ಪಾಗಿದೆ’ : ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್‌ ವಿಧೇಯಕದ ಕುರಿತ ಟೀಕೆಗಳನ್ನು ಕೈಬಿಟ್ಟ ರಾಜಸ್ಥಾನ ಹೈಕೋರ್ಟ್

ಟ್ರಾನ್ಸ್‌ಜೆಂಡರ್ ಕಾಯ್ದೆ, 2019ರಲ್ಲಿ ಬದಲಾವಣೆಗಳನ್ನು ತರಲಿರುವ ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ವಿಧೇಯ, 2026ರ ಕುರಿತು ಈ ಹಿಂದೆ ಮಾಡಿದ್ದ ವಿಮರ್ಶಾತ್ಮಕ ಟಿಪ್ಪಣಿಗಳನ್ನು ರಾಜಸ್ಥಾನ ಹೈಕೋರ್ಟ್ ತೆಗೆದುಹಾಕಿದೆ ಎಂದು...

ಯುಸಿಸಿ ಜಾರಿ ನಂತರ ‘ಜನಸಂಖ್ಯಾ ನಿಯಂತ್ರಣ’ ಕಾನೂನಿಗೆ ಮುಂದಾದ ಉತ್ತರಾಖಂಡ ಬಿಜೆಪಿ ಸರ್ಕಾರ

ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತಂದ ನಂತರ, ಉತ್ತರಾಖಂಡ ಸರ್ಕಾರ ಈಗ ಜನಸಂಖ್ಯಾ ನಿಯಂತ್ರಣ ಕಾನೂನನ್ನು ತರುವ ಬಗ್ಗೆ ಯೋಚಿಸುತ್ತಿದೆ ಎಂದು ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಶುಕ್ರವಾರ ಸೂಚಿಸಿದ್ದಾರೆ. ಪ್ರಸ್ತಾವಿತ ಕ್ರಮದ...