Homeಫ್ಯಾಕ್ಟ್‌ಚೆಕ್FACT CHECK : ಬುಲ್ಡೋಝರ್‌ನಿಂದ ಟೋಲ್ ಪ್ಲಾಝಾ ಧ್ವಂಸಗೈದ ವ್ಯಕ್ತಿ ಮುಸ್ಲಿಂ ಎಂಬುವುದು ಸುಳ್ಳು

FACT CHECK : ಬುಲ್ಡೋಝರ್‌ನಿಂದ ಟೋಲ್ ಪ್ಲಾಝಾ ಧ್ವಂಸಗೈದ ವ್ಯಕ್ತಿ ಮುಸ್ಲಿಂ ಎಂಬುವುದು ಸುಳ್ಳು

- Advertisement -
- Advertisement -

ಉತ್ತರ ಪ್ರದೇಶದ ದೆಹಲಿ-ಲಕ್ನೋ ಹೆದ್ದಾರಿಯಲ್ಲಿ ಟೋಲ್ ಕಟ್ಟುವಂತೆ ಕೇಳಿದ್ದಕ್ಕೆ ಟೋಲ್ ಪ್ಲಾಝಾವನ್ನು ಜೆಸಿಬಿ ಮೂಲಕ ಧ್ವಂಸಗೈದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಈ ಕುರಿತ ವಿಡಿಯೋ, ಪೋಟೋಗಳನ್ನು ಹಂಚಿಕೊಂಡಿರುವ ಅನೇಕ ಜನರು ಬಂಧಿತ ಆರೋಪಿ ಮುಸ್ಲಿಂ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್‌ಗಳನ್ನು ಹಾಕಿದ್ದಾರೆ.

ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಘಟನೆಯ ವಿಡಿಯೋ ಮತ್ತು ಆರೋಪಿಯನ್ನು ಪೊಲೀಸರು ಬಂಧಿಸಿರುವ ಫೋಟೋವನ್ನು ಹಂಚಿಕೊಂಡಿದ್ದ ಟೈಮ್ಸ್ ನೌ ವಾಹಿನಿಯ ನಿರೂಪಕ ಪ್ರಾಣೇಶ್ ಕುಮಾರ್ ರಾಯ್ ” ಮೊಹಮ್ಮದ್ ಸಾಜಿದ್ ಎಂಬ ಬುಲ್ಡೋಝರ್ ಚಾಲಕನೊಂದಿಗೆ ಟೋಲ್ ಕಟ್ಟುವಂತೆ ಕೇಳಿದ್ದಕ್ಕೆ, ಬುಲ್ಡೋಝರ್ ಮೂಲಕ ಟೋಲ್‌ ಪ್ಲಾಝಾವನ್ನು ಧ್ವಂಸಗೈದಿದ್ದಾನೆ. ಯುಪಿ ಪೊಲೀಸರು ಈತನನ್ನು ಜೈಲಿಗಟ್ಟಿ” ಎಂದು ಬರೆದುಕೊಂಡಿದ್ದರು. ಬಳಿಕ ಅವರು ಪೋಸ್ಟ್ ಡಿಲೀಟ್ ಮಾಡಿದ್ದಾರೆ.

ಎಸ್‌ಕೆ ಚಕ್ರವರ್ತಿ ಎಂಬ ಮತ್ತೋರ್ವ ಎಕ್ಸ್ ಬಳಕೆದಾರ ಕೂಡ ವಿಡಿಯೋ ಹಂಚಿಕೊಂಡು ಮೊಹಮ್ಮದ್ ಸಾಜಿದ್‌ನ ದಾದಾಗಿರಿ. ಎಂ.ಡಿ ಸಾಜಿದ್ ಅಲೀ ಎಂಬಾತ ಟೋಲ್‌ ಕಟ್ಟುವಂತೆ ಕೇಳಿದ್ದಕ್ಕೆ ಟೋಲ್‌ ಪ್ಲಾಝಾ ಮೇಲೆ ಬುಲ್ಡೋಝರ್ ಹತ್ತಿಸಿದ್ದಾನೆ. ಗಂಟೆಯೊಳಗೆ ಆತನ ಬುಲ್ಡೋಝರ್ ವಶಕ್ಕೆ ಪಡೆಯಲಾಗಿದೆ. ಸಾಜಿದ್ ಅಲೀ ವಿರುದ್ದ ಐಪಿಸಿ ಸೆಕ್ಷನ್ 307ರ ಅಡಿ ಪ್ರಕರಣ ದಾಖಲಿಸಲಾಗಿದೆ” ಎಂದು ಬರೆದುಕೊಂಡಿದ್ದಾರೆ.

ಇನ್ನೂ ಅನೇಕ ಎಕ್ಸ್‌ ಬಳಕೆದಾರರು ಘಟನೆಯ ವಿಡಿಯೋ ಹಂಚಿಕೊಂಡು ಉತ್ತರ ಪ್ರದೇಶದ ಯೋಗಿ ಆದಿತ್ಯನಾಥ್ ನೇತೃತ್ವದ ಸರ್ಕಾರದ ಬುಲ್ಡೋಝರ್ ಕಾರ್ಯಾಚರಣೆಯನ್ನು ನೆನಪಿಸಿದ್ದಾರೆ. ಆರೋಪಿಗಳ ಮನೆಗಳನ್ನು ಬುಲ್ಡೋಝರ್ ಬಳಸಿ ಧ್ವಂಸಗೈಯ್ಯುವ ಸರ್ಕಾರ, ಟೋಲ್‌ ಪ್ಲಾಝಾ ಮೇಲೆ ಬುಲ್ಡೋಝರ್ ಹತ್ತಿಸಿದ ವ್ಯಕ್ತಿಯ ಮನೆಯನ್ನೂ ಕೂಡ ಬುಲ್ಡೋಝರ್‌ನಿಂದ ಧ್ವಂಸಗೈಯ್ಯಲಿದೆ ಎಂದು ಪರೋಕ್ಷವಾಗಿ ಸಂತಸ ವ್ಯಕ್ತಪಡಿಸಿದ್ದಾರೆ. ಆರೋಪಿ ಮುಸ್ಲಿಂ ಎಂದು ಸುದ್ದಿ ಹಬ್ಬಿದ್ದು ಇವರ ಖುಷಿಗೆ ಕಾರಣವಾಗಿದೆ.

ಫ್ಯಾಕ್ಟ್‌ ಚೆಕ್ : ವರದಿಗಳ ಪ್ರಕಾರ, ಟೋಲ್‌ ಪ್ಲಾಝಾ ಮೇಲೆ ಬುಲ್ಡೋಝರ್ ಹತ್ತಿಸಿದ ವ್ಯಕ್ತಿಯ ಹೆಸರು ಧೀರಜ್ ಎಂದು ತಿಳಿದು ಬಂದಿದೆ. ಆದ್ದರಿಂದ ಆತ ಮುಸ್ಲಿಂ ಅಲ್ಲ ಎಂಬುವುದು ಖಚಿತ.

ಘಟನೆಯ ಕುರಿತು ಜೂನ್‌ 11ರಂದು ಡೆಕ್ಕನ್ ಹೆರಾಲ್ಡ್ ವೆಬ್‌ಸೈಟ್‌ ಪ್ರಕಟಿಸಿರುವ ವರದಿಯಲ್ಲಿ ಆರೋಪಿಯ ಹೆಸರು ಧೀರಜ್ ಎಂದು ಉಲ್ಲೇಖಿಸಿದೆ.

ಇಂದು (ಜೂನ್ 12) ಎಕ್ಸ್ ಮೂಲಕ ಬಗ್ಗೆ ಮಾಹಿತಿ ನೀಡಿರುವ ಉತ್ತರ ಪ್ರದೇಶದ ಹಾಪುರ್‌ ಎಸ್‌ಪಿ ಅಭಿಶೇಕ್ ವರ್ಮಾ, “ನಿನ್ನೆ ನಡೆದ ಪಿಲಾಖುವಾ ಟೋಲ್ ಪ್ಲಾಝಾ ಘಟನೆಯ ಆರೋಪಿ ಧೀರಜ್‌ನನ್ನು ಬಂಧಿಸಲಾಗಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ತನಿಖೆ ಚುರುಕುಗೊಳಿಸಲಾಗಿದೆ. ಆರೋಪಿ ಅರ್ಹ ಶಿಕ್ಷೆಯನ್ನು ಪಡೆಯಲಿದ್ದಾನೆ” ಎಂದು ತಿಳಿಸಿದ್ದಾರೆ.
ಎಸ್‌ಪಿ ಅಭಿಶೇಕ್ ವರ್ಮಾ ಪ್ರಕಾರ, ಫ್ಯಾಕ್ಟರಿಯೊಂದರ ಕೆಲಸಕ್ಕಾಗಿ ಆರೋಪಿ ಧೀರಜ್ ತನ್ನ ಬುಲ್ಡೋಝರ್ ತೆಗೆದುಕೊಂಡು ಹೋಗಿದ್ದ. ಆತ ಪರವಾನಿಗೆ ಹೊಂದಿರಲಿಲ್ಲ. ಫ್ಯಾಕ್ಟರಿ ಮಾಲೀಕನ ಹೆಸರು ಸಾಜಿದ್. ಬುಲ್ಡೋಝರ್ ಚಾಲಕನ ಹೆಸರು ಧೀರಜ್. ಟೋಲ್ ಪ್ಲಾಝಾ ಧ್ವಂಸಗೈದ ಆರೋಪಿಯ ಹೆಸರು ಧೀರಜ್ ಎಂದಾಗಿದೆ.

ಜೂನ್ 11, 2024ರ ಮಂಗಳವಾರ ಬೆಳಿಗ್ಗೆ ಉತ್ತರ ಪ್ರದೇಶದ ಹಾಪುರ್ ಸಮೀಪದ ಪಿಲಾಖುವಾದ ಚರಾಸಿ ಟೋಲ್ ಪ್ಲಾಝಾದ ಮೇಲೆ ಬುಲ್ಡೋಝರ್‌ನಿಂದ ದಾಳಿ ಮಾಡಲಾಗಿದೆ. ಟೋಲ್ ಸಿಬ್ಬಂದಿ ಹಣ ಕೇಳಿದ್ದಕ್ಕೆ ಕುಡಿದ ಮತ್ತಿನಲ್ಲಿದ್ದ ಬುಲ್ಡೋಝರ್ ಚಾಲಕ ಧೀರಜ್ ದಾಳಿ ನಡೆಸಿದ್ದಾನೆ ಎಂದು ತಿಳಿದು ಬಂದಿದೆ.

ಗಮನಿಸಿ : ಅಪರಾಧಿಯನ್ನು ಧರ್ಮದ ಆಧಾರದಲ್ಲಿ ಗುರುತಿಸುವುದು ತಪ್ಪು. ಬುಲ್ಡೋಝರ್ ದಾಳಿಯ ಘಟನೆಗೆ ಕೋಮು ಬಣ್ಣ ಬಳಿದು ಒಂದು ಸಮುದಾಯವನ್ನು ಗುರಿಯಾಗಿಸುತ್ತಿರುವ ಹಿನ್ನೆಲೆ, ನಾವು ಈ ಸುದ್ದಿಯಲ್ಲಿ ಸತ್ಯಾಸತ್ಯತೆ ತಿಳಿಸುವ ಪ್ರಯತ್ನ ಮಾಡಿದ್ದೇವೆ.

ಇದನ್ನೂ ಓದಿ : FACT CHECK : ಕಾಂಗ್ರೆಸ್‌ನ ಗ್ಯಾರಂಟಿ ಹಣಕ್ಕಾಗಿ ಮಹಿಳೆಯರು ಬ್ಯಾಂಕ್ ಮುಂದೆ ಸಾಲುಗಟ್ಟಿ ನಿಂತಿದ್ದಾರೆ ಎಂದು ಹಳೆಯ ವಿಡಿಯೋ ಹಂಚಿಕೊಳ್ಳಲಾಗ್ತಿದೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಪ್ಪಾಗಿ ಸುದ್ದಿ ಪ್ರಕಟ : ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರಲ್ಲಿ ಕ್ಷಮೆಯಾಚಿಸಿದ PTI

ತಮ್ಮ ಹೇಳಿಕೆಯನ್ನು ತಪ್ಪಾಗಿ ಪ್ರಸಾರ ಮಾಡಿದ್ದ ಪ್ರೆಸ್ ಟ್ರಸ್ಟ್ ಆಫ್ ಇಂಡಿಯಾ (PTI) ಅಧಿಕೃತವಾಗಿ ಕ್ಷಮೆಯಾಚಿಸಿದರೂ, ಅದರಿಂದ ಈಗಾಗಲೇ ಉಂಟಾಗಿರುವ ಹಾನಿ ಸರಿಪಡಿಸಲು ಸಾಧ್ಯವಿಲ್ಲ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಆ....

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...