Homeಫ್ಯಾಕ್ಟ್‌ಚೆಕ್FACT CHECK : ಕೋಲ್ಕತ್ತಾದಲ್ಲಿ ಪ್ರತಿಭಟನೆಯಿಂದ ಹಿಂದಿರುಗುತ್ತಿದ್ದ ಯುವತಿಯನ್ನು ಅತ್ಯಾಚಾರವೆಸಗಿ ಕೊಲೆ ಮಾಡಲಾಗಿದೆ ಎನ್ನುವುದು ಕಟ್ಟುಕಥೆ

FACT CHECK : ಕೋಲ್ಕತ್ತಾದಲ್ಲಿ ಪ್ರತಿಭಟನೆಯಿಂದ ಹಿಂದಿರುಗುತ್ತಿದ್ದ ಯುವತಿಯನ್ನು ಅತ್ಯಾಚಾರವೆಸಗಿ ಕೊಲೆ ಮಾಡಲಾಗಿದೆ ಎನ್ನುವುದು ಕಟ್ಟುಕಥೆ

- Advertisement -
- Advertisement -

ಕೋಲ್ಕತ್ತಾದ ಆರ್‌ಜಿ ಕರ್ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ನಡೆದ ವೈದ್ಯೆಯ ಅತ್ಯಾಚಾರ, ಕೊಲೆ ಖಂಡಿಸಿ ಆಗಸ್ಟ್ 14-15 ರ ರಾತ್ರಿ ಕೋಲ್ಕತ್ತಾ ನಗರದಲ್ಲಿ ಬೃಹತ್ ಪ್ರತಿಭಟನೆ ನಡೆದಿತ್ತು. ಈ ಪ್ರತಿಭಟನೆಯಿಂದ ಮನೆಗೆ ಹಿಂದಿರುಗುವಾಗ ಪಶ್ಚಿಮ ಬಂಗಾಳದ ಬುರ್ದ್ವಾನ್ ವಿಶ್ವವಿದ್ಯಾಲಯದ ವಿದ್ಯಾರ್ಥಿನಿ ಅಂಕಿತಾ ಬೌರಿ ಎಂಬಾಕೆಯ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಲಾಗಿದೆ ಎಂಬ ಸುದ್ದಿ ಕೆಲ ದಿನಗಳ ಹಿಂದೆ ಸಾಮಾಜಿಕ ಜಾಲತಾಣಗಳಲ್ಲಿ ಹಬ್ಬಿತ್ತು.

ರಿದಿಮಾ (@ridhima_z) ಎಂಬ ಎಕ್ಸ್ ಬಳಕೆದಾರರು ಆಗಸ್ಟ್ 16ರಂದು ಹಾಕಿದ ಪೋಸ್ಟ್‌ನಲ್ಲಿ “ಆರ್‌ಜಿ ಕರ್ ಆಸ್ಪತ್ರೆಯಲ್ಲಿ ನಡೆದ ವೈದ್ಯೆಯ ಅತ್ಯಾಚಾರ, ಕೊಲೆ ಖಂಡಿಸಿ ನಡೆದ ಪ್ರತಿಭಟನೆಯಿಂದ ಹಿಂದಿರುಗುತ್ತಿದ್ದ ಬುರ್ದ್ವಾನ್ ವಿಶ್ವವಿದ್ಯಾಲಯದ ವಿದ್ಯಾರ್ಥಿನಿ ಅಂಕಿತಾ ಬೌರಿ ಎಂಬಾಕೆಯನ್ನು ಅತ್ಯಾಚಾರಗೈದು ಭೀಕರವಾಗಿ ಕೊಲೆ ಮಾಡಲಾಗಿದೆ. ಬಳಿಕ ಯಾರೂ ಗುರುತು ಹಿಡಿಯಬಾರದು ಎಂದು ಆಕೆಯ ಮುಖದ ಮೇಲೆ ಕಲ್ಲು ಎತ್ತಿಹಾಕಿ ವಿರೂಪಗೊಳಿಸಲಾಗಿದೆ” ಎಂದು ಬರೆದುಕೊಂಡಿದ್ದರು.

ಅಯಾನ್ (@syedayan24) ಎಂಬ ಮತ್ತೊಬ್ಬರು ಎಕ್ಸ್ ಬಳಕೆದಾರರು ಆಗಸ್ಟ್ 16ರಂದು ಹಾಕಿದ ಪೋಸ್ಟ್‌ನಲ್ಲಿ ಮೇಲೆ ನಾವು ಉಲ್ಲೇಖಿಸಿದ ಅದೇ ವಿಷಯವನ್ನು ಬರೆದುಕೊಂಡಿದ್ದರು.

ಅದೇ ರೀತಿ ಒಂದೇ ವಿಷಯವನ್ನು ಅನೇಕ ಎಕ್ಸ್‌ ಬಳಕೆದಾರರು ಆಗಸ್ಟ್ 16ರಂದು ಪೋಸ್ಟ್ ಮಾಡಿದ್ದರು. ಎಕ್ಸ್‌ ಮಾತ್ರವಲ್ಲದೆ ಫೇಸ್‌ಬುಕ್, ವಾಟ್ಸಾಪ್‌ಗಳಲ್ಲೂ ಈ ವಿಷಯ ಹರಿದಾಡಿತ್ತು.

ಫ್ಯಾಕ್ಟ್‌ಚೆಕ್ : ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ ಸುದ್ದಿಯ ಕುರಿತು ನಾವು ಸತ್ಯಾಸತ್ಯತೆ ಪರಿಶೀಲಿಸಿದ್ದೇವೆ. ಈ ವೇಳೆ ದಿ ಸ್ಟೇಟಸ್‌ಮ್ಯಾನ್ ಸುದ್ದಿ ವೆಬ್‌ಸೈಟ್‌ ಆಗಸ್ಟ್ 16ರಂದು ಪ್ರಕಟಿಸಿದ ವರದಿಯೊಂದು ಲಭ್ಯವಾಗಿದೆ. ಆ ವರದಿಯಲ್ಲಿ “ಬುರ್ದ್ವಾನ್ ವಿಶ್ವವಿದ್ಯಾನಿಲಯದಲ್ಲಿ ತತ್ವಶಾಸ್ತ್ರ ಸ್ನಾತಕೋತ್ತರ ವಿದ್ಯಾರ್ಥಿನಿಯಾಗಿದ್ದ ಪ್ರಿಯಾಂಕಾ ಹನ್ಸ್ದಾ ಎಂಬ 25 ವರ್ಷದ ಬುಡಕಟ್ಟು ಯುವತಿಯನ್ನು ಬುರ್ದ್ವಾನ್‌ನ ನಂದೂರ್ ಗ್ರಾಮದಲ್ಲಿ ಕೊಲೆ ಮಾಡಲಾಗಿದೆ. ಆಗಸ್ಟ್ 14 ಮತ್ತು 15ರ ಮಧ್ಯರಾತ್ರಿ ಮನೆಯಿಂದ ಸುಮಾರು 50 ಮೀಟರ್ ದೂರದಲ್ಲಿರುವ ಕೃಷಿ ಭೂಮಿಯಲ್ಲಿ ಆಕೆ ಕುತ್ತಿಗೆ ಸೀಳಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ” ಎಂದು ಹೇಳಲಾಗಿದೆ.

“ಸ್ವಾತಂತ್ರ್ಯ ದಿನದಂದು ಬೆಳಿಗ್ಗೆ ಈ ಕುರಿತು ಸುದ್ದಿ ಹಬ್ಬಿದಾಗ ಯುವತಿಯ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಲಾಗಿದೆ ಎಂದು ಆರಂಭದಲ್ಲಿ ಶಂಕಿಸಲಾಗಿತ್ತು. ಆದರೆ, ಮೃತದೇಹದ ಮರಣೋತ್ತರ ಪರೀಕ್ಷೆಯಲ್ಲಿ ಲೈಂಗಿಕ ದೌರ್ಜನ್ಯದ ಯಾವುದೇ ಪುರಾವೆಗಳು ಕಂಡುಬಂದಿಲ್ಲ ಎಂದು ಪೂರ್ವ ಬುರ್ದ್ವಾನ್‌ನ ಎಸ್‌ಪಿ ಅಮನ್‌ದೀಪ್ ಸಿಂಗ್ ಸ್ಪಷ್ಟಪಡಿಸಿದ್ದಾರೆ” ಎಂದು ಸ್ಟೇಟಸ್‌ಮ್ಯಾನ್ ವರದಿ ಉಲ್ಲೇಖಿಸಿದೆ.

ದಿ ಟೆಲಿಗ್ರಾಫ್‌ನ ಮತ್ತೊಂದು ವರದಿಯೂ ನಮಗೆ ಲಭ್ಯವಾಗಿದ್ದು ಅದರಲ್ಲೂ “ಪೂರ್ವ ಬುರ್ದ್ವಾನ್ ಪೊಲೀಸರು ಸುದ್ದಿಗೋಷ್ಠಿ ನಡೆಸಿ 22 ವರ್ಷದ ಬುಡಕಟ್ಟು ಯುವತಿಯ ಶವ ಕತ್ತು ಸೀಳಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಆಕೆಯ ಮೇಲೆ ಅತ್ಯಾಚಾರ ನಡೆದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ” ಎಂದು ಹೇಳಲಾಗಿದೆ.

ಸಾಮಾಜಿಕ ಜಾಲತಾಣಗಳಲ್ಲಿ ಹೇಳಿದಂತೆ ಅಂಕಿತಾ ಬೌರಿ ಎಂಬ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರವೆಸಗಿ, ಕೊಲೆ ಮಾಡಿರುವ ಯಾವುದೇ ವರದಿಗಳನ್ನು ನಮಗೆ ಕಂಡು ಬಂದಿಲ್ಲ.

ಆಗಸ್ಟ್ 17ರಂದು ಎಕ್ಸ್‌ನಲ್ಲಿ ಪೋಸ್ಟ್‌ವೊಂದನ್ನು ಹಾಕಿದ್ದ ಪುರ್ಬಾ ಬರ್ಧಮಾನ್ (ಪೂರ್ವ ಬುರ್ದ್ವಾನ್) ಪೊಲೀಸರು, ಸಾಮಾಜಿಕ ಜಾಲತಾಣದ ಸುದ್ದಿ ‘ವದಂತಿ’ ಎಂದು ತಿಳಿಸಿದ್ದು, ಅಂಕಿತಾ ಬೌರಿ ಎಂಬ ಯುವತಿಯ ಮೇಲೆ ಅತ್ಯಾಚಾರವೆಸಗಿ, ಕೊಲೆ ಮಾಡಿರುವ ಯಾವುದೇ ಘಟನೆ ಬುರ್ದ್ವಾನ್‌ನಲ್ಲಿ ನಡೆದಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದರು. ವದಂತಿಗಳನ್ನು ಹರಡದಂತೆ ಸಾಮಾಜಿಕ ಮಾಧ್ಯಮ ಬಳಕೆದಾರರಿಗೆ ಎಚ್ಚರಿಕೆ ನೀಡಿದ್ದರು.

ಪೂರ್ವ ಬುರ್ದ್ವಾನ್ ಜಿಲ್ಲಾ ಪೊಲೀಸ್‌ನ ಅಧಿಕೃತ ಫೇಸ್‌ಬುಕ್ ಪೇಜ್‌ನಲ್ಲೂ ಸಾಮಾಜಿಕ ಜಾಲತಾಣದ ಸುದ್ದಿಯ ಕುರಿತು ಬಂಗಾಳಿ ಭಾಷೆಯಲ್ಲಿ ಸ್ಪಷ್ಟನೆ ಕೊಡಲಾಗಿತ್ತು. ಅದರಲ್ಲೂ” ಆರ್‌ಜಿ ಕರ್ ಆಸ್ಪತ್ರೆಯಲ್ಲಿ ನಡೆದಿರುವ ಘಟನೆ ಖಂಡಿಸಿ ನಡೆದ ಪ್ರತಿಭಟನೆಯಿಂದ ಹಿಂದಿರುಗುತ್ತಿದ್ದ ಅಂಕಿತಾ ಬೌರಿ ಎಂಬ ಯುವತಿಯನ್ನು ಅತ್ಯಾವಾರವೆಸಗಿ ಕೊಲೆ ಮಾಡಿರುವ ಯಾವುದೇ ಘಟನೆ ಬುರ್ದ್ವಾನ್‌ನಲ್ಲಿ ನಡೆದಿಲ್ಲ. ಇಂತಹ ವದಂತಿಗಳನ್ನು ಹಬ್ಬಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ಪುರ್ಬಾ ಬುರ್ದ್ವಾನ್ ಪೊಲೀಸರು ಮಹಿಳೆಯರ ಸುರಕ್ಷತೆ ಮತ್ತು ಭದ್ರತೆಗೆ ಬದ್ಧರಾಗಿದ್ದಾರೆ” ಎಂದು ಹೇಳಲಾಗಿತ್ತು.

ಒಟ್ಟಿನಲ್ಲಿ, ಆಗಸ್ಟ್ 15ರ ರಾತ್ರಿ ಪ್ರತಿಭಟನಾ ಸ್ಥಳದಿಂದ ಹಿಂದಿರುಗುತ್ತಿದ್ದ ಅಂಕಿತಾ ಬೌರಿ ಎಂಬ ವಿದ್ಯಾರ್ಥಿನಿಯನ್ನು ಕ್ರೂರವಾಗಿ ಅತ್ಯಾಚಾರವೆಸಗಿ ಕೊಲೆ ಮಾಡಲಾಗಿದೆ ಎಂದು ಆರೋಪಿಸಿದ ವೈರಲ್ ಸಾಮಾಜಿಕ ಮಾಧ್ಯಮಗಳ ಪೋಸ್ಟ್‌ಗಳು ಕಟ್ಟುಕಥೆಯಾಗಿದೆ.

ಆಗಸ್ಟ್ 15 ರಂದು ಬೆಳಗ್ಗೆ ಬುರ್ದ್ವಾನ್ ನಂದೂರ್‌ನ ಕೃಷಿ ಭೂಮಿಯಲ್ಲಿ ಪ್ರಿಯಾಂಕಾ ಹನ್ಸ್ದಾ ಎಂಬ ಆದಿವಾಸಿ ಯುವತಿಯ ಶವ ಪತ್ತೆಯಾಗಿತ್ತು. ಆದರೆ, ಆಕೆಯ ಮೇಲೆ ಅತ್ಯಾಚಾರ ನಡೆದಿಲ್ಲ ಎಂದು ಪೊಲೀಸರು ಖಚಿತಪಡಿಸಿದ್ದಾರೆ. ಅಂಕಿತಾ ಬೌರಿ ಎಂಬ ಯುವತಿಯ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿರುವ ಯಾವುದೇ ಘಟನೆ ನಡೆದಿಲ್ಲ ಎಂದು ಪೊಲೀಸರೇ ಸ್ಪಷ್ಟಪಡಿಸಿದ್ದಾರೆ.

ಇದನ್ನೂ ಓದಿ : FACT CHECK : ರಾತ್ರಿ ಪಾಳಿಯಲ್ಲಿ ಕೆಲಸ ಮಾಡುವ ಮಹಿಳೆಯರನ್ನು ಪೊಲೀಸರೇ ಮನೆಗೆ ಬಿಡ್ತಾರೆ ಎನ್ನುವುದು ಸುಳ್ಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೆಂಗಳೂರಿನಲ್ಲಿ ತಿರಂಗ ಯಾತ್ರೆಗೆ ಪೊಲೀಸರ ಷರತ್ತುಬದ್ಧ ಅನುಮತಿ: ಪ್ರತಿಭಟನೆ, ಘೋಷಣೆಗಳಿಗೆ ನಿರ್ಬಂಧ

ಬೆಂಗಳೂರು: ದೆಹಲಿಯಲ್ಲಿ ಸಿಜೆಪಿಯ ‘ಲೆಹ್ರಾ ದೋ ತಿರಂಗಾ’ ಮೆರವಣಿಗೆ ವಿಚಾರವಾಗಿ ರಾಜಕೀಯ ಸಂಘರ್ಷ ತೀವ್ರಗೊಂಡಿರುವ ಬೆನ್ನಲ್ಲೇ, ಬೆಂಗಳೂರಿನಲ್ಲಿ ಅಕ್ಟೋಬರ್ 16ರಂದು ಟೌನ್ ಹಾಲ್‌ನಿಂದ ಬನ್ನಪ್ಪ ಪಾರ್ಕ್‌ನಲ್ಲಿರುವ ಕ್ವಿಟ್ ಇಂಡಿಯಾ ಸ್ಮಾರಕದವರೆಗೆ ಹಮ್ಮಿಕೊಂಡಿರುವ ತಿರಂಗ...

ಸುಪ್ರೀಂ ವಿಚಾರಣೆಗೆ ಸಜ್ಜಾಗುತ್ತಿದ್ದಂತೆ ಸಿಜೆಪಿಯ ತಿರಂಗಾ ಮೆರವಣಿಗೆ ಆರಂಭ; ಪೊಲೀಸರ ನೋಟಿಸ್ ಧಿಕ್ಕರಿಸಿ ತೆರಳುತ್ತಿದ್ದ ಅಭಿಜೀತ್ ದೀಪ್ಕೆ ವಶಕ್ಕೆ

ನವದೆಹಲಿ: ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುವ ಹಕ್ಕಿನ ಕುರಿತ ಅರ್ಜಿಯ ವಿಚಾರಣೆಗೆ ಸುಪ್ರೀಂ ಕೋರ್ಟ್ ಸಜ್ಜಾಗುತ್ತಿದ್ದ ಬೆನ್ನಲ್ಲೇ, ದೆಹಲಿ ಪೊಲೀಸರ ಸೂಚನೆಯನ್ನು ಧಿಕ್ಕರಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ‘ಲೆಹ್ರಾ ದೋ ತಿರಂಗಾ’...

‘ದಿಮಾಗಿ ನಕ್ಸಲ್’, ‘ದೇಶದ್ರೋಹಿ’ ಎಂದು ಪಟ್ಟ ಕಟ್ಟುವುದು ಅಧಿಕಾರ ಕಳೆದುಕೊಳ್ಳುವ ಭೀತಿಯ ಸಂಕೇತ”: ಮೋದಿ-ಅಮಿತ್ ಶಾ ವಿರುದ್ಧ ಪವನ್ ಖೇರಾ ವಾಗ್ದಾಳಿ!

ನವದೆಹಲಿ: ಕೇಂದ್ರದ ಬಿಜೆಪಿ ಸರ್ಕಾರವು ತನ್ನ ನೀತಿಗಳು ಮತ್ತು ನಡೆಯನ್ನು ಪ್ರಶ್ನಿಸುವ ನಾಗರಿಕರಿಗೆ ‘ರಾಷ್ಟ್ರವಿರೋಧಿ’, ‘ಎಡಪಂಥೀಯ’ ಹಾಗೂ ‘ದಿಮಾಗಿ ನಕ್ಸಲ್’ ಎಂದು ಪಟ್ಟ ಕಟ್ಟುತ್ತಿರುವುದು ಅದರ ಅಧಿಕಾರ ಕಳೆದುಕೊಳ್ಳುವ ಭೀತಿಯನ್ನು ತೋರಿಸುತ್ತದೆ ಎಂದು...

ಸಿಜೆಪಿಯ ‘ಲೆಹ್ರಾ ದೋ ತಿರಂಗಾ’ ಮೆರವಣಿಗೆಗೆ ಹೆಚ್ಚಿದ ನಿರ್ಬಂಧ: 25 ಸಾವಿರಕ್ಕೂ ಹೆಚ್ಚು ಭದ್ರತಾ ಸಿಬ್ಬಂದಿ ನಿಯೋಜನೆ, ಸೆಂಟ್ರಲ್ ಪಾರ್ಕ್ ಬಂದ್

ನವದೆಹಲಿ: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಅಕ್ರಮಗಳು ನಡೆದಿವೆ ಎಂದು ಆರೋಪಿಸಿ, ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಒತ್ತಾಯಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)...

ಸಿಜೆಪಿಯ ತಿರಂಗಾ ಮೆರವಣಿಗೆ: ಸೆಂಟ್ರಲ್ ಪಾರ್ಕ್ ಮುಚ್ಚುವಿಕೆ ಪ್ರಶ್ನಿಸಿದ ಅರ್ಜಿಯ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ ನಕಾರ

ನವದೆಹಲಿ: ದೆಹಲಿಯ ಕನ್ನಾಟ್ ಪ್ಲೇಸ್‌ನ ಸೆಂಟ್ರಲ್ ಪಾರ್ಕ್ ಮುಚ್ಚುವ ನವದೆಹಲಿ ಮುನ್ಸಿಪಲ್ ಕೌನ್ಸಿಲ್ (ಎನ್‌ಡಿಎಂಸಿ) ಆದೇಶವನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ ಶುಕ್ರವಾರ ನಿರಾಕರಿಸಿದೆ. ಕಾಕ್ರೋಚ್ ಜನತಾ ಪಾರ್ಟಿ...

ದೆಹಲಿ ಬಿಟ್ಟು ರಿಲಯನ್ಸ್ ರಿಫೈನರಿ ಇರುವ ಜಾಮ್‌ನಗರಕ್ಕೆ ಅಮೆರಿಕ ವಿದೇಶಾಂಗ ಕಾರ್ಯದರ್ಶಿ ಭೇಟಿ: ಮೋದಿ ಸರ್ಕಾರದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ!

ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೋ ರುಬಿಯೋ ಅವರ ಮುಂಬರುವ ಭಾರತ ಭೇಟಿ ಹಾಗೂ ವಿದೇಶಾಂಗ ಸಚಿವಾಲಯದ ನಿರ್ಧಾರಗಳ ಕುರಿತು ವಿಪಕ್ಷ ನಾಯಕ ರಾಹುಲ್ ಗಾಂಧಿ ವಿಮರ್ಶಾತ್ಮಕವಾಗಿ ಪ್ರತಿಕ್ರಿಯಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರ...

ದೆಹಲಿ ಪ್ರತಿಭಟನೆ: ‘ತಿರಂಗ ಹಾರಿಸಿದ್ದಕ್ಕೆ ಜೈಲಿಗೆ ಹೋಗಲೂ ಸಿದ್ಧ’: ಮೋದಿ ಸರ್ಕಾರದ ವಿರುದ್ಧ ಅಭಿಜೀತ್ ದೀಪ್ಕೆ ತೀವ್ರ ವಾಗ್ದಾಳಿ

ನವದೆಹಲಿ: ರಾಷ್ಟ್ರಧ್ವಜ ಹಾರಿಸುವುದನ್ನೇ ಅಪರಾಧವೆಂದು ಪರಿಗಣಿಸುವ ಪರಿಸ್ಥಿತಿ ದೇಶದಲ್ಲಿ ನಿರ್ಮಾಣವಾಗಿದೆಯೇ ಎಂದು ಪ್ರಶ್ನಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ತಿರಂಗ ಹಾರಿಸಿದ್ದಕ್ಕಾಗಿ ಜೈಲಿಗೆ ಹೋಗಬೇಕಾದರೂ ಸಿದ್ಧ ಎಂದು ಘೋಷಿಸಿದ್ದಾರೆ....

“ಅಮೆರಿಕ-ಪಾಕಿಸ್ತಾನ್ ಯುದ್ಧವಾದರೆ ನಾವು ಪಾಕ್ ಪರ ನಿಲ್ಲುತ್ತೇವೆ”: ರಾಜಸ್ಥಾನ ಬಿಜೆಪಿ ಅಧ್ಯಕ್ಷರಿಂದ ವಿವಾದಾತ್ಮಕ ಹೇಳಿಕೆ!

"ಒಂದು ವೇಳೆ ಇಂದು ಅಮೆರಿಕ ಮತ್ತು ಪಾಕಿಸ್ತಾನದ ನಡುವೆ ಯುದ್ಧ ನಡೆದರೆ, ಪಾಕಿಸ್ತಾನ ನಮ್ಮ ನೆರೆಹೊರೆಯ ದೇಶವಾಗಿರುವುದರಿಂದ ನಾವು ಅದರ ಜೊತೆ ಇರುತ್ತೇವೆ" ಎಂದು ರಾಜಸ್ಥಾನ ಬಿಜೆಪಿ ಅಧ್ಯಕ್ಷ ಹಾಗೂ ರಾಜ್ಯಸಭಾ ಸಂಸದ...

ಗ್ಯಾನೇಶ್ ಕುಮಾರ್ ರಕ್ಷಣೆಗಾಗಿ ದೆಹಲಿಯನ್ನೇ ಭಾರತ-ಪಾಕ್ ಗಡಿಯನ್ನಾಗಿ ಪರಿವರ್ತಿಸಿದ ಮೋದಿ: ಅಭಿಜೀತ್ ದಿಪ್ಕೆ

ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯಲ್ಲಿ (ಎಸ್‌ಐಆರ್‌) ನಡೆದಿರುವ ಅಕ್ರಮಗಳನ್ನು ವಿರೋಧಿಸಿ, ಮುಖ್ಯ ಚುನಾವಣೆ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ನಡೆಯುತ್ತಿರುವ ಪ್ರತಿಭಟನೆಗಳ ಕುರಿತು ಚರ್ಚಿಸಲು ವಿದ್ಯಾರ್ಥಿ ಸಂಘಟನೆಗಳು,...

ಸಹಪಾಠಿಗಳ ಜಾತಿ, ಪ್ರವೇಶದ ವರ್ಗ, ರ‍್ಯಾಂಕ್ ಕೇಳಬೇಡಿ: ದರ್ಶನ್, ಸಾಹಿಲ್ ಸಾವುಗಳ ಬೆನ್ನಲ್ಲೇ ತಾರತಮ್ಯ ವಿರೋಧಿ ನಿಯಮ ನೆನಪಿಸಿದ ಐಐಟಿ ಬಾಂಬೆ

ಮುಂಬೈ: ಸಹಪಾಠಿಗಳ ಜಾತಿ, ಪ್ರವೇಶದ ವರ್ಗ ಅಥವಾ ಪ್ರವೇಶ ಪರೀಕ್ಷೆಯ ರ‍್ಯಾಂಕ್‌ಗಳ ಬಗ್ಗೆ ಪ್ರಶ್ನಿಸುವುದು ತಾರತಮ್ಯಕ್ಕೆ ಕಾರಣವಾಗಬಹುದು. ಇಂತಹ ಪ್ರಶ್ನೆಗಳನ್ನು ಕೇಳಬಾರದು ಎಂದು ಭಾರತೀಯ ತಂತ್ರಜ್ಞಾನ ಸಂಸ್ಥೆ (ಐಐಟಿ) ಬಾಂಬೆ ತನ್ನ ವಿದ್ಯಾರ್ಥಿಗಳಿಗೆ...