Homeಫ್ಯಾಕ್ಟ್‌ಚೆಕ್FACT CHECK : ಬಾಹ್ಯಾಕಾಶದಿಂದ ಜಿಗಿದು ಭೂಮಿ ತಲುಪಿದ ವಿಜ್ಞಾನಿ ಆಸ್ಟ್ರೇಲಿಯಾದವರಲ್ಲ!

FACT CHECK : ಬಾಹ್ಯಾಕಾಶದಿಂದ ಜಿಗಿದು ಭೂಮಿ ತಲುಪಿದ ವಿಜ್ಞಾನಿ ಆಸ್ಟ್ರೇಲಿಯಾದವರಲ್ಲ!

- Advertisement -
- Advertisement -

ಆಸ್ಟ್ರೇಲಿಯಾದ ಖಗೋಳ ವಿಜ್ಞಾನಿಯೊಬ್ಬರು ಬಾಹ್ಯಾಕಾಶದಿಂದ ಜಿಗಿದು ಭೂಮಿಯನ್ನು ತಲುಪಿದ್ದಾರೆ ಎಂದು ವಿಡಿಯೋವೊಂದನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಳ್ಳಲಾಗಿದೆ.

ಎಕ್ಸ್‌ನಲ್ಲಿ ಕಂಡು ಬಂದಿರುವ  ಪೋಸ್ಟ್‌ನಲ್ಲಿ “ಆಸ್ಟ್ರೇಲಿಯಾದ ಖಗೋಳಶಾಸ್ತ್ರಜ್ಞ 1,28,000 ಅಡಿಗಳಷ್ಟು ಬಾಹ್ಯಾಕಾಶದಿಂದ ಜಿಗಿದು ಭೂಮಿಯನ್ನು ತಲುಪುತ್ತಾನೆ … 1236 ಕಿ.ಮೀ. 4 ನಿಮಿಷ 5 ಸೆಕೆಂಡ್‌ಗಳಲ್ಲಿ ಪ್ರಯಾಣ ಮುಗಿಸಿದೆ… ಭೂಮಿ ಚಲಿಸುತ್ತಿರುವುದನ್ನು ಅವರು ಸ್ಪಷ್ಟವಾಗಿ ನೋಡಿದ್ದಾರೆ… ಅದ್ಭುತವಾದ ವಿಡಿಯೋ, ಇದನ್ನು ನೋಡಿ ಮತ್ತು ದಯವಿಟ್ಟು ನಿಮ್ಮ ಮಕ್ಕಳಿಗೆ ತೋರಿಸಿ” ಎಂದಿದೆ. ಹಲವು ಎಕ್ಸ್‌ ಖಾತೆ ಬಳಕೆದಾರರು ಇದೇ ಪ್ರತಿಪಾದನೆಯೊಂದಿಗೆ ಪೋಸ್ಟ್‌  ಹಂಚಿಕೊಂಡಿದ್ದಾರೆ.

ಫೇಸ್‌ಬುಕ್‌ನ ಹಲವು ಬಳಕೆದಾರರು ಇದೇ ಹೇಳಿಕೆಯೊಂದಿಗೆ ವಿಡಿಯೋವನ್ನು ಹಂಚಿಕೊಂಡಿದ್ದಾರೆ. ಹಾಗಿದ್ದರೆ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆ ನಿಜವೇ? ಎಂದು ಪರಿಶೀಲಿಸೋಣ.

ಫ್ಯಾಕ್ಟ್‌ಚೆಕ್ : ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾದ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆಯನ್ನು ಪರಿಶೀಲಿಸಲು ವಿಡಿಯೋದ ಕೀ ಫ್ರೇಮ್‌ಗಳನ್ನು ತೆಗೆದು ಗೂಗಲ್ ರಿವರ್ಸ್ ಇಮೇಜ್‌ನಲ್ಲಿ ಸರ್ಚ್ ಮಾಡಿದಾಗ, ವೈರಲ್ ವಿಡಿಯೋಗೆ ಸಂಬಂಧಿಸಿದಂತೆ ಕೆಲವು ವರದಿಗಳು ಲಭ್ಯವಾಗಿವೆ.

ಅಕ್ಟೋಬರ್ 15, 2012 ಆನ್‌ ಡಿಮ್ಯಾಂಡ್ ನ್ಯೂಸ್‌ ಯೂಟ್ಯೂಬ್‌ ಚಾನೆಲ್ ಪ್ರಕಟಿಸಿದ ವಿಡಿಯೋದಲ್ಲಿ “Space jump: Felix Baumgartner describes his record-breaking skydive” ಶೀರ್ಷಿಕೆಯಡಿಯಲ್ಲಿ ಫೆಲಿಕ್ಸ್ ಬಾಮ್‌ಗಾರ್ಟ್ನರ್ ಎಂಬವರು ಬಾಹ್ಯಾಕಾಶದಿಂದ ಸ್ಕೈಡೈವಿಂಗ್‌ ಮಾಡಿದ್ದ ಬಗ್ಗೆ ಹೇಳಲಾಗಿದೆ. ಈ ವಿಡಿಯೋವನ್ನು ಕೂಲಂಕಷವಾಗಿ ಪರಿಶೀಲಿಸಿದಾಗ ಇದು ವೈರಲ್‌ ವಿಡಿಯೋಗೆ ಸಾಮ್ಯತೆ ಇರುವಂತೆ ಕಂಡು ಬಂದಿದೆ. ಇದನ್ನು ಆಧಾರವಾಗಿಟ್ಟುಕೊಂಡು ಮತ್ತಷ್ಟು ಪರಿಶೀಲಿಸಿದಾಗ ಮಾಹಿತಿ ಲಭ್ಯವಾಗಿದೆ.

ಅಕ್ಟೋಬರ್ 14, 2022ರಂದು ರೆಡ್ ಬುಲ್‌ ಯೂಟ್ಯೂಬ್‌ ಚಾನೆಲ್ ಪ್ರಕಟಿಸಿದ ವಿಡಿಯೋದಲ್ಲಿ “I Jumped From Space (World Record Supersonic Freefall)” ಶೀರ್ಷಿಕೆಯಿದ್ದು ಫೆಲಿಕ್ಸ್ ಬಾಮ್‌ಗಾರ್ಟ್ನರ್ ಅವರು ಬಾಹ್ಯಾಕಾಶದಿಂದ ನೆಗೆದ ಬಗ್ಗೆ ಮಾಹಿತಿ ಇದೆ. ಈ ವಿಡಿಯೋದ ವಿವರಣೆಯಲ್ಲಿ, “ಬಾಹ್ಯಾಕಾಶದಿಂದ ಜಿಗಿಯಲು *ನಿಜವಾಗಿ* ಏನನಿಸುತ್ತದೆ? 2012 ರಲ್ಲಿ ಫೆಲಿಕ್ಸ್ ಬೌಮ್ಗಗರ್ಟ್ನರ್ ಅವರು ಹೀಲಿಯಂ ಬಲೂನ್ ಅನ್ನು ವಾಯುಮಂಡಲಕ್ಕೆ ತೆಗೆದುಕೊಂಡು ವಿಶೇಷವಾಗಿ ತಯಾರಿಸಿದ ಬಾಹ್ಯಾಕಾಶ ಸೂಟ್‌ನಲ್ಲಿ ಭೂಮಿಗೆ ವಾಪಾಸಾದರು. ಫ್ರೀ ಫಾಲ್‌ನಲ್ಲಿ ಅವರು ಶಬ್ದದ ವೇಗವನ್ನು ಬೇದಿಸಿ ಭೂಮಿಗೆ ಪ್ರವೇಶಿಸಿದರು. ಈ ವೇಳೆ ಅವರು ತಿರುಗಿದ್ದು ಇಡೀ ರೆಡ್ ಬುಲ್ ಸ್ಟ್ರಾಟೋಸ್ ಮಿಷನ್‌ಗೆ ಬೆದರಿಕೆ ಹಾಕಿತು… ಫೆಲಿಕ್ಸ್ ಅವರು ಸಾಧನೆಯನ್ನು ಪ್ರತಿಬಿಂಬಿಸುತ್ತಾರೆ ಮತ್ತು ಬಾಹ್ಯಾಕಾಶದಿಂದ ಜಿಗಿಯಲು ಏನ್ನಿಸಿತು ಎಂಬುದನ್ನು ನಿಜವಾಗಿ ಹಂಚಿಕೊಳ್ಳುತ್ತಾರೆ” ಎಂದಿದೆ.

ಫೆಲಿಕ್ಸ್ ಬಾಮ್‌ಗಾರ್ಟ್ನರ್ ಅವರ ಐತಿಹಾಸಿಕ ನೆಗೆತಕ್ಕೆ 10ವರ್ಷ ಆದ ಬಗ್ಗೆ ಸಿಎನ್‌ಎನ್‌ ಅಕ್ಟೋಬರ್ 14, 2022ರಂದು ವರದಿಯನ್ನು ಪ್ರಕಟಿಸಿದ್ದು, ಅವರ ಬಾಹ್ಯಾಕಾಶ ನೆಗೆತದ ಬಗ್ಗೆ ಮೆಲುಕು ಹಾಕಿದೆ.

ಗಿನ್ನಿಸ್ ವರ್ಲ್ಡ್ ರೆಕಾರ್ಡ್ ತನ್ನ ವೆಬ್‌ ಸೈಟ್ ನಲ್ಲಿ ನೀಡಿದ ಲೇಖನದಲ್ಲಿ, “ಆಸ್ಟ್ರಿಯಾದ ಸ್ಕೈಡೈವರ್ ಫೆಲಿಕ್ಸ್ ಬಾಮ್‌ಗಾರ್ಟ್ನರ್ 38,969.4 ಮೀಟರ್ ಎತ್ತರದಿಂದ ಪ್ಯಾರಾಚೂಟ್ ಜಿಗಿತವನ್ನು ಪೂರ್ಣಗೊಳಿಸಿದ ಮಹತ್ವದ ಕ್ಷಣವನ್ನು ವೀಕ್ಷಿಸಲು ಅಭೂತಪೂರ್ವ ಎಂಟು ಮಿಲಿಯನ್ ಜನರು 14 ಅಕ್ಟೋಬರ್ 2012 ರಂದು ಯೂಟ್ಯೂಬ್‌ ವೀಕ್ಷಣೆ ಮಾಡಿದ್ದಾರೆ. ಈ ಮೂಲಕ ಎಂಟು ವಿಶ್ವ ದಾಖಲೆಗಳನ್ನು ಮತ್ತು ಕೇವಲ ಮೂರು ಗಂಟೆಗಳ ಅಂತರದಲ್ಲಿ ಬಾಹ್ಯಾಕಾಶದ ಧ್ವನಿ ತಡೆಗೋಡೆಯನ್ನು ಮುರಿದಿದ್ದಾರೆ” ಎಂದಿದೆ.

ಇದರೊಂದಿಗೆ ಫೆಲಿಕ್ಸ್ ಬಾಮ್‌ಗಾರ್ಟ್ನರ್ ರಾಷ್ಟ್ರೀಯತೆಯನ್ನು ಪರಿಶೀಲಿಸಲು ಅವರ ವೆಬ್‌ ಸೈಟ್ ವೀಕ್ಷಿಸಿದ್ದೇವೆ. ಇದರಲ್ಲಿ ಅವರ ವಿವರಗಳನ್ನು ನೀಡಲಾಗಿದ್ದು, ಅವರು ಆಸ್ಟ್ರಿಯನ್‌ ಪ್ರಜೆ ಎಂದು ಉಲ್ಲೇಖಿಸಿರುವುದನ್ನು ನೋಡಬಹುದು.

ಒಟ್ಟಾರೆಯಾಗಿ ಹೇಳುವುದಾದರೆ, ಆಸ್ಟ್ರೇಲಿಯಾದ ಖಗೋಳ ವಿಜ್ಞಾನಿಯೊಬ್ಬರು ಬಾಹ್ಯಾಕಾಶದಿಂದ ಜಿಗಿದು ಭೂಮಿಯನ್ನು ತಲುಪಿದ್ದಾರೆ ಎಂಬ ವಿಡಿಯೋ 2012ರದ್ದಾಗಿದ್ದು, ಅವರು ಆಸ್ಟ್ರೇಲಿಯಾದವರಲ್ಲ ಮತ್ತು ಆಸ್ಟ್ರಿಯನ್ ಪ್ರಜೆ ಫೆಲಿಕ್ಸ್ ಬಾಮ್‌ಗಾರ್ಟ್ನರ್ ಎಂಬವರಾಗಿದ್ದಾರೆ ಎಂದು ಗೊತ್ತಾಗಿದೆ.

ಇದನ್ನೂ ಓದಿ : FACT CHECK : ಕೋಲ್ಕತ್ತಾದಲ್ಲಿ ಪ್ರತಿಭಟನೆಯಿಂದ ಹಿಂದಿರುಗುತ್ತಿದ್ದ ಯುವತಿಯನ್ನು ಅತ್ಯಾಚಾರವೆಸಗಿ ಕೊಲೆ ಮಾಡಲಾಗಿದೆ ಎನ್ನುವುದು ಕಟ್ಟುಕಥೆ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...