Homeಫ್ಯಾಕ್ಟ್‌ಚೆಕ್Fact Check: 'ಜಲ ಜೀವನ್ ಮಿಷನ್‌' ಯೋಜನೆಯಲ್ಲಿ ಕೇಂದ್ರದ್ದಷ್ಟೇ ಅಲ್ಲ, ರಾಜ್ಯದ ಪಾಲೂ ಇದೆ

Fact Check: ‘ಜಲ ಜೀವನ್ ಮಿಷನ್‌’ ಯೋಜನೆಯಲ್ಲಿ ಕೇಂದ್ರದ್ದಷ್ಟೇ ಅಲ್ಲ, ರಾಜ್ಯದ ಪಾಲೂ ಇದೆ

ಜೆಜೆಎಂ ಕೇವಲ ಕೇಂದ್ರದ ಯೋಜನೆ ಎನ್ನಲು ಸಾಧ್ಯವಿಲ್ಲ

- Advertisement -
- Advertisement -

‘ಜಲ ಜೀವನ್ ಮಿಷನ್'(ಜೆಜೆಎಂ) ಗ್ರಾಮೀಣ ಕುಡಿಯುವ ನೀರಿನ ಯೋಜನೆಯ ವಿಚಾರದಲ್ಲಿ ರಾಜಕೀಯ ಕಿತ್ತಾಟ ನಡೆಯುತ್ತಿದೆ. ಬಿಜೆಪಿ ಬೆಂಬಲಿಗರು ‘ಮೋದಿ ದುಡ್ಡು ಸಿದ್ದು ಹೆಸರು’ ಎಂಬ ಪೋಸ್ಟರ್‌ ಅನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳುತ್ತಿದ್ದು, ‘ಕೇಂದ್ರದ ಮೋದಿ ಸರ್ಕಾರದ ಜಲ ಜೀವನ್ ಮಿಷನ್ ಯೋಜನೆಯ ನೀರನ್ನು ಸಿದ್ದರಾಮಯ್ಯ ಸರ್ಕಾರ ತನ್ನದೆಂದು ಬಿಂಬಿಸುತ್ತಿದೆ’ ಎಂಬರ್ಥದಲ್ಲಿ ಸುದ್ದಿ ಹಂಚುತ್ತಿದ್ದಾರೆ.

ಫ್ಯಾಕ್ಟ್‌ಚೆಕ್ : ಲೋಕಸಭೆ ಚುನಾವಣೆ ಸಮೀಪಿಸುತ್ತಿರುವಾಗ ಜಲ ಜೀವನ್ ಮಿಷನ್ ವಿಚಾರದಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ಅಭಿಮಾನಿಗಳು ಪರಸ್ಪರ ಕಿತ್ತಾಟದಲ್ಲಿ ನಿರತರಾಗಿದ್ದಾರೆ. ಹಾಗಾಗಿ, ಯೋಜನೆಯ ಕುರಿತು ನಾನುಗೌರಿ.ಕಾಂ ಸತ್ಯಾಸತ್ಯತೆ ಪರಿಶೀಲನೆ ನಡೆಸಿದೆ.

ಜಲ ಜೀವನ್ ಮಿಷನ್ ಯೋಜನೆ ಯಾರದ್ದು? ಇದರ ಉದ್ದೇಶವೇನು? ಈ ಯೋಜನೆಗೆ ಯಾರು ಹಣ ಒದಗಿಸುತ್ತಿದ್ದಾರೆ?, ಯೋಜನೆಯಲ್ಲಿ ಕೇಂದ್ರದ ಪಾಲೆಷ್ಟಿದೆ?, ರಾಜ್ಯದ ಪಾಲೆಷ್ಟಿದೆ? ಇತ್ಯಾದಿ ವಿಷಯಗಳ ಕುರಿತು ನೈಜ ಮಾಹಿತಿಯನ್ನು ನಾವು ಇಲ್ಲಿ ತೆರದಿಟ್ಟಿದ್ದೇವೆ.

ಜಲ ಜೀವನ್ ಮಿಷನ್ ಯೋಜನೆಯ ಕುರಿತು ಮಾಹಿತಿ ಹುಡುಕಿದಾಗ ಕೇಂದ್ರ ಸರ್ಕಾರದ ಅಧಿಕೃತ ಸಂಸ್ಥೆ ಪ್ರೆಸ್ ಇನ್ಫರ್ಮೇಷನ್ ಬ್ಯೂರೋ (ಪಿಐಬಿ) 21 ಮಾರ್ಚ್ 2022ರಂದು ಜಲ ಜೀವನ್ ಮಿಷನ್‌ನಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಪಾಲು (Share of Union and State Government in JJM)ಎಂಬ ಶೀರ್ಷಿಕೆಯಲ್ಲಿ ಪ್ರಕಟಿಸಿದ ಮಾಹಿತಿಯೊಂದು ದೊರೆತಿದೆ.

ಪಿಐಬಿ ಪ್ರಕಟನೆಯಲ್ಲಿ ತಿಳಿಸಿದಂತೆ, 2024ರೊಳಗೆ ದೇಶದ ಗ್ರಾಮೀಣ ಪ್ರದೇಶದ ಪ್ರತೀ ಮನೆಗಳಿಗೆ ನಳ್ಳಿ ನೀರು ಒದಗಿಸುವ ಉದ್ದೇಶದಿಂದ ಆಗಸ್ಟ್ 2019ರಲ್ಲಿ ರಾಜ್ಯಗಳ ಸಹಯೋಗದಲ್ಲಿ ಭಾರತ ಸರ್ಕಾರ ಜಾರಿಗೆ ತಂದ ಯೋಜನೆಯಾಗಿದೆ ‘ಜಲ ಜೀವನ್ ಮಿಷನ್’ (ಜೆಜೆಎಂ) ಇದರ ಅಂದಾಜು ವೆಚ್ಚವು ರೂ. 3.60 ಲಕ್ಷ ಕೋಟಿಯಾಗಿದ್ದು, ಇದರಲ್ಲಿ ಕೇಂದ್ರ ಪಾಲು ರೂ. 2.08 ಲಕ್ಷ ಕೋಟಿ ಆಗಿದೆ.

ಜೆಜೆಎಂ ಯೋಜನೆಗೆ ಶಾಸಕಾಂಗವಿಲ್ಲದ ಕೇಂದ್ರಾಡಳಿತ ಪ್ರದೇಶಗಳಿಗೆ ಕೇಂದ್ರ ಸರ್ಕಾರ ಶೇ. 100ರಷ್ಟು ಅನುದಾನ ಒದಗಿಸುತ್ತಿದೆ. ಅಂದರೆ, ಯೋಜನೆಯ ಸಂಪೂರ್ಣ ವೆಚ್ಚವನ್ನು ಕೇಂದ್ರ ಸರ್ಕಾರ ಭರಿಸುತ್ತಿದೆ. ಈಶಾನ್ಯ, ಹಿಮಾಲಯ ರಾಜ್ಯಗಳು ಮತ್ತು ಶಾಸಕಾಂಗ ಇರುವ ಕೇಂದ್ರಾಡಳಿತ ಪ್ರದೇಶಗಳಿಗೆ 90:10 ಅನುಪಾತದಲ್ಲಿ, ಅಂದರೆ ಯೋಜನೆಯ ಶೇ. 90ರಷ್ಟು ಅನುದಾನವನ್ನು ಕೇಂದ್ರ ಸರ್ಕಾರ ಮತ್ತು ಶೇ.10 ಅನುದಾವನ್ನು ಆಯಾ ರಾಜ್ಯ ಸರ್ಕಾರಗಳು, ಕೇಂದ್ರಾಡಳಿತ ಪ್ರದೇಶಗಳು ಭರಿಸುತ್ತಿದೆ. ಕರ್ನಾಟಕ, ಕೇರಳದಂತಹ ಸರ್ಕಾರಗಳು ಇರುವ ರಾಜ್ಯಗಳಲ್ಲಿ 50:50 ಅನುಪಾದಲ್ಲಿ ಅನುದಾನ ಹಂಚಿಕೆಯಾಗುತ್ತಿದೆ. ಅಂದರೆ ಯೋಜನೆಯ ಶೇ. 50ರಷ್ಟು ಅನುದಾನವನ್ನು ಕೇಂದ್ರ ಸರ್ಕಾರ ನೀಡುತ್ತಿದ್ದು, ಉಳಿದ ಶೇ.50ರಷ್ಟು ವೆಚ್ಚವನ್ನು ಆಯಾ ರಾಜ್ಯ ಸರ್ಕಾರಗಳು ಭರಿಸುತ್ತಿವೆ.

ಪೋಸ್ಟ್ ಲಿಂಕ್ ಇಲ್ಲಿದೆ

ಇದಲ್ಲದೆ, ನೀರಿನ ಗುಣಮಟ್ಟ ನಿರ್ವಹಣಾ ವ್ಯವಸ್ಥೆಯಡಿ (WQMS)ಕೇಂದ್ರಾಡಳಿತ ಪ್ರದೇಶಗಳಿಗೆ ಶೇ.100ರಷ್ಟು ಅನುದಾನವನ್ನು ಕೇಂದ್ರ ಸರ್ಕಾರ ನೀಡುತ್ತಿದ್ದು, ಹಿಮಾಲಯ ಹಾಗೂ ಈಶಾನ್ಯ ರಾಜ್ಯಗಳಿಗೆ 90:10 ಅನುಪಾತ ಮತ್ತು ಇತರ ರಾಜ್ಯಗಳಿಗೆ 60:40 ಅನುಪಾತದಲ್ಲಿ ಅನುದಾನ ಹಂಚಿಕೆಯಾಗ್ತಿದೆ.

ಜಲ ಜೀವನ್ ಮಿಷನ್ ಅಡಿಯಲ್ಲಿ ದೇಶದ ಕೆಲ ವಿಶೇಷ ಪ್ರದೇಶಗಳಿಗೆ ಅಲ್ಲಿನ ಪ್ರಾಧಿಕಾರಗಳ ಮೂಲಕ ಪ್ರೋತ್ಸಾಹಧನ ನೀಡಲಾಗುತ್ತಿದೆ. ಉದಾ: ಮರುಭೂಮಿ ಅಭಿವೃದ್ಧಿ ಕಾರ್ಯಕ್ರಮ (ಡಿಡಿಪಿ) ಮತ್ತು ಬರಪೀಡಿತ ಪ್ರದೇಶ ಕಾರ್ಯಕ್ರಮ (ಡಿಪಿಎಪಿ) ಅಡಿಯಲ್ಲಿರುವ ಬರುವ ಭೂಪ್ರದೇಶಗಳಿಗೆ ಶೇ. 30ರಷ್ಟು ಅನುದಾನ, ಎಸ್‌ಸಿ, ಎಸ್‌ಟಿ ಪ್ರಾಬಲ್ಯವಿರುವ ಪ್ರದೇಶಗಳಲ್ಲಿ ವಾಸಿಸುವ ಜನಸಂಖ್ಯೆಗೆ ಶೇ. 10ರಷ್ಟು ಅನುದಾನ. ನಿಯಮಗಳ ಪ್ರಕಾರ ಅನುದಾನ ಹಂಚಿಕೆ ಮಾಡುವಾಗ ಈ ಪ್ರದೇಶಗಳಿಗೆ ಮೊದಲ ಪ್ರಾಶಸ್ತ್ಯ ನೀಡಬೇಕಾಗಿದೆ.

ಇದಲ್ಲದೆ, ನೀರಿನ ಜೆಇ-ಎಇಎಸ್ (JE-AES-Japanese encephalitis)ಅಂದರೆ, ಡೆಂಗ್ಯೂ, ಹಳದಿ ಜ್ವರ, ವೆಸ್ಟ್ ನೈಲ್ ವೈರಸ್‌ಗಳು ಮತ್ತು ಸೊಳ್ಳೆಯಿಂದ ಬರುವ ರೋಗ ಪೀಡಿತ ಜಿಲ್ಲೆಗಳ ಗ್ರಾಮಗಳು ಮತ್ತು ಸಂಸದರ ಆದರ್ಶ ಗ್ರಾಮಗಳಿಗೆ (Sansad Adarsh GM Yojana (SAGY)ಅನುದಾನ ಒದಗಿಸಲು ಆದ್ಯತೆ ನೀಡಲಾಗುತ್ತಿದೆ. ನರೇಗಾ ಯೋಜನೆಯಡಿ ಪಾರಂಪರಿಕ ಜಲಮೂಲಗಳ ಪುನರುಜ್ಜೀವನಕ್ಕೂ ಜೆಜೆಎಂ ಯೋಜನೆಯಡಿ ಅನುದಾನ ನೀಡಲಾಗುತ್ತಿದೆ. ಉದಾ: ಕಲ್ಯಾಣಿಗಳು, ಬಾವಿಗಳು.

15 ನೇ ಹಣಕಾಸು ಆಯೋಗವು ಗ್ರಾಮೀಣ ಸ್ಥಳೀಯ ಸಂಸ್ಥೆ (RLBs)ಗಳ ಮೂಲಕ, ಸಂಯೋಜಿತ ಜಲಾನಯನ ನಿರ್ವಹಣಾ ಕಾರ್ಯಕ್ರಮ (IWMP),ರಾಜ್ಯ ಯೋಜನೆಗಳು, ಜಿಲ್ಲಾ ಖನಿಜ ಅಭಿವೃದ್ಧಿ ನಿಧಿ, ಸಿಎಸ್‌ಆರ್‌ ನಿಧಿಗಳು, ಸಮುದಾಯ ಕೊಡುಗೆ ಇತ್ಯಾದಿಗಳು ಕೂಡ ಜೆಜೆಎಂಗೆ ಅನುದಾನ ಒದಗಿಸುತ್ತಿದೆ.

ಕೇಂದ್ರ ಜಲಶಕ್ತಿ ಸಚಿವಾಲಯದ ಅಧೀನದಲ್ಲಿ ಜಲ ಜೀವನ್ ಮಿಷನ್ ಯೋಜನೆಯನ್ನು ಜಾರಿಗೊಳಿಸಲಾಗಿದೆ. ಜಲ ಶಕ್ತಿ ಸಚಿವಾಲಯ ಅಥವಾ ಜಲ ಸಂಪನ್ಮೂಲ ಸಚಿವಾಲಯವನ್ನು ಎರಡನೇ ಮೋದಿ ಸರ್ಕಾರ ಅವಧಿಯಲ್ಲಿ ಮೇ 2019 ರಲ್ಲಿ ರಚಿಸಲಾಗಿದೆ. ಇದು ಜಲಸಂಪನ್ಮೂಲ ಸಚಿವಾಲಯ, ನದಿ ಅಭಿವೃದ್ಧಿ, ಗಂಗಾ ಪುನರುಜ್ಜೀವನ ಮತ್ತು ಕುಡಿಯುವ ನೀರು ಹಾಗೂ ನೈರ್ಮಲ್ಯ ಸಚಿವಾಲಯಗಳ ವಿಲೀನದಿಂದ ರೂಪುಗೊಂಡಿದೆ.

ನಮಗೆ ದೊರೆತ ಮಾಹಿತಿ ಪ್ರಕಾರ, ಕರ್ನಾಟಕದಲ್ಲಿ ಜಲ ಜೀವನ್ ಮಿಷನ್ ಯೋಜನೆಯಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಸಮಾನ ಪಾಲಿದೆ. ಯೋಜನೆಗೆ ಕೇಂದ್ರ ಸರ್ಕಾರ ಶೇ.50ರಷ್ಟು ಹಣವನ್ನು ಒದಗಿಸಿದರೆ, ಇನ್ನುಳಿದ ಶೇ.50ರಷ್ಟು ಹಣವನ್ನು ರಾಜ್ಯ ಸರ್ಕಾರ ನೀಡುತ್ತಿದೆ. ಹಾಗಾಗಿ, ಇದು ಕೇವಲ ಕೇಂದ್ರ ಸರ್ಕಾರ ಯೋಜನೆಯಲ್ಲ, ರಾಜ್ಯ ಸರ್ಕಾರದ ಯೋಜನೆಯೂ ಹೌದು.

ಇದನ್ನೂ ಓದಿ: Fact Check: ಲೋಕಸಭೆ ಚುನಾವಣೆಯ ದಿನಾಂಕ ಘೋಷಣೆಯಾಗಿದೆ ಎಂಬುವುದು ಸುಳ್ಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಅದನ್ನು ವಾಪಸ್ ಕಳಿಸಿಲ್ಲ, ತಿರಸ್ಕರಿಸಿಲ್ಲ, ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭಾನುವಾರ (ಜ.11) ಮಂಗಳೂರಿನಲ್ಲಿ...

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ. ಡಿಸೆಂಬರ್ 13ರಂದು ಸಿರಿಯಾದಲ್ಲಿ...

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...