Homeಫ್ಯಾಕ್ಟ್‌ಚೆಕ್FACT CHECK : ಮದರಸದಲ್ಲಿ ಬಾಲಕನನ್ನು ನೇತು ಹಾಕಿ ಹಿಂಸಿಸುತ್ತಿರುವ ವಿಡಿಯೋ ಭಾರತದ್ದಲ್ಲ

FACT CHECK : ಮದರಸದಲ್ಲಿ ಬಾಲಕನನ್ನು ನೇತು ಹಾಕಿ ಹಿಂಸಿಸುತ್ತಿರುವ ವಿಡಿಯೋ ಭಾರತದ್ದಲ್ಲ

- Advertisement -
- Advertisement -

ಸಾಮಾಜಿಕ ಮಾಧ್ಯಮಗಳಲ್ಲಿ ವಿಡಿಯೋವೊಂದು ವೈರಲ್ ಆಗುತ್ತಿದ್ದು, ಅದರಲ್ಲಿ ನೀಲಿ ಬಣ್ಣದ ಕುರ್ತಾ, ಪೈಜಾಮ ತೊಟ್ಟಿದ್ದ ಮಗುವಿನ ಕಾಲುಗಳನ್ನು ಹಗ್ಗದಿಂದ ಕಟ್ಟಿ, ತಲೆಕೆಳಗಾಗಿ ನೇತು ಹಾಕಲಾಗಿದೆ. ಮುಸ್ಲಿಂ ಪ್ರಾರ್ಥನೆಯ ಟೋಪಿಯನ್ನು ಧರಿಸಿರುವ ಹಲವಾರು ಹುಡುಗರು ಕುರಾನ್ ಓದುವುದನ್ನು ಕೂಡ ಈ ವಿಡಿಯೋದಲ್ಲಿ ಕಾಣಬಹುದಾಗಿದೆ.

ಭಾರತೀಯ ಮದರಸದಲ್ಲಿ ಬಾಲಕಿಯನ್ನು ಶಿಕ್ಷಿಸುತ್ತಿರುವ ರೀತಿಯನ್ನು ನೋಡಿದರೆ, ಅಲ್ಲಿನ ಕ್ರೂರತೆ ಏನು ಎಂಬುವುದು ಅರ್ಥವಾಗುತ್ತದೆ” ಎಂದು ಪ್ರತಿಪಾದಿಸಿ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ.

ಇದೇ ವಿಡಿಯೋವನ್ನು ಎಕ್ಸ್‌ ಖಾತೆಯ ಬಳಕೆದಾರರೊಬ್ಬರು, ಪೋಸ್ಟ್‌ ಮಾಡಿದ್ದು “ಇದು ಯಾವ ಶಾಲೆ ಎಂದು ನಾನು ನಿಮಗೆ ಹೇಳಬೇಕಾಗಿಲ್ಲ. ಆದರೆ ಚಿಕ್ಕ ಹುಡುಗಿಯನ್ನು ಹೀಗೆ ತಲೆಕೆಳಗಾಗಿ ಕಟ್ಟಿ ಹಾಕಿ ಹೊಡೆದಾಗ, ನಮ್ಮ ದೇಶದಲ್ಲಿ ಕಾನೂನಿನ ಭಯವಿದೆಯೇ? ಈ ತಾಲಿಬಾನಿ ಶಿಕ್ಷೆಗೆ ಕಾರಣವೆಂದರೆ, ಅವಳು ಸ್ವರ್ಗೀಯ ಪುಸ್ತಕವನ್ನು ಅರ್ಥಮಾಡಿಕೊಳ್ಳಲಿಲ್ಲ. ಅಂತಹ ಶಾಲೆಗಳನ್ನು ಭಾರತದಾತ್ಯಂತ ಸಂಪೂರ್ಣವಾಗಿ ನಿಷೇಧಿಸಬೇಕು. ಮತ್ತು ಚಿಕ್ಕ ಹುಡುಗಿಯನ್ನು ಈ ರೀತಿ ಹೊಡೆಯಲು ಕಾರಣರಾದವರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು ಎಂದು ನಾನು ಆಗ್ರಹಿಸುತ್ತಿದ್ದೇನೆ” ಎಂದು ಬರೆದುಕೊಂಡಿದ್ದಾರೆ. ಹೀಗೆ ವ್ಯಾಪಕವಾಗಿ ಹಲವಾರು ಮಂದಿ ವಿವಿಧ ಬರಹಗಳೊಂದಿಗೆ ಈ ವಿಡಿಯೋವನ್ನು ಹಂಚಿಕೊಳ್ಳುತ್ತಿದ್ದಾರೆ.

ಹಾಗಿದ್ದರೆ ಪೊಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆ ನಿಜವೇ ಎಂದು ಪರಿಶೀಲಿಸೋಣ.

ಫ್ಯಾಕ್ಟ್‌ಚೆಕ್‌ : ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಲಲಾದ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆಯನ್ನು ಪರಿಶೀಲಿಸಲು ಗೂಗಲ್ ರಿವರ್ಸ್ ಇಮೇಜಸ್‌ನಲ್ಲಿ ಸರ್ಚ್ ಮಾಡಿದಾಗ, ಪಾಕಿಸ್ತಾನದ ಸುದ್ದಿ ವಾಹಿನಿಯಾದ ಜಿಯೋ ನ್ಯೂಸ್‌ ಸುದ್ದಿ 30 ಜೂನ್‌ 2019ರಂದು “Rawalpindi ‘qari’ who assaulted student sent on 14-day judicial remand” ಎಂಬ ಶೀರ್ಷಿಕೆಯ ಅಡಿಯಲ್ಲಿ ಪ್ರಕಟಿಸಿದ ವರದಿಯೊಂದು ಲಭ್ಯವಾಗಿದೆ.

ಈ ವರದಿಯ ಪ್ರಕಾರ  ಈ ಘಟನೆ ಪಾಕಿಸ್ತಾನದ ರಾವಲ್ಪಿಂಡಿಯಲ್ಲಿ ನಡೆದಿದ್ದು, ಬಾಲಕಿಯನ್ನು ತಲೆಕೆಳಗಾಗಿ ನೇತು ಹಾಕಲಾಗಿದೆ ಎಂಬುದು ಸುಳ್ಳು. ಇಲ್ಲಿ ಸಂತ್ರಸ್ಥರಾಗಿರುವುದು ಬಾಲಕ.. ಮದರಸದ  ವಿದ್ಯಾರ್ಥಿಯನ್ನು ತಲೆಕೆಳಗಾಗಿ ಕಟ್ಟಿಹಾಕಿ ಹಲ್ಲೆ ನಡೆಸಿದ ಖಾರಿ ನೂರ್ ಮುಹಮ್ಮದ್‌ಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಇನ್ನು ಈ ವರದಿಯಲ್ಲಿನ ಆಘಾತಕಾರಿ ಅಂಶ ಎಂದರೆ ಸಂತ್ರಸ್ಥ ಬಾಲಕ ಮತ್ತು ಆತನ ತಂದೆ ಪೊಲೀಸ್‌ ಠಾಣೆಯಲ್ಲಿ ಖಾರಿ ನಿರಾಪರಾಧಿ, ಇದು ತರಗತಿ ಮುಗಿದ ನಂತರ ತಮಾಷೆಗಾಗಿ ಮಾಡಿದ ವಿಡಿಯೋ ಎಂದು ಹೇಳಿಕೆಯನ್ನು ನೀಡಿದ್ದಾರೆ ಎಂಬ ಅಂಶವನ್ನು ಉಲ್ಲೇಖಿಸಲಾಗಿದೆ. ಇನ್ನು ಇದೇ ಘಟನೆಗೆ ಸಂಬಂಧ ಪಟ್ಟಂತೆ ಗಲ್ಫ್‌ ಟುಡೆ ಮತ್ತು ಆರಿ ನ್ಯೂಸ್‌ ಕೂಡ ಈ ಬಗ್ಗೆ ವರದಿಯನ್ನು ಮಾಡಿವೆ.

ಒಟ್ಟಾರೆಯಾಗಿ ಹೇಳುವುದಾದರೆ, ವೈಲರ್‌ ವಿಡಿಯೋದಲ್ಲಿರುವುದು ವಿದ್ಯಾರ್ಥಿನಿ ಅಲ್ಲ ಆತ ಬಾಲಕ ಮತ್ತು ಆತನನ್ನು ಭಾರತದ ಮದರಾಸದಲ್ಲಿ ತಲೆಕೆಳಗಾಗಿ ನೇತಹಾಕಲಾಗಿದೆ ಎಂಬುದು ಸುಳ್ಳು, ಈ ವೈರಲ್‌ ವಿಡಿಯೋದಲ್ಲಿನ ಘಟನೆ ಪಾಕಿಸ್ತಾನದಲ್ಲಿ ನಡೆದಿದೆ. ಈ ವಿಡಿಯೋಗೂ ಭಾರತಕ್ಕೂ ಯಾವುದೇ ರೀತಿಯಾದ ಸಂಬಂಧವಿಲ್ಲ. ಹಾಗಾಗಿ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆ ತಪ್ಪಾಗಿದೆ.

ಇದನ್ನೂ ಓದಿ : FACT CHECK : ನಟ ದರ್ಶನ್ ಪತ್ನಿ ದೇವರ ಮೊರೆ ಎಂದು ಒಂದು ವರ್ಷದ ಹಿಂದಿನ ಹಳೆಯ ಫೋಟೊ ಹಂಚಿಕೊಳ್ಳಲಾಗ್ತಿದೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೂತುಕುಡಿ ಸಾತನ್‌ಕುಳಂ ತಂದೆ-ಮಗನ ಕಸ್ಟಡಿ ಸಾವು ಪ್ರಕರಣ : ಅಪರಾಧಿಗಳಾದ ಎಲ್ಲಾ 9 ಪೊಲೀಸರಿಗೆ ಮರಣದಂಡನೆ ವಿಧಿಸಿದ ನ್ಯಾಯಾಲಯ

ತಮಿಳುನಾಡಿನ ತೂತುಕುಡಿ ಜಿಲ್ಲೆಯ ಸಾತನ್‌ಕುಳಂ ಪೊಲೀಸ್ ಠಾಣೆಯಲ್ಲಿ ಕೋವಿಡ್-19 ಲಾಕ್‌ಡೌನ್ ಸಮಯದಲ್ಲಿ ಸಂಭವಿಸಿದ, ವ್ಯಾಪಾರಿ ಪಿ. ಜಯರಾಜ್ (58) ಮತ್ತು ಅವರ ಮಗ ಜೆ. ಬೆನಿಕ್ಸ್ (31) ಅವರ ಕಸ್ಟಡಿ ಸಾವು ಪ್ರಕರಣದ...

ದಾವಣಗೆರೆ ದಕ್ಷಿಣ ಉಪ-ಸಮರ: ಶಾಮನೂರು ಸಾಮ್ರಾಜ್ಯದಲ್ಲಿ ಅಹಿಂದ ಬಂಡಾಯ!

ತುಂಗಭದ್ರಾ ನದಿ ಪರ‍್ವಕ್ಕೆ ಎತ್ತರದ ಪ್ರದೇಶದಲ್ಲಿರುವ ದಾವಣಗೆರೆ ಮಧ್ಯ ಕರ್ನಾಟಕದ ಪ್ರಮುಖ ವಾಣಿಜ್ಯ ನಗರಿ. ಬೆಣ್ಣೆ ದೋಸೆಯ ಘಮಲಿನ ದಾವಣಗೆರೆಯ ರಾಜಕಾರಣ ಮಾತ್ರ ಮಿರ್ಚಿ-ಮಂಡಕ್ಕಿಯ ಖಡಕ್ ಖಾರಾ ಕುರುಕುಲಿನಂತೆ! ದಾವಣಗೆರೆ ಮತ್ತದರ ಸುತಮುತ್ತಲಿನ...

‘Dr. Nimo Yadav’, ‘Nehr Who’ ಎಕ್ಸ್‌ ಖಾತೆಗಳನ್ನು ತಕ್ಷಣ ಮರುಸ್ಥಾಪಿಸಲು ದೆಹಲಿ ಹೈಕೋರ್ಟ್ ಆದೇಶ

'Dr. Nimo Yadav' ಮತ್ತು 'Nehr Who' ಎಂಬ ಎರಡು ಪರೋಡಿ ಎಕ್ಸ್‌ ಖಾತೆಗಳನ್ನು ತಕ್ಷಣ ಮರು ಸ್ಥಾಪಿಸುವಂತೆ ದೆಹಲಿ ಹೈಕೋರ್ಟ್ ಸೋಮವಾರ (ಏ.6) ಎಕ್ಸ್ ಸಂಸ್ಥೆಗೆ (X Corp) ಆದೇಶಿಸಿದೆ. 'Dr....

ಬಂಗಾಳ| ಮತದಾರರ ಪಟ್ಟಿಯಿಂದ ಹೆಸರು ತೆಗೆದ ಬಳಿಕ ಸಾವಿಗೆ ಶರಣಾದ ಮುಸ್ಲಿಂ ವ್ಯಕ್ತಿ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ನಂತರ ಪಶ್ಚಿಮ ಬಂಗಾಳದಲ್ಲಿ ಮತದಾರರ ಪಟ್ಟಿಯಿಂದ ತನ್ನ ಹೆಸರನ್ನು ತೆಗೆದುಹಾಕಿದ್ದರಿಂದ ಮನನೊಂದ ಮುಸ್ಲಿಂ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಮೃತನನ್ನು ಬಿರ್ಭುಮ್...

‘ಯೋಜನೆಯು ಕೇರಳಕ್ಕೆ ಜೀವನಾಡಿಯಾಗಲಿದೆ’: ವಯನಾಡ್ ಸುರಂಗ ಮಾರ್ಗ ವಿರುದ್ದದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಕೇರಳದ ಕೋಝಿಕ್ಕೋಡ್-ವಯನಾಡ್ ಸುರಂಗ ಮಾರ್ಗ ನಿರ್ಮಾಣಕ್ಕೆ ನೀಡಲಾದ ಪರಿಸರ ಅನುಮತಿ (ಇಸಿ) ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ (ಏ.6) ವಜಾಗೊಳಿಸಿದೆ. ಸುರಂಗ ನಿರ್ಮಾಣದ ಸಮಯದಲ್ಲಿ ಪರಿಸರ ಅನುಮತಿಯ ಷರತ್ತುಗಳ ಉಲ್ಲಂಘನೆಯಾದರೆ, ಅರ್ಜಿದಾರರು...

651 ಕೋಟಿ ರೂ. ಮೌಲ್ಯದ ನಗದು, ಮದ್ಯ, ಮಾದಕ ವಸ್ತು ವಶಪಡಿಸಿಕೊಂಡ ಚುನಾವಣಾ ಆಯೋಗ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದಲ್ಲಿ ನಡೆಯುತ್ತಿರುವ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಅಧಿಕಾರಿಗಳು 651.51 ಕೋಟಿ ರೂ.ಗೂ ಹೆಚ್ಚು ಮೌಲ್ಯದ ನಗದು, ಮದ್ಯ, ಮಾದಕ ವಸ್ತುಗಳು ಮತ್ತು ಇತರ ಉಚಿತ ವಸ್ತುಗಳನ್ನು...

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ಬಾಲಕಿಯನ್ನು ಸರಪಳಿಯಿಂದ ಕಟ್ಟಿ ಥಳಿಸಿದ ಮಾಜಿ ಸೇನಾಧಿಕಾರಿ

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ನಾಲ್ಕು ವರ್ಷದ ಬಾಲಕಿಯನ್ನು ನಿವೃತ್ತ ಸೇನಾಧಿಕಾರಿಯೊಬ್ಬರು ಸರಪಳಿಯಿಂದ ಕಟ್ಟಿಹಾಕಿ ಕ್ರೂರವಾಗಿ ಥಳಿಸಿರುವ ಆಘಾತಕಾರಿ ಘಟನೆ ಹಿಮಾಚಲ ಪ್ರದೇಶದ ಉನಾ ಜಿಲ್ಲೆಯ ಬೆಹಡಾಲ ಗ್ರಾಮದಲ್ಲಿ ನಡೆದಿದೆ. ಬಾಲಕಿಯು ನಿವೃತ್ತ ಸೇನಾಧಿಕಾರಿಯ ತೋಟದ...

ಆಂಧ್ರ ವಿಧಾನಸಭಾ ಸ್ಪೀಕರ್ ಅಯ್ಯಣ್ಣ ಪಾತ್ರುಡು ಅವರಿಂದ ದಲಿತ ವ್ಯಕ್ತಿಗೆ ಕಪಾಳಮೋಕ್ಷ: ವೈಎಸ್‌ಆರ್‌ಸಿಪಿ ವಾಗ್ದಾಳಿ

ಏಪ್ರಿಲ್ 3 ರ ಗುರುವಾರ ನರಸಿಪಟ್ಟಣದಲ್ಲಿ ದಲಿತ ವ್ಯಕ್ತಿಯೊಬ್ಬರಿಗೆ ಕಪಾಳಮೋಕ್ಷ ಮಾಡಿದ್ದಕ್ಕಾಗಿ ಆಂಧ್ರಪ್ರದೇಶ ವಿಧಾನಸಭಾ ಸ್ಪೀಕರ್ ಮತ್ತು ತೆಲುಗು ದೇಶಂ ಪಕ್ಷದ (ಟಿಡಿಪಿ) ನಾಯಕ ಅಯ್ಯಣ್ಣ ಪಾತ್ರುಡು ಅವರ ವಿರುದ್ಧ ವೈಎಸ್‌ಆರ್ ಕಾಂಗ್ರೆಸ್...

ಪ. ಬಂಗಾಳ | ಬಿಜೆಪಿ ಪ್ರಚಾರ ಸಾಮಗ್ರಿ ಸಜ್ಜುಗೊಳಿಸಿದ ವಿಡಿಯೋ ವೈರಲ್ : ಚುನಾವಣಾ ಕರ್ತವ್ಯದಲ್ಲಿದ್ದ ಅಧಿಕಾರಿ ಅಮಾನತು

ಬಿಜೆಪಿ ಪ್ರಚಾರ ಸಾಮಗ್ರಿಗಳನ್ನು ತಯಾರಿಸಲು ಸಹಾಯ ಮಾಡಿದ ಆರೋಪದ ಮೇಲೆ ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯ ಪಾಣಿಹಟಿ ವಿಧಾನಸಭಾ ಕ್ಷೇತ್ರದ ಅಧಿಕಾರಿಯೊಬ್ಬರನ್ನು ಚುನಾವಣಾ ಆಯೋಗ ಅಮಾನತುಗೊಳಿಸಿದೆ ಎಂದು ದಿ ಇಂಡಿಯನ್...

ಮುಸ್ಲಿಮರ ವಿರುದ್ಧ ದ್ವೇಷ ಕಾರುವ ಅಸ್ಸಾಂ ಸಿಎಂ ಪತ್ನಿ ಬಳಿ 2 ಮುಸ್ಲಿಂ ದೇಶಗಳ ಪಾಸ್‌ಪೋರ್ಟ್ ಇದೆ : ಕಾಂಗ್ರೆಸ್ ಆರೋಪ

ಮತದಾನಕ್ಕೆ ಇನ್ನೇನು ಮೂರು ದಿನಗಳು ಬಾಕಿ ಇರುವಾಗ, ಅಸ್ಸಾಂನಲ್ಲಿ ಕಾಂಗ್ರೆಸ್‌-ಬಿಜೆಪಿ ನಡುವೆ ವೈಯಕ್ತಿಕ ವಿಚಾರಗಳ ಕುರಿತ ವಾಗ್ಯುದ್ಧ ತಾರಕಕ್ಕೇರಿದೆ. ಸಿಎಂ ಹಿಮಂತ ಬಿಸ್ವಾ ಶರ್ಮಾ ಮತ್ತು ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ...