Homeಫ್ಯಾಕ್ಟ್‌ಚೆಕ್FACT CHECK : ರಸ್ತೆ ಮಧ್ಯೆ ಯುವತಿಯನ್ನು ಗುಂಡಿಕ್ಕಿ ಕೊಂದಿರುವ ವಿಡಿಯೋ ಮಣಿಪುರದ್ದಲ್ಲ

FACT CHECK : ರಸ್ತೆ ಮಧ್ಯೆ ಯುವತಿಯನ್ನು ಗುಂಡಿಕ್ಕಿ ಕೊಂದಿರುವ ವಿಡಿಯೋ ಮಣಿಪುರದ್ದಲ್ಲ

- Advertisement -
- Advertisement -

ಸೇನಾ ಸಿಬ್ಬಂದಿಯಂತೆ ವಸ್ತ್ರ ಧರಿಸಿರುವ ವ್ಯಕ್ತಿಯೊಬ್ಬ ಮತ್ತು ಇತರರು ರಸ್ತೆ ಮಧ್ಯೆ ಯುವತಿಯೊಬ್ಬಳನ್ನು ಹಿಂಸಿಸಿ ಗುಂಡಿಕ್ಕಿ ಕೊಂದಿರುವ ಹಳೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಮತ್ತೊಮ್ಮೆ ಹರಿದಾಡುತ್ತಿದೆ.

ಕೆಲವರು ಇತ್ತೀಚೆಗೆ ಮಣಿಪುರದಲ್ಲಿ ಈ ಘಟನೆ ನಡೆದಿದೆ ಕುಕಿ ಮಹಿಳೆಯನ್ನು ಹತ್ಯೆ ಮಾಡಲಾಗಿದೆ ಎಂದಿದ್ದಾರೆ. ಇನ್ನೂ ಕೆಲವರು ಮೈತೇಯಿ ಮಹಿಳೆಯರನ್ನು ಹತ್ಯೆ ಮಾಡಲಾಗಿದೆ ಎಂದಿದ್ದಾರೆ.

ಇದೇ ವಿಡಿಯೋ ಮುಂದಿಟ್ಟುಕೊಂಡು, ಮಣಿಪುರದಲ್ಲಿ ಹಿಂಸಾಚಾರದ ವೇಳೆ ಈ ಘಟನೆ ನಡೆದಿದೆ ಎಂದು ಅಸ್ಸಾಂನ ಪತ್ರಿಕೆ ‘ಅಮರ್ ಅಸೋಮ್’ ಜೂನ್ 19, 2023 ರಂದು ಮೊದಲ ಪುಟದಲ್ಲಿ ವರದಿ ಪ್ರಕಟಿಸಿತ್ತು.

ಫ್ಯಾಕ್ಟ್‌ಚೆಕ್ : ವಿಡಿಯೋದ ಸತ್ಯಾಸತ್ಯತೆ ತಿಳಿಯಲು ನಾವು ಸ್ಕ್ರೀನ್ ಶಾಟ್ ಬಳಸಿ ಗೂಗಲ್‌ ರಿವರ್ಸ್ ಇಮೇಜ್‌ನಲ್ಲಿ ಸರ್ಚ್‌ ಮಾಡಿದ್ದೇವೆ. ಈ ವೇಳೆ ಡಿಸೆಂಬರ್ 2022 ರಲ್ಲಿ ಘಟನೆಯ ಕುರಿತು ಬರ್ಮೀಸ್ ಸುದ್ದಿ ಸಂಸ್ಥೆಗಳು ವರದಿ ಮಾಡಿರುವುದು ಕಂಡು ಬಂದಿದೆ.

ಸುದ್ದಿ ವಾಹಿನಿ ಇಲೆವೆನ್ ಮ್ಯಾನ್ಮಾರ್ ಡಿಸೆಂಬರ್ 3, 2022ರಂದು ಈ ಘಟನೆಯ ಕುರಿತು ಸುದ್ದಿ ಪ್ರಕಟಿಸಿತ್ತು. ಸುದ್ದಿ ಪ್ರಕಾರ, “ಮ್ಯಾನ್ಮಾರ್‌ನಲ್ಲಿ ಮಿಲಿಟರಿ ಮಾಹಿತಿದಾರೆ ಎಂದು ಒಪ್ಪಿಕೊಳ್ಳಲು ಒತ್ತಾಯಿಸಿ ಯುವತಿಗೆ ಗುಂಡು ಹಾರಿಸಿ ಹತ್ಯೆ ಮಾಡಲಾಗಿದೆ” ಎಂದು ಹೇಳಲಾಗಿದೆ.

ಡಿಸೆಂಬರ್ 6, 2022ರಂದು ಈ ಘಟನೆಯ ಕುರಿತು ವರದಿ ಮಾಡಿದ್ದ ಮ್ಯಾನ್ಮಾರ್‌ನ ವೆಬ್‌ಸೈಟ್‌ myanmar-now.org ಸಾಗಯಿಂಗ್ ಪ್ರದೇಶದ ತಮು ಟೌನ್‌ಶಿಪ್‌ನ ನಿವಾಸಿ 24 ವರ್ಷದ ಆಯೆ ಮರ್ ತುನ್ ಎಂಬಾಕೆಯನ್ನು ಸೇನಾ ಮಾಹಿತಿದಾರಳು ಎಂವ ಶಂಕೆಯ ಮೇಲೆ ಪೀಪಲ್ಸ್ ಡಿಫೆನ್ಸ್ ಫೋರ್ಸ್ (ಪಿಡಿಎಫ್) ಸದಸ್ಯರು ಹತ್ಯೆ ಮಾಡಿದ್ದಾರೆ. ಈ ಸಂಬಂಧ ಅನೇಕ ಪಿಡಿಎಫ್ ಸದಸ್ಯರನ್ನು ಬಂಧಿಸಲಾಗಿದೆ. ಪಿಡಿಎಫ್ ಸದಸ್ಯರು ಯುವತಿಯನ್ನು ಹತ್ಯೆ ಪ್ರಕರಣದಲ್ಲಿ ತಪ್ಪಿತಸ್ಥರೆಂದು ಕಂಡು ಬಂದರೆ ಅವರಿಗೆ ಕಠಿ ಶಿಕ್ಷೆ ವಿಧಿಸುವುದಾಗಿ ಸರ್ಕಾರ ಹೇಳಿದೆ ಎಂದಿತ್ತು.

ನಾವು ನಡೆಸಿದ ಪರಿಶೀಲನೆಯಲ್ಲಿ ಯುವತಿಯ ಹತ್ಯೆ ವಿಡಿಯೋ 2022ರಲ್ಲಿ ಮ್ಯಾನ್ಮಾರ್‌ನಲ್ಲಿ ನಡೆದ ಘಟನೆಯದ್ದು ಎಂದು ತಿಳಿದು ಬಂದಿದೆ. ಮಿಲಿಟರಿ ಮಾಹಿತಿದಾರಳು ಎಂಬ ಶಂಕೆ ಮೇಲೆ ಅಲ್ಲಿನ ಬಂಡುಕೋರರ ಗುಂಪು ಪಿಡಿಎಫ್ ಯುವತಿಯನ್ನು ಹತ್ಯೆ ಮಾಡಿದೆ. ಅಲ್ಲದೆ, ಇದು ಮಣಿಪುರದಲ್ಲಿ ನಡೆದ ಘಟನೆಯಲ್ಲ.

ಇದನ್ನೂ ಓದಿ : FACT CHECK : ಬುಲ್ಡೋಝರ್‌ನಿಂದ ಟೋಲ್ ಪ್ಲಾಝಾ ಧ್ವಂಸಗೈದ ವ್ಯಕ್ತಿ ಮುಸ್ಲಿಂ ಎಂಬುವುದು ಸುಳ್ಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣದಲ್ಲಿ ರೋಹಿತ್ ವೇಮುಲಾ ಕಾಯ್ದೆ ಜಾರಿಗೊಳಿಸುತ್ತೇವೆ: ಭಟ್ಟಿ ವಿಕ್ರಮಾರ್ಕ ಮಲ್ಲು

ರಾಜ್ಯದಲ್ಲಿ ರೋಹಿತ್ ವೇಮುಲಾ ಕಾಯ್ದೆಯನ್ನು ಆದಷ್ಟು ಬೇಗ ಜಾರಿಗೆ ತರಲಾಗುವುದು ಎಂದು ತೆಲಂಗಾಣ ಉಪಮುಖ್ಯಮಂತ್ರಿ ಭಟ್ಟಿ ವಿಕ್ರಮಾರ್ಕ ಮಲ್ಲು ಶನಿವಾರ ಹೇಳಿದ್ದಾರೆ. ಪ್ರಜಾ ಭವನದಲ್ಲಿ ಜಸ್ಟೀಸ್ ಫಾರ್ ರೋಹಿತ್ ವೇಮುಲಾ ಅಭಿಯಾನ ಸಮಿತಿಯ...

88 ಪ್ರಕರಣಗಳಲ್ಲಿ ಪೊಲೀಸರೇ ಶಾಮೀಲು ; ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ : ಸಿಎಂ ಸಿದ್ದರಾಮಯ್ಯ

ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಶನಿವಾರ (ಜ.17) ಪೊಲೀಸ್ ಅಧಿಕಾರಿಗಳ ವಾರ್ಷಿಕ ಸಮ್ಮೇಳನ ಉದ್ಘಾಟಿಸಿದ ನಂತರ ಮಾಧ್ಯಮ ಗೋಷ್ಠಿಯಲ್ಲಿ ಅವರು ಮಾತನಾಡಿದರು. ಪೋಲೀಸ್ ಇಲಾಖೆ ಕೆಲವು...

ಇಂದೋರ್ ಕಲುಷಿತ ನೀರು ದುರಂತ : ಸಂತ್ರಸ್ತ ಕುಟುಂಬಗಳನ್ನು ಭೇಟಿಯಾದ ರಾಹುಲ್ ಗಾಂಧಿ

ಶನಿವಾರ (ಜ.17) ಮಧ್ಯಪ್ರದೇಶದ ಇಂದೋರ್‌ಗೆ ಭೇಟಿ ನೀಡಿದ ಲೋಕಸಭೆಯ ವಿರೋಧ ಪಕ್ಷ ನಾಯಕ ರಾಹುಲ್ ಗಾಂಧಿ, ಇತ್ತೀಚೆಗೆ ಸಂಭವಿಸಿದ ಕಲುಷಿತ ನೀರು ದುರಂತದ ಸಂತ್ರಸ್ತರನ್ನು ಭೇಟಿಯಾದರು. ಕಲುಷಿತ ನೀರು ಕುಡಿದು ವಾಂತಿ ಮತ್ತು...

ಮಹಾರಾಷ್ಟ್ರದಲ್ಲಿ ಬಿಜೆಪಿ-ಎನ್‌ಡಿಎ ಜೊತೆ ಯಾವುದೇ ಮೈತ್ರಿ ಇಲ್ಲ: ಓವೈಸಿ

ಮಹಾರಾಷ್ಟ್ರದಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಅಥವಾ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (ಎನ್‌ಡಿಎ) ಜೊತೆ ಯಾವುದೇ ಮೈತ್ರಿ ಇರುವುದಿಲ್ಲ ಎಂದು ಅಸಾದುದ್ದೀನ್ ಓವೈಸಿ ಹೇಳಿದ್ದಾರೆ. ಭಾರತದ ಅತ್ಯಂತ ಶ್ರೀಮಂತ ರಾಜ್ಯವಾದ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ...

ರೋಹಿತ್ ವೇಮುಲ ಕಾಯ್ದೆ ಘೋಷಣೆಯಲ್ಲ, ಅಗತ್ಯ : ರಾಹುಲ್ ಗಾಂಧಿ

ಹೈದರಾಬಾದ್ ವಿಶ್ವವಿದ್ಯಾಲಯದ ಪಿಎಚ್‌ಡಿ ವಿದ್ಯಾರ್ಥಿ ರೋಹಿತ್ ವೇಮುಲ ಜಾತಿ ತಾರತಮ್ಯಕ್ಕೆ ಬಲಿಯಾಗಿ ಇಂದಿಗೆ (17 ಜನವರಿ 2026) 10 ವರ್ಷಗಳಾಗಿದ್ದು, ಲೋಕಸಭೆಯ ವಿರೋಧಪಕ್ಷದ ನಾಯಕ ರಾಹುಲ್ ಗಾಂಧಿ ರೋಹಿತ್ ಅವರನ್ನು ಸ್ಮರಿಸಿ ಸಾಮಾಜಿಕ...

ದೇವರು-ಹುತಾತ್ಮರ ಹೆಸರಿನಲ್ಲಿ ಪ್ರಮಾಣವಚನ; ಬಿಜೆಪಿ ಕೌನ್ಸಿಲರ್‌ಗಳಿಗೆ ಕೇರಳ ಹೈಕೋರ್ಟ್ ನೋಟಿಸ್

ತಿರುವನಂತಪುರಂ ನಗರಸಭೆಯ ಬಿಜೆಪಿ ಕೌನ್ಸಿಲರ್‌ಗಳು ವಿವಿಧ ದೇವರು, ಹುತಾತ್ಮರು ಮತ್ತು ರಾಜಕೀಯ ಚಳುವಳಿಗಳ ಹೆಸರಿನಲ್ಲಿ ಮಾಡಿದ ಪ್ರಮಾಣವಚನಗಳ ಸಿಂಧುತ್ವವನ್ನು ಪ್ರಶ್ನಿಸಿ ಸಲ್ಲಿಸಲಾದ ರಿಟ್ ಅರ್ಜಿಯ ಕುರಿತು ಕೇರಳ ಹೈಕೋರ್ಟ್ ಗುರುವಾರ ನೋಟಿಸ್ ಜಾರಿ...

ಮಧ್ಯಪ್ರದೇಶ: ಬುಡಕಟ್ಟು ವಿಶ್ವವಿದ್ಯಾಲಯ ಹಾಸ್ಟೆಲ್ ಒಳಗೆ ಅಸ್ಸಾಮಿ ವಿದ್ಯಾರ್ಥಿ ಮೇಲೆ ಗುಂಪು ಹಲ್ಲೆ

ಮಧ್ಯಪ್ರದೇಶದ ಇಂದಿರಾ ಗಾಂಧಿ ರಾಷ್ಟ್ರೀಯ ಬುಡಕಟ್ಟು ವಿಶ್ವವಿದ್ಯಾಲಯದ ಹಾಸ್ಟೆಲ್ ಕೋಣೆಯೊಳಗೆ ಐದು ಜನ ವಿದ್ಯಾರ್ಥಿಗಳ ತಂಡವು ಅಸ್ಸಾಮಿ ವಿದ್ಯಾರ್ಥಿಯ ಮೇಲೆ ಹಲ್ಲೆ ನಡೆಸಿದೆ ಎಂದು ಆರೋಪಿಸಲಾಗಿದೆ. ಗುಂಪು ಆತನಿಗೆ ಇಲ್ಲಿಯೇ ಸಾಯಬೇಕು ಎಂದು...

ಮಹಿಳೆಯರ ಜೊತೆ ಪುರುಷರಿಗೂ ಉಚಿತ ಬಸ್‌ ಪ್ರಯಾಣ, ಗ್ರಾಮೀಣರಿಗೆ 150 ಕೂಲಿ ದಿನ : ಎಐಎಡಿಎಂಕೆ ಚುನಾವಣಾ ಭರವಸೆ

ಮುಂಬರುವ ತಮಿಳುನಾಡು ವಿಧಾನಸಭಾ ಚುನಾವಣೆಗೆ ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿ ಎಡಪ್ಪಾಡಿ ಕೆ ಪಳನಿಸ್ವಾಮಿ ಶನಿವಾರ (ಜ.17) ಪಕ್ಷದ ಮೊದಲ ಹಂತದ ಪ್ರಣಾಳಿಕೆ (ಚುನಾವಣಾ ಭರವಸೆ) ಬಿಡುಗಡೆ ಮಾಡಿದ್ದಾರೆ. ಕರ್ನಾಟಕದ ಗೃಹಲಕ್ಷ್ಮಿ ಯೋಜನೆಯಂತೆ ಎಲ್ಲಾ ಪಡಿತರ...

ಛತ್ತೀಸ್‌ಗಢ| ಬಿಜಾಪುರದಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಇಬ್ಬರು ನಕ್ಸಲರು ಸಾವು

ಛತ್ತೀಸ್‌ಗಢದ ಬಿಜಾಪುರ ಜಿಲ್ಲೆಯಲ್ಲಿ ಶನಿವಾರ ಭದ್ರತಾ ಪಡೆಗಳೊಂದಿಗಿನ ಎನ್‌ಕೌಂಟರ್‌ನಲ್ಲಿ ಕನಿಷ್ಠ ಇಬ್ಬರು ನಕ್ಸಲರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಜಿಲ್ಲೆಯ ವಾಯುವ್ಯ ಪ್ರದೇಶದ ಅರಣ್ಯ ಬೆಟ್ಟಗಳಲ್ಲಿ ಶನಿವಾರ ಬೆಳಿಗ್ಗೆ ಗುಂಡಿನ ಚಕಮಕಿ ನಡೆಯಿತು. ಹಿರಿಯ...

ಮಮತಾ ಬ್ಯಾನರ್ಜಿ ವಿರುದ್ಧ 100 ಕೋಟಿ ರೂ. ಮಾನನಷ್ಟ ಮೊಕದ್ದಮೆ ಹೂಡಿದ ಸುವೇಂದು ಅಧಿಕಾರಿ

ಪಶ್ಚಿಮ ಬಂಗಾಳದ ವಿರೋಧ ಪಕ್ಷದ ನಾಯಕ ಸುವೇಂದು ಅಧಿಕಾರಿ ಶುಕ್ರವಾರ (ಜ.16) ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಿರುದ್ಧ ಕಲ್ಲಿದ್ದಲು ಹಗರಣಕ್ಕೆ ಸಂಬಂಧಿಸಿದಂತೆ 100 ಕೋಟಿ ರೂ.ಗಳ ಪರಿಹಾರ ಕೋರಿ ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ. ಮಮತಾ...