Homeಫ್ಯಾಕ್ಟ್‌ಚೆಕ್FACT CHECK : ಶಾಲಾ ಮಕ್ಕಳು ಕೇಬಲ್ ಕಾರ್ ಬಳಸಿ ನದಿ ದಾಟುವ ವಿಡಿಯೋ ಭಾರತದ್ದಲ್ಲ

FACT CHECK : ಶಾಲಾ ಮಕ್ಕಳು ಕೇಬಲ್ ಕಾರ್ ಬಳಸಿ ನದಿ ದಾಟುವ ವಿಡಿಯೋ ಭಾರತದ್ದಲ್ಲ

- Advertisement -
- Advertisement -

ಭಾರತದ ವಿವಿಧ ಭಾಗಗಳಲ್ಲಿ ಭಾರೀ ಮಳೆಯಿಂದಾಗಿ, ಅನಿರೀಕ್ಷಿತ ಪ್ರವಾಹಗಳು ಸಂಭವಿಸಿವೆ. ಅನೇಕ ಜನರು ತಮ್ಮ  ಗ್ರಾಮ ಮತ್ತು ಮನೆಗಳನ್ನು ತೊರೆದು ಕಾಳಜಿ ಕೇಂದ್ರವನ್ನು ಆಶ್ರಯಿಸಿದ್ದಾರೆ. ಇತ್ತ ಸಾಮಾಜಿಕ ಮಾಧ್ಯಮಗಳಲ್ಲಿ ವಿಡಿಯೋವೊಂದನ್ನು ಹಂಚಿಕೊಂಡಿದ್ದು ಶಾಲಾ ಸಮವಸ್ತ್ರ ಧರಿಸಿ ಮಕ್ಕಳು ತಮ್ಮ ಜೀವವನ್ನು ಲೆಕ್ಕಿಸದೆ ಕೇಬಲ್ ಸಹಾಯದಿಂದ ನದಿ ದಾಟುತ್ತಿರುವುದನ್ನು ಕಾಣಬಹುದು.

 

ತಮ್ಮ ಜೀವವನ್ನು ಲೆಕ್ಕಿಸದೆ ಪುಲ್ಲಿ ಕೇಬಲ್ ಬಳಸಿ ನದಿ ದಾಟುತ್ತಿರುವ ವಿಡಿಯೋ ವೈರಲ್ ಆಗಿದೆ. ಮಕ್ಕಳು ಕೇಬಲ್ ದಾಟುತ್ತಿರುವಾಗ ಕೆಳಗೆ ನದಿಯು ರಭಸವಾಗಿ ಹರಿಯುತ್ತಿರುವುದನ್ನು ನಾವು ವಿಡಿಯೋದಲ್ಲಿ ಕಾಣಬಹುದು. ‘‘ಸರ್ಕಾರ ಧಾರ್ಮಿಕ ಯಾತ್ರೆಗಳತ್ತ ಗಮನ ಹರಿಸುವುದನ್ನು ಬಿಟ್ಟು. ಈ ಶಾಲೆಯ ವಿದ್ಯಾರ್ಥಿಗಳಿಗೆ ಉತ್ತಮ ರಸ್ತೆ, ಮೂಲ ಸೌಕರ್ಯಗಳನ್ನು ಕಲ್ಪಿಸಲು  ಪ್ರಯತ್ನ ಪಡಬೇಕು ಎಂದು ಪೋಸ್ಟ್‌ನಲ್ಲಿ ಬರೆಯಲಾಗಿದೆ. ಹಾಗಿದ್ದರೆ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆ ನಿಜವೇ ಎಂದು ಪರಿಶೀಲಿಸೊಣ.

ಫ್ಯಾಕ್ಟ್‌ಚೆಕ್ : ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾದ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆಯನ್ನು ಪರಿಶೀಲಿಸಲು ಗೂಗಲ್ ರಿವರ್ಸ್ ಇಮೇಜಸ್‌ನಲ್ಲಿ ಸರ್ಚ್ ಮಾಡಿದಾಗ, ವೈರಲ್‌ಆದ  ವಿಡಿಯೋ ಭಾರತ ದೇಶಕ್ಕೆ ಸಂಬಂಧಿಸಿದ್ದಲ್ಲ, ಈ  ವಿಡಿಯೋ ನೇಪಾಳದ್ದು ಎಂಬ ಮಾಹಿತಿ ಲಭ್ಯವಾಗಿದೆ.

 

ಇನ್‌ಸ್ಟಾಗ್ರಾಮ್‌ ಖಾತೆದಾರರು ತಮ್ಮ ಖಾತೆಯಲ್ಲಿ “The Daily struggle of Nepal Students” ಎಂಬ ಶೀರ್ಷಿಕೆಯೊಂದಿಗೆ ಇನ್‌ಸ್ಟಾಗ್ರಾಮ್‌ ನಲ್ಲಿ ವಿಡಿಯೋವನ್ನು ಪೋಸ್ಟ್‌ ಮಾಡಿದ್ದಾರೆ.

ಫ್ರೀ ಡಾಕ್ಯುಮೆಂಟರಿ ಎಂಬ ಫೇಸ್‌ಬುಕ್ ಪೇಜ್‌ನಲ್ಲಿ “most Dangerous ways of School I Nepal I Free Documentary” ಎಂಬ ಶೀರ್ಷಿಕೆಯೊಂದಿಗಿರುವ ವಿಡಿಯೋವೊಂದು ಲಭ್ಯವಾಗಿದ್ದು, ಇದು ನೇಪಾಳದ ಶಾಲಾ ವಿದ್ಯಾರ್ಥಿಗಳು ಎದುರಿಸುತ್ತಿರುವ ಕಷ್ಟ ಎಂದು ವಿಡಿಯೋವಿನಲ್ಲಿ ಹೇಳಲಾಗಿದೆ. ವಿಡಿಯೋಗೆ ನೀಡಿರುವ ಡಿಸ್ಕ್ರಿಪ್ಷನ್‌ನಲ್ಲಿ ಕುಂಪೂರದ ಪರ್ವತ ಗ್ರಾಮದಲ್ಲಿರುವ ಶಾಲಾ ಮಕ್ಕಳು ಶಾಲೆಗೆ ಹೋಗಲು ವಿದ್ಯಾರ್ಥಿಗಳು ಬೆಟ್ಟ ಗುಡ್ಡಗಳನ್ನು ದಾಟಿ ನಡೆದುಕೊಂಡು ಹೋಗಬೇಕು ಎಂದಿದೆ.

ಮಕ್ಕಳ ಕುಟುಂಬದವರು ಪ್ರತಿ ನಿತ್ಯ ಭಯದಿಂದಲೇ ಮಕ್ಕಳನ್ನು ಶಾಲೆಗೆ ಕಳುಹಿಸುತ್ತಿದ್ದಾರೆ. ತಮ್ಮ ಮಕ್ಕಳನ್ನು ಒಂದು ದಿನ ಬಿಟ್ಟು ಮತ್ತೊಂದು ದಿನ ಶಾಲೆಗೆ ಕಳುಹಿಸುತ್ತಾರೆ ಎಂದು ಬರೆಯಲಾಗಿದೆ. ನಾವು IMDb ಪೇಜ್‌ನಲ್ಲೂ ಈ ಸುದ್ದಿಗೆ ಸಂಬಂಧಿಸಿದ ವಿಡಯೋವೊಂದು ಕಂಡುಕೊಂಡಿದ್ದು,ಈ ವಿಡಿಯೋವಿಗೆ “The Most Dangerous Ways to School” ಎಂಬ ಸಾಕ್ಷ್ಯಚಿತ್ರ ಸರಣಿಯಲ್ಲಿರುವ ಒಂದು ಸಂಚಿಕೆಯಲ್ಲಿ ಈ ಸುದ್ದಿಯ ಕುರಿತು ನೋಡಬಹುದು. ಮೇ 2024ರಲ್ಲಿ ಕೇರಳದ ಶಾಲಾ ವಿದ್ಯಾರ್ಥಿಗಳ ದುಸ್ಥಿತಿಯಿದು ಎಂದು ವೈರಲ್‌ ಆದ ಸುದ್ದಿಯನ್ನು ಹಲವಾರು ಫ್ಯಾಕ್ಟ್‌ಚೆಕ್‌ ಸಂಸ್ಥೆಗಳು ವೈರಲ್‌ ಸುದ್ದಿ ನಿಜವಲ್ಲ ಎಂದು ವರದಿ ಮಾಡಿವೆ.

ಒಟ್ಟಾರೆಯಾಗಿ ಹೇಳುವುದಾದರೆ, ನೇಪಾಳದ ಶಾಲಾ ವಿದ್ಯಾರ್ಥಿಗಳು ಕೇಬಲ್ ಕಾರ್ ಸೇತುವೆಯನ್ನು ಬಳಸಿ ನದಿ ದಾಟುತ್ತಿರುವ ದೃಶ್ಯವನ್ನು ಭಾರತದ್ದು ಎಂದು ತಪ್ಪಾಗಿ ಹಂಚಿಕೊಳ್ಳಲಾಗಿದೆ.

ಇದನ್ನೂ ಓದಿ : FACT CHECK : ಇಂಗ್ಲೆಂಡ್ ಪೊಲೀಸರು ಮುಸ್ಲಿಮರ ಕಾಲಿಗೆ ಬಿದ್ದು ನಮಸ್ಕರಿಸಿದ್ದಾರೆ ಎಂಬುವುದು ಸುಳ್ಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಫ್ರಾನ್ಸ್‌ನಲ್ಲಿ ಭುಗಿಲೆದ್ದ ಜನಾಕ್ರೋಶ: ಬೆಲೆ ಏರಿಕೆ ಹಾಗೂ ಸಾರ್ವಜನಿಕ ಸೇವೆಗಳ ಕಡಿತ ವಿರೋಧಿಸಿ ಬೃಹತ್ ಪ್ರತಿಭಟನೆ; ಹಿಂಸಾಚಾರದಲ್ಲಿ 1,800ಕ್ಕೂ ಅಧಿಕ ಮಂದಿ ವಶ!

ಜೀವನ ವೆಚ್ಚದ ಭಾರಿ ಏರಿಕೆ, ಕುಸಿದುಬೀಳುತ್ತಿರುವ ಶಾಲಾ-ಕಾಲೇಜುಗಳ ಮೂಲಸೌಕರ್ಯ ಹಾಗೂ ಸಾರ್ವಜನಿಕ ಸೇವೆಗಳ ಕಡಿತವನ್ನು ಖಂಡಿಸಿ ಫ್ರಾನ್ಸ್‌ನಾದ್ಯಂತ ಶನಿವಾರ ಲಕ್ಷಾಂತರ ಜನರು ರಸ್ತೆಗಿಳಿದು ನಡೆಸಿದ ಬೃಹತ್ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. ವಿದ್ಯಾರ್ಥಿ...

ಪ.ಬಂಗಾಳ : ದುರ್ಗಾ ಪೂಜೆಗಳಲ್ಲಿ ಎಡಪಕ್ಷಗಳ ಪುಸ್ತಕ ಮಳಿಗೆಗಳ ಮೇಲೆ ದಾಳಿ

ಶನಿವಾರ (ಅಕ್ಟೋಬರ್ 17) ಸಂಜೆ ಕೋಲ್ಕತ್ತಾ ಮುನ್ಸಿಪಲ್ ಕಾರ್ಪೊರೇಶನ್‌ನ (ಕೆಎಂಸಿ) ತಂಡವೊಂದು ನಾಲ್ಕು ದಿನಗಳ ಹಿಂದೆ ಜಾದವ್‌ಪುರದಲ್ಲಿ ಸ್ಥಾಪಿಸಲಾಗಿದ್ದ ಪುಸ್ತಕ ಮಳಿಗೆಯನ್ನು ಧ್ವಂಸಗೊಳಿಸಲು ಆಗಮಿಸಿದಾಗ, ಕೇಂದ್ರ ಸಶಸ್ತ್ರ ಪಡೆಗಳು ಮತ್ತು ಪೊಲೀಸರು ಆ...

ಎಸ್‌ಐಆರ್ ಗೊಂದಲ: ರದ್ದಾಗಿರುವ ಮತದಾರರನ್ನು ಮರಳಿ ಸೇರಿಸಲು ‘ಫಾರ್ಮ್ 6’ ತಿದ್ದುಪಡಿಗೆ ಮಹಾರಾಷ್ಟ್ರ ಪ್ರಸ್ತಾಪ; ಜೈಲು ಶಿಕ್ಷೆಯ ಭೀತಿಯಲ್ಲಿ ಜನರು!

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ವೇಳೆ ಹೆಸರು ರದ್ದಾಗಿರುವ ಹಳೆಯ ಮತದಾರರನ್ನು ಮರಳಿ ಪಟ್ಟಿಗೆ ಸೇರ್ಪಡೆಗೊಳಿಸುವ ಪ್ರಕ್ರಿಯೆಯಲ್ಲಿ ಭಾರಿ ಆಡಳಿತಾತ್ಮಕ ಮತ್ತು ಕಾನೂನು ತೊಡಕು ಎದುರಾಗಿದೆ. ಎಸ್‌ಐಆರ್ ಪರಿಷ್ಕರಣೆಯಲ್ಲಿ...

ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹ : ಬೆಂಗಳೂರಿನ ಟೌನ್‌ಹಾಲ್ ಬಳಿ ಪ್ರತಿಭಟಿಸಿದವರ ಬಂಧನ, ಬಿಡುಗಡೆ

ಶನಿವಾರ (ಅಕ್ಟೋಬರ್ 17) ಬೆಂಗಳೂರಿನ ಟೌನ್ ಹಾಲ್ ಬಳಿ ಮತದಾರರ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ' (ಎಸ್‌ಐಆರ್) ಪ್ರಕ್ರಿಯೆಯ ವಿರುದ್ಧ ಪ್ರತಿಭಟನೆ ನಡೆಸಿದ ಹಾಗೂ ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರ...

ಆಂಧ್ರದಲ್ಲಿ ಮುಂದುವರಿದ ಟಿಡಿಪಿ-ವೈಎಸ್‌ಆರ್‌ಸಿಪಿ ಸಂಘರ್ಷ : ಪರಿಸ್ಥಿತಿ ಹತೋಟಿಗೆ ತರಲು ಗಾಳಿಯಲ್ಲಿ ಗುಂಡು ಹಾರಿಸಿದ ಕಡಪಾ ಪೊಲೀಸರು

ಸ್ಥಳೀಯ ಸಂಸ್ಥೆಗಳ ಚುನಾವಣೆಯ ನಾಮಪತ್ರ ಸಲ್ಲಿಕೆಯ ಎರಡನೇ ದಿನವಾದ ಶನಿವಾರ (ಅಕ್ಟೋಬರ್ 17) ಆಂಧ್ರ ಪ್ರದೇಶದಲ್ಲಿ ರಾಜಕೀಯ ಸಂಘರ್ಷಗಳು ಮುಂದುವರಿದಿವೆ. ವೈಎಸ್ಆರ್ ಕಾಂಗ್ರೆಸ್ ಪಕ್ಷದ (ವೈಎಸ್ಆರ್‌ಸಿಪಿ) ಭದ್ರಕೋಟೆಯಾಗಿರುವ ವೈಎಸ್ಆರ್ ಕಡಪ ಜಿಲ್ಲೆಯ ಪುಲಿವೆಂದುಲದಲ್ಲಿ...

ಮಧ್ಯಪ್ರದೇಶ: ದೇವಸ್ಥಾನದ ಬಳಿ ಭಕ್ತರ ಮೇಲೆ ಹರಿದ ಲಾರಿ; 14 ಸಾವು, ಹಲವರಿಗೆ ಗಂಭೀರ ಗಾಯ

ಗ್ವಾಲಿಯರ್: ಮಧ್ಯಪ್ರದೇಶದ ಗ್ವಾಲಿಯರ್‌ನಲ್ಲಿರುವ ಶೀತಲಾ ಮಾತಾ ದೇವಸ್ಥಾನದ ಬಳಿ ನವರಾತ್ರಿ ಉತ್ಸವದ ಸಂಭ್ರಮದಲ್ಲಿದ್ದ ಭಕ್ತಾದಿಗಳ ಮೇಲೆ ಅತಿವೇಗವಾಗಿ ಬಂದ ಲಾರಿಯೊಂದು ನುಗ್ಗಿದ ಪರಿಣಾಮ ಕನಿಷ್ಠ 14 ಜನರು ದಾರುಣವಾಗಿ ಮೃತಪಟ್ಟು, ಹಲವರು ಗಂಭೀರವಾಗಿ ಗಾಯಗೊಂಡಿರುವ...

ಕೋಲ್ಕತ್ತಾ ದುರ್ಗಾ ಪೂಜೆ ಪೆಂಡಾಲ್‌ನಲ್ಲಿ ಕಾಲ್ತುಳಿತ : ಮೃತರ ಸಂಖ್ಯೆ 19ಕ್ಕೆ ಏರಿಕೆ; ಏಳು ಮಂದಿಯ ಬಂಧನ

ಕೋಲ್ಕತ್ತಾದ ಸಮುದಾಯ ದುರ್ಗಾ ಪೂಜಾ ಪೆಂಡಾಲ್‌ನಲ್ಲಿ ಶನಿವಾರ (ಅ.17) ಸಂಜೆ ಸಂಭವಿಸಿದ ಕಾಲ್ತುಳಿತ ಘಟನೆಯಲ್ಲಿ ಸಾವನ್ನಪ್ಪಿದವರ ಸಂಖ್ಯೆ 19ಕ್ಕೆ ಏರಿಕೆಯಾಗಿದೆ. ಸುಮಾರು 25 ಮಂದಿ ಗಾಯಗೊಂಡಿದ್ದು, ಕೋಲ್ಕತ್ತಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ...

ಯುಎಪಿಎ ಕಾಯಿದೆಯಡಿ ಆರೋಪ ಹೊರಿಸಿದ ಮಾತ್ರಕ್ಕೆ ವಿದೇಶ ಪ್ರಯಾಣದ ಹಕ್ಕು ಕಸಿಯಲಾಗದು: ನತಾಶಾ ನರ್ವಾಲ್‌ಗೆ ದೆಹಲಿ ಹೈಕೋರ್ಟ್ ಅಭಯ

ಒಬ್ಬ ವ್ಯಕ್ತಿಯ ವಿರುದ್ಧ ‘ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯಿದೆ’ (UAPA) ಯಂತಹ ಕಠಿಣ ಕಾಯಿದೆಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂಬ ಒಂದೇ ಕಾರಣಕ್ಕೆ, ಅವರ ವಿದೇಶ ಪ್ರಯಾಣದ ಮೂಲಭೂತ ಹಕ್ಕನ್ನು ಸಂಪೂರ್ಣವಾಗಿ ಕಸಿದುಕೊಳ್ಳಲು...

ದೆಹಲಿ | ತಿರಂಗಾ ರ‍್ಯಾಲಿ ವೇಳೆ ಬಂಧಿತರಾಗಿದ್ದ ಅಭಿಜಿತ್ ದೀಪ್ಕೆಗೆ ‍‍ಜಾಮೀನು : ಪೊಲೀಸ್ ಕಸ್ಟಡಿಯಿಂದ ಬಿಡುಗಡೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರಿಗೆ ಶನಿವಾರ (ಅಕ್ಟೋಬರ್ 17) ಷರತ್ತುಬದ್ಧ ಜಾಮೀನು ಮಂಜೂರು ಮಾಡಲಾಗಿದ್ದು, ದೆಹಲಿಯ ಮಂದಿರ್ ಮಾರ್ಗ್ ಠಾಣೆ ಪೊಲೀಸರ ಕಸ್ಟಡಿಯಿಂದ ಬಿಡುಗಡೆಯಾಗಿದ್ದಾರೆ ಎಂದು...

ಮಕ್ಕಳು ಸೇರಿದಂತೆ ಪ್ರತಿಯೊಬ್ಬರಿಗೂ ಇಂಟರ್‌ನೆಟ್ ಬಳಕೆ ಮೂಲಭೂತ ಹಕ್ಕು : ಸುಪ್ರೀಂ ಕೋರ್ಟ್

ಮಹತ್ವದ ತೀರ್ಪಿನಲ್ಲಿ, ಸಂವಿಧಾನದ 21 ಮತ್ತು 19(1)(ಎ) ವಿಧಿಗಳ ಅಡಿಯಲ್ಲಿ ಇಂಟರ್‌ನೆಟ್ ಪಡೆಯುವ ಮತ್ತು ಬಳಸುವ ಹಕ್ಕನ್ನು ಸುಪ್ರೀಂ ಕೋರ್ಟ್ 'ಮೂಲಭೂತ ಹಕ್ಕು' ಎಂದು ಘೋಷಿಸಿದೆ. ಮಕ್ಕಳು ಸೇರಿದಂತೆ ಪ್ರತಿಯೊಬ್ಬ ವ್ಯಕ್ತಿಗೂ ಈ...