Homeಫ್ಯಾಕ್ಟ್‌ಚೆಕ್FACT CHECK : ಗಾಂಧಿ ಕುಟುಂಬದ ಜೊತೆಗಿರುವ ಮಹಿಳೆ ಕಂಗನಾಗೆ ಕಪಾಳಮೋಕ್ಷ ಮಾಡಿದ ಸಿಐಎಸ್‌ಎಫ್‌ ಸಿಬ್ಬಂದಿ...

FACT CHECK : ಗಾಂಧಿ ಕುಟುಂಬದ ಜೊತೆಗಿರುವ ಮಹಿಳೆ ಕಂಗನಾಗೆ ಕಪಾಳಮೋಕ್ಷ ಮಾಡಿದ ಸಿಐಎಸ್‌ಎಫ್‌ ಸಿಬ್ಬಂದಿ ಅಲ್ಲ

- Advertisement -
- Advertisement -

ನಟಿ, ಸಂಸದೆ ಕಂಗನಾ ರಣಾವತ್‌ಗೆ ಕೇಂದ್ರ ಕೈಗಾರಿಕಾ ಭದ್ರತಾ ಪಡೆ (ಸಿಐಎಸ್‌ಎಫ್‌) ಸಿಬ್ಬಂದಿ ವಿಮಾನ ನಿಲ್ದಾಣದಲ್ಲಿ ಕಪಾಳಮೋಕ್ಷ ಮಾಡಿದ ಆರೋಪ ಜೂನ್ 7, 2024ರಂದು ಕೇಳಿ ಬಂದಿತ್ತು.

ಹಿಮಾಚಲ ಪ್ರದೇಶದ ಮಂಡಿ ಲೋಕಸಭೆ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸಿದ್ದ ಕಂಗನಾ ಜೂನ್ 4ರಂದು ಹೊರಬಿದ್ದ ಫಲಿತಾಂಶದಲ್ಲಿ ಜಯಗಳಿಸಿದ್ದರು. ಈ ಬೆನ್ನಲ್ಲೇ ಕಂಗನಾ ಮೇಲೆ ಕಪಾಳಮೋಕ್ಷ ನಡೆದಿದೆ ಎನ್ನುವುದು ದೇಶದಾದ್ಯಂತ ದೊಡ್ಡ ಮಟ್ಟದಲ್ಲಿ ಸುದ್ದಿಯಾಗಿತ್ತು.

ಕಂಗನಾಗೆ ಕಪಾಳಮೋಕ್ಷ ಮಾಡಿದ್ದಾರೆ ಎನ್ನಲಾದ ಸಿಐಎಸ್‌ಎಫ್‌ ಸಿಬ್ಬಂದಿಯ ಹೆಸರು ಕುಲ್ವಿಂದರ್ ಕೌರ್ ಎಂದು ತಿಳಿದು ಬಂದಿದೆ. ಈಕೆಯ ತಾಯಿಯೂ ಪಾಲ್ಗೊಂಡಿದ್ದ ರೈತ ಹೋರಾಟದ ಕುರಿತು ಕೀಳು ಮಟ್ಟದ ಹೇಳಿಕೆ ನೀಡಿದ್ದಕ್ಕೆ ಕಂಗನಾಗೆ ಕಪಾಳಮೋಕ್ಷ ಮಾಡಿದ್ದಾರೆ ಎಂದು ವರದಿಯಾಗಿದೆ.

ಕಪಾಳಮೋಕ್ಷ ಆರೋಪ ಕೇಳಿ ಬಂದ ಬಳಿಕ ಕುಲ್ವಿಂದರ್ ಕೌರ್ ಅವರನ್ನು ಖಲಿಸ್ತಾನಿ, ಭಯೋತ್ಪಾದಕಿ ಎಂದೆಲ್ಲ ಬಿಂಬಿಸುವ ಪ್ರಯತ್ನಗಳು ನಡೆದಿವೆ.

ಇತ್ತೀಚೆಗೆ ಗಾಂಧಿ ಕುಟುಂಬ (ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ)ದ ಜೊತೆ ಮಹಿಳೆಯೊಬ್ಬರು ನಿಂತಿರುವ ಫೋಟೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಆ ಮಹಿಳೆ ಕಂಗನಾ ರಣಾವತ್‌ಗೆ ಕಪಾಳಮೋಕ್ಷ ಮಾಡಿದ ಕುಲ್ವಿಂದರ್ ಕೌರ್ ಎಂದು ಸುದ್ದಿ ಹಬ್ಬಿದೆ.

ಫ್ಯಾಕ್ಟ್‌ಚೆಕ್ : ಕಂಗನಾಗೆ ಕಪಾಳಮೋಕ್ಷ ಮಾಡಿದ್ದಾರೆ ಎನ್ನಲಾದ ಕುಲ್ವಿಂದರ್ ಕೌರ್ ಗಾಂಧಿ ಕುಟುಂಬ ಆಪ್ತೆ ಎಂಬ ರೀತಿಯಲ್ಲಿ ಸುದ್ದಿ ಹಬ್ಬಿರುವ ಹಿನ್ನೆಲೆ, ವೈರಲ್ ಫೋಟೋದ ಸತ್ಯಾಸತ್ಯತೆಯನ್ನು ನಾವು ಪರಿಶೀಲಿಸಿದ್ದೇವೆ.

ಕಂಗನಾಗೆ ಕಪಾಳಮೋಕ್ಷ ಮಾಡಿದ ಆರೋಪ ಕೇಳಿ ಬಂದಾಗ ವೈರಲ್ ಆದ ಕುಲ್ವಿಂದರ್ ಕೌರ್ ಅವರ ಫೋಟೋ ಮತ್ತು ಗಾಂಧಿ ಕುಟುಂಬದ ಜೊತೆ ನಿಂತಿರುವ ಮಹಿಳೆಯ ಫೋಟೋಗಳನ್ನು ನಾವು ಹೋಲಿಕೆ ಮಾಡಿ ನೋಡಿದ್ದು, ಎರಡೂ ಫೋಟೋಗಳ ನಡುವೆ ವ್ಯತ್ಯಾಸ ಕಂಡು ಬಂದಿದೆ.

ಗಾಂಧಿ ಕುಟುಂಬದ ಜೊತೆ ಮಹಿಳೆ ನಿಂತಿರುವ ಫೋಟೋವನ್ನು ನಾವು ಗೂಗಲ್ ರಿವರ್ಸ್ ಇಮೇಜ್‌ನಲ್ಲಿ ಸರ್ಚ್‌ ಮಾಡಿ ನೋಡಿದಾಗ, “ಫೆಬ್ರವರಿ 14,2024 ರಂದು ಮಾಜಿ ಕಾಂಗ್ರೆಸ್ ಶಾಸಕಿ ದಿವ್ಯಾ ಮಹಿಪಾಲ್ ಮಡೆರ್ನಾ ಅವರ ಅಧಿಕೃತ ಫೇಸ್‌ಬುಕ್ ಪುಟದಲ್ಲಿ ಈ ಪೋಟೋ ಕಂಡು ಬಂದಿದೆ.

ಫೋಟೋದಲ್ಲಿ ಜೊತೆಗಿ ಬಂದಿರುವ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿಯವರನ್ನು ಸ್ವಾಗತಿಸಲಾಯಿತು ಎಂದು ಬರೆಯಲಾಗಿದೆ.

ಈ ಮೂಲಕ ಗಾಂಧಿ ಕುಟುಂಬದ ಜೊತೆಗೆ ನಿಂತಿರುವ ಮಹಿಳೆ ಕಂಗನಾಗೆ ಕಪಾಳಮೋಕ್ಷ ಮಾಡಿರುವ ಕುಲ್ವಿಂದರ್ ಕೌರ್ ಅಲ್ಲ, ಮಾಜಿ ಕಾಂಗ್ರೆಸ್ ಶಾಸಕಿ ದಿವ್ಯಾ ಮಹಿಪಾಲ್ ಮಡೆರ್ನಾ. ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಸುದ್ದಿ ಸುಳ್ಳು ಎಂದು ಗೊತ್ತಾಗಿದೆ.

ಇದನ್ನೂ ಓದಿ : FACT CHECK : ರಸ್ತೆ ಮಧ್ಯೆ ಯುವತಿಯನ್ನು ಗುಂಡಿಕ್ಕಿ ಕೊಂದಿರುವ ವಿಡಿಯೋ ಮಣಿಪುರದ್ದಲ್ಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಸಹಪಾಠಿಗಳ ಜಾತಿ, ಪ್ರವೇಶದ ವರ್ಗ, ರ‍್ಯಾಂಕ್ ಕೇಳಬೇಡಿ: ದರ್ಶನ್, ಸಾಹಿಲ್ ಸಾವುಗಳ ಬೆನ್ನಲ್ಲೇ ತಾರತಮ್ಯ ವಿರೋಧಿ ನಿಯಮ ನೆನಪಿಸಿದ ಐಐಟಿ ಬಾಂಬೆ

ಮುಂಬೈ: ಸಹಪಾಠಿಗಳ ಜಾತಿ, ಪ್ರವೇಶದ ವರ್ಗ ಅಥವಾ ಪ್ರವೇಶ ಪರೀಕ್ಷೆಯ ರ‍್ಯಾಂಕ್‌ಗಳ ಬಗ್ಗೆ ಪ್ರಶ್ನಿಸುವುದು ತಾರತಮ್ಯಕ್ಕೆ ಕಾರಣವಾಗಬಹುದು. ಇಂತಹ ಪ್ರಶ್ನೆಗಳನ್ನು ಕೇಳಬಾರದು ಎಂದು ಭಾರತೀಯ ತಂತ್ರಜ್ಞಾನ ಸಂಸ್ಥೆ (ಐಐಟಿ) ಬಾಂಬೆ ತನ್ನ ವಿದ್ಯಾರ್ಥಿಗಳಿಗೆ...

ಲೈಂಗಿಕ ಕಿರುಕುಳದ ಆರೋಪ ಮಾಡಿದ ಪತ್ರಕರ್ತೆಯ ವಿರುದ್ಧ ಜಾತಿ ನಿಂದನೆ ಪ್ರಕರಣ: ಬಲವಂತದ ಕ್ರಮ ಕೈಗೊಳ್ಳದಂತೆ ಸುಪ್ರೀಂ ಕೋರ್ಟ್ ಆದೇಶ

ನವದೆಹಲಿ: ದೆಹಲಿಯಲ್ಲಿ ನಡೆಯುತ್ತಿದ್ದ ಪ್ರತಿಭಟನೆಗಳನ್ನು ವರದಿ ಮಾಡುವಾಗ ಸಹಾಯಕ ಪೊಲೀಸ್ ಆಯುಕ್ತ (ಎಸಿಪಿ) ವಿವೇಕ್ ಭಗತ್ ಅವರು ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ ದೂರು ನೀಡಿದ್ದ ಮಹಿಳಾ ಪತ್ರಕರ್ತೆಯ ವಿರುದ್ಧ ದಾಖಲಾಗಿರುವ...

ಸಿಇಸಿ ವಿರೋಧಿ ಪ್ರತಿಭಟನೆ: ಮೆಟ್ರೋ ನಿರ್ಬಂಧ, ಇಂಟರ್ನೆಟ್ ಸ್ಥಗಿತ ಪ್ರಕರಣ: ಸುಪ್ರೀಂ ಕೋರ್ಟ್ ಗೆ ಬೇಷರತ್ ಕ್ಷಮೆಯಾಚಿಸಿದ ಕೇಂದ್ರ ಕಾರ್ಯದರ್ಶಿ

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಒತ್ತಾಯಿಸಿ ಅಕ್ಟೋಬರ್ 10ರಂದು ದೆಹಲಿಯಲ್ಲಿ ನಡೆದ ಪ್ರತಿಭಟನೆಯ ಹಿನ್ನೆಲೆಯಲ್ಲಿ ಮೆಟ್ರೋ ಮತ್ತು ರೈಲು ಸೇವೆಗಳ ಮೇಲೆ ನಿರ್ಬಂಧ ವಿಧಿಸಿದ ಹಾಗೂ ಇಂಟರ್ನೆಟ್...

‘ಯಾರೂ ನಮ್ಮನ್ನು ಬೆದರಿಸಿ ಮಣಿಸಲು ಸಾಧ್ಯವಿಲ್ಲ’: ವಿಪಕ್ಷಗಳ ಸುಪ್ರೀಂ ಕೋರ್ಟ್ ಮಾರ್ಚ್ ಕುರಿತು ಸಿಜೆಐ ಹೇಳಿಕೆ

ನ್ಯಾಯಾಲಯ ಸಂಕೀರ್ಣಗಳ ಸಮೀಪ ಪ್ರತಿಭಟನೆಗಳು ಮತ್ತು ಮೆರವಣಿಗೆಗಳಿಗೆ ನಿಯಂತ್ರಕ ಚೌಕಟ್ಟೊಂದನ್ನು ರೂಪಿಸುವಂತೆ ಕೋರಿ ಸಲ್ಲಿಸಲಾದ ಅರ್ಜಿಯ ಸಂಬಂಧ ಸುಪ್ರೀಂ ಕೋರ್ಟ್ ಇಂದು (ಅ.15) ನೋಟಿಸ್ ಜಾರಿ ಮಾಡಿದೆ. ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್...

ದೆಹಲಿ ಪ್ರತಿಭಟನೆ ಹಾಗೂ ಜಂತರ್ ಮಂತರ್ ರದ್ದತಿ ವಿವಾದ: ಕೇಂದ್ರ ಸರ್ಕಾರ ಹಾಗೂ ಪೊಲೀಸರಿಗೆ ಸುಪ್ರೀಂ ನೋಟಿಸ್; ವಿಡಿಯೋ ಸಾಕ್ಷ್ಯ ಭದ್ರಪಡಿಸಲು ನಿರ್ದೇಶನ!

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಇತ್ತೀಚೆಗೆ ನಡೆದ ಪ್ರತಿಭಟನೆಗಳ ವೇಳೆ ಪೊಲೀಸರು ನಡೆಸಿದ್ದರೆನ್ನಲಾದ ಅತಿಯಾದ ಬಲಪ್ರಯೋಗ, ಸಾರ್ವಜನಿಕರ ಸಂಚಾರ ನಿರ್ಬಂಧ ಹಾಗೂ ಪ್ರಮುಖ ಪ್ರತಿಭಟನಾ ಸ್ಥಳವಾಗಿದ್ದ 'ಜಂತರ್ ಮಂತರ್' ಅನ್ನು ರದ್ದುಗೊಳಿಸಿದ (De-notification) ಕೇಂದ್ರ...

ಹಿಂದೂ ಧರ್ಮದಿಂದ ಇಸ್ಲಾಂಗೆ ಮತಾಂತರಗೊಂಡವರಿಗೆ ‘ಹಿಂದುಳಿದ ವರ್ಗದ’ ಮೀಸಲಾತಿ ಇಲ್ಲ : ಮದ್ರಾಸ್ ಹೈಕೋರ್ಟ್ ತೀರ್ಪು ಎತ್ತಿಹಿಡಿದ ಸುಪ್ರೀಂ ಕೋರ್ಟ್

ಇಸ್ಲಾಂ ಧರ್ಮಕ್ಕೆ ಮತಾಂತರಗೊಳ್ಳುವ ವ್ಯಕ್ತಿಯು ತನ್ನ ಮತಾಂತರ ಪೂರ್ವದ ಜಾತಿ ಸ್ಥಿತಿಯ ಆಧಾರದ ಮೇಲೆ ಹಿಂದುಳಿದ ವರ್ಗದ (ಬಿಸಿ) ಮೀಸಲಾತಿಗೆ ಅರ್ಹನಲ್ಲ ಎಂದು ತೀರ್ಪು ನೀಡಿದ್ದ ಮದ್ರಾಸ್ ಹೈಕೋರ್ಟ್‌ನ ತೀರ್ಪನ್ನು ಸುಪ್ರೀಂ ಕೋರ್ಟ್...

‘ಎಸ್‌ಐಆರ್’ ವಿರುದ್ಧ ಇಂಡಿಯಾ ನಾಯಕರ ಅರ್ಜಿ: ಸುಪ್ರೀಂ ಕೋರ್ಟ್‌ನಿಂದ ಚುನಾವಣಾ ಆಯೋಗಕ್ಕೆ ನೋಟಿಸ್

ಭಾರತೀಯ ಚುನಾವಣಾ ಆಯೋಗ ದೇಶಾದ್ಯಂತ ಜಾರಿಗೆ ತಂದಿರುವ ಮತದಾರರ ಪಟ್ಟಿಯ ‘ವಿಶೇಷ ತೀವ್ರ ಪರಿಷ್ಕರಣೆ’ (Special Intensive Revision - SIR) ಪ್ರಕ್ರಿಯೆಯ ಕಾನೂನಾತ್ಮಕತೆಯನ್ನು ಪ್ರಶ್ನಿಸಿ ವಿಪಕ್ಷ 'ಇಂಡಿಯಾ' ಒಕ್ಕೂಟ ಸಲ್ಲಿಸಿರುವ ಪ್ರಮುಖ...

ಸಿಇಸಿ ವಿರುದ್ಧದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ನಟ ಇಮ್ರಾನ್ ಖಾನ್‌ಗೆ ಭಾರತ ತೊರೆಯುವಂತೆ ನೋಟಿಸ್: ಅಕ್ಟೋಬರ್ 28ರ ಗಡುವು

ಮುಂಬೈ: ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಒತ್ತಾಯಿಸಿ ಮುಂಬೈನ ಆಗಸ್ಟ್ ಕ್ರಾಂತಿ ಮೈದಾನದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ನಟ ಇಮ್ರಾನ್ ಖಾನ್ ಅವರಿಗೆ ಅಕ್ಟೋಬರ್ 28ರೊಳಗೆ ಭಾರತ ತೊರೆಯುವಂತೆ...

2018ರ ‘ಬಿಜೆಪಿ ಐಟಿ ಸೆಲ್’ ವೀಡಿಯೊ ವಿವಾದ: ಯೂಟ್ಯೂಬರ್ ಧ್ರುವ್ ರಾಠಿಗೆ ಹೊಸ ಸಮನ್ಸ್ ಜಾರಿ ಮಾಡಿದ ದೆಹಲಿ ಕೋರ್ಟ್!

ಡಿಜಿಟಲ್ ಮಾಧ್ಯಮ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆಗೆ ಗ್ರಾಸವಾಗಿದ್ದ 2018ರ ಕ್ರಿಮಿನಲ್ ಮಾನಹಾನಿ ದೂರಿಗೆ (Criminal Defamation Case) ಸಂಬಂಧಿಸಿದಂತೆ, ಪ್ರಸಿದ್ಧ ಯೂಟ್ಯೂಬರ್ ಧ್ರುವ್ ರಾಠಿ ಅವರಿಗೆ ದೆಹಲಿಯ ಸಾಕೇತ್ ನ್ಯಾಯಾಲಯವು ಹೊಸದಾಗಿ...

ಅ.23ರಂದು ದೇಶವ್ಯಾಪಿ ಪ್ರತಿಭಟನೆಗೆ ‘ಪೀಪಲ್ ಅಗೆನ್ಸ್ಟ್ ಎಸ್‌ಐಆರ್’ ಕರೆ : ದೆಹಲಿಯಲ್ಲಿ ಜಂಟಿ ವೇದಿಕೆ ರಚನೆ

ಚುನಾವಣಾ ಪ್ರಜಾಪ್ರಭುತ್ವದ ಸಮಗ್ರತೆಯನ್ನು ಮರುಸ್ಥಾಪಿಸಲು ಮತ್ತು ನಾಗರಿಕರ ಪ್ರಜಾಸತ್ತಾತ್ಮಕ ಹಕ್ಕುಗಳನ್ನು ರಕ್ಷಿಸಲು ರೈತರು, ಕಾರ್ಮಿಕರು, ಮಹಿಳೆಯರು, ಯುವಜನರು, ವಿದ್ಯಾರ್ಥಿಗಳು, ಆದಿವಾಸಿಗಳು, ದಲಿತರು ಮತ್ತು ಅಲ್ಪಸಂಖ್ಯಾತರು ಸೇರಿದಂತೆ ವಿವಿಧ ಜನಪರ ಸಂಘಟನೆಗಳ ಒಕ್ಕೂಟವಾದ ‘ಪೀಪಲ್...