Homeಫ್ಯಾಕ್ಟ್‌ಚೆಕ್FACT CHECK : ಮೋದಿ ಮೇಲಿನ ರಾಜಕೀಯ ದ್ವೇಷಕ್ಕೆ ರೈಲು ಅಪಘಾತಗಳನ್ನು ನಡೆಸಲಾಗ್ತಿದೆ ಎಂಬುವುದಕ್ಕೆ ಆಧಾರವಿಲ್ಲ

FACT CHECK : ಮೋದಿ ಮೇಲಿನ ರಾಜಕೀಯ ದ್ವೇಷಕ್ಕೆ ರೈಲು ಅಪಘಾತಗಳನ್ನು ನಡೆಸಲಾಗ್ತಿದೆ ಎಂಬುವುದಕ್ಕೆ ಆಧಾರವಿಲ್ಲ

- Advertisement -
- Advertisement -

ಪ್ರಧಾನಿ ನರೇಂದ್ರ ಮೋದಿಯವರ ಮೇಲಿನ ರಾಜಕೀಯ ದ್ವೇಷಕ್ಕೆ ರೈಲು ಅಪಘಾತಗಳನ್ನು ಮಾಡಿಸಲಾಗ್ತಿದೆ ಎಂದು ಪ್ರತಿಪಾದಿಸಿ ಪೋಸ್ಟರ್‌ ಒಂದನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳಲಾಗಿದೆ.

“ಎಂಥಾ ನಾಚಿಕೆಗೇಡು!! ನಮೋ ಮೇಲಿನ ಹೊಟ್ಟೆಕಿಚ್ಚಿಗೆ ಆಗ್ತಿದೆ ಹಲವು ರೈಲು ಅಪಘಾತಗಳು!? ಹೌದು, ಭಾರತದಲ್ಲಿ ಆಗಿರೋ ಹಲವು ರೈಲು ಅಪಘಾತಗಳಿಗೆ ಮನುಷ್ಯರೇ ಕಾರಣ ಎನ್ನಲಾಗ್ತಿದೆ. ಎಷ್ಟೋ ಕಡೆ ಬೇಕಂತಲೇ ಹಳಿಗಳ ಮೇಲೆ ಕಲ್ಲುಗಳನ್ನು ಇಡಲಾಗಿದೆ. ಕೆಲವೆಡೆ ಹಳಿಗಳ ಕೊಂಡಿಗಳನ್ನು ಮುರಿಯಲಾಗಿದೆ. ಇನ್ನೂ ಕೆಲವೆಡೆ ಸಿಗ್ನಲ್ ಕಾಣದಂತೆ ಲೈಟ್‌ಗಳಿಗೆ ಬಟ್ಟೆ ಮುಚ್ಚಲಾಗಿದೆ. ಇದು ಕಲ್ಪನೆ ಅಲ್ಲ, ನಿಜವಾಗಿಯೂ ನಡೆದಿರೋದು. ಹಾಗಿದ್ರೆ ಇದಕ್ಕೆಲ್ಲಾ ಯಾರು ಕಾರಣ?” ಎಂದು ಪೋಸ್ಟರ್‌ನಲ್ಲಿ ಬರೆಯಲಾಗಿದೆ.

ಪೋಸ್ಟರ್‌ನಲ್ಲಿ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಫೋಟೋ ಹಾಕಿ ಇತ್ತೀಚೆಗೆ ನಡೆದ ಕಾಂಚನ್‌ಜುಂಗಾ ರೈಲು ಅಪಘಾತವನ್ನು ರಾಜಕೀಯ ಕಾರಣಕ್ಕೆ ಮಮತಾ ಬ್ಯಾನರ್ಜಿ ಅವರೇ ಮಾಡಿಸಿದ್ದಾರೆ ಎಂದು ಪರೋಕ್ಷವಾಗಿ ಬಿಂಬಿಸಲಾಗಿದೆ.

ಇತ್ತೀಚೆಗೆ, ಕೆಲ ವ್ಯಕ್ತಿಗಳು ರೈಲ್ವೆಯ ಸಿಗ್ನಲ್ ಲೈಟ್‌ಗೆ ಬಟ್ಟೆ ಕಟ್ಟುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಅದರ ಸ್ಕ್ರೀನ್ ಹಂಚಿಕೊಂಡಿರುವ ಕೆಲವರು, “ಮೋದಿ ಸರ್ಕಾರಕ್ಕೆ ಕಪ್ಪು ಚುಕ್ಕೆ ತರಲು ಮುಂದಾಗಿರುವ ಈ ಜಿಹಾದಿ ಮನಸ್ಥಿತಿ ಯಾವ ಮಟ್ಟಕ್ಕೆ ತಲುಪಿದೆ ಎಂದರೆ, ರೈಲು ಸಿಗ್ನಲ್ ಕಾಣದಂತೆ ಮಾಡಿ ರೈಲುಗಳ ನಡುವೆ ಆಕ್ಸಿಂಡೆಂಟ್ ಆಗುವಂತೆ ಮಾಡುವ ಕುತಂತ್ರ ಮಾಡಿದ್ದಾರೆ” ಎಂದು ಬರೆಯಲಾಗಿದೆ.

ಫ್ಯಾಕ್ಟ್‌ಚೆಕ್ : ನರೇಂದ್ರ ಮೋದಿಯವರ ಮೇಲಿನ ರಾಜಕೀಯ ದ್ವೇಷಕ್ಕೆ ರೈಲು ಅಪಘಾತಗಳನ್ನು ಮಾಡಿಸಲಾಗಿದೆ ಎಂಬುವುದಕ್ಕೆ ಯಾವುದೇ ಪುರಾವೆಗಳು ಇಲ್ಲ. ರಾಜಕೀಯ ದ್ವೇಷಕ್ಕೆ ರೈಲು ಅಪಘಾತ ನಡೆಸಿರುವ ಬಗ್ಗೆ ಇದುವರೆಗೆ ವರದಿಯಾಗಿಲ್ಲ.

ಪ್ರಾಥಮಿಕ ವರದಿಗಳು, ಪಶ್ಚಿಮ ಬಂಗಾಳದಲ್ಲಿ ನಡೆದ ಕಾಂಚನ್‌ಜುಂಗಾ ರೈಲು ಅಪಘಾತಕ್ಕೆ ಮಾನವ ದೋಷದ ಸಾಧ್ಯತೆಯನ್ನು ಸೂಚಿಸುತ್ತವೆ. ಆದರೆ, ರೈಲ್ವೆ ಸುರಕ್ಷತಾ ಆಯುಕ್ತರ ತನಿಖೆ ಪೂರ್ಣಗೊಂಡ ನಂತರವೇ ಅಪಘಾತಕ್ಕೆ ನಿಖರವಾದ ಕಾರಣ ತಿಳಿಯಲಿದೆ” ಎಂದು ಇಂಡಿಯನ್ ಎಕ್ಸ್‌ಪ್ರೆಸ್‌ ವರದಿ ಮಾಡಿದೆ.

ಜಿಹಾದಿ ಮನಸ್ಥಿತಿಯವರು ರೈಲ್ವೆಯ ಸಿಗ್ನಲ್ ಲೈಟ್‌ಗೆ ಬಟ್ಟೆ ಕಟ್ಟಿ ಅಪಘಾತ ಆಗುವಂತೆ ಮಾಡಿದ್ದಾರೆ ಎಂದೂ ಸಾಮಾಜಿಕ ಜಾಲತಾಣದಲ್ಲಿ ಪ್ರತಿಪಾದಿಸಲಾಗಿದೆ. ಈ ಮೂಲಕ ಮುಸ್ಲಿಮರು ದುಷ್ಕೃತ್ಯವೆಸಗಿದ್ದಾರೆ ಎಂದು ಬಿಂಬಿಸಲಾಗಿದೆ.

ಆದರೆ, ಕಾಂಚನ್‌ಜುಂಗಾ ರೈಲು ಅಪಘಾತಕ್ಕೆ ಯಾರು ಕಾರಣ ಎಂಬುವುದು ಇನ್ನೂ ತಿಳಿದು ಬಂದಿಲ್ಲ. ಮುಸ್ಲಿಮರು ಈ ರೈಲ್ವೆ ಅಪಘಾತಕ್ಕೆ ಕಾರಣರಾಗಿದ್ದಾರೆ ಎಂಬ ಆರೋಪಕ್ಕೆ ಯಾವುದೇ ಆಧಾರಗಳಿಲ್ಲ. ಆದರೆ, ಈ ರೈಲು ಅಪಘಾತ ಸಂಭವಿಸಿದಾಗ ಬಕ್ರೀದ್ ಹಬ್ಬದ ಸಂಭ್ರಮಾಚರಣೆ ಬಿಟ್ಟು ಮುಸ್ಲಿಮರು ಜನರ ರಕ್ಷಣೆ ಮಾಡಿದ್ದಾರೆ ಎಂದು ವರದಿಯಾಗಿದೆ

ನಾವು ನಡೆಸಿದ ಪರಿಶೀಲನೆಯಲ್ಲಿ ರಾಜಕೀಯ ದ್ವೇಷಕ್ಕೆ ರೈಲು ಅಪಘಾತಗಳನ್ನು ನಡೆಸಲಾಗಿದೆ ಎಂಬುವುದಕ್ಕೆ ಯಾವುದೇ ಪುರಾವೆಗಳು ಸಿಕ್ಕಿಲ್ಲ. ಮಾನವ ದೋಷಕ್ಕೆ ರೈಲು ಅಪಘಾತಗಳು ನಡೆದಿರುವ ಉದಾಹರಣೆಗಳಿವೆ. ಇನ್ನು ಜಿಹಾದಿ ಮನಸ್ಥಿತಿಯವರು ಸಿಗ್ನಲ್‌ಗೆ ಬಟ್ಟೆ ಕಟ್ಟಿ ರೈಲು ಅಪಘಾತಕ್ಕೆ ಕಾರಣರಾಗಿದ್ದಾರೆ ಎಂಬುವುದು ಆಧಾರ ರಹಿತವಾಗಿದೆ.

ಇದನ್ನೂ ಓದಿ : FACT CHECK : ಚುನಾವಣೆ ಭರವಸೆಗಳಿಗೆ ಸಂಬಂಧಪಟ್ಟಂತೆ ರಾಹುಲ್ ಗಾಂಧಿ ಕ್ಷಮೆಯಾಚಿಸಿದ್ದಾರೆ ಎನ್ನುವುದು ಸುಳ್ಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...

ವಿಬಿ-ಜಿ ರಾಮ್ ಜಿ ಮಸೂದೆ ‘ರಾಜ್ಯ ವಿರೋಧಿ’ ಮತ್ತು ‘ಗ್ರಾಮ ವಿರೋಧಿ’: ರಾಹುಲ್ ಗಾಂಧಿ

ಎರಡು ದಶಕಗಳ ಕಾಲದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ಎಂಜಿಎನ್‌ಆರ್‌ಇಜಿಎ)ಯನ್ನು ಒಂದೇ ದಿನದಲ್ಲಿ ಮೋದಿ ಸರ್ಕಾರ ರದ್ದುಗೊಳಿಸಿದೆ ಎಂದು ಕಾಂಗ್ರೆಸ್ ನಾಯಕ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ...

ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ನಂತರ ರಾಜಧಾನಿ ಢಾಕಾದಲ್ಲಿ ಭುಗಿಲೆದ್ದ ಹಿಂಸಾಚಾರ

ಢಾಕಾ: ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ಬಳಿಕ ಬಾಂಗ್ಲಾದೇಶದ ರಾಜಧಾನಿ ಢಾಕಾದಲ್ಲಿ ಶುಕ್ರವಾರ ಬೆಳಗಿನ ಜಾವ ಹಿಂಸಾಚಾರ ಭುಗಿಲೆದ್ದಿದೆ. ಹತ್ಯೆ ಯತ್ನದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಉಸ್ಮಾನ್ ಹಾದಿ, ಸಿಂಗಾಪುರದ ಆಸ್ಪತ್ರೆಯಲ್ಲಿ...

ಸತ್ನಾದಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್: ಮಧ್ಯಪ್ರದೇಶ ಸರ್ಕಾರದಿಂದ ರಕ್ತ ನಿಧಿಯ ಮುಖ್ಯಸ್ಥ ಸೇರಿ ಮೂವರು ಅಮಾನತು

ಭೋಪಾಲ್: ಸತ್ನಾ ಜಿಲ್ಲೆಯ ಸರ್ದಾರ್ ವಲ್ಲಭಭಾಯಿ ಪಟೇಲ್ ಸರ್ಕಾರಿ ಆಸ್ಪತ್ರೆಯಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್ ಬಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯಪ್ರದೇಶ ಸರ್ಕಾರ ಗುರುವಾರ ರಕ್ತ ನಿಧಿಯ ಉಸ್ತುವಾರಿ ಮತ್ತು ಇಬ್ಬರು ಪ್ರಯೋಗಾಲಯ...

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...