Homeಫ್ಯಾಕ್ಟ್‌ಚೆಕ್FACT CHECK : ರಾಜಸ್ಥಾನದಿಂದ ಬೆಂಗಳೂರಿಗೆ ನಾಯಿ ಮಾಂಸ ತರಲಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿಸಿದ...

FACT CHECK : ರಾಜಸ್ಥಾನದಿಂದ ಬೆಂಗಳೂರಿಗೆ ನಾಯಿ ಮಾಂಸ ತರಲಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿಸಿದ ಟಿವಿ ವಿಕ್ರಮ

- Advertisement -
- Advertisement -

ಜುಲೈ 26, 2024ರಂದು ಬೆಂಗಳೂರಿನ ಮಾಂಸ ವ್ಯಾಪಾರಿ ಅಬ್ದುಲ್ ರಝಾಕ್ ಎಂಬವರು ರಾಜಸ್ಥಾನದಿಂದ ರೈಲಿನ ಮೂಲಕ ತಂದ ಕುರಿ ಮಾಂಸದಲ್ಲಿ ನಾಯಿ ಮಾಂಸ ಬೆರೆಸಲಾಗಿದೆ ಎಂದು ಹಿಂದೂ ಸಂ​ಘಟನೆಯ ಪುನೀತ್​ ಕೆರೆಹಳ್ಳಿ ಮತ್ತು ತಂಡ ಆರೋಪಿಸಿತ್ತು. ಈ ಸಂಬಂಧ ಬೆಂಗಳೂರಿನ ಮೆಜೆಸ್ಟಿಕ್‌ನ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದಲ್ಲಿ ರಝಾಕ್ ಮತ್ತು ಪುನೀತ್ ತಂಡದ ನಡುವೆ ಮಾತಿನ ಚಕಮಕಿ ನಡೆದಿತ್ತು. ವಿಷಯ ತಿಳಿದು ಸ್ಥಳಕ್ಕಾಗಮಿಸಿದ್ದ ಪೊಲೀಸರು, ಪರಿಸ್ಥಿತಿ ನಿಯಂತ್ರಿಸಿ ಪುನೀತ್ ಕೆರೆಹಳ್ಳಿ ಸೇರಿದಂತೆ ಕೆಲವರನ್ನು ಬಂಧಿಸಿದ್ದರು.

ಇದೇ ವೇಳೆ ಬಿಬಿಎಂಪಿಯ ಆಹಾರ ಸುರಕ್ಷತೆ ಮತ್ತು‌ ಗುಣಮಟ್ಟ ಇಲಾಖೆಯ ಅಧಿಕಾರಿಗಳು ಮಾಂಸದ ಮಾದರಿಯನ್ನು ತೆಗೆದುಕೊಂಡು ಹೋಗಿದ್ದರು. ಲೋಪದೋಷಗಳು ಕಂಡುಬಂದಲ್ಲಿ ನಿಯಾಮನುಸಾರ ಮುಂದಿನ ಕಾನೂನು ಕ್ರಮ ಜರುಗಿಸಲಾಗುವುದು ಎಂದು‌ ಇಲಾಖೆಯ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದರು.

“ಬೆಂಗಳೂರು ನಗರಕ್ಕೆ ಬಂದ ಜೈಪುರ–ಮೈಸೂರು ಎಕ್ಸ್‌ಪ್ರೆಸ್‌ ರೈಲಿನಲ್ಲಿ 120 ಬಾಕ್ಸ್‌ಗಳಲ್ಲಿ 4,500 ಕೆ.ಜಿಯಷ್ಟು ನಾಯಿಯ ಮಾಂಸ ತರಲಾಗಿದೆ. ಇದನ್ನು ಅಬ್ದುಲ್ ರಝಾಕ್ ಮಾಲೀಕತ್ವದ ಮಾಂಸದ ಅಂಗಡಿಗಳಲ್ಲಿ ಮಾರಾಟ ಮಾಡಲಾಗುತ್ತಿದೆ. ನಿತ್ಯ ನೂರಾರು ಬಾಕ್ಸ್‌ನಲ್ಲಿ ಮಾಂಸ ತರಲಾಗುತ್ತಿದೆ” ಎಂದು ಪುನೀತ್‌ ಕೆರೆಹಳ್ಳಿ ಮತ್ತು ತಂಡ ಆರೋಪಿಸಿತ್ತು.

ಈ ಆರೋಪವನ್ನೆ ಆಧಾರವಾಗಿಟ್ಟುಕೊಂಡು ಬಲಪಂಥೀಯ ಯೂಟ್ಯೂಬ್ ಚಾನೆಲ್ ಟಿವಿ ವಿಕ್ರಮ “ಮುಸ್ಲಿಂ ವ್ಯಾಪಾರಿಗಳು ಹಿಂದೂಗಳಿಗೆ ನಾಯಿ ಮಾಂಸ ತಿನ್ನಿಸುವ ಮೂಲಕ ಮೋಸ ಮಾಡುತ್ತಿದ್ದಾರೆ” ಎಂಬ ಕೋಮು ದ್ವೇಷದ ನಿರೂಪಣೆಯೊಂದಿಗೆ ಕಾರ್ಯಕ್ರಮ ರೂಪಿಸುವುದಲ್ಲದೆ, ಮುಸ್ಲಿಮರೇ ಈ ಕೃತ್ಯದ ವಿರುದ್ದ ಧನಿ ಎತ್ತಿದ್ದಾರೆ ಎಂದು ಸುದ್ದಿ ಪ್ರಸಾರ ಮಾಡಿತ್ತು.

ಸುದ್ದಿಯಲ್ಲಿ ಟಿವಿ ವಿಕ್ರಮದ ನಿರೂಪಕಿ ಹೀಗೆ ಹೇಳುತ್ತಾರೆ, “ಇಲ್ಲಿಯವರೆಗೆ ರಾಜ್ಯದಲ್ಲಿ ಗೋವುಗಳು ಮಾತ್ರ ಸೇಫ್ ಅಲ್ಲ ಎಂದು ಹೇಳಲಾಗುತ್ತಿತ್ತು. ಆದರೆ, ಈಗ ನಾಯಿಗಳಿಗೂ ಸೇಫ್ ಇಲ್ಲ. ಬೀದಿ ನಾಯಿಗಳು ಖಾಲಿಯಾದ ಮೇಲೆ ಅಬ್ದುಲ್ ರಝಾಕ್ ಆಂಡ್ ಗ್ಯಾಂಗ್ ಮನೆಯಲ್ಲಿ ಸಾಕು ನಾಯಿಗಳನ್ನು ಕದ್ದು ನಾಯಿ ಮಾಂಸ ಮಾರಾಟ ಮಾಡಬಹುದು”.

ಹಾಗಿದ್ದರೆ ಟಿವಿ ವಿಕ್ರಮ ನಿರೂಪಕಿ ಆರೋಪಿಸಿದಂತೆ ಪುನೀತ್ ಕೆರೆಹಳ್ಳಿ ಮತ್ತು ತಂಡ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದಲ್ಲಿ ಗಲಾಟೆ ಮಾಡಿದ ವೇಳೆ ಸಿಕ್ಕ ಬಾಕ್ಸ್‌ಗಳಲ್ಲಿ ಇದ್ದದ್ದು ನಾಯಿ ಮಾಂಸ ಎಂಬುವುದು ನಿಜವೇ? ಎಂದು ನೋಡೋಣ.

ಫ್ಯಾಕ್ಟ್‌ಚೆಕ್ : ಪುನೀತ್ ಕೆರೆಹಳ್ಳಿ ಮತ್ತು ತಂಡ ಆರೋಪಿಸಿದಂತೆ ಅಬ್ದುಲ್ ರಝಾಕ್ ರಾಜಸ್ಥಾನದಿಂದ ಬೆಂಗಳೂರಿಗೆ ತಂದಿರುವುದು ಮೇಕೆ ಮಾಂಸ. ಅದರಲ್ಲಿ ನಾಯಿ ಮಾಂಸ ಬೆರೆಸಲಾಗಿದೆ ಎಂಬುವುದು ಸುಳ್ಳು ಎಂದು ಗೊತ್ತಾಗಿದೆ. ಸ್ವತಃ ಗೃಹ ಸಚಿವ ಡಾ.ಜಿ ಪರಮೇಶ್ವರ್ ಅವರೇ ಈ ವಿಚಾರವನ್ನು ದೃಢಪಡಿಸಿದ್ದಾರೆ.

ಮಾಧ್ಯಮದವರೊಂದಿಗೆ ಮಾತನಾಡಿದ ಗೃಹ ಸಚಿವರು, “ಮಾಂಸದ ವ್ಯಾಪಾರಿ ರಾಜಸ್ಥಾನದಿಂದ ಪ್ರತಿ ವಾರಕ್ಕೆ, 15 ದಿನಗಳಿಗೊಮ್ಮೆ ಅಥವಾ ಬೇಕಾದ ಸಂದರ್ಭದಲ್ಲಿ ಮಾಂಸ ತಂದು ಮಾರಾಟ ಮಾಡುವುದು ಅವರ ವೃತ್ತಿ. ಅನಾವಶ್ಯಕವಾಗಿ ಏನೇನೂ ದುರುದ್ದೇಶ ಇಟ್ಟುಕೊಂಡು ಗಲಾಟೆ ಮಾಡುವವರ ಮೇಲೆ ಕ್ರಮ ಕೈಗೊಳ್ಳುತ್ತೇವೆ” ಎಂದು ಎಚ್ಚರಿಕೆ ರವಾನಿಸಿದ್ದಾರೆ.

ರಾಜ್ಯದ ಗೃಹ ಸಚಿವರೇ ಹೇಳಿರುವಂತೆ ಪ್ರಯೋಗಾಲಯದಿಂದ ಬಂದಿರುವ ವರದಿಯಲ್ಲಿ ರಾಜಸ್ಥಾನದಿಂದ ಬಂದಿರುವುದು ನಾಯಿ ಮಾಂಸವಲ್ಲ ಮೇಕೆ ಮಾಂಸ ಎಂದು ದೃಢಪಟ್ಟಿದೆ. ಹಾಗಾದರೆ, ಟಿವಿ ವಿಕ್ರಮ ತಂಡ ಹೀಗೆ ಸುಳ್ಳು ಸುದ್ದಿ ಪ್ರಸಾರ ಮಾಡಿರುವ ಹಿಂದಿನ ಉದ್ದೇಶವಾದರೂ ಏನು? ಇವರ ಮೇಲೆ ಯಾವುದೇ ಕ್ರಮವಿಲ್ಲವೇ ಎಂದು ಸಾರ್ಜವನಿಕರು ಪ್ರಶ್ನಿಸುತ್ತಿದ್ದಾರೆ.

ಇದನ್ನೂ ಓದಿ : FACT CHECK : ಬಾಂಗ್ಲಾದೇಶದಲ್ಲಿ ರಸ್ತೆಯಲ್ಲಿ ನಮಾಝ್ ಮಾಡಿದ ಕಾರಣಕ್ಕೆ ಮುಸ್ಲಿಂ ಧರ್ಮಗುರುವನ್ನು ಬಂಧಿಸಲಾಗಿದೆ ಎಂಬುವುದು ಸುಳ್ಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

24 ವರ್ಷಗಳ ಮೋದಿ ವರ್ಚಸ್ಸನ್ನು 2 ವಾರಗಳಲ್ಲಿ ಧೂಳೀಪಟ ಮಾಡಿದ ಸಿಜೆಪಿ: CJP ಆಂದೋಲನಕ್ಕೆ ಅರುಂಧತಿ ರಾಯ್ ಮೆಚ್ಚುಗೆ

ಪ್ರಧಾನಿ ನರೇಂದ್ರ ಮೋದಿ ಅವರ ಎರಡು ದಶಕಗಳಿಗೂ ಹೆಚ್ಚಿನ ಸುದೀರ್ಘ ರಾಜಕೀಯ ವರ್ಚಸ್ಸನ್ನು ಕಾಕ್ರೋಚ್ ಜನತಾ ಪಾರ್ಟಿ (CJP) ನಡೆಸಿದ ಪ್ರತಿಭಟನಾ ಆಂದೋಲನವು ಕೇವಲ ಎರಡು ವಾರಗಳಲ್ಲಿ ಬುಡಸಮೇತ ಅಲ್ಲಾಡಿಸಿದೆ. ಇದು ಯಾವುದೇ...

ಕ್ಯಾಬಿನೆಟ್‌ನಲ್ಲಿ ಮಹಿಳೆಯರಿಗಿಲ್ಲ ಸ್ಥಾನ: ಸಿಎಂ ಡಿ.ಕೆ. ಶಿವಕುಮಾರ್ ಗೆ ‘ನಾವೆದ್ದು ನಿಲ್ಲದಿದ್ದರೆ-ಕರ್ನಾಟಕ’ ಸಂಘಟನೆಯಿಂದ ಬಹಿರಂಗ ಪತ್ರ

ಕರ್ನಾಟಕದ ನೂತನ ಸಚಿವ ಸಂಪುಟದಲ್ಲಿ ಒಬ್ಬರೇ ಒಬ್ಬರು ಮಹಿಳಾ ಶಾಸಕರಿಗೆ ಅವಕಾಶ ನೀಡದಿರುವುದನ್ನು ತೀವ್ರವಾಗಿ ಖಂಡಿಸಿರುವ ರಾಜ್ಯದ ಪ್ರಮುಖ ಮಹಿಳಾ ಹಾಗೂ ಜನಪರ ಸಂಘಟನೆಗಳ ಒಕ್ಕೂಟ ‘ನಾವೆದ್ದು ನಿಲ್ಲದಿದ್ದರೆ-ಕರ್ನಾಟಕ’ ಸಂಘಟನೆ ಮುಖ್ಯಮಂತ್ರಿಗಳಿಗೆ ಬಹಿರಂಗ...

ಜಾರ್ಖಂಡ್ | ಜೆಪಿಎಸ್‌ಸಿ, ಜೆಎಸ್‌ಎಸ್‌ಸಿ ಪರೀಕ್ಷಾ ಅಕ್ರಮಗಳ ವಿರುದ್ಧ ತೀವ್ರಗೊಂಡ ಪ್ರತಿಭಟನೆ : ಆರು ಮಂದಿಯಿಂದ ಉಪವಾಸ ಸತ್ಯಾಗ್ರಹ

ಜಾರ್ಖಂಡ್ ಲೋಕ ಸೇವಾ ಆಯೋಗ (ಜೆಪಿಎಸ್‌ಸಿ) ಮತ್ತು ಜಾರ್ಖಂಡ್ ಸಿಬ್ಬಂದಿ ಆಯ್ಕೆ ಆಯೋಗ (ಜೆಎಸ್ಎಸ್‌ಸಿ) ನಡೆಸಿದ ವಿವಿಧ ನೇಮಕಾತಿ ಪರೀಕ್ಷೆಗಳಲ್ಲಿ ನಡೆದಿರುವ ಆಪಾದಿತ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಅಕ್ರಮಗಳ ವಿರುದ್ಧದ ಪ್ರತಿಭಟನೆಯು ತೀವ್ರ...

ಸಚಿವ ಸ್ಥಾನ ಸಿಗದಿದ್ದಕ್ಕೆ, ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ ಎಂಬುದು ಸುಳ್ಳು: ಶಾಸಕ ಬಿ. ಆರ್‌ ಪಾಟೀಲ್‌ ಸ್ಪಷ್ಟನೆ

ಕರ್ನಾಟಕ ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಸ್ಥಾನಕ್ಕೆ ನಾನು ರಾಜೀನಾಮೆ ಸಲ್ಲಿಸಿರುವುದು ನಿಜ. ಆದರೆ, ಶಾಸಕ ಸ್ಥಾನಕ್ಕೂ ರಾಜೀನಾಮೆ ನೀಡುತ್ತಿದ್ದೇನೆ ಎಂದು ಮಾಧ್ಯಮಗಳು ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಹರಡುತ್ತಿರುವ ಸುದ್ದಿಗಳು...

ಪ್ರಧಾನಿ ಮೋದಿ ವಿಡಿಯೋ ತೆಗೆದುಹಾಕಿದ ಪ್ರಕರಣ: ಮಾರ್ಕ್ ಝುಕರ್‌ಬರ್ಗ್‌ ಕ್ಷಮೆಯಾಚಣೆಗೆ ಒತ್ತಾಯಿಸಿದ ಸಂಸದೀಯ ಸಮಿತಿ; 3 ದಿನಗಳ ಗಡುವು

ಪ್ರಧಾನಿ ನರೇಂದ್ರ ಮೋದಿಯವರ ವೀಡಿಯೊವನ್ನು ಫೇಸ್‌ಬುಕ್‌ನಿಂದ ತೆಗೆದುಹಾಕಿದ್ದಕ್ಕೆ ಸಂಬಂಧಿಸಿದಂತೆ ಮೆಟಾ ಮುಖ್ಯಸ್ಥ ಮಾರ್ಕ್ ಜುಕರ್‌ಬರ್ಗ್ ಕ್ಷಮೆಯಾಚಿಸಬೇಕೆಂದು ಸಂಸದೀಯ ಸ್ಥಾಯಿ ಸಮಿತಿ ಒತ್ತಾಯಿಸಿದ್ದು, ಈ ಕ್ರಮವನ್ನು ಗಂಭೀರವಾಗಿ ಪರಿಗಣಿಸಲಾಗಿದೆ ಎಂದು ಹೇಳಿದೆ. ಇಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ...

ಜನರ ಆತಂಕಗಳಿಗೆ ಧ್ವನಿಯಾಗಲು CJP ಸಿದ್ಧತೆ: ಮಹಾರಾಷ್ಟ್ರದಲ್ಲಿ ಅಭಿಜೀತ್ ದೀಪ್ಕೆ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ

ಕಾಕ್ರೋಚ್ ಜನತಾ ಪಾರ್ಟಿ (CJP) ಸದ್ಯಕ್ಕೆ ಒತ್ತಡದ ಗುಂಪಾಗಿ ಕೆಲಸ ಮಾಡಲಿದ್ದು, ಪ್ರಸಕ್ತ ಭಾರತಕ್ಕೆ ಬೇಕಾಗಿರುವುದು ಕೂಡ ಅದೇ ಆಗಿದೆ ಎಂದು ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ ಬುಧವಾರ ಸ್ಪಷ್ಟಪಡಿಸಿದ್ದಾರೆ. ಮಹಾರಾಷ್ಟ್ರದ ಛತ್ರಪತಿ ಸಂಭಾಜಿನಗರದಲ್ಲಿ...

ರಾಯಚೂರು: ದಲಿತ ಮುಖಂಡ ಭೂಮಾನಂದ ಬರ್ಬರ ಹತ್ಯೆ; ಆಲ್ ಇಂಡಿಯಾ ಬಿಎಸ್‌ಪಿ ಹಾಗೂ ಜನಪರ ಸಂಘಟನೆಗಳ ತೀವ್ರ ಆಕ್ರೋಶ 

ರಾಯಚೂರು ಜಿಲ್ಲೆಯಲ್ಲಿ ದಲಿತ ಯುವ ನಾಯಕನೊಬ್ಬನ ಭೀಕರ ಕೊಲೆ ಪ್ರಕರಣ ವರದಿಯಾಗಿದ್ದು, ಇಡೀ ಜಿಲ್ಲೆಯಲ್ಲಿ ತೀವ್ರ ಆತಂಕ, ಕಾವು ಮತ್ತು ಆಕ್ರೋಶದ ವಾತಾವರಣ ನಿರ್ಮಾಣವಾಗಿದೆ. ದೇವದುರ್ಗ ತಾಲೂಕಿನ ಹದ್ದಿನಾಳ ಗ್ರಾಮದ ನಿವಾಸಿ, ಮಾದಿಗ...

ತಮಿಳುನಾಡು: ಹಿಂದೂ ‘ಮೇಲ್ಜಾತಿ’ ವ್ಯಕ್ತಿಯ ಜಮೀನಿನಲ್ಲಿ ಕುದುರೆ ಮೇಯಿಸುತ್ತಿದ್ದ ಎಂಬ ಕಾರಣಕ್ಕೆ 26 ವರ್ಷದ ದಲಿತ ವ್ಯಕ್ತಿಯ ಬರ್ಬರ ಹತ್ಯೆ 

ತಮಿಳುನಾಡಿನ ದಿಂಡಿಗಲ್ ಜಿಲ್ಲೆಯಲ್ಲಿ ಜಾತಿ ಗರ್ವದ ಬಲಿಪೀಠಕ್ಕೆ 26 ವರ್ಷದ ದಲಿತ ಯುವಕನೊಬ್ಬ ಬಲಿಯಾಗಿರುವ ಕ್ರೂರ ಘಟನೆ ವರದಿಯಾಗಿದೆ. ‘ಮೇಲ್ಜಾತಿ’ ಪ್ರಬಲ ಸಮುದಾಯಕ್ಕೆ ಸೇರಿದ ವ್ಯಕ್ತಿಯೊಬ್ಬನ ಜಮೀನಿನಲ್ಲಿ ಕುದುರೆ ಮೇಯುತ್ತಿತ್ತು ಎಂಬ ಕ್ಷುಲ್ಲಕ...

ಹಸು ಕೇವಲ ಉಪಯುಕ್ತ ಪ್ರಾಣಿ, ದೇವತೆಯಲ್ಲ ಎಂದಿದ್ದ ಸಾವರ್ಕರ್, ಕೋರ್ಟ್‌ನಲ್ಲಿ ಸಾವರ್ಕರ್ ಮೊಮ್ಮಗನ ಮಹತ್ವದ ಹೇಳಿಕೆ

ವಿನಾಯಕ ದಾಮೋದರ ಸಾವರ್ಕರ್ ಅವರು ಗೋಪೂಜೆಯನ್ನು ಸ್ಪಷ್ಟವಾಗಿ ವಿರೋಧಿಸಿದ್ದರು ಮತ್ತು ಹಸುವನ್ನು ಕೇವಲ ಒಂದು ಉಪಯುಕ್ತ ಪ್ರಾಣಿಯನ್ನಾಗಿಷ್ಟೇ ಪರಿಗಣಿಸುತ್ತಿದ್ದರು" ಎಂದು ಅವರ ಮೊಮ್ಮಗ ಸತ್ಯಕಿ ಸಾವರ್ಕರ್ ಪುಣೆಯ ವಿಶೇಷ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಹೇಳಿಕೆ...

ಯಾದಗಿರಿ: ಫಾರ್ಮಾ ಘಟಕದಲ್ಲಿ ವಿಷಾನಿಲ ಸೋರಿಕೆ, ಮೂವರು ಕಾರ್ಮಿಕರ ದಾರುಣ ಸಾವು, FIR ದಾಖಲು

ಜಿಲ್ಲೆಯ ಸೈದಾಪುರ ಪೊಲೀಸ್ ಠಾಣೆ ವ್ಯಾಪ್ತಿಯ ಕಡೇಚೂರು–ಬಾಡಿಯಾಳ ಕೈಗಾರಿಕಾ ಪ್ರದೇಶದಲ್ಲಿರುವ 'ಸಿಲ್ ಲ್ಯಾಬೊರೇಟರೀಸ್ ಪ್ರೈವೇಟ್ ಲಿಮಿಟೆಡ್' (Sil Laboratories Pvt Ltd) ಔಷಧಿ ತಯಾರಿಕಾ ಘಟಕದಲ್ಲಿ ಬುಧವಾರ ಮುಂಜಾನೆ ಸಂಭವಿಸಿದ ಭೀಕರ ರಾಸಾಯನಿಕ...