Homeಫ್ಯಾಕ್ಟ್‌ಚೆಕ್FACT CHECK : ಪ್ರತಿಭಟನಾಕಾರರು ಬಾಂಗ್ಲಾ ಪ್ರಧಾನಿಯ ನಿವಾಸಕ್ಕೆ ನುಗ್ಗಿದ್ದು ಎಂದು ಸಂಬಂಧವಿಲ್ಲದ ಫೋಟೋ, ವಿಡಿಯೋ...

FACT CHECK : ಪ್ರತಿಭಟನಾಕಾರರು ಬಾಂಗ್ಲಾ ಪ್ರಧಾನಿಯ ನಿವಾಸಕ್ಕೆ ನುಗ್ಗಿದ್ದು ಎಂದು ಸಂಬಂಧವಿಲ್ಲದ ಫೋಟೋ, ವಿಡಿಯೋ ಹಂಚಿಕೊಳ್ಳಲಾಗುತ್ತಿದೆ

- Advertisement -
- Advertisement -

ಬಾಂಗ್ಲಾದೇಶದಲ್ಲಿ ಜನರು ದಂಗೆಯೆದ್ದಿರುವ ಹಿನ್ನೆಲೆ ಪ್ರಧಾನಿ ಶೇಖ್ ಹಸೀನಾ ಸೋಮವಾರ (ಆ.5) ತನ್ನ ಸ್ಥಾನಕ್ಕೆ ರಾಜೀನಾಮೆ ನೀಡಿ ಪಲಾಯನ ಮಾಡಿದ್ದಾರೆ. ಆ ಬಳಿಕ ಪ್ರಧಾನಿಯ ನಿವಾಸಕ್ಕೆ ಜನರು ನುಗ್ಗಿದ್ದು, ಕೈಗೆ ಸಿಕ್ಕ ವಸ್ತುಗಳನ್ನು ಕೊಂಡೊಯ್ದಿದ್ದಾರೆ. ಜೊತೆಗೆ ಪ್ರಧಾನಿ ಹಸೀನಾ ಅವರ ಸೀರೆ, ಒಳ ಉಡುಪುಗಳನ್ನೂ ದೋಚಿದ್ದಾರೆ.

ಈ ನಡುವೆ ‘ಈಜುಕೊಳದಲ್ಲಿ ಜನರು ಆನಂದಿಸುತ್ತಿರುವುದು, ಐಷಾರಾಮಿ ಹಾಸಿಗೆಯ ಮೇಲೆ ಮಲಗಿರುವುದು ಸೇರಿದಂತೆ ಅನೇಕ ವಿಡಿಯೋ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. ಈ ದೃಶ್ಯಗಳು ಬಾಂಗ್ಲಾದೇಶದ ಪ್ರಧಾನಿಯ ಅಧಿಕೃತ ನಿವಾಸವಾದ ಗಣಭಬನ್‌ನದ್ದು ಎಂದು ಪ್ರತಿಪಾದಿಸಲಾಗಿದೆ.

 

ಫ್ಯಾಕ್ಟ್‌ಚೆಕ್ : ನಾವು ಮೇಲ್ಗಡೆ ಉಲ್ಲೇಖಿಸಿದ “ಈಜುಕೊಳದಲ್ಲಿ ಜನರು ಆನಂದಿಸುತ್ತಿರುವ ವಿಡಿಯೋ ಮತ್ತು ಬೆಡ್ ಮೇಲೆ ಜನರು ಮಲಗಿರುವ ಫೋಟೋ ಬಾಂಗ್ಲಾದೇಶಕ್ಕೆ ಸಂಬಂಧಿಸಿದಲ್ಲ. ಇವರೆಡೂ ಶ್ರೀಲಂಕಾದ ದೃಶ್ಯಗಳಾಗಿವೆ.

ಜುಲೈ 2022ರಲ್ಲಿ ದೇಶದಲ್ಲಿನ ಆರ್ಥಿಕ ಮತ್ತು ರಾಜಕೀಯ ಬಿಕ್ಕಟ್ಟಿನ ಮಧ್ಯೆ ಶ್ರೀಲಂಕಾದ ಮಾಜಿ ಅಧ್ಯಕ್ಷ ಗೊಟಬಯ ರಾಜಪಕ್ಸೆ ಅವರ ಅಧಿಕೃತ ನಿವಾಸಕ್ಕೆ ಪ್ರತಿಭಟನಾಕಾರರು ದಾಳಿ ನಡೆಸಿದ್ದರು. ಆ ಸಂದರ್ಭದಲ್ಲಿ ಅಲ್ಲಿನ ಈಜುಕೊಳದಲ್ಲಿ ಆನಂದಿಸಿದ್ದರು, ಪ್ರಧಾನಿಯ ಬೆಡ್ ಮೇಲೆ ಮಲಗಿದ್ದರು. ಅಲ್ಲದೆ, ಪ್ರಧಾನಿಯ ನಿವಾಸದಿಂದ ವಸ್ತುಗಳನ್ನು ಹೊತ್ತೊಯ್ದಿದ್ದರು.

ಇವರೆಡು ಮಾತ್ರವಲ್ಲದೆ, ಇನ್ನೂ ಕೆಲವು ಫೋಟೋ, ವಿಡಿಯೋಗಳು ಬಾಂಗ್ಲಾದೇಶದ್ದು ಎಂದು ಹರಿದಾಡುತ್ತಿವೆ. ಬಾಂಗ್ಲಾ ಪ್ರಧಾನಿಯ ನಿವಾಸಕ್ಕೆ ಜನರು ನುಗ್ಗಿ, ಅಲ್ಲಿದ್ದ ವಸ್ತುಗಳನ್ನು ಹೊತ್ತೊಯ್ದಿರುವುದು ಹೌದು. ಆದರೆ, ವೈರಲ್ ಆಗುತ್ತಿರುವ ಎಲ್ಲಾ ಫೋಟೋ, ವಿಡಿಯೋಗಳು ಬಾಂಗ್ಲಾಗೆ ಸಂಬಂಧಿಸಿದ್ದಲ್ಲ.

ಇದನ್ನೂ ಓದಿ : ಬಾಂಗ್ಲಾ ರಾಜಕೀಯ ಬಿಕ್ಕಟ್ಟು: ನೊಬೆಲ್ ಪ್ರಶಸ್ತಿ ವಿಜೇತ ಮುಹಮ್ಮದ್ ಯೂನಸ್ ಮಧ್ಯಂತರ ಸರ್ಕಾರದ ಮುಖ್ಯ ಸಲಹೆಗಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...

‘ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆ ನಿವಾರಿಸಲು ಸರ್ಕಾರ ಬದ್ಧ’: ಮುಖ್ಯಮಂತ್ರಿ ಸಿದ್ದರಾಮಯ್ಯ

ಬಾಗಲಕೋಟೆ: ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಲು ಸರ್ಕಾರ ಬದ್ಧವಾಗಿದ್ದು, ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುವ ಜನರ ಸರ್ಕಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದರು.  ಮಾರ್ಚ್ 14ರಂದು, ಬಾಗಲಕೋಟೆ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನಾ...

ಮಣಿಪುರ ಹಿಂಸಾಚಾರ: ಕಾಮ್ಜಾಂಗ್‌ನಲ್ಲಿ ಇಬ್ಬರು ಕುಕಿ ಪುರುಷರು ಶವವಾಗಿ ಪತ್ತೆ; ಹೆಚ್ಚಿದ ಉದ್ವಿಗ್ನತೆ 

ಮಣಿಪುರದ ಕಾಮ್ಜಾಂಗ್ ಜಿಲ್ಲೆಯಲ್ಲಿ ಬುಧವಾರದಿಂದ ನಾಪತ್ತೆಯಾಗಿದ್ದ ಇಬ್ಬರು ಕುಕಿ ಪುರುಷರು ಗುರುವಾರ ಥವಾಯ್ ಕುಕಿ ಗ್ರಾಮದ ಅರಣ್ಯ ಪ್ರದೇಶದಲ್ಲಿ ಶವವಾಗಿ ಪತ್ತೆಯಾಗಿದ್ದರಿಂದ ಉದ್ವಿಗ್ನತೆ ಹೆಚ್ಚಾಗಿದೆ. ಜಿಲ್ಲೆಯ ಥಾವಾಯಿ ಕುಕಿ ಗ್ರಾಮದ 42 ವರ್ಷದ ಥೇಂಗಿನ್...

ಉತ್ತರ ಪ್ರದೇಶ | ಮುಸ್ಲಿಮರೊಂದಿಗಿನ ಶಾಂತಿ ಸಭೆಯಲ್ಲಿ ‘ಇರಾನ್‌ಗೆ ಹೋಗಿ’ ಎಂದ ಪೊಲೀಸ್‌ ಅಧಿಕಾರಿ : ತೀವ್ರ ಆಕ್ರೋಶ

ಉತ್ತರ ಪ್ರದೇಶದಲ್ಲಿ ಈದುಲ್ ಫಿತರ್ (ರಂಝಾನ್) ಹಬ್ಬಕ್ಕೆ ಪೂರ್ವಭಾವಿಯಾಗಿ ನಡೆದ ಶಾಂತಿ ಸಭೆಯಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ನೀಡಿದ ಹೇಳಿಕೆ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಸಂಭಾಲ್ ಜಿಲ್ಲೆಯ ಅಸ್ಮೋಲಿ ಪ್ರದೇಶದಲ್ಲಿ ರಂಝಾನ್ ತಿಂಗಳ ಕೊನೆಯ...

ಪಶ್ಚಿಮ ಏಷ್ಯಾ ಸಂಘರ್ಷ: ಲೆಬನಾನ್‌ನಲ್ಲಿ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ದಾಳಿ: ವೈದ್ಯರು, ದಾದಿಯರು ಸೇರಿ 12 ಮಂದಿ ಸಾವು

ದಕ್ಷಿಣ ಲೆಬನಾನ್‌ನಲ್ಲಿರುವ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ 12 ವೈದ್ಯಕೀಯ ಕಾರ್ಯಕರ್ತರು ಸಾವನ್ನಪ್ಪಿದ್ದಾರೆ ಎಂದು ಲೆಬನಾನಿನ ಸಾರ್ವಜನಿಕ ಆರೋಗ್ಯ ಸಚಿವಾಲಯ ವರದಿ ಮಾಡಿದೆ.  ಲೆಬನಾನ್‌ನಾದ್ಯಂತ ಇಸ್ರೇಲಿ ದಾಳಿಯಲ್ಲಿ ಈವರೆಗೂ 103 ಮಕ್ಕಳು...

ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಪರ ತೀರ್ಮಾನಕ್ಕೆ ಎಲ್ಲರೂ ಸಹಕರಿಸಿ: ಒಳಮೀಸಲಾತಿ ಹೋರಾಟ ಸಮಿತಿ ಮನವಿ

ಬೆಂಗಳೂರು: ಒಳಮೀಸಲಾತಿ ಜಾರಿ ಮಾಡುವ ಪ್ರಕ್ರಿಯೆಯು ಕೊನೆಯ ಹಂತಕ್ಕೆ ತಲುಪಿದ್ದು, ಇದನ್ನು ಸುಲಲಿತವಾಗಿ ಬಗೆಹರಿಸಿ ಸಾಮಾಜಿಕ ನ್ಯಾಯವನ್ನು ಎತ್ತಿಹಿಡಿಯಲು ಆಗ್ರಹಿಸಿ ಇಂದು (14 ಮಾರ್ಚ್)‌ ನಗರದ ಪ್ರೆಸ್‌ ಕ್ಲಬ್‌ನಲ್ಲಿ ಒಳಮೀಸಲಾತಿ ಹೋರಾಟಗಾರರು...

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಅಕ್ರಮ ನೇಮಕಾತಿ; ರೋಸ್ಟರ್ ಮೀಸಲು ಕ್ರಮ ಉಲ್ಲಂಘನೆ ಆರೋಪ: ನ್ಯಾಯಾಂಗ ತನಿಖೆಗೆ ಆಗ್ರಹ

ಕಲಬುರಗಿ: ಕಲಬುರಗಿ ಜಿಲ್ಲೆಯಲ್ಲಿರುವ Central University of Karnataka ದಲ್ಲಿ ಬೋಧಕ ಹುದ್ದೆಗಳ ನೇಮಕಾತಿಯಲ್ಲಿ ಮೀಸಲು ಕ್ರಮ ಉಲ್ಲಂಘನೆ ಹಾಗೂ ಅಕ್ರಮ ನೇಮಕಾತಿಗಳು ನಡೆದಿವೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ...

ಸಂಭಾಲ್ | ಮಸೀದಿಯಲ್ಲಿ ನಮಾಝ್ ಮಾಡುವವರ ಸಂಖ್ಯೆ ಮಿತಿಗೊಳಿಸಲು ಸಾಧ್ಯವಿಲ್ಲ; ಕಾನೂನು ಸುವ್ಯವಸ್ಥೆ ಕಾಪಾಡಲು ಆಗದಿದ್ದರೆ ರಾಜೀನಾಮೆ ನೀಡಿ: ಅಧಿಕಾರಿಗಳಿಗೆ ಅಲಹಾಬಾದ್ ಹೈಕೋರ್ಟ್ ತರಾಟೆ

ಸಂಭಾಲ್ ಜಿಲ್ಲೆಯ ಮಸೀದಿಯೊಂದರಲ್ಲಿ ರಂಝಾನ್ ಸಮಯದಲ್ಲಿ ನಮಾಝ್ ಮಾಡುವವರ ಸಂಖ್ಯೆಯನ್ನು ಮಿತಿಗೊಳಿಸುವ ಉತ್ತರ ಪ್ರದೇಶ ಸರ್ಕಾರದ ನಿರ್ಧಾರವನ್ನು ಅಲಹಾಬಾದ್ ಹೈಕೋರ್ಟ್ ತಿರಸ್ಕರಿಸಿದೆ. ಕಾನೂನು ಸುವ್ಯವಸ್ಥೆ ಕಾಪಾಡುವುದು ಸರ್ಕಾರದ ಜವಾಬ್ದಾರಿ ಎಂದಿದೆ. ಫೆಬ್ರವರಿ 27ರಂದು...

ಇರಾನ್ ‘ಭಯೋತ್ಪಾದಕ ಆಡಳಿತ’ ಎಂದು ಕರೆದ NDTV ಹಿರಿಯ ಸಂಪಾದಕ: ವ್ಯಾಪಕ ಟೀಕೆಯ ನಂತರ ಪೋಸ್ಟ್ ಡಿಲಿಟ್ 

ಹೊಸದಿಲ್ಲಿ: ಅಮೆರಿಕ-ಇಸ್ರೇಲ್ ಮತ್ತು ಇರಾನ್ ನಡುವೆ ನಡೆಯುತ್ತಿರುವ ಯುದ್ಧದಿಂದಾಗಿ ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವ ಸಂದರ್ಭದಲ್ಲಿ ಭಾರತದ ಮುಖ್ಯ ಮಾಧ್ಯಮ ಸಂಸ್ಥೆ NDTV ಹಿರಿಯ ಸಂಪಾದಕ ಆದಿತ್ಯ ರಾಜ್ ಕೌಲ್ ಅವರು ಇರಾನ್ “ಭಯೋತ್ಪಾದಕ...

ಎಲ್‌ಪಿಜಿ ಬಿಕ್ಕಟ್ಟು: ಹೋಟೆಲ್ ಮಾಲೀಕರಿಗೆ ವಿದ್ಯುತ್ ಒಲೆಗಳನ್ನು ಬಳಸಲು ಸೂಚಿಸಿದ ಸಚಿವ ಕೆ.ಎಚ್. ​​ಮುನಿಯಪ್ಪ

ಬೆಂಗಳೂರು: ಪಶ್ಚಿಮ ಏಷ್ಯಾ ಸಂಘರ್ಷದ ಪ್ರಭಾವ ಭಾರತೀಯರ ಅಡುಗೆ ಮನೆಯನ್ನು ಪ್ರವೇಶಿಸಿದ್ದು, ಎಲ್‌ಪಿಜಿ  ಬಿಕ್ಕಟ್ಟಿನಿಂದ ನಾಗರೀಕರು, ಸೇರಿದಂತೆ ಹೋಟೆಲ್ ಉಧ್ಯಮ ತೀವ್ರ ಸಂಕಷ್ಟಕ್ಕೆ ಸಿಲುಕಿವೆ. ಈ ನಡುವೆ ಯುದ್ಧದ ಪರಿಣಾಮ ಭಾರತದ ಮೇಲೆ...