Homeಫ್ಯಾಕ್ಟ್‌ಚೆಕ್FACT CHECK : ವಯನಾಡ್‌ ಸಂತ್ರಸ್ತರಿಗೆ RSS ಸಹಾಯ ಮಾಡುತ್ತಿದೆ ಎಂದು ಸಂಬಂಧವಿಲ್ಲದ ವಿಡಿಯೋ, ಪೋಟೋಗಳನ್ನು...

FACT CHECK : ವಯನಾಡ್‌ ಸಂತ್ರಸ್ತರಿಗೆ RSS ಸಹಾಯ ಮಾಡುತ್ತಿದೆ ಎಂದು ಸಂಬಂಧವಿಲ್ಲದ ವಿಡಿಯೋ, ಪೋಟೋಗಳನ್ನು ಹಂಚಿಕೊಳ್ಳಲಾಗುತ್ತಿದೆ

- Advertisement -
- Advertisement -

ಕೇರಳದ ವಯನಾಡ್‌ ಜಿಲ್ಲೆಯ ಮುಂಡಕ್ಕೈ, ಚೂರಲ್ಮಲಾ, ಅಟ್ಟಮಲಾ ಪ್ರದೇಶಗಳಲ್ಲಿ ಜುಲೈ 30,2024ರಂದು ಸಂಭವಿಸಿದ ಭೀಕರ ಭೂಕುಸಿತ, ಜಳಪ್ರಳಯ ಸುಮಾರು 300ರಷ್ಟು ಜನರನ್ನು ಬಲಿ ಪಡೆದಿದೆ. ಎರಡು ಗ್ರಾಮಗಳೇ ನಾಮಾವಶೇಷವಾಗಿವೆ. ಈ ಘಟನೆ ದೇಶದ ಅತಿ ದೊಡ್ಡ ದುರಂತಗಳಲ್ಲಿ ಒಂದಾಗಿದೆ.

ಭೂಕುಸಿತ ಸಂಭವಿಸಿದ ಸ್ಥಳಕ್ಕೆ ಧಾವಿಸಿರುವ ಭಾರತೀಯ ಸೇನೆ, ಎನ್‌ಡಿಆರ್‌ಎಫ್‌, ಎಸ್‌ಡಿಆರ್‌ಎಫ್‌, ಅಗ್ನಿಶಾಮಕ ತಂಡಗಳು, ಜಿಲ್ಲಾಡಳಿತದ ಸಿಬ್ಬಂದಿ, ಹಲವಾರು ಸಂಘ-ಸಂಸ್ಥೆಗಳ ಸ್ವಯಂ ಸೇವಕರೂ ಮತ್ತು ಸ್ಥಳೀಯರು ರಕ್ಷಣೆ ಮತ್ತು ಪರಿಹಾರ ಕಾರ್ಯಗಳಲ್ಲಿ ತೊಡಗಿದ್ದಾರೆ.

ನೂರಾರು ಸಂಘಟನೆಗಳು, ಸಂಸ್ಥೆಗಳು ದುರಂತದಲ್ಲಿ ಬದುಕುಳಿದವರಿಗೆ ಬೇಕಾದ ಆಹಾರ ಸೇರಿದಂತೆ ಇತರ ಅತ್ಯಗತ್ಯ ಸಾಮಗ್ರಿಗಳನ್ನು ಪೂರೈಸುವ ಮಹತ್ಕಾರ್ಯ ಮಾಡುತ್ತಿವೆ. ದೇಶದ ವಿವಿಧ ಭಾಗಗಳಿಂದ ವಯನಾಡ್‌ಗೆ ಸಹಾಯಹಸ್ತ ಹರಿದು ಬರುತ್ತಿದೆ. ಕರ್ನಾಟಕ ಸೇರಿದಂತೆ ರಾಜ್ಯ ಸರ್ಕಾರಗಳು, ಕೇಂದ್ರ ಸರ್ಕಾರ ಕೂಡ ಪರಿಹಾರ ಕಾರ್ಯದಲ್ಲಿ ತೊಡಗಿದೆ.

ಈ ನಡುವೆ ಕೆಲವು ರಾಜಕೀಯ, ಕೋಮುವೈಷಮ್ಯ, ಅಮಾನವೀಯ ವರ್ತನೆಗಳು ಕೂಡ ನಡೆಯುತ್ತಿದೆ. ಅನೇಕ ಅಮಾನವೀಯರು ಸಾಮಾಜಿಕ ಜಾಲತಾಣಗಳ ಪೋಸ್ಟ್‌, ಕಾಮೆಂಟ್‌ಗಳ ಮೂಲಕ ಪ್ರಕೃತಿ ದುರಂತಕ್ಕೆ ಕೋಮು ವಿಷ ತಾಕಿಸಿ ವಿಘ್ನ ಸಂತೋಷಪಡುತ್ತಿದ್ದಾರೆ. ಇವೆಲ್ಲದರ ಹೊರತಾಗಿ ಸೇವಾ ಕಾರ್ಯಗಳ ಕ್ರೆಡಿಟ್ ಪಡೆಯುವುದರಲ್ಲಿ ಪೈಪೋಟಿಯೂ ಏರ್ಪಟ್ಟಿದೆ.

ವಯನಾಡ್‌ ದುರಂತ ಸ್ಥಳದಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರ್‌ಎಸ್‌ಎಸ್‌) ಆಹಾರ ಸಾಮಗ್ರಿಗಳನ್ನು ಸಂಗ್ರಹಿಸಿ ವಿತರಿಸುವ ಮೂಲಕ ಹಗಲು-ರಾತ್ರಿ ಸಾಂತ್ವನ ಕಾರ್ಯದಲ್ಲಿ ತೊಡಗಿದೆ ಎಂದು ವಿಡಿಯೋವೊಂದು ಭಾರೀ ವೈರಲ್ ಆಗಿದೆ.

ಮಲಯಾಳಂ ನಟಿ ನಿಖಿಲಾ ವಿಮಲ್ ಮತ್ತು ಒಂದಷ್ಟು ಯುವಜನರು ಅಗತ್ಯ ವಸ್ತುಗಳನ್ನು ಪ್ಯಾಕ್‌ ಮಾಡುತ್ತಿರುವ ವಿಡಿಯೋವೊಂದನ್ನು ಆರ್‌ಎಸ್‌ಎಸ್‌ನ “ನಮಸ್ತೆ ಸದಾ ವತ್ಸಲೆ ಮಾತೃಭೂಮಿ” ಗೀತೆಯೊಂದಿಗೆ ಹಂಚಿಕೊಳ್ಳಲಾಗುತ್ತಿದೆ.

ಇದಲ್ಲದೆ ಇನ್ನೂ ಕೆಲ ಫೋಟೋ, ವಿಡಿಯೋಗಳು ಆರ್‌ಎಸ್‌ಎಸ್‌ನ ಹೆಸರಿನಲ್ಲಿ ಹರಿದಾಡುತ್ತಿದೆ.

ಫ್ಯಾಕ್ಟ್‌ಚೆಕ್ : ಆರ್‌ಎಸ್‌ಎಸ್‌ ಹೆಸರಿನಲ್ಲಿ ಹರಿದಾಡುತ್ತಿರುವ ನಟಿ ನಿಖಿಲಾ ವಿಮಲ್ ಕಾಣಿಸಿಕೊಂಡಿರುವ ವಿಡಿಯೋದ ಸತ್ಯಾಸತ್ಯತೆಯನ್ನು ನಾವು ಪರಿಶೀಲಿಸಿದ್ದೇವೆ. ಈ ವೇಳೆ ಆ ವಿಡಿಯೋ ಡೆಮಾಕ್ರಟಿಕ್ ಯೂಥ್ ಫೆಡರೇಶನ್ ಆಫ್ ಇಂಡಿಯಾ (ಡಿವೈಎಫ್‌ಐ) ಸಂಘಟನೆಗೆ ಸಂಬಂಧಿಸಿದ್ದು ಎಂದು ತಿಳಿದು ಬಂದಿದೆ.

“ವಯನಾಡ್‌ಗೆ ಅಗತ್ಯ ವಸ್ತುಗಳನ್ನು ಪ್ಯಾಕ್ ಮಾಡಲು ಮತ್ತು ರವಾನಿಸಲು ಡಿವೈಎಫ್ಐ ಸ್ಥಾಪಿಸಿದ ಕಣ್ಣೂರಿನ ತಳಿಪರಂಬ ಸಂಗ್ರಹ ಕೇಂದ್ರದಲ್ಲಿ ಸ್ವಯಂ ಸೇವಕರೊಂದಿಗೆ ನಟಿ ನಿಖಿಲಾ ಕೈ ಜೋಡಿಸಿದರು” ಎಂದು ಮಾಧ್ಯಮ ವರದಿಗಳು ಹೇಳಿವೆ.

ವರದಿ ಆಧರಿಸಿ ಡಿವೈಎಫ್‌ ಕೇರಳದ ಇನ್‌ಸ್ಟಾಗ್ರಾಂ ಪೇಜ್‌ ನಾವು ಪರಿಶೀಲಿಸಿದ್ದೇವೆ. ಈ ವೇಳೆ ಅಲ್ಲೂ ವಿಡಿಯೋ ಲಭ್ಯವಾಗಿದೆ.

ಇನ್ನು ಆರ್‌ಎಸ್‌ಎಸ್‌ ಸ್ವಯಂ ಸೇವಕರು ಮನೆ ಮನೆಗೆ ತೆರಳಿ ಅಗತ್ಯ ಸಾಮಾಗ್ರಿಗಳನ್ನು ನೀಡುತ್ತಿರುವ ಫೋಟೋಗಳು ಕೂಡ ವಯನಾಡ್‌ಗೆ ಸಂಬಂಧಿಸಿದಲ್ಲ. ಅದು 2018ರದ್ದು ಎಂದು ನಮ್ಮ ಪರಿಶೀಲನೆಯಲ್ಲಿ ತಿಳಿದು ಬಂದಿದೆ.

ವಯನಾಡ್‌ ಭೂಕುಸಿತ ಸ್ಥಳದಲ್ಲಿ ಆರ್‌ಎಸ್‌ಎಸ್‌ನ ಸೇವಾಭಾರತಿ ಸ್ವಯಂ ಸೇವಾ ಸಂಘಟನೆ ಸಾಂತ್ವನ ಕಾರ್ಯಗಳಲ್ಲಿ ತೊಡಗಿಸಿಕೊಂಡಿರುವುದು ನಿಜ. ಆದರೆ, ವೈರಲ್ ಆಗಿರುವ ವಿಡಿಯೋ, ಫೋಟೋಗಳು ಅದಕ್ಕೆ ಸಂಬಂಧಿಸಿದಲ್ಲ. ಆರ್‌ಎಸ್‌ಎಸ್‌ ಮಾತ್ರವಲ್ಲದೆ, ಎಸ್‌ವೈಎಸ್‌ ಸಾಂತ್ವನ, ಇಸಾಬಾ, ಎಸ್‌ಎಸ್‌ಎಫ್, ಎಸ್‌ಕೆಎಸ್‌ಎಸ್‌ಎಫ್‌ ವಿಖಾಯ, ಎಸ್‌ಡಿಪಿಐ, ಯುವ ಕಾಂಗ್ರೆಸ್, ಜಾಮಿಅ ಮರ್ಕಝ್ ಸೇರಿದಂತೆ ಅನೇಕ ಧಾರ್ಮಿಕ, ಸಾಮಾಜಿಕ, ಶೈಕ್ಷಣಿಕ ಸಂಘ-ಸಂಸ್ಥೆಗಳು ವಯನಾಡ್‌ನಲ್ಲಿ ಸಾಂತ್ವನ ಕಾರ್ಯಗಳಲ್ಲಿ ತೊಡಗಿಸಿಕೊಂಡಿವೆ.

ಇದನ್ನೂ ಓದಿ : FACT CHECK : ರಾಹುಲ್ ಗಾಂಧಿ ಹಿಂದೂಗಳಿಗೆ ಎಚ್ಚರಿಕೆ ನೀಡಿದ್ದಾರೆ ಎಂದು ಎಡಿಟೆಡ್ ವಿಡಿಯೋ ಹಂಚಿಕೊಳ್ಳಲಾಗುತ್ತಿದೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ನಂತರ ರಾಜಧಾನಿ ಢಾಕಾದಲ್ಲಿ ಭುಗಿಲೆದ್ದ ಹಿಂಸಾಚಾರ

ಢಾಕಾ: ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ಬಳಿಕ ಬಾಂಗ್ಲಾದೇಶದ ರಾಜಧಾನಿ ಢಾಕಾದಲ್ಲಿ ಶುಕ್ರವಾರ ಬೆಳಗಿನ ಜಾವ ಹಿಂಸಾಚಾರ ಭುಗಿಲೆದ್ದಿದೆ. ಹತ್ಯೆ ಯತ್ನದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಉಸ್ಮಾನ್ ಹಾದಿ, ಸಿಂಗಾಪುರದ ಆಸ್ಪತ್ರೆಯಲ್ಲಿ...

ಸತ್ನಾದಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್: ಮಧ್ಯಪ್ರದೇಶ ಸರ್ಕಾರದಿಂದ ರಕ್ತ ನಿಧಿಯ ಮುಖ್ಯಸ್ಥ ಸೇರಿ ಮೂವರು ಅಮಾನತು

ಭೋಪಾಲ್: ಸತ್ನಾ ಜಿಲ್ಲೆಯ ಸರ್ದಾರ್ ವಲ್ಲಭಭಾಯಿ ಪಟೇಲ್ ಸರ್ಕಾರಿ ಆಸ್ಪತ್ರೆಯಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್ ಬಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯಪ್ರದೇಶ ಸರ್ಕಾರ ಗುರುವಾರ ರಕ್ತ ನಿಧಿಯ ಉಸ್ತುವಾರಿ ಮತ್ತು ಇಬ್ಬರು ಪ್ರಯೋಗಾಲಯ...

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...