Homeಫ್ಯಾಕ್ಟ್‌ಚೆಕ್FACT CHECK : ಬಾಂಗ್ಲಾದಲ್ಲಿ ಮುಸ್ಲಿಮರು ಹಿಂದೂ ಮಹಿಳೆಯನ್ನು ಅಪಹರಿಸಿದ್ದಾರೆ ಎಂದು ಸಂಬಂಧವಿಲ್ಲದ ವಿಡಿಯೋ ಹಂಚಿಕೆ

FACT CHECK : ಬಾಂಗ್ಲಾದಲ್ಲಿ ಮುಸ್ಲಿಮರು ಹಿಂದೂ ಮಹಿಳೆಯನ್ನು ಅಪಹರಿಸಿದ್ದಾರೆ ಎಂದು ಸಂಬಂಧವಿಲ್ಲದ ವಿಡಿಯೋ ಹಂಚಿಕೆ

- Advertisement -
- Advertisement -

ಪುರುಷರ ತಂಡವೊಂದು ಮಹಿಳೆಯೊಬ್ಬರನ್ನು ಎತ್ತಿಕೊಂಡು ಹೋಗಿ ವಾಹನದೊಳಕ್ಕೆ ತುರುಕುವ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಕೆಲವರು ಇದು ಬಾಂಗ್ಲಾದಲ್ಲಿ ಹಿಂದೂ ಮಹಿಳೆಯನ್ನು ಅಪಹರಿಸಿದ ದೃಶ್ಯ ಎಂದು ಬರೆದುಕೊಂಡಿದ್ದಾರೆ.

‘ಕನ್ನಡ ನಾಡು ನುಡಿ ಜಲ’ ಎಂಬ ಫೇಸ್‌ಬುಕ್ ಗ್ರೂಪ್‌ನಲ್ಲಿ ಆಗಸ್ಟ್ 9,2024 ವಿಡಿಯೋ ಪೋಸ್ಟ್ ಮಾಡಿರುವ ಕುಮಾರ್ ಅಭಿನಯ್ ಎಂಬ ಬಳಕೆದಾರ “ಬಾಂಗ್ಲಾದೇಶ: ಹಾಡಹಗಲೇ ಅಪ್ರಾಪ್ತ ಹಿಂದೂ ಹುಡುಗಿಯನ್ನ ಅಪಹರಿಸಿದ ಮುಸಲ್ಮಾನರು. ಬಾಂಗ್ಲಾದೇಶದ ಹಿಂದೂಗಳ ಸ್ಥಿತಿ ಶೋಚನೀಯ” ಎಂದು ಬರೆದುಕೊಂಡಿದ್ದಾರೆ.

ಸಲ್ಮಾನ್‌ ಸೀಮಾ ಎಂಬ ಎಕ್ಸ್‌ ಬಳಕೆದಾರರು ಆಗಸ್ಟ್ 8, 2024ರಂದು ವಿಡಿಯೋ ಹಂಚಿಕೊಂಡಿದ್ದು, “ಬಾಂಗ್ಲಾದೇಶದಲ್ಲಿ ಹಿಂದೂ ಮಹಿಳೆಯನ್ನು ಹಾಡಹಗಲೇ ಇಸ್ಲಾಮಿಸ್ಟ್‌ಗಳು ಅಪಹರಿಸಿದ್ದಾರೆ. ಇದೇ ರೀತಿಯ ದೃಶ್ಯಗಳನ್ನು ನಾವು ಬೇರೆಲ್ಲಿ ನೋಡಿದ್ದೇವೆ?. IRGC ಭಯೋತ್ಪಾದಕರು ಕೆಚ್ಚೆದೆಯ ಇರಾನಿನ ಮಹಿಳೆಯರ ಮೇಲೆ ದಾಳಿ ಮಾಡಿದಾಗ ಈ ರೀತಿಯ ಘಟನೆ ಕಂಡಿದ್ದೇವೆ. ಹಮಾಸ್, ಐಆರ್‌ಜಿಸಿ, ಐಸಿಸ್, ಹಿಜ್ಬುಲ್ಲಾ, ಹೌತಿಗಳು, ಬಾಂಗ್ಲಾದೇಶದ ಇಸ್ಲಾಮಿಸ್ಟ್‌ಗಳು, ನೈಜೀರಿಯಾದ ಬೊಕೊ ಹರಾಮ್ ಮತ್ತು ಅಲ್ ಖೈದಾ ಇವೆಲ್ಲವೂ ಒಂದೇ ಬೇರುಗಳು. ಸಿಸಿಪಿ ಮತ್ತು ಇಸ್ಲಾಮಿಕ್ ರಿಪಬ್ಲಿಕ್ ಪಾಕಿಸ್ತಾನದಿಂದ ಬೆಂಬಲಿತವಾಗಿರುವ ಈ ರೀತಿಯ ದಾಳಿಗಳು ಬಾಂಗ್ಲಾದೇಶದ ಭವಿಷ್ಯವನ್ನು ನಾಶಮಾಡುತ್ತವೆ. ಬಾಂಗ್ಲಾದೇಶಿ ಹಿಂದೂಗಳನ್ನು ಉಳಿಸಿ” ಎಂದು ಬರೆದುಕೊಂಡಿದ್ದಾರೆ.

ಫ್ಯಾಕ್ಟ್‌ಚೆಕ್ : ಸಾಮಾಜಿಕ ಮಾಧ್ಯಮ ಬಳಕೆದಾರರು ಹಂಚಿಕೊಂಡಿರುವ ವೈರಲ್ ವಿಡಿಯೋದ ಸತ್ಯಾಸತ್ಯತೆಯನ್ನು ನಾವು ಪರಿಶೀಲಿಸಿದ್ದೇವೆ. ಗೂಗಲ್ ರಿವರ್ಸ್ ಇಮೇಜ್‌ನಲ್ಲಿ ವಿಡಿಯೋದ ಸ್ಕ್ರೀನ್‌ ಶಾಟ್ ಹಾಕಿ ಸರ್ಚ್‌ ಮಾಡಿದಾಗ en.prothomalo.com ಎಂಬ ವೆಬ್‌ಸೈಟ್‌ವೊಂದು ಆಗಸ್ಟ್ 9, 2024ರಂದು ವಿಡಿಯೋ ಕುರಿತು ಸುದ್ದಿ ಪ್ರಕಟಿಸಿರುವುದು ಕಂಡು ಬಂದಿದೆ. ವರದಿಯಲ್ಲಿ ” ಕೌಟುಂಬಿಕ ಕಲಹದ ವಿಡಿಯೋವನ್ನು ಕೋಮುಗಲಭೆ ಅಥವಾ ದೌರ್ಜನ್ಯ ಎಂದು ಸಾಮಾಜಿಕ ಮಾಧ್ಯಮಗಳಲ್ಲಿ ತಪ್ಪಾಗಿ ಬಿಂಬಿಸಲಾಗಿದೆ” ಎಂದು ಹೇಳಲಾಗಿದೆ.

ವರದಿಯ ಪ್ರಕಾರ, ಬಾಂಗ್ಲಾದೇಶ ನೊವಾಖಾಲಿಯ ಸೆನ್‌ಬಾಗ್‌ ಎಂಬಲ್ಲಿ ಕೌಟುಂಬಿದ ಕಲಹದಿಂದ ತವರು ಮನೆಗೆ ತೆರಳಿದ್ದ ಮಹಿಳೆಯನ್ನು ಆಕೆಯ ಪತಿ ಕೆಲ ವ್ಯಕ್ತಿಗಳೊಂದಿಗೆ ಕೂಡಿ ಒತ್ತಾಯಪೂರ್ವಕವಾಗಿ ಕರೆದೊಯ್ಯಲು ಮುಂದಾಗಿದ್ದಾನೆ. ಅದಕ್ಕೆ ಆಕೆ ವಿರೋಧ ವ್ಯಕ್ತಪಡಿಸಿದಾಗ, ಪತಿ ಮತ್ತು ಆತನ ಜೊತೆಗಿದ್ದವರು ಮಹಿಳೆಯನ್ನು ಬಲವಂತವಾಗಿ ಎತ್ತಿಕೊಂಡು ಹೋಗಿ ವಾಹನಕ್ಕೆ ಹತ್ತಿಸಲು ನೋಡಿದ್ದಾರೆ. ಈ ವೇಳೆ ಮಹಿಳೆ ಕೂಗಿಕೊಂಡಿದ್ದು, ಸ್ಥಳೀಯರು ಧಾವಿಸಿ ಬಂದು ಮಹಿಳೆಯನ್ನು ರಕ್ಷಿಸಿದ್ದಾರೆ. ಆಕೆಯ ಪತಿ ಮತ್ತು ಮೂವರನ್ನು ಸೆರೆಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಅವರ ವಾಹನವನ್ನು ಹಾನಿಗೊಳಿಸಿದ್ದಾರೆ.

ಆಗಸ್ಟ್ 9, 2024ರಂದು ವೈರಲ್ ವಿಡಿಯೋ ಹಂಚಿಕೊಂಡಿರುವ ಸಾಮಾಜಿಕ ಜಾಲತಾಣ ಪೋಸ್ಟ್‌ಗಳ ಸ್ಕ್ರೀನ್‌ ಶಾಟ್ ಅನ್ನು ಎಕ್ಸ್‌ನಲ್ಲಿ ಹಂಚಿಕೊಂಡಿರುವ ಫ್ಯಾಕ್ಟ್‌ಚೆಕ್ ವೆಬ್‌ಸೈಟ್‌ ಆಲ್ಟ್‌ ಸಹ ಸಂಸ್ಥಾಪಕ ಮೊಹಮ್ಮದ್ ಝುಬೈರ್ ” ಹೌದು ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತ ಹಿಂದೂಗಳ ಮೇಲೆ ದಾಳಿ ನಡೆದಿರುವ ಹಲವಾರು ಘಟನೆಗಳು ವರದಿಯಾಗಿವೆ. ಆದರೆ @Salwan_Momika1 ಮತ್ತು ಓಪ್‌ಇಂಡಿಯಾ ಸಂಪಾದಕ @UnSubtleDesi ಹಂಚಿಕೊಂಡಿರುವ ಈ ನಿರ್ದಿಷ್ಟ ವಿಡಿಯೋಗೂ ಹಿಂದೂ-ಮುಸ್ಲಿಮರಿಗೆ ಯಾವುದೇ ಸಂಬಂಧವಿಲ್ಲ. ಹಿಂದೂ ಮಹಿಳೆಯನ್ನು ಅಪಹರಿಸಿದ ವ್ಯಕ್ತಿ ಆಕೆಯ ಮಾದಕ ವ್ಯಸನಿ ಹಿಂದೂ ಪತಿಯಾಗಿದ್ದು, 6 ತಿಂಗಳ ಹಿಂದೆ ಆಕೆಯಿಂದ ಬೇರ್ಪಟ್ಟಿದ್ದಾನೆ” ಎಂದು ಸ್ಪಷ್ಟಪಡಿಸಿದ್ದಾರೆ.

ಒಟ್ಟಿನಲ್ಲಿ ಕೌಟುಂಬಿದ ಕಲಹದಿಂದ ತವರು ಮನೆ ಸೇರಿದ್ದ ಹಿಂದೂ ಮಹಿಳೆಯರನ್ನು ಆಕೆಯ ಪತಿ ಮತ್ತು ಆತನ ತಂಡ ಅಪಹರಿಸಿದ ವಿಡಿಯೋವನ್ನು ಬಾಂಗ್ಲಾದೇಶದಲ್ಲಿ ಹಿಂದೂ ಮಹಿಳೆಯನ್ನು ಮುಸ್ಲಿಮರು ಅಪಹರಿಸಿದ್ದಾರೆ ಎಂಬರ್ಥದಲ್ಲಿ ತಪ್ಪಾಗಿ ಹಂಚಿಕೊಳ್ಳುತ್ತಿರುವುದು ನಮ್ಮ ಪರಿಶೀಲನೆಯಲ್ಲಿ ಗೊತ್ತಾಗಿದೆ.

ಇದನ್ನೂ ಓದಿ : FACT CHECK : ಹಿಂದೂ ದೇವಾಲಯವೊಂದಕ್ಕೆ ಬೆಂಕಿ ಹಚ್ಚಲಾಗಿದೆ ಎಂದು ಸುಳ್ಳು ಸುದ್ದಿ ಹಂಚಿಕೊಳ್ಳಲಾಗುತ್ತಿದೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...