Homeಫ್ಯಾಕ್ಟ್‌ಚೆಕ್FACT CHECK : ಮುಸ್ಲಿಮರು ಹಿಂದೂ ದೇವಾಲಯ ಕೆಡವಿದ್ದಾರೆ ಎಂದು ಸುಳ್ಳು ವಿಡಿಯೋ ಹಂಚಿಕೆ

FACT CHECK : ಮುಸ್ಲಿಮರು ಹಿಂದೂ ದೇವಾಲಯ ಕೆಡವಿದ್ದಾರೆ ಎಂದು ಸುಳ್ಳು ವಿಡಿಯೋ ಹಂಚಿಕೆ

- Advertisement -
- Advertisement -

ಆಂಧ್ರ ಪ್ರದೇಶದ ಗುಂಟೂರಿನಲ್ಲಿ ಮುಸ್ಲಿಮರು ಹಿಂದೂ ದೇವಾಲಯವನ್ನು ಕೆಡವಿದ್ದಾರೆ ಎಂದು ಬರೆದುಕೊಂಡು ವಿಡಿಯೋವೊಂದನ್ನು ಹಂಚಿಕೊಳ್ಳಲಾಗ್ತಿದೆ. ವಿಡಿಯೋದಲ್ಲಿ ಮುಸ್ಲಿಮರ ಟೋಪಿ ಧರಿಸಿ ಕೆಲ ವ್ಯಕ್ತಿಗಳು ಸುತ್ತಿಗೆ ಹಿಡಿದು ಪ್ರವೇಶ ದ್ವಾರವೊಂದನ್ನು ಕೆಡವುವ ದೃಶ್ಯವಿದೆ.

ಆಂಧ್ರ ಪ್ರದೇಶದ ಗುಂಟೂರಿನ 17ನೇ ವಾರ್ಡ್‌ನಲ್ಲಿ 40 ವರ್ಷ ಹಳೆಯ ನಾಗ ದೇವಸ್ಥಾನವನ್ನು ಶಾಂತಿಪ್ರಿಯರು ಕಡೆವಿದ್ದಾರೆ. ಎಫ್‌ಐಆರ್ ದಾಖಲಿಸಲು ಪೊಲೀಸರಿಗೆ ಇದರ ಬಗ್ಗೆ ಮಾಹಿತಿಯೇ ಇಲ್ಲ” ಎಂಬ ಸಂದೇಶದೊಂದಿಗೆ ವಿಡಿಯೋ ಹಂಚಿಕೊಳ್ಳಲಾಗ್ತಿದೆ.

ಫ್ಯಾಕ್ಟ್‌ಚೆಕ್ : ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ವಿಡಿಯೋದ ಸತ್ಯಾಸತ್ಯತೆಯನ್ನು ನಾವು ಪರಿಶೀಲಿಸಿದ್ದೇವೆ. ಈ ವೇಳೆ ಮುಸ್ಲಿಮರು ಹಿಂದೂ ದೇವಸ್ಥಾನ ಕೆಡವಿದ್ದಾರೆ ಎಂಬ ಆರೋಪ ಸುಳ್ಳು ಎಂದು ಗೊತ್ತಾಗಿದೆ.

ಅಸಲಿಗೆ, ಆಂಧ್ರ ಪ್ರದೇಶದ ಗುಂಟೂರಿನಲ್ಲಿ ದರ್ಗಾ ಒಂದರ ಜಮೀನು ವಿಚಾರಕ್ಕೆ ಎರಡು ಮುಸ್ಲಿಂ ಗುಂಪುಗಳ ನಡುವೆ ಜಗಳ ನಡೆದಿದೆ. ಒಂದು ಗುಂಪು ದರ್ಗಾ ಕಟ್ಟಡ ಕೆಡವಿ ಹೊಸತು ನಿರ್ಮಿಸಲು ಮುಂದಾಗಿತ್ತು. ಈ ವೇಳೆ ಏಕಾಏಕಿ ಆಗಮಿಸಿದ ಇನ್ನೊಂದು ಗುಂಪು ಅಡ್ಡಿಪಡಿಸಿದೆ. ಈ ವೇಳೆ ವಾಗ್ವಾದ ನಡೆದು ಒಂದು ಗುಂಪು ದರ್ಗಾದ ಪ್ರವೇಶ ದ್ವಾರ ಕೆಡವಲು ಮುಂದಾಗಿದೆ.

ಈ ಪ್ರಕರಣ ಮುಸ್ಲಿಂ ಸಮುದಾಯದ ಜನರ ಎರಡು ಗುಂಪುಗಳ ನಡುವೆ ನಡೆದಿರುವುದೇ ಹೊರತು, ಇದರಲ್ಲಿ ಹಿಂದೂ-ಮುಸ್ಲಿಂ ಎಂಬ ಯಾವುದೇ ಕೋಮು ವೈಷಮ್ಯದ ವಿಷಯವಿಲ್ಲ. ವೈರಲ್ ವಿಡಿಯೋ ಹಳೆಯದ್ದಾಗಿದ್ದು, ಮತ್ತೆ ಹಂಚಿಕೊಳ್ಳಲಾಗಿದೆ.

ದರ್ಗಾದ ಪ್ರವೇಶ ದ್ವಾರ ಕೆಡವಿದ ಘಟನೆಗೆ ಸಂಬಂಧಿಸಿದಂತೆ ಅಕ್ಟೋಬರ್ 14,2022ರಂದು ಅಂಡಮಾನ್ & ನಿಕೋಬಾರ್ ದ್ವೀಪ ಬಿಜೆಪಿ ರಾಷ್ಟ್ರೀಯ ಉಸ್ತುವಾರಿ ಕಾರ್ಯದರ್ಶಿ ಸತ್ಯ ಕುಮಾರ್ ಯಾದವ್ ಎಕ್ಸ್‌ನಲ್ಲಿ ಪ್ರತಿಕ್ರಿಯಿಸಿದ್ದರು.

ಇನ್ನು ಈ ಘಟನೆಯ ಕುರಿತು ಅಕ್ಟೋಬರ್ 17, 2022ರಂದು ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿತ್ತು. ಅದರಲ್ಲಿ “ಅಕ್ಟೋಬರ್ 12, 2022ರಂದು ಗುಂಟೂರಿನ ಎಲ್‌ಆರ್‌ ನಗರ ಪ್ರದೇಶದ ಭಾಜಿ ಭಾಷಾ ನಿಶಾನಿ ದರ್ಗಾವನ್ನು ಕೆಲವು ಅಪರಿಚಿತ ಜನರು ಧ್ವಂಸಗೊಳಿಸಲು ಪ್ರಯತ್ನಿಸಿದ್ದಾರೆ ಎಂದಿತ್ತು.

ವರದಿಯ ಪ್ರಕಾರ, ದರ್ಗಾ ಇರುವ ಜಮೀನಿನ ಮಾಲೀಕ ಕೆಲ ವರ್ಷಗಳ ಹಿಂದೆ ಮೃತಪಟ್ಟಿದ್ದಾರೆ. ಹಾಗಾಗಿ, ಅವರ ಮಗಳು ದರ್ಗಾದಲ್ಲಿ ಪ್ರಾರ್ಥನೆ ಮುಂದುವರೆಸುವಂತೆ ಸ್ಥಳೀಯರನ್ನು ಕೋರಿದ್ದರು. ದರ್ಗಾ ಕಟ್ಟಡ ಶಿಥಿಲಗೊಂಡಿದ್ದರಿಂದ ಸ್ಥಳೀಯರು ಹಣ ಸಂಗ್ರಹಿಸಿ ಕಟ್ಟಡ ನವೀಕರಣ ಕೆಲಸ ಪ್ರಾರಂಭಿಸಿದ್ದರು. ಈ ವೇಳೆ ಏಕಾಏಕಿ ಸ್ಥಳಕ್ಕೆ ಬಂದ ಅಪರಿಚಿತರ ಗುಂಪು, “ನಾವು ಹೊಸ ಕಟ್ಟಡ ಕಟ್ಟುತ್ತೇವೆ” ಎಂದು ಎಂದಿದ್ದಾರೆ. ಈ ವೇಳೆ ಎರಡು ಗುಂಪುಗಳ ನಡುವೆ ಜಗಳ ಶರುವಾಗಿದೆ.

ಈ ಕುರಿತು ದಿ ನ್ಯೂ ಇಂಡಿಯನ್ ಎಕ್ಸ್‌ ಪ್ರೆಸ್‌ಗೆ ಪ್ರತಿಕ್ರಿಯಿಸಿದ್ದ ಲಾಲ್‌ಪೇಟ್ ಪೊಲೀಸ್ ಠಾಣೆಯ ಇನ್‌ಸ್ಪೆಕ್ಟರ್ ಪ್ರಭಾಕರ್ ” ಘಟನೆ ಕುರಿತು ನಾವು ಕಂದಾಯ ಇಲಾಖೆಯ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದೇವೆ. ಅವರು ಪರಿಶೀಲಿಸಿ ಜಮೀನಿನ ನಿಜವಾದ ಮಾಲೀಕರು ಯಾರು ಎಂದು ಪತ್ತೆ ಹಚ್ಚಲಿದ್ದಾರೆ. ವಿವಾದ ಬಗೆ ಹರಿಯುವವರೆಗೆ ದರ್ಗಾ ಬಂದ್ ಆಗಿರಲಿದೆ ಎಂದು ತಿಳಿಸಿದ್ದಾರೆ.

ಒಟ್ಟಿನಲ್ಲಿ, ಗುಂಟೂರಿನಲ್ಲಿ ಹಿಂದು ದೇವಾಲಯವನ್ನು ಮುಸ್ಲಿಮರು ಕೆಡವಿದ್ದಾರೆ ಎಂಬ ಸಾಮಾಜಿಕ ಜಾಲತಾಣಗಳ ಸಂದೇಶ ಸುಳ್ಳು. ವಿಡಿಯೋದಲ್ಲಿ ಕಾಣುವ ಪ್ರವೇಶ ದ್ವಾರದಲ್ಲಿ ನಾಗನ ಆಕೃತಿ ಕಂಡು ಜನರು ಅದು ಹಿಂದೂ ದೇವಾಲಯ ಎಂದು ಪ್ರತಿಪಾದಿಸಿರಬಹುದು.

ಇದನ್ನೂ ಓದಿ : FACT CHECK: ರಾಹುಲ್ ಗಾಂಧಿ ನಕಲಿ ಲೋಕೋ ಪೈಲಟ್‌ಗಳ ಜೊತೆಗೆ ಸಂವಾದ ನಡೆಸಿದ್ದಾರೆ ಎಂಬುವುದು ಸುಳ್ಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಗಳ ವಿಚ್ಛೇದನ: ಸಿಹಿ ಹಂಚಿ, ಮೆರವಣಿಗೆಯಲ್ಲಿ ಆಕೆಯನ್ನು ಮನೆಗೆ ಕರೆತಂದ ನೀವೃತ್ತ ನ್ಯಾಯಾದೀಶ ಮತ್ತು ಕುಟುಂಬ

ಮೀರತ್: ಕೌಟುಂಬಿಕ ನ್ಯಾಯಾಲಯದಲ್ಲಿ ಮಗಳ ವಿಚ್ಛೇದನ ಅಂತಿಮವಾದ ನಂತರ ಆಕೆಯನ್ನು ಡೋಲು, ನೃತ್ಯಗಳ ಮೆರವಣಿಗೆಯಲ್ಲಿ ಸಂಭ್ರಮದಿಂದ ತಂದೆ ಮನೆಗೆ ಕರೆತಂದ ಘಟನೆ ಮೀರನ್ ನಲ್ಲಿ ನಡೆದಿದೆ.  ಪೋಷಕರ ಬೆಂಬಲದ ಅಪರೂಪದ ಮತ್ತು ಹೃದಯಸ್ಪರ್ಶಿ ಪ್ರದರ್ಶನದಲ್ಲಿ,...

“ನೀನು ನಿಜವಾಗಿಯೂ ಅಂಬೇಡ್ಕರ್ ಮಗಳಾ ಎಂದು ತಿಳಿಯಲು ನಾವು ನಿನ್ನ ಡಿಎನ್‌ಎ ಟೆಸ್ಟ್ ಮಾಡುತ್ತೇವೆ” ದೆಹಲಿ ಸಭೆಯಲ್ಲಿ ದಲಿತ ಟ್ರಾನ್ಸ್ ಹೋರಾಟಗಾರ್ತಿ ಗ್ರೇಸ್ ಬಾನುಗೆ ಜಾತಿ ನಿಂದನೆ ಆರೋಪ

ಕೇಂದ್ರ ಸರ್ಕಾರದ ವಿವಾದಾತ್ಮಕ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಕಾಯ್ದೆ, 2026ರ ವಿರುದ್ಧ ಕಳೆದ ಕೆಲ ವಾರಗಳಿಂದ ಇಡೀ ಟ್ರಾನ್ಸ್‌ಜೆಂಡರ್ ಮತ್ತು ಪ್ರಗತಿಪರ ಸಮುದಾಯ ಪ್ರತಿಭಟನೆ ನಡೆಸುತ್ತಿದೆ. ಈ ನಡುವೆ ಶುಕ್ರವಾರ...

‘ಮೋದಿ ಕ್ರಿಶ್ಚಿಯನ್ ಸಂಸ್ಥೆಗಳಲ್ಲಿ ಭಯ ಹುಟ್ಟಿಸಲು ಪ್ರಯತ್ನಿಸುತ್ತಿದ್ದಾರೆ’: ಎಫ್‌ಸಿಆರ್‌ಎ ತಿದ್ದುಪಡಿ ಕುರಿತು ಮಲ್ಲಿಕಾರ್ಜುನ ಖರ್ಗೆ

ಇಡುಕ್ಕಿ (ಕೇರಳ): ಸಾರ್ವಜನಿಕ ಮತ್ತು ಸಾಮಾಜಿಕ ಕಲ್ಯಾಣ ಕ್ಷೇತ್ರದಲ್ಲಿ ಕೆಲಸ ಮಾಡುವ ಕ್ರಿಶ್ಚಿಯನ್ ಸಂಸ್ಥೆಗಳು, ಎನ್‌ಜಿಒಗಳು ಮತ್ತು ನಾಗರಿಕ ಸಮಾಜದ ಮೇಲೆ ದಾಳಿ ಮಾಡಲು ಪ್ರಧಾನಿ ನರೇಂದ್ರ ಮೋದಿ ಎಫ್‌ಸಿಆರ್‌ಎ (ವಿದೇಶಿ ದೇಣಿಗೆ...

ವೈದ್ಯಕೀಯ, ತಾಂತ್ರಿಕ ಶಿಕ್ಷಣದಲ್ಲಿ ಎಸ್‌ಸಿ/ಎಸ್‌ಟಿ ಮೀಸಲಾತಿ ಹೆಚ್ಚಿಸಿದ ಒಡಿಶಾ ಸರ್ಕಾರ, ಒಬಿಸಿ ವಿದ್ಯಾರ್ಥಿಗಳಿಗೆ ಹೊಸ ಕೋಟಾ

ಮಹತ್ವದ ನಿರ್ಧಾರ ಕೈಗೊಂಡಿರುವ ಒಡಿಶಾ ಸರ್ಕಾರ, ವೈದ್ಯಕೀಯ, ಇಂಜಿನಿಯರಿಂಗ್ ಮತ್ತು ಇತರ ತಾಂತ್ರಿಕ ಹಾಗೂ ವೃತ್ತಿಪರ ಶಿಕ್ಷಣ ಕೋರ್ಸ್‌ಗಳಲ್ಲಿ ಪರಿಶಿಷ್ಟ ಪಂಗಡ (ಎಸ್‌ಟಿ), ಪರಿಶಿಷ್ಟ ಜಾತಿ (ಎಸ್‌ಸಿ) ಅಭ್ಯರ್ಥಿಗಳಿಗೆ ಮೀಸಲಾತಿಯನ್ನು ಗಣನೀಯವಾಗಿ ಹೆಚ್ಚಿಸಿದೆ....

ಶಾಲಾ ವಾರ್ಷಿಕೋತ್ಸವದಲ್ಲಿ ಲವಲವಿಕೆಯಿಂದ ಭಾಗವಹಿಸಿದ್ದ 6 ಮಕ್ಕಳು, ತಡರಾತ್ರಿ ಹೊತ್ತಿಗೆ ಶವವಾದರು : ಮಹಾರಾಷ್ಟ್ರದಲ್ಲೊಂದು ಹೃದಯ ವಿದ್ರಾವಕ ಘಟನೆ

ಶಾಲಾ ವಾರ್ಷಿಕೋತ್ಸವದಲ್ಲಿ ಬಹಳ ಉತ್ಸಾಹದಿಂದ ಭಾಗವಹಿಸಿದ್ದ ಆರು ಮಂದಿ ಮಕ್ಕಳು, ತಡ ರಾತ್ರಿ ಹೊತ್ತಿಗೆ ಶವವಾದ ಹೃದಯ ವಿದ್ರಾವಕ ಘಟನೆಯೊಂದು ಮಹಾರಾಷ್ಟ್ರದ ದಿಂಡೋರಿಯಲ್ಲಿ ಶುಕ್ರವಾರ (ಏ.3) ನಡೆದಿದೆ. ನಾಸಿಕ್‌ ನಗರದಿಂದ 20 ಕಿಲೋ...

ಕೇರಳ: ಕೊಲ್ಲಂನಲ್ಲಿ ಟಿವಿ ಚಾನೆಲ್ ಕಚೇರಿ ಮೇಲೆ ಸ್ಫೋಟಕ ವಸ್ತು ಎಸೆತ

ಕೊಲ್ಲಂ: ಇಲ್ಲಿನ ಟಿವಿ ಚಾನೆಲ್ ಒಂದರ ಕಚೇರಿಯ ಮೇಲೆ ಭಾನುವಾರ ಬೆಳಿಗ್ಗೆ ಸ್ಫೋಟಕ ವಸ್ತು ಎಸೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ಆ ಪ್ರದೇಶ ಮತ್ತು ಚಾನೆಲ್ ಕಚೇರಿಯ ಸಿಸಿಟಿವಿ ದೃಶ್ಯಗಳಲ್ಲಿ ಇಬ್ಬರು...

ಹತ್ಯೆಯಾದ ಇರಾನ್ ಕಮಾಂಡರ್ ಖಾಸಿಮ್ ಸುಲೈಮಾನಿ ಅವರ ಸೊಸೆ, ಮೊಮ್ಮಗಳನ್ನು ಬಂಧಿಸಿದ ಅಮೆರಿಕ

ನವದೆಹಲಿ: ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ ಶುಕ್ರವಾರ ತಮ್ಮ ಶಾಶ್ವತ ನಿವಾಸಿ ಸ್ಥಾನಮಾನವನ್ನು ರದ್ದುಗೊಳಿಸಿದ ನಂತರ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ನ ದಿವಂಗತ ನಾಯಕ ಖಾಸಿಮ್ ಸೊಲೈಮಾನಿ ಅವರ...

ಇರಾನ್ ಮೇಲೆ ಬೃಹತ್ ದಾಳಿ: ಹಲವು ಉನ್ನತ ನಾಯಕರನ್ನು ಕೊಲ್ಲಲಾಗಿದೆ ಎಂದು ವಿಡಿಯೋ ಹಂಚಿಕೊಂಡ ಟ್ರಂಪ್

ಟೆಹ್ರಾನ್ ಮೇಲೆ ನಡೆದ ದಾಳಿಯ ವೀಡಿಯೊವನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಂಚಿಕೊಂಡಿದ್ದು, ಹಲವಾರು ಇರಾನ್ ಮಿಲಿಟರಿ ನಾಯಕರ ಸಾವಿಗೆ ಅದು ಕಾರಣ ಎಂದು ಹೇಳಿಕೊಂಡಿದ್ದಾರೆ. "ಟೆಹ್ರಾನ್‌ನಲ್ಲಿ ನಡೆದ ಈ ಬೃಹತ್ ದಾಳಿಯೊಂದಿಗೆ, ಇರಾನ್‌ನ...

ಅಸ್ಸಾಂ ಚುನಾವಣೆ : ನುಸುಳುಕೋರರಿಂದ ಯುವ ಕಲ್ಯಾಣಕ್ಕೆ ವರಸೆ ಬದಲಿಸಿದ ಬಿಜೆಪಿ

ಅಸ್ಸಾಂ ವಿಧಾನಸಭಾ ಚುನಾವಣೆಗೆ ನಾಲ್ಕು ದಿನಗಳು ಬಾಕಿ ಇರುವಾಗ ಬಿಜೆಪಿ ತನ್ನ ಪ್ರಚಾರದ ವರಸೆಯನ್ನು ಬದಲಿಸಿಕೊಂಡಿದೆ. ನುಸುಳುಕೋರರನ್ನು ಹೊರಹಾಕುತ್ತೇವೆ, ಅಕ್ರಮ ವಲಸೆಗೆ ಕಡಿವಾಣ ಹಾಕುತ್ತೇವೆಂದು ಅಬ್ಬರಿಸುತ್ತಿದ್ದ ಬಿಜೆಪಿಗರು, ಈಗ ನುಸುಳಕೋರರ ವಿಷಯವನ್ನು ಬದಿಗೊತ್ತಿದ್ದಾರೆ....

ಕುಡಿದ ಮತ್ತಿನಲ್ಲಿ ಕಾರು ಚಾಲನೆ: ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ 19ವರ್ಷದ ಯುವಕ ಸಾವು 

ಬೆಂಗಳೂರು: ಕುಡಿದ ಮತ್ತಿನಲ್ಲಿ ಹದಿಹರೆಯದ ಯುವಕನೊಬ್ಬ ಚಲಾಯಿಸುತ್ತಿದ್ದ ಕಾರು, 19 ವರ್ಷದ ಯುವಕನ ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಆತ ಸಾವನ್ನಪ್ಪಿದ್ದಾನೆ. ಮಲ್ಲೇಶಪಾಳ್ಯದ ಮಾರುತಿನಗರದ 10 ನೇ ಮುಖ್ಯ ರಸ್ತೆಯಲ್ಲಿ ಶುಕ್ರವಾರ ತಡರಾತ್ರಿ...